Tag: gopalkrishna gandhi

  • ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ

    ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ

    ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ಮಹಾತ್ಮ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಬೇಕೆಂಬ ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು, ವಿರೋಧ ಪಕ್ಷದ ಅಭ್ಯರ್ಥಿಯು ರಾಷ್ಟ್ರೀಯ ಒಮ್ಮತದಿಂದ ಆಯ್ಕೆ ಮಾಡಿದ್ದರು, ದೇಶದ ಅತ್ಯುನ್ನತ ಹುದ್ದೆಯ ಅಭ್ಯರ್ಥಿ ಹೆಸರಿಗೆ ನನ್ನನ್ನು ಹೆಸರಿಸಿದ್ದಕ್ಕಾಗಿ ಕೃತಜ್ಞನಾಗಿದ್ದೇನೆ ಆದರೆ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಈಗಾಗಲೇ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ನಾಯಕ ಫಾರೂಕ್ ಅಬ್ದುಲ್ಲಾ ಅವರ ಹೆಸರು ಕೇಳಿಬಂದಿತ್ತು. ಆದರೆ ಈ ಇಬ್ಬರೂ ನಾಯಕರು ಸ್ಪರ್ಧಿಸಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು: ಸೊರಕೆ

    ರಾಷ್ಟ್ರಪತಿ ಭವನಕ್ಕೆ ಪೈಪೋಟಿ ಸಮೀಪಿಸುತ್ತಿದ್ದಂತೆ ವಿರೋಧ ಪಕ್ಷಗಳು ಮಂಗಳವಾರ ಸಭೆ ಸೇರಿ ಒಮ್ಮತದ ಅಭ್ಯರ್ಥಿಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

    Live Tv

  • 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

    13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

    ನವದೆಹಲಿ: ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ ಈ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ.

    ಒಟ್ಟು 785 ಮತದಾರರ ಪೈಕಿ ಬಿಜೆಪಿ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. ಶೇಕಡವಾರು ಲೆಕ್ಕದಲ್ಲಿ ನೋಡೋದಾದ್ರೆ 98.21ರಷ್ಟು ಮತದಾನ ಆಗಿತ್ತು. ಒಟ್ಟು ಮತಗಳ ಶೇ. 68 ರಷ್ಟು ಅಂದರೆ  516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ,  ಶೇ. 32ರಷ್ಟು ಅಂದರೆ 244 ಮಂದಿ ಸಂಸದರು ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಪರ ಮತ ಚಲಾಯಿಸಿದ್ದಾರೆ.

    ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವೆಂಕಯ್ಯ ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.

    ಈ ಚುನಾವಣೆಯಲ್ಲೂ ಅಡ್ಡಮತದಾನ ನಡೆದಿದ್ದು, ವೆಂಕಯ್ಯ ನಾಯ್ಡು ಅವರಿಗೆ ಹೆಚ್ಚುವರಿಯಾಗಿ 17 ಮತಗಳು ಬಿದ್ದಿದ್ದು,   ಗೋಪಾಲಕೃಷ್ಣ ಗಾಂಧಿ ಅವರಿಗೆ 33 ಮತಗಳು ಕಡಿಮೆ ಬಿದ್ದಿದೆ.