Tag: golden star ganesh

  • ಆಡಿ ಕಾರ್ ಒಡತಿಯಾದ ಕಿರಿಕ್ ಹುಡ್ಗಿ ರಶ್ಮಿಕಾ- ಭಾವಿ ಪತಿ ಜೊತೆ ಫಸ್ಟ್ ರೌಂಡ್

    ಆಡಿ ಕಾರ್ ಒಡತಿಯಾದ ಕಿರಿಕ್ ಹುಡ್ಗಿ ರಶ್ಮಿಕಾ- ಭಾವಿ ಪತಿ ಜೊತೆ ಫಸ್ಟ್ ರೌಂಡ್

    ಬೆಂಗಳೂರು: ಸ್ಯಾಂಡಲ್ ವುಡ್ ಫೇಮಸ್ ನಟಿ ರಶ್ಮಿಕಾ ಮಂದಣ್ಣ ಅವರ `ಚಮಕ್’ ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಇದೀಗ ಹೊಸ ಕಾರೊಂದರ ಒಡತಿಯಾಗಿದ್ದಾರೆ.

    ಹೌದು. ನಟಿ ರಶ್ಮಿಕಾ ಮಂದಣ್ಣ ಆಡಿ ಕಾರೊಂದನ್ನು ಖರೀದಿಸಿದ್ದಾರೆ. ಶುಕ್ರವಾರವಷ್ಟೇ ಚಮಕ್ ಚಿತ್ರ ರಿಲೀಸ್ ಆಗಿದ್ದು, ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಈ ಖುಷಿಯ ಬೆನ್ನಲ್ಲೇ ನಿನ್ನೆಯೇ ಕೆಂಪು ಬಣ್ಣದ ಹೊಸ ಆಡಿ ಕಾರೊಂದನ್ನು ಖರೀದಿ ಮಾಡೋ ಮೂಲಕ ತನ್ನ ಖುಷಿಯನ್ನು ಇಮ್ಮಡಿಗೊಳಿಸಿದ್ದಾರೆ. ಇದನ್ನೂ ಓದಿ: ರೈತರಿಗಾಗಿ ಬಿಎಂಡಬ್ಲ್ಯೂ ಕಾರನ್ನೇ ಮಾರಾಟ ಮಾಡ್ತೀನಿ ಎಂದ ಕಿಚ್ಚ

    ತಮ್ಮ ಕನಸಿನ ಕಾರು ಖರೀದಿ ಮಾಡಿರುವ ರಶ್ಮಿಕಾ ಭಾವಿ ಪತಿ ನಟ ರಕ್ಷಿತ್ ಶೆಟ್ಟಿ ಜೊತೆ ಫಸ್ಟ್ ರೌಂಡ್ ಹೋಗಿದ್ದಾರೆ. ಅಲ್ಲದೇ ಕಾರು ಖರೀದಿ ಮಾಡಿ ಖುಷಿಯಲ್ಲಿರೋ ರಶ್ಮಿಕಾ, ರಕ್ಷಿತ್ ಜೊತೆ ತಮ್ಮ ಹೊಸ ಕಾರಿನೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಅವುಗಳನ್ನು ಇನ್‍ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: `ಜಾಗ್ವಾರ್’ ಒಡತಿಯಾದ ನಟಿ ಹರಿಪ್ರಿಯಾ!

    ನಟ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ `ಚಮಕ್’ ಸಿನಿಮಾ ರಾಜ್ಯಾದ್ಯಂತ ಶುಕ್ರವಾರ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಿತ್ರವನ್ನು ರಶ್ಮಿಕಾ ಹಾಗೂ ರಕ್ಷಿತ್ ಶೆಟ್ಟಿ ಜೊತೆಯಾಗಿ ನಿನ್ನೆಯೇ ನರ್ತಕಿ ಚಿತ್ರಮಂದಿರದಲ್ಲಿ ವೀಕ್ಷಿಸಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ನಟನೆಯನ್ನು ಕಂಡ ರಕ್ಷಿತ್ ಶೆಟ್ಟಿ ಹೊಗಳಿದ್ದಾರೆ. ಅಲ್ಲದೇ ಚಿತ್ರಮಂದಿರದಲ್ಲೇ ತನ್ನ ಭಾವಿ ಪತ್ನಿಯನ್ನು ತಬ್ಬಿಕೊಂಡು ಮುದ್ದಾಡಿದ್ದಾರೆ. ಇದನ್ನೂ ಓದಿ: ಮೊದಲ ಮದುವೆ ವಾರ್ಷಿಕೋತ್ಸವಕ್ಕೆ ಭರ್ಜರಿ ಗಿಫ್ಟ್- 3 ಬೆಂಜ್ ಕಾರುಗಳನ್ನು ಖರೀದಿಸಿದ ಯಶ್

  • ಮಂಗಳೂರಿನ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ಅತೀವ ಸಂತಸ ತಂದಿದೆ: ನಟ ಗಣೇಶ್

    ಮಂಗಳೂರಿನ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ಅತೀವ ಸಂತಸ ತಂದಿದೆ: ನಟ ಗಣೇಶ್

    ಮಂಗಳೂರು: ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕೃತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕೃತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿದರು.

    ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಗಣೇಶ್, ಇಲ್ಲಿನ ವಿದ್ಯಾ ಸಂಸ್ಥೆ ಮನುಷ್ಯನನ್ನು ಕೇವಲ ಆಧುನಿಕ ತಂತ್ರಜ್ಞಾನದಲ್ಲಿ ತಯಾರಿಸದೆ ಜೀವನ ಮೌಲ್ಯವನ್ನು ಮೈಗೂಡಿಸಿಕೊಂಡು ಸುಸಂಸ್ಕೃತ ವ್ಯಕ್ತಿಯನ್ನಾಗಿ ರೂಪಿಸುತ್ತಿದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳೊಂದಿಗೆ ಉತ್ತಮ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಜನೆ ಮಾಡಿದರೆ ಉತ್ತಮ ಜೀವನ ರೂಪಿಸಲು ಸಾಧ್ಯವಾಗಲಿದೆ ಎಂದರು.

    ರಾಜ್ಯ ಅಲ್ಪ ಸಂಖ್ಯಾತ ಮೋರ್ಚದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿ, ಸಮಾಧಾನ, ತೃಪ್ತಿ ನೀಡುವ ಏಕೈಕ ವಿದ್ಯಾ ಕೇಂದ್ರವೆಂದರೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರವಾಗಿದೆ. ಇದು ವಿಶೇಷ ಶಕ್ತಿಯುಳ್ಳ ಕೇಂದ್ರವಾಗಿದೆ. ಕಲ್ಪಣೆಗೂ ಮೀರಿದ ಸಂಸ್ಕಾರದ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗೆ ನಾವು ಧನ್ಯರಾಗಿದ್ದೇವೆ ಎಂದರು.

    ವೇದಿಕೆಯಲ್ಲಿ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷ, ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ಡಾ| ಕಲ್ಲಡ್ಕ ಪ್ರಭಾಕರ್ ಭಟ್, ಸಂಚಾಲಕ ವಸಂತ ಮಾಧವ, ಡಾ| ಕಮಲ ಪಿ.ಭಟ್, ಅಶ್ರಫ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣ ಪ್ರಸಾದ್ ಸ್ವಾಗತಿಸಿ ವಂದಿಸಿದರು.