Tag: Government of Karnataka

  • ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

    ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

    ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಇನ್ನು ವಿಶೇಷ ಮೂಲಭೂತ ಸೌಕರ್ಯ ಬಂಡವಾಳ ಬೆಂಬಲ ಯೋಜನೆ ಅಡಿಯೂ ಹಣ ಮಂಜೂರು ಮಾಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರಿಕರಣ ಕಾಮಗಾರಿಗಳನ್ನು ಕೈಗೊಳ್ಳಲು 1,241 ಕೋಟಿ ಅಂದಾಜು ಮೊತ್ತದಲ್ಲಿ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.  ಇದನ್ನೂ ಓದಿ: ಕಿಡ್ನಿ ರೋಗಿಗಳ ನೆರವಿಗಾಗಿ ʻಬಿರಿಯಾನಿ ಚಾಲೆಂಜ್ʼ – ಕೊಡಗಿನ ಯುವಕರ ತಂಡದಿಂದ ವಿಭಿನ್ನ ಆಲೋಚನೆ!

    ಸಂಪುಟ ಸಭೆಯಲ್ಲಿ ಕೆಜೆ ಜಾರ್ಜ್‌, ಹೆಚ್.ಸಿ ಮಹದೇವಪ್ಪ, ಎಂ.ಬಿ ಪಾಟೀಲ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

  • 52 ಉಪಜಾತಿಗಳನ್ನ ತೆಗೆದಿದ್ದು ಬೇಸರ ಆಯ್ತು – ಕ್ಯಾಥೋಲಿಕ್ ಧರ್ಮಾಧ್ಯಕ್ಷ ಪೀಟರ್ ರಿಚರ್ಡ್

    52 ಉಪಜಾತಿಗಳನ್ನ ತೆಗೆದಿದ್ದು ಬೇಸರ ಆಯ್ತು – ಕ್ಯಾಥೋಲಿಕ್ ಧರ್ಮಾಧ್ಯಕ್ಷ ಪೀಟರ್ ರಿಚರ್ಡ್

    – ಕ್ರೈಸ್ತರ ಜನಸಂಖ್ಯೆ 9 ಲಕ್ಷಕ್ಕೂ ಅಧಿಕ ಇದೆ
    – ಕ್ರೈಸ್ತರನ್ನ 2C ಗೆ ಸೇರಿಸಲು ಆಗ್ರಹ

    ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಜೋಡಿತ 52 ಉಪಜಾತಿಗಳನ್ನ (Catholic Dean) ಕೈಬಿಟ್ಟಿರುವುದಕ್ಕೆ ಕ್ಯಾಥೋಲಿಕ್ ಧರ್ಮಾಧ್ಯಕ್ಷ (Catholic Pope) ಪೀಟರ್ ರಿಚರ್ಡ್ ಹಾಗೂ ಸಹಾಯಕ ಧರ್ಮಾಧ್ಯಕ್ಷ ಸತೀಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

    ʻಪಬ್ಲಿಕ್ ಟಿವಿʼಗೆ (Public TV) ಜೊತೆಗೆ ಮಾತನಾಡುತ್ತಾ, ಸಮೀಕ್ಷೆ ಪಟ್ಟಿಯಲ್ಲಿ 52 ಉಪ ಜಾತಿಗಳು ಇರೋದು ನೋಡಿ ಖುಷಿ ಆಗಿತ್ತು. ಆಮೇಲೆ ತೆಗೆದಿದ್ದು ಬೇಸರ ಆಯ್ತು. 52 ಉಪಜಾತಿಗಳನ್ನ ನಾವು ಗುರುತಿಸಿಲ್ಲ ಸರ್ಕಾರ ಗುರುತಿಸಿದ್ದು. ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧ ಆಗಿರುತ್ತೇವೆ. ಅಲ್ಲದೇ ನಾವು ಮತಾಂತರ (Conversion) ಮಾಡಲ್ಲ, ರಾಜಕಾರಣಿಗಳು ಸುಮ್ಮನೆ ಆರೋಪ ಮಾಡಬಾರದು. ಸಮೀಕ್ಷೆಯಲ್ಲಿ ಜನ ನಿಮಗೆ ಅನಿಸಿದ್ದನ್ನ ಬರೆಸಿ ಅಂತಾ ಕರೆ ಕೊಟ್ಟಿದ್ದಾರೆ.

    ಇದೇ ವೇಳೆ ಕ್ರೈಸ್ತ ಧರ್ಮಗುರುಗಳು ಮೀಸಲಾತಿ ಬೇಡಿಕೆ ಸಹ ಇಟ್ಟಿದ್ದಾರೆ. ರಾಜ್ಯದಲ್ಲಿ 9.45 ಲಕ್ಷ ಕ್ರೈಸ್ತರಿದ್ದಾರೆ ಅಂತ ಹೇಳ್ತಿದ್ದಾರೆ. ಆದ್ರೆ ನಮ್ಮ ಅಂದಾಜಿನಲ್ಲಿ ಅದಕ್ಕಿಂತಲೂ ಜಾಸ್ತಿ ಇದ್ದಾರೆ. ನಾವು ಈಗ 3C ಯಲ್ಲಿ ಇದ್ದೇವೆ. ಸಮೀಕ್ಷೆ ಮುಗಿದ ಬಳಿಕ 2C ಸೇರ್ಪಡೆ ಮಾಡಬೇಕು ಅಂತ ಒತ್ತಾಯ ಮಾಡ್ತೆವೆ ಎಂದಿದ್ದಾರೆ.

    ಏಕೆಂದ್ರೆ ನಮ್ಮಲ್ಲೂ ಬಡವರು ಇದ್ದಾರೆ. 2C ಮೀಸಲಾತಿ ಕೊಡಿ ಅಂತ ಧರ್ಮಾಧ್ಯಕ್ಷರು ಸಿಎಂ ಒತ್ತಾಯ ಮಾಡೋದಾಗಿ ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ.

  • ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಲು ಒಪ್ಪದ ರಾಜ್ಯ ಸರ್ಕಾರ

    ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಲು ಒಪ್ಪದ ರಾಜ್ಯ ಸರ್ಕಾರ

    ಬೆಂಗಳೂರು: 1961ರ ಕರ್ನಾಟಕ ಅಂಗಡಿ ಮತ್ತು ಸ್ಥಾಪನೆ ಕಾಯ್ದೆಗೆ ತಿದ್ದುಪಡಿ ತರುವ ಹಾಗೂ ಕಾರ್ಮಿಕರ (Workers) ಕೆಲಸದ ಅವಧಿಯನ್ನ 9 ಗಂಟೆಯಿಂದ 10 ಗಂಟೆಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ಮುಂದಾಗಿದೆ.

    ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಕೇಂದ್ರ ಕಾರ್ಮಿಕ ಇಲಾಖೆಯ (Centger Labour Department) ಪ್ರಸ್ತಾವನೆಯನ್ನ ರಾಜ್ಯ ಸರ್ಕಾರ ತಿರಸ್ಕಾರ ಮಾಡಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಿನದಲ್ಲಿ 10 ಗಂಟೆ ಕೆಲಸಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡದ ಹಿನ್ನೆಲೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಪ್ರಸ್ತಾವನೆ ತಿರಸ್ಕಾರ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

    ಪ್ರಸ್ತಾವನೆ ತಿರಸ್ಕರಿಸಲು ಕಾರಣ ಏನು?
    ಕೇಂದ್ರ ಕಾರ್ಮಿಕ ಇಲಾಖೆ ಎಲ್ಲಾ ರಾಜ್ಯಗಳಿಗೂ ಈ ಪ್ರಸ್ತಾವನೆಯನ್ನ ಕಳುಹಿಸಿದೆ. ಆದ್ರೆ ಕರ್ನಾಟಕ ಎರಡು ಕಾರಣಗಳಿಗಾಗಿ ಪ್ರಸ್ತಾವನೆಯನ್ನ ತಿರಸ್ಕರಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರವು ಸಮಾನ ನೀತಿ ಅವಕಾಶವನ್ನು ಹೊಂದಿದೆ. ಈಗಾಗಲೇ ಕಾರ್ಮಿಕರು ದಿನಕ್ಕೆ 9 ಗಂಟೆ ಮತ್ತು ವಾರದಲ್ಲಿ 48 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಜೊತೆಗೆ ಹೆಚ್ಚುವರಿ ಅಗತ್ಯಕ್ಕನುಗುಣವಾಗಿ ಹೆಚ್ಚುವರಿ ಅವಧಿ ಕಾರ್ಯದ ನಿಬಂಧನೆ ಕೂಡ ಇದೆ. ನಿತ್ಯ 10 ಗಂಟೆ ಕೆಲಸಕ್ಕೆ ಅವಧಿಗೆ ಈಗಾಗಲೇ ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧ ಇದೆ. ಹೀಗಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

    ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಕೇಂದ್ರದ ಪ್ರಸ್ತಾವನೆ ಬಂದ ನಂತರ ರಾಜ್ಯವು ತಿದ್ದುಪಡಿಯನ್ನ ತಿರಸ್ಕರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಸಂಪುಟ ಸಭೆಯಲ್ಲಿ ಸಿಎಂ ಹಾಗೂ ಸಚಿವರು ಪ್ರಸ್ತಾವನೆಯನ್ನ ವಿರೋಧಿಸಿದ್ದಾರೆ. ಆದ್ರೆ ಇನ್ನೂ ಅಧಿಕೃತವಾಗಿ ಕೇಂದ್ರಕ್ಕೆ ತಿಳಿಸಿಲ್ಲ. ಸಮಗ್ರ ಚರ್ಚೆ ಬಳಿಕ ಈ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಮಿಕ ಆಯುಕ್ತರು, ಈ ವಿಷಯದ ಕುರಿತು ಅಂತಿಮ ವರದಿಯನ್ನ ಕಾರ್ಮಿಕ ಸಚಿವರೊಂದಿಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

  • ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು: ಗ್ರೇಟರ್‌ ಬೆಂಗಳೂರು (Greater Bengaluru) ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಕಚೇರಿಯನ್ನಾಗಿ ಮಾರ್ಪಾಡು ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

    5 ನಗರ ಪಾಲಿಕೆಗಳ ಹೆಸರು
    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
    2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
    3. ಬೆಂಗಳೂರು ಉತ್ತರ ನಗರ ಪಾಲಿಕೆ
    4. ಬೆಂಗಳೂರು ಪೂರ್ವ ನಗರ ಪಾಲಿಕೆ
    5. ಬೆಂಗಳೂರು ಕೇಂದ್ರ ನಗರ ಪಾಲಿಕೆ

    ಆಗಸ್ಟ್‌ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್‌ ಪಾಸ್‌ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಪಾಲಿಕೆಗಳ ಬಗ್ಗೆ ಆಕ್ಷೇಪಣೆ ಇದ್ದರೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿದೆ. ಇದನ್ನೂ ಓದಿ: 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

  • ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು: ಮಧುಗಿರಿ ಪಟ್ಟಣದ ರಸ್ತೆ (Madhugiri Town Road) ಮತ್ತು ಚರಂಡಿ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 25 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.

    ಪಟ್ಟಣದ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತುಮಕೂರು ಗೇಟ್‌ನಿಂದ ಶಿರಾ ರಸ್ತೆವರೆಗೆ, ಗೌರಿಬಿದನೂರು ಬೈಪಾಸ್‌ನಿಂದ ಸಿದ್ದಾಪುರ ಗೇಟ್‌ವರೆಗೆ ಡಬಲ್ ರಸ್ತೆ ಹಾಗೂ ಪಟ್ಟಣದ ಎಲ್ಲಾ ವಾರ್ಡ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಮಾಡಿಸಲಾಗುವುದು ಎಂದರು.

    ಪಟ್ಟಣದ ಪ್ರಮುಖ ವೃತ್ತಗಳನ್ನು ವಿನೂತನವಾಗಿ ಅಭಿವೃದ್ಧಿ ಪಡಿಸಲಾಗುವುದು. ಹೈಟೆಕ್ ತಂಗುದಾಣ ನಿರ್ಮಾಣ, ವೈಜ್ಞಾನಿಕ ಹಂಪ್‌ ಹಾಗೂ ಪ್ರಮುಖ ರಸ್ತೆಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

    ರಾಜೀವ್ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರಾಗಿದೆ. ಈ ಅನುದಾನ‌ದಲ್ಲಿ ಕ್ರೀಡಾಪಟುಗಳು ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗುವುದು ಹೇಳಿದರು. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?

  • ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ಮೈಕ್ರೋ ಫೈನಾನ್ಸ್ ಕಿರುಕುಳ – 99 ರೂ. ಬಾಕಿ ಇರೋದಕ್ಕೆ 58,000 ಕಟ್ಟುವಂತೆ ನೋಟೀಸ್

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಕಿರುಕುಳ ತಡೆಗಟ್ಟಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯಪಾಲರ ಅಂಕಿತಕ್ಕೆ ಸುಗ್ರೀವಾಜ್ಞೆ ಕಳುಹಿಸಿದೆ. ಈ ನಡುವೆಯೂ ಸಾರ್ವಜನಿಕರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮುಂದುವರಿದೆ. ಅದನ್ನೋದಕ್ಕೆ ದಾವಣಗೆರೆಯ (Davangere) ಈ ಪ್ರಕರಣ ಸಾಕ್ಷಿಯಾಗಿದೆ.

    ಹೌದು. ಕೇವಲ 99 ರೂ. ಬಾಕಿ ಇರೋದಕ್ಕೆ 58,000 ರೂ. ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆ ನಗರದ ಚಂದ್ರಶೇಖರ್‌ಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

    ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂ. ಸಾಲ ಮಾಡಿದ್ದರು. ಪ್ರತಿ ತಿಂಗಳು ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗೌತಮ್‌ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ

    ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದ್ರೆ 58,000 ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ. ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಚಂದ್ರಶೇಖರ್‌ಗೆ ಕಿರುಕುಳ ನೀಡುತ್ತಿದ್ದಾರೆ. ಚಂದ್ರಶೇಖರ್ ಕಿರುಕುಳ ತಾಳಲಾರದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.

    ಆನ್‌ಲೈನ್‌ನಲ್ಲಿ ಸಾಲ ಪಡೆದರು ಸಹ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಲ್ಲುತ್ತಿಲ್ಲ. ಎಲ್ಲಾ ಹಣವನ್ನು ಬಡ್ಡಿ ಸಮೇತ ಕಟ್ಟಿದರೂ ಕೂಡ ಇನ್ನೂ ಹಣ ಕಟ್ಟಿ ನಂತರ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡುತ್ತೇವೆ ಎಂದು ಸತಾಯಿಸುತ್ತಿದ್ದಾರೆ ಎಂದು ಅಲವತ್ತುಕೊಂಡಿದ್ದಾರೆ. ಜೊತೆಗೆ ದೂರು ನೀಡುವುದಾಗಿಗೂ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾವಿಯಲ್ಲಿ ಪತ್ತೆಯಾದ ಬುಲೆಟ್ ಬೈಕ್ ಸುತ್ತ ಅನುಮಾನದ ಹುತ್ತ!

  • ಪೊಲೀಸರು ಮುಕ್ತ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ

    ಪೊಲೀಸರು ಮುಕ್ತ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ: ಸಿಎಂ

    – 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗ್ತಿವೆ
    – 10,000 ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2,000 ಕೋಟಿ

    ಬೆಂಗಳೂರು: ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದಿನ ವರ್ಷ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2 ಸಾವಿರ ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ (New Police Stations) ನಿರ್ಮಾಣ ಆಗುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌರವದಿಂದ ಬಾಳಿ ಬದುಕೋಣ, ದಾಳಿ ನಿಲ್ಲಿಸಿ – ಪಾಕಿಸ್ತಾನಕ್ಕೆ ಫಾರೂಕ್‌ ಅಬ್ದುಲ್ಲಾ ಮನವಿ 

    ಪೊಲೀಸರ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಅವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಸಿಎಂ ಸ್ಮರಿಸಿದ್ದಾರೆ.

    ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು.ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನ ಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ. ಅಪರಾಧ ತಡೆಯಲು 6,000 ಸಿಸಿ ಕ್ಯಾಮರಾಗಳು, 260ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಶಿಮ್ಲಾದಲ್ಲಿ ಅಕ್ರಮ ಮಸೀದಿ ತೆರವು ಕಾರ್ಯ ಆರಂಭ – 5 ಮಹಡಿಯ ಕಟ್ಟಡದಲ್ಲಿ 3 ಮಹಡಿ ಅಕ್ರಮ ನಿರ್ಮಾಣ 

  • ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

    ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ಆರೋಪ – ಲೋಕಾಯುಕ್ತಕ್ಕೆ ದೂರು

    ಧಾರವಾಡ: ಒಂದೆಡೆ ಮುಡಾ ಹಗರಣದ (MUDA Scam) ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿದೆ. ಇದರ ಮಧ್ಯೆ ಧಾರವಾಡದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ (Guarantee convention) ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ (Lokayukta Police) ದೂರು ಸಲ್ಲಿಕೆಯಾಗಿದೆ.

    ರಾಜ್ಯ ಕಾಂಗ್ರೆಸ್ ಸರ್ಕಾರ (Government of Karnataka) ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ (Guarantee Scheme) ಜಾರಿಗೆ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ ಜಿಲ್ಲೆಯಲ್ಲೂ ನಡೆದಿದ್ದವು. ಆದರೆ, ಆ ಸಮಾವೇಶಗಳಲ್ಲಿ ಗೋಲ್ಮಾಲ್ ನಡೆದಿದ್ದು, ಅದರ ಸಂಪೂರ್ಣ ತನಿಖೆ ನಡೆಸುವಂತೆ ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ (RTI Worker) ಮಾಬುಸಾಬ್ ಯರಗುಪ್ಪಿ ಇದೀಗ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

    ಕಳೆದ ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 5 ಗ್ಯಾರಂಟಿ ಸಮಾವೇಶಗಳು ನಡೆದಿದ್ದವು. ಒಂದು ಸಮಾವೇಶದಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದ ಸಮಾವೇಶದ ಲೆಕ್ಕಪತ್ರಗಳೇ ಏರುಪೇರಾಗಿವೆ ಎಂದು ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಅವರು ಪಡೆದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ನವಲಗುಂದದ ಸಮಾವೇಶದಲ್ಲಿ ಸಿಎಂ ಭಾಗಿಯಾಗಿದ್ದರು. ಈ ಸಮಾವೇಶದ ದಿನಾಂಕ ಮತ್ತು ಖರ್ಚು ವೆಚ್ಚದ ದಾಖಲೆಗಳೇ ಏರುಪೇರಾಗಿವೆ. ಸಮಾವೇಶ ಮುಗಿದ ಬಳಿಕ ಊಟದ ಕೊಟೇಶನ್ ಪಡೆಯಲಾಗಿದೆ. ಕೊಟೇಶನ್ ಸಲ್ಲಿಕೆಗೂ ಮುನ್ನವೇ ಊಟ, ಉಪಾಹಾರ ಪೂರೈಕೆ ಮಾಡಲಾಗಿದೆ. ಕುಂದಗೋಳ ಸಮಾವೇಶದಲ್ಲಿನ ಊಟ, ಉಪಹಾರದ ಕೊಟೇಶನ್‌ಗೆ ಸಹಿಯೇ ಇಲ್ಲ. ಆದರೂ ಏಜೆನ್ಸಿಯೊಂದಕ್ಕೆ ಊಟ, ಉಪಹಾರದ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಿಕೊಟ್ಟಿತ್ತು. ಈ ಸಮಾವೇಶಗಳ ಬಹುತೇಕ ಲೆಕ್ಕಪತ್ರಗಳು ಸರಿಯಾಗಿಲ್ಲ ಎಂದು ಆರೋಪಿಸಿರುವ ಆರ್‌ಟಿಐ ಕಾರ್ಯಕರ್ತ, ಗ್ಯಾರಂಟಿ ಸಮಾವೇಶದ ಕಾರ್ಯಕ್ರಮ ನಿರ್ವಹಣಾ ಸಮಿತಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಈ ಸಮಿತಿ ಡಿಸಿ ದಿವ್ಯ ಪ್ರಭು, ಎಡಿಸಿ ಗೀತಾ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಪಿಡಬ್ಲುಡಿ ಎಇ ವಿಜಯಕುಮಾರ, ಪಾಲಿಕೆ ಲೆಕ್ಕಾಧಿಕಾರಿ ವಿಶ್ವನಾಥ ಅವರನ್ನೊಳಗೊಂಡಿದೆ. ಇವರ ಹೆಸರನ್ನೊಳಗೊಂಡು ಇದೀಗ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ನವಲಗುಂದದ ಸಮಾವೇಶದಲ್ಲಿ 87 ಲಕ್ಷ ರೂ., ಧಾರವಾಡ ಸಮಾವೇಶದಲ್ಲಿ 1.37 ಕೋಟಿ ರೂ., ಹುಬ್ಬಳ್ಳಿ ಸಮಾವೇಶದಲ್ಲಿ 1.24 ಕೋಟಿ ರೂ., ಕಲಘಟಗಿ ಸಮಾವೇಶದಲ್ಲಿ 57 ಲಕ್ಷ ರೂ. ಹಾಗೂ ಕುಂದಗೋಳ ಸಮಾವೇಶಕ್ಕೆ 54 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಇದರಲ್ಲಿ ವ್ಯತ್ಯಾಸವಿದೆ ಎಂದು ದೂರು ಸಲ್ಲಿಕೆಯಾಗಿದೆ. ಇದನ್ನೂ ಓದಿ: ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

  • ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌

    ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು – ಅನಗತ್ಯ ಸಿಬ್ಬಂದಿಗೆ ಗೇಟ್‌ಪಾಸ್‌ ಕೊಡಲು ಸರ್ಕಾರ ಪ್ಲ್ಯಾನ್!‌

    ಬೆಂಗಳೂರು: ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣಿಟ್ಟಿರುವ ಸರ್ಕಾರ (Government of Karnataka) ಹೊಸ ಸುಧಾರಣೆ ತರಲು ಯೋಜಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಅದಕ್ಕಾಗಿ ಸಿಎಂ, ಸಚಿವರ ಕಚೇರಿಯಲ್ಲಿ ಬೇಕಾಬಿಟ್ಟಿ ಸಿಬ್ಬಂದಿ ಇದ್ದರೆ ಅವರನ್ನ ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳುವ ಪ್ಲ್ಯಾನ್‌ ಮಾಡಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಅನಗತ್ಯವಾಗಿರುವ ಸಿಬ್ಬಂದಿಯ ಬಗ್ಗೆ ವರದಿ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಗಮಂಗಲ ಗಲಭೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ – ಚಿಕ್ಕಬಳ್ಳಾಪುರದಲ್ಲಿ ಗಣೇಶ ವಿಸರ್ಜನೆಗೆ 600 ಪೊಲೀಸರ ಭದ್ರತೆ

    ಸರ್ಕಾರದಲ್ಲಿ ಬಿಗಿ ಆಡಳಿತಕ್ಕೆ ಬಿಗ್ ಪ್ಲ್ಯಾನ್.. ಕಡತಗಳ ಸೋರಿಕೆಗೂ ಬ್ರೇಕ್ ಹಾಕುವ ತಂತ್ರಗಳಿಗೆ ಬ್ರೇಕ್‌ ಹಾಕುವ ಉದ್ದೇಶದಿಂದ ಮೊದಲು ಆಡಳಿತ ಬಿಗಿಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: Quad Summit | ಮೋದಿ ದ್ವಿಪಕ್ಷೀಯ ಮಾತುಕತೆ – MQ-9B ಡ್ರೋನ್ ಖರೀದಿ, ರಕ್ಷಣಾತ್ಮಕ ವಿಚಾರಗಳ ಕುರಿತು ಚರ್ಚೆ

    ಮುಡಾ ಪ್ರಕರಣದಲ್ಲಿ ಕಾನೂನು ಹೋರಾಟ, ರಾಜಕೀಯ ಹೋರಾಟ, ಅದರ ಪಾಡಿಗೆ ಅದು ನಡೆಯುತ್ತೆ. ಆದರೆ ಆಡಳಿತಯಂತ್ರ ಬಿಗಿಗೊಳಿಸಿ ಅನಗತ್ಯವಾಗಿರೋರಿಗೆ ಗೇಟ್ ಪಾಸ್ ಕೊಡಬೇಕೆಂಬ ಕಟ್ಟುನಿಟ್ಟಿನ ತೀರ್ಮಾನ ಸರ್ಕಾರ ಕೈಗೊಂಡಿದೆ. ಆದ್ದರಿಂದ ಸಿಎಂ, ಸಚಿವರ ಕಚೇರಿಯಲ್ಲಿ ಅನಗತ್ಯವಾಗಿರುವ ಅಧಿಕಾರಿ, ಸಿಬ್ಬಂದಿ ವರ್ಗದವರ ಮಾಹಿತಿ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಟಾಸ್ಕ್ ನೀಡಲಾಗಿದೆ ಎಂದು ಹೇಳಲಾಗಿದೆ.

    ಅಲ್ಲದೇ ಸರ್ಕಾರದ ಮಾಹಿತಿ ಸೋರಿಕೆ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಪ್ರತ್ಯೇಕ ವರದಿ ಕೊಡುವಂತೆ ಸರ್ಕಾರ ಕೇಳಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ 

  • Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಪ್ರಕರಣದಲ್ಲಿ (MUDA Scam Case) ಮೊದಲ ವಿಕೆಟ್‌ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಸಮಾನತುಗೊಳಿಸಿ ಸರ್ಕಾರ (Government Of Karnataka )ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

    ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

    ಸರ್ಕಾರದ ಆದೇಶದಲ್ಲಿ ಏನಿದೆ?
    KUDA ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ಇದನ್ನೂ ಓದಿ: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

    ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದ್ರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: Shivamogga | ಪ್ರೀತಿಸಲು ಹುಡುಗಿ ಸಿಗಲಿಲ್ಲ ಅಂತ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ!

    ಅಲ್ಲದೇ ದಿನೇಶ್‌ ಕುಮಾರ್‌ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌; ಬಾಲಿವುಡ್‌ನ ಕ್ಯೂಟ್‌ ಕಪಲ್‌ ಫುಲ್‌ ಶೈನ್‌

    ಸದರಿ ಅವರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.