Tag: Gotabaya Rajapaksa

  • ಭಾರೀ ಪ್ರತಿಭಟನೆ ವೇಳೆ ಪಲಾಯನಗೈದಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

    ಭಾರೀ ಪ್ರತಿಭಟನೆ ವೇಳೆ ಪಲಾಯನಗೈದಿದ್ದ ಶ್ರೀಲಂಕಾ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

    ಕೊಲಂಬೋ: ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ.

    ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

    ಶ್ರೀಲಂಕಾ ತೊರೆದಿದ್ದ ರಾಜಪಕ್ಸೆಗೆ ಸಿಂಗಾಪುರದಲ್ಲಿ 14 ದಿನಗಳ ಭೇಟಿಯ ಪಾಸ್ ನೀಡಲಾಗಿತ್ತು. ಅವರು ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಹೋಗಿ, ಬಳಿಕ ಥೈಲ್ಯಾಂಡ್‌ಗೆ ತೆರಳಿದ್ದರು. ಈ ಎಲ್ಲಾ ಘಟನೆಗಳು ನಡೆದು ಇದೀಗ 2 ತಿಂಗಳ ಬಳಿಕ ರಾಜಪಕ್ಸೆ ಶ್ರೀಲಂಕಾಗೆ ಮರಳಿದ್ದಾರೆ. ಇದನ್ನೂ ಓದಿ: ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR

    ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡಿದ ಬಳಿಕ ಜುಲೈ 21 ರಂದು ಸಂಸತ್ತಿನಲ್ಲಿ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು. ಕೊಲಂಬೋದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದು ರಾಜಪಕ್ಸೆ ದೇಶ ತೊರೆಯುವ ವೇಳೆ ವಿಕ್ರಮಸಿಂಘೆ ಅವರು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

    1948ರಲ್ಲಿ ಶ್ರೀಲಂಕಾಗೆ ಸ್ವಾತಂತ್ರ್ಯ ಲಭಿಸಿದ ಬಳಿಕ ಇದೇ ಮೊದಲ ಬಾರಿಗೆ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪ್ರವಾಸೋದ್ಯಮವೇ ಉಸಿರಾಗಿರುವ ಶ್ರೀಲಂಕಾದಲ್ಲಿ ಕೋವಿಡ್ ಕಾರಣದಿಂದಾಗಿ ಆರ್ಥಿಕತೆಗೆ ಭಾರೀ ಹೊಡೆತ ಬಿತ್ತು. ಇದನ್ನೂ ಓದಿ: ಮುರುಘಾ ಮಠದ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರು ಬೇರೆಡೆಗೆ ಶಿಫ್ಟ್‌ – ಮಕ್ಕಳ ಆಯೋಗದಿಂದ ಮಾಹಿತಿ

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಗೊತಬಯ ರಾಜಪಕ್ಸೆ

    ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಗೊತಬಯ ರಾಜಪಕ್ಸೆ

    ಕೊಲಂಬೋ: ಕೆಲವು ದಿನಗಳ ಹಿಂದೆ ಶ್ರೀಲಂಕಾದಾದ್ಯಂತ ಭಾರೀ ಪ್ರತಿಭಟನೆ ನಡೆದ ಹಿನ್ನೆಲೆ ಶ್ರೀಲಂಕಾ ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಅಧ್ಯಕ್ಷ ಗೊತಬಯ ರಾಜಪಕ್ಸೆ ಅಮೆರಿಕದಲ್ಲಿ ನೆಲೆಸಲು ಗ್ರೀನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.

    ರಾಜಪಕ್ಸೆ ಅವರ ಪತ್ನಿ ಹಾಗೂ ಮಗನೊಂದಿಗೆ ಅಮೆರಿಕ ತೆರಳಿ ಅಲ್ಲಿಯೇ ನೆಲೆಸಲು ತಮ್ಮ ವಕೀಲರ ಮೂಲಕ ಗ್ರೀನ್ ಕಾರ್ಡ್ ಪಡೆಯಲು ಕಳೆದ ತಿಂಗಳೇ ಅರ್ಜಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ರಾಜಪಕ್ಸೆ ಅವರು ಶ್ರೀಲಂಕಾ ಸೇನೆಯಿಂದ ಬೇಗನೆ ನಿವೃತ್ತಿ ಪಡೆದು 1998ರಲ್ಲಿ ಅಮೆರಿಕಗೆ ವಲಸೆ ಹೋಗಿದ್ದರು. ಬಳಿಕ 2005ರಲ್ಲಿ ಶ್ರೀಲಂಕಾಗೆ ಮರಳಿದ್ದರು. 2019ರ ಅಧ್ಯಕ್ಷೀಯ ಚುನಾವಣೆಗಾಗಿ ಅವರು ತಮ್ಮ ಅಮೆರಿಕದ ಪೌರತ್ವವನ್ನು ತ್ಯಜಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಪಾಲರಾಗ್ತಾರಾ ಸೂಪರ್ ಸ್ಟಾರ್ ರಜನಿಕಾಂತ್?

    ಗೊತಬಯ ರಾಜಪಕ್ಸೆ ಪ್ರಸ್ತುತ ಬ್ಯಾಂಕಾಕ್‌ನ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು, ತಮ್ಮ ಪತ್ನಿಯೊಂದಿಗೆ ಆಗಸ್ಟ್ 25ರಂದು ಶ್ರೀಲಂಕಾಗೆ ಮರಳುವ ಸಾಧ್ಯತೆಯಿದೆ. ಮೊದಲೇ ಯೋಜಿಸಿದಂತೆ ಥೈಲ್ಯಾಂಡ್‌ಗೆ ಹೋಗುವ ನಿರ್ಧಾರವನ್ನು ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

    ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

    ಕೊಲಂಬೋ: ಗೊಟಬಯ ರಾಜಪಕ್ಸೆ ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ಪ್ರತಿಭಟನಾಕಾರರು ಅವರ ಅಧಿಕೃತ ನಿವಾಸಕ್ಕೆ ನುಗ್ಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದ್ದ ಸಂದರ್ಭ ಅವರ ಮನೆಯಲ್ಲಿ ಪತ್ತೆಯಾಗಿದ್ದ ಲಂಕಾದ ಲಕ್ಷಾಂತರ ರೂ. ಹಣವನ್ನು ಶ್ರೀಲಂಕಾ ಪೊಲೀಸರು ನ್ಯಾಯಾಲಯದ ಕೈಗೆ ಒಪ್ಪಿಸಿದ್ದಾರೆ.

    ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದ ಜನರು 3 ವಾರಗಳ ಹಿಂದೆ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಮನೆಗೆ ನುಗ್ಗಿ ಆಕ್ರೋಶ ಹೊರ ಹಾಕಿದ್ದರು. ಸರ್ಕಾರದ ವಿರುದ್ಧದ ದಂಗೆಗೆ ಹೆದರಿ ರಾಜಪಕ್ಸೆ ಪಲಾಯನಗೈದಿದ್ದರು.

    ರಾಜಪಕ್ಸೆ ಲಂಕಾ ತೊರೆದು ಮಾಲ್ಡೀವ್ಸ್ ಹಾಗೂ ಸಿಂಗಾಪುರಕ್ಕೆ ತೆರಳಿ, ಅಲ್ಲಿ ಅವರು ಇ-ಮೇಲ್ ಮೂಲಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ಪ್ರತಿಭಟನಾಕಾರರು ಅವರ ನಿವಾಸದಿಂದ 1.8 ಕೋಟಿ ಶ್ರೀಲಂಕಾ ರೂ. ಪತ್ತೆ ಮಾಡಿದ್ದರು. ಬಳಿಕ ಅದನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಇದನ್ನೂ ಓದಿ: ಕಾಮನ್‍ವೆಲ್ತ್ ಗೇಮ್ಸ್ 2022: ಎರಡನೇ ದಿನ ಪದಕದ ನಿರೀಕ್ಷೆಯಲ್ಲಿ ಭಾರತ – ಲವ್ಲಿನಾ, ಮೀರಾಬಾಯಿ ಚಾನು ಕಣಕ್ಕೆ

    ಕೊಲಂಬೋ ಕೇಂದ್ರೀಯ ಅಪರಾಧಗಳ ತನಿಖಾ ವಿಭಾಗದ ಉಸ್ತುವಾರಿ ಪೊಲೀಸ್ ಅಧಿಕಾರಿ ಗುರುವಾರ ನೀಡಿದ ಆದೇಶದ ಮೇರೆಗೆ ಶುಕ್ರವಾರ ಎಲ್ಲಾ ಹಣವನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ. ಆದರೆ ಈ ಹಣವನ್ನು ಕಳೆದ 3 ವಾರಗಳಿಂದ ನ್ಯಾಯಾಲಯಕ್ಕೆ ಏಕೆ ಸಲ್ಲಿಸಲಿಲ್ಲ ಎಂದು ನ್ಯಾಯಾಧೀಶ ತಿಲಿನಾ ಗಮೇಜ್ ಪ್ರಶ್ನಿಸಿದ್ದಾರೆ.

    ಹಣವನ್ನು ನ್ಯಾಯಾಲಯದ ವಶಕ್ಕೆ ನೀಡುವಲ್ಲಿ ಆಗಿರುವ ವಿಳಂಬದ ಕುರಿತು ತನಿಖೆ ನಡೆಸುವಂತೆ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್‌ಗೆ(ಐಜಿಪಿ) ಆದೇಶಿಸಲಾಗಿದ್ದು, ಇದಕ್ಕಾಗಿ ವಿಶೇಷ ತನಿಖಾ ಘಟಕದ ನಿರ್ದೇಶಕರನ್ನು ನೇಮಕ ಮಾಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಉಳಿತಾಯಕ್ಕೆ ಟೈ ಕಟ್ಟುವುದನ್ನು ನಿಲ್ಲಿಸಿ: ಸ್ಪೇನ್‌ ಪ್ರಧಾನಿ

    Live Tv
    [brid partner=56869869 player=32851 video=960834 autoplay=true]

  • ಪ್ರತಿಭಟನಾ ಶಿಬಿರ ಧ್ವಂಸಗೊಳಿಸಿದ ಶ್ರೀಲಂಕಾ ಭದ್ರತಾ ಪಡೆ

    ಪ್ರತಿಭಟನಾ ಶಿಬಿರ ಧ್ವಂಸಗೊಳಿಸಿದ ಶ್ರೀಲಂಕಾ ಭದ್ರತಾ ಪಡೆ

    ಕೊಲಂಬೊ: ಶ್ರೀಲಂಕಾದ ಭದ್ರತಾ ಪಡೆಗಳು ಶುಕ್ರವಾರ ರಾಜಧಾನಿಯಲ್ಲಿನ ಪ್ರಮುಖ ಸರ್ಕಾರಿ ವಿರೋಧಿ ಪ್ರತಿಭಟನಾ ಶಿಬಿರವನ್ನು ಧ್ವಂಸಗೊಳಿಸಿದೆ.

    sri lanka

    ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಸ್ಥಿತಿ ಗಂಭೀರವಾಗಿದ್ದು, ಸರ್ಕಾರದ ವಿರುದ್ಧವೇ ಜನರು ಆಕ್ರೋಶಗೊಂಡು ಹಿಂಸಾಚಾರದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆಗಳು ಮತ್ತು ಪೊಲೀಸ್ ವಿಶೇಷ ಕಾರ್ಯಪಡೆಯ ಕಮಾಂಡೋಗಳು ಜನರ ಮೇಲೆ ಲಾಠಿ ಪ್ರಯೋಗಿಸಿ ಸ್ಥಿತಿಯನ್ನು ಶಾಂತಿಗೆ ತರಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಸರ್ಕಾರದ ವಿರೋಧಿ ಪ್ರತಿಭಟನಾ ಶಿಬಿರವನ್ನು ಭದ್ರತಾ ಪಡೆ ಧ್ವಂಸ ಮಾಡಿದೆ. ಇದನ್ನೂ ಓದಿ: ನಲಪಾಡ್ ಮಾಡಿರೋ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ: ಅಶೋಕ್ ಪಟ್ಟಣ

    ಕೊಲಂಬೊದಲ್ಲಿನ ಸಮುದ್ರ ಮುಂಭಾಗದ ಅಧ್ಯಕ್ಷೀಯ ಸಚಿವಾಲಯವನ್ನು ಮುತ್ತಿಗೆ ಹಾಕುವ ಜನರ ಮೇಲೆ ಸ್ವಯಂಚಾಲಿತ ಆಕ್ರಮಣಕಾರಿ ರೈಫಲ್‍ಗಳಿಂದ ದಾಳಿ ಮಾಡಲು ಸಿಬ್ಬಂದಿ ಸಜ್ಜಾಗಿದ್ದರು. ವಸಾಹತುಶಾಹಿ ಕಟ್ಟಡದ ಹೊರಗೆ ನೂರಾರು ಸೈನಿಕರು ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಗೇಡ್‍ಗಳು ಮತ್ತು ಡೇರೆಗಳನ್ನು ಹಾಕಲಾಗಿತ್ತು. ಆದರೂ ಸಹ ಪ್ರತಿಭಟನಾಕಾರರು ಅದನ್ನು ಮೀರಿ ಆವರಣದ ಮೆಟ್ಟಿಲುಗಳ ಮೇಲೆ ಬಂದರು. ಪರಿಣಾಮ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು.

    ಹೊಸ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಹಳೆಯ ಸ್ನೇಹಿತನನ್ನು ಪ್ರಧಾನಿಯಾಗಿ ಮತ್ತು ಉಚ್ಚಾಟಿತ ರಾಷ್ಟ್ರದ ಮುಖ್ಯಸ್ಥರ ವಕೀಲರನ್ನು ವಿದೇಶಾಂಗ ಸಚಿವರನ್ನಾಗಿ ನೇಮಿಸುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದೆ. ಇದನ್ನೂ ಓದಿ:  2 ವರ್ಷಗಳ ನಂತರ ಸೋಫಾದಲ್ಲಿ ಪತ್ತೆಯಾದ ಮಹಿಳೆ ಅಸ್ಥಿಪಂಜರ 

    ಸಿಂಗಾಪುರದಿಂದ ಪಲಾಯನ ಮಾಡಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಾನಕ್ಕೆ ಬುಧವಾರ ವಿಕ್ರಮಸಿಂಘೆ ಅವರನ್ನು ಆಯ್ಕೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಗೊಟಬಯ ರಾಜಪಕ್ಸೆಗೆ ಶಾಕ್ ಕೊಟ್ಟ ಸಿಂಗಾಪುರ – ದೇಶ ಬಿಟ್ಟು ಹೊರಡಿ ಎಂದು ಖಡಕ್ ಸೂಚನೆ

    ಗೊಟಬಯ ರಾಜಪಕ್ಸೆಗೆ ಶಾಕ್ ಕೊಟ್ಟ ಸಿಂಗಾಪುರ – ದೇಶ ಬಿಟ್ಟು ಹೊರಡಿ ಎಂದು ಖಡಕ್ ಸೂಚನೆ

    ಸಿಂಗಾಪುರ: ಶ್ರೀಲಂಕಾವನ್ನು ಆರ್ಥಿಕವಾಗಿ ಮುಳುಗಿಸಿ ಜನರ ಆಕ್ರೋಶಕ್ಕೆ ಹೆದರಿ ದೇಶ ಬಿಟ್ಟು ಸಿಂಗಾಪುರಕ್ಕೆ ಓಡಿ ಹೋದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆಗೆ ಸಿಂಗಾಪುರ ಆಡಳಿತ ಬಿಗ್ ಶಾಕ್ ನೀಡಿದೆ.

    ಸಿಂಗಾಪುರ ಬಿಟ್ಟು ತೆರಳುವಂತೆ ಗೊಟಬಯಗೆ ಸೂಚಿಸಿದೆ. `ನೀವು ಪ್ರವಾಸಿ ವೀಸಾ ಮೇಲೆ ಬಂದಿದ್ದೀರಿ. ಅದನ್ನು ವಿಸ್ತರಿಸಲು ನಾವು ಸಿದ್ಧರಿಲ್ಲ. ನೀವಿನ್ನು ನಮ್ಮ ದೇಶದಿಂದ ಹೊರಡಬಹುದು’ ಎಂದು ಗೊಟಬಯಗೆ ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಉಕ್ರೇನ್ ಉನ್ನತ ಅಧಿಕಾರಿಗಳನ್ನ ಅಮಾನತು ಮಾಡಿದ ಝೆಲೆನ್ಸ್ಕಿ

    ಈ ಮಧ್ಯೆ ಶ್ರೀಲಂಕಾದಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಶಾಂತಿ-ಭದ್ರತೆಯ ಕಾರಣ ನೀಡಿ ವಿಕ್ರಮಸಿಂಘೆ ತುರ್ತು ಪರಿಸ್ಥಿತಿ ಹೇರಿದ್ದಾರೆ.

    ಅಂದಹಾಗೆ ರನಿಲ್ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಆಡಳಿತಾರೂಢ ಪಕ್ಷ ಪೊಡುಜನ ಪೆರಮುನ ಚಿಂತನೆ ನಡೆಸಿದೆ. ಇದು ರಾಜಪಕ್ಸೆ ಕುಟುಂಬಕ್ಕೆ ಸೇರಿದ ಪಕ್ಷ. ಹೀಗಾಗಿ ರನಿಲ್ ಗೆಲುವು ಖಚಿತ ಎನ್ನಲಾಗುತ್ತಿದೆ. ಇದನ್ನೂ ಓದಿ: ನೀವು ಬರಬೇಡಿ.. ನಿಮ್ಮ ಮನೆಯ ಪುರುಷರನ್ನು ಕೆಲಸಕ್ಕೆ ಕಳಿಸಿ: ಮಹಿಳಾ ಉದ್ಯೋಗಿಗಳಿಗೆ ತಾಲಿಬಾನ್‌ ಸೂಚನೆ

    ಇದೇ ನಡೆದಲ್ಲಿ ಶ್ರೀಲಂಕಾದಲ್ಲಿ ಮತ್ತೆ ಬರೋದು ರಾಜಪಕ್ಸೆ ಸರ್ಕಾರವೇ ಆಗಿರಲಿದೆ. ನಮಗೆ ನ್ಯಾಯ ಸಿಗಲ್ಲ. ದೇಶವೂ ಉದ್ಧಾರ ಆಗಲ್ಲ ಎಂದು ಹೋರಾಟಗಾರರು ನೋವು ವ್ಯಕ್ತಪಡಿಸ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅಧಿಕಾರಿ ಸ್ವೀಕಾರ

    ಲಂಕಾ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅಧಿಕಾರಿ ಸ್ವೀಕಾರ

    ಕೊಲಂಬೋ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಶ್ರೀಲಂಕಾ ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೈವರ್ದನಾ ಅವರು ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಘೋಷಿಸಿದರು ಹಾಗೂ ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಪ್ರತಿಭಟನೆ ನಡೆದ ಹಿನ್ನೆಲೆ ಗೊಟಬಯ ರಾಜಪಕ್ಸೆ ಗುರುವಾರ ಕೊನೆಗೂ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ರಾಜಪಕ್ಸೆ ಲಂಕಾ ತೊರೆದು ಪಲಾಯನಗೈದಿದ್ದರು. ಈ ಹಿನ್ನೆಲೆ ತಮ್ಮ ರಾಜೀನಾಮೆ ಪತ್ರವನ್ನು ಸಂಸತ್ತಿನ ಸ್ಪೀಕರ್‌ಗೆ ಇ-ಮೇಲ್ ಮೂಲಕ ಕಳುಹಿಸಿದ್ದರು. ಇದನ್ನೂ ಓದಿ: ಶೀಘ್ರವೇ ಗುಣಮುಖರಾಗಿ – ಸ್ಟಾಲಿನ್‌ಗೆ ಶುಭಹಾರೈಸಿದ ಬೊಮ್ಮಾಯಿ

    ಗೊಟಬಯ ರಾಜಪಕ್ಸೆ ಗುರುವಾರ ರಾಜೀನಾಮೆ ನೀಡಿದ ಬಳಿಕ ಶ್ರೀಲಂಕಾದ ಸರ್ಕಾರಿ ಕಟ್ಟಡಗಳಿಂದ ಪ್ರತಿಭಟನಾಕಾರರು ಹಿಮ್ಮೆಟ್ಟಿದ್ದಾರೆ. ಲಂಕಾ ರಾಜಧಾನಿಯಾದ್ಯಂತ ಪರಿಸ್ಥಿತಿ ಶಾಂತರೀತಿಗೆ ಮರಳುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸೆ ರಾಜೀನಾಮೆ

    ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜಪಕ್ಸೆ ರಾಜೀನಾಮೆ

    ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಗೊಟಬಯ ರಾಜಪಕ್ಸೆ ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

     

    ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಶನಿವಾರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: ಬೆಂಗ್ಳೂರಲ್ಲಿ 1,068, ರಾಜ್ಯದಲ್ಲಿ 1,209 ಮಂದಿಗೆ ಕೊರೊನಾ – 1 ಸಾವು

    ಈ ಹಿನ್ನೆಲೆ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ಬಳಿಕ ಸಿಂಗಾಪುರಕ್ಕೆ ತೆರಳಿರುವ ರಾಜಪಕ್ಸೆ ಅಲ್ಲಿಯೇ ವಾಸಿಸುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

  • ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

    ಲಂಕಾ ಅಧ್ಯಕ್ಷ ರಾಜಪಕ್ಸೆ ಮಾಲ್ಡೀವ್ಸ್‌ನಿಂದ ಸಿಂಗಾಪುರಕ್ಕೆ ಪಲಾಯನ

    ಸಿಂಗಾಪುರ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಇದೀಗ ಸೌದಿ ಏರ್‌ಲೈನ್ಸ್ ಮೂಲಕ ಸಿಂಗಾಪುರಕ್ಕೆ ತೆರಳಿದ್ದಾರೆ.

    ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಶನಿವಾರ ಅವರ ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿ, ಅಲ್ಲೇ ಠಿಕಾಣಿ ಹೂಡಿದ್ದರು.

    ಈ ಹಿನ್ನೆಲೆಯಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಬಂದ ರಾಜಪಕ್ಸೆ ಬುಧವಾರ ಬೆಳಗ್ಗೆ ಶ್ರೀಲಂಕಾದಿಂದ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್‌ಗೆ ತೆರಳಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ಪೀಕರ್ ಮೊಹಮ್ಮದ್ ನಶೀದ್ ಸ್ವಾಗತಿಸಿದರು. ರಾಜಪಕ್ಸೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸಬೇಕಿದ್ದ ದಿನವೇ ದೇಶದಿಂದ ಪಲಾಯನ ಮಾಡಿದ್ದರು.

    ಬುಧವಾರ ರಾತ್ರಿಯೇ ಸಿಂಗಾಪುರಕ್ಕೆ ತೆರಳಬೇಕಿತ್ತು. ಆದರೆ ಭದ್ರತೆಯ ಕಾರಣದಿಂದಾಗಿ ಅವರು ಪಲಾಯನ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಸಿಂಗಾಪುರಕ್ಕೆ ತರಳಿರುವ ಅವರು ಸದ್ಯಕ್ಕೆ ಇಲ್ಲೇ ವಾಸಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ಪರಿಸ್ಥಿತಿ ಹದಗೆಡುತ್ತಿದೆ. ಹಂಗಾಮಿ ಅಧ್ಯಕ್ಷರಾಗಿ ರನೀಲ್ ವಿಕ್ರಮಸಿಂಘೆ ನೇಮಕಗೊಂಡ ಬೆನ್ನಲ್ಲೇ ಅಲ್ಲಿನ ಜನ ಮತ್ತೆ ಸಿಡಿದೆದ್ದಿದ್ದಾರೆ. ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಜನ ದಾಂಧಲೆ ನಡೆಸಿದ್ದಾರೆ. ಸೇನಾ ಪಡೆಗಳ ಅಶ್ರುವಾಯು ಸೇರಿ ಹಲವು ರೀತಿಯ ಬಲ ಪ್ರಯೋಗಕ್ಕೂ ಬೆದರದೇ ಅಧ್ಯಕ್ಷರ ಭವನದ ಬಳಿಕ ಪ್ರಧಾನಿ ಕಚೇರಿಯನ್ನೂ ಆಕ್ರಮಿಸಿ ಗಲಾಟೆ ಮಾಡಿದ್ದಾರೆ. ಘರ್ಷಣೆಯಲ್ಲಿ ಓರ್ವ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕ್ಷಣ ಕ್ಷಣಕ್ಕೂ ಬೀದಿಗಳಲ್ಲಿ ಪ್ರತಿಭಟನೆ ಹೆಚ್ಚುತ್ತಿದೆ. ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

    ರಾಜಪಕ್ಸೆ ಪಲಾಯನ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

    ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

    ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟಿನಿಂದ ಕಂಗಲಾಗಿರುವ ಸಾವಿರಾರು ಮಂದಿ ಧಂಗೆ ಎದ್ದಿದ್ದು, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅಧಿಕೃತ ನಿವಾಸವನ್ನು ಆಕ್ರಮಿಸಿಕೊಂಡಿದ್ದರು. ಈ ಬಳಿಕ ಗೊಟಬಯ ರಾಜಪಕ್ಸೆ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ತಿಳಿಸಿದ್ದರು. ಆದರೆ ರಾಜೀನಾಮೆ ನೀಡುವುದಕ್ಕೂ ಮುನ್ನವೇ ರಾಜಪಕ್ಸೆ ಅವರು ಮಾಲ್ಡೀವ್ಸ್‌ಗೆ  ತಮ್ಮ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ತೆರಳಿದ್ದಾರೆ.

    ಇದರಿಂದ ರೊಚ್ಚಿಗೆದ್ದಿರುವ ಜನರು ಗೊಟಬಯ ರಾಜಪಕ್ಸೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಏಕಾಏಕಿ ಸಾವಿರಾರು ಮಂದಿ ಲಂಕಾ ಸಂಸತ್ತಿನ ಗೇಟ್‍ಗಳನ್ನು ತಳ್ಳಿ ಸಾವಿರಾರು ಜನರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಕಚೇರಿಗೆ ನುಗ್ಗಿ ಧಾಂದಲೇ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

    ಪ್ರತಿಭಟನಾಕಾರರು ಹೆಚ್ಚಾಗುತ್ತಿದ್ದು, ಅವರನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಕರ್ಫ್ಯೂ ವಿಧಿಸಲಾಗಿದೆ. ಕಚೇರಿ ಮೇಲೆ ದಾಳಿ ನಡೆಸುತ್ತಿರುವ ಹಲವಾರು ಗಲಭೆಕೋರರನ್ನು ಬಂಧಿಸುವಂತೆ ಪ್ರಧಾನಿ ಭದ್ರತಾ ಪಡೆಗಳಿಗೆ ಆದೇಶಿಸಿದ್ದಾರೆ.

    ಈ ಮುನ್ನ ಜುಲೈ 7 ರಂದು ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆದಿತ್ತು. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ರಾಜೀನಾಮೆಗೂ ಮುನ್ನವೇ ಮಾಲ್ಡೀವ್ಸ್‌ಗೆ ಹಾರಿದ ಗೊಟಬಯ ರಾಜಪಕ್ಸೆ

    ಇದಕ್ಕೂ ಮುನ್ನ ಕೂಡ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್‍ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಈ ವೇಳೆ ಕೂಡ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಇದೀಗ ಮತ್ತೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ನಾವು ಸಹಕಾರ ನೀಡಿಲ್ಲ ಎಂದ ಭಾರತ

    ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ನಾವು ಸಹಕಾರ ನೀಡಿಲ್ಲ ಎಂದ ಭಾರತ

    ಕೊಲಂಬೋ: ಅಧ್ಯಕ್ಷ ಗೋಟಬಯ ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ಭಾರತ ಸಹಕಾರ ನೀಡಿಲ್ಲ ಎಂದು ಕೊಲಂಬೋದಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

    ರಾಜಪಕ್ಸೆ ಶ್ರೀಲಂಕಾದಿಂದ ಮಾಲ್ಡೀವ್ಸ್‌ಗೆ ತೆರಳಲು ಭಾರತ ಸಹಾಯ ಮಾಡಿದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ರಾಜೀನಾಮೆಗೂ ಮುನ್ನವೇ ಮಾಲ್ಡೀವ್ಸ್‌ಗೆ ಹಾರಿದ ಗೊಟಬಯ ರಾಜಪಕ್ಸೆ

    ಅಧ್ಯಕ್ಷ ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ಭಾರತವು ಅನುಕೂಲ ಮಾಡಿಕೊಟ್ಟಿದೆ ಎಂಬ ಆಧಾರರಹಿತ ಮತ್ತು ಊಹಾತ್ಮಕ ಮಾಧ್ಯಮ ವರದಿಗಳನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ. ನಾವು ಶ್ರೀಲಂಕಾ ಜನರ ಜೊತೆ ಇದ್ದೇವೆ ಎಂದು ರಾಯಭಾರ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ.

    ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ ಮತ್ತು ಸರ್ಕಾರದ ಕೋರಿಕೆಯ ಮೇರೆಗೆ ಅಧ್ಯಕ್ಷ, ಅವರ ಪತ್ನಿ ಮತ್ತು ಇಬ್ಬರು ಭದ್ರತಾ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲು ವಿಮಾನವನ್ನು ಒದಗಿಸಿದೆ ಎಂದು ಶ್ರೀಲಂಕಾದ ವಾಯುಪಡೆ ತಿಳಿಸಿತ್ತು.

    Live Tv
    [brid partner=56869869 player=32851 video=960834 autoplay=true]