Tag: government

  • ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು

    ಬೆಳಗಾವಿ ಜನರ ಪ್ರೀತಿಗೆ ಬಿ.ಸಿ.ಪಾಟೀಲ್ ಸಂತಸ -“ರೈತರೊಂದಿಗೊಂದು ದಿನ” ಬಗ್ಗೆ ಕೌರವನ ಮಾತು

    ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈತರು ಜನರು ತೋರಿಸಿದ ಪ್ರೀತಿ ಸಂಸ್ಕೃತಿ ಹಳ್ಳಿ ಪದ್ಧತಿ ಕಂಡು ಸಂತಸವಾಗಿದೆ. ಇಲ್ಲಿ ಬಂದು “ರೈತರೊಂದಿಗೊಂದು ದಿನ”ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಸಾರ್ಥಕವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

    B.C Patil

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬಿವಶಿ ಗ್ರಾಮದಲ್ಲಿ ನಡೆದ 11ನೇ ರೈತರೊಂದಿಗೊಂದು ದಿನ ಕಾರ್ಯಕ್ರಮಕ್ಕೆ ಆಗಮಿಸಿ ವೇದಿಕೆ ಮೇಲೆ ಮಾತನಾಡಿದ ಅವರು, ಕೃಷಿಯಲ್ಲಿ ಅಭಿವೃದ್ದಿಯಾದರೂ ಕೃಷಿಕರು ಅಭಿವೃದ್ದಿಯಾಗುತ್ತಿಲ್ಲ. ಹೀಗಾಗಿ ಇದಕ್ಕೆ ಕಾರಣ ಹುಡುಕಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸಚಿವರಾದ ಬಳಿಕ ಕೃಷಿ ಇಲಾಖೆಯ ಉನ್ನತಾಧಿಕಾರಿಗಳ ಉಪಕುಲಪತಿಗಳ ತಜ್ಞರ ಸಭೆ ನಡೆಸಿ ರೈತರ ಆತ್ಮಹತ್ಯೆಗೆ ಕಾರಣವನ್ನು ಅರಿತು ಪರಿಹರಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರವನ್ನು ಹುಡುಕಿಕೊಂಡು ರೈತರು ಹೋಗಬಾರದು, ರೈತರನ್ನು ಹುಡುಕಿಕೊಂಡು ಸರ್ಕಾರ ಅವರ ಹತ್ತಿರ ಹೋಗಬೇಕು. ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ”ಕಾರ್ಯಕ್ರಮ ಮುಂದುವರೆಸಲಾಗಿದೆ. ರೈತರ ಸಮಸ್ಯೆಯನ್ನು ರೈತರಿಂದಲೇ ಕೇಳಿ ತಿಳಿದು ಪರಿಹಾರ ಕೊಡಬೇಕೆಂಬ ಉದ್ದೇಶ ತಮ್ಮದಾಗಿದೆ ಎಂದರು.

    B.C Patil

    ಯುವಕರನ್ನು ಕೃಷಿಯತ್ತ ಆಕರ್ಷಿಸುವ ನಿಟ್ಟಿನಲ್ಲಿ “ರೈತರೊಂದಿಗೊಂದು ದಿನ” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗಾವಿ ನಿಜಕ್ಕೂ ಸಮೃದ್ಧಿ ಜಿಲ್ಲೆಯಾಗಿದೆ. ಕೋಲಾರದಲ್ಲಿ ಮಳೆ ಕಡಿಮೆ ಬಂದರೂ ರೈತರು ಸಮೃದ್ಧವಾಗಿದ್ದಾರೆ ಎನ್ನುವುದಕ್ಕೆ ಕಾರಣ “ಸಮಗ್ರ ಕೃಷಿ ಪದ್ಧತಿ”. ಹೀಗಾಗಿ ಕೋಲಾರದ ಸಮಗ್ರ ಕೃಷಿ ಪದ್ಧತಿ ಎಲ್ಲರಿಗೂ ಮಾದರಿಯಾಗಬೇಕು. ಹತ್ತು ಬೆಳೆಗಳಲ್ಲಿ ಐದು ಬೆಳೆಗಳಿಗಾದರೂ ಲಾಭ ಬಂದೇ ಬರುತ್ತದೆ. ಒಂದು ಬೆಳೆ ಕೈಕೊಟ್ಟರೆ ಇನ್ನೊಂದು ಬೆಳೆ ಕೈಹಿಡಿಯುತ್ತದೆ. ವೈಜ್ಞಾನಿಕ ಪದ್ಧತಿಯನ್ನು ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು. ಇದನ್ನೂ ಓದಿ: ಪಾಳೆಗಾರ ಓಬಣ್ಣ ನಾಯಕನ ಸಮಾಧಿ ಧ್ವಂಸ ವೇಳೆ ನಾಗರಹಾವು ಅಡ್ಡಿ – ವೀಡಿಯೋ ವೈರಲ್

    B.C Patil

    ರೈತರು ಬೆಳೆಯುವ ರೀತಿ ಬದಲಾಗಬೇಕೆಂಬ ನಿಟ್ಟಿನಲ್ಲಿ ಅವರ ಮನೆ ಬಾಗಿಲಿಗೆ ಹೋಗಿ ಸ್ಫೂರ್ತಿ ತುಂಬುವ ಉತ್ತೇಜನಕಾರಿ ಕಾರ್ಯಕ್ರಮ “ರೈತರೊಂದಿಗೊಂದು ದಿನ”. ಸಾವಯವ ಆಹಾರಕ್ಕೆ ಉತ್ತಮ ಬೇಡಿಕೆಯಿದ್ದು, ಅವುಗಳ ಮಾರುಕಟ್ಟೆಯಾಗಬೇಕು. ಎಫ್.ಪಿ.ಓ ಮೂಲಕ ಸಾವಯವ ಆಹಾರ ಉತ್ಪನ್ನಗಳನ್ನು ತಯಾರಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಹಾರ ಸಂಸ್ಕರಣ ಘಟಕಗಳನ್ನು ಕೂಡ ರೈತರಿಗೆ ಸರ್ಕಾರ ನೀಡುತ್ತಿದೆ. ಹೈನು, ಕುರಿಸಾಗಾಣಿಕೆ, ಜೇನುಸಾಗಾಣಿಕೆ ಹೀಗೆ ಎಲ್ಲವನ್ನು ಕೃಷಿಕರು ಅಳವಡಿಸಿಕೊಳ್ಳಬೇಕು. ಕಬ್ಬಿನ ಹೊಸ, ಹೊಸ ತಳಿಗಳನ್ನು ಕಂಡು ಸಂತಸವಾಗಿದೆ. ರೈತರ ಜೊತೆಗೆ ಅವರ ಮಕ್ಕಳೊಂದಿಗೆ ಸಂವಾದ ಮಾಡುವುದಾಗಿ ಹೇಳಿದರು.

    B.C Patil

    ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್ ಪರಿಹಾರ ಕಾರ್ಯ ನಡೆದು ವರದಿ ಸಲ್ಲಿಕೆಯಾಗಿದೆ. ಸದ್ಯದಲ್ಲಿಯೇ ಎನ್.ಡಿ.ಆರ್.ಎಫ್ ಎಸ್.ಡಿ.ಆರ್.ಎಫ್ ಅಡಿ ಪರಿಹಾರ ರೈತರಿಗೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಜಿಲ್ಲೆಯ ಮುಖಂಡರು ಕೃಷಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 18 ತಿಂಗಳ ಬಳಿಕ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

  • 45 ದಿನ ಬಾರ್ ಬಂದ್- ಮದ್ಯಪ್ರಿಯರಿಗೆ ಶಾಕ್ ನೀಡಿದ ದೆಹಲಿ ಸರ್ಕಾರ

    45 ದಿನ ಬಾರ್ ಬಂದ್- ಮದ್ಯಪ್ರಿಯರಿಗೆ ಶಾಕ್ ನೀಡಿದ ದೆಹಲಿ ಸರ್ಕಾರ

    ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಅದರ ಅನುಸಾರ ಅಕ್ಟೋಬರ್ 1ರಿಂದ ಖಾಸಗಿ ಲಿಕ್ಕರ್ ಶಾಪ್‍ಗಳನ್ನು ತೆರೆಯುವಂತಿಲ್ಲ ಎಂದು ಆದೇಶವನ್ನು ಹೊರಡಿಸಿದೆ.

    ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 1ರಿಂದ 45 ದಿನಗಳ ಕಾಲ ಖಾಸಗಿ ಲಿಕ್ಕರ್ ಶಾಪ್, ಬಾರ್‍ಗಳನ್ನು ಮುಚ್ಚಲಾಗುವುದು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು ಅದರ ಅನುಸಾರ ಅಕ್ಟೋಬರ್ 1ರಿಂದ ಖಾಸಗಿ ಲಿಕ್ಕರ್ ಶಾಪ್‍ಗಳನ್ನು ತೆರೆಯುವಂತಿಲ್ಲ. ಅ.1ರಿಂದ ನವೆಂಬರ್ 17ರವರೆಗೆ ದೆಹಲಿಯಲ್ಲಿ ಲಿಕ್ಕರ್ ಅಥವಾ ಆಲ್ಕೋಹಾಲ್ ಮಾರಾಟ ಮಾಡುವಂತಿಲ್ಲ. ಇದನ್ನೂ ಓದಿ:  ನಾನಿರುವಾಗ ಪೊಲೀಸರು, ಕೋರ್ಟ್‍ಗೆ ಹೆದರಬೇಡಿ: ತ್ರಿಪುರಾ ಸಿಎಂ

    ಅಕ್ಟೋಬರ್ 1ರಿಂದ ಸರ್ಕಾರ ನಡೆಸುವ ಮದ್ಯದಂಗಡಿಗಳನ್ನು ಮಾತ್ರ ತೆರೆಯಲಾಗುತ್ತದೆ. ಖಾಸಗಿ ಮದ್ಯದಂಗಡಿಗಳು ನವೆಂಬರ್ 17ರವರೆಗೆ ಮುಚ್ಚಲಿವೆ. ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯಡಿ ಚಿಲ್ಲರೆ ಮಾರಾಟ ಕೇಂದ್ರಗಳನ್ನು ತೆರೆಯಲು ಸರ್ಕಾರ ಬಿಡ್ ಆಹ್ವಾನಿಸಿ ಟೆಂಡರ್ ಕರೆದಿತ್ತು. ಈ ಬಗ್ಗೆ ಸೆ.15ರಂದು ಸರ್ಕಾರ ಘೋಷಣೆ ಮಾಡಿತ್ತು. ಇದನ್ನೂ ಓದಿ:  ಚಾಮುಂಡೇಶ್ವರಿಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ

    ದೆಹಲಿಯಲ್ಲಿ ಮದ್ಯ ಮಾಫಿಯಾವನ್ನು ತಡೆಗಟ್ಟುವ ಉದ್ದೇಶದಿಂದ ದೆಹಲಿ ಸರ್ಕಾರ ಹೊಸ ಅಬಕಾರಿ ನೀತಿಯನ್ನು ಘೋಷಿಸಿತ್ತು. ದೆಹಲಿ ಸರ್ಕಾರವು ನಗರದಲ್ಲಿ ವಿಂಗಡಿಸಿರುವ 32 ವಲಯಗಳಲ್ಲಿ ಎಲ್-7ವಿ (ಭಾರತೀಯ ಮತ್ತು ವಿದೇಶಿ ಮದ್ಯ) ಪರವಾನಗಿಗಳಿಗೆ ಟೆಂಡರ್ ನೀಡಿತ್ತು. ಅಬಕಾರಿಯ ಈ ಹೊಸ ನೀತಿಯನ್ನು ಜನರಿಗಾಗಿ ಜಾರಿಗೊಳಿಸಲಾಗಿದ್ದು, ಎಲ್-7ವಿ (ಭಾರತೀಯ ಮತ್ತು ವಿದೇಶಿ ಮದ್ಯ) ರೂಪದಲ್ಲಿ ಚಿಲ್ಲರೆ ಮಾರಾಟವನ್ನು ಯಾವುದೇ ಮಾರುಕಟ್ಟೆ, ಮಾಲ್, ಕಮರ್ಷಿಯಲ್ ರೋಡ್ ಮತ್ತು ಏರಿಯಾ, ಸ್ಥಳೀಯ ಶಾಪಿಂಗ್ ಕಾಂಪ್ಲೆಕ್ಸ್ ಮುಂತಾದ ರಸ್ತೆಗಳಲ್ಲಿ ತೆರೆಯಬಹುದು. ಇದನ್ನೂ ಓದಿ:  ಕೊರೊನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ

    ಖಾಸಗಿ ಲಿಕ್ಕರ್ ಶಾಪ್‍ಗಳು ಹೊಸತಾಗಿ ಆಲ್ಕೋಹಾಲ್ ಸ್ಟಾಕ್ ಮಾಡುತ್ತಿಲ್ಲ, ಇದರಿಂದ ಈಗಾಗಲೇ ಕೆಲವು ಬಾರ್ ಹಾಗೂ ಲಿಕ್ಕರ್ ಶಾಪ್‍ಗಳಲ್ಲಿ ಆಲ್ಕೋಹಾಲ್ ಅಭಾವ ಕಂಡುಬರುತ್ತಿದೆ. ಖಾಸಗಿ ಲಿಕ್ಕರ್ ಶಾಪ್‍ಗಳಲ್ಲಿ ಬಹುತೇಕ ಅಂಗಡಿಗಳು ಪರ್ಮನೆಂಟ್ ಆಗಿಯೇ ಮುಚ್ಚಲಿವೆ. ಸದ್ಯಕ್ಕೆ ದೆಹಲಿಯಲ್ಲಿ 849 ಮದ್ಯದಂಗಡಿಗಳಿವೆ. ಅವುಗಳಲ್ಲಿ 276 ಖಾಸಗಿಯಾಗಿ ಲಿಕ್ಕರ್ ಶಾಪ್‍ಗಳಾಗಿವೆ. ಬಾಕಿ ಮದ್ಯದಂಗಡಿಗಳನ್ನು ದೆಹಲಿ ಸರ್ಕಾರದ ಏಜೆನ್ಸಿಗಳು ನಡೆಸುತ್ತವೆ.

  • ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    – ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಹುಬ್ಬಳ್ಳಿಯ ಬಿವಿಬಿ ಕಾಲೇಜು
    – ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಕೆಲಸ ನೀಡುವ ಉದ್ಯಮಪತಿಗಳಾಗಲಿ

    ಹುಬ್ಬಳ್ಳಿ: ಅದೊಂದು ಅಪರೂಪದ ಕ್ಷಣ, ಅಲ್ಲಿ ಅಧಿಕಾರದ ಹಮ್ಮು- ಬಿಮ್ಮು, ದೊಡ್ಡವರು, ಚಿಕ್ಕವರು ಯಾವುದೂ ಇರಲಿಲ್ಲ. ಬದಲಿಗೆ ವಿಧೇಯ ಹಳೆಯ ವಿದ್ಯಾರ್ಥಿಗಳಂತೆ ಅವರೆಲ್ಲರೂ ಬೆರೆತರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿದ್ದು, ಹುಬ್ಬಳ್ಳಿ ಪ್ರತಿಷ್ಠಿತ ಬಿವಿಬಿ ಎಂಜಿನಿಯರಿಂಗ್ ಕಾಲೇಜು.

    ಕೆಎಲ್‍ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಇ ಟೆಕ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ. ಇದರಲ್ಲಿ ವಿಶೇಷತೆ ಎಂದರೆ ಈ ಇಬ್ಬರೂ ಇದೇ ಕಾಲೇಜಿನ ಸಹಪಾಠಿಗಳು. ಹಾಗಾಗಿಯೇ ಇಂದು ಅವರು ಉನ್ನತ ಸ್ಥಾನಮಾನದಲ್ಲಿದ್ದರೂ ತಾವು ಕಾಲೇಜಿನ ವಿಧೇಯ ಹಳೆಯ ವಿದ್ಯಾರ್ಥಿಗಳು. ಸ್ನೇಹದ ಮುಂದೆ ಅಧಿಕಾರ ಗೌಣ ಎಂಬುದನ್ನು ಅಕ್ಷರಶಃ ತೋರಿಸಿಕೊಟ್ಟರು. ಇದನ್ನೂ ಓದಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಲೇಜಿನ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು, ಪುಸ್ತಕ ಪಡೆಯದ ಗ್ರಂಥಾಲಯಗಳು, ಹಾಸ್ಟೆಲ್, ಕ್ಯಾಂಪಸ್, ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ, ಶಿಸ್ತು, ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು ಎಂದು ಸ್ಮರಿಸಿಕೊಂಡರು.

    ಕಾರ್ಯಕ್ರಮಕ್ಕೆ ಮತ್ತಷ್ಟು ಸೊಬಗು ತಂದವರು ಸಚಿವ ಮುರುಗೇಶ್ ಆರ್. ನಿರಾಣಿ.ಇದೇ ಕಾಲೇಜಿನ ವಿದ್ಯಾರ್ಥಿಯಾಗಿ ಇಂದು ದೇಶದ ಹೆಮ್ಮೆಯ ಕೈಗಾರಿಕೋದ್ಯಮಿಯಾಗಿರುವ ಬೃಹತ್ ,ಮಧ್ಯಮ ಕೈಗಾರಿಕೆ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರು ತಮ್ಮ ಕಾಲೇಜಿನ ಹಳೆಯ ದಿನಗಳನ್ನು ಮೆಲುಕು ಹಾಕಿದರು. ಇದನ್ನೂ ಓದಿ: ಎಸಿಬಿ ಬಲೆಗೆ ಬಿದ್ದ ಗುಡಸ ಗ್ರಾಮ ಪಂಚಾಯತ್ ಗುಮಾಸ್ತ

    ನಾನು ಇಂಜಿನಿಯರಿಂಗ್‍ನಲ್ಲಿ ಹೆಚ್ಚು ಅಂಕಗಳನ್ನು ತೆಗೆದುಕೊಂಡಿದ್ದರೆ ಪ್ರೊಫೆಸರ್ ಅಥವಾ ಹೆಚ್ಚೆಂದರೆ ಎಇಇ ಆಗುತ್ತಿದ್ದೆ. ಆದರೆ ನಾವು 35 ಅಂಕದ ಕೆಟಗೆರಿಯವರು. ಅದಕ್ಕೆ ಕೈಗಾರಿಕಾ ಸಚಿವನಾದೆ ಎಂದು ಹೇಳುತ್ತಿದ್ದಂತೆ ಸಭಿಕರಿಂದ ಜೋರಾದ ಚಪ್ಪಾಳೆಯ ಸುರಿಮಳೆಯೇ ಸುರಿಯಿತು. ಇದಕ್ಕೆ ಅಷ್ಟೇ ಹಾಸ್ಯಭರಿತವಾಗಿ ಪ್ರತಿಕ್ರಿಯಿಸಿದ ನಿರಾಣಿ ಅವರು, ನಿಮ್ಮ ಚಪ್ಪಾಳೆ ನೋಡಿದರೆ ಇಲ್ಲಿ ನನ್ನ ಕೆಟಗರಿಯವರೇ ಬಹಳ ಜನ ಇದ್ದಾರೆಂದು ತಿಳಿಯುತ್ತದೆ ಎಂದು ತಮಾಷೆ ಮಾಡಿದರು.

    ನಾನು ಈ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಬಹಳ ಖಯಷಿಯಾಗುತ್ತದೆ. ಪ್ರಧಾನಿ,ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕರ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೆನೆ. ಅದಕ್ಕಿಂದ ಖುಷಿ ಈ ಕಾರ್ಯಕ್ರಮ ನೀಡುತ್ತಿದೆ. ಬಿವಿಬಿ ಕಾಲೇಜು ಸಾಕಷ್ಟು ಜನ ಮೇಧಾವಿಗಳನ್ನು ನೀಡಿದೆ. ವಿಶ್ವದಲ್ಲೇ ಶ್ರೇಷ್ಠ ಐಟಿ ಕಂಪನಿಯಾದ ಇನ್ಫೋಸಿಸ್‍ನ ನಾರಾಯಣಮೂರ್ತಿ ಅವರ ಪತ್ನಿ ಸುಧಾಮೂರ್ತಿ, ಬಿಜೆಪಿಯ ಕೇಂದ್ರದ ಮಾಜಿ ಸಚಿವ ದಿ.ಅನಂತಕುಮಾರ ಅವರುಗಳು ಈ ಕಾಲೇಜಿನ ವಿದ್ಯಾರ್ಥಿಗಳು ಎಂದು ಹೆಮ್ಮೆಯಿಂದ ಹೇಳಿದರು. ಇದನ್ನೂ ಓದಿ: ಸುರೇಶ್ ಅಂಗಡಿ ಇಲ್ಲೇ ಚಿಕಿತ್ಸೆ ಪಡೆದಿದ್ದರೆ ಉಳಿಯುತಿದ್ದರೆನೋ? – ಶೆಟ್ಟರ್

    ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ ಎಂದು ಭಾವುಕರಾದರು.

    ಕೆಎಲ್‍ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು, ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. 3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಇಲ್ಲಿ ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಲಿ ಎಂದು ಕರೆ ಕೊಟ್ಟರು. ಸರ್ಕಾರದ ಅನೇಕ ಪ್ರೋತ್ಸಾಹದಾಯಕ ಯೋಜನೆಗಳ ಪ್ರಯೋಜನ ಪಡೆಯಬೇಕು. ಅಕ್ಟೋಬರ್ 15ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ.ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದು ಹೇಳಿದ್ದಾರೆ.

  • 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    ಹುಬ್ಬಳ್ಳಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ನೂತನ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ಕಾರ್ಯಕ್ರಮ ನೇರವೆರಿಸಿ ಮಾತನಾಡಿದ ಅವರು, ರಾಜಕಾರಣ ಮಾಡಲಿಕ್ಕೆ ಘೋಡಾ ಹೈ ಮೈದಾನ್ ಹೈ ಎಂದರು. ಸಬ್ ಲೋಗ್ ಹಮಕೋ ಪೇಯಚಾನ್ ಹೈ ಇದರ್ ( ರಾಜಕರಾಣ ಮಾಡಲು ಕುದುರೇನು ಇದೆ, ಮೈದಾನವು ಇದೆ. ಇಲ್ಲಿ ನಮಗೆ ಎಲ್ಲರೂ ಗೊತ್ತಿದ್ದವರೇ) ಎಂದು ಹಿಂದಿಯಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದ ಜನರನ್ನ ಉದ್ದೇಶಿಸಿ ಮಾತನಾಡಿದ ಸಿಎಂ, ಹುಬ್ಬಳ್ಳಿಯ ಕೆಲ ಬಡಾವಣೆಗಳ ಹೆಸರು ಹೇಳಿದರು. ಇದನ್ನೂ ಓದಿ:  ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ

    ರಾಜಕಾರಣ ಮಾಡುವಾಗ ಗೆರೆ ಹಾಕಿ ರಾಜಕಾರಣ ಮಾಡೋಣ, ಆದರೆ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ. ಡಿಜಿಯಿಂದ ಹಿಡಿದು ಕಾನ್ಸ್ಟೇಬಲ್‍ವರೆಗೂ ಎಲ್ಲರೂ ಫೀಲ್ಡಿಗಿಳಿದು ಕೆಲಸ ಮಾಡಬೇಕು. ಕೇವಲ ಆಫೀಸ್‍ನಲ್ಲಿ ಕುಳಿತು ಆರ್ಡರ್ ಮಾಡಿದರೆ ಆಗಲ್ಲ. ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಬಹಳ ಸುಧಾರಿಸಿದೆ. ಇದು ಬಹಳ ಶಾಂತಿಯುತ ನಗರ ಆದರೆ ಇತ್ತೀಚೆಗೆ ಇಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದರು.

  • ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ: ಮಮತಾ ಬ್ಯಾನರ್ಜಿ

    ಪ್ರಧಾನಿ ಮೋದಿಗೆ ನನ್ನ ಮೇಲೆ ಅಸೂಯೆ: ಮಮತಾ ಬ್ಯಾನರ್ಜಿ

    – ನನ್ನನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ

    ಕೋಲ್ಕತ್ತಾ: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಭಾಗವಹಿಸಲು ಕೊಡದ ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಮೇಲೆ ಕೇಂದ್ರ ಸರ್ಕಾರಕ್ಕೆ ಅಸೂಯೆ ಇದೆ. ಇಟಲಿಯಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಸ್ಯಾಂಟ್ ಎಜಿಡಿಯೋ ಸಮುದಾಯದ, ರೋಮ್ ಮೂಲದ ಕ್ಯಾಥೋಲಿಕ್ ಫೌಂಡೇಶನ್ ಆಯೋಜಿಸಿದೆ. ಅದರಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಮಮತಾ ಬ್ಯಾನರ್ಜಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಆದರೆ ನಿನ್ನೆ ಕೇಂದ್ರ ಸಚಿವಾಲಯ ಅವಕಾಶ ಇಲ್ಲ ಎಂದು ಹೇಳಿದೆ. ಹಾಗೇ, ಯಾವುದೇ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವಂತ ಕಾರ್ಯಕ್ರಮ ಇದಲ್ಲ ಎಂದಿದೆ. ಇದನ್ನೂ ಓದಿ:  ಗುಲಾಬ್ ಚಂಡಮಾರುತ ಎಫೆಕ್ಟ್ – ಬೀದರ್‌ನಲ್ಲಿ ಧಾರಾಕಾರ ಮಳೆ

    ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಜಾಗತಿಕ ಶಾಂತಿ ಸಂಬಂಧಪಟ್ಟು ರೋಮ್‍ನಲ್ಲಿ ಒಂದು ಸಮ್ಮೇಳನ ಇತ್ತು. ನನಗೂ ಆಮಂತ್ರಣವಿತ್ತು. ಆ ಸಭೆಯಲ್ಲಿ ಜರ್ಮನ್ ಚಾನ್ಸಲರ್, ಪೋಪ್ ಫ್ರಾನ್ಸಿಸ್ ಕೂಡ ಭಾಗವಹಿಸುತ್ತಾರೆ. ನಾನು ಆ ಕಾರ್ಯಕ್ರಮಕ್ಕೆ ಹೋಗಲು ಇಟಲಿ ಕೂಡ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ನಿರಾಕರಿಸಿದೆ. ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಕೇಳಿದ್ದಕ್ಕೆ ಮುಖ್ಯಮಂತ್ರಿಗಳು ಭಾಗವಹಿಸುವ ಸಮಾರಂಭವಲ್ಲ ಎಂಬ ಉತ್ತರ ಕೊಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಸೈಕಲ್‍ನಲ್ಲಿ ಬಟ್ಟೆ ಮಾರುವ ವ್ಯಾಪಾರಿ ಪುತ್ರ UPSC ಪರೀಕ್ಷೆಯಲ್ಲಿ 45ನೇ ರ್‍ಯಾಂಕ್

    ನನ್ನನ್ನು ತಡೆಯಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಹಾಗಂತ ನಾನೇನೂ ವಿದೇಶಗಳಿಗೆ ಭೇಟಿ ನೀಡಲು ತುಂಬ ಆಸಕ್ತಳಾಗಿಯೂ ಇಲ್ಲ. ಆದರೆ ಇದು ದೇಶದ ಗೌರವದ ಪ್ರಶ್ನೆ. ಪ್ರಧಾನಿ ಮೋದಿ ಯಾವಾಗಲೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾನೂ ಕೂಡ ಒಬ್ಬ ಹಿಂದು ಮಹಿಳೆ. ಆದರೂ ನನಗೆ ಅನುಮತಿ ನೀಡಿಲ್ಲ. ಅವರಿಗೆಲ್ಲ ನನ್ನ ಕಂಡರೆ ತುಂಬ ಅಸೂಯೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಇಟಲಿಯಲ್ಲಿ ನಡೆಯಲಿರುವ ಶಾಂತಿ ಸಮ್ಮೇಳನಕ್ಕೆ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಮತ್ತು ಪೋಪ್ ಫ್ರಾನ್ಸಿಸ್ ಸೇರಿ ಸುಮಾರು 500 ಧಾರ್ಮಿಕ ಹಾಗೂ ರಾಜಕೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ.

  • ಹಿಂದೂತ್ವ, ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ: ಅಭಯ್ ಪಾಟೀಲ್

    ಹಿಂದೂತ್ವ, ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ: ಅಭಯ್ ಪಾಟೀಲ್

    ಬೆಳಗಾವಿ: ಹಿಂದೂತ್ವ ಮತ್ತು ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ ಎಂದು ಬೆಳಗಾವಿ ಮಹಾನಗರ ಪಾಲಿಕೆ ನೂತನ ಬಿಜೆಪಿ ಸದಸ್ಯರಿಗೆ ಶಾಸಕ ಅಭಯ್ ಪಾಟೀಲ್ ಸಲಹೆ ನೀಡಿದ್ದಾರೆ.

    ಬೆಳಗಾವಿಯ ಮಹಾವೀರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅಭಯ್ ಪಾಟೀಲ್, ನಗರಸೇವಕರಿಗೆ ಇಂದು ಸಿಎಂ, ಪಕ್ಷದ ರಾಜ್ಯಾಧ್ಯಕ್ಷರು ಸನ್ಮಾನಿಸುತ್ತಿದ್ದು ನೀವು ಪುಣ್ಯವಂತರು. 1999ರಿಂದ ನಾನು ಬಿಜೆಪಿಯಲ್ಲಿದ್ದೇನೆ. ನನಗೆ ಇನ್ನೂ ಕೂಡ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷರು ಬಂದು ಸನ್ಮಾನಿಸಿಲ್ಲ. ನಿಮಗೆ ಇಂದು ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಂದು ಸನ್ಮಾನಿಸುತ್ತಿದ್ದಾರೆ. 1960 ರಿಂದ ಪಕ್ಷ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ ಇಂದು ಮೊದಲ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಉತ್ತಮವಾದ ಆಡಳಿತ ಮೂಲಕ ಬಿಜೆಪಿ ಪಾಲಿಕೆಯ ಅಭಿವೃದ್ಧಿಯತ್ತ ಗಮನಹರಿಸಲಿದೆ ಎಂದರು. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಇನ್ನು 20 ವರ್ಷ ನಿರುದ್ಯೋಗಿಗಳು: ಕಟೀಲ್

    ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಪಾಲಿಕೆ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. 35ಜನ ನೂತನ ಸಚಿವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಭೈರತಿ ಬಸವರಾಜ್, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಮಾಜಿ ಸಂಸದ ಪ್ರಭಾಕರ್ ಕೋರೆ ಸೇರಿ ಹಲವರು ಉಪಸ್ಥಿತಿರಿದ್ದರು. ಇದನ್ನೂ ಓದಿ: ರೈಲಿಗೆ ದಿವಂಗತ ಸುರೇಶ್ ಅಂಗಡಿ ಹೆಸರಿಡರಲು ಶಿಫಾರಸ್ಸು ಮಾಡ್ತೇನೆ: ಬೊಮ್ಮಾಯಿ

  • ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ಹೈದರಾಬಾದ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

    ಆಂಧ್ರ ಪ್ರದೇಶ ಸರ್ಕಾರ, ವೈಎಸ್‍ಆರ್ ಕಾಂಗ್ರೆಸ್ ಬಂದ್‍ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ:  ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

    ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‍ಗೆ ಬೆಂಬಲ ಸೂಚಿಸಿದ್ದಾರೆ.ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‍ಗೆ ಬೆಂಬಲ ಘೋಷಿಸಿವೆ.

  • ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ

    ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ

    ಹಾಸನ: ನಾನು ಕಾಂಗ್ರೆಸ್‍ಗೆ ಹೋಗುತ್ತೇನೆ ಎನ್ನುವವರಿಗೆ ತಲೆ ಕೆಟ್ಟಿದೆ ಎಂದು ಶಾಸಕ ಶಿವಲಿಂಗೇಗೌಡ ಹಾಸನದಲ್ಲಿ ಆಕ್ರೋಷ ಹೊರಹಾಕಿದ್ದಾರೆ.

    ಮಾಧ್ಯಮದವರೊಂದಿಗೆ ಹಾಸನಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ಊಹಾಪೋಹ ಹಬ್ಬಿಸುತ್ತಿರುವ ರಾಜಕೀಯ ನಾಯಕರ ವಿರುದ್ಧ ಕಿಡಿಕಾರಿದ ಶಾಸಕ ಶಿವಲಿಂಗೇಗೌಡ, ಆಡಳಿತ ಒಂದೂವರೆ ವರ್ಷ ಇದೆ. ಈ ದೇಶದ ರಾಜಕೀಯ ಪರಿಸ್ಥಿತಿ ಯಾರಾದರೂ ಚರ್ಚೆ ಮಾಡಿದ್ದಾರಾ? ಅದು ಬಿಟ್ಟು ಬೇರೆ ಚರ್ಚೆ ಆಗುತ್ತಿದೆ. ಯಾರ‍್ಯಾರಿಗೆ ತಲೆ ಕೆಟ್ಟಿದೆ ಯಾರಿಗೆ ಗೊತ್ತು, ಆದರೆ ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬಸ್‍ನಲ್ಲಿ ನಿದ್ದೆ ಮಾಡುವ ಅಭ್ಯಾಸ ಇದೆಯೇ?- ಈ ಸುದ್ದಿ ಓದಿ

    ಈ ಹಿಂದೆ ಬಸವರಾಜ ಬೊಮ್ಮಯಿ ಅವರು ಕಣಕಟ್ಟೆ ಹೋಬಳಿಯ ಆರು ಕೆರೆಗೆ ನೀರು ಕೊಟ್ಟರು. ಅವರಿಗೆ ಚಿನ್ನದ ಉಂಗುರ ತೊಡಿಸಿದ್ದೆ. ಅದಕ್ಕೆ ಬಿಜೆಪಿಗೆ ಹೋಗುತ್ತೇನೆ ಅಂಥಾ ಅರ್ಥನಾ? ಕೆಲಸ ಮಾಡಿಕೊಟ್ಟವರಿಗೆ ಕೃತಜ್ಞತೆಯನ್ನು ಯಾವ್ಯಾವುದೋ ರೂಪದಲ್ಲಿ ಸಲ್ಲಿಸುತ್ತೇವೆ. ಅದೇ ರೀತಿ ಸದನದಲ್ಲಿ ಚರ್ಚೆ ಆದಾಗ ಸಿದ್ದರಾಮಯ್ಯ ಅವರು ಮಾಡಿಕೊಟ್ಟ ಕೆಲಸ ಸ್ಮರಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಹುಚ್ಚುಗಣಿ ದೇವಾಲಯ ಧ್ವಂಸ, ಅಧಿಕಾರಿಗಳಿಂದ ತಪ್ಪಾಗಿದೆ: ಜೊಲ್ಲೆ

    ನಾನು ಪಕ್ಷ ಬಿಡುವ ಸಂದರ್ಭ ಒದಗಿ ಬಂದಿಲ್ಲ. ನಾನು ಜೆಡಿಎಸ್ ನಿಂದ ಗೆದ್ದು, ಬೇರೆ ಪಕ್ಷಕ್ಕೆ ಹೋಗೋಕೆ ಆಗುತ್ತಾ? ದಯಮಾಡಿ ಇದನ್ನೆಲ್ಲಾ ಹುಟ್ಟು ಹಾಕಬೇಡಿ ಎಂದು ಮನವಿ ಮಾಡಿದ್ದಾರೆ. ಇನ್ನು ನಾಳೆ ದೇವೇಗೌಡರ ಜೊತೆ ಬಿಡದಿಯಲ್ಲಿ ಸಭೆ ಇದೆ. ನಾನು ಅಲ್ಲಿಗೆ ಹೋಗುತ್ತಿದ್ದೇನೆ. ಸಭೆಗೆ ಯಾರ‍್ಯಾರು ಬರುತ್ತಾರೆ ಗೊತ್ತಿಲ್ಲ. ನನ್ನನ್ನು ಕರೆದಿದ್ದಾರೆ ನಾನು ಹೋಗುತ್ತಿದ್ದೇನೆ ಎಂದು ತಳಿಸಿದ್ದಾರೆ.

  • ಶಾಲಾ ಶುಲ್ಕ ಪಾವತಿ- ಸರ್ಕಾರದ ನೆರವಿಗೆ ಪೋಷಕರ ಆಗ್ರಹ

    ಶಾಲಾ ಶುಲ್ಕ ಪಾವತಿ- ಸರ್ಕಾರದ ನೆರವಿಗೆ ಪೋಷಕರ ಆಗ್ರಹ

    ಬೆಂಗಳೂರು: ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸರ್ಕಾರ ಸಹಾಯ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿ ಆಯೋಜಿಸಿದ್ದ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ನೂರಾರು ಪೋಷಕರು ಆಗ್ರಹಿಸಿದ್ದಾರೆ.

    ಕಳೆದ ಒಂದೂವರೆ ವರ್ಷಗಳಲ್ಲಿ ಲಾಕ್‍ಡೌನ್‍ನಿಂದಾಗಿ ಆದಾಯ ಹಾಗೂ ಉಳಿತಾಯವನ್ನು ಕಳೆದುಕೊಂಡು ಪೋಷಕರು ಸಂಕಷ್ಟದಲ್ಲಿದ್ದಾರೆ. ಈಗ ಸರ್ಕಾರವು ಅವರಿಗೆ ಸಹಾಯ ಮಾಡದಿದ್ದರೆ ಅನೇಕರಿಗೆ ತಮ್ಮ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸಲು ಸಾಧ್ಯವಾಗುವುದಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡರು. ಪತಿ ಹಾಗೂ ತಂದೆಯನ್ನು ಕಳೆದುಕೊಂಡಿರುವ ನಾನು ಇಬ್ಬರು ಮಕ್ಕಳನ್ನು ಓದಿಸಲು ಹಲವು ಮನೆಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಲಾಕ್‍ಡೌನ್‍ನಿಂದಾಗಿ ನನಗೆ ಒಂದೂವರೆ ವರ್ಷ ಉದ್ಯೋಗವಿರಲಿಲ್ಲ. ನಾನು ಮಕ್ಕಳ ಶಾಲಾ ಶುಲ್ಕ ಪಾವತಿಸಲು ಹೇಗೆ ಸಾಧ್ಯ? ಎಂದು ಪೋಷಕರಾದ ಪವಿತ್ರ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಪ್ರಶ್ನಿಸಿದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಆರ್.ರಮೇಶ್ ಕುಮಾರ್, ಪೋಷಕರಿಗೆ ನೆರವಾಗಲು ಸರ್ಕಾರ ಏನನ್ನಾದರೂ ಮಾಡಲೇ ಬೇಕು. ದೀರ್ಘಾವಧಿಯಲ್ಲಿ, ಸರ್ಕಾರಿ ಶಾಲೆಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದರು. ಇದನ್ನೂ ಓದಿ: ಬಸ್‍ನಲ್ಲಿ ನಿದ್ದೆ ಮಾಡುವ ಅಭ್ಯಾಸ ಇದೆಯೇ?- ಈ ಸುದ್ದಿ ಓದಿ

    ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, ಕಾನೂನಿನ ಪ್ರಕಾರ ಗುಣಮಟ್ಟದ ಹಾಗೂ ಉಚಿತ ಶಿಕ್ಷಣ ಪಡೆಯುವ ಹಕ್ಕನ್ನು ಮಕ್ಕಳು ಹೊಂದಿದ್ದಾರೆ. ಆದರೆ ಬಿಜೆಪಿ ಸರ್ಕಾರವು ಈ ಸಂಕಷ್ಟದ ಸಮಯದಲ್ಲಿ ಪೋಷಕರಿಗೆ ನೆರವಾಗಲು ನಿರ್ಲಕ್ಷ್ಯ ತೋರುತ್ತಿದೆ. ಅವರ ಬೇಡಿಕೆಗಳನ್ನು ಕೇಳಿ ನೆರವಾಗಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:  ಮಳೆಗಾಗಿ ಭಕ್ತನಿಂದ ಆಂಜನೇಯನಿಗೆ ಪ್ರಾರ್ಥನೆ – ಹೂ ಪ್ರಸಾದ ನೀಡಿದ ಹನುಮಂತ

    ಬೆಂಗಳೂರು ನಗರದ ಎಎಪಿ ಅಧ್ಯಕ್ಷರಾದ ಮೋಹನ್ ದಾಸರಿ ಮಾತನಾಡಿ, ಇಲ್ಲಿ ಕೇಳಿಬಂದ ಪೋಷಕರ ಬೇಡಿಕೆಗಳನ್ನು ನಾವು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‍ರವರಿಗೆ ತಲುಪಿಸುತ್ತೇವೆ. ಹಾಗೂ ಶಾಲಾ ಶುಲ್ಕಕ್ಕೆ ಸಂಬಂಧಿಸಿ ಪೋಷಕರಿಗೆ ನೆರವಾಗುವಂತಹ ವಿಸ್ತೃತ ಯೋಜನೆಯನ್ನು ಶೀಘ್ರದಲ್ಲೇ ರೂಪಿಸಬೇಕು ಹಾಗೂ ಪರಿಣಾಮಕಾರಿಯಾದ ಶಾಲಾ ನಿರ್ವಹಣಾ ಸಮಿತಿಗಳನ್ನು ರಚಿಸಬೇಕೆಂದು ಆಗ್ರಹಿಸುತ್ತೇವೆ. ದೆಹಲಿಯ ಎಎಪಿ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲೇ ಇಲ್ಲೂ ಕೂಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

    ಪೋಷಕರ ಸಂಘಟನೆಗಳು, ಸಮನ್ವಯ ಸಮಿತಿ ಹಾಗೂ ವಾಯ್ಸ್ ಆಫ್ ಪೇರೆಂಟ್ಸ್ ಸಂಘಟನೆಗಳು ಸರ್ಕಾರವು ನೆರವು ನೀಡದಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದವು. ತಮಗೆ ಬೆಂಬಲವಾಗಿರುವ ಎಎಪಿಯನ್ನು ಪೋಷಕರು ಶ್ಲಾಘಿಸಿದರು.

  • USನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತಂದ ಪ್ರಧಾನಿ ಮೋದಿ

    USನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್ ಭಾರತಕ್ಕೆ ತಂದ ಪ್ರಧಾನಿ ಮೋದಿ

    ನವದೆಹಲಿ: ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್‍ನಿಂದ 157 ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ತಂದಿದ್ದಾರೆ.

    ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್‍ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ. ಈ ಬಗ್ಗೆ ಪ್ರಧಾನಿ ಮೋದಿ (Narendra Modi)ಯವರೂ ಕೂಡ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.

    ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ. ಹೀಗೆ ವಾಪಸ್ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ. ಇದನ್ನೂ ಓದಿ:  ಹೂವಿನ ಬೆಲೆ ಕುಸಿತ, ಗುಲಾಬಿ ತೋಟಕ್ಕೆ ಬೆಂಕಿ ಇಟ್ಟ ರೈತ

    ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ. ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿ ಪ್ರತಿಬಿಂಬಕ ಕಲಾಕೃತಿಗಳಿವೆ. ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀರ್ಥಂಕರ , ಪದ್ಮಾಸನ ತೀರ್ಥಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ. ಇದನ್ನೂ ಓದಿ:  ಹುಟ್ಟುಹಬ್ಬದ ಪಾರ್ಟಿಗೆ ಆಗಮಿಸಿದ ಟೆಕ್ಕಿ ಸಾವು

    ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಯುಎಸ್ ಪ್ರವಾಸ ಮುಗಿಸಿ, ಅಲ್ಲಿಂದ ಹೊರಟಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು. ಸೆಪ್ಟೆಂಬರ್ 24ರಂದು ಕ್ವಾಡ್ ಶೃಂಗಸಭೆ (Quad Summit)ಯಲ್ಲಿ ಮಾತನಾಡಿದ್ದರು. ನಿನ್ನೆ (ಸೆಪ್ಟೆಂಬರ್ 25) ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ.