ಬೆಂಗಳೂರು: ನಿನ್ನೆಯಷ್ಟೇ ಶಾಲೆ ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ಗೊತ್ತಾಗಿದೆ. ಅದರಲ್ಲೂ ಬೆಂಗಳೂರಿನ ಸರ್ಕಾರಿ ಶಾಲೆಯೊಂದರಲ್ಲಿ 231 ಮಕ್ಕಳಿಗೆ ಕಳೆದ 5 ವರ್ಷಗಳಿಂದಲೂ ಒಬ್ಬರೇ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.
ಬೆಂಗಳೂರಿನ ಮಹದೇವಪುರ ಕ್ಷೇತ್ರದ ಹಾಲನಾಯಕನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿವರೆಗೆ 231 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಕಳೆದ 5 ವರ್ಷಗಳಿಂದ ಒಬ್ಬರೇ ಶಿಕ್ಷಕರಿಂದ ಪಾಠ-ಪ್ರವಚನ ನಡೆಯುತ್ತಿದೆ. ಹಾಗಾಗಿ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಮತಾಂತರ ಕಾಯ್ದೆಗೆ ಕ್ರಿಶ್ಚಿಯನ್ ಸಮುದಾಯದವರು ಭಯ ಬೀಳೋದು ಯಾಕೆ: ಆರಗ ಜ್ಞಾನೇಂದ್ರ
ಕೆ.ಆರ್.ಪುರಂ ವ್ಯಾಪ್ತಿಗೆ ಬರುವ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹಲವು ಬಾರಿ ಅಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಿಕ್ಷಕರನ್ನು ನಿಯೋಜಿಸಿದ್ರೆ ಮಾತ್ರ ಶಾಲೆ ಪ್ರಾರಂಭಿಸಲು ಬಿಡ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು: ಕೆಲವು ಪುಂಡರು ಸರ್ಕಾರಿ ಶಾಲೆ ಬಾಗಿಲು ಮುರಿದು ಎಣ್ಣೆ ಪಾರ್ಟಿ ಮಾಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯ ಕರ್ನಾಟಕ ಪಬ್ಲಿಕ್ ಉರ್ದು ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಶಾಲೆ ಪುಂಡರು, ಕುಡುಕರ ತಾಣವಾಗಿದೆ. ನಿನ್ನೆ ರಾತ್ರಿ ಕೆಲವು ಪುಂಡರು ಶಾಲೆಯ ಬಾಗಿಲು ಮುರಿದು ಕೊಠಡಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ್ದಾರೆ. ಇದನ್ನೂ ಓದಿ: ಮಾನವನಿಗೆ ಹೆಚ್3ಎನ್8 ಹಕ್ಕಿಜ್ವರ – ಚೀನಾದಲ್ಲಿ ಮೊದಲ ಪ್ರಕರಣ ಪತ್ತೆ
ಈ ಉರ್ದು ಶಾಲೆಯೂ ಉಪ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದಲ್ಲಿಯೇ ಇದ್ರೂ ಈ ರೀತಿ ಘಟನೆ ನಡೆದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯೂ ಕುಡುಕರ ಅನೈತಿಕ ಚಟುವಟಿಕೆಗೆ ತಾಣವಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಬಿಸಿಯೂಟ ಸವಿದು ಮಕ್ಕಳೊಂದಿಗೆ ಶಾಲೆಯ ಬಗ್ಗೆ ಚರ್ಚೆ ಮಾಡುತ್ತಾ ತಮ್ಮ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾರೆ.
ನಗರದ ತಾಲೂಕಿನ ಕೊರ್ವಿಹಾಳ ಗ್ರಾಮಕ್ಕೆ ಭೇಟಿ ನೀಡಿದ್ದ ಎಸ್‍ಪಿ ನಿಖಿಲ್ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರೊಡನೆ ಚರ್ಚೆ ನಡೆಸಿ ಬಳಿಕ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ್ದಾರೆ. ನಂತರ ಮಕ್ಕಳೊಡನೆ ಬಿಸಿ ಊಟ ಸವಿದಿದ್ದಾರೆ. ಎಸ್‍ಪಿ ನಿಖಿಲ್ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ
ಈ ಹಿಂದೆ ಪ್ರೊಬೆಷನರಿ ಅಧಿಕಾರಿಯಾಗಿದ್ದಾಗಲೂ ಅವರು ಜಿಲ್ಲೆಯಲ್ಲಿ ಶಾಲೆಗಳಿಗೆ ಭೇಟಿ ನೀಡುತ್ತಿದ್ದರು. ಮಕ್ಕಳೊಂದಿಗೆ ಬಿಸಿಯೂಟ ಸವಿದು ಶಾಲೆಯ ಪರಸ್ಥಿತಿ ವಿಚಾರಣೆಗಳ ವಿಚಾರಣೆ ಮಾಡುತ್ತಿದ್ದರು. ಇದನ್ನೂ ಓದಿ: ಮುಸ್ಲಿಮರನ್ನ ಮದುವೆಯಾದ್ರೆ SSK ಸಮಾಜದಿಂದ ಬಹಿಷ್ಕರಿಸಿ: ನಾಗೇಶ್
-ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಶಾಲೆ ಆರಂಭ
ರಾಮನಗರ: ಸರ್ಕಾರದ ಪ್ರತೀ ಗ್ರಾಮ ಪಂಚಾಯತ್‍ಗೊಂದು ಮಾದರಿ ಪಬ್ಲಿಕ್ ಶಾಲೆ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಇಂದು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನದ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಅನಿವಾರ್ಯ ಅಗತ್ಯವಾಗಿದೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಒಟ್ಟುಗೂಡಿಸಿ, ಅತ್ಯುತ್ತಮ ರೀತಿಯಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಂದು ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು ಎಂದರು. ಇದನ್ನೂ ಓದಿ: 2.5 ಕೆಜಿ ಚಿನ್ನ, 12 ಕೆಜಿ ಬೆಳ್ಳಿ – ಆಸ್ತಿ ಕಂಡು ಎಸಿಬಿ ಅಧಿಕಾರಿಗಳು ಶಾಕ್
ಮಾದರಿ ಪಬ್ಲಿಕ್ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವ ರೀತಿಯಲ್ಲೂ ಕಡಿಮೆ ಇಲ್ಲದಂತೆ ನೋಡಿಕೊಳ್ಳಲಾಗುವುದು. ಸಂಕೀಘಟ್ಟದ ಶಾಲೆಗೆ ಆಟದ ಮೈದಾನ, ಸ್ಮಾರ್ಟ್ ತರಗತಿಗಳು, ಶೌಚಾಲಯ, ಬೋಧಕ ಸಿಬ್ಬಂದಿ ಎಲ್ಲವನ್ನೂ ಒದಗಿಸಲಾಗುವುದು. ಜೊತೆಗೆ, ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಮತ್ತು ಪುನಃ ಮನೆಗೆ ತಲುಪಿಸಲು ವಾಹನ ವ್ಯವಸ್ಥೆಯನ್ನೂ ಮಾಡಲಾಗುವುದು. 2022-23ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯು ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.
ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಅಗತ್ಯವಾಗಿರುವ ಮತ್ತಷ್ಟು ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಜೊತೆಗೆ, ಕೆಲವರು ಈ ಶಾಲೆಗೋಸ್ಕರ ಭೂಮಿಯನ್ನು ದಾನವಾಗಿ ಮಾಡಲು ಮುಂದೆ ಬಂದಿದ್ದಾರೆ. ಅದನ್ನೂ ಬಳಸಿಕೊಂಡು, ಈ ಶಾಲೆಯನ್ನು ಪರಿಪೂರ್ಣವಾಗಿ ಬೆಳೆಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಪ್ಪನಂತೆ ಮಗನೂ ಸಮಯ, ಘಳಿಗೆ ನೋಡ್ತಾರೆ: ಸೂರಜ್ ರೇವಣ್ಣ ಕಾಲೆಳೆದ ಅಶೋಕ್
ಸಂಕೀಘಟ್ಟದ ಶಾಲೆಯಲ್ಲಿ ಅಗತ್ಯವಾದ ಹೆಚ್ಚುವರಿ ಕೊಠಡಿಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ತರಗತಿಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳ ಸೌಲಭ್ಯಗಳನ್ನೂ ಕೊಡಲಾಗುವುದು. ಇಲ್ಲಿ 1ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡೂ ಇರಲಿವೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ತಾಲೂಕುಗಳಲ್ಲೂ ಇಂತಹ ತಲಾ ಒಂದೊಂದು ಶಾಲೆಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಹೆಚ್ಚಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿಯವರೆಗೆ ಕೇವಲ 30 ಮಕ್ಕಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದು, ಅವು ಮುಚ್ಚುವ ಸ್ಥಿತಿಗೆ ಬಂದಿವೆ. ಜೊತೆಗೆ ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇರುವ ಒಬ್ಬಿಬ್ಬರು ಶಿಕ್ಷಕರೇ ಎಲ್ಲ ವಿಷಯಗಳನ್ನೂ ಬೋಧಿಸುತ್ತಿದ್ದಾರೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸ್ಥಳೀಯ ಶಾಲೆಗಳನ್ನು ಒಟ್ಟುಗೂಡಿಸಿ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಒಂದು ಪಬ್ಲಿಕ್ ಮಾದರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ದೈವ ಸಂಕಲ್ಪ ಯೋಜನೆ ಬಿ,ಸಿ ವರ್ಗಗಳ ದೇವಾಲಯಗಳಿಗೂ ವಿಸ್ತರಣೆ: ಆರ್.ಅಶೋಕ್
ಗ್ರಾಮೀಣ ವಿದ್ಯಾರ್ಥಿಗಳು ಕೂಡ ಇಂದು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಅವರಿಗೂ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಪೂರೈಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕಾಗಿ ಈಗಾಗಲೇ ಹಲವು ಉಪಕ್ರಮಗಳನ್ನು ರೂಪಿಸಿ, ಜಾರಿಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.
ಸಚಿವರು ನಂತರ ಶಟಲ್ ಕಾಕ್ ಆಡುವುದರ ಮೂಲಕ ಕ್ರೀಡಾಂಗಣವನ್ನು ಉದ್ಘಾಟಿಸಿದರು.
ವಾಹನಕ್ಕೆ ದೇಣಿಗೆ:
ಸಂಕೀಘಟ್ಟ ಮತ್ತು ತಿಪ್ಪಸಂದ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಮಾಡಲಿ ಎನ್ನುವ ಕಾರಣಕ್ಕೆ ಸಚಿವರು ತಮ್ಮ ಫೌಂಡೇಶನ್ ವತಿಯಿಂದ ತಲಾ ಒಂದು ಲಕ್ಷ ದೇಣಿಗೆಯ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಈ ಎರಡೂ ಪಂಚಾಯತ್‍ಗಳ ಸದಸ್ಯರು ಕೂಡ ತಲಾ ಮೂರು ಲಕ್ಷ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್ ಕೂಡ ತಲಾ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಡಿಡಿಪಿಐ ಗಂಗಣ್ಣ, ಬ್ಲಾಕ್ ಶಿಕ್ಷಣಾಧಿಕಾರಿ ಯತೀಶ್, ತಹಸೀಲ್ದಾರ್ ಶ್ರೀನಿವಾಸ್, ಸಂಕೀಗಟ್ಟ ಗ್ರಾಪಂ ಅಧ್ಯಕ್ಷ ಸೂರ್ಯಕುಮಾರ್, ತಿಪ್ಪಸಂದ್ರ ಗ್ರಾಪಂ ಅಧ್ಯಕ್ಷೆ ಗಂಗಮ್ಮ ಮುಂತಾದವರು ಉಪಸ್ಥಿತರಿದ್ದರು.
ಚಿಕ್ಕಮಗಳೂರು: ಶಾಲೆ, ಕೋಳಿ ಅಂಗಡಿ ಹಾಗೂ ಗ್ಯಾರೇಜ್ ಸೇರಿದಂತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಅತ್ತಿಗೆರೆ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದೆ.
ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಡೇ ಕಾರ್ಯಕ್ರಮ ಮುಗಿಸಿ ಎಲ್ಲ ಉಪಕರಣಗಳನ್ನು ಒಂದು ರೂಮಿನಲ್ಲಿ ಇಟ್ಟು ಬೀಗ ಹಾಕಿಕೊಂಡು ಹೋಗಿದ್ದರು. ಅದೇ ದಿನ ರಾತ್ರಿ ಕಳ್ಳರು ಶಾಲೆಯ ಬೀಗ ಒಡೆದು ಸುಮಾರು 40 ಸಾವಿರ ಮೌಲ್ಯದ ಪ್ರೊಜೆಕ್ಟರ್, ಎರಡು ಸಾವಿರ ಹಣ ಹಾಗೂ ಉಳಿದ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ. ಇದನ್ನೂ ಓದಿ: ಇನ್ನೋವಾ ಕಾರಲ್ಲಿ ಬಂದು ಕಳ್ಳತನ – ಸಿಸಿಟಿವಿಯಲ್ಲಿ ಶ್ರೀಮಂತ ಕಳ್ಳರ ಕೈಚಳಕ ಸೆರೆ
ಜೊತೆಗೆ, ಕೊಟ್ಟಿಗೆಹಾರದ ಕೋಳಿ ಅಂಗಡಿ ಹಾಗೂ ಗ್ಯಾರೇಜ್‍ನಲ್ಲೂ ಹಣವನ್ನು ದೋಚಿದ್ದಾರೆ. ಹೀಗೆ ಸರಣಿ ಕಳ್ಳತನ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಕೊಟ್ಟಿಗೆಹಾರದ ಜನ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೊಟ್ಟಿಗೆಹಾರದಲ್ಲಿ ಈ ಹಿಂದೆ ಕೂಡ ಸರಣಿ ಕಳ್ಳತನ ನಡೆದಿದೆ. ಪೊಲೀಸರು ಯಾರನ್ನೂ ಬಂಧಿಸಿಲ್ಲ. ಅತ್ತಿಗೆರೆಯ ಸೋಮೇಶ್ವರ್ ದೇವಸ್ಥಾನದಲ್ಲಿ 18 ಗಂಟೆಗಳನ್ನ ಕಳ್ಳತನ ಮಾಡಿದ್ದರು. ಅವರನ್ನೂ ಹಿಡಿಯಲಿಲ್ಲ. ಗ್ಯಾಸ್ ವ್ಯಾಪಾರಿ ದುಗ್ಗಪ್ಪ ಅವರ ಮನೆಯಲ್ಲಿ ಸುಮಾರು ಮೂರು ಲಕ್ಷ ಹಣ ದೋಚಿದ್ದರು. ಆ ಕಳ್ಳರನ್ನೂ ಹಿಡಿಯಲಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸರ ವೈಫಲ್ಯವೇ ಹೀಗೆ ಸರಣಿ ಕಳ್ಳತನ ನಡೆಯಲು ಕಾರಣ. ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದರೂ ಪೊಲೀಸರು ಕಳ್ಳರನ್ನ ಹಿಡಿಯದಿದ್ದರೆ ಕಳ್ಳರಿಗೆ ಪೊಲೀಸರ ಮೇಲೆ ಭಯ ಇರುವುದಿಲ್ಲ. ಸರಣಿ ಕಳ್ಳತನ ನಡೆಯುವುದದರಿಂದ ಕೊಟ್ಟಿಗೆಹಾರದ ಜನ ಕೂಡ ಆತಂಕದಿದ್ದಾರೆ. ಕೂಡಲೇ ಪೊಲೀಸರು ಕಳ್ಳರನ್ನ ಬಂಧಿಸಬೇಕೆಂದು ಕೊಟ್ಟಿಗೆಹಾರದ ಜನ ಪೊಲೀಸರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಉಕ್ರೇನ್‌ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?: ವಿಧಾನಸಭೆಯಲ್ಲಿ ಖಾದರ್ ಪ್ರಸ್ತಾಪ
ಪ್ರಕರಣ ದಾಖಲಿಸಿಕೊಂಡ ಬಣಕಲ್ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಪೊಲೀಸ್ ಶ್ವಾನದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಕಳ್ಳತನಕ್ಕೆ ಬಂದಿದ್ದ ಕಳ್ಳರು ತಂದಿದ್ದ ರಾಡ್‍ಗಳನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ. ಪೊಲೀಸರು ಅವುಗಳನ್ನೂ ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಚಿಕ್ಕೋಡಿ: ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಬೆಲೆಬಾಳುವ ಎಲೆಕ್ಟ್ರಿಕಲ್ ವಸ್ತುಗಳನ್ನು ತಡರಾತ್ರಿ ಕಳ್ಳರು ತಮ್ಮ ಕೈಚಳಕ ತೋರಿಸಿ ದೋಚಿಕೊಂಡು ಹೋಗಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಹಾಗೂ ವಿವಿಧ ಎಲೆಕ್ಟ್ರಿಕಲ್ ವಸ್ತುಗಳ ಜೊತೆಗೆ ಹಲವಾರು ದಾಖಲಾತಿ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ
ತಡರಾತ್ರಿ ಘಟನೆ ನಡೆದಿದ್ದು, ಗ್ರಾಮಸ್ಥರು ಮುಂಜಾನೆ ಗಮನಿಸುತ್ತಿದ್ದಂತೆ ಕಳ್ಳತನವಾಗಿರುವುದು ತಿಳಿದುಬಂದಿದೆ. ಶಾಲೆಯ ಬೀಗ ಮುರಿದು ಕಳ್ಳರು ವಸ್ತುಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿಗೆ ಗಡಿಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಪೊಲೀಸರು ನಿಗಾ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಉಡುಪಿ: ಹೈಸ್ಕೂಲ್ ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸಿಕ್ಕ 10 ಸಾವಿರ ರೂ. ಅನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದಿರುವ ಘಟನೆ ಕುಂದಾಪುರ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಕೋಣಿ ಪ್ರೌಢ ಶಾಲಾ ನಾಲ್ಕು ವಿದ್ಯಾರ್ಥಿನಿಳಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ಪ್ರಾಮಾಣಿಕತೆ ಮೆರೆದಿದ್ದಾರೆ. ಅವರು ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಪ್ಲಾಸ್ಟಿಕ್ ನಲ್ಲಿ ಸುತ್ತಿದ ಪೊಟ್ಟಣ ಸಿಕ್ಕಿದೆ. ಅದನ್ನು ಈ ವಿದ್ಯಾರ್ಥಿನಿಯರು ತೆಗೆದು ನೋಡಿದಾಗ 10 ಸಾವಿರ ರೂಪಾಯಿ ಇರುವುದು ಕಂಡುಬಂದಿದೆ. ತಕ್ಷಣ ವಿದ್ಯಾರ್ಥಿನಿಯರು ಸಿಕ್ಕಿದ ಹತ್ತು ಸಾವಿರ ರೂ. ಅನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಕೊಟ್ಟಿದ್ದಾರೆ. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ: ಸಿಎಂ ಸ್ಪಷ್ಟನೆ
ಮುಖ್ಯೋಪಾಧ್ಯಯರು ವಾಟ್ಸಪ್ ಮೂಲಕ ಸಾರ್ವಜನಿಕ ಸಂದೇಶವನ್ನು ಹರಿಬಿಟ್ಟಿದ್ದಾರೆ. ನಂತರ ಈ ಹಣ ಅದೇ ಊರಿನ ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವ ಸುಲೇಖಾ ಅವರದ್ದು ಎಂಬುದು ಗಮನಕ್ಕೆ ಬಂದಿದೆ. ಪರಿಣಾಮ ಇಂದು ಬೆಳಗ್ಗೆ ಶಾಲೆಯ ಅಸಂಬ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಾಮಾಣಿಕ ಮಕ್ಕಳಾದ ಶ್ರಾವ್ಯಾ, ಐಶ್ವರ್ಯಾ.ಜೆ, ಪ್ರಸ್ತುತಿ ಮತ್ತು ವೈಷ್ಣವಿ ಇವರು ಹಣವನ್ನು ಕಳೆದುಕೊಂಡ ಸುಲೇಖಾ ಅವರಿಗೆ ಹಸ್ತಾಂತರಿಸಿದರು.
ಸುಲೇಖಾ ಶಾಲೆಯ ಎಲ್ಲ ವಿದ್ಯಾರ್ಥಿಗಳಗೆ ಸಿಹಿ ವಿತರಿಸಿ ಧನ್ಯವಾದ ಸಮರ್ಪಿಸಿದರು. ಮಕ್ಕಳ ಈ ಪ್ರಾಮಾಣಿಕತನ ಎಲ್ಲರಿಗೂ ಮಾದರಿಯಾಗಬೇಕು ಎಂದು ಆಶಿಸಿದರು.
ಕೆ.ಜಿ.ಜಗನ್ನಾಥರಾವ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಾದವ ಅಡಿಗ ಈ ಕುರಿತು ಮಾತನಾಡಿದ್ದು, ನಮ್ಮ ಮಕ್ಕಳು ಪ್ರಾಮಾಣಿಕರು ಎಂದು ಹೆಮ್ಮೆಯಿಂದ ನಾನು ಹೇಳುತ್ತೇನೆ. ಇದು ನಮ್ಮ ಶಾಲೆಗೆ ಊರಿಗೆ ಮತ್ತು ರಾಜ್ಯಕ್ಕೆ ಒಂದು ಮಾದರಿ ಕೆಲಸ. ಗ್ರಾಮೀಣ ಭಾಗದ ಮಕ್ಕಳು ಕಷ್ಟದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮನೆಯಲ್ಲಿ ಕಷ್ಟದ ಜೀವನ ನಡೆಯುತ್ತಿರುವುದರಿಂದ ಇಂತಹ ಪ್ರಾಮಾಣಿಕತೆ ಅವರಲ್ಲಿ ಬಂದಿರಲು ಸಾಧ್ಯ ಎಂದು ಪ್ರಶಂಸಿದರು. ಇದನ್ನೂ ಓದಿ: ಕೊರೊನಾ ಜಾಗ್ರತೆ ವಹಿಸಿಕೊಂಡೇ ಮೇಕೆದಾಟು ಪಾದಯಾತ್ರೆ ಮಾಡ್ತೀವಿ: ಸಿದ್ದರಾಮಯ್ಯ
ರಸ್ತೆಯಲ್ಲಿ ಹಣ ಸಿಕ್ಕಿದ ಕೂಡಲೇ ಎರಡನೇ ಆಲೋಚಿಸದೇ ನೇರವಾಗಿ ಶಾಲೆಗೆ ಬಂದು ಹಣವನ್ನು ಕೊಟ್ಟು ಹೋಗಿದ್ದಾರೆ. ಶಿಕ್ಷಕರು ಮಕ್ಕಳು ಶಾಲಾಭಿವೃದ್ಧಿ ಸಮಿತಿ ಸಮ್ಮುಖದಲ್ಲಿ ಹಣ ಕಳೆದುಕೊಂಡವರಿಗೆ ಅದನ್ನು ಹಸ್ತಾಂತರ ಮಾಡಲಾಗಿದೆ ಎಂದು ಹೇಳಿದರು.
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್ ನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಶಾಲೆ ಬೀಗ ಮುರಿದು, ತರಗತಿ ಕೊಠಡಿಗಳಲ್ಲಿ ಹೊಸ ವರ್ಷ ಆಚರಿಸಿ ಎಣ್ಣೆ ಪಾರ್ಟಿ ಮಾಡುವ ಮೂಲಕ ಪುಂಡಾಟ ಮೆರೆದಿದ್ದಾರೆ.
ಶಾಲೆಯ ಎಲ್ಲಾ ದಾಖಲಾತಿಗಳನ್ನು ಚಲ್ಲಾಪಿಲ್ಲಿ ಮಾಡಿ, ಅಡುಗೆ ಕೋಣೆಯಲ್ಲಿನ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆಯನ್ನು ಕಳ್ಳತನ ಮಾಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ನೀಡಲಾಗುತ್ತಿದ್ದ ಆಹಾರ ಪರಿಕರಗಳನ್ನೂ ಕದ್ದೊಯ್ದಿದ್ದಾರೆ. ಶಾಲಾ ದಾಖಲಾತಿಗಳ ಮೇಲೆ ಮದ್ಯದ ಪೌಚ್ ಇಟ್ಟು ವಿಕೃತಿ ಮೆರೆದಿದ್ದಾರೆ. ಇದನ್ನೂ ಓದಿ: ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು
ಶಾಲೆಯ ಕೊಠಡಿಗಳಲ್ಲಿ, ಆವರಣದಲ್ಲಿ ಮದ್ಯದ ಬಾಟಲ್‌ಗಳು, ಮಾಂಸದ ತುಂಡುಗಳು ಬಿದ್ದಿವೆ. ಘಟನೆ ಕುರಿತು ಶಾಲಾ ಮುಖ್ಯೋಪಾಧ್ಯಾಯಿನಿ ಮಾನ್ವಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಪುಂಡ ಯುವಕರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ವಿದ್ಯಾ ದೇಗುಲವನ್ನು ದುರ್ಬಳಕೆ ಮಾಡಿಕೊಂಡು ಕಳ್ಳತನ ಮಾಡಿರುವ ಪುಂಡರನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು
ತುಮಕೂರು: ವಿದ್ಯಾರ್ಥಿಗಳ ಕೊರತೆಯಿಂದ 10 ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಶಾಲೆಗೆ ಗ್ರಾಮಸ್ಥರೆಲ್ಲರು ಸೇರಿ ಮರುಜೀವ ನೀಡಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಗೂರು ಕ್ಲಸ್ಟರ್ ವ್ಯಾಪ್ತಿಯ ಯರೇಕಟ್ಟೆ ಸರ್ಕಾರಿ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಲಾಗಿತ್ತು. ಈ ಶಾಲೆಯಲ್ಲಿ ಮತ್ತೆ ಮಕ್ಕಳ ಕಲರವ ಕೇಳುತ್ತಿದೆ. ಸುಮಾರು 30 ಕುಟುಂಬಗಳಿರುವ ಈ ಗ್ರಾಮದಿಂದ ಅಕ್ಕಪಕ್ಕದ ಗ್ರಾಮಗಳ ಶಾಲೆಗೆ ಮಕ್ಕಳು ಹೋಗುತ್ತಿದ್ದರು. ಗ್ರಾಮದಲ್ಲಿ ಶಾಲೆಯೊಂದು ಇರಬೇಕೆಂಬ ಗ್ರಾಮಸ್ಥರ ಬೇಡಿಕೆಯಂತೆ ಮೂರು ದಶಕಗಳ ಹಿಂದೆ ಕಿರಿಯ ಪ್ರಾಥಮಿಕ ಶಾಲೆ ಆರಂಭವಾಗಿತ್ತು. ಇದನ್ನೂ ಓದಿ: ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್
ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿತ್ತು. ಕ್ರಮೇಣ ಇಳಿಮುಖವಾಯಿತು. ವಿದ್ಯಾರ್ಥಿಗಳ ಕೊರತೆಯಿಂದ 10 ವರ್ಷಗಳ ಹಿಂದೆ ಶಿಕ್ಷಣ ಇಲಾಖೆ ಆದೇಶದಂತೆ ಶಾಲೆಯನ್ನು ಮುಚ್ಚಲಾಗಿತ್ತು. ಶಾಲೆ ಮುಚ್ಚುವ ವೇಳೆ ವಿದ್ಯಾರ್ಥಿಗಳ ಹಾಜರಾತಿ 2ಕ್ಕೆ ಇಳಿದಿತ್ತು. ಶಾಲೆಯ ದಾಖಲಾತಿಗಳನ್ನು ಪಕ್ಕದ ಬರಗೂರು ಸರ್ಕಾರಿ ಶಾಲೆಗೆ ವರ್ಗಾವಣೆ ಮಾಡಿ ಶಾಲೆಯನ್ನು ಮುಚ್ಚಲಾಗಿತ್ತು. ಇದನ್ನೂ ಓದಿ:ಕಾರಿನಲ್ಲಿ ತೆರಳುತ್ತಿದ್ದಾಗ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ- ಸೇನಾ ಸಿಬ್ಬಂದಿ ಅರೆಸ್ಟ್
ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿದ್ದ ಕೆಲವು ಪೋಷಕರು ದೂರದ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಿದ್ದರು. ಕೆಲವು ವಿದ್ಯಾರ್ಥಿಗಳು ಮಾತ್ರ ಅಕ್ಕಪಕ್ಕದ ಶಾಲೆಗಳಿಗೆ ಹೋಗುತ್ತಿದ್ದರು. ಬೇರೆ ಊರುಗಳಲ್ಲಿ ನೆಲೆ ಕಂಡುಕೊಂಡಿದ್ದ ಗ್ರಾಮಸ್ಥರು, ಕೋವಿಡ್ ಸಂಕಷ್ಟದ ನಂತರ ಮತ್ತೆ ಗ್ರಾಮಕ್ಕೆ ಬಂದಿದ್ದಾರೆ. ತಮ್ಮೂರಿನ ಶಾಲೆಯತ್ತ ಗಮನ ಹರಿಸಿದ್ದಾರೆ. ಗ್ರಾಮದ ಕೆಲವು ಯುವಕರು ಗ್ರಾಮದಲ್ಲಿ ಸಭೆ ನಡೆಸಿ, ತಮ್ಮೂರಿನ ಶಾಲೆಯನ್ನು ಮತ್ತೆ ಪ್ರಾರಂಭಿಸುವ ಪಣತೊಟ್ಟು ಶಾಲೆಯ ಆರಂಭಕ್ಕೆ ಕಾರಣರಾಗಿದ್ದಾರೆ. ಶಾಲೆಗೆ 1ರಿಂದ 4ನೇ ತರಗತಿವರೆಗೆ 16 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಹತ್ತು ವರ್ಷಗಳಿಂದ ಬಣಗುಡುತ್ತಿದ್ದ ಶಾಲೆ ಕಟ್ಟಡದಲ್ಲಿ ಮತ್ತೆ ಮಕ್ಕಳ ನಗು ಚೆಲ್ಲಿದೆ. ಇದನ್ನೂ ಓದಿ: ಏರ್‌ಸೆಲ್ ಮ್ಯಾಕ್ಸಿಸ್ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್
ಲಕ್ನೋ: ಆಗ್ರಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಖಾಲಿ ಕ್ಲಾಸ್ ರೂಂನಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡಿದ 5 ಶಿಕ್ಷಕಿಯರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವೈರಲ್ ಆಗುತ್ತಿರುವ ವೀಡಿಯೋದಲ್ಲಿರುವ ಶಿಕ್ಷಕಿಯರನ್ನು ರಶ್ಮಿ ಸಿಸೋಡಿಯಾ, ಜೀವಿಕಾ ಕುಮಾರಿ, ಅಂಜಲಿ ಯಾದವ್, ಸುಮನ್ ಕುಮಾರಿ ಮತ್ತು ಸುಧಾ ರಾಣಿ ಎಂದು ಗುರುತಿಸಲಾಗಿದ್ದು, ಜನಪ್ರಿಯ ‘ಮೈನು ಲೆಹೆಂಗಾ ಲೆಡೆ ಮೆಹಂಗಾ’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಮೂಲ ಶಿಕ್ಷಣಾಧಿಕಾರಿ(ಬಿಎಸ್‍ಎ)ಬ್ರಜರಾಜ್ ಸಿಂಗ್ ಅವರು, ಶಿಕ್ಷಕಿಯರು ನೃತ್ಯ ಮಾಡಿರುವ ಹಾಡು ಅನಕ್ಷರತೆಯನ್ನು ತೋರಿಸುತ್ತದೆ. ತರಗತಿಯಲ್ಲಿ ಶಿಕ್ಷಕಿಯರು ನೃತ್ಯ ಮಾಡುವ ಮೂಲಕ ನಿಯಮವನ್ನು ಉಲ್ಲಂಘಿಸಿದ್ದಾರೆ ಮತ್ತು ಶಿಕ್ಷಣ ಇಲಾಖೆಯ ಪ್ರತಿಷ್ಠೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಜೊತೆಗೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಹೀಗಾಗಿ ಐವರು ಶಿಕ್ಷಕಿಯರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಖ್ನೇರಾ ಬ್ಲಾಕ್‍ನ ಸಾಧನ್‍ನಲ್ಲಿರುವ ಐವರು ಸಹಾಯಕ ಶಿಕ್ಷಕಿಯರು ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಈ ವಿಚಾರವಾಗಿ ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಶಿಕ್ಷಕಿಯರು ನೀಡಿದ ಸ್ಪಷ್ಟೀಕರಣ ತೃಪ್ತಿದಾಯಕದಲ್ಲ ಎಂದು ಎನಿಸಿತು. ನಂತರ ಅವರನ್ನು ಶಾಲೆಯಿಂದ ಶನಿವಾರ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಡೆದರೂ ಚಿಕ್ಕಬಳ್ಳಾಪುರದಲ್ಲಿ KSRTC ಬಸ್ಸುಗಳಿಗೆ ಇಲ್ಲ ಬಂದ್