Tag: Government of India

  • ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (Panchamsali) 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

    ಈ ಹಿಂದೆ ಹೈಕೋರ್ಟ್ (Karnataka Highcourt) ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ. ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

    ಈ ಸಂಬಂಧ ಗುರುವಾರ ಮತ್ತೆ ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದರು. ಇದನ್ನೂ ಓದಿ: 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು ಮಾಡಿದೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಆದೇಶ ತೆರವು ಮಾಡಿದೆ. ಇದರಿಂದಾಗಿ ಪಂಚಮಸಾಲಿಗೆ 2C, 2D ಮೀಸಲಾತಿ ಕಲ್ಪಿಸಲು ಯಾವುದೇ ಅಡ್ಡಿ ಇಲ್ಲದಂತೆ ಆಗಿದೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸದಿದ್ದರೆ ಮತ್ತೆ ಹೋರಾಟ: ಜಯಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದ್ದು, 2A ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ನೀಡಿತು. ಕೇಂದ್ರ ಸರ್ಕಾರ ನೀಡಿದ ಭರವಸೆಯಿಂದಾಗಿ ಮಧ್ಯಂತರ ಆದೇಶ ತೆರವು ಮಾಡಿದೆ. ಇದರೊಂದಿಗೆ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು ಎಂದು ಸೂಚಿಸಿದೆ.

  • ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ – ದೆಹಲಿ ಹೈಕೋರ್ಟ್

    ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ – ದೆಹಲಿ ಹೈಕೋರ್ಟ್

    ನವದೆಹಲಿ: ಅಗ್ನಿಪಥ್ ಯೋಜನೆಯನ್ನು (Agnipath Scheme) ರಾಷ್ಟ್ರೀಯ ಹಿತಾಸಕ್ತಿಗಾಗಿ ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ (Delhi HighCourt) ಹೇಳಿದೆ.

    ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು (ಫೆ.27) ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಸ್ಕೂಲ್‌ನಲ್ಲೇ ಆತ್ಮಹತ್ಯೆ ಮಾಡಿಕೊಳ್ಳೋಕೆ ಹೋಗಿದ್ದ ಪಿಯು ವಿದ್ಯಾರ್ಥಿನಿ- ಅಸಲಿ ಕಾರಣ ಬಯಲು

    ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. `ನ್ಯಾಯಾಲಯವು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವನ್ನು ಕಂಡುಕೊಳ್ಳುವುದಿಲ್ಲ ಎಂದು ಹೇಳಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ನಾವು ಯೋಜನೆಯನ್ನು ರಾಷ್ಟ್ರೀಯ ಹಿತಾಸಕ್ತಿಯಿಂದ ಪರಿಚಯಿಸಲಾಗಿದೆ ಎಂದು ತೀರ್ಮಾನಿಸಬಹುದು’ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಕೇಸರಿಮಯವಾದ ಕುಂದಾನಗರಿ ಬೆಳಗಾವಿ- ಗಲ್ಲಿ ಗಲ್ಲಿಗಳಲ್ಲಿ ಬಿಜೆಪಿ ಬಾವುಟ ಹಾರಾಟ

    ಅಲ್ಲದೇ ನೇಮಕಾತಿಗಾಗಿ ಜಾಹೀರಾತುಗಳಿಂದ ಯಾವುದೇ ಪ್ರಾಮಿಸರಿ ಎಸ್ಟೊಪೆಲ್ ಅಥವಾ ಕಾನೂನುಬದ್ಧ ನಿರೀಕ್ಷೆಯನ್ನು ಸೃಷ್ಟಿಸಲಾಗಿಲ್ಲ ಎಂದು ಪೀಠ ಹೇಳಿದೆ. ಕಳೆದ ಡಿಸೆಂಬರ್ 15 ರಂದು ಈ ಪ್ರಕರಣದ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿತ್ತು.

    ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ದೇಶಾದ್ಯಂತ ಹೈಕೋರ್ಟ್‌ಗಳಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಯಿತು. ನಂತರ ಸುಪ್ರೀಂ ಕೋರ್ಟ್ (Supreme Court) ಈ ಎಲ್ಲಾ ವಿಷಯಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿತು.

  • Smart Cities Mission: ಮುಂದಿನ ತಿಂಗಳಲ್ಲಿ ಮೊದಲ 22 ನಗರಗಳು ಸಿದ್ಧ

    Smart Cities Mission: ಮುಂದಿನ ತಿಂಗಳಲ್ಲಿ ಮೊದಲ 22 ನಗರಗಳು ಸಿದ್ಧ

    ನವದೆಹಲಿ: ಕೇಂದ್ರ ಸರ್ಕಾರದ (Government Of India) ಮಹಾತ್ವಾಕಾಂಕ್ಷೆ ಯೋಜನೆ ಸ್ಮಾರ್ಟ್ ಸಿಟಿ ಮಿಷನ್ (Smart Cities Mission) ಅಡಿಯಲ್ಲಿ ಮೊದಲ 22 ನಗರಗಳನ್ನು ಸ್ಮಾರ್ಟ್ ಆಗಿಸಲು ಸರ್ಕಾರ ಮುಂದಾಗಿದೆ.

    ಆಗ್ರಾ, ವಾರಣಾಸಿ, ಚೆನ್ನೈ (Chennai), ಪುಣೆ ಮತ್ತು ಅಹಮದಾಬಾದ್ ಸೇರಿದಂತೆ 22 ನಗರಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಮುಂದಿನ ತಿಂಗಳೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲಿದ್ದು, ತಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟದ ಜೀವನ ಮತ್ತು ಸ್ವಚ್ಛ ಮತ್ತು ಸುಸ್ಥಿರ ಪರಿಸರವನ್ನು ಕಲ್ಪಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಆಯ್ಕೆಯಾದ ಉಳಿದ 78 ನಗರಗಳಲ್ಲಿ, ನಡೆಯುತ್ತಿರುವ ಯೋಜನೆಗಳನ್ನು ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

    ಭೋಪಾಲ್, ಇಂದೋರ್, ಆಗ್ರಾ, ವಾರಣಾಸಿ, ಭುವನೇಶ್ವರ್, ಚೆನ್ನೈ, ಕೊಯಮತ್ತೂರು, ಈರೋಡ್, ರಾಂಚಿ, ಸೇಲಂ, ಸೂರತ್, ಉದಯಪುರ, ವಿಶಾಖಪಟ್ಟಣಂ, ಅಹಮದಾಬಾದ್, ಕಾಕಿನಾಡ, ಪುಣೆ, ವೆಲ್ಲೂರ್, ಪಿಂಪ್ರಿ-ಚಿಂಚ್‌ವಾಡ್, ಮಧುರೈ, ಅಮರಾವತಿ, ತಿರುಚಿರಾಪಳ್ಳಿ ಮತ್ತು ತಂಜಾವೂರು ನಗರಗಳು ಎಲ್ಲಾ ಯೋಜನೆಗಳ ಮಾರ್ಚ್ ವೇಳೆಗೆ ಪೂರ್ಣಗೊಳ್ಳುವ 22 ಸ್ಮಾರ್ಟ್ ಸಿಟಿಗಳಾಗಿವೆ ಎಂದು ಹೇಳಲಾಗಿದೆ.

    ನಾವು ಮಾರ್ಚ್ ವೇಳೆಗೆ 22 ಸ್ಮಾರ್ಟ್ ಸಿಟಿಗಳನ್ನು ಪೂರ್ಣಗೊಳಿಸುತ್ತೇವೆ ಏಕೆಂದರೆ ಈ ನಗರಗಳಲ್ಲಿನ ಯೋಜನೆಗಳು ಅಂತಿಮ ಹಂತದಲ್ಲಿವೆ. ಮುಂದಿನ 3-4 ತಿಂಗಳಲ್ಲಿ ನಾವು ಉಳಿದ 78 ನಗರಗಳ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಏನಿದು ಸ್ಮಾರ್ಟ್ ಸಿಟಿ ಮಿಷನ್?
    ನರೇಂದ್ರ ಮೋದಿ (Narendra Modi) ಸರ್ಕಾರವು ತನ್ನ ಪ್ರಮುಖ ಸ್ಮಾರ್ಟ್ ಸಿಟಿ ಮಿಷನ್ ಅನ್ನು ಜೂನ್ 25, 2015 ರಂದು ಪ್ರಾರಂಭಿಸಿತು. ಜನವರಿ 2016 ರಿಂದ ಜೂನ್ 2018ರ ವರೆಗೆ 4 ಸುತ್ತಿನ ಸ್ಪರ್ಧೆಯ ಮೂಲಕ 100 ನಗರಗಳನ್ನು ಪುನರಾಭಿವೃದ್ಧಿಗಾಗಿ ಆಯ್ಕೆ ಮಾಡಲಾಯಿತು. ದೇಶದಲ್ಲಿ ವಾಸಿಸುವ ಜನರ ಜೀವನ ಗುಣಮಟ್ಟ ಸುಧಾರಿಸುವುದು ಹಾಗೂ ಆರ್ಥಿಕ ಬೆಳವಣಿಗೆ ಹೆಚ್ಚಿಸುವುದು, ಸ್ವಚ್ಛ ಹಾಗೂ ಸುಸ್ಥಿರ ಪರಿಸರ ಕಲ್ಪಿಸಿಕೊಡುವ ನಗರಗಳನ್ನು ಉತ್ತೇಜಿಸುವುದು ಈ ಮಿಷನ್‌ನ ಉದ್ದೇಶವಾಗಿದೆ.

    ಈ ವರ್ಷರಂಭದಲ್ಲಿ ಜನವರಿ 27ರ ವರೆಗೆ 100 ಸ್ಮಾರ್ಟ್ ಸಿಟಿಗಳಲ್ಲಿ 1,81,322 ಕೋಟಿ ಮೌಲ್ಯದ 7,804 ಯೋಜನೆಗಳ ಅನುಷ್ಠಾನಕ್ಕೆ ಆದೇಶಿಸಲಾಗಿದ್ದು, ಅದರಲ್ಲಿ 98,796 ಕೋಟಿ ಮೊತ್ತದ 5,246 ಯೋಜನೆಗಳು ಪೂರ್ಣಗೊಂಡಿವೆ. ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರ ಸಹ 36,447 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, 32,095 ಕೋಟಿ (ಶೇ.88) ಅನುದಾನವನ್ನ ಬಳಸಿಕೊಳ್ಳಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಇತ್ತೀಚೆಗೆ ರಾಜ್ಯಸಭೆಗೆ ತಿಳಿಸಿದ್ದರು.

    ಪ್ರಸ್ತುತ, ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಹೆಚ್ಚಿನ ನಗರಗಳನ್ನು ಸೇರಿಸಲು ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಸಚಿವಾಲಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

    BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

    ನವದೆಹಲಿ: ಆನ್‌ಲೈನ್ ವೇದಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ (BBC Documentary) ಪ್ರಸಾರ ನಿಷೇಧಿಸಿರುವ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ (Government Of India) ಸುಪ್ರೀಂ ಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ.

    ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ ಮತ್ತು ಎಂ.ಎಂ ಸುಂದ್ರೇಶ್ ಅವರ ದ್ವಿಸದಸ್ಯ ಪೀಠ ಯಾವುದೇ ಮಧ್ಯಂತರ ಆದೇಶ ನೀಡದೇ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್‌ಗೆ ಮುಂದೂಡಿತು. ಇದನ್ನೂ ಓದಿ: ಚೀನಾ ಓಲೈಸಲು ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಮಹೇಶ್‌ ಜೇಠ್ಮಾಲನಿ

    ಬೆಂಗಳೂರಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ

    2002ರ ಗುಜರಾತ್ ಗಲಭೆಗೆ ಸಂಬಂಧಿಸಿದ `ಇಂಡಿಯಾ: ದಿ ಮೋದಿ ಕ್ವಶ್ಚನ್’ (India: The Modi Question) ಎಂಬ ಶೀರ್ಷಿಕೆಯ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ನಿರ್ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಕೀಲ ಎಂ.ಎಲ್ ಶರ್ಮಾ, ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ, ಪತ್ರಕರ್ತ ಎನ್. ರಾಮ್ ಹಾಗೂ ವಕೀಲ ಪ್ರಶಾಂತ್ ಭೂಷಣ್ (Prashant Bhushan) ಅವರು ಸಲ್ಲಿಸಿದ್ದರು.

    ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ - ತನಿಖೆಗೆ ಆದೇಶ

    ಫೆಬ್ರವರಿ 3ರಂದು ನಡೆದ ವಿಚಾರಣೆ ವೇಳೆ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು. ಸಾರ್ವಜನಿಕ ವಲಯದಲ್ಲಿ ಪ್ರಸಾರಕ್ಕೆ ಅವಕಾಶ ನೀಡಬೇಕು ಎಂದು ವಾದಿಸಲಾಯಿತು. ಇದನ್ನೂ ಓದಿ: ಮೋದಿ ವಿರುದ್ಧದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ

    ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಬಳಿಕ ಈ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹದಾಯಿ ಯೋಜನೆ ಅನುಷ್ಠಾನ – ಗೋವಾ ಸರ್ಕಾರದ ನಡೆಯ ಬಗ್ಗೆ ಗೊತ್ತಿಲ್ಲವೆಂದ ಸಿಎಂ

    ಮಹದಾಯಿ ಯೋಜನೆ ಅನುಷ್ಠಾನ – ಗೋವಾ ಸರ್ಕಾರದ ನಡೆಯ ಬಗ್ಗೆ ಗೊತ್ತಿಲ್ಲವೆಂದ ಸಿಎಂ

    ಹುಬ್ಬಳ್ಳಿ: ಮಹದಾಯಿ ಯೋಜನೆ (Mahadayi River Project) ಅನುಷ್ಠಾನ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೋತ್ತಿಲ್ಲ. ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇಲೆ ನ್ಯಾಯಾಧಿಕರಣ ರಚನೆಯಾಗಿದೆ. ಅದರ ಪರಿಶೀಲನೆ ಸಹ ಆಗಿ, ತೀರ್ಪು ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು (Hubbali) ಮಾತನಾಡಿದ ಅವರು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರಕ್ಕೆ 2016 ರಲ್ಲಿ ಸಮಗ್ರ ಯೋಜನಾ ವರದಿ (DPR) ನೀಡಲಾಗಿತ್ತು. ಸದ್ಯ ಡಿಪಿಆರ್‌ಗೂ ಅನುಮತಿ ಸಿಕ್ಕಿದೆ. ಕಾನೂನು (Law) ಹೋರಾಟವಾಗಿಯೇ ಇದೆಲ್ಲವೂ ನಡೆದಿದೆ ಎಂದು ಹೇಳಿದ್ದಾರೆ.

    ಎಚ್.ವಿಶ್ವನಾಥ್ (H Vishwanath) ಅವರ ಹೇಳಿಕೆಗೆ ನಾನು ಯಾವತ್ತೂ ಪ್ರತಿಕ್ರಿಯಿಸಿಲ್ಲ. ಅವರು ಪದೇ-ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು? – ಅಧ್ಯಯನಕ್ಕೆ ಸಮಿತಿ ರಚನೆ

    ಫೆಬ್ರವರಿ 6 ರಂದು ಪ್ರಧಾನಿ ಮೋದಿ ((Narendra Modi) ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಅಂದು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

    ಇದರೊಂದಿಗೆ `CD ಬಾಂಬ್’ ಸಿಡಿಸಿದ್ದ ರಮೇಶ್ ಜಾರಕಿಹೊಳಿ (Ramesh Jarkiholi) ಹುಬ್ಬಳ್ಳಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಬೆಂಗಳೂರಿನಿಂದ ಸಿಎಂ ಜೊತೆಗೆ ಜಾರಕಿಹೊಳಿ ವಿಮಾನದಲ್ಲಿ ಪ್ರಯಾಣ ಮಾಡಿದ್ದು ಹಲವು ಕುತೂಹಲಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ನವದೆಹಲಿ: 2023 ಹೊಸ ವರ್ಷದ (Newyear 2023) ಮೊದಲದಿನವೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ದರವನ್ನು 25 ರೂ.ಗಳಷ್ಟು ಹೆಚ್ಚಿಸಿದೆ.

    ಹೊಸ ದರದ ಪ್ರಕಾರ 19 ಕೆಜಿಯ ವಾಣಿಜ್ಯ ಸಿಲಿಂಡರ್ ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ 1,685.5 ರೂ., ದೆಹಲಿಯಲ್ಲಿ (NewDelhi) 1,768 ರೂ., ಮುಂಬೈನಲ್ಲಿ (Mumbai) 1,721 ರೂ., ಕೋಲ್ಕತ್ತಾದಲ್ಲಿ 1,870 ರೂ. ಮತ್ತು ಚೆನ್ನೈನಲ್ಲಿ 1,971 ರೂ. ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ. ಸಿಲಿಂಡರ್ ದರ ಏರಿಕೆಯಿಂದ ರೆಸ್ಟೋರೆಂಟ್ ಹಾಗೂ ಹೋಟೆಲ್ ಸೇವೆಗಳ ದರ ಏರಿಕೆಯಾಗುವ ಸಾಧ್ಯತೆಯಿದೆ.

    ಕಾಂಗ್ರೆಸ್ ಟೀಕೆ:
    `ಹೊಸ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್‌ಪಿಜಿ ದರ ಏರಿಕೆಯಾಗಿದ್ದು, ಇದು ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರದ (Government Of India) ಉಡುಗೊರೆ, ಇದು ಕೇವಲ ಆರಂಭ ಅಷ್ಟೇ’ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಆಧುನಿಕ ಭಾರತದ ಪಿತಾಮಹ ದೇಶಕ್ಕಾಗಿ ಏನ್ ಮಾಡಿದ್ದಾರೆ – ನಿತೀಶ್ ಕುಮಾರ್ ಪ್ರಶ್ನೆ

    2014ರಿಂದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 410 ರೂ. ಇದ್ದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ 1,000ಕ್ಕೆ ಏರಿಕೆಯಾಗಿದೆ. ಅಲ್ಲದೇ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಕುಟುಂಬಗಳ ಮೇಲೆ ಆರ್ಥಿಕ ಒತ್ತಡ ಬೀಳುತ್ತಿದೆ. ಆದರೆ ಇಂಧನ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಿದಾಗೆಲ್ಲಾ ಬಿಜೆಪಿ ಸರ್ಕಾರವು ಕಚ್ಚಾ ತೈಲದ ಅಂತಾರಾಷ್ಟ್ರೀಯ ಮಾರುಕಟ್ಟೆ ದರಗಳನ್ನು ತೋರಿಸಿದೆ. ಈಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗಿದ್ದರೂ ಏಕೆ ಕಡಿತಗೊಳಿಸಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.

    ನವೆಂಬರ್ 1 ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 115 ರೂ. ಇಳಿಕೆಯಾಗಿತ್ತು. ಇದನ್ನೂ ಓದಿ: ಹೊಸ ವರ್ಷಾಚರಣೆ ನಡುವೆ ಮೈಮರೆತ ಪ್ರೇಮಿಗಳು – ರಸ್ತೆ ಬ್ಲಾಕ್‍ಮಾಡಿ ನೋಡ್ಕೊಂಡು ನಿಂತಿದ್ದವರ ಮೇಲೆ ಲಾಠಿಚಾರ್ಜ್

    Live Tv
    [brid partner=56869869 player=32851 video=960834 autoplay=true]

  • ಬರಲಿದೆ ರಿಮೋಟ್ ವೋಟಿಂಗ್ ಮೆಷಿನ್ – ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಮಾಸ್ಟರ್ ಪ್ಲ್ಯಾನ್

    ಬರಲಿದೆ ರಿಮೋಟ್ ವೋಟಿಂಗ್ ಮೆಷಿನ್ – ಮತದಾನ ಪ್ರಮಾಣ ಹೆಚ್ಚಿಸಲು ಆಯೋಗ ಮಾಸ್ಟರ್ ಪ್ಲ್ಯಾನ್

    ನವದೆಹಲಿ: ಚುನಾವಣೆಗಳಲ್ಲಿ (Election) ದೇಶಾದ್ಯಂತ ವಯಸ್ಕರ ಮೂರನೇ ಒಂದು ಭಾಗಷ್ಟು ಮತದಾನದಲ್ಲಿ ಕೊರತೆಯಾಗುತ್ತಿದೆ. ಅಲ್ಲದೇ ಕೆಲಸಗಳಿಗಾಗಿ ವಲಸೆ ಹೋಗಿರುವ ಎಷ್ಟೋ ಜನರು ರಜೆಯ ಕೊರತೆಯ ಕಾರಣ ಮತದಾನ ಮಾಡೋದನ್ನೇ ತಪ್ಪಿಸುತ್ತಿದ್ದಾರೆ. ಆದ್ದರಿಂದ ಬರುವ ಚುನಾವಣೆಗಳಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಭಾರತೀಯ ಚುನಾವಣಾ ಆಯೋಗ (Election Commission) ಮಾಸ್ಟರ್ ಪ್ಲ್ಯಾನ್ ಮಾಡಿದೆ.

    ದೂರದ ಪ್ರದೇಶಗಳಲ್ಲಿರುವ ಜನರು ತಾವಿದ್ದ ಸ್ಥಳದಿಂದಲೇ ಮತ ಚಲಾಯಿಸಲು ಅನುಕೂಲ ಮಾಡಿಕೊಡುವಂತೆ ಹೊಸ ರೀತಿಯ ಎಲೆಕ್ಟ್ರಾನಿಕ್ ಮತದಾನ ಯಂತ್ರ (EVM) ಅನುಷ್ಠಾನಕ್ಕೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಚರ್ಚೆ ನಡೆಸಲು ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದೆ. ಸುಮಾರು 72 ಕ್ಷೇತ್ರಗಳಲ್ಲಿ ಮತದಾನ ಸಂಗ್ರಹ ಮಾಡಲು ಈ ಮಿಷಿನ್‌ನಲ್ಲಿ ಪ್ರೋಗ್ರಾಮ್ ಮಾಡಬಹುದಾಗಿದೆ. ಇದರಿಂದ ದೂರದಲ್ಲಿರುವ ವ್ಯಕ್ತಿಗಳಿಗೆ ಮತ ಚಲಾಯಿಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ.

    ರಿಮೋಟ್ ಮತದಾನದ (Remote Voting Machine) ಪರಿಕಲ್ಪನೆಯ ಬಗ್ಗೆ ಅರಿತುಕೊಳ್ಳಲು ತೆಗೆದುಕೊಳ್ಳಬೇಕಾದ ಕಾನೂನು ಹಾಗೂ ತಾಂತ್ರಿಕ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ಟಿಪ್ಪಣಿ ಮಾಡಲಿದೆ. ಇದನ್ನೂ ಓದಿ: ಗ್ಯಾಂಬಿಯಾ ಬಳಿಕ ಈಗ ಉಜ್ಬೇಕಿಸ್ತಾನದಿಂದ ಆರೋಪ – 18 ಮಕ್ಕಳ ಸಾವಿಗೆ ಭಾರತದ ಸಿರಪ್ ಕಾರಣ

    2019ರ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.67.4 ಆಗಿತ್ತು. ಆದ್ರೆ ಈ ಚುನಾವಣೆಯಲ್ಲಿ 30 ಕೋಟಿಗೂ ಅಧಿಕ ಮಂದಿ ಮತ ಚಲಾಯಿಸಿರಲಿಲ್ಲ ಎಂಬ ಅಂಶವನ್ನು ಚುನಾವಣಾ ಆಯೋಗ ಮನಗಂಡಿತು. ಆಂತರಿಕ ವಲಸೆ ಸೇರಿದಂತೆ ನಾನಾ ಕಾರಣದಿಂದಾಗಿ ಜನರು ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ ಎಂದೂ ಕಳವಳ ವ್ಯಕ್ತಪಡಿಸಿತ್ತು. ಆದ್ದರಿಂದ ಚುನಾವಣಾ ಆಯೋಗ ರಿಮೋಟ್ ವೋಟಿಂಗ್ ಮಿಷಿನ್ ಅನ್ನು ಅನುಷ್ಠಾನಕ್ಕೆ ತರಲು ಪ್ಲ್ಯಾನ್‌ ಮಾಡಿದೆ. ಇದನ್ನೂ ಓದಿ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿ ಹಲವರಿಗೆ T20 ಯಿಂದ ಬ್ರೇಕ್?

    Live Tv
    [brid partner=56869869 player=32851 video=960834 autoplay=true]

  • ಚೀನಾ ಗಡಿ ಸಂಘರ್ಷ – ಮೊಬೈಲ್ ಸಂಪರ್ಕ ಸುಧಾರಣೆಗೆ ತವಾಂಗ್‌ನಲ್ಲಿ 22 ಟವರ್

    ಚೀನಾ ಗಡಿ ಸಂಘರ್ಷ – ಮೊಬೈಲ್ ಸಂಪರ್ಕ ಸುಧಾರಣೆಗೆ ತವಾಂಗ್‌ನಲ್ಲಿ 22 ಟವರ್

    ಇಟಾನಗರ: ಭಾರತ-ಚೀನಾ (India – China) ಬೆನ್ನಲ್ಲೇ ಅರುಣಾಚಲ ಪ್ರದೇಶದ (Arunachal Pradesh) ತವಾಂಗ್ ಜಿಲ್ಲೆಯ ಚೀನಾ ಗಡಿರೇಖೆ (LAC) ಬಳಿ ಉತ್ತಮ ಸಂಪರ್ಕಕ್ಕಾಗಿ 22 ಮೊಬೈಲ್ ಟವರ್‌ಗಳನ್ನು (Mobile Towers) ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

    ಈ ಕುರಿತು ಮಾತನಾಡಿದ ತವಾಂಗ್ ಜಿಲ್ಲಾಧಿಕಾರಿ ಕೆಸಾಂಗ್ ಗ್ನುರುಪ್ ದಾಮೊ, `ಈಗಿರುವ ಟವರ್‌ಗಳು ನಿರೀಕ್ಷಿತ ಸೇವೆ ನೀಡುತ್ತಿಲ್ಲ. ರಕ್ಷಣಾ ಪಡೆ ಮಾತ್ರವಲ್ಲದೇ ನಾಗರಿಕರಿಗೂ ಇದರಿಂದ ತೊಂದರೆಯುಂಟಾಗುತ್ತಿದೆ. ಹಾಗಾಗಿ ಗಡಿ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕವನ್ನು ಸುಧಾರಿಸಲು 22 ಟವರ್‌ಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಒಟ್ಟು 43 ಟವರ್‌ಗಳ ಸ್ಥಾಪನೆಗೆ ಬೇಡಿಕೆ ಸಲ್ಲಿಸಲಾಗಿತ್ತು. ಈ ಪೈಕಿ ಕೇಂದ್ರ ಸರ್ಕಾರ 22 ಟವರ್ ಸ್ಥಾಪಿಸಲು ಅನುಮತಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಅಫ್ಘಾನ್‌ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೂ ಅವಕಾಶವಿಲ್ಲ

    ಚುನಾ, ಯಾಂಗ್‌ಟ್ಸೆ, ದಮ್‌ಟೆಂಗ್ ಬುಮ್ಲಾ, ಕ್ಲೆಮ್ಟಾ, ವೈ ಜಂಕ್ಷನ್, ಟಿ ಗೊಂಪಾ ಪ್ರದೇಶ, ಲುಂಪೊ, ಜೆಮಿತಾಂಗ್ ಗಡಿ ಪ್ರದೇಶಗಳಲ್ಲಿ ಏರ್‌ಟೇಲ್ ಹಾಗೂ ಬಿಎಸ್‌ಎನ್‌ಎಲ್ ಸಂಸ್ಥೆಗಳಿಗೆ ಟವರ್ ನಿರ್ಮಾಣ ಮಾಡುವ ಜವಾಬ್ದಾರಿ ನೀಡಿದೆ. ಈ ಪೈಕಿ ಬಿಎಸ್‌ಎನ್‌ಎಲ್ (BSNL) 18 ಟವರ್ ಹಾಗೂ ಏರ್‌ಟೆಲ್ (Airtel) 4 ಟವರ್‌ಗಳನ್ನು ನಿರ್ಮಾಣ ಮಾಡಲಿದೆ ಎಂದು ದಾಮೊ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್‌ ಸುನಾಮಿಗೆ ಕಾರಣ ಏನು?

    Live Tv

    [brid partner=56869869 player=32851 video=960834 autoplay=true]

  • ಕೊರೊನಾ ಆರ್ಭಟಕ್ಕೆ ಮತ್ತೆ ನಲುಗಿದ ಚೀನಾ – ಆಸ್ಪತ್ರೆಗಳೆಲ್ಲಾ ಫುಲ್

    ಕೊರೊನಾ ಆರ್ಭಟಕ್ಕೆ ಮತ್ತೆ ನಲುಗಿದ ಚೀನಾ – ಆಸ್ಪತ್ರೆಗಳೆಲ್ಲಾ ಫುಲ್

    ನವದೆಹಲಿ/ಬೀಜಿಂಗ್: ಕೋವಿಡ್ ವೈರಸ್ (Corona Virus) ಸೃಷ್ಟಿಕರ್ತ ಚೀನಾ (China) ದೇಶವೀಗ ಮತ್ತೆ ವೈರಸ್ ಅಟ್ಟಹಾಸಕ್ಕೆ ತತ್ತರಿಸಿದೆ. ನಿತ್ಯವೂ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಕರಣಗಳು ವರದಿ ಆಗ್ತಿದ್ದು, ಆಸ್ಪತ್ರೆಗಳೆಲ್ಲಾ (Hospitals) ಹೌಸ್‌ಫುಲ್ ಆಗಿಬಿಟ್ಟಿವೆ.

    ಲಕ್ಷಾಂತರ ಮಂದಿ ಸೋಂಕಿನಿಂದ ನಲುಗ್ತಿದ್ದಾರೆ. ನಿನ್ನೆ ಬೀಜಿಂಗ್‌ನಲ್ಲಿ ಕೋವಿಡ್‌ಗೆ ಇಬ್ಬರು ಬಲಿ ಆಗಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಒಂದು ವಾರದ ಅಂತರದಲ್ಲಿ ಬೀಜಿಂಗ್‌ನಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 2,700ಕ್ಕಿಂತಲೂ ಹೆಚ್ಚಾಗಿದೆ. ಇದನ್ನೂ ಓದಿ: ಬಿಜೆಪಿಯನ್ನು ನಾಯಿ, ಇಲಿ ಎಂದು ಟೀಕಿಸಿದ ಖರ್ಗೆ ಜೊತೆ ಊಟ ಮಾಡಿದ ಮೋದಿ

    ಸ್ಥಳೀಯ ಮಾಧ್ಯಮಗಳ ಪ್ರಕಾರ, ಬೀಜಿಂಗ್‌ನ ಸ್ಮಶಾನಗಳೆಲ್ಲ ಕೋವಿಡ್ ಶವಗಳಿಂದ ತುಂಬಿಹೋಗಿವೆ. ಪ್ರತಿದಿನ ಏನಿಲ್ಲ ಅಂದ್ರೂ ಒಂದೊಂದು ಸ್ಮಶಾನಕ್ಕೆ ಕನಿಷ್ಠ 200 ಶವ ಬರ್ತಿವೆ. ಇದು ಆರಂಭ ಮಾತ್ರ. ಮುಂದಿನ ಮೂರು ತಿಂಗಳಲ್ಲಿ ಚೀನಾದ ಶೇ.60ರಷ್ಟು ಜನರನ್ನು ಕೋವಿಡ್ ಆವರಿಸಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಾಬರ್ ದೊಡ್ಡ ಸೊನ್ನೆ; ಕೊಹ್ಲಿಯೊಂದಿಗೆ ಹೋಲಿಕೆ ಮಾಡೋದು ನಿಲ್ಸಿ – ಪಾಕ್ ಮಾಜಿ ಕ್ರಿಕೆಟಿಗ ಆಕ್ರೋಶ

    ಚೀನಾ ಸರ್ಕಾರ ಝೀರೋ ಕೋವಿಡ್ ಪಾಲಿಸಿಯನ್ನು ಕೈಬಿಟ್ಟ ನಂತರ ಚೀನಾಗೆ ಈ ಸ್ಥಿತಿ ಬಂದೊದಗಿದೆ. ಚೀನಾ, ಜಪಾನ್, ಅಮೆರಿಕಾ ಸೇರಿ ಹಲವು ದೇಶಗಳಲ್ಲಿ ಕೋವಿಡ್ ಕೇಕೆ ಹಾಕುತ್ತಿರುವ ಕಾರಣ, ಭಾರತ ಸರ್ಕಾರ (Government Of India) ಅಲರ್ಟ್ ಆಗಿದೆ. ನಿತ್ಯ ವರದಿ ಆಗೋ ಪಾಸಿಟಿವ್ ಪ್ರಕರಣವನ್ನು ಜಿನೋಮ್ (Genome Sequencing) ಟೆಸ್ಟ್‌ ಕಳಿಸಬೇಕೆಂದು ರಾಜ್ಯಗಳಿಗೆ ಆದೇಶ ನೀಡಿದೆ. ಸದ್ಯಕ್ಕೆ ನಮ್ಮ ದೇಶದಲ್ಲಿ ವಾರಕ್ಕೆ 1,200 ಕೇಸ್‌ಗಳು ದಾಖಲಾಗುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • 2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ – BJP ಸಂಸದ ಸುಶೀಲ್ ಮೋದಿ ಆಗ್ರಹ

    2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ – BJP ಸಂಸದ ಸುಶೀಲ್ ಮೋದಿ ಆಗ್ರಹ

    ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು (2000 Indian Currency) ಹಿಂಪಡೆಯುವಂತೆ ಬಿಜೆಪಿ (BJP) ಸಂಸದ ಸುಶೀಲ್ ಮೋದಿ (Sushil Modi) ಸಂಸತ್ತಿನಲ್ಲಿ ಆಗ್ರಹಿಸಿದ್ದರೆ.

    ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2000 ರೂ. ಮುಖಬೆಲೆಯ ನೋಟುಗಳು ದೇಶದ ಬಹುತೇಕ ಎಟಿಎಂಗಳಿಂದ ಕಣ್ಮರೆಯಾಗಿವೆ. ಸದ್ಯದಲ್ಲೇ ಅವು ಚಲಾವಣೆ ಕಳೆದುಕೊಳ್ಳಲಿವೆ ಎಂಬ ವದಂತಿಯೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

    ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಳೆದ 3 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸೋದನ್ನೇ ನಿಲ್ಲಿಸಿದೆ. ಈ ನೋಟುಗಳು ಭಯೋತ್ಪಾದಕ ನಿಧಿ (Terror Funding), ಮಾದಕವಸ್ತು ಕಳ್ಳಸಾಗಣೆ ಮತ್ತು ಕಪ್ಪುಹಣಕ್ಕೆ ಬಳಕೆಯಾಗುತ್ತಿದೆ ಎಂಬ ಮಾಹಿತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 

    ಯುಎಸ್ (US), ಚೀನಾ, ಜರ್ಮನಿ, ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಆರ್ಥಿಕತೆ ನೋಡಿದ್ರೆ, ಅವರ ಬಳಿ 100ಕ್ಕಿಂತ ಹೆಚ್ಚಿನ ಮುಖಬೆಲೆಯ ಕರೆನ್ಸಿಗಳಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಯೋಚಿಸಿ 2000 ರೂ. ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ನಿಷೇಧಿಸಬೇಕು. ಕಪ್ಪುಹಣಕ್ಕೆ ಕಡಿವಾಣ ಹಾಕಲು ಈ ಮುಖಬೆಲೆ ನೋಟು ಚಲಾವಣೆಯನ್ನು ನಿಲ್ಲಿಸಬೇಕು. ನೋಟು ವಿನಿಮಯ ಮಾಡಿಕೊಳ್ಳಲು ಜನರಿಗೆ 2 ವರ್ಷ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]