Tag: government

  • ಅಘ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರು ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ

    ಅಘ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರು ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ

    ಕಾಬೂಲ್: ತಾಲಿಬಾನಿಗಳ ಅಟ್ಟಹಾಸದ ಬಳಿಕ ಅಘ್ಘಾನಿಸ್ತಾನದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ನಡುವೆ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಅವಕಾಶವಿದ್ದರೆ ಅಂತಹ ವಿವಿಗಳಲ್ಲಿ ಮಹಿಳೆಯರು ಶಿಕ್ಷಣ ಪಡೆಯಬಹುದು ಎಂದು ಅಘ್ಘಾನಿಸ್ತಾನದ ಶಿಕ್ಷಣ ಸಚಿವ ಶೇಖ್ ಅಬ್ದುಲ್ ಬಕಿ ಹಕ್ಕಾನಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

    ಅಘ್ಘಾನಿಸ್ತಾನದಲ್ಲಿ ಮಹಿಳೆಯರ ಶಿಕ್ಷಣ ಕುರಿತಾಗಿ ರೂಪಿಸಿರುವ ಹೊಸ ನಿಯಮಗಳನ್ನು ತಿಳಿಸಿರುವ ಹಕ್ಕಾನಿ, ಪುರುಷ ಮತ್ತು ಮಹಿಳೆಯರನ್ನು ಪ್ರತ್ಯೇಕವಾಗಿ ಕೂರಿಸಿ ಅವರ ಮಧ್ಯೆ ಪರದೆ ಹಾಕಿರುವ ವ್ಯವಸ್ಥೆ ಇದ್ದರೆ ಅಂತಹ ವಿವಿಗಳಲ್ಲಿ ಮಹಿಳಾ ಅಭ್ಯರ್ಥಿಗಳು ಶಿಕ್ಷಣ ಪಡೆಯಬಹುದು. ಪದವಿ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು ಎಂಬ ನಿಯಮಾವಳಿ ರೂಪಿಸಿ ಮಹಿಳಾ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳ ಹೊಸ ಆದೇಶ- ಹುಡುಗ, ಹುಡುಗಿ ಜೊತೆಯಾಗಿ ಓದುವಂತಿಲ್ಲ

    ಈ ಹಿಂದೆ ಅಫ್ಘಾನಿಸ್ತಾನ ವಶ ಪಡೆದುಕೊಂಡ ಬಳಿಕ ತಾಲಿಬಾನಿಗಳು ಮಹಿಳಾ ಶಿಕ್ಷಣದ ಬಗ್ಗೆ ದಿನಕ್ಕೊಂದು ಆದೇಶಗಳನ್ನು ಹೊರಡಿಸುತ್ತಿದ್ದರು. ಹುಡುಗ ಮತ್ತು ಹುಡುಗಿಯರು ಶಾಲೆಗಳಲ್ಲಿ ಜೊತೆಯಾಗಿ ಓದುವಂತಿಲ್ಲ. ವಿದ್ಯಾರ್ಥಿಗಳು ಶಿಕ್ಷಕರು ಪಾಠ ಮಾಡುವ ಹಾಗಿಲ್ಲ. ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಶಿಕ್ಷಕಿಯರೇ ಪಾಠ ಮಾಡಬೇಕು ಎಂದು ಆದೇಶ ಹೊರಡಿಸಿಲಾಗಿತ್ತು. ಶೇಖ್ ಅಬ್ದುಲ್ ಬಾಕಿ ಹಕ್ಕಾನಿಯನ್ನು ಶಿಕ್ಷಣ ಸಚಿವ ಎಂದು ತಾಲಿಬಾನಿಗಳು ನೇಮಕ ಮಾಡಿದ್ದ ಬಳಿಕ ಇದೀಗ ಚರ್ಚೆ ನಡೆಸಿ ಪ್ರತ್ಯೇಕ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೂ ಮೊದಲು ಅಫ್ಘಾನಿಸ್ತಾನದ ಪೂರ್ವ ಹೆರಾತ್ ನಗರದಲ್ಲಿ ಕೋ-ಎಜುಕೇಶನ್ ಮೇಲೆ ನಿರ್ಬಂಧ ಹಾಕಲಾಗಿತ್ತು. ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭವನ್ನೇ ರದ್ದುಗೊಳಿಸಿದ ತಾಲಿಬಾನ್ ಸರ್ಕಾರ

  • ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ

    ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತೆಂದು ಸರ್ಕಾರದಿಂದ ಸುಳ್ಳು ಲೆಕ್ಕ: ರಾಮಲಿಂಗಾರೆಡ್ಡಿ

    ಬೆಂಗಳೂರು: ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಬೇಕಾಗುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾವಿನ ಸುಳ್ಳು ಲೆಕ್ಕ ಕೊಡುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

    ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್ ನಲ್ಲಿ ಸತ್ತಿರುವವರ ಸಂಖ್ಯೆ 37,318. ರಾಜ್ಯದಲ್ಲಿ ಜನನ ಹಾಗೂ ಮರಣ ಇಲಾಖೆಯ ಅಧಿಕೃತ ಅಂಕಿ ಅಂಶ ಹಾಗೂ ವರ್ಷವಾರು ಮೃತರ ಗಣತಿ ಪ್ರಕಾರ, 2018ರಲ್ಲಿ ಸತ್ತವರ ಸಂಖ್ಯೆ 4,83,511, 2019ರಲ್ಲಿ 5,08,584, 2020ರಲ್ಲಿ 5,51,808 ಜನ ಸತ್ತಿದ್ದಾರೆ. ಪ್ರತಿ ವರ್ಷ ಸತ್ತವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. 2021ರ ಆರಂಭಿಕ ಏಳು ತಿಂಗಳು ಅಂದರೆ ಜುಲೈ ತಿಂಗಳವರೆಗೂ 4.21 ಲಕ್ಷ ಜನ ಸತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಲಬುರಗಿ, ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಸಾಧ್ಯತೆ: ಸಚಿವ ಅಶೋಕ್

    ಪ್ರತಿ ವರ್ಷ ಆರಂಭಿಕ ಏಳು ತಿಂಗಳ ಸಾವಿನ ಸಂಖ್ಯೆ ನೋಡುವುದಾದರೆ, 2018ರಲ್ಲಿ 2.69 ಲಕ್ಷ ಜನ ಮೃತಪಟ್ಟರೆ, 2019ರಲ್ಲಿ 2.79 ಲಕ್ಷ ಜನ ಸತ್ತಿದ್ದಾರೆ, 2020ರಲ್ಲಿ 2.64 ಲಕ್ಷ ಜನ ಸತ್ತಿದ್ದರು. 2021ರಲ್ಲಿ 4,26,790 ಜನ ಸತ್ತಿದ್ದಾರೆ. ಅಂದರೆ 1.62 ಲಕ್ಷ ಜನ ಹೆಚ್ಚುವರಿಯಾಗಿ ಸಾವನ್ನಪ್ಪಿದ್ದಾರೆ. ಈ 1.62 ಲಕ್ಷ ಜನ ಹೇಗೆ ಸತ್ತಿದ್ದಾರೆ? ರಾಜ್ಯದಲ್ಲಿ ಸುನಾಮಿ, ಭೂಕಂಪ, ಚಂಡಮಾರುತ ಬಂದಿತ್ತೇ? ಕಾಲರಾ, ಪ್ಲೇಗ್ ನಂತಹ ಬೇರೆ ಕಾಯಿಲೆಗಳು ಬಂದಿತ್ತೆ ಎಂದು ಪ್ರಶ್ನಿಸಿದ್ದಾರೆ.

    ಕಳೆದ ವರ್ಷವೇ ಕೋವಿಡ್ ನಿಂದ 30 ಸಾವಿರ ಜನ ಸತ್ತಾಗ ಕೇವಲ 3 ಸಾವಿರ ಜನ ಎಂದು ಲೆಕ್ಕ ತೋರಿಸಿದ್ದರು. ಸರ್ಕಾರ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಸರ್ಕಾರ ಹೇಗೆ ಈ ಸುಳ್ಳು ಲೆಕ್ಕ ನೀಡುತ್ತಿದೆ ಎಂಬುದು ತಿಳಿಯಬೇಕಾದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತರಾಗಿ ಚಿಕಿತ್ಸೆ ಪಡೆದವರು, ಟಿಬಿ, ಕ್ಯಾನ್ಸರ್, ಹೃದಯ ಸಂಬಂಧಿ, ಬಿಪಿ, ಆರ್ಥರೈಟಿಸ್, ಪಾಶ್ರ್ವವಾಯು, ಸೇರಿದಂತೆ ಇತರೆ ಅನಾರೋಗ್ಯವಿರುವವರು ಸತ್ತರೆ ಕೋವಿಡ್ ಸಾವು ಎಂದು ಮರಣಪತ್ರ ನೀಡುವುದಿಲ್ಲ. ಸೋಂಕಿತರು ನಂತರ ನೆಗೆಟಿವ್ ಬಂದರೆ ಅವರನ್ನು ಕೋವಿಡ್ ಎಂದು ಪರಿಗಣಿಸುವುದಿಲ್ಲ. ಹೀಗೆ ಸರ್ಕಾರಗಳು ತಪ್ಪು ಸಾವಿನ ಲೆಕ್ಕ ನೀಡುತ್ತಿದೆ ಎಂದು ಆರೋಪಿಸಿದರು.

    ಈ ಯಾವುದೇ ಕಾಯಿಲೆ ಇಲ್ಲದವರು ಕೋವಿಡ್ ನಿಂದ ಸತ್ತಿದ್ದರೆ ಅದನ್ನು ಮಾತ್ರ ಕೋವಿಡ್ ಸಾವು ಎಂದು ಪರಿಗಣಿಸಿದ್ದಾರೆ. ಆ ರೀತಿ ಸತ್ತಿರುವವರು 37 ಸಾವಿರ ಜನ ಇದ್ದಾರೆ.ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ 42.80 ಲಕ್ಷ ಜನ ಭಾರತದಲ್ಲಿ ಕೋವಿಡ್ ನಿಂದ ಸತ್ತಿದ್ದಾರೆ ಎಂದು ವರದಿ ನೀಡಿದೆ. ಮೃತರಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ನಾವು ಆಗ್ರಹಿಸುತ್ತಿದ್ದೇವೆ. ಆದರೆ ಸರ್ಕಾರ ಕೇವಲ 1 ಲಕ್ಷ ಪರಿಹಾರ ಘೋಷಿಸಿದ್ದು, ಅದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಪರಿಹಾರ ಇಲ್ಲ, ಕುಟುಂಬದಲ್ಲಿ ಒಬ್ಬರಿಗೆ, ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಪರಿಹಾರ ಎಂಬ ಷರತ್ತುಗಳನ್ನು ಹಾಕಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಆಪರೇಷನ್‌ ಕಲಬುರಗಿ: ಖರ್ಗೆ, ದೇವೇಗೌಡರು ಚರ್ಚಿಸಿದ್ದಾರೆ ಎಂದ ಡಿ.ಕೆ. ಶಿವಕುಮಾರ್

    ದೇಶದಲ್ಲಿ 41 ಲಕ್ಷ ಜನ ಸತ್ತಿರುವುದನ್ನು ಮುಚ್ಚಿಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿವೆ. ಕೋವಿಡ್ ಮೃತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ತಾಂತ್ರಿಕವಾಗಿ ಮಾರ್ಗಸೂಚಿ ಹೊರಡಿಸಿ ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಈ ಅಂಕಿ ಅಂಶಗಳು ಕೇವಲ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟವರ ಸಂಖ್ಯೆಯಾದರೆ, ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲಿ ಮೃತಪಟ್ಟವರ ಸಂಖ್ಯೆ ಬೇರೆಯಾಗಿದೆ ಎಂದರು.

    ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ತನ್ನ ವೈಫಲ್ಯ ಮುಚ್ಚಿಹಾಕಲು ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ. ಅಧಿವೇಶನದಲ್ಲಿ ಕೋವಿಡ್ ವಿಚಾರ ಬಂದಾಗ ಈ ಎಲ್ಲ ವಿಚಾರವೂ ಪ್ರಸ್ತಾಪವಾಗಲಿದೆ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ಹೊರಹಾಕಿದರು.

  • ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿ ಬಿಜೆಪಿಯನ್ನು ಧ್ವಂಸ ಮಾಡಬೇಕು: ಚೇತನ್

    ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೆ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕೆಯಲ್ಲಿ ‘ಪಿಪಿಪಿ’ ಸಾಂಗ್ ಗುಂಗು – ಭರ್ಜರಿ ಸ್ಟೆಪ್ಸ್ ಹಾಕಿದ ಯೋಗಿ, ಕೃಷಿ ತಾಪಂಡ

    ಈ ಮುನ್ನ ಸೆಪ್ಟೆಂಬರ್ 6ರಂದು ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಚಂದನವನದ ಹಿರಿಯ ನಿರ್ಮಾಪಕ ಸಿ.ಜಯರಾಮ್ ಇನ್ನಿಲ್ಲ

  • 9 ದಿನ ಗಣೇಶೋತ್ಸವ ಆಚರಿಸುತ್ತೇವೆ ತಾಖತ್ ಇದ್ರೆ ಸರ್ಕಾರ ತಡೆಯಲಿ: ಶ್ರೀರಾಮಸೇನೆ

    9 ದಿನ ಗಣೇಶೋತ್ಸವ ಆಚರಿಸುತ್ತೇವೆ ತಾಖತ್ ಇದ್ರೆ ಸರ್ಕಾರ ತಡೆಯಲಿ: ಶ್ರೀರಾಮಸೇನೆ

    ಗದಗ: ಗಣೇಶೋತ್ಸವ ಆಚರಣೆಗೆ ಅಡೆತಡೆ ಮಾಡಿ ನಿಮ್ಮ ಲಾಠಿ ಏಟು ಹಾಗೂ ಬಂದೂಕಿನ ಗುಂಡಿಗೂ ಹೆದರುವುದಿಲ್ಲ. ನಿಮ್ಮ ಗುಂಡಿಗೆ ನಮ್ಮ ಎದೆ ಗುಂಡಿಗೆ ಒಡ್ಡಲು ಸಿದ್ದರಿದ್ದೇವೆ. ಯಾವುದಕ್ಕೂ ಬಗ್ಗುವ ಜಗ್ಗುವ ಮಾತೇ ಇಲ್ಲ. ತಾಖತ್ ಇದರೆ ಆಚರಣೆ ತಡೆಯಲಿ ಎಂದು ಶ್ರೀ ರಾಮಸೇನೆ ಸಂಘಟಿಕರು ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

     sri rama sene

    9 ದಿನದ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಡಿಸಿ ಆಫೀಸ್ ಬಳಿ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿ, ಕೂಡಲೇ ಗಣೇಶ ಹಬ್ಬದ ಮಾರ್ಗಸೂಚಿಗಳ ಪರಿಷ್ಕರಣೆ ಆಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

     sri rama sene

    ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ 5 ದಿನದ ಬದಲು ಜಿಲ್ಲೆಯಾದ್ಯಂತ 9 ದಿನ ಆಚರಿಸಲು ಶ್ರೀರಾಮಸೇನೆ ನಿರ್ಧಾರ ಮಾಡಲಾಗಿದೆ. ಇದಕ್ಕೆ ಸರ್ಕಾರ ಸಹಕಾರ ನೀಡಬೇಕು. ಜೊತೆಗೆ ಶಾಲಾ-ಕಾಲೇಜುಗಳಲ್ಲೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟಿಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೋಚಲು ಹಣವಿಲ್ಲದಾಗ ಹಲ್ಲೆಗೈದು ರೇಪ್ ಮಾಡಿದೆವು – ಸತ್ಯ ಬಿಚ್ಚಿಟ್ಟ 7ನೇ ಆರೋಪಿ

     sri rama sene

    ಶ್ರೀರಾಮಸೇನೆ ಧಾರವಾಡ ವಿಭಾಗದ ಸಂಚಾಲಕ ರಾಜು ಖಾನಪ್ಪನವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಅನೇಕ ಕಾರ್ಯಕರ್ತರು ಈ ಧರಣಿಯಲ್ಲಿ ಭಾಗವಹಿಸಿದ್ದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

  • ಜಾತಿಗಣತಿ ವರದಿ ಬಹಿರಂಗ ಆಗಬೇಕು: ಜಿ.ಪರಮೇಶ್ವರ್

    ಜಾತಿಗಣತಿ ವರದಿ ಬಹಿರಂಗ ಆಗಬೇಕು: ಜಿ.ಪರಮೇಶ್ವರ್

    ಉಡುಪಿ: ಜಾತಿಗಣತಿ ವರದಿ ಬಹಿರಂಗವಾಗಬೇಕು ಎಂದು ಕಾಂಗ್ರೆಸ್ ನಾಯಕ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

    ಜಾತಿಗಣತಿಗೆ ಸುಮಾರು 150 ಕೋಟಿ ರೂ. ಖರ್ಚಾಗಿದೆ. ಸರ್ಕಾರದ ಹಣ ಖರ್ಚು ಮಾಡಿ ವರದಿ ಸಿದ್ಧಪಡಿಸಲಾಗಿದೆ. ಆ ವರದಿ ಹೊರಗಡೆ ತರಬೇಕು ಎಂಬುದು ನಮ್ಮೆಲ್ಲರ ಅಭಿಪ್ರಾಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ನಮ್ಮ ಸರ್ಕಾರ ಇದ್ದಾಗ ವರದಿ ಸಂಪೂರ್ಣ ಆಗಿರಲಿಲ್ಲ. ಕಾಂತರಾಜ್ ಅವರು ಈಗ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ಕೈಯಲ್ಲಿರುವ ವರದಿಯನ್ನು ಅಸೆಂಬ್ಲಿಯಲ್ಲಿ ಇಟ್ಟು ಚರ್ಚೆ ಮಾಡಲಿ. ವರದಿಯಲ್ಲಿ ಸಮಸ್ಯೆ ಇದ್ದರೆ ಸರಿಪಡಿಸುವ ತೀರ್ಮಾನ ಕೈಗೊಳ್ಳಲಿ. ವರದಿ ಬಹಿರಂಗ ಮಾಡುವುದರಿಂದ ಸರ್ಕಾರಕ್ಕೆ ಮುಜುಗರ ಏನಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾರ್ಷಲ್‍ನನ್ನೇ ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ಚಾಲಕ

    ಯಾವುದೇ ಸಮುದಾಯ ಹೆಚ್ಚಿರುವುದು ಕಡಿಮೆ ಇರುವುದು ಸ್ವಾಭಾವಿಕ. ಜಾತಿಗಣತಿ ಒಪ್ಪಿಗೆ ಆಗದಿದ್ದರೆ, ಒಮ್ಮತ ಮೂಡದೆ ಇದ್ದರೆ ರೀ ಸರ್ವೆ ಮಾಡಬಹುದು. ಈ ವರದಿಯನ್ನು ಒಪ್ಪಿಕೊಳ್ಳುವ ಅಧಿಕಾರದ ಸರ್ಕಾರಕ್ಕಿದೆ ಎಂದರು.

  • ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಹಳೆ ಬೆಳೆ ಕೊಚ್ಚಿ ಹೋಯ್ತು – ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ ರೈತರು

    ಚಿಕ್ಕೋಡಿ: ರಣ ಭೀಕರ ಪ್ರವಾಹ ಬಂದು ಎರಡು ತಿಂಗಳು ಕಳೆದರೂ ನದಿ ತೀರದ ಸಂತ್ರಸ್ತರ ಸಂಕಷ್ಟ ಮುಂದುವರೆದಿದೆ. ರೈತರು ನಾಶವಾದ ಬೆಳೆ ತೆಗೆದು ಹೊಸ ಬೆಳೆ ಬಿತ್ತನೆಗೆ ಪರದಾಡುತ್ತಿದ್ದಾರೆ.

    ಭೀಕರ ಪ್ರವಾಹದಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ಕೊಚ್ಚಿ ಹೋಗಿ ನದಿ ತೀರದ ರೈತರು ಕಂಗಾಲಾಗಿದ್ದಾರೆ. ಈ ಪ್ರವಾಹಕ್ಕೆ ಕಬ್ಬು, ಸೊಯಾಬೀನ್, ಗೋವಿನ ಜೋಳ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಆದರೂ ಸಹ ಸರ್ಕಾರ ಮಾತ್ರ ರೈತರ ಸಹಾಯಕ್ಕೆ ಇದೂವರೆಗೂ ಮುಂದಾಗಿಲ್ಲ. ತಮ್ಮ ಜಮೀನುಗಳನ್ನು ಸ್ವಚ್ಛಗೊಳಿಸಿ ಬೇರೆ ಹೊಸ ಬೆಳೆ ಬಿತ್ತನೆ ಮಾಡಲು ರೈತರು ಹಣ ಇಲ್ಲದೆ ಪರದಾಡುತ್ತಿದ್ದಾರೆ. ಇದನ್ನೂ ಓದಿ: ಮಾರ್ಷಲ್‍ನನ್ನೇ ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ಚಾಲಕ

    ರೈತರಿಗೆ ಇಷ್ಟೆಲ್ಲಾ ಕಷ್ಟಗಳಿದ್ದರೂ, ಸರ್ಕಾರ ಹಣವನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆ ಪರಿಹಾರ ಸಿಗದೇ ರೈತರು ಸರ್ವೆ ಹೆಸರಿನಲ್ಲಿ ಕಾಲ ಕಳೆಯುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೇಗ ಬೆಳೆ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ತೆರಿಗೆ ವಸೂಲಿ ಮಾಡಲು ಸುಳ್ಳು ಲೆಕ್ಕ ಹೇಳಿ ದಾರಿ ತಪ್ಪಿಸ್ತಿದ್ದಾರೆ – ಸಾರ್ವಜನಿಕರ ಆಕ್ರೋಶ

  • ಡೆಂಗ್ಯೂ, ವೈರಲ್ ಫಿವರ್‌ನಿಂದ ಮಕ್ಕಳನ್ನು ರಕ್ಷಿಸಿ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಕಿಡಿ

    ಡೆಂಗ್ಯೂ, ವೈರಲ್ ಫಿವರ್‌ನಿಂದ ಮಕ್ಕಳನ್ನು ರಕ್ಷಿಸಿ: ಯುಪಿ ಸರ್ಕಾರದ ವಿರುದ್ಧ ಅಖಿಲೇಶ್ ಕಿಡಿ

    ಲಕ್ನೋ: ಡೆಂಗ್ಯೂ ಹಾಗೂ ವೈರಲ್ ಫಿವರ್‌ನಿಂದ ಮಕ್ಕಳನ್ನು ರಕ್ಷಿಸುವಲ್ಲಿ ಉತ್ತರ ಪ್ರದೇಶದ ಸರ್ಕಾರ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್  ವಾಗ್ದಾಳಿ ನಡೆಸಿದ್ದಾರೆ.

    ಫಿರೋಜಾಬಾದ್‍ನಲ್ಲಿ ಮಾತನಾಡಿದ ಅವರು, ವೈರಲ್ ಫಿವರ್ ಹಾಗೂ ಡೆಂಗ್ಯೂ ಅತೀ ವೇಗವಾಗಿ ಎಲ್ಲೆಡೆ ಹರಡುತ್ತಿದೆ. ಇದರಿಂದಾಗಿ ಅನೇಕ ಚಿಕ್ಕ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಈ ರೋಗಗಳು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿರುವ ಹಳ್ಳಿಗಳ ಪಟ್ಟಿಯನ್ನು ತಮ್ಮ ಕಾರ್ಯಕರ್ತರು ಸಿದ್ಧಪಡಿಸಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಆರೋಗ್ಯ ವ್ಯವಸ್ಥೆಗಳನ್ನು ತಕ್ಷಣ ಸುಧಾರಣೆಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್‍ಗಳಲ್ಲಿ ಪ್ರಯಾಣಿಕರ ಸುಲಿಗೆ – ಹಬ್ಬದ ಸೀಸನ್‍ನಲ್ಲಿ ಸಾರಿಗೆ ದಂಧೆ ಬಯಲು

    Akhilesh Yadav

    ಕೊರೊನಾ ಸಂಕಷ್ಟದ ಸಮಯದಲ್ಲಿ ಆರೋಗ್ಯ ವ್ಯವಸ್ಥೆ ಹೇಗೆ ಕುಗ್ಗಿತ್ತು ಎಂದು ಎಲ್ಲರೂ ನೋಡಿದ್ದಾರೆ. ಹಾಗಾಗಿ ಬಿಜೆಪಿ ಸರ್ಕಾರದ ಮೇಲೆ ಯಾವುದೇ ಭರವಸೆ ಇಲ್ಲ. ಆದರೆ ಇದೀಗ ಫಿರೋಜಾಬಾದ್‍ನಲ್ಲಿ ಡೆಂಗ್ಯೂ ಮತ್ತು ವೈರಲ್ ಫಿವರ್‌ನಿಂದ ಸಾಯುತ್ತಿರುವ ಮಕ್ಕಳನ್ನು ರಕ್ಷಿಸುವಂತೆ ಸರ್ಕಾರಕ್ಕೆ ಪ್ರತಿಯೊಬ್ಬರ ಕಡೆಯಿಂದ ಮನವಿ ಮಾಡಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಒಟ್ಟಾಗಿ ಹೋಗೋಣವೆಂದು ಹೆಚ್‍ಡಿಕೆಗೆ ಹೇಳಿದ್ದೇನೆ: ಮೈತ್ರಿ ಬಗ್ಗೆ ಸಿಎಂ ಸ್ಪಷ್ಟನೆ

    ಇದೇ ವೇಳೆ ಮುಜಾಫರ್ ನಗರದಲ್ಲಿ ರೈತರ ರ್‍ಯಾಲಿ ಕುರಿತಂತೆ ಮಾತನಾಡಿದ ಅವರು, ಈಗ ರೈತರು ಒಗ್ಗಟ್ಟಾಗಿದ್ದಾರೆ. ಬಿಜೆಪಿ ಸರ್ಕಾರ ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳಬೇಕು. ಬಿಜೆಪಿ ಸರ್ಕಾರವು ರೈತರ ಆದಾಯವನ್ನು ಎರಡರಷ್ಟು ಗೊಳಿಸುವುದಾಗಿ ಆಸೆ ತೋರಿಸಿತು. ಆದರೆ ಹಣದುಬ್ಬರ ಮಾತ್ರ ದ್ವಿಗುಣಗೊಂಡಿದೆ ಎಂದು ಹೇಳಿದ್ದಾರೆ.

  • ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿರುವುದಕ್ಕೆ ಖುಷಿ ಇಲ್ಲ: ಮುತಾಲಿಕ್

    ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿರುವುದಕ್ಕೆ ಖುಷಿ ಇಲ್ಲ: ಮುತಾಲಿಕ್

    ಧಾರವಾಡ: ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದ್ದಕ್ಕೆ ಸಮಾಧಾನ ಇದೆ. ಆದರೆ ಆನಂದ ಇಲ್ಲ ಎಂದು ಹಿಂದೂಪರ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬಕ್ಕೆ ನಾಲ್ಕು ದಿನ ಇರುವಾಗ ಅನುಮತಿ ನೀಡಿದ್ದನ್ನು ನೋಡಿ ನಗಬೇಕೊ ಅಳಬೇಕೊ ಗೊತ್ತಾಗ್ತಿಲ್ಲ. ವಾರ್ಡ್, ಗ್ರಾಮಕ್ಕೆ ಒಂದು ಗಣೇಶ ಅನ್ನೋ ನಿಯಮ ಸರಿಯಲ್ಲ. ನೀವು ಜನಾಶೀರ್ವಾದ ಯಾತ್ರೆಯಲ್ಲಿ ಏನು ಮಾಡಿದ್ರಿ ಅನ್ನೋದು ಜನಕ್ಕೆ ಗೊತ್ತಿದೆ. ಅವರು ಉಗೀತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ

    ನಮಗೆ ನೀವು ನಿಯಮ ಹೇಳ್ತೀರಾ? ನಮಗೇನು ನೀವು ಷರತ್ತು ಹಾಕುವ ಅಗತ್ಯವಿಲ್ಲ. ಕೊರೊನಾ ನಿಯಮಾನುಸಾರ ರಾತ್ರಿ 9ರ ನಂತರವೂ ಗಣೇಶೋತ್ಸವ ಆಚರಿಸ್ತೇವೆ ಎಂದು ಸರ್ಕಾರದ ಮಾರ್ಗಸೂಚಿಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವಕ್ಕೆ 5 ದಿನ ಅವಕಾಶ ಕೊಟ್ಟ ಸರ್ಕಾರ

    ಸರ್ಕಾರದ ಮಾರ್ಗಸೂಚಿ ಏನು?
    ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ 5 ದಿನಗಳ ಷರತ್ತುಬದ್ಧ ಅನುಮತಿ ನೀಡಿದೆ. ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗಣೇಶೋತ್ಸವ ಮೆರವಣಿಗೆ ಅವಕಾಶವಿಲ್ಲ. 30 ಜನರ ಮಿತಿ ನಿಗಧಿಪಡಿಸಿದ್ದು, ಅನುಮತಿ ಪಡೆದ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ. ವಾರ್ಡ್‍ಗೆ ಒಂದು ಅಥವಾ ಗ್ರಾಮಕ್ಕೊಂದು ಗಣಪತಿ ಕೂರಿಸಲು ಅವಕಾಶ ನೀಡಿದೆ.

    ಸರ್ಕಾರ ನಿಗದಿತ ಸ್ಥಳದಲ್ಲಿ ಭಕ್ತರು ಸೇರಲು ಅವಕಾಶ ನೀಡಿದೆ. ಗಣೇಶೋತ್ಸವದಲ್ಲಿ ಮನರಂಜನಾ ಕಾರ್ಯಕ್ರಮಗಳಾದ ಆರ್ಕೆಸ್ಟ್ರಾ, ಡಿಜೆ ಅದ್ಧೂರಿ ಮೆರವಣಿಗೆ ಅವಕಾಶ ನಿರಾಕರಿಸಲಾಗಿದ್ದು, ನಿಗದಿತ ಸಂಖ್ಯೆಯಲ್ಲಿ ಭಕ್ತರು ಸೇರಲು ಅವಕಾಶ ಕಲ್ಪಿಸಿದೆ. ಕೆರೆಗಳಲ್ಲಿ ಗಣೇಶ ವಿರ್ಸಜನೆಗೆ ನಿರ್ಬಂಧ ಹೇರಲಾಗಿದ್ದು, ಬಿಬಿಎಂಪಿ ಸೂಚಿಸಿದ ಸ್ಥಳದಲ್ಲೇ ವಿರ್ಸಜನೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಮತ್ತೆ ಒಂದಾದ ‘ಮುಂಗಾರು ಮಳೆ’ ಚಿತ್ರತಂಡ

    ಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲೆ ವಿಸರ್ಜನೆಗೆ ಅವಕಾಶ ಮಾಡಲಾಗಿದ್ದು, ಮೊಬೈಲ್ ಟ್ಯಾಂಕರ್‍ ನಲ್ಲಿ ವಿಸರ್ಜನೆಗೆ ಪ್ಲ್ಯಾನ್ ಮಾಡಲಾಗಿದೆ. ಇದರೊಂದಿಗೆ ಗಣೇಶೋತ್ಸವ ಮುಗಿಯುವವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಸಲು ತೀರ್ಮಾನಿಸಲಾಗಿದೆ.

  • ಯುಎಇ ವತಿಯಿಂದ ಡಿಜಿಟಲ್ ರೆವಲ್ಯೂಶನ್ ವೆಬಿನಾರ್ – ದುಬೈ ಸರ್ಕಾರದ ಜೊತೆಗೆ ಉನ್ನತ ಮಟ್ಟದ ಸಂವಾದ

    ಯುಎಇ ವತಿಯಿಂದ ಡಿಜಿಟಲ್ ರೆವಲ್ಯೂಶನ್ ವೆಬಿನಾರ್ – ದುಬೈ ಸರ್ಕಾರದ ಜೊತೆಗೆ ಉನ್ನತ ಮಟ್ಟದ ಸಂವಾದ

    ಅಬುಧಾಬಿ: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಬ್ಯಾರೀಸ್ ಚೇಂಬರ್ ಆಫ್ ಕಾನರ್ಸ್ (ಯುಎಇ) ವತಿಯಿಂದ ಸೆಪ್ಟೆಂಬರ್ 10ರಂದು ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್ ಶಿಪ್’ ಎಂಬ ವಿಷಯದಲ್ಲಿ ವೆಬಿನಾರ್ ಹಮ್ಮಿಕೊಂಡಿದೆ.

    ಬ್ಯುಸಿನೆಸ್ ನೆಟ್ ವರ್ಕಿಂಗ್ ಮೂಲಕ ಸಮಾಜದ ಉದ್ಯಮಿಗಳನ್ನು, ವೃತ್ತಿಪರರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಆ ಮೂಲಕ ವ್ಯಾಪಾರ ಸಬಲೀಕರಣ ಹಾಗೂ ಸಮಾಜ ಸೇವೆ ನಡೆಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಯುಎಇಯಲ್ಲಿ ಸಕ್ರಿಯವಾಗಿರುವ ಬಿಸಿಸಿಐ ಯುಎಇ ಚಾಪ್ಟರ್, ಯುವ ಉದ್ಯಮಿಗಳ ಹಾಗೂ ವೃತ್ತಿಪರರ ಆಸಕ್ತಿದಾಯಕ ವಿಷಯವಾದ ‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್ ಶಿಪ್’ ಕುರಿತು ಆನ್ ಲೈನ್ ವೆಬಿನಾರ್ ಹಮ್ಮಿಕೊಂಡಿದೆ ಎಂದು ಬ್ಯಾರೀಸ್ ಚೇಂಬರ್ಸ್ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಿಳಿಸಿದ್ದಾರೆ. ಇದನ್ನೂ ಓದಿ:ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!

    ದುಬೈ ಸರ್ಕಾರದ ಎಕೋನಮಿಕ್ ಡೆವಲಪ್ಮೆಂಟ್ ವಿಭಾಗದ ಮುಖ್ಯ ತಂತ್ರಜ್ಞ ರಾಶಿದ್ ಹಜಾರಿಯವರು, ಡಿಜಿಟಲ್ ಮಾಧ್ಯಮವು ಉದ್ಯಮರಂಗದಲ್ಲಿ ಸೃಷ್ಟಿಸಿದ ಹೊಸ ಸಂಚಲನದ ಬಗ್ಗೆ ಉಪಯುಕ್ತ ಮಾಹಿತಿಯನ್ನು ವೆಬಿನಾರ್ ಮೂಲಕ ನೀಡಲಿದ್ದಾರೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದು ಎಂದು ಬಿಸಿಸಿಐ ಯುಎಇ ಚಾಪ್ಟರ್ ತಿಳಿಸಿದೆ. ಇದನ್ನೂ ಓದಿ:ನನ್ನ ಹೃದಯ ನಿನ್ನ ಬಳಿ ಇದೆ – ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ ಕತ್ರಿನಾ ಪೋಸ್ಟ್

  • ದಸರಾ ಹಬ್ಬದಂತೆಯೇ ಸರಳವಾಗಿ ಗಣೇಶೋತ್ಸವ ಆಚರಣೆ: ಸುಧಾಕರ್

    ದಸರಾ ಹಬ್ಬದಂತೆಯೇ ಸರಳವಾಗಿ ಗಣೇಶೋತ್ಸವ ಆಚರಣೆ: ಸುಧಾಕರ್

    ಚಿಕ್ಕಬಳ್ಳಾಪುರ: ನಾಡಹಬ್ಬ ದಸರಾ ಆಚರಣೆ ಮಾದರಿಯಲ್ಲೇ ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಹೇಳಿದರು.

    ಸಿಎಂ ಹಾಗೂ ಅಧಿಕಾರಿಗಳ ಜೊತೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಿಂದಲೇ ವೀಡಿಯೋ ಸಂವಾದದಲ್ಲಿ ಭಾಗಿಯಾಗಿದ್ದ ಸಚಿವ ಸುಧಾಕರ್ ಅವರು ವಿಡಿಯೋ ಸಂವಾದದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ದಸರಾ ವನ್ನ ಸರಳ ಅಚರಿಸಬೇಕು ಅಂತ ಸಿಎಂ ತೀರ್ಮಾನ ತೆಗೆದುಕೊಂಡಿದ್ದಾರೆ. ಅದೇ ರೀತಿ ಗಣೇಶನ ಹಬ್ಬ ಸಹ ಸರಳ ಗಣೇಶ ಉತ್ಸವ ಆಚರಣೆ ಮಾಡಲು ತೀರ್ಮಾನಿಸಿಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಷರತ್ತುಬದ್ಧ ನಿಯಮಗಳೊಂದಿಗೆ ಗಣೇಶೋತ್ಸವಕ್ಕೆ ಅನುಮತಿ

    ಈ ಸಂಬಂಧ ಸಾಕಷ್ಟು ಚರ್ಚೆಯಾಗಿದ್ದು, 4 ಅಡಿಗಿಂತ ಕಡಿಮೆ ಎತ್ತರ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಲಾಗಿದೆ. ಗರಿಷ್ಟ 5 ದಿನ ಪ್ರತಿಷ್ಟಾಪನೆಗೆ ಅವಕಾಶವಿದೆ.ವಿಸರ್ಜನೆ ವೇಳೆ ನಿಗದಿತ ಮಂದಿಯಷ್ಟೇ ಭಾಗವಹಿಸಬೇಕು. ಯಾವುದೇ ಮೆರವಣಿಗೆಗೆ ಅವಕಾಶ ಇಲ್ಲ. ಆರ್ಕೆಸ್ಟ್ರಾ, ಡಿಜೆಗೆ ಅನುಮತಿ ಇಲ್ಲ. ಪೂಜೆ ವೇಳೆ ಒಮ್ಮೆ 20 ಮಂದಿಯಷ್ಟೇ ಭಾಗವಹಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಸ್ಯಾನಿಟೈಸೇಷನ್ ಮಾಡಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್

    ಗಣೇಶ ಪ್ರತಿಷ್ಠಾಪನಾ ಸಂಘಟಕರು ಸಮಿತಿಯವರಿಗೆ ಕಡ್ಡಾಯವಾಗಿ ವ್ಯಾಕ್ಸಿನ್ ಹಾಗೂ ಟೆಸ್ಟಿಂಗ್ ಆಗಿರಬೇಕು. ಈ ಎಲ್ಲಾ ಪ್ರಮುಖ ಮಾರ್ಗಸೂಚಿಗಳ ಮೂಲಕ ಕೋವಿಡ್ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು. ಈ ಎಲ್ಲಾ ಮಾರ್ಗಸೂಚಿಗಳ ಅನ್ವಯ ಗಣೇಶೋತ್ಸವ ವನ್ನ ಸರಳವಾಗಿ ಆಚರಿಸಿಬೇಕು. ಕೋವಿಡ್ ಮುನ್ನೆಚ್ಚರಿಕೆಗಳನ್ನ ಪಾಲನೆ ಮಾಡಬೇಕು ಅಂತ ಸಚಿವ ಸುಧಾಕರ್ ತಿಳಿಸಿದರು.