ವಿಜಯಪುರ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ. ಈ ಹೋರಾಟಕ್ಕೆ ಯಾರಾದರೂ ಬರಲಿ ಬಿಡಲಿ. ನಮ್ಮ ಹೋರಾಟ ನಡೆಯುತ್ತದೆ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಾವು ಪಂಚಮಸಾಲಿ ಸಮಾಜ ಅಷ್ಟೇಯಲ್ಲಾ ಅದಿ ಬಣಜಿಗ ಕೂಡು ಒಕ್ಕಲಿಗ, ಕುರುಬ ಸಮಾಜ ಹಾಗೂ ವಾಲ್ಮೀಕಿ ಸಮಾಜ, ಮಡಿವಾಳ ಸಮಾಜಗಳ ಬೇಡಿಕೆ ಈಡೇರಿಕೆಗೆ ಬೆಂಬಲಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕನ್ನಡಿಗರು ಎಂಬುದನ್ನು ಸಿ.ಟಿ.ರವಿ ಮರೆತು ಭಾರತೀಯರಾಗಿದ್ದಾರೆ: ಹೆಚ್‍ಡಿಕೆ

ನಿನ್ನೆ ಹುಬ್ಬಳ್ಳಿಯ ಖಾಸಗಿ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿ ದ್ದೇವೆ. ಮೀಸಲಾತಿ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ನೀಡಿದ್ದಾರೆ. ಪ್ರಧಾನಿಗಳ ಈ ಐತಿಹಾಸಿಕ ತಿದ್ದುಪಡಿಗೆ ಸ್ವಾಗತ ಮಾಡುತ್ತೇನೆ. ಮೀಸಲಾತಿ ವಿಚಾರವಾಗಿ ನಾನು ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡುವೆ. ಈಗಾ ಯಾವುದೇ ನೆಪ ಹೇಳಲು ಬರಲ್ಲಾ. ಆದಷ್ಟು ಬೇಗಾ ಪಂಚಮಸಾಲಿ ಸಮಾಜ, ಆದಿ ಬಣಜಿಗ, ಕೂಡು ಒಕ್ಕಲಿಗ ಸಮಾಜಗಳಿಗೆ 2ಎ ಮೀಸಲಾತಿ ನೀಡಬೇಕು. ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ: ಕುತ್ತಿಗೆಯಲ್ಲಿ ನಿಜವಾದ ಹಾವು, ಅಮರ ಹಳೆ ನೆನಪು: ಜಗ್ಗೇಶ್

ಎಸ್ಸಿ ಸಮಾಜದ ಮೀಸಲಾತಿಯನ್ನು ಮೂರು ಪ್ರತಿಶತದಿಂದ 7.5 ಪ್ರತಿಶತಕ್ಕೆ ಏರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಅಲ್ಲದೆ ಇವುಗಳ ಜೊತೆ ಮಡಿವಾಳ ಸಮಾಜ, ಹಡಪದ ಸಮಾಜ, ಗಂಗಾ ಮತಸ್ಥ, ತಳವಾರ, ಕೋಳಿ ಸಮಾಜಕ್ಕೂ ಎಸ್ಟಿಗೆ ಸೇರಿಸಬೇಕು. ಈ ನಿಟ್ಟಿನಲ್ಲಿ ಸಿಎಂ ಅವರು ಕ್ರಮ ತೆಗೆದುಕೊಳ್ಳದಿದ್ದರೆ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹೋರಾಟಕ್ಕೆ ಯಾರಾದರೂ ಬರಲಿ ಬಿಡಲಿ. ನಮ್ಮ ಹೋರಾಟ ನಡೆಯುತ್ತದೆ. ಆಯಾ ಸಮುದಾಯದ ನಾಯಕರು ಶಾಸಕರು ಬರದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರು ಅವರಿಗೆ ಪಾಠ ಕಲಿಸುತ್ತಾರೆ ಎಂದಿದ್ದಾರೆ.































