Tag: government

  • ಮಂಗಳೂರು ಸಂಗ್ರಹಗಾರದಿಂದ ಕಚ್ಚಾ ತೈಲ ಮಾರಾಟಕ್ಕೆ ಮುಂದಾದ ಸರ್ಕಾರ

    ಮಂಗಳೂರು ಸಂಗ್ರಹಗಾರದಿಂದ ಕಚ್ಚಾ ತೈಲ ಮಾರಾಟಕ್ಕೆ ಮುಂದಾದ ಸರ್ಕಾರ

    ಬೆಂಗಳೂರು: ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಏರಿಕೆಯಾದ ಕಾರಣ ಇಂಧನ ದರ ಪ್ರತಿ ದಿನ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಕಚ್ಚಾ ತೈಲವನ್ನು ಭೂಗತ ತೈಲ ಸಂಗ್ರಹಗಾರಗಳಿಂದ ರಾಜ್ಯ ತೈಲ ಶುದ್ಧೀಕರಣ ಘಟಕಗಳಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ.

    “ನಾವು ತೈಲ ಮಾರುಕಟ್ಟೆ ಕಂಪನಿಗಳಿಗೆ ಮಾರಾಟ ಮಾಡಲು ಆರಂಭಿಸಿದ್ದೇವೆ ಎಂದು ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐಎಸ್‌ಪಿಆರ್‌ಎಲ್) ಸಿಇಒ ಎಚ್‌ಪಿಎಸ್ ಅಹುಜಾ ಹೇಳಿದ್ದಾರೆ.

    ಕಳೆದ ವರ್ಷ ಕೋವಿಡ್‌ 19 ಹಿನ್ನೆಲೆಯಲ್ಲಿ ತೈಲ ಬೆಲೆ ಭಾರೀ ಕುಸಿತ ಕಂಡಿತ್ತು. ಈ ವೇಳೆ ಸರ್ಕಾರ  ಅಂತಾರಾಷ್ಟ್ರೀಯ ಮಾರುಕಟ್ಟೆಯಿಂದ 0.3 ದಶಲಕ್ಷ  ಟನ್ ಕಚ್ಚಾ ತೈಲ ಖರೀದಿಸಿ ಮಂಗಳೂರು ತೈಲ ಸಂಗ್ರಾಹಗಾರದಲ್ಲಿಟ್ಟಿತ್ತು. ಇದೀಗ ಈ ಕಚ್ಚಾ ತೈಲವನ್ನು ರಾಜ್ಯ ಮಾಲೀಕತ್ವದ ಮಂಗಳೂರು ತೈಲ ಶುದ್ಧೀಕರಣ ಘಟಕಕ್ಕೆ ಮಾರಾಟ ಮಾಡಿದೆ. ಈ ಮೂಲಕ ದೇಶದಲ್ಲಿ ತೈಲ ಬೆಲೆ ಏರಿಕೆಯಿಂದ ಉಂಟಾಗಿರುವ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಇದನ್ನೂ ಓದಿ: ವಿಮಾನದ ಇಂಧನಕ್ಕಿಂತಲೂ ದುಬಾರಿ ಆಯ್ತು ಪೆಟ್ರೋಲ್‌ ಬೆಲೆ

    ಮಂಗಳೂರು ಕಚ್ಚಾ ತೈಲ ಸಂಗ್ರಹಾಗಾರ ಸುಮಾರು 1.5 ದಶಲಕ್ಷ ಟನ್ ಟನ್ ಸಾಮರ್ಥ್ಯ ಹೊಂದಿದ್ದು, ಇದರಲ್ಲಿ ಶೇ. ಅರ್ಧದಷ್ಟನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ತೈಲ ದರವನ್ನು ಸರಿದೂಗಿಸುವ ಕಾರ್ಯಕ್ಕೆ ಮುಂದಾಗುತ್ತಿದೆ.ಈ ವರ್ಷದ ಅಂತ್ಯಕ್ಕೆ  0.45 ದಶಲಕ್ಷ  ಟನ್ ಮಾರಾಟ ಮಾಡಲು ಐಎಸ್‌ಪಿಆರ್‌ಎಲ್ ಮುಂದಾಗಿದೆ.

    ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ ಗೆ 36 ಪೈಸೆ ಏರಿಕೆ ಕಂಡು 110.61 ರೂ., ಡೀಸೆಲ್ 37 ಪೈಸೆ ಏರಿಕೆ ಕಂಡು 101.49 ರೂ. ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್‍ ಗೆ 35 ಪೈಸೆ ಏರಿಕೆ ಕಂಡು ಲೀಟರ್‌ ಗೆ 106.89 ರೂ. ಆದರೆ ಡೀಸೆಲ್‍ಗೆ 35 ಪೈಸೆ ಏರಿಕೆ ಕಂಡು 95.62 ರೂ. ದಾಖಲಾಗಿದೆ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

    ಭಾರತದ ತೈಲ ಸಂಗ್ರಹ ಏನೇನು ಸಾಲದು. ಒಟ್ಟು 90 ದಿನಗಳ ಬಳಕೆಗೆ ಆಗುವಷ್ಟು 13.32 ಮೆಟ್ರಿಕ್ ಟನ್ ತೈಲ ಸಂಗ್ರಹ ಅಗತ್ಯತೆ ಭಾರತಕ್ಕಿದೆ. ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್ (ಐಎಸ್‍ಪಿಆರ್ ಎಲ್) ಮಂಗಳೂರು, ಉಡುಪಿ ಬಳಿಯ ಪಾದೂರು, ವಿಶಾಖಪಟ್ಟಣಂನಲ್ಲಿ ಭೂಗತ ತೈಲ ಸಂಗ್ರಹಣ ಘಟಕಗಳನ್ನು ಸ್ಥಾಪಿಸಿದೆ.

    ಮೂರು ತೈಲ ಸಂಗ್ರಹಗಾರಗಳ ಪೈಕಿ ಪಾದೂರಿನಲ್ಲಿ ಅತಿ ಹೆಚ್ಚು ತೈಲವನ್ನು ಸಂಗ್ರಹ ಮಾಡಬಹುದಾಗಿದೆ. ಪಾದೂರಿನಲ್ಲಿ 2.5 ದಶಲಕ್ಷ ಟನ್(17 ದಶಲಕ್ಷ ಬ್ಯಾರೆಲ್), ಮಂಗಳೂರಿನಲ್ಲಿ 1.5 ದಶಲಕ್ಷ ಟನ್, ವಿಶಾಖಪಟ್ಟಣದಲ್ಲಿ 1.33 ದಶಲಕ್ಷ ಟನ್ ತೈಲವನ್ನು ಸಂಗ್ರಹಿಸಬಹುದಾಗಿದೆ.  ಇದನ್ನೂ ಓದಿ: ಉಡುಪಿಯಲ್ಲಿ ತೈಲ ಸಂಗ್ರಹಿಸಲಿದೆ ಸೌದಿ ಅರಾಮ್ಕೊ

    ಶೇ.83ರಷ್ಟು ತೈಲವನ್ನು ಭಾರತ ಆಮದು ಮಾಡುತ್ತಿದೆ. 65 ದಿನಗಳಿಗೆ ಆಗುವಷ್ಟು ತೈಲವನ್ನು ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯ ರಿಫೈನರಿಗಳಿಗೆ ಇದೆ. 90 ದಿನಗಳ ಬಳಕೆಗೆ ಆಗುವಷ್ಟು ತೈಲ ಸಂಗ್ರಹಿಸುವ ನಿಟ್ಟಿನಲ್ಲಿ ಐಎಸ್‌ಪಿಆರ್‌ಎಲ್ ಒಡಿಶಾದ ಚಂಡಿಕೋಲ್, ರಾಜಸ್ಥಾನದ ಬಿಕಾನೆರ್, ಗುಜರಾತಿನ ರಾಜ್‍ಕೋಟ್ ಬಳಿ ಭೂಗತ ತೈಲಗಾರ ನಿರ್ಮಿಸಲು ಮುಂದಾಗುತ್ತಿದೆ. ಇದನ್ನೂ ಓದಿ: ಅಮೆರಿಕದ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಲಿದೆ ಭಾರತದ ಕಚ್ಚಾ ತೈಲ

    ವಿಶ್ವದಲ್ಲೇ ತುರ್ತು ಸಂದರ್ಭಕ್ಕೆಂದು ತೈಲ ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, 714 ದಶಲಕ್ಷ ಬ್ಯಾರೆಲ್‌ ತೈಲವನ್ನು ಸಂಗ್ರಹ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಸದ್ಯ ಭಾರತ 5.33 ದಶಲಕ್ಷ ಟನ್‌( 38 ದಶಲಕ್ಷ ಬ್ಯಾರೆಲ್‌) ತೈಲವನ್ನು ಸಂಗ್ರಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ತೈಲವನ್ನು ತುರ್ತು ಸಂದರ್ಭದಲ್ಲಿ 9 ದಿನಗಳ ಕಾಲ ಬಳಸಬಹುದು. ಇಂಟರ್‌ನ್ಯಾಷನಲ್‌ ಎನರ್ಜಿ ಏಜೆನ್ಸಿ(ಐಇಎ) ತನ್ನ ಸದಸ್ಯ ರಾಷ್ಟ್ರಗಳು 90 ದಿನಗಳ ಕಾಲ ತೈಲ ಸಂಗ್ರಹವನ್ನು ಹೊಂದಿರಬೇಕೆಂದು ಹೇಳಿದೆ.

  • ಬಿಜೆಪಿ ಸೋಲಿನ ಭೀತಿಯಿಂದ ಚುನಾವಣೆ ಮುಂದೂಡುತ್ತಿದೆ: ಪೃಥ್ವಿ ರೆಡ್ಡಿ

    ಬಿಜೆಪಿ ಸೋಲಿನ ಭೀತಿಯಿಂದ ಚುನಾವಣೆ ಮುಂದೂಡುತ್ತಿದೆ: ಪೃಥ್ವಿ ರೆಡ್ಡಿ

    ಬೆಂಗಳೂರು: ಕೋವಿಡ್ ನಿಯಂತ್ರಣ, ರೈತರ ಸಮಸ್ಯೆ, ಆರ್ಥಿಕತೆ, ಉದ್ಯೋಗ ಸೃಷ್ಟಿ, ರಸ್ತೆ ದುರಸ್ತಿ ಮುಂತಾದ ಎಲ್ಲ ಕ್ಷೇತ್ರದಲ್ಲೂ ವಿಫಲವಾಗಿರುವ ಬಿಜೆಪಿಗೆ ಸೋಲಿನ ಭೀತಿಯಿದೆ. ಆದ್ದರಿಂದಲೇ ಬಿಬಿಎಂಪಿ, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಪದೇ ಪದೇ ಮುಂದೂಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಟ್ಟಿಟ್ಟರ್ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಬಿಬಿಎಂಪಿಯ ವಾರ್ಡ್‍ಗಳ ಮರುವಿಂಗಡಣೆ ಕಾರ್ಯವು ಆಮೆಗತಿಯಲ್ಲಿ ಸಾಗುತ್ತಿದೆ. ಕಳೆದ 13 ತಿಂಗಳಿನಿಂದ ಜನಪ್ರತಿನಿಧಿಗಳ ಬದಲು ಅಧಿಕಾರಿಗಳು ಮಹಾನಗರ ಪಾಲಿಕೆಯನ್ನು ಮನಸೋ ಇಚ್ಛೆ ಮುನ್ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆಯಾಗಿದೆ. ಚುನಾವಣೆ ಮುಂದೂಡಲು ಪದೇ ಪದೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಅಮೂಲ್ಯ ಸಮಯವನ್ನೂ ಬಿಜೆಪಿ ಹಾಳು ಮಾಡುತ್ತಿದೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಇನ್ನಷ್ಟು ತಿಂಗಳು ಮುಂದೂಡುವ ಉದ್ದೇಶದಿಂದಲೇ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಪ್ರತ್ಯೇಕ ಆಯೋಗ ರಚಿಸಿದೆ. ಇದನ್ನೂ ಓದಿ: ಹೃದಯಾಘಾತದಿಂದ ಇನ್ಸ್‌ಪೆಕ್ಟರ್‌ ನಿಧನ

    ಕೋವಿಡ್ ಸಂದರ್ಭದಲ್ಲಿ ಬೆಡ್, ಆಕ್ಸಿಜನ್ ಸೌಲಭ್ಯ ಕಲ್ಪಿಸಲು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರಿತು. ಪೆಟ್ರೋಲ್, ಡಿಸೇಲ್, ಎಲ್‍ಪಿಜಿ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಉದ್ಯೋಗ ಸೃಷ್ಟಿಯಲ್ಲೂ ಸರ್ಕಾರ ವಿಫಲವಾಗಿದ್ದು, ದೇಶದೆಲ್ಲೆಡೆ ನಿರುದ್ಯೋಗ ತಾಂಡವವಾಡುತ್ತಿದೆ. ದೇಶದ ಅರ್ಥ ವ್ಯವಸ್ಥೆ ಕುಸಿದು ಹೋಗಿದೆ. ದೇಶದ ಸಾಲದ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ರಸ್ತೆಗಳಿಗೆ ಹೊಸದಾಗಿ ಡಾಂಬರು ಹಾಕುವುದು ಹಾಗಿರಲಿ, ಗುಂಡಿಗಳಿಗೆ ವೈಜ್ಞಾನಿಕ ವಿಧಾನದಲ್ಲಿ ತೇಪೆ ಹಾಕಲೂ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಣ್ಣ ಮಳೆಗೂ ತೇಪೆ ಕಿತ್ತುಹೋಗುತ್ತಿದೆ. ಹೀಗೆ ಎಲ್ಲದರಲ್ಲೂ ವಿಫಲವಾಗಿರುವ ಬಿಜೆಪಿಗೆ ಸೋಲಿನ ಭೀತಿಯಿದೆ. ಆದ್ದರಿಂದ ಏನಾದರೊಂದು ಕಾರಣ ಹುಡುಕಿಕೊಂಡು ಚುನಾವಣೆಗಳನ್ನು ಮುಂದೂಡುತ್ತಿದೆ ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಎಸ್‍ಪಿ ವರ್ಗಾವಣೆ ವಾರ್ – ರಾಜಕೀಯ ಪ್ರಭಾವಿಗಳ ಒತ್ತಡ ಆರೋಪ

  • ಮಂಡ್ಯದಲ್ಲಿ ಎಸ್‍ಪಿ ವರ್ಗಾವಣೆ ವಾರ್ – ರಾಜಕೀಯ ಪ್ರಭಾವಿಗಳ ಒತ್ತಡ ಆರೋಪ

    ಮಂಡ್ಯದಲ್ಲಿ ಎಸ್‍ಪಿ ವರ್ಗಾವಣೆ ವಾರ್ – ರಾಜಕೀಯ ಪ್ರಭಾವಿಗಳ ಒತ್ತಡ ಆರೋಪ

    ಮಂಡ್ಯ: ಜಿಲ್ಲೆಯಲ್ಲಿ ಎಸ್‍ಪಿಯಾಗಿದ್ದ ಅಶ್ವಿನಿ ಅವರನ್ನು ವರ್ಗಾವಣೆ ಮಾಡಿ ಮೈಸೂರಿನ ಕೆಪಿಎಯಲ್ಲಿ ಇದ್ದ ಸುಮನ್ ಡಿ.ಪೆನ್ನೇಕರ್ ಅವರನ್ನು ಮಂಡ್ಯ ಎಸ್‍ಪಿ ಆಗಿ ಸರ್ಕಾರ ನೇಮಕ ಮಾಡಿರುವುದಾಗಿ ಆದೇಶ ಹೊರಡಿಸಿದೆ. ಆದರೆ ಪೆನ್ನೇಕರ್ ಅವರನ್ನು ಮಂಡ್ಯ ಎಸ್‍ಪಿ ಆಗಿ ನೇಮಕ ಮಾಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ರಾಜಕೀಯ ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಮಂಡ್ಯ ಎಸ್‍ಪಿ ಆಗಿದ್ದ ಅಶ್ವಿನಿ ಅವರ ವಿರುದ್ಧ ಕೇಳಿ ಬಂದಿದ್ದ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರ ಅಶ್ವಿನಿ ಅವರನ್ನು ಮಂಡ್ಯದಿಂದ ವರ್ಗಾವಣೆ ಮಾಡಿ, ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಇದ್ದ ಐಪಿಎಸ್ ಆಫೀಸರ್ ಸುಮನ್ ಡಿ.ಪೆನ್ನೇಕರ್ ಅವರನ್ನು ನೇಮಿಸುವುದಾಗಿ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು. ಇದೀಗ ಪೆನ್ನೇಕರ್ ಅವರು ಅಧಿಕಾರ ಸ್ವೀಕಾರ ಮಾಡದಂತೆ ಮೌಖಿಕವಾಗಿ ಗೃಹ ಸಚಿವರು ಆದೇಶ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಿವಾಸದಲ್ಲಿದ್ದ ಮರಗಳಿಗೆ ಕೊಡಲಿ – ಮಂಡ್ಯ ಎಸ್‍ಪಿಯಿಂದ ಸರ್ವಾಧಿಕಾರಿ ಧೋರಣೆ

    ಸುಮನ್ ಡಿ.ಪೆನ್ನೇಕರ್ ಅವರು ಈ ಹಿಂದೆ ಕಾರ್ಯನಿರ್ವಹಿಸಿದ್ದ ಜಾಗದಲ್ಲಿ ಉತ್ತಮ ಅಧಿಕಾರಿ ಹಾಗೂ ಖಡಕ್ ಆಫೀಸರ್ ಎಂಬ ಹೆಸರನ್ನು ತೆಗೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಂಡ್ಯಗೆ ಅವರು ಬಂದರೆ ಮಂಡ್ಯ ಪೊಲೀಸ್ ಇಲಾಖೆಯಲ್ಲಿ ಕಟ್ಟುನಿಟ್ಟಿನ ಆದೇಶಗಳನ್ನು ತರುತ್ತಾರೆ ಎಂದು ಜಿಲ್ಲೆಯ ಕೆಲವು ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಿಗಳ ಬಳಿ ಅವರು ಬೇಡಾ ಬೇರೆ ಅವರನ್ನು ನೇಮಕ ಮಾಡಿಸಿ ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಮಂಡ್ಯದಲ್ಲಿ ಡಿಸಿ, ಎಡಿಸಿ, ಜಿಲ್ಲಾ ಪಂಚಾಯತ್ ಸಿಓ ಸೇರಿದಂತೆ ಎಲ್ಲಾ ಪ್ರಮುಖ ಹುದ್ದೆಗಳಲ್ಲಿ ಮಹಿಳಾ ಅಧಿಕಾರಿಗಳು ಇದ್ದಾರೆ ಎಂದು ಪೆನ್ನೇಕರ್ ಅವರು ಬರುವುದನ್ನು ತಡೆಯಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಐತಿಹಾಸಿಕ ಸಾಧನೆ- ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ವಿತರಿಸಲಾಗಿದೆ?

  • ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ – ಶಿಕ್ಷಣ ಇಲಾಖೆಯಿಂದ ಎಸ್‍ಒಪಿ ಜಾರಿ

    ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ – ಶಿಕ್ಷಣ ಇಲಾಖೆಯಿಂದ ಎಸ್‍ಒಪಿ ಜಾರಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿಯ ನಡುವೆಯೂ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಈ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಕಾರಣದಿಂದ ಸ್ಥಗಿತಗೊಳಿಸಿದ್ದಂತ ಬಿಸಿಯೂಟ ಕಾರ್ಯಕ್ರಮವನ್ನು 2021ರ ಅಕ್ಟೋಬರ್ 21ರಿಂದ ಪುನರಾರಂಭಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಕುರಿತಂತೆ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021ರ ಅಕ್ಟೋಬರ್ 21ರಿಂದ ಮಧ್ಯಾಹ್ನ ಉಪಹಾರ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಕಚೇರಿಯಿಂದ ಸೂಚನೆ ನೀಡಿರುತ್ತಾರೆ. ಈ ಸಂಬಂಧ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮವನ್ನು ಆರಂಭಿಸಲು ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ, ಅನುದಾನಿತ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಈ ಕೆಳಕಂಡ ಸೂಚನೆ ನೀಡುವಂತೆ ತಿಳಿಸಿದೆ. ಇದನ್ನೂ ಓದಿ: ವೈನ್ ಸ್ಟೋರ್ ಫ್ಯಾಮಿಲಿಯನ್ನು ಭೇಟಿಯಾದ ವೈಷ್ಣವಿ

    ಶಾಲೆಗಳಲ್ಲಿ ಅಡುಗೆಯನ್ನು ತಯಾರು ಮಾಡುವ ಆಹಾರ ಧಾನ್ಯಗಳ ದಾಸ್ತಾನುಗಳ್ನು ಪರಿಶೀಲಿಸಿಕೊಳ್ಳುವುದು. ಯಾವುದೇ ಅವಧಿ ಮೀರಿರುವ ಆಹಾರ ಧಾನ್ಯಗಳನ್ನು ಬಳಕೆ ಮಾಡದಂತೆ ಹಾಗೂ ಪರಿಶೀಲಿಸಿಕೊಳ್ಳುವುದು. ಶಾಲೆಗಳಲ್ಲಿ ಗ್ಯಾಸ್ ಸ್ಟೌವ್ ಮತ್ತು ಪಾತ್ರೆ ಪರಿಕರಗಳನ್ನು ದುರಸ್ತಿ ಹೊಂದಿದ್ದಲ್ಲಿ, ನಿಯಮಾನುಸಾರ ಅಕ್ಷರ ದಾಸೋಹ ಕಾರ್ಯಕ್ರಮದ ಅನುದಾವನ್ನು (ರೂ.5 ಸಾವಿರದಿಂದ 8 ಸಾವಿರದ ಒಳಗೆ) ಬಳಕೆ ಮಾಡಿಕೊಂಡು ರಿಪೇರಿ ಮಾಡಿಸುವಂತೆ ತಿಳಿಸುವುದು. ಶಾಲೆಯ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸುವುದು. ಆಹಾರ ದಾಸ್ತಾನು ಕೊಠಡಿಯನ್ನ ಡೀಪ್ ಕ್ಲಿನಿಂಗ್ ಮಾಡುವುದು. ಶಾಲೆಯಲ್ಲಿರುವ ಶೌಚಾಲಯಗಳನ್ನು ಸ್ವಚ್ಚವಾಗಿಟ್ಟುಕೊಳ್ಳಲು ಅಗತ್ಯ ಕ್ರಮ ವಹಿಸುವುದು. ಅಡುಗೆ ಸಿಬ್ಬಂದಿ ವೈಯುಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಆದೇಶಿಸಿದೆ.

    ಅಡುಗೆ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್-19 ಸಾಂಕ್ರಾಮಿಕ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ‘ಎರಡು ಡೋಸ್’ ಲಸಿಕೆಯನ್ನು ತಪ್ಪದೇ ಹಾಕಿಸಿಕೊಂಡಿರಬೇಕು. ಶಾಲಾ ವಿದ್ಯಾರ್ಥಿಗಳು ಕೈತೊಳೆಯಲು ನೀರಿನ ವ್ಯವಸ್ಥೆಯೊಂದಿಗೆ ಹ್ಯಾಂಡ್ ವಾಷಿಂಗ್ ಯುನಿಟ್‍ಗಳನ್ನು ರಿಪೇರಿ ಮಾಡಿಸಿ ಸ್ವಚ್ಛವಾಗಿಟ್ಟು ಪ್ರತಿನಿತ್ಯ ಕೈತೊಳೆಯಲು ಉಪಯೋಗಿಸುವುದು. ಕಾಲಕಾಲಕ್ಕೆ ಕೋವಿಡ್-19ರ ಪರೀಕ್ಷೆಯನ್ನು ಮಾಡಿಸಿಕೊಂಡಿರುವುದನ್ನು ಮುಖ್ಯ ಶಿಕ್ಷಕರು ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಕೆಪಿಎಸ್‌ಸಿಯನ್ನು ಹಾಳು ಮಾಡಿದ್ದು ಬಿಜೆಪಿ, ಕಾಂಗ್ರೆಸ್‌ : ಜೆಡಿಎಸ್‌ ತಿರುಗೇಟು

    2021ರ ಅಕ್ಟೋಬರ್ 21ರೊಳಗೆ ಶಾಲೆಗಳಿಗೆ ಅಕ್ಕಿ ಮತ್ತು ಗೋಧಿಯು ಸರಬರಾಜಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರವನ್ನು ನೀಡಲು ಉಳಿದ ಆಹಾರ ಪದಾರ್ಥಗಳನ್ನು 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರೂ.4.97ರಂತೆ ಹಾಗೂ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರೂ.7.45ರ ಪರಿವರ್ತನಾ ವೆಚ್ಚವನ್ನು ಒಳಸಿಕೊಂಡು ಅಡುಗೆ ತಯಾರಿಸುವಂತೆ ಸೂಚನೆ ನೀಡಿದೆ. ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಹಾಗೂ ಸಹಾಯಕ ಅಡುಗೆಯವರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆಯನ್ನು 2021ರ ಅಕ್ಟೋಬರ್ 21ರೊಳಗೆ ಪಡೆದುಕೊಂಡು ಅಡುಗೆ ಕೇಂದ್ರಗಳಿಗೆ ಹಾಜರಾಗಲು ಸೂಚನೆ ನೀಡುವುದು. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ಈ ಎಲ್ಲಾ ಅಂಶಗಳನ್ನೊಳಗೊಂಡಂತೆ 2021ರ ಅಕ್ಟೋಬರ್ 21ರಿಂದ ಮಧ್ಯಾಹ್ನದ ಉಪಹಾರವನ್ನು ವಿದ್ಯಾರ್ಥಿಗಳಿಗೆ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು, ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಹೆಬ್ಬೆಟ್‌ ಗಿರಾಕಿ ಮೋದಿ ಎಂದ ಕೆಪಿಸಿಸಿ ಐಟಿ ಸೆಲ್‌ ವಿರುದ್ಧ ಡಿಕೆಶಿ ಗರಂ

  • ದೀಪಾವಳಿಗೆ ಈ ಬಾರಿಯೂ ಆಗುತ್ತಾ ಪಟಾಕಿ ಬ್ಯಾನ್?

    ದೀಪಾವಳಿಗೆ ಈ ಬಾರಿಯೂ ಆಗುತ್ತಾ ಪಟಾಕಿ ಬ್ಯಾನ್?

    -ಹಸಿರು ಪಟಾಕಿಗಷ್ಟೇ ಸಿಗುತ್ತಾ ಅನುಮತಿ

    ಬೆಂಗಳೂರು: ಇನ್ನೇನು ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಮನೆ ಮಂದಿಯೆಲ್ಲ ಹಬ್ಬವನ್ನು ಬರಮಾಡಿಕೊಳ್ಳಲು ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬದ ಊಟ ಹೊಸ ಬಟ್ಟೆಗಳ ಸಂಭ್ರಮದ ಜೊತೆಗೆ ಮಕ್ಕಳು, ಯುವಜನರಿಗೆಲ್ಲ ದೀಪಾವಳಿ ಅಂದರೆ ಪಟಾಕಿ ಕ್ರೇಜ್ ಇದ್ದೆ ಇರುತ್ತದೆ. ಆದರೆ ಕಳೆದ ಬಾರಿ ಕೋವಿಡ್ ಹಿನ್ನಲೆ ಪಟಾಕಿ ಸಿಡಿಸುವುದನ್ನು ಬ್ಯಾನ್ ಮಾಡಿದ್ದ ಸರ್ಕಾರ ಹಸಿರು ಪಟಾಕಿಗಳಿಗೆ ಮಾತ್ರ ಒಪ್ಪಿಗೆ ಸೂಚಿಸಿತ್ತು. ಈ ಬಾರಿಯೂ ಇದೇ ಸಿದ್ಧತೆಯಲ್ಲಿದೆಯಾ ಎಂಬ ಬಗ್ಗೆ ಜನರು ಎದುರು ನೋಡುತ್ತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಮುಖ್ಯಾಯುಕ್ತರಾದ ಗೌರವ್ ಗುಪ್ತ, ದೀಪಾವಳಿ ಸಂಭ್ರಮದ ಹಬ್ಬ. ಕೋವಿಡ್ ಹಿನ್ನಲೆ ಶಿಸ್ತುಬದ್ಧವಾಗಿ ಮಾಡಬೇಕಾಗುತ್ತದೆ. ಇದನ್ನು ಹೊರತು ಪಡಿಸಿ ಬೇರೆ ಮಾರ್ಗಸೂಚಿಗಳ ಬಗ್ಗೆ ತಯಾರು ಮಾಡಲು ಪಾಲಿಕೆ ಮಟ್ಟದಲ್ಲಿ ಸಿದ್ಧ ಇದ್ದೇವೆ. ಆದರೆ ಪ್ರತ್ಯೇಕ ನಿಯಮಗಳ ಬಗ್ಗೆ ಈಗಲೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ

    ಜೋರು ಶಬ್ದ ಮಾಡುವ, ವಾಯು ಮಾಲಿನ್ಯ ಮಾಡುವ ಪಟಾಕಿಗಳಿಗೆ ಎನ್‍ಜಿಟಿ ಈಗಾಗಲೇ ಬ್ರೇಕ್ ಹಾಕಿದೆ. ಪಟಾಕಿ ಕುರಿತಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಾಡುವ ನಿಯಮಗಳನ್ನು ಸರ್ಕಾರ, ಬಿಬಿಎಂಪಿಯೂ ಪಾಲಿಸಬೇಕಾಗುತ್ತದೆ. ಹೀಗಾಗಿ ಬೇರೆ ಪಟಾಕಿಗಳ ಮಾರಟ ಖರೀದಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಗರ ಕೆರೆ ರಾಜಕಾಲುವೆಗಳು, ಸುತ್ತಲಿನ ಲೇಔಟ್ ಚರಂಡಿ ದುರಸ್ತಿಗೆ ಶೀಘ್ರ ಕ್ರಮ: ಬೊಮ್ಮಾಯಿ

  • ಭಾರೀ ಮಳೆಗೆ 13 ಸಾವಿರಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ – ರೈತ ಕಂಗಾಲು

    ಭಾರೀ ಮಳೆಗೆ 13 ಸಾವಿರಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ – ರೈತ ಕಂಗಾಲು

    –  50 ಲಕ್ಷ ನಷ್ಟ – ದಿಕ್ಕು ದೋಚದಂತಾದ ರೈತ

    ಚಿಕ್ಕಬಳ್ಳಾಪುರ: ಕಳೆದ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು, ಗಂಗರೆ ಕಾಲುವೆ ಗ್ರಾಮದಲ್ಲಿ ಕೋಳಿ ಫಾರಂಗೆ ಮಳೆ ನೀರು ನುಗ್ಗಿ 13 ಸಾವಿರಕ್ಕೂ ಹೆಚ್ಚು ಕೋಳಿಗಳ ಮಾರಣ ಹೋಮ ಆಗಿದೆ.

    chicken farm

    ಗ್ರಾಮದ ಗುಣಭೂಷಣ್ ಅವರ ಕೋಳಿ ಫಾರಂ ಇದಾಗಿದ್ದು, ಸರಿಸುಮಾರು 50 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ರೈತ ಗುಣಭೂಷನ್ ತಿಳಿಸಿದ್ದಾರೆ. ಅಂದಹಾಗೆ ಕಳೆದ ರಾತ್ರಿ ಧಾರಕಾರವಾಗಿ ಎಡೆಬಿಡದೇ ಸತತ 4-5 ಗಂಟೆಗಳ ಕಾಲ ಸುರಿದ ಮಳೆಗೆ, ರಾಜಕಾಲುವೆಯಲ್ಲಿ ಹರಿಯಬೇಕಾದ ನೀರು ಕೋಳಿ ಫಾರಂ ಶೆಡ್‍ಗೆ ನುಗ್ಗಿದೆ. ಕೋಳಿ ಫಾರಂ ಶೆಡ್ ತುಂಬಾ 2-3 ಅಡಿ ನೀರು ಶೇಖರಣೆಗೊಂಡು ಕೋಳಿಗಳೆಲ್ಲವೂ ಸಾವನ್ನಪ್ಪಿವೆ. ಇದನ್ನೂ ಓದಿ: ಹೆಚ್‍ಡಿಕೆ ರಾತ್ರಿ 10 ಗಂಟೆ ನಂತ್ರ ಕಣ್ಮುಚ್ಚಿ ಮಲಗಿ ಎಲ್ಲವನ್ನೂ ನೆನಪಿಸ್ಕೊಳ್ಳಲಿ: ಎಸ್‍ಟಿಎಸ್

    chicken farm

    ಇದೇ ಮೊದಲ ಬಾರಿಗೆ ಕೋಳಿ ಫಾರಂ ಆರಂಭಿಸಿದ್ದ ರೈತ ಗುಣಭೂಷಣ್, ಕಳೆದ ಒಂದು ವರ್ಷದಿಂದ 220 ಅಡಿ ಉದ್ದ 40 ಅಡಿ ಅಗಲದ ಕೋಳಿ ಫಾರಂ ಶೆಡ್ ನಿರ್ಮಾಣ ಕಾರ್ಯ ಮಾಡಿ, ಮೂರು ತಿಂಗಳ ಹಿಂದೆಯಷ್ಟೇ 13 ಸಾವಿರಕ್ಕೂ ಹೆಚ್ಚು ಕೋಳಿಗಳ ಸಾಕಾಣಿಕೆ ಮಾಡಿದ್ದರು. ಇನ್ನೂ ಎರಡು ಮೂರು ದಿನಗಳಲ್ಲಿ ಕೋಳಿಗಳನ್ನು ಮಾರಾಟ ಸಹ ಮಾಡಬೇಕಿತ್ತು. ಆದರೆ ದುರದೃಷ್ಟವಶಾತ್ ಮಳೆಯಿಂದಾಗಿ ಕೋಳಿ ಫಾರಂಗೆ ನೀರು ನುಗ್ಗಿದ್ದು, ಕೋಳಿಗಳು ಸಾವನ್ನಪ್ಪಿದ್ದು, ರೈತನ ಕನಸುಗಳು ನುಚ್ಚು ನೂರಾಗಿದೆ. ಇದನ್ನೂ ಓದಿ: ನಿಮ್ಮ ಜೊತೆ ನಾವಿದ್ದೇವೆ – ಸೂರಪ್ಪ ಬಾಬುಗೆ ಧೈರ್ಯ ತುಂಬಿದ ಕಿಚ್ಚ

    chicken farm

    ಸದ್ಯ ಮಾರುಕಟ್ಟೆಯಲ್ಲಿ 200 ರಿಂದ 250 ರೂಪಾಯಿಯವರೆಗೂ 1 ಕೆಜಿ ಚಿಕನ್ ಮಾರಾಟವಾಗುತ್ತಿದ್ದು, ಸರಿ ಸುಮಾರು 25 ಟನ್‍ಗೆ 25 ರಿಂದ 30 ಲಕ್ಷ ಆದಾಯ ಕಣ್ಣು ಮುಂದೆಯೇ ನಾಶವಾಗಿದೆ. ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿಯನ್ನು ಮಳೆ ತಂದೊಡ್ಡಿದೆ ಎಂದು ಗುಣಭೂಷಣ್ ನೋವು ತೋಡಿಕೊಂಡಿದ್ದಾರೆ ಮತ್ತು ಸರ್ಕಾರ ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿಕೊಂಡಿದ್ದಾರೆ.

  • ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

    ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

    – ನಿಮ್ಹಾನ್ಸ್ ಘಟಿಕೋತ್ಸವದಲ್ಲಿ ಕನ್ನಡಕ್ಕೆ 3ನೇ ಸ್ಥಾನ
    – ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ
    – ಕರ್ನಾಟಕದಲ್ಲಿ ಕನ್ನಡವೇ ಮೊದಲು

    ಬೆಂಗಳೂರು: ಭಾನುವಾರ ನಡೆದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) NIMHANS 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸದಿರುವುದು ಅಕ್ಷಮ್ಯ ಎಂದಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್

    ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್‍ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ. ಅಯ್ಯೋ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕವಾಗಿ ಕನ್ನಡ ಭಾಷೆಗೆ ಆಗಿರುವ ಅಪಮಾನವನ್ನು ಖಂಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

    ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:   ನಮ್ಮ ರಚನಾತ್ಮಕ ಸಲಹೆಗಳನ್ನು ಚೀನಾ ಒಪ್ಪಿಲ್ಲ: ಭಾರತೀಯ ಸೇನೆ

    ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ಇದನ್ನೂ ಓದಿ: ತೆಂಗಿನಕಾಯಿ ತದ್ರೂಪಿ ಸೃಷ್ಠಿ ಯತ್ನ ಯಶಸ್ವಿ

    ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ವಿರೋಧ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

    ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ರಾಜಕಾರಣದಲ್ಲೂ ಕನ್ನಡಿಗರಿಗೆ ಪಂಗನಾಮ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ನುಡಿದಿದ್ದಾರೆ.

  • ಕಲಬುರಗಿಯಲ್ಲಿ ಮತ್ತೆ ಕಂಪಿಸಿದ ಭೂಮಿ – ಗ್ರಾಮಸ್ಥರಲ್ಲಿ ಆತಂಕ

    ಕಲಬುರಗಿಯಲ್ಲಿ ಮತ್ತೆ ಕಂಪಿಸಿದ ಭೂಮಿ – ಗ್ರಾಮಸ್ಥರಲ್ಲಿ ಆತಂಕ

    ಕಲಬುರಗಿ: ಕಲಬುರಗಿ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಮತ್ತೆ ಲಘು ಭೂಮಿ ಕಂಪನ ಅನುಭವ ಆಗಿದೆ.

    ಇಂದು ಮುಂಜಾನ 6 ಗಂಟೆ ಸುಮಾರಿಗೆ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಲಚೇರಾ, ಗಡಿಕೇಶ್ವರ್, ರಾಜಾಪುರ ಸೇರಿದಂತೆ ಕೆಲವಡೆ ಲಘು ಭೂ ಕಂಪನ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಈ ಗ್ರಾಮಗಳಲ್ಲಿ ಮೇಲಿಂದ ಮೇಲೆ ಲಘು ಭೂ ಕಂಪನ ಉಂಟಾಗುತ್ತಿದ್ದು, ಇದೀಗ ಜನರು ಭಯದಲ್ಲಿಯೇ ಕಾಲ ಕಲಿಯುತ್ತಿದ್ದಾರೆ.

    earthquake

    ಶನಿವಾರ ಕೂಡ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಹಾಗೂ ಯರಕೊಂಡ ಗ್ರಾಮಗಳಲ್ಲಿ ನಸುಕಿನ ಜಾವ 5.40ರ ಸಮಯದಲ್ಲಿ ಎರಡು ಬಾರಿ ಲಘು ಭೂಕಂಪನ ಅನುಭವ ಆಗಿದ್ದು, ಕಂಪನಕ್ಕೆ ಮನೆಯಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿತ್ತು. ಅಲ್ಲದೇ ಜನರು ಆತಂಕದಿಂದ ಮನೆಯಿಂದ ಹೊರಬಂದಿದ್ದರು. ಇದನ್ನೂ ಓದಿ: ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

    ಶುಕ್ರವಾರ ಕೂಡಾ ಗ್ರಾಮದಲ್ಲಿ ಲಘು ಭೂ ಕಂಪನವಾಗಿತ್ತು. ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬಾರಿ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಭಾರಿ ಸದ್ದು ಕೇಳಿ ಬರ್ತಿತ್ತು. ಇದೀಗ ಜನರಿಗೆ ಮೇಲಿಂದ ಮೇಲೆ ಲಘು ಭೂಕಂಪನ ಅನುಭವ ಆಗುತ್ತಿದೆ. ಅಲ್ಲದೇ ಈ ವಿಚಾರವಾಗಿ ಕೂಡಲೇ ಸರ್ಕಾರ ನಿಖರ ಮಾಹಿತಿ ತಿಳಿಸಬೇಕು. ಒಂದು ವೇಳೆ ಭೂಕಂಪ ಕೇಂದ್ರ ಸ್ಥಾನ ಆಗಿದ್ದರೆ ಎರಡು ಗ್ರಾಮ ಸ್ಥಳಾಂತರಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದರು. ಇದನ್ನೂ ಓದಿ: ಕಲಬುರಗಿಯ ಎರಡು ಗ್ರಾಮಗಳಲ್ಲಿ ಮತ್ತೆ ಭೂಕಂಪನ

  • ವಿಜಯನಗರ ಆಯ್ತು, ಇದೀಗ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟಗಾರರಿಂದ ಒತ್ತಾಯ!

    ವಿಜಯನಗರ ಆಯ್ತು, ಇದೀಗ ಚಿಕ್ಕೋಡಿ ಜಿಲ್ಲೆಗಾಗಿ ಹೋರಾಟಗಾರರಿಂದ ಒತ್ತಾಯ!

    ಚಿಕ್ಕೋಡಿ: ಬೆಳಗಾವಿ ನಾಯಕರು ಮನಸ್ಸು ಮಾಡಿದರೆ ರಾಜ್ಯದ ಸರ್ಕಾರವನ್ನು ಬದಲಿಸುವ ಶಕ್ತಿಯನ್ನು ಹೊಂದಿದ್ದಾರೆ. ಹಲವಾರು ದಶಕಗಳಿಂದ ಚಿಕ್ಕೋಡಿ ಜಿಲ್ಲೆ ಮಾಡಿ ಎಂದು ಹೋರಾಟಗಳು, ಪ್ರತಿಭಟನೆಗಳು ನಡೆಯುತ್ತಲ್ಲೇ ಇವೆ. ಆದರೆ, ಇನ್ನೂ ಕೂಡ ಜಿಲ್ಲೆಯ ಕನಸು ನನಸಾಗದೆ ಉಳಿದಿದೆ. ಹೀಗಾಗಿ ಜನಪ್ರತಿನಿಧಿಗಳ ವಿರುದ್ಧ ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಆಡಳಿತಾತ್ಮಕವಾಗಿ, ಜನಸಂಖ್ಯಾನುಸಾರವಾಗಿ, ವಿಸ್ತಿರ್ಣಾನುಸಾರವಾಗಿ ಅತ್ಯಂತ ದೊಡ್ಡ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 14 ತಾಲೂಕುಗಳಿವೆ. ಬಹುಷ: ರಾಜ್ಯದ ಬೇರೆ ಯಾವ ಜಿಲ್ಲೆಯಲ್ಲೂ ಇಷ್ಟು ಪ್ರಮಾಣದ ತಾಲೂಕುಗಳು ಉಪವಿಭಾಗಗಳು ಇರಲಿಕ್ಕಿಲ್ಲ. ಸದ್ಯ ಬಳ್ಳಾರಿ ಜಿಲ್ಲೆಯ ವಿಭಜನೆ ಈಗ ಬೆಳಗಾವಿಯಲ್ಲಿ ಬೆಂಕಿ ಎಬ್ಬಿಸಿದೆ. ಚಿಕ್ಕೋಡಿಯೂ ಸಹ ಪ್ರತ್ಯೇಕ ಜಿಲ್ಲೆಯಾಗಬೇಕು ಎಂಬ ಹಲವಾರು ವರ್ಷಗಳ ಕೂಗಿಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳ ಸ್ಪಂದನೆ ಇಲ್ಲದ ಕಾರಣದಿಂದ ಜಿಲ್ಲಾ ವಿಭಜನೆಯ ಕನಸು ಕನಸಾಗೆ ಉಳಿದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ

    ಸಚಿವ ಆನಂದ್ ಸಿಂಗ್, ಸಾಕಷ್ಟು ವಿರೋಧದ ನಡುವೆಯೂ ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಪ್ರತ್ಯೇಕ ಮತ್ತು ಸ್ವತಂತ್ರ ಜಿಲ್ಲೆಯಾಗಿ ರಚನೆಯಾಗಿದೆ. ಬೆಳಗಾವಿಯ ಮಟ್ಟಕ್ಕೆ ಹೇಳುವುದಾದರೆ ಜಿಲ್ಲಾ ವಿಭಜನೆಗೆ ರಾಜಕೀಯ ಹಿತಾಸಕ್ತಿಯ ಕೊರತೆಯಂತೂ ಎದ್ದು ಕಾಣುತ್ತಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಚಿಕ್ಕೋಡಿ ಉಪವಿಭಾಗದ ಹುಕ್ಕೇರಿ, ನಿಪ್ಪಾಣಿ, ರಾಯಬಾಗ, ಚಿಕ್ಕೋಡಿ, ಕಾಗವಾಡ ಹಾಗೂ ಅಥಣಿ ತಾಲೂಕಿನ ಜನ ಸಂಪೂರ್ಣವಾಗಿ ಅವಲಂಬಿತವಾಗಿರುವುದು ಮಹಾರಾಷ್ಟ್ರದ ಮಾರುಕಟ್ಟೆಗಳು. ಏಕೆಂದರೆ ಇವರು ಬೆಳಗಾವಿ ಜಿಲ್ಲಾ ಮಾರುಕಟ್ಟೆಗಳಿಗೆ ತೆರಳಬೇಕಾದರೆ ನೂರಾರು ಕಿ.ಮೀ ಕ್ರಮಿಸಬೇಕು ಹೀಗಾಗಿ ಈ ಭಾಗದ ಜನ ಅವಲಂಬಿತವಾಗಿರುವುದು ಮಹಾರಾಷ್ಟ್ರದ ಮಿರಜ, ಸಾಂಗಲಿ, ಕೊಲ್ಲಾಪುರ, ಇಚಲಕರಂಜಿ ಅಂತಹ ದೊಡ್ಡ ನಗರಗಳ ಮೇಲೆ ಹೀಗಾಗಿ ನಮ್ಮ ತೆರಿಗೆ ಹಣವೆಲ್ಲ ಮಹಾರಾಷ್ಟ್ರ ಪಾಲಾಗುತ್ತಿದ್ದು, ಕರ್ನಾಟಕಕ್ಕೆ ಇದರಿಂದ ಹಾನಿಯೇ ಹೊರತು ಲಾಭವಿಲ್ಲ. ಇದನ್ನೂ ಓದಿ: ಶಿರಸಿಯಲ್ಲಿ ಶತಕ ದಾಟಿದ ಡೀಸಲ್ ದರ-ಸಾಗಾಟ ವೆಚ್ಚ ದುಬಾರಿ

    ಜಿಲ್ಲೆಯ ಜನಪ್ರತಿನಿಧಿಗಳ ವೈಮನಸ್ಸಿನಿಂದ ಹಲವು ದಶಕಗಳಿಂದ ಹೋರಾಟ ಮಾಡುತ್ತಿದ್ದರು ಸಹ ಚಿಕ್ಕೋಡಿ ಮಾತ್ರ ಜಿಲ್ಲೆಯಾಗುತ್ತಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ 14 ಶಾಸಕರು ಇದ್ದರು ಪ್ರಯೋಜನ ಮಾತ್ರ ಏನಿಲ್ಲ. ಮುಂಬರುವ ಬೆಳಗಾವಿ ಅಧಿವೇಶನ ನಡೆಯುವಷ್ಟರಲ್ಲಿ ಚಿಕ್ಕೋಡಿ ಜಿಲ್ಲೆಯಾಗಬೇಕು ಒಂದು ವೇಳೆ ಆಗದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಹೋರಾಟಗಾರರು ನೀಡಿದ್ದಾರೆ. ಹಲವಾರು ವರ್ಷಗಳಿಂದ ಜಿಲ್ಲೆಯಾಗಬೇಕೆಂದು ಹೋರಾಟಗಳು, ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಬಳ್ಳಾರಿ ವಿಭಜನೆ ಬಳಿಕ ಮತ್ತಷ್ಟು ಆಕ್ರೋಶಗೊಂಡ ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ನಮ್ಮ ಕಾಲಮಾನದವರಿಗೆ ಜಿಲ್ಲೆಯಂತೂ ಆಗಲಿಲ್ಲ ಮುಂದಿನ ಪೀಳಿಗೆಯವರಿಗಾದರೂ ಅನಕೂಲವಾಗಲಿ ಎಂಬುವುದು ಚಿಕ್ಕೋಡಿ ಉಪವಿಭಾಗದ ಜನರ ಕೂಗಾಗಿದ್ದು, ಇದಕ್ಕೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದನೆ ನೀಡುತ್ತದೆ ಎಂದು ಕಾದು ನೋಡಬೇಕಿದೆ.

  • ಡಿಎಪಿ, ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ

    ಡಿಎಪಿ, ಪೊಟ್ಯಾಷ್‍ಗಾಗಿ ರಾಜ್ಯದಿಂದ ಕೇಂದ್ರಕ್ಕೆ ಬೊಮ್ಮಾಯಿ ಮನವಿ

    ನವದೆಹಲಿ: ರಾಜ್ಯದಲ್ಲಿನ ರೈತರಿಗೆ ಅನುಕೂಲ ಕಲ್ಪಿಸಲು ಹಿಂಗಾರು ಹಂಗಾಮಿಗೆ 32,000 ಟನ್ ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಗೊಬ್ಬರ ಪೂರೈಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶುಕ್ರವಾರ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಎಪಿ ಗೊಬ್ಬರ ಸಬ್ಸಿಡಿ ಪ್ರಮಾಣ ಶೇ.140 ಏರಿಕೆ – ಕೇಂದ್ರದಿಂದ ಐತಿಹಾಸಿಕ ನಿರ್ಧಾರ 


    ಡಿಎಪಿ ಮಾತ್ರವಲ್ಲದೆ, ರಾಜ್ಯಕ್ಕೆ 10,000 ಟನ್ ಪೊಟ್ಯಾಷ್ ಗೊಬ್ಬರದ ಬೇಡಿಕೆ ಇದೆ. ಅದರ ಪೂರೈಕೆಗೂ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ. ಸದ್ಯ ರಾಜ್ಯದಲ್ಲಿ ಯುರಿಯಾ ಗೊಬ್ಬರದ ಕೊರತೆ ಇಲ್ಲ. ಕೊರತೆ ಇರುವ ಗೊಬ್ಬರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಪತಿ ಮೇಲೆ ಅನುಮಾನ

    ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿ ಅಗಿರುವ ಬಗ್ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಜನತೆಗೆ ಮೊದಲ ಹಂತದ ಲಸಿಕೆಯನ್ನೂ, ಶೇ 70ರಷ್ಟು ಅರ್ಹರಿಗೆ ಎರಡನೇ ಹಂತದ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ಈಗ ರಾಜ್ಯದಲ್ಲಿ 51 ಲಕ್ಷ ಡೋಸ್ ಲಸಿಕೆ ಸಂಗ್ರಹ ಇದೆ ಎಂದೂ ಅವರು ವಿವರಿಸಿದರು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ