– ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ ಮೆಡಿಸಿನ್ ಖರೀದಿ ಮಾಡ್ತಿರೋ ರೋಗಿಗಳು
ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ ಕರ್ಮಕಾಂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮೆಡಿಸಿನ್ ಶಾರ್ಟೆಜ್ (Medicines Shortage) ಇದೆ. ಅಗತ್ಯ ಔಷಧಿಗಳು ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ (Private Medical) ಕಾಸು ಕೊಟ್ಟು ಔಷಧ ಖರೀದಿ ಮಾಡ್ತಿದ್ದಾರೆ. ಆದ್ರೆ ಔಷಧ ಕೊಡಿ ಅಂತ ರೋಗಿಗಳು ಕೇಳಿದ್ರೆ ಖಾಲಿಯಾಗಿದೆ, ಸಿಎಂ ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ ಹಣ ವಸೂಲಿ
ಸಮಸ್ಯೆ ಆಗಿದ್ರೆ ಸರಿಪಡಿಸುವ ಕೆಲಸ ಮಾಡ್ತೇವೆ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ಇದರಿಂದ ವಾಣಿವಿಲಾಸ ಆಸ್ಪತ್ರೆಗೆ ಅಗತ್ಯ ಔಷಧಿಗಳು ಪೂರೈಕೆ ಆಗ್ತಿಲ್ಲ. ಕೆಲ ಮಾತ್ರೆಗಳು ಮಾತ್ರ ಸ್ಟಾಕ್ ಇದೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ, ಸಮಸ್ಯೆ ಆಗಿದ್ರೆ ಮಾಹಿತಿ ಪಡೆದು ಸರಿಪಡಿಸುವ ಕೆಲಸ ಮಾಡಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ
ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಉಚಿತವಾಗಿ ಸಿಗುತ್ತೆ ಅಂತ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿದ್ರು. ಈಗ ಆಸ್ಪತ್ರೆಯಲ್ಲಿ ಔಷಧಿಗಳೇ ಸಿಗ್ತಿಲ್ಲ. ಔಷಧಿ ಖರೀದಿಗೆ ಕರೆಯಲಾಗಿರುವ ಟೆಂಡರ್ ಕೂಡ ಅಂತಿಮ ಆಗಿಲ್ಲ. ಹೀಗಾಗಿ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಿಸುವಂತಾಗಿದೆ. ಇದನ್ನೂ ಓದಿ: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
ಚಿತ್ರದುರ್ಗ: ಇತ್ತೀಚೆಗೆ ಎಲ್ಲೆಡೆ ವೈರಲ್ ಫೀವರ್ (Viral Fever) ಹಾಗೂ ಚಿಕನ್ ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ತುಂಬಾ ವೇಗವಾಗಿ ಹರಡುತ್ತಿದೆ. ಆದರೆ ಚಿತ್ರದುರ್ಗ (Chitradurga) ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ರೋಗಿಗಳು ಬೆಡ್‌ಗಳ ಸಮಸ್ಯೆಯಿಂದ (Bed Problem) ಪರದಾಡುತ್ತಿದ್ದಾರೆ.
ಹೌದು, ಇಲ್ಲಿನ ನೂತನ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿವೆ ಅಂತ ಬಾಣಂತಿಯರು ಹಾಗೂ ಹಸುಗೂಸುಗಳನ್ನು ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗ್ತಿದೆ. ಹೀಗಾಗಿ, ರೋಗ ಮತ್ತಷ್ಟು ಉಲ್ಬಣಗೊಳ್ತಿದ್ದು, ರೋಗಿಗಳು ಪ್ರಾಣ ಕೈಯಲ್ಲಿಡಿದುಕೊಂಡು ಚಿಕಿತ್ಸೆ ಪಡೆಯುವಂತಾಗಿದೆ. ಇದನ್ನೂ ಓದಿ: ಹಂದಿ ಮಾಂಸ ಸೇವನೆ ಹೆಚ್ಚಳ – ಶಟಲ್ ಕಾಕ್‌ಗೆ ಬಂತು ಬರ, ಬೆಲೆ ದಿಢೀರ್ ಏರಿಕೆ!
ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ 100 ಬೆಡ್‌ಗಳ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆಯು ಗರ್ಭಿಣಿಯರು ಹಾಗೂ ಮಕ್ಕಳ ಪಾಲಿಗೆ ಸಂಜೀವಿನಿ ಆಗಬೇಕಿತ್ತು. ಆದ್ರೆ, ಹೆರಿಗೆಯಾದ ಬಳಿಕ ಮಗುವಿಗೆ ಏನಾದರೂ ಉಸಿರಾಟದ ಸಮಸ್ಯೆ, ಜಾಂಡೀಸ್ ಸೇರಿದಂತೆ ಇನ್ನಿತರ ರೋಗಗಳು ಉಲ್ಬಣವಾದ್ರೆ ಈ ಆಸ್ಪತ್ರೆ ಬಾಣಂತಿಯರ ಪರಿಸ್ಥಿತಿ ನರಕಕ್ಕಿಂತ ಕಡೆಯಾಗಲಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸ್ಮಾರ್ಟ್ ಇಂಟೆಲಿಜೆಂಟ್ ವಿಲೇಜ್ – ಏನಿದು ಹೊಸ ಯೋಜನೆ?
ಬಾಣಂತಿಯರು ನೆಲದ ಮೇಲೆಯೇ ಮಲಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಎದುರಾಗಿದೆ. ಅಲ್ಲದೇ ಇತ್ತೀಚೆಗೆ ವೈರಲ್ ಫೀವರ್ ಹಾಗು ಚಿಕನ್ ಗುನ್ಯಾದಂತಹ ವಿವಿಧ ಸಾಂಕ್ರಾಮಿಕ ರೋಗಗಳು ಮಕ್ಕಳಲ್ಲಿ ಹೆಚ್ಚಾಗಿ ಹರಡುತ್ತಿದೆ. ಹೀಗಾಗಿ ಮಕ್ಕಳ ವಾರ್ಡ್ ಫುಲ್ ಆಗಿದ್ದು, ಬೆಡ್‌ಗಳು ಭರ್ತಿಯಾಗಿವೆ.
ಹೀಗಾಗಿ ಚಿಕಿತ್ಸೆಗೆಂದು ಬರುವ ಮಕ್ಕಳಿಗೂ ನೆಲವೇ ಗತಿಯಾಗಿದ್ದು, ಚಿಕಿತ್ಸೆ ಸಿಕ್ರೆ ಸಾಕಪ್ಪ, ಬೆಡ್ ಇಲ್ಲವಾದ್ರು ಪರವಾಗಿಲ್ಲ ಅಂತಿದ್ದಾರೆ. ಇನ್ನು, ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿ ವಿವಿಧ ವೈರಲ್ ಅಟ್ಯಾಕ್‌ನಿಂದ ರೋಗ ಮತ್ತಷ್ಟು ಹೆಚ್ಚಾಗುವ ಭೀತಿ ಕಾಡುತ್ತಿದೆ. ಆದ್ರೆ ಸಂಬಂಧಪಟ್ಟ ಜಿಲ್ಲಾಸ್ಪತ್ರೆ ಸರ್ಜನ್ ಡಾ.ರವೀಂದ್ರ ಅವರು ಮಾತ್ರ ನಿದ್ರಾವಸ್ಥೆಯಲ್ಲಿರೋದು ವಿಪರ್ಯಾಸ ಅಂತ ರೋಗಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭವಾಗಿ ಈಗಾಗಲೇ ಒಂದು ವರ್ಷ ಕಳೆದಿದೆ. ಆದ್ರೆ ಬೆಡ್‌ಗಳ ಸಮಸ್ಯೆ ನಿವಾರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಹೀಗಾಗಿ, ಚಿಕಿತ್ಸೆಗೆಂದು ಬರುವ ರೋಗಿಗಳು ಬೆಡ್ ಸಿಗಲಾರದೇ ಮಕ್ಕಳನ್ನು ತಮ್ಮ ಹೆಗಲ ಮೇಲೆ ಹಾಗೂ ಮಡಿಲಲ್ಲಿ ಮಲಗಿಸಿಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಈ ಸಮಸ್ಯೆಗೊಂದು ಶಾಶ್ವತ ಪರಿಹಾರ ಒದಗಿಸುವಂತೆ ರೋಗಿಗಳು ಆಗ್ರಹಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸಿಕ್ಕರೂ ಕೂಡ ಬೆಡ್ ಸಿಗಲಾರದೇ ಬಾಣಂತಿಯರು ಹಾಗೂ ಮಕ್ಕಳು ಪರದಾಡುವಂತಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುವ ನವಜಾತಶಿಶುಗಳ ತಾಯಂದಿರ ಹಿತದೃಷ್ಟಿಯಿಂದ ಸುಸಜ್ಜಿತ ತಂಗುದಾಣ ನಿರ್ಮಿಸುವ ಮೂಲಕ ಬಾಣಂತಿಯರ ಹಿತ ಕಾಯಬೇಕೆಂಬುದು ಎಲ್ಲರ ಆಶಯವಾಗಿದೆ.
ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರೋ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿ ಸಂಬಳ ಪಾವತಿ ಮಾಡೋ ವ್ಯವಸ್ಥೆ ಜಾರಿ ಮಾಡೋದಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ (Sharan Prakash Patil) ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಬಲ್ಕೀಸ್ ಬಾನು ಪ್ರಶ್ನಿಸಿದ ಅವರು, ಜಿಲ್ಲಾಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಸರಿಯಾಗಿ ಕೆಲಸಕ್ಕೆ ಹಾಜರಾಗುವುದಿಲ್ಲ. ಸೀನಿಯರ್ ಡಾಕ್ಟರ್‌ಗಳು, ಜ್ಯೂನಿಯರ್ ಡಾಕ್ಟರ್‌ಗಳಿಗೆ ಜವಾಬ್ದಾರಿ ಕೊಟ್ಟು ಅವರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಹೋಗುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ಡಾಕ್ಟರ್‌ಗಳು ಪ್ರಾಕ್ಟೀಸ್ ಮಾಡ್ತಾರೆ. ನಮ್ಮ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂತಹ ವ್ಯವಸ್ಥೆ ಇದೆ. ಇಂತಹ ವ್ಯವಸ್ಥೆ ಸರಿ ಮಾಡಬೇಕು. ಶಿವಮೊಗ್ಗದಲ್ಲಿ 100 ಬೆಡ್‌ನ ಪ್ರತ್ಯೇಕ ಜಿಲ್ಲಾಸ್ಪತ್ರೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಕ್ಕಳಲ್ಲೂ ಕಾಡ್ತಿದೆ ಮಾರಕ ಕ್ಯಾನ್ಸರ್ – ಅಂಕಿ ಅಂಶ ಬಿಚ್ಚಿಟ್ಟ ಶರಣು ಪ್ರಕಾಶ್ ಪಾಟೀಲ್
ಪ್ರಶ್ನೆಗೆ ಉತ್ತರಿಸಿದ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು, ವೈದ್ಯರು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಇರಬೇಕು ಎಂದು ಆದೇಶ ಮಾಡಲಾಗಿದೆ. ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೂ ಯಾವುದೇ ಡಾಕ್ಟರ್‌ಗಳು ಪ್ರಾಕ್ಟೀಸ್ ಮಾಡುವ ಹಾಗಿಲ್ಲ ಎಂದೆಲ್ಲಾ ಆದೇಶ ಮಾಡಲಾಗಿದೆ. ಹಾಜರಾತಿಗಾಗಿ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಅಳವಡಿಕೆ ಮಾಡಲಾಗಿದೆ. ವೈದ್ಯರು ದಿನಕ್ಕೆ 4 ಬಾರಿ ಬಯೋ ಮೆಟ್ರಿಕ್ ಮಾಡಬೇಕು. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿ ಸಂಬಳ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಗೆ ನಿರ್ಧಾರ ಮಾಡಲಾಗಿದೆ ಎಂದರು. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ
ಬೀದರ್: ರೈತರ ಜಮೀನು ಆಯ್ತು, ಮಠ, ಮಂದಿರವಾಯ್ತು, ಐತಿಹಾಸಿಕ ಸ್ಮಾರಕಗಳೂ ಆಯ್ತು ಇದೀಗ ಸರ್ಕಾರಿ ಆಸ್ಪತ್ರೆಯ (Governmnet Hospital) ಮೇಲೂ ವಕ್ಫ್ ವಕ್ರದೃಷ್ಟಿ ಬಿದ್ದಿದೆ.
ಬೀದರ್ (Bidar) ಜಿಲ್ಲೆಯ ಕಮಲಾನಗರ (Kamalanagar) ತಾಲೂಕಿನ ತೋರಣ (Torana) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವಕ್ಫ್ಗೆ ಸೇರ್ಪಡೆಯಾಗಿದ್ದು, ಗ್ರಾಮದ ಸರ್ವೇ ನಂಬರ್ 64ರ 4 ಎಕರೆ 29 ಗುಂಟೆ ಜಾಗ ಈಗ ವಕ್ಫ್ ಆಸ್ತಿಯಾಗಿದೆ.ಇದನ್ನೂ ಓದಿ: ಭಾರತದ ವಕ್ಫ್ ಆಸ್ತಿ ಪಾಕಿಸ್ತಾನದಷ್ಟಿದೆ: ಯತ್ನಾಳ್ ಆರೋಪ
ಗ್ರಾಮಸ್ಥರೇ ದೇಣಿಗೆ ಸಂಗ್ರಹಿಸಿ ಆಸ್ಪತ್ರೆಗೆ ನೀಡಿದ್ದ ಜಾಗ ಈಗ ವಕ್ಫ್ಗೆ ಸೇರ್ಪಡೆಯಾಗಿದ್ದು, ರೋಗಿಗಳು ಹಾಗೂ ಗ್ರಾಮಸ್ಥರು ಕಂಗಾಲಾಗಿದ್ದಾರೆ. 2013ಕ್ಕೂ ಮೊದಲು ಈ ಜಾಗ ಸರ್ಕಾರಿ ಜಾಗವಾಗಿತ್ತು. ನಂತರ ಈ ಜಾಗ ವಕ್ಫ್ ಆಸ್ತಿಯಾಗಿದ್ದು ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.
ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುವ ಆಸ್ಪತ್ರೆ ಈಗ ವಕ್ಫ್ ಆಸ್ತಿಯಾಗಿದ್ದು, ಪ್ರತಿದಿನ ಆಸ್ಪತ್ರೆಗೆ ಬರುತ್ತಿದ್ದ ಮುಧೋಳ, ಚಾಂದೋರಿ, ಕೊಟಿಗ್ಯಾಳ ಸೇರಿದಂತೆ ಹತ್ತಾರು ಹಳ್ಳಿಯ ರೋಗಿಗಳಿಗೆ ಶಾಕ್ ನೀಡಿದೆ. ಈ ಕೂಡಲೇ ಪಹಣಿ ಬದಲಾವಣೆ ಮಾಡಿ ಇಲ್ಲವಾದರೆ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ಉಗ್ರವಾದ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶನ- ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ತಾರಕಕ್ಕೇರಿದ ಗದ್ದಲ
ಕೋಲ್ಕತ್ತಾ: ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ (ESI Hospital) ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ (ICU) ಓರ್ವ ರೋಗಿ ಸಾವನ್ನಪ್ಪಿದ್ದಾನೆ.
ಕೋಲ್ಕತ್ತಾದ ಸೀಲ್ದಾಹ್ (Sealdah) ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಅ.18) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ 80 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬಿಬಿಎಂಪಿ ಬಂಡವಾಳ ಬಯಲು- ಎರಡು ದಿನದ ಮಳೆಗೆ ಕಿತ್ತು ಬಂತು ಹೊಸದಾಗಿ ಹಾಕಿದ್ದ ಡಾಂಬರು ರಸ್ತೆ
ಮೊದಲು ಆಸ್ಪತ್ರೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೇರೆ ಕೋಣೆಗಳಿಗೆ ಹರಡುವ ಮುನ್ನ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ.
ಕೆಲವು ರೋಗಿಗಳು ಬೆಂಕಿ ಕಾಣಿಸಿಕೊಂಡ ಬಳಿಕ ತಮ್ಮ ಆರೈಕೆದಾರರ ಜೊತೆ ಹೊರಗೆ ಬಂದಿದ್ದು, ಇನ್ನುಳಿದ ಕೆಲವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಯಿತು. ಸದ್ಯ ಚಿಕಿತ್ಸೆಗಾಗಿ ರೋಗಿಗಳನ್ನು ಬೇರೆ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.
ಸ್ಥಳಕ್ಕೆ ಪಶ್ಚಿಮ ಬಂಗಾಳದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ (Sujit Bose) ಭೇಟಿ ನೀಡಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಟಿ.ಕೆ.ದತ್ತಾ (TK Dutta) ಮಾತನಾಡಿ, ಇದೊಂದು ಭಯಾನಕ ಅಗ್ನಿ ಅವಘಡ. ಐಸಿಯುನಲ್ಲಿ ದಾಖಲಾಗಿದ್ದ ಓರ್ವ ರೋಗಿಯ ಹೊರತಾಗಿ, ಕೇವಲ 20 ನಿಮಿಷದಲ್ಲಿ ಎಲ್ಲಾ ರೋಗಿಗಳನ್ನು ಪ್ರಾಣಾಪಾಯದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ. ಐಸಿಯುನಲ್ಲಿದ್ದ ಓರ್ವ ರೋಗಿಯ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಇನ್ನಿತರ ಯಾವುದೇ ಗಾಯಗಳಾಗಿಲ್ಲ. ಕೋಣೆಯಲ್ಲಿ ಹೊಗೆ ಕಾಣಿಸಿದ್ದನ್ನು ಕಂಡ ಕೆಲ ರೋಗಿಗಳು ಕಿಟಕಿಯಿಂದ `ನಮ್ಮನ್ನು ಉಳಿಸಿ’ ಎಂದು ಕಿರುಚುತ್ತಿದ್ದರು ಎಂದು ನಡೆದ ಅವಘಡದ ಕುರಿತು ವಿವರಿಸಿದರು.ಇದನ್ನೂ ಓದಿ: ಬೆಂಗಳೂರು ಕಾಲೇಜಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಬಂಗಾಳದಲ್ಲಿ ಅರೆಸ್ಟ್
ರಾಯಚೂರು: ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವಾಗಲೇ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯಲ್ಲಿ (Devadurga Taluka Hospital) ನಡೆದಿದೆ.
ಪ್ರಯೋಗಾಲಯದ ಬೀಗ ಹಾಕದೇ ಸಿಬ್ಬಂದಿ ಹಾಗೆ ಬಿಟ್ಟಿದ್ದರು. ಈ ವೇಳೆ ಹಿಮೋಗ್ಲೋಬಿನ್ ಲೆವೆಲ್, ಆಕ್ಸಿಜನ್ ಲೆವೆಲ್ ಚೆಕ್ ಮಾಡುವ ಮಷಿನ್ ಹಾಗೂ ಎಲೆಕ್ಟ್ರೋಲೈಟ್ ತಪಾಸಣೆ ಸೇರಿದಂತೆ ವಿವಿಧ ರಕ್ತ ಪರೀಕ್ಷೆಗಳನ್ನು (Blooad Test Machine) ಮಾಡಲು ಬಳಸುತ್ತಿದ್ದ ಮೂರು ದೊಡ್ಡ ಯಂತ್ರಗಳನ್ನು ಕಳ್ಳತನ ಮಾಡಿದ್ದಾರೆ. ಸುಮಾರು 10 ರಿಂದ 15 ಲಕ್ಷ ರೂ. ಮೌಲ್ಯದ ಯಂತ್ರೋಪಕರಣಗಳು ಕಳ್ಳತನವಾಗಿದ್ದು, ಸಿಸಿಟಿವಿ ಡಿವಿಆರ್‌ನ್ನು ಕೂಡ ಕದ್ದುಕೊಂಡು ಹೋಗಿದ್ದಾರೆ.
ಅ.12, 13ರ ನಡುವೆ ಘಟನೆ ನಡೆದಿದ್ದು, ಮುಖ್ಯ ವೈದ್ಯಾಧಿಕಾರಿ ಡಾ.ಶಿವಾನಂದ ತಡವಾಗಿ ಅ.16 ರಂದು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಒಂದೊಂದು ಯಂತ್ರೋಪಕರಣಗಳನ್ನು ಹೊತ್ತೊಯ್ಯಲು ಕನಿಷ್ಠ ನಾಲ್ಕು ಜನ ಬೇಕಿದ್ದು, ಈ ಕಳ್ಳತನದ ಹಿಂದೆ ನಾನಾ ಅನುಮಾನಗಳು ಹುಟ್ಟಿಕೊಂಡಿವೆ.
ಒಂದೆಡೆ ಆಸ್ಪತ್ರೆಯ ಒಳಗಿನವರ ಸಹಾಯದಿಂದ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇನ್ನೊಂದೆಡೆ ಖಾಸಗಿ ಪ್ರಯೋಗಾಲಯಗಳ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಆದರೆ ಹಿಂದುಳಿದ ಪ್ರದೇಶದಲ್ಲಿನ ಆಸ್ಪತ್ರೆಯಲ್ಲಿ ಕಳ್ಳತನ ನಡೆದಿರುವುದಕ್ಕೆ ಬಡ ರೋಗಿಗಳ ಕಡೆಯವರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತಾ: ತರಬೇತಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಹೊತ್ತಿನಲ್ಲೇ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರಾಂಶುಪಾಲ (RG Kar Medical College Principal) ಡಾ.ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನನ್ನಿಂದ ರಾಜೀನಾಮೆ ಪಡೆಯಲು ವಿದ್ಯಾರ್ಥಿಗಳನ್ನ (Medical Student) ಎತ್ತಿಕಟ್ಟಿದ್ದಾರೆ. ಸುಮ್ಮನೆ ನನ್ನ ಮಾನಹಾನಿ ಮಾಡಲಾಗುತ್ತಿದೆ. ನಾನು ಸಂತ್ರಸ್ತರನ್ನ ನೋಯಿಸುವ ಯಾವುದೇ ಟೀಕೆ ಮಾಡಿಲ್ಲ. ಅತ್ಯಾಚಾರ ಮತ್ತು ಕೊಲೆ ಆರೋಪಿಗೆ ಶಿಕ್ಷೆ ಆಗಬೇಕೆಂದು ಈಗಲೂ ಬಯಸುತ್ತೇನೆ. ಮೃತ ಬಾಲಕಿ ನನ್ನ ಮಗಳಿದ್ದಂತೆ, ನನಗೂ ತಂದೆ-ತಾಯಿ ಇದ್ದಾರೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ನನ್ನ ವಿರುದ್ಧ ನೀಡುತ್ತಿರುವ ಕೀಳು ಮಟ್ಟದ ಹೇಳಿಕೆಗಳಿಂದ ತುಂಬಾ ನೋವಾಗುತ್ತಿದೆ. ಆದ್ದರಿಂದ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ಬರೆದಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಪ್ರೀತಿಸಿ ಎಲ್ಲಾ ಮುಗಿದ್ಮೇಲೆ ಕೈಕೊಟ್ಟ ಪ್ರಿಯಕರ – ಮದುವೆ ದಿನವೇ ಆಸಿಡ್ ದಾಳಿಗೆ ಮುಂದಾದ ವಿಧವೆ ಪ್ರೇಯಸಿ!
ಕೃತ್ಯದ ನಂತರ ಸಂದೀಪ್ ರಾಜೀನಾಮೆ ನೀಡಲ್ಲ ಅಂತ ಎಲ್ಲರೂ ಹೇಳ್ತಿದ್ದರು. ಆದ್ರೆ ನಾನು ಪ್ರಾಮಾಣಿಕನಾಗಿ ರಾಜೀನಾಮೆ ನೀಡಿದ್ದೇನೆ. ನಾನು ಅಧಿಕಾರ ವಹಿಸಿಕೊಂಡ ಬಳಿಕ ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದೆ. ಆಸ್ಪತ್ರೆಯ ಅಭಿವೃದ್ಧಿ ಮತ್ತು ರೋಗಿಗಳ ಹಿತದೃಷ್ಟಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಆದ್ರೆ ಈ ಘಟನೆಯನ್ನು ಕೆಲವರು ಲಾಭಕ್ಕಾಗಿ ಬಳಸಿಕೊಂಡಿದ್ದು, ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಏನಿದು ಪ್ರಕರಣ?
ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ತರಬೇತಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಂತರ ಕೊಲೆ ಮಾಡಿರುವುದು ವರದಿಯಲ್ಲಿ ಬಹಿರಂಗವಾಯಿತು. ಇದನ್ನೂ ಓದಿ: ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್ ಸಿಂಗ್
ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ:
ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್ ವೀಡಿಯೋಗಳು ಪತ್ತೆ!
– ಬ್ಲೂಟೂತ್ ನೀಡಿತು ಕಾಮುಕನ ಸುಳಿವು!
– ಆರೋಪಿಗೆ ಮರಣ ದಂಡನೆ ವಿಧಿಸಲು ದೀದಿ ಆಗ್ರಹ
ಕೋಲ್ಕತ್ತಾ: ಸ್ನಾತಕೋತ್ತರ ತರಬೇತಿ ವೈದ್ಯೆಯ (Trainee Doctor) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿ ಸಂಜಯ್ ರಾಯ್‌ನನ್ನು 14 ದಿನಗಳವರೆಗೆ ಪೊಲೀಸ್ (Kolkata Police) ಕಸ್ಟಡಿಗೆ ಒಪ್ಪಿಸಿದೆ. ತನಿಖೆಯಲ್ಲಿ ಸ್ಫೋಟಕ ರಹಸ್ಯಗಳು ಬಯಲಾಗಿವೆ.
ಸಿಸಿಟಿವಿಯಲ್ಲಿ ದೃಶ್ಯ ಸೆರೆ:
ಮೂಲಗಳ ಪ್ರಕಾರ, ಆರೋಪಿ ಸಂಜಯ್ ರಾಜ್ ಖಾಸಗಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದ. ಇದರಿಂದ ಅನೇಕರು ಅವರನ್ನು ಫ್ರೆಂಡ್ಸ್ ಆಫ್ ಪೊಲೀಸ್ ಎಂದೂ ಜನ ಕರೆಯುತ್ತಿದ್ದರು. ಬಂಗಾಳ ಪೊಲೀಸರ ಸಹಕಾರಕ್ಕಾಗಿ ಪ್ರಬಲ ಪೊಲೀಸ್ ಕಲ್ಯಾಣ ಮಂಡಳಿಯ ಭಾಗವಾಗಿ ರಚಿಸಿದ್ದ ತಂಡದಲ್ಲಿ ರಾಯ್ ಇದ್ದ. ಇದರಿಂದ ಆಸ್ಪತ್ರೆಗೆ ಪ್ರವೇಶಿಸಲು ಸುಲಭವಾಗಿ ಪ್ರವೇಶ ಸಿಕ್ಕಿತ್ತು. ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ರಾಯ್ ಆಸ್ಪತ್ರೆ ಒಳಗೆ ಹೋಗಿರುವುದು ಸಿಸಿಟಿವಿ (CCTV) ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬ್ಲೂಟೂತ್ ನೀಡಿದ ಸುಳಿವು:
ಕಾಮುಕ ಸಂಜಯ್ ರಾಯ್ ವಿಚಾರಣೆ ವೇಳೆ, ಎಲ್ಲ ಶಂಕಿತರ ಮೊಬೈಲ್‌ಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ನಂತರ ಪರಿಶೀಲನೆ ವೇಳೆ ಸಿಕ್ಕ ಬ್ಲೂಟೂತ್, ಇಯರ್ ಫೋನ್ ಅನ್ನು ಎಲ್ಲ ಶಂಕಿತರ ಮೊಬೈಲ್ ಫೋನ್‌ಗಳೊಂದಿಗೆ ಲಿಂಕ್ ಮಾಡಲು ಪ್ರಯತ್ನಿಸಿದರು. ಈ ವೇಳೆ ಬ್ಲೂಟೂತ್ ಮತ್ತು ಇಯರ್ ಫೋನ್ ಆರೋಪಿ ಸಂಜಯ್ ರಾಯ್‌ನ ಮೊಬೈಲ್ ಫೋನ್‌ಗೆ ಸ್ವಯಂಚಾಲಿತವಾಗಿ ಕನೆಕ್ಟ್ ಆಗಿದೆ. ಇದನ್ನೇ ಸಾಕ್ಷಿಯನ್ನಾಗಿ ಪರಿಗಣಿಸಿದ ಪೊಲೀಸರು ಆತನನ್ನ ಅಲ್ಲೇ ವಶಕ್ಕೆ ಪಡೆಸಿದ್ದಾರೆ. ಪೊಲೀಸ್ ತಂಡವು ವಿಚಾರಣೆ ನಡೆಸಿದಾಗ, ಸಂಜಯ್ ಆರಂಭದಲ್ಲಿ ವಿಭಿನ್ನ ಹೇಳಿಕೆಗಳನ್ನು ನೀಡಿದ್ದರೂ, ನಂತರ ತಗಲಾಕ್ಕೊಂಡಿದ್ದಾನೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಕೇಸ್?
ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿರುವುದು ಗೊತ್ತಾಗಿತ್ತು. ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹವು ರಕ್ತದ ಕಲೆಗಳ ಸಹಿತ ಹಾಸಿಗೆಯ ಮೇಲೆ ಬಿದ್ದಿರುವುದು ಪತ್ತೆಯಾಗಿತ್ತು. ಜೊತೆಗೆ ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತ ಹರಿಯುತ್ತಿತ್ತು. ಘಟನೆ ಬೆಳಕಿಗೆ ಬಂದ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರಣೋತ್ತರ ಪರೀಕ್ಷೆ ನಡೆಸಿದಾಗ ಮಹಿಳಾ ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವರದಿಯಲ್ಲಿ ಬಹಿರಂಗವಾಯಿತು.
ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ:
ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಬಂಧಿತ ಆರೋಪಿಯನ್ನು 14 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ) ಮತ್ತು 103ರ (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೀಲ್ಲಾ ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ 14 ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡುವಂತೆ ಪ್ರಾಸಿಕ್ಯೂಷನ್ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರವು ಕೇರಳ ಜೊತೆಗಿದೆ: ವಯನಾಡು ಭೂಕುಸಿತ ಸಂತ್ರಸ್ತರಿಗೆ ಮೋದಿ ಅಭಯ
ವ್ಯಾಪಕ ಪ್ರತಿಭಟನೆ:
ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಕೋಲ್ಕತ್ತಾದ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ 108 ಅಂಬುಲೆನ್ಸ್‌ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಹೊಟ್ಟೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ. ಆದಾಗ್ಯೂ ಮಹಿಳೆ ಚೀರಾಡಿದ್ದಾಳೆ, ಕೊನೆಗೆ ಶುಶ್ರೂಷಕಿ ಮಂಜುಳಾ ಅಂಬುಲೆನ್ಸ್‌ನಲ್ಲೇ ಮಹಿಳೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ನಲ್ಲೇ ಪ್ರಥಮ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಪತಿ ತಿಳಿಸಿದ್ದಾರೆ. ಇದರಿಂದ ಶುಶ್ರೂಷಕಿ ಮಂಜುಳಾ ಹಾಗೂ ಚಾಲಕ ಗಂಗಾಧರ್ ಕರ್ತವ್ಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.