Tag: Gopalaiah

  • ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

    ಮಾಜಿ ಸಚಿವ ಗೋಪಾಲಯ್ಯಗೆ ಕೊಲೆ ಬೆದರಿಕೆ – ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಎಫ್‌ಐಆರ್

    – ವಿಧಾನಸೌಧಕ್ಕೆ ಹೋಗುವಾಗ ಕೊಂದೇ ಕೊಲ್ತೀನಿ ಎಂದು ಬೆದರಿಕೆ

    ಬೆಂಗಳೂರು: ವಿಧಾನಸೌಧಕ್ಕೆ ಹೋಗುವಾಗ ಕೊಂದೇ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಮಾಜಿ ಸಚಿವ ಗೋಪಾಲಯ್ಯಗೆ (K. Gopalaiah) ಮಾಜಿ ಕಾರ್ಪೊರೇಟರ್ ಪದ್ಮರಾಜ್ (Padmaraj) ಕೊಲೆ ಬೆದರಿಕೆ (Life Threat) ಹಾಕಿದ್ದಾರೆ.

    ಮಂಗಳವಾರ ರಾತ್ರಿ ಗೋಪಾಲಯ್ಯ ಮನೆ ಬಳಿ ಬಂದು ಪದ್ಮರಾಜ್ ಗಲಾಟೆ ಮಾಡಿದ್ದು, ಹಳೆ ವೈಷಮ್ಯದಿಂದ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ (Kamakshipalya) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ರಾತ್ರಿ ಮಾಜಿ ಸಚಿವ ಗೋಪಾಲಯ್ಯ ಹಾಗೂ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನಡುವೆ ಗಲಾಟೆ ನಡೆದಿದೆ. ಇದೀಗ ಕಾಮಾಕ್ಷಿಪಾಳ್ಯ ಸ್ಟೇಶನ್‌ನಲ್ಲಿ ಗೋಪಾಲಯ್ಯ ಕುಳಿತಿದ್ದು, ಪದ್ಮರಾಜ್ ಮನೆ ಮುಂದೆ 4 ಹೊಯ್ಸಳ ಪೊಲೀಸರು ಜಮಾವಣೆಗೊಂಡಿದ್ದಾರೆ. ಇದನ್ನೂ ಓದಿ: ಮಗನನ್ನು ಕೊಂದ ಸುಚನಾ ಸೇಠ್‌ಗೆ ಯವುದೇ ಮಾಸಿಕ ಖಿನ್ನತೆ ಇಲ್ಲ

    ಪದ್ಮರಾಜ್ ಮಂಗಳವಾರ ತಡರಾತ್ರಿ ಗೋಪಾಲಯ್ಯಗೆ ಕರೆ ಮಾಡಿ ಹಣ ಬೇಕೆಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹಣ ಕೊಡದಿದ್ರೆ ಏನು ಮಾಡ್ತೀನಿ ಗೊತ್ತಾ ಎಂದು ಬೆದರಿಕೆಯೊಡ್ಡಿದ್ದು, ಇದರಿಂದ ನೊಂದ ಗೋಪಾಲಯ್ಯ ಇಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಜೊತೆಗೆ ಸ್ಪೀಕರ್ ಮತ್ತು ಸಿಎಂಗೂ ದೂರು ಕೊಡಲು ಗೋಪಾಲಯ್ಯ ಮುಂದಾಗಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

    ಪದ್ಮರಾಜ್‌ಗೆ ಸಾಕಷ್ಟು ಬಾರಿ ಸಹಾಯ ಮಾಡಿದ್ದೇನೆ. ಆದರೆ ಈ ಥರ ಕುಡಿದು ನಿಂದಿಸಿದ್ದು, ಬೆದರಿಕೆ ಹಾಕಿದ್ದು ನೋವಾಗಿದೆ ಎಂದು ಗೋಪಾಲಯ್ಯ ಅಳಲು ತೋಡಿಕೊಂಡಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಪದ್ಮರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ವಿಚಾರಣೆಗೆ ನೋಟಿಸ್ ನೀಡಲು ಪೊಲೀಸರು ಪದ್ಮರಾಜ್ ಮನೆ ಬಾಗಿಲಿಗೆ ತೆರಳಿದ್ದಾರೆ. ಈ ವೇಳೆ ಮನೆಯ ಬಾಗಿಲು ತೆರೆಯದೆ ಪದ್ಮರಾಜ್ ಗಲಾಟೆ ಮಾಡುತ್ತಿದ್ದು, ಪೊಲೀಸರು ಪದ್ಮರಾಜ್ ಬಂಧನಕ್ಕೆ ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟಿತು ವಿಶೇಷ ರೈಲು

  • ಮದ್ಯ ಮಾರಾಟ, ಖರೀದಿಗೆ ವಯಸ್ಸು ಇಳಿಕೆ ಇಲ್ಲ: ಗೋಪಾಲಯ್ಯ

    ಮದ್ಯ ಮಾರಾಟ, ಖರೀದಿಗೆ ವಯಸ್ಸು ಇಳಿಕೆ ಇಲ್ಲ: ಗೋಪಾಲಯ್ಯ

    ಬೆಂಗಳೂರು: ರಾಜ್ಯದಲ್ಲಿ ಮದ್ಯ (Alcohol) ಮಾರಾಟ ಮತ್ತು ಮದ್ಯ ಖರೀದಿ ವಯೋಮಾನ (Age) 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿ ಪರಿಷ್ಕರಿಸಿ ಹೊರಡಿಸಿದ್ದ ಅಧಿಸೂಚನೆಗೆ ಆಕ್ಷೇಪಣೆ ಸ್ವೀಕರಿಸಿದ್ದು, ಸದ್ಯ ಇರುವ ಹಳೆ ವ್ಯವಸ್ಥೆಯೇ ಮುಂದುವರಿಯಲಿದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ (Gopalaiah) ಸ್ಪಷ್ಟಪಡಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ಮದ್ಯ ಮಾರಾಟ ವಯೋಮಾನದ ಕುರಿತು ಜನವರಿ 9 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮದ್ಯ ಖರೀದಿಸುವವರ ವಯೋಮಿತಿ 21 ರಿಂದ 18 ಕ್ಕೆ ಇಳಿಸುವ ಪ್ರಸ್ತಾಪ ಮಾಡಲಾಗಿತ್ತು. ಆದರೆ ಇದಕ್ಕೆ ಅನೇಕ ಆಕ್ಷೇಪಣೆ ಬಂತು. ಹೀಗಾಗಿ ಸಮಿತಿ ರಚಿಸಿದ್ದು ಸದ್ಯ ಈಗ ಯಾವ ರೀತಿ ಇದೆಯೋ ಅದರಂತೆಯೇ ಮುಂದುವರಿಸಲು ಕ್ರಮ ವಹಿಸಲಾಗಿದೆ ಎಂದರು.

    ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ಕುರಿತು ಅನೇಕ ಕಡೆ ದಿಟ್ಟ ಕ್ರಮ ವಹಿಸಿದೆ. ಮುಂದೆಯೂ ಅದೇ ರೀತಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಮದ್ಯ ಮಾರಾಟದಿಂದ ಚಿನ್ನದ ಬೆಳೆ ತೆಗೆದ ಸರ್ಕಾರ – 5 ವರ್ಷಗಳಲ್ಲಿ 1 ಲಕ್ಷ ಕೋಟಿ ಆದಾಯ

    ಈ ವರ್ಷ ಅಬಕಾರಿ ಇಲಾಖೆಗೆ ನಿಗದಿಪಡಿಸಿರುವ ಆರ್ಥಿಕ ಗುರಿಯನ್ನು ಇಲಾಖೆ ದಾಟಲಿದೆ. ಕಳೆದ 5 ವರ್ಷವೂ ಸತತವಾಗಿ ನಮಗೆ ನಿಗದಿಪಡಿಸಿರುವ ಗುರಿಯನ್ನು ದಾಟಿದ್ದೇವೆ. ಈ ಬಾರಿಯೂ ಗುರಿ ತಲುಪುವುದರಲ್ಲಿ ಹಿಂದೆ ಬೀಳಲ್ಲ. ನಮಗೆ ನಿಗದಿಪಡಿಸಿರುವ ಗುರಿ ತಲುಪಲು ಇಲಾಖೆ ಅಗತ್ಯ ಕ್ರಮ ವಹಿಸಲಿದೆ ಎಂದರು. ಇದನ್ನೂ ಓದಿ: ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಂಡ್ಯ ಉಸ್ತುವಾರಿ ಗೊಂದಲದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ: ಗೋಪಾಲಯ್ಯ

    ಮಂಡ್ಯ ಉಸ್ತುವಾರಿ ಗೊಂದಲದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ: ಗೋಪಾಲಯ್ಯ

    ಮಂಡ್ಯ: ಹಾಸನ, ಮಂಡ್ಯ ಜನರ ಋಣ ನನ್ನ ಮೇಲಿದೆ. ಮಂಡ್ಯ (Mandya), ಹಾಸನ (Hassan) ಜಿಲ್ಲೆಯ ಜನರು ಯಾರ ಬರಲಿ ಅವರಿಗೆ ಸ್ಪಂದಿಸುತ್ತೇನೆ ಎಂದು ಸಚಿವ ಕೆ. ಗೋಪಾಲಯ್ಯ (K Gopalaiah) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಉಸ್ತುವಾರಿ ವಹಿಸಿಕೊಳ್ಳಲು ನಕಾರ ಮಾಡಿದರು. ಮುಖ್ಯಮಂತ್ರಿಗಳು ಕೊಟ್ಟ ಜವಾಬ್ದಾರಿಯನ್ನು ಮಾಡಿದ್ದೇನೆ. ಮತ್ತೆ ಉಸ್ತುವಾರಿ ಹೊಣೆ ವಹಿಸಿಕೊಳ್ಳುವ ಬಗ್ಗೆ ನಾನು ಮಾತನಾಡಲ್ಲ. ನಮ್ಮ ಸರ್ಕಾರ, ಸಿಎಂ, ಪಕ್ಷದ ಅಧ್ಯಕ್ಷರು ಕೊಡುವ ಜವಾಬ್ದಾರಿ ನಿರ್ವಹಿಸುವುದು ನನ್ನ ಕರ್ತವ್ಯ. ಮಂಡ್ಯ ಉಸ್ತುವಾರಿ ವಿಚಾರ ನಾನು ಮಾತನಾಡಲ್ಲ ಎಂದು ಹೇಳಿದರು.

    ಕೆ.ಗೋಪಾಲಯ್ಯರಿಗೆ ಉಸ್ತುವಾರಿ ಕೊಡಲಿ ಎಂಬ ನಾರಾಯಣಗೌಡರ (Narayana Gowda) ಹೇಳಿಕೆಗೂ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಅವರು, ಮಂಡ್ಯ, ಹಾಸನ ಜಿಲ್ಲೆಯ ಜನರು ಯಾರ ಬರಲಿ ಅವರಿಗೆ ಸ್ಪಂದಿಸುತ್ತೇನೆ. ಉಸ್ತುವಾರಿ ವಿಚಾರವಾಗಿ ನಾನು ಏನನ್ನು ಮಾತನಾಡಲ್ಲ. ಉಸ್ತುವಾರಿ ಗೊಂದಲದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ಬಲಿಷ್ಠವಾಗಿದೆ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಗೊಂದಲ ಏನಿಲ್ಲ, ಕಂದಾಯ ಸಚಿವರ ಅಶೋಕರನ್ನೇ (R Ashok) ಮೊದಲು ಮುಖ್ಯಮಂತ್ರಿಗಳು ನೇಮಕ ಮಾಡಿದರು. ಅವರ ಕಾರ್ಯ ಒತ್ತಡದಿಂದ ಅವರು ಹೋಗಿರಲಿಲ್ಲ. ನನ್ನನ್ನು ಕೆಲವು ದಿನ ಇರಲು ಹೇಳಿದ್ದರು. ನಾನಿದ್ದಂತಹ ಸಂದರ್ಭದಲ್ಲಿ ಹಾಸನ ಜಿಲ್ಲೆಯಲ್ಲಿ ಯಾವ ರೀತಿ ಎಲ್ಲರ ಜೊತೆ ಬೆರೆತಿದ್ದೆ, ಅಲ್ಲಿಯೂ ಸಹ ಬೆರಿತಿದ್ದೆ. ನಮ್ಮಲ್ಲಿ ಇರುವಂತಹ ಎಲ್ಲರೂ ಸಮರ್ಥರೇ ಎಂದರು. ಇದನ್ನೂ ಓದಿ: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್‌ ಮಾಡಿದ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ಹಿಂದೆ ನಾರಾಯಣಗೌಡರು ಇದ್ದರು, ಸಮರ್ಥರೇ. ಅಶೋಕ್ ಅವರು ಬಿಜೆಪಿಯಲ್ಲಿ ಹಿರಿಯರು, ನಮಗಿಂತ ದೊಡ್ಡವರು, ದೊಡ್ಡದಾದ ಕಂದಾಯ ಖಾತೆಯನ್ನು ನಿರ್ವಹಣೆ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕಂದಾಯ ಇಲಾಖೆಯಲ್ಲಿ ಹಲವಾರು ಬದಲಾವಣೆ ತಂದಿದ್ದಾರೆ. ನಾನಲ್ಲ, ಪಕ್ಷದಲ್ಲಿ ಪ್ರತಿಯೊಬ್ಬರು ಸಮರ್ಥರಾಗಿದ್ದಾರೆ. ನಾನೇ ಸ್ವತಃ ಒಂದು ಜಿಲ್ಲೆ ಸಾಕು ಅಂತ ಕೇಳಿದ್ದೆ. ನಾನು ಹಾಸನ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಅಲ್ಲಿ ಯಾರು ಬೇಕಾದರೂ ನಿರ್ವಹಿಸಬೇಕಾದ ಶಕ್ತಿಯಿದೆ. ನಮ್ಮ ಪಕ್ಷದಲ್ಲಿ ಸಚಿವ ಸಂಪುಟದ ಎಲ್ಲಾ ಸಚಿವರು ಸಮರ್ಥರಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕ್ರಿಕೆಟ್ ಟೂರ್ನಿ ವೇಳೆ ಕಿರಿಕ್ ಮಾಡಿ ಇಬ್ಬರ ಹತ್ಯೆ ಪ್ರಕರಣ – ಆರೋಪಿತರ ಕಾಲಿಗೆ ಪೊಲೀಸರ ಗುಂಡೇಟು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಾಸನಾಂಬ ಜಾತ್ರಾ ಮಹೋತ್ಸವ – ಭಕ್ತರಿಗೆ ದರ್ಶನ ಕೊಟ್ಟ ಹಾಸನಾಂಬೆ

    ಹಾಸನಾಂಬ ಜಾತ್ರಾ ಮಹೋತ್ಸವ – ಭಕ್ತರಿಗೆ ದರ್ಶನ ಕೊಟ್ಟ ಹಾಸನಾಂಬೆ

    ಹಾಸನ: ವಿಶೇಷವಾಗಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವ (Hasanamba jatra mahotsava) ಕ್ಕೆ ಗುರುವಾರ ಶುಭ ಚಾಲನೆ ದೊರೆಯಿತು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.12 ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಿತು. ಈ ವೇಳೆ ಹಾಜರಿದ್ದ ನೂರಾರು ಭಕ್ತರು, ಹಾಸನಾಂಬೆಗೆ ಜಯವಾಗಲಿ ವಿಶೇಷತಃ ಘೋಷವಾಕ್ಯ ಮೊಳಗಿಸಿದರು.

    ಅರಸು ವಂಶಸ್ಥ ನಂಜ ರಾಜೆ ಅರಸು ಗೊನೆಯುಳ್ಳ ಬಾಳೆಕಂಬ ಕಡಿದ ನಂತರ ಗರ್ಭಗುಡಿಯಲ್ಲಿ ಮರೆಯಾಗಿದ್ದ ಹಾಸನಾಂಬೆ ವರ್ಷದ ನಂತರ ದರ್ಶನ ಕರುಣಿಸಿದಳು. ಗರ್ಭಗುಡಿ ಬಾಗಿಲು ತೆರೆದ ವೇಳೆ ಕಳೆದ ವರ್ಷ ಹಚ್ಚಿದ್ದ ದೀಪ ಉರಿಯುತ್ತಿದ್ದು, ಹೂವು ಬಾಡಿರಲಿಲ್ಲ, ನೈವೇದ್ಯ ಹಳಸಿರಲಿಲ್ಲ. ಈ ವಿಶೇಷ ಸಂದರ್ಭಕ್ಕೆ ಸಚಿವರಾದ ಕೆ.ಗೋಪಾಲಯ್ಯ (K Gopalaiah), ಶಾಸಕ ಪ್ರೀತಂಗೌಡ (Preetham Gowda), ಡಿಸಿ, ಎಸ್ಪಿ ಸೇರಿದಂತೆ ಹಲವರು ಸಾಕ್ಷಿಯಾದರು. ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರೂ, ಬೆಳಗ್ಗೆಯಿಂದಲೇ ಸಾವಿರಾರು ಮಂದಿ ದೇವಾಲಯದ ಒಳ-ಹೊರಗೆ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಕಡೆಗೆ ಆಗಮಿಸಿದ್ದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

    ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿ ವರ್ಷ ಗರ್ಭಗುಡಿ ಬಾಗಿಲು ಹಾಕುವಾಗ ಹಚ್ಚಿದ ಹಣತೆ, ಇಟ್ಟ ನೈವೇದ್ಯ, ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಜೊತೆಗೆ ಬೇಡಿದ ಇಷ್ಟಾರ್ಥಗಳನ್ನು ಅಧಿದೇವತೆ ಈಡೇರಿಸುತ್ತಾಳೆ ಎಂಬ ನಂಬಿಕೆ ಇರುವುದರಿಂದ ಜಿಲ್ಲೆ ಮಾತ್ರವಲ್ಲದೆ ರಾಜ್ಯ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ದೇವಿ ದರ್ಶನಕ್ಕಾಗಿ ಆಗಮಿಸುತ್ತಾರೆ. ಮಳೆ-ಬಿಸಿಲಿಂದ ರಕ್ಷಿಸಿ ಭಕ್ತರಿಗೆ ಅನುಕೂಲವಾಗಲಿ ಎಂದು ದೇಗುಲದ ಹೊರಗಡೆ ಟೆಂಟ್ ನಿರ್ಮಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ನಿಷೇಧ ಮುಂದುವರಿಕೆ – ಸಚಿವ ಬಿ.ಸಿ.ನಾಗೇಶ್

    ಅ.14 ರಿಂದ ಬೆಳಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆ ಸಾರ್ವಜನಿಕ ದರ್ಶನವಿದ್ದು, ಸಂಜೆ 4 ಗಂಟೆಯಿಂದ ದರ್ಶನ ಇರುವುದಿಲ್ಲ. ಅ.15 ರಿಂದ ಅ.24 ರವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಮಧ್ಯಾಹ್ನ 1 ರಿಂದ 3.30 ರವರೆಗೆ ದರ್ಶನ ಇರುವುದಿಲ್ಲ. 3.30 ರಿಂದ ಭಕ್ತರು ಇರುವವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅ.25 ರಂದು ಗ್ರಹಣ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನ ಇರುವುದಿಲ್ಲ. ಅ.26 ಬಲಿಪಾಡ್ಯಮಿ ದಿನದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದರ್ಶನವಿದ್ದು, 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಅ.27 ರಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಮಧ್ಯಾಹ್ನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುವುದು.

    ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಒಳ-ಹೊರಗು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಸಿಂಗಾರ ಮಾಡಲಾಗಿದೆ. ಈ ಬಾರಿ ಹೆಚ್ಚು ದಿನಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇಡಿ ಹಾಸನ ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಗೋಪಾಲಯ್ಯ

    ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಗೋಪಾಲಯ್ಯ

    ಹಾಸನ : ಮುಖ್ಯಮಂತ್ರಿ ಬದಲಾವಣೆಯಂಥ ವಿಚಾರವನ್ನು ಬೀದಿಲಿ ನಿತ್ಕೊಂಡು ಮಾತನಾಡಬಾರದು. ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸಚಿವ ಗೋಪಾಲಯ್ಯ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ರಾಷ್ಟ್ರದಲ್ಲಿ ದೊಡ್ಡ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರಿದ್ದಾರೆ, ವರಿಷ್ಠರು ಹೇಳಿದ ಮಾತಿಗೆ ಗೌರವ ಕೊಡಬೇಕಾಗುತ್ತದೆ ಎಂದರು.

    ಮುಂದಿನ ವರ್ಷದಲ್ಲಿ ಚುನಾವಣೆ ಇದೆ. ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ಚುನಾವಣೆಯ ನೇತೃತ್ವವನ್ನು ಬೊಮ್ಮಾಯಿ ಅವರೇ ವಹಿಸಿಕೊಳ್ಳುತ್ತಾರೆ. ಬೊಮ್ಮಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯತ್ನಾಳ್ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಏನೇ ಇದ್ದರು ಪಕ್ಷದ ವರಿಷ್ಠರು ಮಾತನಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು.

    ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಸಚಿವ ಅಶ್ವಥ್ ನಾರಾಯಣ್ ಸಂಬಂಧಿ ಭಾಗಿ ವಿಚಾರವಾಗಿ ಮಾತನಾಡಿದ ಅವರು, ಅದೆಲ್ಲಾ ಶುದ್ಧ ಸುಳ್ಳು. ಅಶ್ವಥ್ ನಾರಾಯಣ್ ಅವರ ರಾಜಕೀಯ ಬೆಳವಣಿಗೆಯನ್ನು ನೋಡಿ ಸಹಿಸದವರು ಈ ರೀತಿ ಮಾಡುತ್ತಿದ್ದಾರೆ. ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ ಎಂಬ ಯಾವುದಾದರೂ ಸಾಕ್ಷಿ ಇದ್ದರೆ ಕೊಡಲಿ. ಆರೋಪ ಮಾಡುತ್ತಿರುವ ಕಾಂಗ್ರೆಸ್ ಸಾಕ್ಷಿ ತಂದು ಕೊಡಲಿ ಎಂದು ಸವಾಲು ಹಾಕಿದರು.

    ರಾಜಕೀಯವಾಗಿ ತೇಜೋವಧೆ ಮಾಡುವುದನ್ನು ಬಿಡಬೇಕು. ಏನಾದರು ಪುರಾವೆ ಇದ್ದರೆ ಕೋರ್ಟ್‍ಗೆ ಹೋಗಲಿ. ಸರ್ಕಾರ ಈಗಾಗಲೇ ಸಿಐಡಿ ತನಿಖೆಗೆ ಕೊಟ್ಟಿದೆ. ಹಲವಾರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಯಾರಾದರೂ ಇದರಲ್ಲಿ ಭಾಗಿಯಾಗಿದ್ದಾರೆ ಹೊರಗಡೆ ಬರುತ್ತದೆ. ಹಿಂದಿನ ಸರ್ಕಾರದಲ್ಲೂ ಇದೇ ರೀತಿ ನಡೆದಿದೆ. ಹಿಂದೆ ಸರ್ಕಾರದಲ್ಲಿ ಏನು ನಡೆದಿದೆ ಅಂತ ನಾನು ಹೇಳುತ್ತೇನಿ ಅದು ತನಿಖೆಯಾಗಬೇಕು. ಅವಾಗ ಏನಾಗಿದೆ ಅಂತ ಗೊತ್ತಾಗುತ್ತೆ ಎಂದರು. ಇದನ್ನೂ ಓದಿ: ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅವರ ಸಂಸ್ಕೃತಿ ಬಿಂಬಿಸುತ್ತೆ: ಶ್ರೀನಿವಾಸ ಪೂಜಾರಿ

    ಯಾವುದೇ ಕಾರಣಕ್ಕೂ ಅಶ್ವಥ್ ನಾರಾಯಣ್ ಇದರಲ್ಲಿ ಭಾಗಿಯಾಗಿಲ್ಲ. ನಾವು ಅಶ್ವಥ್ ನಾರಾಯಣ್ ಅವರನ್ನು ನೋಡಿಯೇ ಇಲ್ಲ ಎಂದು ಆರೋಪಿ ಸ್ಥಾನದಲ್ಲಿರುವ ಹುಡಗನ ತಂದೆಯೇ ಹೇಳಿದ್ದಾರೆ. ಅಶ್ವಥ್ ನಾರಾಯಣ್ ಅವರನ್ನು ರಾಜಕೀಯವಾಗಿ ಬಲಿಪಶು ಮಾಡಬೇಕೆಂದು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಯತ್ನಾಳ್ ಹೇಳಿಕೆ ತನಿಖೆ ಆಗಲಿ: ಡಿ.ಕೆ. ಶಿವಕುಮಾರ್

  • ಬಿಜೆಪಿ ಸೇರಿ ಸುಖವಾಗಿದ್ದೇವೆ: ನಾರಾಯಣ ಗೌಡ

    ಬಿಜೆಪಿ ಸೇರಿ ಸುಖವಾಗಿದ್ದೇವೆ: ನಾರಾಯಣ ಗೌಡ

    ಮಂಡ್ಯ: ನಾನು ಹಾಗೂ ಸಚಿವ ಗೋಪಾಲಯ್ಯ ಒಂದೇ ಪಕ್ಷದಲ್ಲಿ ಇದ್ದೆವು. ನಮಗೆ ಕೊಟ್ಟ ಕಾಟ ಭಗವಂತನಿಗೆ ಮಾತ್ರ ಗೊತ್ತು. ಇದರಿಂದ ನಾವು, ಅವರು ಬಿಜೆಪಿ ಸೇರಿ ಸುಖವಾಗಿದ್ದೇವೆ ಎಂದು ಜೆಡಿಎಸ್ ವಿರುದ್ಧ ಸಚಿವ ನಾರಾಯಣ್ ಗೌಡ ಗುಡುಗಿದ್ದಾರೆ.

    ಮದ್ದೂರು ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಸೇವೆ ಮಾಡುವ ಶಕ್ತಿಯನ್ನ ಪಕ್ಷ ನೀಡಿದೆ. ಬಿಜೆಪಿ ಸೇರಿದ ಬಳಿಕ ನಮ್ಮನ್ನ ಸಚಿವರನ್ನಾಗಿ ಬಿಜೆಪಿ ಮಾಡಿದೆ. ಈ ಮೂಲಕ ರಾಜ್ಯವನ್ನ ಸುತ್ತಾಡಿ ಜನರ ಸೇವೆ ಮಾಡಲು ಅವಕಾಶ ನೀಡಿದೆ. ಅದೇ ರೀತಿ ಕೆ.ಆರ್.ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ಅನುದಾನವನ್ನ ಕೊಟ್ಟಿದೆ ಎಂದರು. ಇದನ್ನೂ ಓದಿ: ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್

    ಅದೇ ರೀತಿ ಮುಂದಿನ ಚುನಾವಣೆಯಲ್ಲಿ ಮದ್ದೂರಿನಲ್ಲಿ ಎಸ್.ಪಿ.ಸ್ವಾಮಿಯವರಿಗೆ ನೀವು ಅಶಿರ್ವಾದ ಮಾಡಿ. ಅವರು ಜೆ.ಡಿ.ಎಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ಅವರ ಗಂಡಸ್ತನಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ನಾಲ್ಕೈದು ಸ್ಥಾನವನ್ನ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ನಾರಾಯಣಗೌಡ, ಗೋಪಾಲಯ್ಯ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾಗಿಯಾಗಿದ್ದರು. ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು. ಸಾಮೂಹಿಕ ವಿವಾಹ, ಆರೋಗ್ಯ ಶಿಬಿರ ಕಾರ್ಯಕ್ರಮ ಕೂಡ ಇತ್ತು. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು.

  • ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಸಹಕಾರ: ಗೋಪಾಲಯ್ಯ

    ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಸಹಕಾರ: ಗೋಪಾಲಯ್ಯ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

    ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಶ್ರೀ ಜಯಮಾರುತಿ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ 32ನೇ ವರ್ಷದ ಹನುಮ ಜಯಂತಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದು, ಆಡಳಿತ ಮಂಡಳಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

    ಕೋವಿಡ್ ಮೂರನೇ ಅಲೆ ಈಗಾಗಲೇ ಪ್ರಾರಂಭವಾಗಿರುವ ಸೂಚನೆಗಳು ಸಿಗುತ್ತಿವೆ. ಈ ಹಿನ್ನೆಲೆಯಲ್ಲಿ ಯಾರೂ ಕೂಡ ಮೈ ಮರೆಯಬಾರದು. ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವಂತೆ ಸಚಿವರು ಮನವಿ ಮಾಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

    ನಂದಿನಿ ಬಡಾವಣೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ 2022ರ ಕ್ಯಾಲೆಂಡರನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮೇಯರ್ ಎಸ್. ಹರೀಶ್, ಜಯಸಿಂಹ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಲೋಕೇಶ್ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

  • ನನ್ನನ್ನು ಬಿಜೆಪಿಗೆ ಹೋಗಿ ಅಂದಿದ್ದೇ ಜಮೀರ್: ಗೋಪಾಲಯ್ಯ

    ನನ್ನನ್ನು ಬಿಜೆಪಿಗೆ ಹೋಗಿ ಅಂದಿದ್ದೇ ಜಮೀರ್: ಗೋಪಾಲಯ್ಯ

    ಹಾಸನ: ನನ್ನನ್ನು ಬಿಜೆಪಿಗೆ ಹೋಗಿ ಅಂತ ಹೇಳಿದ್ದೇ ಜಮೀರ್ ಅಹಮ್ಮದ್. ಅವರಿಗೆ ಕಾಂಗ್ರೆಸ್ ಸರ್ಕಾರ ಇರೋದು ಇಷ್ಟ ಇರಲಿಲ್ಲ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಒಳ್ಳೆದಾಗುತ್ತೆ. ಹೀಗಾಗಿ ನನ್ನನ್ನ ಬಿಜೆಪಿಗೆ ಹೋಗು ಎಂದು ಜಮೀರ್ ಹೇಳಿದ್ರು. ನಾನು ಹಾಗೂ ಜಮೀರ್ ಒಳ್ಳೆ ಸ್ನೇಹಿತರು ಎಂದು ತಿಳಿಸಿದ್ದಾರೆ.

    ನಾನು ಬಿಜೆಪಿಯಲ್ಲೇ ಇರ್ತೀನಿ, ನನ್ನ ಮಕ್ಕಳಿಗೂ ಇದೇ ಮಾತು ಹೇಳುತ್ತೇನೆ. ನಾನು ಇಲ್ಲಿ ಸಚಿವನಾಗಿದ್ದೇನೆ. ಬಿಜೆಪಿ ಪಕ್ಷ ನನಗೆ ಎಲ್ಲಾ ಕೊಟ್ಟಿದೆ. ಮುಂದಿನ ಚುನಾವಣೆಯಲ್ಲೂ ಬಿಜೆಪಿ ನನಗೆ ಟಿಕೆಟ್ ನೀಡಲಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕುರುಬ ಸಮಾಜ ಹರಾಜು ಹಾಕೋ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ: ಎಚ್.ವಿಶ್ವನಾಥ್ ಕಿಡಿ

    ಇದೇ ವೇಳೆ ಜಮೀರ್ ಬಿಜೆಪಿಗೆ ಬರ್ತಾರಾ? ಎಂಬ ಸುದ್ದಿಗಾರರ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ಇದನ್ನ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿದರು.  ಇದನ್ನೂ ಓದಿ: ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ: ಜಮೀರ್

  • ಖರ್ಗೆ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ: ಗೋಪಾಲಯ್ಯ ವ್ಯಂಗ್ಯ

    ಖರ್ಗೆ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ: ಗೋಪಾಲಯ್ಯ ವ್ಯಂಗ್ಯ

    ಹಾಸನ: ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆ ನಂತರ ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡುತ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ ಎಂದು ಸಚಿವ ಗೋಪಾಲಯ್ಯ, ಜೆಡಿಎಸ್ ಮತ್ತು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ಹಾಸನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೂತನ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಖರ್ಗೆಯವರು ಎರಡೂವರೆ ವರ್ಷಗಳ ಕಾಲ ತಮ್ಮ ಕ್ಷೇತ್ರಕ್ಕೆ ಹೋಗಿರಲಿಲ್ಲ. ಯಾರು ಉತ್ತಮವಾಗಿ ಕೆಲಸ ಮಾಡ್ತಾರೆ ಜನರು ಚುನಾವಣೆಯಲ್ಲಿ ಅವರ ಕೈ ಹಿಡಿಯುತ್ತಾರೆ. ಇಲ್ಲದಿದ್ದರೆ ಜನರು ಅವರನ್ನು ಆಯ್ಕೆ ಮಾಡುವುದಿಲ್ಲ ಇದನ್ನು ಜನರು ಈಗಾಗಲೇ ತೋರಿಸಿಕೊಟ್ಟಿದ್ದಾರೆ ಎಂದರು. ಇದೇ ವೇಳೆ ಆರ್‌ಎಸ್‌ಎಸ್‌ ಬಗ್ಗೆ ಕಾಂಗ್ರೆಸ್ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ ಇರುವ ಕಾರಣ ಇಂದು ದೇಶ ಉಳಿದಿದೆ ಎಂದು ಅಭಿಪ್ರಯಾಪಟ್ಟರು. ಇದನ್ನೂ ಓದಿ: ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್‌ಎಸ್‌ಎಸ್‌: ಖರ್ಗೆ

    ಪ್ರಧಾನಮಂತ್ರಿ ಮೋದಿಜೀ ಉತ್ತಮ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ, ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ಮಾಡಿದ್ದೇವೆ. ರಾಜ್ಯದಾದ್ಯಂತ ವಾಕ್ಸಿನೇಷನ್ ಕಾರ್ಯ ನಡೆಯುತ್ತಿದೆ. ಕೋವಿಡ್ ಲಸಿಕೆ ಕೊರತೆ ಇಲ್ಲ ಎಂದು ಮಾಹಿತಿ ಹಂಚಿಕೊಂಡರು. ಯಡಿಯೂರಪ್ಪ ಆಪ್ತ ಸಹಾಯಕನ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಐಟಿ ದಾಳಿ ಬಗ್ಗೆ ನನಗೆ ಗೊತ್ತಿಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ಜೆಡಿಎಸ್ ಅನ್ನು ರಾಜಕೀಯವಾಗಿ 1 ಕಿ.ಮೀ, 1 ಮೀಟರ್ ದೂರ ಇಡಬೇಕು: ಪ್ರೀತಂಗೌಡ

  • ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಲಾಳನಕೆರೆ ಗ್ರಾಮದ ಹಾಗೂ ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸುಹಾಸ್ ಟೋಕಿಯೋದಲ್ಲಿ ನಡೆದ ಪ್ಯಾರಾಲಂಪಿಕ್ಸ್ ಕೂಟದಲ್ಲಿ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಹಿರಿಮೆಯನ್ನು ಹೆಚ್ಚಿಸುವುದರ ಮೂಲಕ ಹಾಸನ ಜಿಲ್ಲೆಯ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಸಚಿವ ಗೋಪಾಲಯ್ಯನವರು, ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್​ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್.ಯತಿರಾಜ್‍ರವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ಯಾರಾಲಂಪಿಕ್ಸ್​ನಲ್ಲಿ ಪದಕ ಜಯಿಸಿದ ಭಾರತದ ಮೊದಲ ಐಎಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದಿದ್ದಾರೆ. ಇದನ್ನೂ ಓದಿ:ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಸುಹಾಸ್ ಹಾಸನದ ಲಾಳನಕೆರೆಯಲ್ಲಿ ಜನಿಸಿ, ಶಿವಮೊಗ್ಗದಲ್ಲಿ ಬೆಳೆದು, ದಕ್ಷಿಣ ಕನ್ನಡದ ಸುರತ್ಕಲ್‍ನಲ್ಲಿ ಎನ್‍ಐಟಿಯಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಕಲಿತು, ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿ, ಮಥುರಾದ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಇವರು, ಆರು ಜಿಲ್ಲೆಗಳ ಡಿಎಂ ಆಗಿ ಸೇವೆ ಸಲ್ಲಿಸಿದ ನಂತರ, ಈಗ ಗೌತಮ್ ಬುದ್ಧ ನಗರದ ಜಿಲ್ಲೆಯ ದಂಡಾಧಿಕಾರಿಯಾದ್ದಾರೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಹಲವು ಕ್ರೀಡಾಕೂಟದಲ್ಲಿ ಭಾಗವಹಿಸಿ ನಾಲ್ಕು ಚಿನ್ನದ ಪದಕ, ಐದು ಬೆಳ್ಳಿ, ಎಂಟು ಕಂಚಿನ ಪದಕ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಹಾಸ್ ನಮ್ಮ ಕನ್ನಡಿಗ ಎಂದು ಹೇಳಲು ನಮಗೆ ಹೆಮ್ಮೆಯ ವಿಷಯವಾಗಿದೆ. ಸುಹಾಸ್ ಎಲ್.ಯತಿರಾಜ್ ರವರಿಗೆ ನಮ್ಮ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.