Tag: Goodchari 2

  • ‘ಗೂಢಚಾರಿ-2’ ಅಡ್ಡಾದಲ್ಲಿ ಬ್ರಿಟನ್ ಇಂಡಿಯನ್ ಬೆಡಗಿ ಬನಿತಾ ಸಂಧು

    ‘ಗೂಢಚಾರಿ-2’ ಅಡ್ಡಾದಲ್ಲಿ ಬ್ರಿಟನ್ ಇಂಡಿಯನ್ ಬೆಡಗಿ ಬನಿತಾ ಸಂಧು

    ಡವಿ ಶೇಷ್ (Adavi Shesh) ನಟಿಸುತ್ತಿರುವ ಗೂಢಚಾರಿ 2 (Goodchari 2) ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಅಡವಿ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದು, ಶೀಘ್ರದಲ್ಲೇ ನಾಯಕಿ ಬನಿತಾ ಸಂಧು (Banita Sandhu) ಕೂಡ ಎಂಟ್ರಿ ಕೊಡಲಿದ್ದಾರೆ.

    ಗುಜರಾತ್ ನ ಭುಜ್ ನಲ್ಲಿ ನಲ್ಲಿ ಗೂಢಚಾರಿ ಸೀಕ್ವೆಲ್ ಚಿತ್ರೀಕರಣ ನಡೆಸಲು ಚಿತ್ರತಂಡ ಸಜ್ಜಾಗಿದೆ. ಶೂಟಿಂಗ್ ಅಖಾಡಕ್ಕೆ ಶೀಘ್ರದಲ್ಲೇ ಬನಿತಾ ಕೂಡ ಎಂಟ್ರಿ ಕೊಡಲಿದ್ದಾರೆ. ಅಂದಹಾಗೇ ಇದು ಬನೀತಾ ಸಂಧುಗೆ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.

    ‘ಅಕ್ಟೋಬರ್’, ‘ಸರ್ದಾರ್ ಉದಾಮ್’, ‘ಆದಿತ್ಯ ವರ್ಮಾ’ ಸೇರಿದಂತೆ ಹಲವು ಹಿಂದಿ ಹಾಗೂ ತಮಿಳು ಸಿನಿಮಾಗಳಲ್ಲಿ ನಟಿಸಿದ ಅನುಭವ ಬನಿತಾ ಸಂಧು ಅವರಿಗಿದೆ.  ಗೂಢಚಾರಿ 2 ಸಿನಿಮಾದಲ್ಲಿ ಅವರ ಪಾತ್ರ ಬಹಳ ವಿಭಿನ್ನವಾಗಿದ್ದು, ಹೊಸ ಅವತಾರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

    ಮೊದಲೇ ಹೇಳಿದಂತೆ ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

    ಗೂಢಚಾರಿ ಸೀಕ್ವೆಲ್ ನಲ್ಲಿ ಇಮ್ರಾನ್ ಹಶ್ಮಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ‘ಕಾರ್ತೀಕೇಯ 2’, ‘ಮೇಜರ್’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’, ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಹಾಗೂ ‘ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್’ ಬ್ಯಾನರ್ ಮೂಲಕ ಟಿ.ಜಿ. ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ‘ಗೂಢಚಾರಿ 2’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

  • ಅಡಿವಿ ಶೇಷ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಗೂಢಚಾರಿ 2’ ಫಸ್ಟ್ ಲುಕ್ ರಿವೀಲ್

    ಅಡಿವಿ ಶೇಷ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಗೂಢಚಾರಿ 2’ ಫಸ್ಟ್ ಲುಕ್ ರಿವೀಲ್

    ಮೇಜರ್, ‘ಹಿಟ್ 2’ ಮೂಲಕ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾ ನೀಡಿರುವ ತೆಲುಗು ನಟ ಅಡಿವಿ ಶೇಷ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಜ್ಜಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ ಸೀಕ್ವೆಲ್ ನಲ್ಲಿ ಅಡಿವಿ ಶೇಷ್ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ‘ಗೂಢಚಾರಿ 2’ ಫಸ್ಟ್ ಲುಕ್ ಹಾಗೂ ಪ್ರಿ ವಿಷನ್ ವೀಡಿಯೋ ಇಂದು ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿದೆ.

    ಪ್ಯಾನ್ ಇಂಡಿಯಾ ನಟನಾಗಿ ಬ್ಯಾಕ್ ಟು ಬ್ಯಾಕ್ ಹಿಟ್ ಕಂಡಿರುವ ಅಡಿವಿ ಶೇಷ್ ನಟನೆಯ ‘ಗೂಢಚಾರಿ 2’ ಸಿನಿಮಾ ಸೆಟ್ಟೇರಿದೆ. ಬಿಗ್ ಬಜೆಟ್ ನಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರ ಇಂದು ಅಧೀಕೃತವಾಗಿ ಸೆಟ್ಟೇರಿದ್ದು ಫಸ್ಟ್ ಲುಕ್ ಹಾಗೂ ಪ್ರಿ ವಿಷನ್ ವೀಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಅಡಿವಿ ಶೇಷ್ ನ್ಯೂ ಲುಕ್ ಗಮನ ಸೆಳೆಯುತ್ತಿದ್ದು, ಪ್ರಿ ವಿಷನ್ ವೀಡಿಯೋ ಸಿನಿಮಾದ ಅದ್ದೂರಿತನ ಹಾಗೂ ತಾಂತ್ರಿಕ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ. ಇದನ್ನೂ ಓದಿ: ಅಭಿಮಾನಿಗಳಿಗೆ ಬಂಪರ್ ಆಫರ್ ಕೊಟ್ರು ವಿಜಯ್ ದೇವರಕೊಂಡ

    ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ಗೆ ಬಂಡವಾಳ ಹೂಡುತ್ತಿರೋದು ವಿಶೇಷ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಮತ್ತು AK ಎಂಟಟೈನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ನಡಿ ಟಿಜಿ. ವಿಶ್ವಪ್ರಸಾದ್ ಮತ್ತು ಅಭಿಷೇಕ್ ಅಗರ್ ವಾಲ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    ಮೊದಲ ಸೀಕ್ವೆಲ್ ನಲ್ಲಿದ್ದ ಕಲಾವಿದರ ಜೊತೆಗೆ ಒಂದಿಷ್ಟು ಹೊಸ ಪಾತ್ರವರ್ಗ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಸದ್ಯದಲ್ಲೇ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k