Tag: google

  • ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದು ಡ್ರಗ್‌ಪೆಡ್ಲರ್ ಆದ ನಟೋರಿಯಸ್ ನೇಪಾಳಿ

    ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದು ಡ್ರಗ್‌ಪೆಡ್ಲರ್ ಆದ ನಟೋರಿಯಸ್ ನೇಪಾಳಿ

    ಬೆಂಗಳೂರು: ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಇಲ್ಲಿನ ನೇಪಾಳಿ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬಾಗಲೂರಿನ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

    ಆರೋಪಿಯನ್ನು ಬಂಧಿಸಿದ್ದು, 3 ಲಕ್ಷ ಮೌಲ್ಯದ 10 ಗ್ರಾಂ ಎಂಡಿಎಂಎ ಡ್ರಗ್ಸ್ ಹಾಗೂ 80 ಗ್ರಾಂ ಚರಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಶೌಚಾಲಯದಲ್ಲಿ 12ರ ಹುಡುಗಿ ಮೇಲೆ ಅತ್ಯಾಚಾರ

    crime

    ಘಟನೆ ಸಂಬಂಧ ಮಾಹಿತಿ ನೀಡಿರುವ ಅಧಿಕಾರಿಗಳು, ನೇಪಾಳದಿಂದ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದಿದ್ದ ಈತ ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿ ಮಾಡಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಒಂದು ಗ್ರಾಂಗೆ 5 ರಿಂದ 10 ಸಾವಿರ ರೂ. ಪಡೆಯುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಆತನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

  • ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

    ಬಳಕೆದಾರರ ಡೇಟಾ ಸಂಗ್ರಹಿಸ್ತಿದ್ದ ಆ್ಯಪ್‌ಗಳನ್ನು ಬ್ಯಾನ್ ಮಾಡಿದ ಗೂಗಲ್

    ವಾಷಿಂಗ್ಟನ್: ಬಳಕೆದಾರರ ಫೋನ್ ನಂಬರ್ ಹಾಗೂ ಇತರ ಪ್ರಮುಖ ಡೇಟಾಗಳನ್ನು ರಹಸ್ಯವಾಗಿ ಸಂಗ್ರಹಿಸುತ್ತಿದ್ದ ಹತ್ತಾರು ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಬ್ಯಾನ್ ಮಾಡಿದೆ.

    ಗೂಗಲ್ ನಿಷೇಧಿಸಿರುವ ಆ್ಯಪ್‌ಗಳಲ್ಲಿ ಮುಖ್ಯವಾಗಿ 1 ಕೋಟಿಗೂ ಹೆಚ್ಚು ಬಾರಿ ಡೌನ್‌ಲೋಡ್ ಆಗಿದ್ದ ಮುಸ್ಲಿಂ ಪ್ರಾರ್ಥನೆಯ ಅಪ್ಲಿಕೇಶನ್‌ಗಳು, ಬಾರ್‌ಕೋಡ್ ಸ್ಕ್ಯಾನಿಂಗ್ ಅಪ್ಲಿಕೇಶನ್‌ಗಳು, ಹೈವೇ ಸ್ಪೀಡ್ ಟ್ರ್ಯಾಪ್ ಡಿಟೆಕ್ಷನ್ ಅಪ್ಲಿಕೇಶನ್ ಹಾಗೂ ಇತರ ಹಲವಾರು ಬಳಕೆದಾರರ ಡೇಟಾಗಳನ್ನು ಸಂಗ್ರಹಿಸುತ್ತಿದ್ದ ಅಪ್ಲಿಕೇಶನ್‌ಗಳನ್ನು ಗೂಗಲ್ ಬ್ಯಾನ್ ಮಾಡಿದೆ. ಇದನ್ನೂ ಓದಿ: 48 ಗಂಟೆಗಳಲ್ಲಿ 3ನೇ ಸರ್ಕಾರಿ ಟ್ವಿಟ್ಟರ್ ಖಾತೆ ಹ್ಯಾಕ್

    ಗೂಗಲ್ ಪ್ಲೇಸ್ಟೋರ್‌ನಿಂದ ನಿಷೇಧಿಸಲಾದ ಅಪ್ಲಿಕೇಶನ್‌ಗಳು ಬಳಕೆದಾರರ ಸ್ಥಳ ಮಾಹಿತಿ, ಇ-ಮೇಲ್, ಫೋನ್ ನಂಬರ್, ಹತ್ತಿರದ ಸಾಧನಗಳು ಹಾಗೂ ಪಾಸ್‌ವರ್ಡ್‌ಗಳನ್ನು ಸಂಗ್ರಹಿಸುತ್ತಿದ್ದವು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಶೀಘ್ರವೇ ಸ್ವಯಂ ಚಾಲಿತ ಕಾರುಗಳನ್ನು ಬಿಡುಗಡೆ ಮಾಡಲಿದ್ದಾರೆ ಮಸ್ಕ್

    ಬಳಕೆದಾರರ ಡೇಟಾವನ್ನು ಹೊರತೆಗೆಯಲು ಈ ಅಪ್ಲಿಕೇಶನ್‌ಗಳಲ್ಲಿ ಕೋಡ್‌ಗಳನ್ನು ಸೇರಿಸಲಾಗುತ್ತಿದ್ದು, ಇದಕ್ಕಾಗಿ ಹಲವು ಕಂಪನಿಗಳು ಅಪ್ಲಿಕೇಶನ್‌ಗಳಿಗೆ ಪಾವತಿಸಿದೆ. ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕಂಡುಬಂದಿರುವ ಕೋಡ್‌ಗಳನ್ನು ಇತ್ತೀಚೆಗೆ ಸಂಶೋಧಕರು ಕಂಡುಹಿಡಿದಿದ್ದಾರೆ ಎಂದು ವರದಿಗಳು ತಿಳಿಸಿವೆ.

  • ಆಂಡ್ರಾಯ್ಡ್ ಬಳಕೆದಾರಿಗೆ ಮೋಸ ಮಾಡಿ ಸಿಕ್ಕಿಬಿದ್ದ ಗೂಗಲ್

    ಆಂಡ್ರಾಯ್ಡ್ ಬಳಕೆದಾರಿಗೆ ಮೋಸ ಮಾಡಿ ಸಿಕ್ಕಿಬಿದ್ದ ಗೂಗಲ್

    ಲಂಡನ್: ಆಂಡ್ರಾಯ್ಡ್ ನಲ್ಲಿ ಫೋನ್ ಮತ್ತು ಮೆಸೇಜ್ ಅಪ್ಲಿಕೇಶನ್ ಬಳಸಿಕೊಂಡು ಬಳಕೆದಾರರ ಡೇಟಾವನ್ನು ಗೂಗಲ್ ಸಂಗ್ರಹಿಸುತ್ತಿದ್ದು ಸಿಕ್ಕಿಬಿದ್ದಿದೆ.

    ಟೆಕ್ ಕಂಪನಿಗಳು ನಿಮ್ಮ ಬಗ್ಗೆ ಎಷ್ಟು ತಿಳಿದಿವೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ನಿಮ್ಮ ಡೇಟಾ ನಿಜವಾಗಿಯೂ ಖಾಸಗಿಯಾಗಿದೆಯೇ? ಎಂಬುದರ ಬಗ್ಗೆ ಬಳಕೆದಾರರು ಯೋಚಿಸಬೇಕು. ಲಂಡನ್‍ನ ಟ್ರಿನಿಟಿ ಕಾಲೇಜಿನ ಪ್ರೋಫೆಸರ್ ಡೌಗ್ಲಾಸ್ ಲೀತ್ ಪ್ರಕಟಿಸಿದ ಸಂಶೋಧನಾ ಪ್ರಬಂಧವು, ಗೂಗಲ್ ನಿಂದ ಆಂಡ್ರೊಯ್ ಫೋನ್‍ಗಳಲ್ಲಿ ಮೆಸೇಜ್ ಅಪ್ಲಿಕೇಶನ್ ಬಳಸುವ ಬಳಕೆದಾರರಿಂದ ಸಂಗ್ರಹಿಸಬಹುದಾದ ಡೇಟಾದ ಪ್ರಮಾಣವನ್ನು ವಿವರಿಸಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಎಎಪಿ ಸದಸ್ಯತ್ವ ಅಭಿಯಾನಕ್ಕೆ ಪೃಥ್ವಿ ರೆಡ್ಡಿ ಚಾಲನೆ 

    Google caught collecting user data using its Phone and Messages app for Android

    ಈ ಪ್ರಬಂಧದಲ್ಲಿ, ಗೂಗಲ್ ತನ್ನ ಬಳಕೆದಾರರ ಫೋನ್ ಕಾಲ್ ದಾಖಲೆ ಮತ್ತು ಮೇಸೆಜ್ ಲೀಟ್ಸ್‌ನನ್ನು ಅವರ ಒಪ್ಪಿಗೆಯಿಲ್ಲದೆ ಸಂಗ್ರಹಿಸುತ್ತಿದೆ. ಗೂಗಲ್ ಪೇ ಸೇವೆಗಳಿಂದಲೂ ಗೂಗಲ್ ಹೆಚ್ಚು ಡೇಟಾ ಸಂಗ್ರಹ ಮಾಡುತ್ತಿದೆ. ಈ ಮೂಲಕ ಡೇಟಾವನ್ನು ಸಿಂಕ್ ಮಾಡುತ್ತದೆ ಎಂದು ಬಳಕೆದಾರರಿಗೆ ಬಹಿರಂಗಪಡಿಸಿದೆ.

    ಗೂಗಲ್‍ನ ಗೌಪ್ಯತೆ ನೀತಿಗಳಲ್ಲಿ ಒಳಗೊಂಡಿರುವ ವ್ಯಾಪ್ತಿಯಿಂದ ಹೊರಗುಳಿದು ಗೂಗಲ್ ಡೇಟಾವನ್ನು ಸಂಗ್ರಹಿಸುತ್ತಿದೆ. ಉದಾಹರಣೆಗೆ ಮೇಸೆಜ್ ಅಪ್ಲಿಕೇಶನ್, ನಿಮ್ಮ ಸಂದೇಶದ ವಿಷಯ ಮತ್ತು ಟೈಮ್‍ಸ್ಟ್ಯಾಂಪ್‍ಗಳನ್ನು ತೆಗೆದುಕೊಳ್ಳುತ್ತದೆ. ಇದು ನಂತರ ಡೇಟಾವನ್ನು ಅನಾಮಧೇಯವಾಗಿಡಲು ಹ್ಯಾಶ್ ರಚಿಸುತ್ತದೆ. ಅದರ ಒಂದು ಭಾಗವನ್ನು ಗೂಗಲ್‍ನ ಸರ್ವರ್‌ಗಳಿಗೆ ಕಳುಹಿಸುತ್ತದೆ ಎಂದು ಪ್ರೋ.ಲೀತ್ ವಿವರಿಸುತ್ತಾರೆ. ಇದನ್ನೂ ಓದಿ: ಗಂಡನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಊರೆಲ್ಲಾ ಅರಚಾಡಿ ಹೈ-ಡ್ರಾಮಾ ಮಾಡಿದ ಪತ್ನಿ

    Google to Crack Down on Android Apps That Collect User Data Without Consent
    ಆಂಡ್ರೊಯ್ ಡೇಟಾವು ಮೆಸೇಜ್ ಲಿಸ್ಟ್‌ನ ಹ್ಯಾಶ್ ಮತ್ತು ಫೋನ್ ಕಾಲ್ ಅವಧಿಯನ್ನು ಒಳಗೊಂಡಿದೆ ಎಂದು ಡಬ್ಲಿನ್ ಪ್ರೋ.ಡೌಗ್ಲಾಸ್ ಲೀತ್ ಹೇಳಿದ್ದಾರೆ. ಇದನ್ನು ತಿಳಿಸಲು ಲೀತ್ ತಮ್ಮ ಸಂಶೋಧನೆಗಳನ್ನು ಗೂಗಲ್‍ನೊಂದಿಗೆ ಹಂಚಿಕೊಂಡರು. ನಂತರ ಅದರಲ್ಲಿ ನಡೆಯುವ ಬದಲಾವಣೆಗಳನ್ನು ನೇರವಾಗಿ ತೋರಿಸಿದ್ದಾರೆ.

  • ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ – ಕಂಪನಿಗಳಿಗೆ ಬಿಸಿ ಮುಟ್ಟಿಸಿದ ಕೇಂದ್ರ

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ – ಕಂಪನಿಗಳಿಗೆ ಬಿಸಿ ಮುಟ್ಟಿಸಿದ ಕೇಂದ್ರ

    ನವದೆಹಲಿ: ಸಾಮಾಜಿಕ ಜಾಲತಾಣಗಳಾದ ಪೇಸ್‍ಬುಕ್, ಟ್ವಿಟ್ಟರ್, ಗೂಗಲ್‍ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕೆಂದು ಕೇಂದ್ರ ಕಂಪನಿಗಳೊಂದಿಗೆ ಸಭೆ ನಡೆಸಿ ವಾರ್ನಿಂಗ್ ನೀಡಿದೆ ಎಂದು ವರದಿಯಾಗಿದೆ.

    ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ಫೇಸ್‌ಬುಕ್, ಟ್ವಿಟ್ಟರ್, ಗೂಗಲ್ ಸೇರಿ ಹಲವು ಸಾಮಾಜಿಕ ಜಾಲತಾಣಗಳೊಂದಿಗೆ ಕೇಂದ್ರ ಚರ್ಚಿಸಿದ್ದು, ಪ್ರಮುಖವಾಗಿ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಯಂತ್ರಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಡಕ್ ವಾರ್ನಿಂಗ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: 24 ಗಂಟೆಯ ಒಳಗಡೆ ಆಕ್ಷೇಪಾರ್ಹ ವಿಷಯಗಳನ್ನು ತೆಗೆಯಲೇಬೇಕು – ಕೇಂದ್ರ ಸರ್ಕಾರ

    ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಸಾಮಾಜಿಕ ಜಾಲತಾಣ ಕಂಪನಿಗಳ ಜೊತೆ ಚರ್ಚಿಸಿದ ಕೇಂದ್ರ, ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಹಿಡಿಯಬೇಕು. ಈ ಬಗ್ಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುತ್ತದೆ. ಈಗಾಗಲೇ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಪಾಲಿಸದೆ ಇದ್ದರೆ, ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದು ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಹತ್ವದ ದಾಖಲೆಗಳನ್ನು ವಾಟ್ಸಪ್ ಮಾಡಬೇಡಿ, ಸಭೆಗಳಲ್ಲಿ ಫೋನ್ ಬಳಸಬೇಡಿ – ಕೇಂದ್ರ ಸರ್ಕಾರ ಸೂಚನೆ

    ಈಗಾಗಲೇ ಡಿಜಿಟಲ್ ಮೀಡಿಯಾದಲ್ಲಿ ದ್ವೇಷ ಬಿತ್ತುವ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಕೆಲದಿನಗಳ ಹಿಂದೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ ಜಾರಿಗೆ ತರಲಾದ ಹೊಸ ನಿಯಮಗಳನ್ನು ತಿಳಿಸಿದ್ದರು. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    ನಿಯಮದಲ್ಲಿ ಏನಿದೆ?
    ಅಶ್ಲೀಲ, ಮಾನಹಾನಿಕರ, ಆಕ್ಷೇಪಾರ್ಹ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ, ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ವಿಷಯಗಳನ್ನು ನಿಷೇಧಿಸಬೇಕು. ಸಾಮಾಜಿಕ ಜಾಲತಾಣಗಳು ಸೂಚನೆ ನೀಡಿದ ಅಥವಾ ಕೋರ್ಟ್ ಆದೇಶದ 36 ಗಂಟೆಯ ಒಳಗಡೆ ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು. ಸೋಶಿಯಲ್ ಮೀಡಿಯಾ ಮತ್ತು ಮೆಸೇಜಿಂಗ್ ಸೈಟ್‍ಗಳು ಮಾಹಿತಿಯನ್ನು ಮೊದಲ ಹಾಕಿದವರ ಟ್ರ್ಯಾಕಿಂಗ್ ಮಾಡಬೇಕು. ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಕಂಪನಿಗಳು 72 ಗಂಟೆಯ ಒಳಗಡೆ ಮಾಹಿತಿಯನ್ನು ಒದಗಿಸಬೇಕು. ದೂರು ನೀಡಿದ 24 ಗಂಟೆಗಳ ಒಳಗಡೆ ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.

    ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು. ನಿಯಮವನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ ಜಾರಿಯಾಗಬೇಕು. ಸ್ವಯಂ ನಿಯಂತ್ರಣ, ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ, ಸರ್ಕಾರದ ಮೇಲ್ವಿಚಾರಣೆ. ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಯ ಕುರಿತು ಸಾರ್ವಜನಿಕರಿಂದ ಎಲ್ಲ ಕುಂದುಕೊರತೆಗಳನ್ನು ಸ್ವೀಕರಿಸಲು ಮತ್ತು ಪ್ರಕ್ರಿಯೆಗೊಳಿಸಲು ಆನ್‍ಲೈನ್ ಪೋರ್ಟಲ್ ತೆರೆಯಬೇಕು. ಕುಂದುಕೊರತೆಯನ್ನು 15 ದಿನಗಳ ಒಳಗಡೆ ಪರಿಹರಿಸಬೇಕು. ಈ ಸೇವೆ ನೀಡುವ ಟೆಕ್ ಕಂಪನಿಗಳು ಕುಂದುಕೊರತೆಯನ್ನು ನಿವಾರಿಸಲು ಅಧಿಕಾರಿಗಳನ್ನು ನೇಮಿಸಬೇಕು. ಕುಂದುಕೊರತೆಯನ್ನು ನಿವಾರಿಸುವ ಅಧಿಕಾರಿ ಭಾರತದಲ್ಲಿ ವಾಸಿಸಬೇಕು ಮತ್ತು ಪ್ರತಿ ಆರು ತಿಂಗಳಿಗೊಮ್ಮೆ ವರದಿ ನೀಡಬೇಕು ತಿಳಿಸಿದೆ.

  • ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್

    ನವದೆಹಲಿ: ಅಮೆರಿಕಾ ತಂತ್ರಜ್ಞಾನ ದೈತ್ಯ ಗೂಗಲ್ ಟೆಲಿಕಾಂ ಕಂಪನಿ ಏರ್‌ಟೆಲ್‌ನೊಂದಿಗೆ ಒಂದು ಮಹತ್ತರ ಒಪ್ಪಂದ ನಡೆಸಿದೆ. ಈ ಮೂಲಕ ಗೂಗಲ್ ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ಘೋಷಿಸಿದೆ.

    ಗೂಗಲ್ ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆ ಭಾರತಿ ಏರ್‌ಟೆಲ್‌ನಲ್ಲಿ ಮುಂದಿನ 5 ವರ್ಷಗಳ ಅವಧಿಯಲ್ಲಿ 1 ಬಿಲಿಯನ್ ಡಾಲರ್(7,400 ಕೋಟಿ ರೂ.) ಹೂಡಿಕೆ ಮಾಡಲಿದೆ ಎಂದು ವರದಿಯಾಗಿದೆ. ಈ ಒಪ್ಪಂದದ ಪ್ರಕಾರ ಗೂಗಲ್ ಸಂಸ್ಥೆ ಏರ್‌ಟೆಲ್‌ ಕಂಪನಿಯ ಶೇ. 1.28ರಷ್ಟು ಪಾಲುದಾರಿಕೆಯನ್ನು ತಲಾ ಷೇರಿಗೆ 734 ರೂ.ಯಂತೆ ಪಡೆದುಕೊಳ್ಳಲಿದೆ ಹಾಗೂ 300 ಮಿಲಿಯನ್ ಡಾಲರ್ ವಾಣಿಜ್ಯ ಒಪ್ಪಂದಗಳಿಗೆ ಹೂಡಿಕೆ ಮಾಡಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್

    ಈ ಒಪ್ಪಂದದ ಮೂಲಕ ಏರ್‌ಟೆಲ್‌ ಹಾಗೂ ಗೂಗಲ್ ಒಟ್ಟಾಗಿ ಗ್ರಾಹಕರಿಗೆ ಕೈಗೆಟಕುವಂತಹ ಹೊಸ ಕೊಡುಗೆಗಳನ್ನು ನೀಡಲು ಮುಂದಾಗುತ್ತಿದೆ. 5ಜಿ ಹಾಗೂ ಇತರ ಸಂಬಂಧಿತ ಸೌಲಭ್ಯಗಳ ಬಳಕೆಗೆ ನೆಟ್‍ವರ್ಕ್ ಡೊಮೈನ್ ರಚನೆಗೆ ಹೆಚ್ಚಿನ ಮಹತ್ವ ನೀಡಲಿದೆ ಎಂದು ಏರ್‌ಟೆಲ್‌ ತಿಳಿಸಿದೆ. ಇದನ್ನೂ ಓದಿ: ಮಿಲ್ಕಿ ವೇಯಲ್ಲಿ 18 ನಿಮಿಷಗಳಿಗೊಮ್ಮೆ ಸ್ಫೋಟವಾಗುವ ವಸ್ತು ಪತ್ತೆ

    ಡಿಜಿಟೈಸೇಶನ್ ಫಂಡ್‍ನ ಮುಂದುವರಿಕೆಯಾಗಿ ಹೊಸ ವ್ಯಾಪಾರ ಮಾದರಿಯನ್ನು ಬೆಂಬಲಿಸಲು ಹಾಗೂ ಸಂಪರ್ಕವನ್ನು ಹೆಚ್ಚಿಸಲು ಏರ್‌ಟೆಲ್‌ನಲ್ಲಿ ನಮ್ಮ ಹೂಡಿಕೆ ಪ್ರಾರಂಭಿಸಿದ್ದೇವೆ ಎಂದು ಗೂಗಲ್ ಹಾಗೂ ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ತಿಳಿಸಿದ್ದಾರೆ.

  • ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ- ಗೂಗಲ್ ನಿರ್ಧಾರ

    ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ- ಗೂಗಲ್ ನಿರ್ಧಾರ

    ವಾಷಿಂಗ್ಟನ್: ಕೋವಿಡ್ ನಿಯಮಗಳನ್ನು ಅನುಸರಿಸದ ಹಾಗೂ ಲಸಿಕೆಯನ್ನು ಪಡೆಯದೇ ಇರುವ ಉದ್ಯೋಗಿಗಳಿಗೆ ಗೂಗಲ್ ವೇತನ ನೀಡುವುದನ್ನು ನಿಲ್ಲಿಸಿದೆ. ಮಾತ್ರವಲ್ಲದೇ ಗೂಗಲ್ ಉದ್ಯೋಗಿಗಳಿಗೆ ಕೆಲಸದಿಂದ ವಜಾ ಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

    ಹೌದು, ಗೂಗಲ್ ತನ್ನ ಉದ್ಯೋಗಿಗಳಿಗೆ ಡಿಸೆಂಬರ್ 3ರ ಒಳಗಾಗಿ ತಮ್ಮ ಲಸಿಕೆಗಳ ವಿವರವನ್ನು ಸಲ್ಲಿಸ ಬೇಕೆಂಬ ಸೂಚನೆ ನೀಡಿತ್ತು. ಡಿಸೆಂಬರ್ 3ರ ಬಳಿಕವೂ ಯಾವುದೇ ವಿವರಗಳನ್ನು ಸಲ್ಲಿಸದ ಉದ್ಯೋಗಿಗಳನ್ನು ಗೂಗಲ್ ವೈಯಕ್ತಿಕವಾಗಿ ಸಂಪರ್ಕಿಸುವುದೆಂದು ಸೂಚನೆಯಲ್ಲಿ ತಿಳಿಸಿತ್ತು. ಇದನ್ನೂ ಓದಿ: ಭಾರತೀಯನಿಗೆ 3.5ಲಕ್ಷ ರೂ. ನೀಡಿದ ಗೂಗಲ್

    ಇದೀಗ ಗೂಗಲ್ ಲಸಿಕೆಯನ್ನು ಪಡೆಯದೇ ಇರುವ ಉದ್ಯೋಗಿಗಳಿಗೆ ಜನವರಿ 18ರ ವರೆಗೆ ಸಮಯಾವಕಾಶ ನೀಡಿದೆ. ಉದ್ಯೋಗಿಗಳು ಲಸಿಕೆಯನ್ನು ಪಡೆಯದೇ ಹೋದಲ್ಲಿ ಅವರಿಗೆ ವೇತನದೊಂದಿಗೆ 30 ದಿಗಳ ರಜೆಯನ್ನು ನೀಡಲಾಗುವುದು, ನಂತರ 6 ತಿಂಗಳ ವರೆಗೆ ವೇತನವಿಲ್ಲದ ವೈಯಕ್ತಿಕ ರಜೆಯಲ್ಲಿ ಇರಿಸಲಾಗುತ್ತದೆ ಎಂದಿದೆ.

    ಒಂದುವೇಳೆ ಈ ಸಮಯಾವಕಾಶದಲ್ಲಿಯೂ ಉದ್ಯೋಗಿಗಳು ಲಸಿಕೆಯನ್ನು ತೆಗೆದುಕೊಂಡಿಲ್ಲವಾದಲ್ಲಿ ಕೆಲಸದಿಂದಲೇ ಅವರನ್ನು ವಜಾ ಗೊಳಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಅಮ್ಮನ ಫೋಟೋ ಹಿಡಿದುಕೊಂಡು ಹೆಜ್ಜೆ ಇಟ್ಟ ವಧು – ವೀಡೀಯೋ ವೈರಲ್‌

    ಗೂಗಲ್ ಜನವರಿ 2022ರ ಒಳಗಾಗಿ ತಮ್ಮ ಉದ್ಯೋಗಿಗಳನ್ನು ಆಫಿಸ್‌ಗೆ ಕರೆಸಿಕೊಳ್ಳುವ ಯೋಜನೆ ಮಾಡಿತ್ತು. ಆದರೆ ಓಮಿಕ್ರಾನ್ ಪ್ರಕರಣಗಳ ಹಠಾತ್ತನೆ ಏರಿಕೆಯಿಂದಾಗಿ ಗೂಗಲ್ ಸೇರಿದಂತೆ ಎಲ್ಲಾ ದೊಡ್ಡ ಟೆಕ್ ಕಂಪನಿಗಳು ಉದ್ಯೋಗಿಗಳನ್ನು ಆಫೀಸ್‌ಗೆ ಕರೆಸಿಕೊಳ್ಳುವ ಯೋಜನೆಯನ್ನು ಮುಂದೂಡಿದೆ.

  • ಭಾರತೀಯನಿಗೆ 3.5ಲಕ್ಷ ರೂ. ನೀಡಿದ ಗೂಗಲ್

    ದಿಸ್ಪುರ್: ಆಂಡ್ರಾಯ್ಡ್ನಲ್ಲಿದ್ದ ದೋಷವನ್ನು ಕಂಡು ಹುಡುಕಿ ಅದನ್ನು ಗೂಗಲ್‌ಗೆ ವರದಿ ನೀಡಿದ್ದಕ್ಕೆ ಗೂಗಲ್ 3.5ಲಕ್ಷ ರೂ.ಯನ್ನು ಬಹುಮಾನವಾಗಿ ನೀಡಿದೆ. ದೋಷವನ್ನು ಕಂಡುಹಿಡಿದ ಭಾರತೀಯ ರೋನಿ ದಾಸ್ ಅಸ್ಸಾಂ ಮೂಲದವರು.

    ಆಂಡ್ರಾಯ್ಡ್ನ ಫೋರ್‌ಗ್ರೌಂಡ್ ಸೇವೆಯಲ್ಲಿ ಕೆಲವು ದೋಷಗಳಿದ್ದು, ಇದರ ಮೂಲಕ ಹ್ಯಾಕರ್‌ಗಳು ಸುಲಭವಾಗಿ ಬಳಕೆದಾರರ ಫೋನ್‌ಗಳಿಂದ ವಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಾಗುತ್ತಿತ್ತು. ರೋನಿ ದಾಸ್ ಸೈಬರ್-ಸೆಕ್ಯೂರಿಟಿಯ ಬಗ್ಗೆ ತಿಳುವಳಿಕೆ ಹೊಂದಿದ್ದು, ಆಂಡ್ರಾಯ್ಡ್ನಲ್ಲಿದ್ದ ಸಮಸ್ಯೆಯನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ನಮ್ಮಿಬ್ಬರ ಮದುವೆ ಯಾವಾಗ – ಆಲಿಯಾಗೆ ರಣಬೀರ್‌ ಪ್ರಶ್ನೆ

    ರೋನಿಯವರು ಆಂಡ್ರಾಯ್ಡ್ ಪ್ಲಾಟ್‌ಫಾರ್ಮ್ನಲ್ಲಿ ಅಪ್ಲಿಕೇಶನ್ ಒಂದನ್ನು ರಚಿಸುವಾಗ ತಾಂತ್ರಿಕ ಸಮಸ್ಯೆಯನ್ನು ಎದುರಿಸಿದ್ದರು. ಅದರಲ್ಲಿದ್ದ ದೋಷವನ್ನು ಕಂಡು ಹುಡುಕಿದ ರೋನಿ ಮೇ ತಿಂಗಳಿನಲ್ಲಿ ಗೂಗಲ್‌ಗೆ ದೋಷದ ಬಗ್ಗೆ ವರದಿ ಮಾಡಿದ್ದಾರೆ. ಇದನ್ನೂ ಓದಿ: ಹೆದ್ದಾರಿಯಲ್ಲಿ ಹೊಂಚು ಹಾಕಿ ಬೇಟೆಯಾಡಿದ ಚಿರತೆ – ವೀಡಿಯೋ ವೈರಲ್

    ದೋಷದ ಬಗ್ಗೆ ಮಾಹಿತಿ ಪಡೆದ ಗೂಗಲ್ ಆಂಡ್ರಾಯ್ಡ್ ಭದ್ರತಾ ತಂಡ ರೋನಿ ಯವರಿಗೆ ಇಮೇಲ್ ಮೂಲಕ ಧನ್ಯವಾದ ಹೆಳಿದೆ. ಇದರೊಂದಿಗೆ ರೋನಿಗೆ 5000 ಡಾಲರ್(3.5 ಲಕ್ಷ ರೂ.)ಅನ್ನೂ ನೀಡಿದೆ.

  • ಪಿಜ್ಜಾಗೆ ಡೂಡಲ್ ಸಮರ್ಪಿಸಿದ ಗೂಗಲ್

    ಪಿಜ್ಜಾಗೆ ಡೂಡಲ್ ಸಮರ್ಪಿಸಿದ ಗೂಗಲ್

    ನವದೆಹಲಿ: ಗೂಗಲ್ ತನ್ನ ಇಂಟರಾಕ್ಟಿವ್ ಡೂಡಲ್ ನ್ನು ಪ್ರತಿದಿನ ಒಂದೊಂದು ವಿಶೇಷವಾದ ಸ್ಥಳ, ವ್ಯಕ್ತಿಗೆ ಸಮರ್ಪಿಸುತ್ತಿರುತ್ತೆ. ಇಂದು ಪ್ರಪಂಚದಲ್ಲಿ ಹೆಚ್ಚು ಸೇವಿಸುತ್ತಿರುವ ಪಿಜ್ಜಾಗೆ ತನ್ನ ಡೂಡಲ್ ಅನ್ನು ಸಮರ್ಪಿಸಿದೆ.

    ಇತ್ತೀಚಿಗೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಪಿಜ್ಜಾ ಎಂದರೆ ಬಾಯಲ್ಲಿ ನೀರು ಬರುತ್ತೆ. ಅದು ಅಲ್ಲದೇ ಇದು ವಿಶ್ವದ ಅತ್ಯಂತ ಜನಪ್ರಿಯ ಭಕ್ಷ್ಯಗಳಲ್ಲಿ ಒಂದಾಗಿದ್ದು, ಇದಕ್ಕೆ ಗೌರವ ಸಲ್ಲಿಸುವ ಸಲ್ಲುವಾಗಿ ಗೂಗಲ್ ಇಂದು ಸಂವಾದಾತ್ಮಕ ಡೂಡಲ್(ಇಂಟರಾಕ್ಟಿವ್ ಡೂಡಲ್) ನಲ್ಲಿ ಪಿಜ್ಜಾ ಚಿತ್ರವನ್ನು ಹಾಕಿದೆ.

    ಜಾಗತಿಕ ಸರ್ಚ್ ಇಂಜಿನ್ ತನ್ನ ವಿಶೇಷ ಡೂಡಲ್ನೊಂದಿಗೆ ನಿಯಾಪೊಲಿಟನ್ ‘ಪಿಜ್ಜೈಯುಲೊ’ ನ ಪಾಕಶಾಲೆಯ ಕಲೆಯನ್ನು ಹಾಕಿದೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಪ್ರಕಾರ, ‘ನಿಯಾಪೊಲಿಟನ್ ‘ಪಿಜ್ಜೈಯುಲೊ’ ಕಲೆಯು ನಾಲ್ಕು ವಿಭಿನ್ನ ಹಂತಗಳನ್ನು ಒಳಗೊಂಡಿರುವ ಒಂದು ಪಾಕಶಾಲೆಯ ಅಭ್ಯಾಸವಾಗಿದೆ ಇದು ಭಿನ್ನ ಕಲೆಗಳಲ್ಲಿ ಒಂದಾಗಿದೆ ಎಂದಿದೆ. ಇದನ್ನೂ ಓದಿ: ಸಖತ್ ಟೇಸ್ಟ್ ಈ ಚಿಕನ್ ಹರಿಯಾಲಿ – ನೀವೂ ಒಮ್ಮೆ ಟ್ರೈ ಮಾಡಿ

    ಗೂಗಲ್ ಪ್ರಪಂಚದಾದ್ಯಂತದ 11 ಅತ್ಯಂತ ಜನಪ್ರಿಯ ಪಿಜ್ಜಾ ಪಝಲ್ ಗೇಮ್ ಅನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡಿದೆ. ಈ ಗೇಮ್ ಆಟಗಾಗರಿಗೆ ಸವಾಲು ಹಾಕುತ್ತಾ ತನ್ನತ್ತ ಸೆಳೆಯುತ್ತೆ.

  • ಮಾರುಕಟ್ಟೆಗೆ ಲಗ್ಗೆ ಇಟ್ಟ ಜಿಯೋ ಫೋನ್‌ ನೆಕ್ಷ್ಟ್‌

    ಮಾರುಕಟ್ಟೆಗೆ ಲಗ್ಗೆ ಇಟ್ಟ ಜಿಯೋ ಫೋನ್‌ ನೆಕ್ಷ್ಟ್‌

    ಬೆಂಗಳೂರು: ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ ಜಿಯೋ ಈಗ ಆಂಡ್ರಾಯ್ಡ್ ಸ್ಮಾರ್ಟ್‍ಫೋನ್ ಕ್ಷೇತ್ರದಲ್ಲೂ ಕ್ರಾಂತಿ ಮಾಡಲು ಮುಂದಾಗಿದೆ. ಕಳೆದ ವಾರ ಬಿಡುಗಡೆ ಮಾಡಿದ್ದ ಜಿಯೋ ಫೋನ್‌ ನೆಕ್ಷ್ಟ್‌ ಡ್ಯುಯಲ್‌ ಸಿಮ್‌ ಫೋನ್‌ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

    ಜಿಯೋ ನೆಕ್ಷ್ಟ್ ಹೆಸರಿನ ಫೋನಿಗೆ 6,499 ರೂ. ದರವನ್ನು ನಿಗದಿ ಮಾಡಿದೆ. ಆದರೆ 2,499 ರೂ.(1999 ರೂ.+ 500 ರೂ. ಸಂಸ್ಕರಣಾ ಶುಲ್ಕ) ಪಾವತಿಸಿಯೂ ಖರೀದಿಸಬಹುದು. ಬಾಕಿ ಹಣವನ್ನು 18 ಅಥವಾ 24 ತಿಂಗಳಲ್ಲಿ ಪಾವತಿಸಬಹುದು.

    ಗೂಗಲ್‌ ಸಹಯೋಗದೊಂದಿಗೆ ಫೋನ್‌ ನಿರ್ಮಾಣವಾಗಿದ್ದು ಆಂಡ್ರಾಯ್ಡ್ ಓಎಸ್‍ಗೆ ‘ಪ್ರಗತಿ’ ಎಂದು ಹೆಸರನ್ನಿಟ್ಟಿದೆ. 5.45 ಇಂಚಿನ ಸ್ಕ್ರೀನ್ ಹೊಂದಿರುವ ಫೋನಿಗೆ ಮುಂದುಗಡೆ 8 ಎಂಪಿ, ಹಿಂದುಗಡೆ 13 ಎಂಪಿ ಕ್ಯಾಮೆರಾ, 16 ಜಿಬಿ ಆಂತರಿಕ ಮೆಮೋರಿ, 2 ಜಿಬಿ ರ್ಯಾಮ್‌, 3500 ಎಂಎಎಚ್ ಬ್ಯಾಟರಿ, ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ಹೊಂದಿದೆ.

    ಕನ್ನಡ ಸೇರಿದಂತೆ 10 ಭಾಷೆಯಲ್ಲಿ ಮಾಹಿತಿಯನ್ನು ಪಡೆಯಬಹುದು. ಅಷ್ಟೇ ಅಲ್ಲದೇ ಕನ್ನಡದಲ್ಲೇ ಸಂವಹನ ಮಾಡಬಹುದು. ಫೋನ್‌ ಖರೀದಿಗೆ ಹತ್ತಿರದ ಜಿಯೋ ಮಾರ್ಟ್ ಡಿಜಿಟಲ್ ರಿಟೇಲರ್‌ ಅನ್ನು ಭೇಟಿಮಾಡಿ ಅಥವಾ www.jio.com/next ಗೆ ಭೇಟಿ ನೀಡಬಹುದು.

    ಆಂಡ್ರಾಯ್ಡ್‌ನಿಂದ ಸಶಕ್ತವಾದ ಪ್ರಗತಿ ಓಎಸ್ ಭಾರತಕ್ಕಾಗಿ ರೂಪಿಸಲಾದ ಒಂದು ವಿಶ್ವದರ್ಜೆಯ ಆಪರೇಟಿಂಗ್ ಸಿಸ್ಟಂ ಆಗಿದ್ದು, ಜಿಯೋಫೋನ್ ನೆಕ್ಸ್ಟ್‌ನ ಹೃದಯದಲ್ಲಿದೆ. ಕೈಗೆಟುಕುವ ಬೆಲೆಯಲ್ಲಿ ನೈಜ ತೊಡಕಿಲ್ಲದ ಅನುಭವವನ್ನು ನೀಡುವುದರೊಂದಿಗೆ ಎಲ್ಲರಿಗೂ ಪ್ರಗತಿ ತರುವ ಉದ್ದೇಶದಿಂದ ಜಿಯೊ ಮತ್ತು ಗೂಗಲ್‌ನ ಅತ್ಯುತ್ತಮ ಪ್ರತಿಭೆಗಳು ಫೋನ್ ರೂಪಿಸಿದ್ದಾರೆ.

    ತಂತ್ರಜ್ಞಾನ ಕ್ಷೇತ್ರದ ಇನ್ನೊಂದು ಮುಂಚೂಣಿ ಸಂಸ್ಥೆಯಾದ ಕ್ವಾಲ್‌ಕಾಮ್ ಜಿಯೋಫೋನ್ ನೆಕ್ಸ್ಟ್‌ನ ಪ್ರಾಸೆಸರ್ ಅನ್ನು ರೂಪಿಸಿದೆ. ಸಾಧನದ ಕಾರ್ಯಕ್ಷಮತೆ, ಆಡಿಯೋ ಮತ್ತು ಬ್ಯಾಟರಿಯಲ್ಲಿ ಆಪ್ಟಿಮೈಸೇಶನ್ ಜೊತೆಗೆ ಆಪ್ಟಿಮೈಸ್ಡ್ ಕನೆಕ್ಟಿವಿಟಿ ಮತ್ತು ಲೊಕೇಶನ್ ತಂತ್ರಜ್ಞಾನಗಳನ್ನು ಜಿಯೋಫೋನ್ ನೆಕ್ಸ್ಟ್‌ನಲ್ಲಿರುವ ಕ್ವಾಲ್‌ಕಾಮ್ ಪ್ರಾಸೆಸರ್‌ನ ಒದಗಿಸುತ್ತದೆ. ಇದನ್ನೂ ಓದಿ: ಎಲ್ಲ ಫೋನ್‍ಗಳಿಗೆ, ಎಲೆಕ್ಟ್ರಾನಿಕ್ಸ್ ಸಾಧನಗಳಿಗೆ ಒಂದೇ ಚಾರ್ಜರ್

    ಜಿಯೋಫೋನ್‌ ನೆಕ್ಸ್ಟ್‌ ವೈಶಿಷ್ಟ್ಯಗಳು:
    ವಾಯ್ಸ್ ಅಸಿಸ್ಟೆಂಟ್
    ಬಳಕೆದಾರರು ತಮ್ಮ ಸಾಧನವನ್ನು ನಿರ್ವಹಿಸಲು (ಆಪ್ ತೆರೆಯುವುದು, ಸೆಟ್ಟಿಂಗ್‌ಗಳನ್ನು ನಿರ್ವಹಿಸುವುದು ಇತ್ಯಾದಿ) ಮತ್ತು ತಮಗೆ ತಿಳಿದಿರುವ ಭಾಷೆಯಲ್ಲಿ ಅಂತರಜಾಲದಿಂದ ಮಾಹಿತಿ/ಕಂಟೆಂಟ್ ಅನ್ನು ಸುಲಭವಾಗಿ ಪಡೆದುಕೊಳ್ಳಲು ವಾಯ್ಸ್ ಅಸಿಸ್ಟೆಂಟ್ ಸಹಾಯ ಮಾಡುತ್ತದೆ. ಇದನ್ನೂ ಓದಿ: ಜಿಯೋ ಫೋನ್‌ ನೆಕ್ಸ್ಟ್ ಹೇಗೆ ತಯಾರಾಗುತ್ತಿದೆ? – ತಿರುಪತಿ ಫ್ಯಾಕ್ಟರಿಯ ವಿಡಿಯೋ ರಿಲೀಸ್‌

    ರೀಡ್ ಅಲೌಡ್
    ಆಲಿಸುವ (ʼಲಿಸನ್’) ಸೌಲಭ್ಯವು ಯಾವುದೇ ಪರದೆಯ ಮೇಲಿರುವ ವಿಷಯವನ್ನು ಬಳಕೆದಾರರಿಗೆ ಓದಿ ಹೇಳುತ್ತದೆ. ತಮಗೆ ಅರ್ಥವಾಗುವ ಭಾಷೆಯಲ್ಲಿ ಕೇಳುವ ಮೂಲಕ ಕಂಟೆಂಟ್ ಅನ್ನು ಪಡೆದುಕೊಳ್ಳಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.

    ಅನುವಾದ
    ಅನುವಾದ ಸೌಲಭ್ಯವು ಯಾವುದೇ ಪರದೆಯನ್ನು ಬಳಕೆದಾರರ ಆಯ್ಕೆಯ ಭಾಷೆಗೆ ಅನುವಾದಿಸಲು ಬಳಕೆದಾರರಿಗೆ ಅನುವುಮಾಡಿಕೊಡುತ್ತದೆ. ಇದರಿಂದ ಬಳಕೆದಾರರು ತಮ್ಮ ಆದ್ಯತೆಯ ಭಾಷೆಯಲ್ಲಿ ಯಾವುದೇ ವಿಷಯವನ್ನು ಓದುವುದು ಸಾಧ್ಯವಾಗುತ್ತದೆ.


    ಸುಲಭ ಮತ್ತು ಸ್ಮಾರ್ಟ್ ಕ್ಯಾಮೆರಾ
    ಈ ಸಾಧನದಲ್ಲಿರುವ ಸ್ಮಾರ್ಟ್ ಮತ್ತು ಶಕ್ತಿಯುತ ಕ್ಯಾಮೆರಾ ಪೋರ್ಟ್ರೇಟ್ ಮೋಡ್‌ನಂತಹ ವಿವಿಧ ಫೋಟೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಅಷ್ಟೇ ಅಲ್ಲದೇ ಇದು ಮಸುಕಾದ ಹಿನ್ನೆಲೆಯಿರುವ ಉತ್ತಮ ಫೋಟೋಗಳನ್ನು ಸ್ವಯಂಚಾಲಿತವಾಗಿ ಸೆರೆಹಿಡಿಯಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೋಗಳನ್ನು ಸೆರೆಹಿಡಿಯಲು ನೈಟ್ ಮೋಡ್ ನೆರವಾಗುತ್ತದೆ. ಭಾವನೆಗಳು ಮತ್ತು ಹಬ್ಬಗಳ ಜೊತೆಗೂಡಿ ಚಿತ್ರಗಳ ಅಂದ ಹೆಚ್ಚಿಸಲು ಕ್ಯಾಮೆರಾ ಆಪ್‌ನಲ್ಲಿ ವಿಶಿಷ್ಟವಾದ ಭಾರತೀಯ ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್‌ಗಳನ್ನು ನೀಡಲಾಗಿದೆ.

    ಪ್ರಿಲೋಡೆಡ್ ಜಿಯೋ ಮತ್ತು ಗೂಗಲ್ ಆಪ್‌ಗಳು
    ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾದ ಎಲ್ಲ ಆಂಡ್ರಾಯ್ಡ್ ಆಪ್‌ಗಳನ್ನೂ ಈ ಸಾಧನವು ಬೆಂಬಲಿಸುತ್ತದೆ ಮತ್ತು ಆ ಮೂಲಕ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಲಕ್ಷಾಂತರ ಆಪ್‌ಗಳ ಪೈಕಿ ತಮಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೆ ನೀಡುತ್ತದೆ. ಅನೇಕ ಜಿಯೋ ಮತ್ತು ಗೂಗಲ್ ಆಪ್‌ಗಳ‌ನ್ನು ಈ ಸಾಧನದಲ್ಲಿ ಮುಂಚಿತವಾಗಿ ಲೋಡ್ ಮಾಡಲಾಗಿದೆ.

    ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಗ್ರೇಡ್
    ಸ್ವಯಂಚಾಲಿತ ಸಾಫ್ಟ್‌ವೇರ್ ಅಪ್‌ಡೇಟ್‌ಗಳೊಂದಿಗೆ ಜಿಯೋಫೋನ್ ನೆಕ್ಸ್ಟ್ ಯಾವಾಗಲೂ ಅಪ್-ಟು-ಡೇಟ್ ಆಗಿರುತ್ತದೆ. ಇತ್ತೀಚಿನ ವೈಶಿಷ್ಟ್ಯಗಳನ್ನು ಸ್ವಯಂಚಾಲಿತವಾಗಿ ಒದಗಿಸಲಾಗುವುದರಿಂದ ಬಳಕೆದಾರರ ಅನುಭವವು ಕಾಲಕ್ರಮೇಣ ಉತ್ತಮಗೊಳ್ಳುತ್ತಲೇ ಇರುತ್ತದೆ. ರೇಜಿಗೆಯಿಲ್ಲದ ಅನುಭವವನ್ನು ಖಾತ್ರಿಪಡಿಸುವುದಕ್ಕಾಗಿ ಭದ್ರತಾ ಅಪ್‌ಡೇಟ್‌ಗಳನ್ನೂ ನೀಡಲಾಗುತ್ತದೆ.

    ಅದ್ಭುತ ಬ್ಯಾಟರಿ ಲೈಫ್
    ಆಂಡ್ರಾಯ್ಡ್‌ನಿಂದ ಚಾಲಿತವಾದ, ಹೊಸದಾಗಿ ವಿನ್ಯಾಸಗೊಳಿಸಲಾದ ಪ್ರಗತಿ ಓಎಸ್, ದೀರ್ಘಾವಧಿಯ ಬ್ಯಾಟರಿ ಬಾಳಿಕೆಯನ್ನು ಖಚಿತಪಡಿಸುವುದಲ್ಲದೆ ಅತ್ಯುತ್ತಮ ಕಾರ್ಯಕ್ಷಮತೆಯನ್ನೂ ನೀಡುತ್ತದೆ.

  • ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಮುಂಬೈ: ಕಡಿಮೆ ಬೆಲೆಗೆ ಮೊಬೈಲ್ ಡೇಟಾ ನೀಡಿ ಕ್ರಾಂತಿ ಮಾಡಿದ್ದ ಜಿಯೋ ಈಗ ಕಡಿಮೆ ದರದಲ್ಲಿ 4ಜಿ ಸ್ಮಾರ್ಟ್‍ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

    ರಿಲಯನ್ಸ್ ಇಂಡಸ್ಟ್ರೀಸ್‍ನ 44ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಮುಖ್ಯಸ್ಥ ಮುಕೇಶ್ ಅಂಬಾನಿ ‘ಜಿಯೋಫೋನ್  ನೆಕ್ಸ್ಟ್’ ಎಂಬ ಹೆಸರಿನ ಆಂಡ್ರಾಯ್ಡ್ ಸ್ಮಾರ್ಟ್ ಫೋನನ್ನು ಜಿಯೋ ಹಾಗೂ ಗೂಗಲ್ ತಂಡಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದು, ಸೆಪ್ಟೆಂಬರ್ 10ರ ಗಣೇಶ ಚತುರ್ಥಿಯ ದಿನದಿಂದ ಅದು ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ಘೋಷಿಸಿದ್ದಾರೆ.

    ಭಾರತದ ಸ್ಮಾರ್ಟ್‍ಫೋನ್ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಮತ್ತು ಬಜೆಟ್ ಬೆಲೆಯ ಸ್ಮಾರ್ಟ್ ಫೋನ್‍ಗಳನ್ನೇ ಹೆಚ್ಚಿನ ಜನ ಖರೀದಿಸುತ್ತಿದ್ದಾರೆ. ಈ ಮಾರುಕಟ್ಟೆಯ ತಂತ್ರವನ್ನು ತಿಳಿದ ಜಿಯೋ ಈಗ ಕಡಿಮೆ ಬೆಲೆಯಲ್ಲೇ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

    ಭಾರತದಲ್ಲಿ ಮಾತ್ರವೇ ಅಲ್ಲದೆ ಇಡೀ ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್  ಆಗಿರಲಿದೆ ಎಂದು ಮುಖೇಶ್ ಅಂಬಾನಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗೂಗಲ್ ಸಿಇಒ ಸುಂದರ್ ಪಿಚೈ, ಈ ಸ್ಮಾರ್ಟ್‍ಫೋನ್ ಭಾರತಕ್ಕೆಂದೇ ನಿರ್ಮಿಸಲಾಗಿದ್ದು, ಮೊತ್ತಮೊದಲ ಬಾರಿಗೆ ಅಂತರಜಾಲ ಬಳಸುವ ಲಕ್ಷಾಂತರ ಹೊಸ ಬಳಕೆದಾರರಿಗೆ ಅದು ಹೊಸ ಸಾಧ್ಯತೆಗಳನ್ನು ತೆರೆದಿಡಲಿದೆ ಎಂದು ಹೇಳಿದ್ದಾರೆ.

    2017ರ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್  ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2 ಸಾವಿರ ರೂ.) ಬೆಲೆಯ ಆಂಡ್ರಾಯ್ಡ್ ಫೋನ್ ಅಗತ್ಯವಿದೆ ಎಂದು ಹೇಳಿದ್ದರು. ಇದಕ್ಕೆ ಪೂರಕ ಎಂಬಂತೆ ಜಿಯೋ ಕಂಪನಿ ಮತ್ತು ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲಿದೆ ಎಂದು ಟೆಕ್ ಮೂಲಗಳ ಮಾಹಿತಿಯನ್ನು ಆಧರಿಸಿ ಅಂದೇ ವರದಿ ಪ್ರಕಟವಾಗಿತ್ತು.

    ಫೋನಿನಲ್ಲಿ ಏನಿರಲಿದೆ?
    ವಾಯ್ಸ್ ಅಸಿಸ್ಟೆಂಟ್, ಪರದೆಯ ಮೇಲಿನ ಪಠ್ಯವನ್ನು ಓದಿ ಹೇಳುವ ಸೌಲಭ್ಯ, ಅನುವಾದ ಸೌಲಭ್ಯ, ಆಗ್ಮೆಂಟೆಡ್ ರಿಯಾಲಿಟಿ ಫಿಲ್ಟರ್ ಗಳಿರುವ ಸ್ಮಾರ್ಟ್ ಕ್ಯಾಮೆರಾ ಇರಲಿದೆ. ಗೂಗಲ್ ಹಾಗೂ ಜಿಯೋ ಅಪ್ಲಿಕೇಶನ್ ಅಲ್ಲದೆ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿರುವ ಆಪ್ ಗಳನ್ನು ಬಳಸಬಹುದಾಗಿದೆ.

    ಕಡಿಮೆ ಬೆಲೆಯ ಫೋನಿನಲ್ಲಿ ಕ್ಯಾಮೆರಾ ಗುಣಮಟ್ಟ ಅಷ್ಟೇನೂ ಉತ್ತಮ ಇರುವುದಿಲ್ಲ. ಆದರೆ ಗೂಗಲ್ ಈ ಫೋನಿಗೆ ಫಾಸ್ಟ್ ಹೈ ಕ್ವಾಲಿಟಿ ಕ್ಯಾಮೆರಾ ನೀಡುವುದಾಗಿ ಹೇಳಿದೆ. ಅಲ್ಲದೇ ಎಚ್‍ಡಿಆರ್ ಮೋಡ್ ಇರಲಿದೆ. ಗೂಗಲ್ ಸ್ನಾಪ್‍ಚಾಟ್ ಜೊತೆಗೂಡಿ ಹೊಸ ಲೆನ್ಸ್ ಅಭಿವೃದ್ಧಿ ಪಡಿಸಿದೆ. ಹೀಗಾಗಿ ಉತ್ತಮ ಗುಣಮಟ್ಟದ ಕ್ಯಾಮೆರಾ ಇರುವ ಸಾಧ್ಯತೆಯಿದೆ. ಗೂಗಲ್ ಈ ಜಿಯೋ ಫೋನಿಗೆ ಲೇಟೆಸ್ಟ್ ಆಂಡ್ರಾಯ್ಡ್ ಓಎಸ್ ಭದ್ರತಾ ನವೀಕರಣಗಳನ್ನು ನೀಡುವುದಾಗಿ ಭರವಸೆ ನೀಡಿದೆ. ಆದರೆ ಯಾವ ಆಂಡ್ರಾಯ್ ಆವೃತ್ತಿ ಇರಲಿದೆ ಎನ್ನುವುದು ಸಷ್ಟವಾಗಿ ತಿಳಿದು ಬಂದಿಲ್ಲ.  ಇದನ್ನೂ ಓದಿ: ಜಿಯೋದಲ್ಲಿ ಯಾರ ಹೂಡಿಕೆ ಎಷ್ಟಿದೆ?

    ಬೆಲೆ ಎಷ್ಟು?
    ಜಿಯೋ ಫೋನ್ ಬೆಲೆ ಎಷ್ಟು ಎನ್ನುವುದನ್ನು ಮುಕೇಶ್ ಅಂಬಾನಿ ತಿಳಿಸಿಲ್ಲ. ಆದರೆ ಕಡಿಮೆ ಬೆಲೆ ಎಂಬ ಸುಳಿವು ನೀಡಿದ ಹಿನ್ನೆಲೆಯಲ್ಲಿ 5 ಸಾವಿರ ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್‍ಬಿಲ್ಟ್ ಜಿಯೋ ಸಿಮ್ ಇರುವ ಕಾರಣ ಈ ಫೋನ್ ಬಳಕೆದಾರರಿಗೆ ಜಿಯೋ ವಿಶೇಷ ಡೇಟಾ ಪ್ಲ್ಯಾನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

    ಜಿಯೋದಲ್ಲಿ ಈಗಾಗಲೇ ಗೂಗಲ್, ಫೇಸ್‍ಬುಕ್ ಅಲ್ಲದೇ ಚಿಪ್ ತಯಾರಕ ಕಂಪನಿಗಳಾದ ಕ್ವಾಲಕಂ ಮತ್ತು ಇಂಟೆಲ್ ಹೂಡಿಕೆ ಮಾಡಿದೆ. ಹೀಗಾಗಿ ಹಾರ್ಡ್‍ವೇರ್ ವಿಚಾರದಲ್ಲಿ ಫೋನ್ ತಯಾರಿಕೆಗೆ ಈ ಹೂಡಿಕೆ ನೆರವಾಗಬಹುದು. ಆಪರೇಟಿಂಗ್ ಸಿಸ್ಟಂ ವಿಚಾರದಲ್ಲಿ ಗೂಗಲ್ ಹೇಗೂ ಸಹಾಯ ಮಾಡುತ್ತದೆ ಎಂದು ಈಗಾಗಲೇ ಹೇಳಿದೆ.

    ಪರಿಣಾಮ ಏನು?
    ಈ ಹಿಂದೆ 3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ಭಾರತ ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿತ್ತು. ಹೀಗಾಗಿ ವಿಶ್ವದಲ್ಲಿ 4ಜಿ ಬಳಕೆ ಆರಂಭಗೊಂಡಿದ್ದರೂ ಭಾರತದ ಹಲವು ನಗರಗಳಲ್ಲಿ 3ಜಿ, ಗ್ರಾಮೀಣ ಭಾಗದಲ್ಲಿ 2ಜಿ ನೆಟ್‍ವರ್ಕ್ ಬಳಕೆ ಇತ್ತು. ದೇಶದಲ್ಲಿ 4ಜಿ ತಡವಾಗಿ ಬರಬಹುದು ಎಂಬ ಕಾರಣಕ್ಕೆ ಭಾರತದ ಫೋನ್ ಕಂಪನಿಗಳು 3ಜಿ ಫೋನ್‍ಗಳತ್ತ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿದ್ದವು. 2016ರಲ್ಲಿ ಜಿಯೋ ಅಧಿಕೃತವಾಗಿ ಆರಂಭಗೊಂಡು 4ಜಿ ಸೇವೆ ಬಿಡುಗಡೆ ಮಾಡಿ ಸ್ಮಾರ್ಟ್‍ಫೋನ್ ಮತ್ತು ಟೆಲಿಕಾಂ ಮಾರುಕಟ್ಟೆಯನ್ನು ಅಲುಗಾಡಿಸಿತ್ತು. ಇದರಿಂದಾಗಿ 4ಜಿ ಸ್ಮಾರ್ಟ್‍ಫೋನ್ ತಯಾರಿಸುತ್ತಿದ್ದ ವಿಶ್ವದ ಹಲವು ಕಂಪನಿಗಳಿಗೆ ನೆರವಾಗಿದ್ದರೆ ಭಾರತದ ಫೋನ್‍ಗಳು ಸ್ಪರ್ಧಿಸಲಾಗದೇ ರೇಸ್‍ನಿಂದಲೇ ಹೊರಬಿದ್ದಿತ್ತು.

    ಈಗ ದೇಶದಲ್ಲಿ 5ಜಿ ಪ್ರಯೋಗಗಳು ನಡೆಯುತ್ತಿದೆ. 4ಜಿ ಫೋನ್‍ಗಳದ್ದೇ ಮಾರುಕಟ್ಟೆಯಲ್ಲಿ ಹವಾ ಜೋರಿದೆ. ಕಡಿಮೆ ಬೆಲೆಗೆ ಗುಣಮಟ್ಟದ ಸೇವೆ ನೀಡಿದರೆ ಕ್ಲಿಕ್ ಆಗುತ್ತದೆ ಎಂಬ ಜಿಯೋದ ಡೇಟಾ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ. ಹೀಗಾಗಿ ಕಡಿಮೆ ಬೆಲೆಯ ಫೋನ್ ಯಾವ ರೀತಿ ಮಾರುಕಟ್ಟೆಯನ್ನು ಶೇಕ್ ಮಾಡಬಹುದು ಎಂಬ ಕುತೂಹಲ ಮೂಡಿದೆ.

    ಹೊಸದೆನಲ್ಲ:
    ಕಡಿಮೆ ಬೆಲೆಯಲ್ಲಿ ಆಂಡಾಯ್ಡ್ ಫೋನ್ ಗಳನ್ನು ಬಿಡುಗಡೆ ಮಾಡುವ ಸಂಬಂಧ ಗೂಗಲ್ ಫೋನ್  ತಯಾರಕಾ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದು ಹೊಸದೆನಲ್ಲ. ಈ ಹಿಂದೆ 2014ರಲ್ಲಿ ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಆಂಡ್ರಾಯ್ಡ್ ಫೋನ್ ಮಾರುಕಟ್ಟೆ ಹೆಚ್ಚಿಸಲು ‘ಆಂಡ್ರಾಯ್ಡ್ ಒನ್’ ಓಎಸ್ ಬಿಡುಗಡೆ ಮಾಡಿತ್ತು. ಮೈಕ್ರೋಮ್ಯಾಕ್ಸ್, ಕಾರ್ಬನ್, ಲಾವಾ, ಸ್ಫೈಸ್, ಕ್ಸಿಯೋಮಿ, ನೋಕಿಯಾ ಕಂಪನಿಗಳು ಈ ಓಎಸ್ ಅಡಿಯಲ್ಲಿ ಫೋನ್  ಬಿಡುಗಡೆ ಮಾಡಿತ್ತು.

    ಸ್ಟಾಕ್ ಆಂಡ್ರಾಯ್ಡ್ (ಶುದ್ಧವಾದ ಆಂಡ್ರಾಯ್ಡ್ ಓಸ್. ಸ್ಟಾಕ್ ಆಂಡ್ರಾಯ್ಡ್ ಇದ್ದಲ್ಲಿ ಗೂಗಲ್ ಅಪ್‍ಡೇಟ್ ಮಾಡಿದ ಕೂಡಲೇ ಓಎಸ್ ಅಪ್‍ಡೇಟ್ ಸಿಗುತ್ತದೆ. ಕಸ್ಟಮಸ್ಡ್ ಆಂಡ್ರಾಯ್ಡ್ ಓಎಸ್ ಆದ್ರೆ ಕಂಪನಿಗಳು ಅಪ್‍ಡೇಟ್ ನೀಡಬೇಕಾಗುತ್ತದೆ) ಆಗಿದ್ದ ಕಾರಣ ಸ್ಮಾರ್ಟ್ ಫೋನ್  ಮಾರುಕಟ್ಟೆಯಲ್ಲಿ ಕ್ಲಿಕ್ ಆಗಿತ್ತು.

    ಇದಾದ ಬಳಿಕ 2019ರಲ್ಲಿ ಗೂಗಲ್ ಕಡಿಮೆ ಬೆಲೆಯಲ್ಲಿ ಫೋನ್  ಬಿಡುಗಡೆ ಮಾಡಲು ಆಂಡ್ರಾಯ್ಡ್ ಗೋ ಹೆಸರಿನ ಓಎಸ್ ಬಿಡುಗಡೆ ಮಾಡಿತ್ತು. ಆಂಡ್ರಾಯ್ಡ್ ಗೋ ಎಂಬುದು ಅತ್ಯಂತ ಲಘುವಾದ ಆಂಡ್ರಾಯ್ಡ್ ಆವೃತ್ತಿ. ಕಡಿಮೆ ಮೆಮೊರಿ, ವೈಶಿಷ್ಟ್ಯಗಳೂ ಸೀಮಿತ ಮತ್ತು ಅದರ ಕಾರ್ಯಾಚರಣೆಗೆ ಕಡಿಮೆ ರ‍್ಯಾಮ್ ಸಾಕಾಗಿತ್ತು. ಈ ಆಪರೇಟಿಂಗ್ ಸಿಸ್ಟಂಗೆ 2 ಜಿಬಿ ರ‍್ಯಾಮ್ ಅಥವಾ ಅದಕ್ಕಿಂತ ಕಡಿಮೆ ಗಾತ್ರದ ರ‍್ಯಾಮ್ ಇರುವ ಫೋನ್  ಸಾಕಾಗಿತ್ತು.