Tag: Goods train

  • Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    – ರೈಲು ಸೇವೆಯಲ್ಲಿ ವ್ಯತ್ಯಯ

    ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ (Goods Train) 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ (Tamil Nadu) ತಿರುವಲ್ಲೂರು (Tiruvallur) ರೈಲು ನಿಲ್ದಾಣದ ಬಳಿ ನಡೆದಿದೆ.

    ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಇದನ್ನೂ ಓದಿ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ಮೂವರ ದುರ್ಮರಣ

    ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಾಲಿಯಿಂದ ತಿರುಪತಿ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ಚೆನ್ನೈಗೆ ತೆರಳುವ ಮತ್ತು ಅಲ್ಲಿಂದ ಹೊರಡಬೇಕಿದ್ದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ರೈಲು ಹಳಿ ತಪ್ಪಿ ಪಲ್ಟಿಯಾಗಿ, ಡೀಸೆಲ್‌ ಸೋರಿಕೆಯಿಂದ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

  • ಉತ್ತರ ಪ್ರದೇಶ| ಹಳಿಗಳ ಮೇಲೆ ಇರಿಸಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲು ಡಿಕ್ಕಿ

    ಉತ್ತರ ಪ್ರದೇಶ| ಹಳಿಗಳ ಮೇಲೆ ಇರಿಸಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲು ಡಿಕ್ಕಿ

    ದೆಹಲಿ: ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಬುಧವಾರ ಹಳಿಗಳ ಮೇಲೆ ಇರಿಸಲಾಗಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತ ತಪ್ಪಿದೆ.

    ರಾಯ್‌ಬರೇಲಿ ಲಕ್ಷ್ಮಣಪುರದಲ್ಲಿ ಈ ಘಟನೆ ಸಂಭವಿಸಿದ್ದು, ಸಮೀಪದ ಹೊಲದಲ್ಲಿ ಇರಿಸಲಾಗಿದ್ದ ಮೂರು ಸಿಮೆಂಟ್ ಸ್ಲ್ಯಾಬ್‌ಗಳನ್ನು ಟ್ರ‍್ಯಾಕ್ ಮೇಲೆ ತಂದಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಡಿಕ್ಕಿಯ ನಂತರ ಯಾವುದೇ ದೊಡ್ಡ ಅಪಘಾತ ಸಂಭವಿಸಿಲ್ಲ. ಆರ್‌ಪಿಎಫ್ ಉಂಚಹರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.

    ಕಳೆದ ಒಂದು ತಿಂಗಳಿನಿಂದ, ರೈಲು ಕಾರ್ಯಾಚರಣೆಗೆ ಅಡ್ಡಿಪಡಿಸಲು ರೈಲು ಹಳಿಗಳ ಮೇಲೆ ವಸ್ತುಗಳನ್ನು ಇರಿಸಲಾಗಿರುವ ಘಟನೆಗಳು ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ ಮತ್ತು ಮಧ್ಯಪ್ರದೇಶದಿಂದ ವರದಿಯಾಗಿವೆ. ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ರೈಲು ಹಳಿ ಮೇಲೆ ಕಬ್ಬಿಣದ ಸರಳುಗಳನ್ನು ಇಟ್ಟು ರೈಲನ್ನು ಹಳಿತಪ್ಪಿಸಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಕಳೆದ ವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದರು.

    ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಸ್ಫೋಟಿಸುವ ಪ್ರಯತ್ನದಲ್ಲಿ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಪತ್ತೆಯಾಗಿವೆ. ಏತನ್ಮಧ್ಯೆ, ಭೋಪಾಲ್ ಬಳಿಯ ಮಿಸ್ರೋಡ್ ಮತ್ತು ಮಂಡಿದೀಪ್ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಮೂರು ವ್ಯಾಗನ್‌ಗಳು ಹಳಿತಪ್ಪಿದವು. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್‌ಗಳು ಪತ್ತೆಯಾಗಿದ್ದು, ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ ರೈಲ್ವೆ ಹಳಿ ಮೇಲೆ ಕಬ್ಬಿಣದ ಹಳಿ ತುಂಡನ್ನು ಇರಿಸಿದ್ದಕ್ಕಾಗಿ ಇಬ್ಬರನ್ನು ಬಂಧಿಸಲಾಗಿದೆ.

    ಹೆಚ್ಚಿನ ಸಂದರ್ಭಗಳಲ್ಲಿ, ಲೊಕೊಪೈಲಟ್‌ನ ಎಚ್ಚರಿಕೆಯು ದೊಡ್ಡ ಅಪಘಾತಗಳನ್ನು ತಪ್ಪಿಸಿದೆ. ಇದರಿಂದ ಆರ್‌ಪಿಎಫ್ ಮತ್ತು ಜಿಆರ್‌ಪಿ ಪೊಲೀಸರು ರೈಲ್ವೇ ಹಳಿಗಳ ಮೇಲೆ ಕಾಲ್ನಡಿಗೆಯ ಮೂಲಕ ಗಸ್ತು ಹೆಚ್ಚಿಸಿದ್ದಾರೆ.

  • ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ಬೆಳಗಾವಿ: ವಾಸ್ಕೋದಿಂದ ಬಳ್ಳಾರಿಗೆ (Ballary) ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ (Dudhsagar) ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.

    ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.ಇದನ್ನೂ ಓದಿ: ಪತಿಯಿಂದಲೇ ಮಿಸ್ ಸ್ವಿಜರ್ಲೆಂಡ್ ಹತ್ಯೆ: ಕೊಲೆ ಬಳಿಕ ಬ್ಲೆಂಡರ್ ಬಳಸಿ ಮೃತದೇಹ ಪೀಸ್ ಪೀಸ್

    ಈ ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ (Amaravati Express) ರೈಲು ಕರಂಜೋಳ್‌ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

    ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.

    18048 ವಾಸ್ಕೋ ಡ ಗಾಮಾ (Vasco da Gama)- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಪ್ರಯಾಣಿಕರ ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು, ಲೋಂಡಾ ನಿಲ್ದಾಣದಲ್ಲಿ ರೈಲು ಸಂಖ್ಯೆ 18047ರ ಅಂದಾಜು 1,100 ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಲೋಂಡಾದಲ್ಲಿಯೇ ಸಿಲುಕಿರುವ ಪ್ರಯಾಣಿಕರನ್ನು ಕರೆದೊಯ್ಯಲು 25 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣ ಪುನಃಸ್ಥಾಪನೆ ತ್ವರಿತಗೊಳಿಸಲು ಅಪಘಾತ ಪರಿಹಾರ ರೈಲನ್ನು ವಾಸ್ಕೋ ಡ ಗಾಮಾದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ದೂದ್ ಸಾಗರ್‌ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ಎರಡು ರೈಲುಗಳ ಸಂಚಾರ ರದ್ದು

    ದೂದ್ ಸಾಗರ್‌ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ಎರಡು ರೈಲುಗಳ ಸಂಚಾರ ರದ್ದು

    ಕಾರವಾರ: ಕಲ್ಲಿದ್ದಲು (Coal) ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲು (Goods Train) ಹಳಿತಪ್ಪಿ ಬಿದ್ದ ಘಟನೆ ಗೋವಾ-ಬೆಳಗಾವಿ-ಕಾರವಾರ ಗಡಿ ಭಾಗದಲ್ಲಿ ನಡೆದಿದ್ದು ಚಾಲನೆ ಮಾಡುತ್ತಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಲೋಂಧ ವಾಸ್ಕೋ ರೈಲು ಮಾರ್ಗದ ದೂದ್ ಸಾಗರ್‌ನಿಂದ (Dudhsagar) ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15 ರ ಸಮೀಪ ಈ ಘಟನೆ ನಡೆದಿದೆ. ವಾಸ್ಕೋದಿಂದ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ (Jindal Company) ಗೂಡ್ಸ್‌ ರೈಲಿನಲ್ಲಿ ಕಲ್ಲಿದ್ದಲು ಸಾಗಿಸಲಾಗುತ್ತಿತ್ತು. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್‌

    ಶುಕ್ರವಾರ ಬೆಳಗ್ಗೆ 9:30ರ ವೇಳೆಗೆ ಈ ಘಟನೆ ನಡೆದಿದೆ. ಒಂದು ಕಾರ್ಗೋ ಕೋಚ್, 11 ಬೋಗಿಗಳು ರೈಲ್ವೇ ಹಳಿಯಿಂದ ಜಾರಿಬಿದ್ದು, ರೈಲು ಹಳಿ ಮುರಿದು ಬಿದ್ದಿದೆ.

    ಈ ಮಾರ್ಗದ ರೈಲು ಸಂಖ್ಯೆ 17309 ಯಶವಂತಪುರ ದಿಂದ ವಾಸ್ಕೋಡಿ ಹಾಗೂ 17310 ವಾಸ್ಕೋಡಿಯಿಂದ ಯಶವಂತಪುರಕ್ಕೆ ಹೋಗುವ ಎರಡು ರೈಲುಗಳು ರದ್ದು ಮಾಡಲಾಗಿದೆ. ಇಂದು ಸಂಜೆ ತೆರಳುವ ಗೋವಾ ಎಕ್ಸ್‌ಪ್ರೆಸ್ ರೈಲನ್ನು ಇತರೇ ಮಾರ್ಗದಲ್ಲಿ ತಿರುಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸದ್ಯ ಹಳಿಯಿಂದ ಹೊರಹೋದ ಗೂಡ್ಸ್ ರೈಲನ್ನು ಮೇಲೆತ್ತುವ ಕಾರ್ಯ ಪ್ರಾರಂಭವಾಗಿದೆ.

     

  • ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಹರಿಯಾಣದಲ್ಲಿ ಹಳಿತಪ್ಪಿದ ಗೂಡ್ಸ್‌ರೈಲು – ಕಂಟೈನರ್ ಮಗುಚಿ ರೈಲು ಸಂಚಾರಕ್ಕೆ ಅಡ್ಡಿ

    ಚಂಡೀಗಢ: ಗೂಡ್ಸ್‌ರೈಲು (Goods Train) ಹಳಿತಪ್ಪಿದ ಪರಿಣಾಮ 8 ಕಂಟೈನರ್‌ಗಳು (Container) ಹಳಿಗೆ ಬಿದ್ದು, ರೈಲು ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಹರಿಯಾಣದ (Haryana)  ಕರ್ನಾಲ್ (Karnal) ಜಿಲ್ಲೆಯಲ್ಲಿ ನಡೆದಿದೆ.

    ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿತ್ತು ಎಂದು ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದ ಎಂಟು ಕಂಟೈನರ್‌ಗಳು ಹಳಿಗೆ ಬಿದ್ದಿವೆ. ಘಟನೆಗೆ ಕಾರಣಗಳನ್ನು ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈಲು ಅಂಬಾಲಾದಿಂದ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್‌ನ ತಾರೋರಿ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಓರ್ವ ಸಚಿವ, ಓರ್ವ ಶಾಸಕನಿಗೆ ಶೀಘ್ರವೇ ಶೋಕಾಸ್‌ ನೋಟಿಸ್‌

    ಕಂಟೈನರ್ ಹಳಿಗೆ ಬಿದ್ದ ಪರಿಣಾಮ ಅಂಬಾಲಾ-ದೆಹಲಿ ರೈಲ್ವೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಘಟನೆಯಿಂದ ಈ ಮಾರ್ಗವಾಗಿ ಚಲಿಸುವ ರೈಲುಗಳನ್ನು ನಿಲ್ಲಿಸಲಾಗಿದೆ. ಮುಂಜಾನೆ 4:40ರ ವೇಳೆಗೆ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್

  • ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ಕೋಲ್ಕತ್ತಾ: ಗೂಡ್ಸ್ ರೈಲೊಂದು (Goods Train) ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್ (Darjeeling) ಜಿಲ್ಲೆಯಲ್ಲಿ ನಡೆದಿದೆ.

    ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjungha Express) ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕೊಲ್ಲುವಾಗ ಸರ್ಕಾರ ಏನು ಮಾಡ್ತಿತ್ತು?: ಗೋವಿಂದ ಕಾರಜೋಳ

    ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಜಾಡಲು ಹೋಗಿ ಬಳ್ಳೂರು ಕೆರೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯ ಶವ ಪತ್ತೆ

  • ತಮಿಳುನಾಡಿನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – ರೈಲು ಸೇವೆಯಲ್ಲಿ ವ್ಯತ್ಯಯ

    ತಮಿಳುನಾಡಿನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – ರೈಲು ಸೇವೆಯಲ್ಲಿ ವ್ಯತ್ಯಯ

    ಚೆನ್ನೈ: ವಿಲ್ಲುಪುರಂನಿಂದ ತೊಂಡೈರ್‌ಪೇಟ್‌ಗೆ ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ಎಂಟು ಬೋಗಿಗಳು ತಮಿಳುನಾಡಿನ (Tamil Nadu) ಚೆಂಗಲ್ಪಟ್ಟು (Chengalpattu) ಬಳಿ ಹಳಿತಪ್ಪಿದ್ದು, ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

    38 ಬೋಗಿಗಳನ್ನು ಹೊಂದಿರುವ ರೈಲಿನಲ್ಲಿ ಕಬ್ಬಿಣದ ಅದಿರು, ಲೋಹದ ಹಾಳೆಗಳು ಮತ್ತು ಕಬ್ಬಿಣದ ರಾಡ್‌ಗಳನ್ನು ತುಂಬಿಸಲಾಗಿತ್ತು. ಚೆಂಗಲ್ಪಟ್ಟುದಿಂದ ಹೊರಟ ವೇಳೆ 38 ಬೋಗಿಗಳಲ್ಲಿ ಎಂಟು ಬೋಗಿಗಳು ಹಳಿತಪ್ಪಿವೆ. ಹಳಿ ತಪ್ಪಿದ ಸಂದರ್ಭದಲ್ಲಿ ಲೋಹದ ಸರಕುಗಳು ಉರುಳಿಬಿದ್ದಿದ್ದರಿಂದ ರೈಲ್ವೆ ಹಳಿಗಳಿಗೆ ಹಾನಿಯಾಗಿದೆ. ಇತರ ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಚೆಂಗಲ್ಪಟ್ಟು ಮತ್ತು ವಿಲ್ಲುಪುರಂನಿಂದ ತ್ವರಿತ ಪ್ರತಿಕ್ರಿಯೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಹಳಿ ತಪ್ಪಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಸ್ತ್ರೀಯರ ಮೇಲೆ ಆ್ಯಸಿಡ್ ದಾಳಿ – ದೇಶದಲ್ಲೇ ಬೆಂಗಳೂರು ನಂಬರ್ 1

    ಅಕ್ಟೋಬರ್‌ನಲ್ಲಿ, ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್‌ನ (EMU) ನಾಲ್ಕು ಖಾಲಿ ಕೋಚ್‌ಗಳು ಚೆನ್ನೈನ ಉಪನಗರ ಅವಡಿ ಬಳಿ ಹಳಿತಪ್ಪಿತ್ತು. ಈ ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿಯಾನಿ ಉಂಟಾಗಿಲ್ಲ. ರೈಲು ಅನನೂರು ಶೆಡ್‌ನಿಂದ ಹೊರಟು ಬೀಚ್ ನಿಲ್ದಾಣಕ್ಕೆ ತೆರಳುತ್ತಿದ್ದ ಸಂದರ್ಭ ಅವಡಿ ಬಳಿ ಈ ಘಟನೆ ಸಂಭವಿಸಿದೆ. ರೈಲು ಅವಡಿ ನಿಲ್ದಾಣದಲ್ಲಿ ನಿಲ್ಲದೇ ಹಿಂದೂ ಕಾಲೇಜು ನಿಲ್ದಾಣದ ಬಳಿ ಹಳಿ ತಪ್ಪಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

  • ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

    ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

    ಮುಂಬೈ: ಮಹಾರಾಷ್ಟ್ರದ (Maharashtra) ಕಾಸರ (Kasara) ರೈಲು ನಿಲ್ದಾಣದ ಬಳಿ ಭಾನುವಾರ ಗೂಡ್ಸ್ ರೈಲಿನ (Goods Train) ಎರಡು ಬೋಗಿಗಳು ಹಳಿತಪ್ಪಿವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ. ಹಳಿ ತಪ್ಪಿದ ಪರಿಣಾಮ 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ. ಘಟನೆಯ ಪರಿಣಾಮ ಇತರ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಕೇಂದ್ರ ರೈಲ್ವೆ (Central Railway) ತಿಳಿಸಿದೆ.

    ಕಾಸರದಿಂದ ಇಗತ್‌ಪುರಿ ಡೌನ್‌ಲೈನ್‌ಗೆ ಮೇಲ್ ಎಕ್ಸ್‌ಪ್ರೆಸ್ ಟ್ರಾಫಿಕ್ ಮತ್ತು ಮಧ್ಯದ ಮಾರ್ಗವು ಪರಿಣಾಮ ಬೀರಿದೆ ಎಂದು ಸೆಂಟ್ರಲ್ ರೈಲ್ವೆ ಹೇಳಿದೆ. ಇಗತ್‌ಪುರಿ ಮತ್ತು ಕಸಾರಿ ನಡುವಿನ ಅಪ್‌ಲೈನ್ ಟ್ರಾಫಿಕ್ ಕಾರ್ಯನಿರ್ವಹಿಸುತ್ತಿದೆ. ಇಲ್ಲಿಯವರೆಗೆ ಯಾವುದೇ ಗಾಯಗಳು ಅಥವಾ ಸಾವು-ನೋವುಗಳು ವರದಿಯಾಗಿಲ್ಲ. ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ತಾಯಿ ಹೊಡೆದಳೆಂದು ರೈಲಿನಡಿ ಹಾರಿ ಅಪ್ರಾಪ್ತೆ ಆತ್ಮಹತ್ಯೆ

    11 ಎಕ್ಸ್ಪ್ರೆಸ್ ರೈಲುಗಳನ್ನು ಹೊರತುಪಡಿಸಿ, ಕಲ್ಯಾಣ್ ನಿಲ್ದಾಣದ ಬಳಿ ನಾಲ್ಕು ರೈಲುಗಳಿದ್ದು, ಅವುಗಳ ಚಲನೆಯನ್ನು ನಿರ್ಬಂಧಿಸಲಾಗಿದೆ ಮತ್ತು ಬೇರೆಡೆಗೆ ತಿರುಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರೈಲ್ವೆ ಹೇಳಿದೆ. ಕಾಸರದಿಂದ ಇಗತ್‌ಪುರಿವರೆಗಿನ ಡೌನ್‌ಲೈನ್ ಟ್ರಾಫಿಕ್ ಮೇಲೆ ಪರಿಣಾಮ ಬೀರಿದೆ ಮತ್ತು ಮಧ್ಯದ ಮಾರ್ಗವನ್ನು ಮರುಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ತಿಳಿಸಿದೆ. ಪ್ರಯಾಣಿಕರಿಗೆ ಆಗಿರುವ ಅನಾನುಕೂಲಕ್ಕಾಗಿ ಕ್ಷಮೆ ಯಾಚಿಸಿದರು. ಇದನ್ನೂ ಓದಿ: ಆಸ್ತಿ ಬರೆಯಲು ನಿರಾಕರಿಸಿದ ಅಮ್ಮನ ಶಿರಚ್ಛೇದ ಮಾಡಿದ ಪಾಪಿ ಪುತ್ರ!

    ಹಳಿತಪ್ಪಿದರೂ ಮುಂಬೈ ಉಪನಗರ ರೈಲು ಸೇವೆಗಳಿಗೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಕೇಂದ್ರ ರೈಲ್ವೇ ಹೇಳಿದೆ. ಕಲ್ಯಾಣ್ ಮತ್ತು ಇಗತ್‌ಪುರಿಯಿಂದ ಎರಡು ಅಪಘಾತ ಪರಿಹಾರ ರೈಲುಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ರುಂಡ ಹಿಡಿದುಕೊಂಡೇ ಠಾಣೆಗೆ ಬಂದ ಪತಿ!

  • ಗೂಡ್ಸ್ ರೈಲು ಡಿಕ್ಕಿ ಹೊಡೆದು 3 ಆನೆಗಳ ದುರ್ಮರಣ

    ಗೂಡ್ಸ್ ರೈಲು ಡಿಕ್ಕಿ ಹೊಡೆದು 3 ಆನೆಗಳ ದುರ್ಮರಣ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ (Buxa Tiger Reserve) ಗೂಡ್ಸ್ ರೈಲು (Goods Train) ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು (Elephants) ಸಾವನ್ನಪ್ಪಿವೆ.

    ರಾಜಭಟ್ಖಾವಾ (Rajabhatkhawa) ಮತ್ತು ಕಲ್ಚಿನಿ (Kalchini) ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು ಡಿಕ್ಕಿಯಿಂದ ಆನೆಗಳು ಸಾವನ್ನಪ್ಪುವ ಅನೇಕ ಸಾಮಾನ್ಯ ಘಟನೆಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಜೂಜಾಟಕ್ಕೆ ಹಣ ಕೊಡದ ಪತ್ನಿಯ ತಲೆ ಒಡೆದು ಹತ್ಯೆ – ಆರೋಪಿ ಅರೆಸ್ಟ್

    ಈ ವರ್ಷದ ಆರಂಭದಲ್ಲಿ, ಪಶ್ಚಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದೊಳಗೆ ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಗರ್ಭಿಣಿ ಆನೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಭಾರತದಲ್ಲಿ ಪ್ರತಿ ವರ್ಷ ಸರಾಸರಿ 20 ಆನೆಗಳು ರೈಲು ಡಿಕ್ಕಿಯಿಂದ ಸಾಯುತ್ತವೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸುತ್ತವೆ. ರೈಲು ಅಪಘಾತಗಳು ಪಶ್ಚಿಮ ಬಂಗಾಳದಲ್ಲಿ ಅಸ್ವಾಭಾವಿಕ ಆನೆಗಳ ಸಾವಿಗೆ ಒಂದು ಕಾರಣವಾಗಿದೆ ಮತ್ತು ಅದನ್ನು ತಡೆಯಲು ಸರ್ಕಾರವು ಕಠಿಣವಾಗಿ ಪ್ರಯತ್ನಿಸುತ್ತಿದೆ. ಇದನ್ನೂ ಓದಿ: ಅಪರಿಚಿತೆಯ ಮಾತುಕೇಳಿ ವೀಡಿಯೋ ಕಾಲ್‍ನಲ್ಲಿ ನಗ್ನವಾಗಿ ಲಕ್ಷಾಂತರ ರೂ. ಕಳೆದುಕೊಂಡ!

  • ಗೂಡ್ಸ್ ರೈಲುಗಳ ನಡುವೆ ಅಪಘಾತ – ಹಳಿ ತಪ್ಪಿದ 12 ಬೋಗಿಗಳು

    ಗೂಡ್ಸ್ ರೈಲುಗಳ ನಡುವೆ ಅಪಘಾತ – ಹಳಿ ತಪ್ಪಿದ 12 ಬೋಗಿಗಳು

    ಕೋಲ್ಕತ್ತಾ: 2 ಗೂಡ್ಸ್ ರೈಲುಗಳ (Goods Train) ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ (Derail) ಘಟನೆ ಪಶ್ಚಿಮ ಬಂಗಾಳದ (West Bengal) ಬಂಕುರಾದಲ್ಲಿ (Bankura) ನಡೆದಿದೆ.

    ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್‌ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿ ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್ ಶಾಕ್‍ನಿಂದ ಮಹಿಳೆ ಸಾವು

    ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ (ADRA) ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೋ ಮತ್ತು ಸಿಂಗ್‌ಭೂಮ್‌ಗೆ ಸಂಚಾರ ಕಲ್ಪಿಸಲಾಗಿತ್ತು. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

    ಪುರುಲಿಯಾ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್‌ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆರ್ಡರ್‌ ಮಾಡಿದ 4 ವರ್ಷಗಳ ಬಳಿಕ ಟೆಕ್ಕಿ ಕೈ ಸೇರಿತು ಪ್ರಾಡಕ್ಟ್‌!

    ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಗಳಿಗೆ ವಿಚ್ಛೇದನ ಕೊಡಲು ಪ್ರೋತ್ಸಾಹಿಸಿದ ಅತ್ತೆಯನ್ನೇ ಹತ್ಯೆಗೈದ ಅಳಿಯ