Tag: Gorakhnath

  • ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

    ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

    ಲಕ್ನೋ: ಮುಸ್ಲಿಂ ಯುವಕನೊಬ್ಬ ಹರಿತ ಆಯುಧದೊಂದಿಗೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುತ್ತಾ ಬಲವಂತವಾಗಿ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರವನ್ನು ಪ್ರವೇಶಿಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಮುರ್ತಾಜಾ ಬಂಧಿತ ಆರೋಪಿ. ಈತ ಗೋರಖ್‍ಪುರದ ನಿವಾಸಿ. ಉತ್ತರ ಪ್ರದೇಶದ ಗೋರಖ್‍ಪುರ ಜಿಲ್ಲೆಯ ಗೋರಖ್‍ನಾಥ ದೇವಸ್ಥಾನದ ದಕ್ಷಿಣ ದ್ವಾರದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನೆ ವೇಳೆ ಇಬ್ಬರು ಪ್ರಾಂತೀಯ ಸಶಸ್ತ್ರ ಕಾನ್ಸ್‌ಟೇಬಲ್‍ಗಳಿಗೆ ಅರಿತವಾದ ಆಯುಧದಿಂದ ಹಲ್ಲೆ ಮಾಡಿದ್ದಾನೆ.

    ಘಟನೆಯೇನು?: ಮುರ್ತಾಜಾ ಹರಿತವಾದ ಆಯುಧದೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾನೆ. ಇದನ್ನು ತಡೆಯಲು ಬಂದ ಪೇದೆಗಳ ಮೇಲೆ ಹಲ್ಲೆ ನಡೆಸಿದ್ದಾನೆ.

    ಮುರ್ತಾಜಾ ಹರಿತವಾದ ಆಯುಧದೊಂದಿಗೆ ದೇವಸ್ಥಾನಕ್ಕೆ ಪ್ರವೇಶಿಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರು ಪಿಎಸಿ ಕಾನ್ಸ್‍ಟೇವಲ್‍ಗಳು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಮುರ್ತಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಗೋರಖ್‍ಪುರ ವಲಯದ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ತಿಳಿಸಿದ್ದಾರೆ. ಅಖಿಲ್ ಕುಮಾರ್ ಹೇಳಿದರು.

    ಗಾಯಗೊಂಡ ಕಾನ್‍ಸ್ಟೆಬಲ್‍ಗಳಾದ ಗೋಪಾಲ್ ಕುಮಾರ್ ಗೌರ್ ಮತ್ತು ಅನಿಲ್ ಪಾಸ್ವಾನ್ ಅವರು ಗುರು ಗೋರಖ್‍ನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುರ್ತಾಜಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಮುಂಬೈ ಐಐಟಿಯಲ್ಲಿ ಕೆಮಿಕಲ್‌ ಎಂಜಿನಿಯರಿಗ್‌ ಓದಿದ್ದಾನೆ. ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ, ಪಿಯಸಿ ಎಕ್ಸಾಂ ಕೆಲಸ ಮಾಡೋ ಶಿಕ್ಷಕರಿಗೆ ಹಿಜಬ್ ನಿಷೇಧ

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ಭಯೋತ್ಪಾದನೆಯ ವಿಷಯವನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?