Tag: government

  • ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

    ಹಾಸನ: ಹೊರಗಡೆ ನಾಯಿಗಳು ಇದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ? ಹಾಗಂತ ಮಕ್ಕಳನ್ನು ತಡೆಯುವುದೋ, ನಾಯಿಗಳನ್ನೋ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಖಂಡನೀಯವಾದದ್ದು ವೈಯಕ್ತಿಕವಾಗಿ ಪಕ್ಷದ ಪರವಾಗಿ ಉಗ್ರವಾಗಿ ಖಂಡಿಸುತ್ತೇನೆ. ನೈತಿಕತೆ ಇದ್ದರೆ ಗೃಹ ಸಚಿವರು ಪ್ರಕರಣ ಸಂಬಂಧ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹೊರಬೇಕಾಗುತ್ತದೆ. ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ದೆಹಲಿಯಲ್ಲಿ ಕೆಲ ವರ್ಷಗಳ ಹಿಂದೆ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ರೀತಿ ನಡೆದಿದೆ. ಈ ಘಟನೆ ರಾಜ್ಯಕ್ಕೆ ಹಾಗೂ ಮೈಸೂರಿಗೆ ದೊಡ್ಡ ಕಪ್ಪುಚುಕ್ಕೆ ಎಂದ ಅವರು ಪ್ರಕರಣ ಸಂಬಂಧ ಪೊಲೀಸರನ್ನು ಗೃಹಸಚಿವರು ಸಮರ್ಥಿಸಿಕೊಳ್ಳುತ್ತಿರುವುದು ಹೇಸಿಗೆ ತರುತ್ತಿದೆ ಅವರ ವೈಯಕ್ತಿಕ ಲಾಭಕ್ಕಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    ಹೆಣ್ಣುಮಕ್ಕಳು ಸಂಜೆ 7 ಮೇಲೆ ಹೊರಬರಬಾರದು ಎಂದಾದರೆ, ಸಂಜೆ 6:00 ರ ಮೇಲೆ ಹೆಣ್ಣು ಮಕ್ಕಳು ಹೊರ ಬಾರದಂತೆ ಆದೇಶ ಹೊರಡಿಸಲಿ. ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತಿನಲ್ಲಿ ಇಡಬೇಕಿತ್ತು ಘಟನೆ ನಡೆದ ಸ್ಥಳ ನಗರ ಪ್ರದೇಶದಿಂದ ಆರೇಳು ಕಿಲೋಮೀಟರ್ ದೂರದಲ್ಲಿದೆ. ಇಲ್ಲಿ ಪೊಲೀಸರ ಗಸ್ತು ಮಾಡುವುದು ಕಷ್ಟಕರವಲ್ಲ ಎಂದಿದ್ದಾರೆ.

    ಈ ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುಡಿದು ತಿಂದು ಅನಾಗರಿಕವಾಗಿ ವರ್ತಿಸುತ್ತಿದ್ದಾರೆ. ಪೊಲೀಸರು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಬಿಜೆಪಿ ಸರ್ಕಾರ ಬಂದ ಮೇಲೆ ದಲಿತರು ಮಹಿಳೆಯರು ಮಕ್ಕಳು ಅಸಹಾಯಕರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದೆ. ನಿರ್ಭಯಾ ಪ್ರಕರಣದಲ್ಲಿ ದೆಹಲಿ ಸರ್ಕಾರ ಹೇಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ಶಿಕ್ಷೆ ನೀಡಿತು. ಅದೇ ರೀತಿ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

  • ರಾಜ್ಯದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಬೊಮ್ಮಾಯಿ

    ರಾಜ್ಯದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರದ ಬೆಂಬಲ: ಬೊಮ್ಮಾಯಿ

    ಬೆಂಗಳೂರು: ಉದ್ಯೋಗ ಸೃಷ್ಟಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂತಹ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜ್ಯುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು.

    ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಮಾತನಾಡಿಸಿದ ಅವರು, ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ. ಗೋಲ್ಡ್ ಕಂಟ್ರೋಲ್ ಕಾಯ್ದೆ ತೆಗೆದುಹಾಕಿದ ನಂತರ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಚಿನ್ನದ ವ್ಯಾಪಾರ ಉದ್ದಿಮೆಯಾಗಿ ಬೆಳೆದಿದೆ ಎಂದು ತಿಳಿಸಿದರು.

    ಭಾರತೀಯ ಆರ್ಥಿಕತೆಯಲ್ಲಿ ಉಳಿತಾಯ ಸಂಸ್ಕೃತಿ ಇದೆ. ನಮ್ಮ ಜನರ ಉಳಿತಾಯ ಮನೋಭಾವ ಆಭರಣ ಉದ್ದಿಮೆಗೆ ಸಹಕಾರಿಯಾಗಿದೆ. ಬ್ಯಾಂಕ್ ದಿವಾಳಿಯಾದರೂ ಚಿನ್ನ ನಮ್ಮ ಆಪತ್ಭಾಂದವ. ಒಡವೆ ಎಂದರೆ ಒಂದು ಆತ್ಮೀಯತೆ. ಆಭರಣದ ವಹಿವಾಟು ಅಂತಃಕರಣವುಳ್ಳ ವ್ಯಾಪಾರ, ಇದು ಬಹಳ ಪುರಾತನ ವೃತ್ತಿಯಾಗಿದ್ದು ಭಾವನಾತ್ಮಕ ಸಂಬಂಧ ಬೆಸೆಯುವಂಥದ್ದು ಅಂತ ತಿಳಿಸಿದರು.

    ಆಭರಣ ಮಾಡುವ ಕಲೆ ಸೂಕ್ಷ್ಮವಾದುದು. ಆಭರಣ ತಯಾರಿ ಕರ್ನಾಟಕದ ಪಾರಂಪರಿಕ ಕಲೆಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು. ಚಿನ್ನದ ವ್ಯಾಪಾರಿಗಳು ಸಮಾಜದ ಗೌರವ ಮತ್ತು ಬಾಂಧವ್ಯ ಕಾಪಾಡುವ ಬಂಧುಗಳು. ದೇಶಕ್ಕೆ ಆದಾಯ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಲ್ಲದೆ, 2 ನೇ ಮತ್ತು 3 ನೇ ಸ್ತರದ ನಗರಗಳಲ್ಲಿ ವ್ಯಾಪಾರ ವೃದ್ಧಿಸುವಂತೆ ಸಲಹೆ ನೀಡಿದರು.

  • ಮೇಕೆದಾಟು ಯೋಜನೆ ವಿರುದ್ಧ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು

    ಮೇಕೆದಾಟು ಯೋಜನೆ ವಿರುದ್ಧ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು

    ನವದೆಹಲಿ: ಮೇಕೆದಾಟು ಯೋಜನೆಗೆ ಕರ್ನಾಟಕದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುವ ತಮಿಳುನಾಡು ಸರ್ಕಾರ ಇದೀಗ ಮತ್ತೊಂದು ಅಡ್ಡಿಗೆ ಮುಂದಾಗಿದೆ. ವಿಸ್ತೃತ ಯೋಜನಾ ವರದಿ(ಡಿಪಿಆರ್) ತಿರಸ್ಕರಿಸಲು ಸುಪ್ರೀಂಕೋರ್ಟ್‍ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.

    ಮೇಕೆದಾಟು ಆಣೆಕಟ್ಟು ನಿರ್ಮಾಣ ವಿಚಾರವಾಗಿ ಕರ್ನಾಟಕ ಇದೀಗ ಯೋಜನೆಯನ್ನು ನಾವು ಆರಂಭಿಸುತ್ತೇವೆ ಎಂದು ಪಟ್ಟುಹಿಡಿದಿದೆ. ಈಗಾಗಲೇ ಮೇಕೆದಾಟು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಆಗಿದ್ದು, ಶೀಘದಲ್ಲೇ ಕೇಂದ್ರದ ಜೊತೆ ಅನುಮತಿ ಪಡೆದು ಯೋಜನೆ ಆರಂಭಿಸುತ್ತೇವೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇವೆಲ್ಲದರ ನಡುವೆ ತಮಿಳುನಾಡು ಸರ್ಕಾರ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯಲ್ಲಿ ಡಿಪಿಆರ್ ತಿರಸ್ಕರಿಸಲು ಸೂಚಿಸುವಂತೆ ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಮೇಕೆದಾಟು, ಮಹದಾಯಿ ಯೋಜನೆ ಪ್ರಾರಂಭಿಸುತ್ತೇವೆ: ಸಿಎಂ ಬೊಮ್ಮಾಯಿ

    BASAVARAJ BOMMAI

    9,000 ಕೋಟಿ ವೆಚ್ಚದಲ್ಲಿ 76.16 ಟಿಎಂಸಿ ನೀರು ಸಂಗ್ರಹಣೆ ಉದ್ದೇಶದಿಂದ ಜಲಾಶಯ ನಿರ್ಮಿಸಲು ಕರ್ನಾಟಕ ಮುಂದಾಗಿದೆ. ವಿದ್ಯುತ್ ಉತ್ಪಾದನೆಯನ್ನು ಮಾಡಲು ಕರ್ನಾಟಕ ಯೋಜನೆ ರೂಪಿಸಿದೆ. ಈ ಯೋಜನೆ ನ್ಯಾಯಲಯದ ಆದೇಶ ಉಲ್ಲಂಘಿಸಿದ್ದು, ಈ ಯೋಜನೆಗೆ ಕೂಡಲೇ ತಡೆ ನೀಡಬೇಕು. ಕರ್ನಾಟಕಕ್ಕೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಬೇಕು ಮತ್ತು ಕರ್ನಾಟಕ ಸಲ್ಲಿಸಿರುವ ಡಿಪಿಆರ್‍ ನ್ನು ಕೇಂದ್ರ ಜಲ ಆಯೋಗ(ಸಿಡಬ್ಲ್ಯೂಸಿ)ತಿರಸ್ಕರಿಸಲು ಸೂಚಿಸಬೇಕು ಪ್ರಕರಣ ಅಂತ್ಯವಾಗುವವರೆಗೂ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಯಾವುದೇ ಅನುಮತಿ ನೀಡದಂತೆ ಸೂಚಿಸಬೇಕು ಎಂದು ತಮಿಳುನಾಡು ಮನವಿ ಸಲ್ಲಿಸಿದೆ. ಇದನ್ನೂ ಓದಿ: ಮೇಕೆದಾಟು ವಿಚಾರ – ಉಪವಾಸ ಸತ್ಯಾಗ್ರಹ ಮಾಡ್ತೀವಿ ಎಂದಿರೋ ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು

     

     

  • ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    ಅರಗ ಜ್ಞಾನೇಂದ್ರ ನೆಗೆಟಿವ್ ಆಗಿ ಹೇಳಿಕೆ ಕೊಟ್ಟಿಲ್ಲ: ಪೂರ್ಣಿಮಾ ಶ್ರೀನಿವಾಸ್

    – ಪುರುಷರು ನೋಡುವ ದೃಷ್ಟಿ ಬದಲಾಗಬೇಕು

    ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರರವರು ನೆಗೆಟಿವ್ ಆಗಿ ಆ ಹೇಳಿಕೆ ಕೊಟ್ಟಿದ್ದಲ್ಲ. ಮಹಿಳೆಯರ ಬಗ್ಗೆ ಕಾಳಜಿಯಿಂದ ಆ ಹೇಳಿಕೆ ಕೊಟ್ಟಿದ್ದಾರೆ. ಆ ಸಮಯದಲ್ಲಿ ಮಹಿಳೆಯರು ಅಲ್ಲಿಗೆ ಹೋಗಬಾರದು ಎನ್ನುವ ಹೇಳಿಕೆಯನ್ನು ಬೇರೆ ಅರ್ಥದಲ್ಲಿ ಭಾವಿಸಬಾರದು. ಅರಗ ಜ್ಞಾನೇಂದ್ರರವರು ಜಾಗ್ರತೆಯಿಂದ ಇರಬೇಕೆಂಬ ಹಿನ್ನೆಲೆಯಲ್ಲಿ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಗೃಹ ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ, ಪೊಲೀಸ್ ಇಲಾಖೆ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಅಪರಾಧಿಗಳು ಖಂಡಿತಾ ಸಿಕ್ಕಿಹಾಕಿಕೊಳ್ಳುತ್ತಾರೆ. ದುರ್ದೈವ ಅಂದರೆ, ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಾಚಾರಗಳು ಮರುಕಳಿಸುತ್ತಿದೆ. ಕಠಿಣ ಕಾನೂನುಗಳಾಗಿವೆ, ಇನ್ನೂ ಸ್ವಲ್ಪ ಹೆಚ್ಚಿನ ಕಠಿಣ ಕಾನೂನುಗಳು ಬರಬೇಕಿದೆ ಆಗ ಮಾತ್ರ ಕಾಮುಕರು ಎಚ್ಚೆತ್ತುಕೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಇದೇ ವೇಳೆ, ರಾತ್ರಿ 12 ಆದರೂ ಹೆಣ್ಣು ಮಕ್ಕಳು ಓಡಾಡಬೇಕು. ಹಾಗೆ ಓಡಾಡಿದರೆನೇ ಇಂತಹ ತೊಂದರೆಗೆ ಸಿಲುಕಿಕೊಳ್ಳುವವರಿಗೆ ಧೈರ್ಯ ಬರುತ್ತದೆ. ಹೆಣ್ಣು ಮಕ್ಕಳನ್ನು ಓಡಾಡಬಾರದು ಅಂತ ನಿರ್ಬಂಧಿಸಲು ಆಗಲ್ಲ. ಪುರುಷರು ನೋಡುವ ದೃಷ್ಟಿ ಬದಲಾಗಬೇಕು ಎಂದು ನುಡಿದಿದ್ದಾರೆ.  ಇದನ್ನೂ ಓದಿ:ಸುಖದ ನಿದ್ದೆಯಲ್ಲಿದ್ದ ನನಗೆ ಈಗ ಪೊಲೀಸರು ನಿದ್ದೆ ಮಾಡಲು ಬಿಡುತ್ತಿಲ್ಲ – ಅರಗ ಜ್ಞಾನೇಂದ್ರ

    ಹಗಲು ಹೊತ್ತಿನಲ್ಲಿ ಜನರು ಓಡಾಡುತ್ತಿರುತ್ತಾರೆ. ಸಾರ್ವಜನಿಕರು, ಅಕ್ಕಪಕ್ಕದ ಜನ ಗಮನಿಸುತ್ತಿರುತ್ತಾರೆ. ರಾತ್ರಿ ಹೊತ್ತಿನಲ್ಲಿ ಇಂಥವು ನಡೆದರೆ ಯಾರಿಗೂ ಕಾಣುವುದಿಲ್ಲ. ರಾತ್ರಿ ಹೊತ್ತು ಸರಿ ಎಂದು ಕಾಮುಕರು ಯೋಚನೆ ಮಾಡುತ್ತಾರೆ. ಸುರಕ್ಷತೆ ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ರಾತ್ರಿ ಹೊತ್ತು ಹೆಣ್ಣುಮಕ್ಕಳು ಓಡಾಡಬಾರದು ಅಂತಲ್ಲ. ಅವರ ಕೆಲಸಗಳಿದ್ದಾಗ ನಿಭಾಯಿಸಬೇಕಾಗುತ್ತದೆ. ಆದರೆ ಜಾಗ್ರತೆ ವಹಿಸಬೇಕಾಗುತ್ತದೆ. ಕೆಲವು ಜಾಗಗಳಲ್ಲಿ ಯಾರು ಇರುತ್ತಾರೆ, ಯಾರು ಇರುವುದಿಲ್ಲ ಎಂದು ನಮಗೆ ಗೊತ್ತಾಗುತ್ತದೆ. ಅಂಥ ಕಡೆಗಳಲ್ಲಿ ಪೊಲೀಸರು ಓಡಾಟ ಮಾಡಬೇಕಾಗುತ್ತದೆ. ಪೊಲೀಸರ ಗಸ್ತು ಇಲ್ಲದಿದ್ದಿದ್ದು ತಪ್ಪಾಗಿದೆ ಎಂದು ಹೇಳಿದ್ದಾರೆ.

  • ಅಧಿಕಾರಕ್ಕಾಗಿ ಹೊಡೆದಾಡುವುದನ್ನು ಬಿಟ್ಟು ಆಡಳಿತದತ್ತ ಗಮನ ಹರಿಸಿ: ಯತೀಂದ್ರ ಸಿದ್ದರಾಮಯ್ಯ

    ಅಧಿಕಾರಕ್ಕಾಗಿ ಹೊಡೆದಾಡುವುದನ್ನು ಬಿಟ್ಟು ಆಡಳಿತದತ್ತ ಗಮನ ಹರಿಸಿ: ಯತೀಂದ್ರ ಸಿದ್ದರಾಮಯ್ಯ

    -ಮೈಸೂರಿನಲ್ಲಿಯೇ ಈ ಘಟನೆ ನಡೆದಿರೋದು ಕಳವಳಕಾರಿ

    ಮಂಡ್ಯ: ಅಧಿಕಾರಕ್ಕೋಸ್ಕರ ಹೊಡೆದಾಡುವುದನ್ನು ಬಿಟ್ಟು ಆಡಳಿತದ ಕಡೆ ಗಮನಹರಿಸಿ ಎಂದು ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

    ಸುತ್ತೂರಿನಲ್ಲಿ ನಂಜನಗೂಡು, ಚಾಮರಾಜನಗರ, ಯಳಂದೂರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಂತಹ ನಗರದಲ್ಲೇ ಇಂತಹ ಘಟನೆ ನಡೆದಿರುವುದು ಕಳವಳಕಾರಿ ವಿಷಯ. ಇನ್ನು ಬೇರೆ ನಗರಗಳ ಗತಿ ಏನು ಎಂದು ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಯುವಕರ ಗುಂಪುಗಳ ನಡುವೆ ಮಾರಾಮಾರಿ- ವೀಡಿಯೋ ಸಿಸಿಟಿವಿಯಲ್ಲಿ ಸೆರೆ

    ಇದೇ ವೇಳೆ ಸರ್ಕಾರ ರಾಜಕೀಯ ಮಾಡುವುದನ್ನು ಬಿಟ್ಟು, ಅಧಿಕಾರಕ್ಕೋಸ್ಕರ ಹೊಡೆದಾಡುವುದನ್ನು ಬಿಟ್ಟು, ಇನ್ನಾದರು ಆಡಳಿತದ ಕಡೆ ಗಮನ ಗಮನಹರಿಸಲಿ. 48 ಗಂಟೆಗಳಾದರೂ ಆರೋಪಿಗಳು ಪತ್ತೆಯಾಗದಿರುವುದು ಪೊಲೀಸ್‍ಗೆ ಹಿನ್ನಡೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿದ್ಯಾರ್ಥಿನಿ ಆ ಸಮಯದಲ್ಲಿ ಅಲ್ಲಿಗೇಕೆ ಹೋಗಬೇಕಿತ್ತು ಎಂಬ ಗೃಹ ಸಚಿವರ ಹೇಳಿಕೆ ವಿಚಾರ, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಇಂತಹ ಹೇಳಿಕೆ ನೀಡುವುದು ತಪ್ಪು. ಹೆಣ್ಣು ಮಕ್ಕಳು ಎಲ್ಲಿಗೆ ಹೋಗಲಿ ಅವರಿಗೆ ರಕ್ಷಣೆ ಕೊಡಬೇಕಾದ್ದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ:ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

  • ರೇಪ್ ಬಿಟ್ಟು ಕಿರುಕುಳ  ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ: ವಿ.ಎಸ್.ಉಗ್ರಪ್ಪ

    ಮೈಸೂರು: ಅತ್ಯಾಚಾರ ನಡೆದ್ರೂ ಐಪಿಸಿ ಸೆಕ್ಷನ್ 376ರ ಅಡಿ ಯಾಕೆ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿ.ಎಸ್ ಉಗ್ರಪ್ಪ, ತಿಂಗಳಲ್ಲಿ ಮೈಸೂರಿನಲ್ಲಿ ಒಂದು ಶೂಟೌಟ್ ಆಗಿದೆ. ಮೂರು ಮರ್ಡರ್ ಗಳಾಗಿವೆ, ಮೂರು ದರೋಡೆ, 16 ಕಳ್ಳತನಗಳಾಗಿವೆ. ಸರಸ್ವತಿಪುರಂನಲ್ಲಿ ಇವತ್ತು ಬಾಲಕಿ ಅತ್ಯಾಚಾರ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅತ್ಯಾಚಾರ ನಡೆದ್ರೂ 376ರ ಅಡಿ ಕೇಸ್ ಯಾಕೆ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ? ಹಿಂದೆ ವಿಬ್ ಗಯಾರ್ ಶಾಲೆಯಲ್ಲಿ ಪ್ರಕರಣ ಆಗಿತ್ತು ಆಗ ನೀವು ಏನಂತ ಬಾಯಿ ಬಡಿದುಕೊಳ್ತಿದ್ರಿ. ಈಗ ಮೈಸೂರಿನ ಹೊಣೆ ಯಾರು ಹೊರಬೇಕು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಯತ್ನಿಸುತ್ತಿದ್ದಾರೆ: ಅರಗ ಜ್ಞಾನೇಂದ್ರ

    ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅಮಾನವೀಯವಾದುದು. ದೆಹಲಿಯ ನಿರ್ಭಯಾ ಕೇಸ್ ರೀತಿಯಲ್ಲಿ, ತೆಲಂಗಾಣದ ರೆಡ್ಡಿ ಕೇಸ್ ರೀತಿಯಲ್ಲಿ ಹೀನ ಕೃತ್ಯವಿದು. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್‍ನಲ್ಲಿ ಯುವತಿ ಮತ್ತು ಅಕೆಯ ಸ್ನೇಹಿತ ಮಾತನಾಡುತ್ತಿರುತ್ತಾರೆ. ಅಲ್ಲಿಂದ ಯುವತಿ ಎಳೆದೋಯ್ದು ಕೃತ್ಯವೆಸಗಿದ್ದಾರೆ. ಸಂಜೆ 7:30 ರಿಂದ 10:30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ, ಗಾಯಗಳಾಗಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ. ಘಟನೆ ನಡೆದು 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ ನಂತರ ಹಾಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು ಆಗ ನೀವು ಏನು ಮಾಡಿದ್ದಿರಿ ಇದರ ಬಗ್ಗೆ ನೀವು ಉತ್ತರಿಸಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್

  • ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಿ – ವಿದ್ಯಾಕಾಶಿ ವಿದ್ಯಾರ್ಥಿನಿಯರ ಆಗ್ರಹ

    ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಿ – ವಿದ್ಯಾಕಾಶಿ ವಿದ್ಯಾರ್ಥಿನಿಯರ ಆಗ್ರಹ

    ಧಾರವಾಡ: ಮೈಸೂರಿನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾಕಾಶಿ ಧಾರವಾಡದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.

    ಎಐಡಿಎಸ್‍ಒ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅತ್ಯಾಚಾರಿಗಳಿಗೆ ನಡು ರಸ್ತೆಯಲ್ಲೇ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಆಗಸ್ಟ್ 30ರವರೆಗೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

    ಇನ್ನೊಮ್ಮೆ ಯಾರೂ ಈ ಈ ರೀತಿಯ ಕೃತ್ಯ ಎಸಗದಂತೆ ಶಿಕ್ಷೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲವಾ? ರಾತ್ರಿ ಮಹಿಳೆಯರು ಓಡಾಡುವುದು ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಮೊದಲು ಅಶ್ಲೀಲ ಚಿತ್ರಗಳನ್ನ ಬಂದ್ ಮಾಡಬೇಕು ಹಾಗೂ ಮದ್ಯಪಾನ ಮಾರಾಟ ಬಂದ್ ಮಾಡಲಿ ಎಂದು ಒತ್ತಾಯಿಸಿದ್ದಾರೆ.

  • ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್

    ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಮೈಸೂರು ಪ್ರಕರಣ: ಕಾಂಗ್ರೆಸ್

    – ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ

    ಬೆಂಗಳೂರು: ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು ಕರ್ನಾಟಕ ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

    BASAVARAJ BOMMAI

    ಟ್ವೀಟ್‍ನಲ್ಲಿ ಏನಿದೆ?
    ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ ಈಶ್ವರಪ್ಪ ಅವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ. ಬಿಜೆಪಿ ಸದಾ ಜಪಿಸುವ ‘ಯುಪಿ ಮಾಡೆಲ್’ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯ ಗೃಹಸಚಿವರೇ. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

    ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನು ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ. ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ. ಇದನ್ನೂ ಓದಿ: ಗಲಾಟೆ ಮಾಡಿ ತಲೆಗೆ ಕಲ್ಲಲ್ಲಿ ಹೊಡೆದು ಹುಡುಗಿಯನ್ನು ದೂರ ಕರೆದೊಯ್ದು ರೇಪ್ ಮಾಡಿದ್ರು: ಯುವಕ

  • ಭಿಕ್ಷಾಟನೆ ಮುಕ್ತಭಾರತ ಚಳುವಳಿ- ಬೆಂಗಳೂರು ಯುವಕರಿಂದ ಜಾಗೃತಿ ಕಾರ್ಯ

    ಭಿಕ್ಷಾಟನೆ ಮುಕ್ತಭಾರತ ಚಳುವಳಿ- ಬೆಂಗಳೂರು ಯುವಕರಿಂದ ಜಾಗೃತಿ ಕಾರ್ಯ

    ಬೆಂಗಳೂರು: ದೇಶದಲ್ಲಿ ಹಣೆಬರಹದಿಂದ ಭಿಕ್ಷಾಟನೆ ಮಾಡುವ ಗುಂಪು ಒಂದಾದರೆ, ಅಂಗವೈಕಲ್ಯದಿಂದ ಭಿಕ್ಷಾಟನೆ ಮಾಡುವವರು ಮತ್ತೊಂದು ಗುಂಪಿನವರಾಗಿದ್ದಾರೆ.

    ಇಂತಹ ಅಸಹಾಯಕ ಜನರಿಗೆ ನಾವು ಭಿಕ್ಷೆಯನ್ನು ನೀಡುವುದನ್ನು ನಿಲ್ಲಿಸಿ, ನಮ್ಮ ಸರ್ಕಾರದಿಂದ ರೂಪಿಸಿರುವಂತಹ ಕಾನೂನಾದ “ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ 1975ರ ಪ್ರಕಾರ ಅವರಿಗೆ, ಜೀವನ ನಡೆಸಲು ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಲು, ಸರ್ಕಾರದಿಂದ ಕೌಶಲ್ಯ ಅಭಿವೃದ್ಧಿ ಹಾಗೂ ಸಣ್ಣ ಪುಟ್ಟ ಕೆಲಸಗಳ ತರಬೇತಿಯನ್ನು ನೀಡಲಾಗುತ್ತಿದೆ.ಆದ್ದರಿಂದ ಸಾರ್ವಜನಿಕರಾದ ನಾವು, ಇಂತಹವರಿಗೆ ಭಿಕ್ಷೆಯಾಗಿ ಹಣವನ್ನು ನೀಡುವ ಬದಲು, ಅವರಿಗೆ ಕಾಯ್ದೆಯ ಬಗ್ಗೆ ತಿಳಿಸಿ, ಅವರನ್ನೂ ಸಹ ನಮ್ಮಂತೆಯೆ ಸ್ವತಂತ್ರವಾಗಿ ಜೀವನ ನಡೆಸಲು ಸಹಾಯ ಮಾಡೋಣ ಎಂದು ಬೆಂಗಳೂರಿನ ಯುವಕರು ಜಾಗೃತಿ ಮೂಡಿಸಿದ್ದಾರೆ. ಇದನ್ನೂ ಓದಿ:ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು

    1975ನೆಯ ಕಾಯ್ದೆಯ ಅಡಿಯಲ್ಲಿ, ಭಿಕ್ಷಾಟನೆ ನಿರ್ಮೂಲ ಮಾಡುವ ಮೂಲಕ, ನಿಜವಾದ ಸ್ವಾತಂತ್ರ್ಯಕ್ಕೆ ಮುನ್ನುಡಿಯನ್ನು ಬರೆಯಲು, ನಾವು ಭಿಕ್ಷಾಟನೆ ಮುಕ್ತಭಾರತ ಅಭಿಯಾನವನ್ನು ಶುರುಮಾಡಿದ್ದೇವೆ. ಇದಕ್ಕೆ ಯಶಸ್ಸನ್ನು ತಂದು ಕೊಟ್ಟು ನಮ್ಮ ದೇಶದಲ್ಲಿ ಭಿಕ್ಷಾಟನೆ ಇಲ್ಲದಂತೆ ಮಾಡೋಣ. ಬನ್ನಿ ನಮ್ಮೋಟ್ಟಿಗೆ ಕೈ ಜೋಡಿಸಿ ಎಂದು ಯುವಕರು ಜಾಗೃತಿ ಕರೆ ನೀಡಿದ್ದಾರೆ. ಇದನ್ನೂ ಓದಿ:ಪಂಚರ್ ಆಗಿ ಹಿಮ್ಮುಖವಾಗಿ ಚಲಿಸಿ ಟ್ರ್ಯಾಕ್ಟರ್ ಪಲ್ಟಿ

  • ಗಣೇಶ ಹಬ್ಬ ವಿಜೃಂಭಣೆಯಿಂದ ಆಚರಿಸುವ ಆಶಯ ಇದೆ: ಸಚಿವ ಸುನಿಲ್ ಕುಮಾರ್

    ಗಣೇಶ ಹಬ್ಬ ವಿಜೃಂಭಣೆಯಿಂದ ಆಚರಿಸುವ ಆಶಯ ಇದೆ: ಸಚಿವ ಸುನಿಲ್ ಕುಮಾರ್

    ಬೆಂಗಳೂರು: ಸರ್ಕಾರ ನಿಷೇಧ ಹೇರಿದ್ದರೂ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಆಶಯ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಅನುಮತಿ ನೀಡುತ್ತಾ? ರಿಲ್ಯಾಕ್ಷೇಶನ್ ಕೊಡುತ್ತಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಈಗಾಗಲೇ ನಿಷೇಧ ಹೇರಿದೆ. ಗಣೇಶೋತ್ಸವ ಹಬ್ಬ ಆಚರಣೆಗೆ ಸರ್ಕಾರ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಆದರೆ ಇದೀಗ ಮಾರ್ಗಸೂಚಿ ಪರಾಮರ್ಶೆ ಮಾಡಿ ಹಬ್ಬಕ್ಕೆ ರಿಲ್ಯಾಕ್ಸೇಶನ್ ಕೊಡುವ ಕುರಿತು ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಸರ್ಕಾರ ನಿಷೇಧ ಹೇರಿದ್ದರೂ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಆಶಯ ಇದೆ ಎಂದು ಸಚಿವ ಸುನೀಲ್ ಕುಮಾರ್ ಸೇರಿ ಹಲವು ಸಚಿವರು ಹೇಳಿದ್ದಾರೆ. ಅಲ್ಲದೆ ಶಾಸಕ ಬಸನಗೌಡ ಪಾಟೀಲ್ ಸಹ ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ ಕುರಿತು ಹೇಳಿಕೆ ನೀಡಿದ್ದು, ನಮ್ಮನ್ನು ನಮಗೆ ಗುಂಡು ಹೊಡೆದರೂ ನಾವು ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗುಂಡು ಹೊಡೆಯೋದಾದ್ರೆ ಹೊಡಿರಿ, ವಿಜೃಂಭಣೆಯಿಂದ ಗಣೇಶೋತ್ಸವ ಆಚರಣೆ: ಸರ್ಕಾರಕ್ಕೆ ಸೆಡ್ಡು ಹೊಡೆದ ಯತ್ನಾಳ್

    ಮತ್ತೊಂದೆಡೆ ಧಾರ್ಮಿಕ ಆಚರಣೆ, ಆರೋಗ್ಯ ಎರಡು ಮುಖ್ಯ. ಧಾರ್ಮಿಕ ಆಚರಣೆ, ವೈಭವೀಕರಣಕ್ಕೆ ಕುಂದು ಬರದಂತೆ ನಿಯಮ ಜಾರಿ ಮಾಡುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಹೀಗಾಗಿ ಗಣೇಶೋತ್ಸವ ಆಚರಣೆಗೆ ಹೊರಡಿಸಿರುವ ಮಾರ್ಗಸೂಚಿ ಬದಲಾವಣೆ ಮಾಡಿ ಸರ್ಕಾರ ಗಣೇಶೋತ್ಸವಕ್ಕೆ ಅವಕಾಶ ಕೊಡುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಮೂರನೇ ಅಲೆ ಸೆಪ್ಟೆಂಬರ್ ಮೊದಲ ವಾರದಲ್ಲೇ ಕಾಣಿಸಿಕೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ. ಆಗಸ್ಟ್ ಕೊನೆಯವಾರದಲ್ಲಿ ಕೇಸ್ ಏರಿಕೆಯಾಗಿ, ಸೆಪ್ಟೆಂಬರ್ ಮೊದಲ ವಾರದಲ್ಲಿ ಮೂರನೇ ಅಲೆ ಆರಂಭವಾಗಬಹುದು ಎಂದಿದ್ದಾರೆ.

    ಗಣೇಶೋತ್ಸವಕ್ಕೆ ಸರ್ಕಾರದ ಮಾರ್ಗಸೂಚಿ
    – ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ.
    – ಗಣೇಶ ಹಬ್ಬವನ್ನು ಸರಳವಾಗಿ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ಹಾಕಿ, ವೇದಿಕೆಗಳನ್ನು ನಿರ್ಮಿಸಿ ಗಣೇಶ ಪ್ರತಿಷ್ಢಾಪನೆ ಮಾಡುವಂತಿಲ್ಲ.
    – ಗಣೇಶ ಮೂರ್ತಿಗಳನ್ನು ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆ ಮತ್ತು ಮನೋರಂಜನಾ ಕಾರ್ಯಕ್ರಮ ಮಾಡುವಂತಿಲ್ಲ.
    – ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವವರು ಅವರ ಮನೆಗಳಲ್ಲೇ ವಿಸರ್ಜಿಸುವುದು.
    – ಗಣೇಶ ಮೂರ್ತಿಯನ್ನು ಮಹಾನಗರ ಪಾಲಿಕೆ, ಜಿಲ್ಲಾಡಳಿತಣ ಸ್ಥಳೀಯ ಆಡಳಿತ ನಿರ್ಮಿಸಿರುವ ಹೊಂಡ, ಕಲ್ಯಾಣಿ, ಮೊಬೈಲ್ ಟ್ಯಾಂಕ್ ಗಳಲ್ಲಿ, ಕೃತಕ ವಿಸರ್ಜನಾ ಟ್ಯಾಂಕ್ ಗಳಲ್ಲಿ ವಿಸರ್ಜಿಸುವುದು.
    – ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು. ಭಕ್ತಾದಿಗಳಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.
    – ದರ್ಶನಕ್ಕಾಗಿ ಬರುವ ಭಕ್ತರಿಗೆ ಮಾಸ್ಕ್ ಕಡ್ಡಾಯ, 6 ಅಡಿ ಅಂತರ ಕಾಯ್ದುಕೊಳ್ಳಬೇಕು, ಸರ್ಕಲ್ ನಿರ್ಮಾಣ ಮಾಡಬೇಕು.
    – ಗಣೇಶೋತ್ಸವ ಆಚರಣೆ ಕಾಲಕ್ಕೆ ಪೊಲೀಸ್, ಜಿಲ್ಲಾಡಳಿತ, ಸ್ಥಳೀಯ ಆಡಳಿತ ಹೊರಡಿಸುವ ನಿಯಮಗಳನ್ನ ಪಾಲಿಸುವುದು.