Tag: government

  • ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್- ಚಾಮರಾಜನಗರದಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ವಿಸ್ತರಣೆ

    ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್- ಚಾಮರಾಜನಗರದಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ವಿಸ್ತರಣೆ

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಿದೆ. ಈ ಹಿನ್ನಲೆ ಪಾಸಿಟಿವಿಟಿ ರೇಟ್ ತಗ್ಗಿಸುವ ಸಲುವಾಗಿ ಮತ್ತೊಂದು ವಾರ ಲಾಕ್‍ಡೌನ್ ವಿಸ್ತರಿಸಲಾಗಿದೆ.

    ಜೂನ್ 14 ರಿಂದ 16 ರವರೆಗೆ ಹಾಫ್ ಲಾಕ್‍ಡೌನ್ ವ್ಯವಸ್ಥೆಯಿದೆ. ಈ ವೇಳೆ ತರಕಾರಿ, ದಿನಸಿ ಖರೀದಿಗೆ ಮೂರು ದಿನ ಅವಕಾಶ ಕಲ್ಪಿಸಿದೆ. ಅದರಲ್ಲೂ ಸಮಯ ನಿಗದಿಗೊಳಿಸಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವ್ಯಾಪಾರಕ್ಕೆ, ಖರೀದಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇದನ್ನೂ ಓದಿ: ರಾತ್ರೋರಾತ್ರಿ ಕೊರೊನಾ ದೇವಿ ದೇವಸ್ಥಾನ ನಿರ್ಮಾಣ, ಬೆಳಗ್ಗೆ ನೆಲಸಮ

    ಇನ್ನೂಂದು ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್ ಮಾಡಲು ಚಾಮರಾಜನಗರ ಡಿಸಿ ಎಂಆರ್ ರವಿ ಆದೇಶ ಮಾಡಿದ್ದಾರೆ. ಜೂನ್ 17 ರಿಂದ 20 ರವರೆಗೆ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶಿಸಲಾಗಿದೆ. ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ ಯಾರೂ ಕೂಡ ಅನಗತ್ಯ ಸಂಚಾರ ಮಾಡದಂತೆ ಬ್ರೇಕ್ ಹಾಕಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಯಾರಾದರೂ ರಸ್ತೆಗಿಳಿದರೆ ಅಂತಹವರ ವಾಹನ ಸೀಜ್ ಮಾಡಲಾಗುತ್ತದೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ವಾರ ಕಂಪ್ಲೀಟ್ ಲಾಕ್‍ಡೌನ್ ವಿಸ್ತರಣೆ

    ಲಾಕ್‍ಡೌನ್ ವೇಳೆ ಆಸ್ಪತ್ರೆ, ಮೆಡಿಕಲ್, ಹಾಲು, ಹಣ್ಣು, ಕೃಷಿ ಚಟುವಟಿಕೆ ನಡೆಸಲು ಅನುಮತಿ ಕೊಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮದ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.

  • ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ- ಸರ್ಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

    ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ- ಸರ್ಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

    ಬೆಂಗಳೂರು: ರಾಜ್ಯ ಕಂಡ ಶ್ರೇಷ್ಠ ಸಾಹಿತಿ. ದಮನಿತರ ದನಿಯಾಗಿದ್ದವರು ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು ಎಂದು ಸರ್ಕಾರದ ಪರ ಅಂತಿಮ ನಮನ ಅರ್ಪಿಸಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಅಭಿಪ್ರಯಾಪಟ್ಟರು. ಇದನ್ನೂ ಓದಿ:  ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ

    ಕೋವಿಡ್‍ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ, ಸರ್ಕಾರದ ಪರವಾಗಿ ಡಿಸಿಎಂ ಅವರು, ಅಂತಿಮ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು. ಅವರ ಜತೆಯಲ್ಲಿ ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅಗಲಿದ ಚೇತನಕ್ಕೆ ನಮನ ಅರ್ಪಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಡಾ.ಸಿದ್ದಲಿಂಗಯ್ಯ, ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು. ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ ಎಂದು ಡಿಸಿಎಂ ಹೇಳಿದರು.

  • ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅಂತ್ಯಕ್ರಿಯೆ

    ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ ಡಾ. ಸಿದ್ದಲಿಂಗಯ್ಯ ಅಂತ್ಯಕ್ರಿಯೆ

    ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಂಗಳೂರಿನ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದರು. ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಾ. ಸಿದ್ದಲಿಂಗಯ್ಯ ಪಾರ್ಥಿವ ಶರೀರ ರವಾನೆಯಾಗಿ, ಆರ್.ಆರ್ ನಗರದ ಸ್ವಗೃಹ ಬನವಾಸಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಬೆಂಗಳೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಭವನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದನ್ನೂ ಓದಿ: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶ

    ಜ್ಞಾನಭಾರತಿ ಸಂಶೋಧನಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಕೆಲಕಾಲ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಕಲಾ ಗ್ರಾಮದಲ್ಲಿ ಅಂತಿಮ ಸಂಸ್ಕಾರಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ದಿವಂಗತ ಡಾ. ಶಿವರುದ್ರಪ್ಪ, ಅನಂತ ಮೂರ್ತಿರವರ ಸ್ಮಾರಕದ ಪಕ್ಕದಲ್ಲಿಯೇ ಕೋವಿಡ್ ನಿಯಮಗಳಾನುಸರವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ


    ಬೌದ್ಧ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲು ಕುಟುಂಬ ತೀರ್ಮಾನನಿಸಿತ್ತು. ಅದರಂತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೇರವೇರಿತು. ಸರ್ಕಾರದ ಪರವಾಗಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಇತರರು ಭಾಗಿಯಾಗಿದ್ದರು. ಮೂರು ಸುತ್ತಿನ ಕುಶಲ ತೋಪು ಸಿಡಿಸಿ ಪೊಲೀಸರು ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಗೌರವ ಸಲ್ಲಿಸಿದರು. ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಕಾಲ ಮೌನಾಚಾರಣೆ ಮಾಡಲಾಯಿತು. ಬಳಿಕ ಗೌರವ ಸೂಚಕವಾಗಿ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ಬಾವುಟವನ್ನು ಕುಟುಂಬದ ಸದಸ್ಯರಿಗೆ ಅಶ್ವತ್ ನಾರಾಯಣ್ ಹಸ್ತಾಂತರ ಮಾಡಿದರು. ದಲಿತ ಸಂಘಟನೆಯಿಂದ ಓ ನನ್ನ ಚೇತನ ಹಾಡು ಹೇಳುವ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು. ಬೌದ್ಧ ಬಿಕ್ಕುಗಳಿಂದ ಅಂತಿಮ ವಿಧಿವಿದಾನ ನೆರವೇರಿತು. ಪುತ್ರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದನ್ನೂ ಓದಿ:ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

    ಈ ಮೊದಲು ಕಂದಾಯ ಸಚಿವ ಆರ್ ಅಶೋಕ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಸದಾನಂದಗೌಡ, ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ನಟ ದುನಿಯಾ ವಿಜಯ್, ಡಾಲಿ ಧನುಂಜಯ್ ಸೇರಿದಂತೆ ಹಲವಾರು ಮಂದಿ ಸಿದ್ದಲಿಂಗಯ್ಯ ಅವರ ಅಂತಿಮ ದರ್ಶನ ಪಡೆದರು.

    ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು.

  • ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ

    ಮುಂದಿನ ಎರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ

    ಹಾಸನ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದ್ದಂತೆ, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ರಾಜ್ಯದ ಅಭಿವೃದ್ಧಿಗೆ ಗಮನ ಕೊಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ಎಲ್ಲರ ಸಹಕಾರದಿಂದ ರಾಜ್ಯದ ಮುಂದಿನ ಅಭಿವೃದ್ಧಿಯತ್ತ ಗಮನ ಕೊಡುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಯಡಿಯೂರಪ್ಪನವರದು ಬಗ್ಗುವ ತಂತ್ರ ಅಲ್ಲ – ಡಿಕೆಶಿ

    ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್‍ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ನನ್ನ ಮೇಲೆ ಪ್ರಧಾನಿ ಮೋದಿ, ಅಮಿತ್ ಶಾ ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.

  • ಲಾಕ್‍ಡೌನ್ ಸಡಿಲಿಕೆ ಸರ್ಕಾರದ ನಿರ್ಧಾರಕ್ಕೆ ವಿವಿಧ ವಲಯಗಳಿಂದ ಅಸಮಾಧಾನ

    ಲಾಕ್‍ಡೌನ್ ಸಡಿಲಿಕೆ ಸರ್ಕಾರದ ನಿರ್ಧಾರಕ್ಕೆ ವಿವಿಧ ವಲಯಗಳಿಂದ ಅಸಮಾಧಾನ

    ಬೆಂಗಳೂರು: ಜೂನ್ 14 ರಿಂದ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆಗೆ ಸಂಬಂಧಪಟ್ಟಂತೆ ಕೈಗಾರಿಕಾ ವಲಯವನ್ನು ಹೊರತುಪಡಿಸಿ ವಿವಿಧ ವಲಯಗಳಿಂದ ಅಸಮಾಧಾನ ವ್ಯಕ್ತವಾಗಿದೆ. ಕೆಲ ವಲಯಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

    ಕೈಗಾರಿಕೆಗಳಿಗೆ 50% ಹಾಜರಾತಿಯಲ್ಲಿ ಅನುಮತಿ ಮಾಡಿದ್ದು ಸ್ವಾಗತಾರ್ಹ. ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ 8,500 ಸಣ್ಣ, ಮಧ್ಯಮ ಕೈಗಾರಿಕೆಗಳಿವೆ. ಜೂನ್ 14 ರಿಂದ ಎಂದಿನಂತೆ ಕಾರ್ಖಾನೆಗಳು ಪ್ರಾರಂಭವಾಗುತ್ತವೆ. ಈಗಾಗಲೇ ಲಾಕ್‍ಡೌನ್‍ನಿಂದ ತುಂಬಾ ನಷ್ಟ ಅನುಭವಿಸಿದ್ದೇವೆ. ಸಿಎಂ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದ್ದು ಖುಷಿ ಕೊಟ್ಟಿದೆ ಎಂದು ಪೀಣ್ಯಾ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 11 ಜಿಲ್ಲೆಗಳು ಲಾಕ್ – ನೈಟ್ ಕರ್ಫ್ಯೂ ಜೊತೆಯಲ್ಲಿ ವೀಕೆಂಡ್ ಲಾಕ್‍ಡೌನ್

    ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ಮಾತ್ರ ಅವಕಾಶ ಎಂದ ಸರ್ಕಾರದ ಆದೇಶಕ್ಕೆ ಬೇಸರ ವ್ಯಕ್ತಪಡಿಸಿದ ಹೋಟೆಲ್ ಅಸೋಸಿಯೇಷನ್ ನ ಪಿಸಿ ರಾವ್ ಅವರು, ಸರ್ಕಾರ ಹೋಟೆಲ್ ಉದ್ಯಮವನ್ನು ಮುಳುಗಿಸುವ ಕೆಲಸ ಮಾಡುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಹೋಟೆಲ್ ಓಪನ್ ಆದೇಶದ ನಿರೀಕ್ಷೆಯಲ್ಲಿ ಹೋಟೆಲ್ ಉದ್ಯಮವಿತ್ತು. ಆದರೆ ಸರ್ಕಾರ ಹೋಟೆಲ್ ಮಾಲೀಕರು ಹಾಗೂ ಕೆಲಸಗಾರರನ್ನು ಮುಳುಗಿಸುವಂತೆ ಮಾಡಿದೆ. ನಮ್ಮ ಬಗ್ಗೆ ಕಿಂಚಿತ್ತು ಯೋಚಿಸದೇ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಸಿಎಂ ಹೀಗೆ ಮಾಡ್ತಾರೆ ಎಂದುಕೊಂಡಿರಲಿಲ್ಲ. ನಮಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಲಾಕ್‍ಡೌನ್ ವೇಳೆ ಹೇಗಿದೆ ಕಾಡು- ಡ್ರೋನ್ ವೀಡಿಯೋ

    ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ರಂಗಪ್ಪ ಮಾತಾನಾಡಿ, ಮುಖ್ಯಮಂತ್ರಿಗಳೇ ಬೀದಿಬದಿ ವ್ಯಾಪಾರಿಗಳನ್ನು ಮೂಲೆಗುಂಪು ಮಾಡ್ತೀದ್ದೀರಿ. 6 ಗಂಟೆಯಿಂದ 2ಗಂಟೆ ವರೆಗೆ ಅನುಮತಿ ಕೊಟ್ಟಿರೋದು ಸ್ವಾಗತಾರ್ಹ. ಆದರೆ ಸಂಜೆ ವೇಳೆಯ ಫಾಸ್ಟ್ ಫುಡ್ ಅಂಗಡಿಗಳಿಗೆ ತೊಂದರೆಯಾಗುತ್ತದೆ. ಫಾಸ್ಟ್ ಫುಡ್ ವ್ಯಾಪಾರಿಗಳು ಲಾಕ್ಡೌನ್ ಆದಾಗಿಂದಲೂ ವ್ಯಾಪಾರ ಮಾಡಿಲ್ಲ. ಈಗ ಹೋಟೆಲ್ ಗಳಿಗೆ ಪಾರ್ಸಲ್ ಅವಕಾಶ ಮುಂದುವರೆಸಿದ ಜೊತೆಗೆ ಬೀದಿ ಬದಿಯ ಫಾಸ್ಟ್ ಫುಡ್ ಅಂಗಡಿಗಳಿಗೆ ಪಾರ್ಸಲ್‍ಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಲಾಕ್‍ಡೌನ್ ನಿಂದ ಪಿಜಿ ಉದ್ಯಮ ನಷ್ಟದಲ್ಲಿದೆ. ಸಾರಿಗೆ ಸಂಚಾರ ಪ್ರಾರಂಭ ಮಾಡಿದರೆ ಪಿಜಿ ಉದ್ಯಮಕ್ಕೆ ಅನುಕೂಲವಾಗುತ್ತಿತ್ತು. ಲಾಕ್‍ಡೌನ್ ಆದ ನಂತರ ಎಲ್ಲರೂ ತಮ್ಮೂರುಗಳಿಗೆ ಹೋಗಿದ್ದಾರೆ. ಈಗ ಬಸ್‍ಗಳು ಇಲ್ಲ ಹಾಗಾಗಿ ಅವರೆಲ್ಲ ಬರುವುದಕ್ಕೆ ಆಗುತ್ತಿಲ್ಲ. ಇದರಿಂದ ನಮ್ಮ ಸಂಕಷ್ಟ ಮುಂದುವರೆಯುತ್ತೆ. ಸರ್ಕಾರ ಪಿಜಿ ಮಾಲೀಕರ ಕಷ್ಟವನ್ನು ಗಮನದಲ್ಲಿ ಇಟ್ಟುಕೊಂಡಿಲ್ಲ. ನಮ್ಮ ಸಂಕಷ್ಟಕ್ಕೆ ಪರಿಹಾರವಿಲ್ಲದಂತಾಗಿದೆ. ಬಸ್‍ಗಳಿಲ್ಲ ಎಂದರೆ ನಮಗೆ ಗ್ರಾಹಕರೇ ಇರಲ್ಲ. ಎಂದು ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

  • ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ತಲುಪಿಲ್ಲ – ಹೂ ಬೆಳೆಗಾರರ ಆರೋಪ

    ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ತಲುಪಿಲ್ಲ – ಹೂ ಬೆಳೆಗಾರರ ಆರೋಪ

    – ಕೊರೊನಾ ಕಾಲದಲ್ಲೂ ಸರ್ಕಾರದ ಪರಿಹಾರ ಸಿಗದೆ ಹೂವಿನ ರೈತರ ಪರದಾಟ

    ಗದಗ: ಹೂವಿನ ಕಾಶಿ ಅಂತ ಪ್ರಖ್ಯಾತಿ ಪಡೆದ ಜಿಲ್ಲೆಯ ಲಕ್ಕುಂಡಿ ಭಾಗದ ಹೂವು ಬೆಳೆದ ಅನೇಕ ರೈತರು ಕೊರೊನಾದಿಂದ ಕಂಗಾಲಾಗಿದ್ದಾರೆ. ಅಲ್ಲದೆ ಕೊರೊನಾ ಲಾಕ್‍ಡೌನ್ ವೇಳೆ ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ಯಾವ ರೈತರಿಗೂ ತಲುಪಿಲ್ಲ ಎಂದು ಆರೋಪಿಸಿದ್ದಾರೆ.

    ಇಲ್ಲಿನ ಬಹುತೇಕ ರೈತರಿಗೆ ಹೂವಿನ ಬೆಳೆ ಅಂದರೆ ಶುಕ್ರದೆಶೆ ಇದ್ದ ಹಾಗೆ. ಆದರೆ ಯಾವಾಗ ಕೊರೊನಾ ಕರಿನೆರಳು ವಕ್ಕರಿಸಿತೋ, ಅಂದಿನಿಂದ ಇವರಿಗೆಲ್ಲಾ ವಕ್ರದೃಷ್ಟಿ ಮನೆ ಮಾಡಿದೆ. ಮಹಾಮಾರಿ ಕೊರೊನಾಗೆ ರೈತ ಕುಲವೂ ನಲುಗಿ ಹೋಗಿದೆ. ಕಳೆದ 2 ವರ್ಷಗಳಿಂದ ಕೊರೊನಾ ಕರಿಛಾಯೆಗೆ ಹೂವು ಬೆಳೆದ ಜಿಲ್ಲೆಯ ರೈತರಿಗೆ ಸೂಕ್ತ ಬೆಲೆ, ಮಾರುಕಟ್ಟೆ ಹಾಗೂ ಪರಿಹಾರ ಇಲ್ಲದೆ, ರೈತರು ಸಾಕು ಎನ್ನುವಷ್ಟರ ಮಟ್ಟಿಗೆ ಜಿಗುಪ್ಸೆಗೆ ಒಳಗಾಗಿದ್ದಾರೆ. ಅದರಲ್ಲೂ ಪ್ರಕೃತಿ ನಂಬಿ ಕಾಯಕ ಮಾಡುವ ಈ ಅನ್ನದಾತರ ಬದುಕನ್ನೇ ಬುಡಮೇಲು ಮಾಡಿದೆ ಈ ಕೊರೋನಾ. ಇದನ್ನು ಓದಿ: ತರಕಾರಿ ವಾಹನದಲ್ಲಿ ಮದ್ಯ ಸಾಗಾಟ – 500 ಲೀಟರ್ ಎಣ್ಣೆ ವಶಕ್ಕೆ ಪಡೆದ ಪೊಲೀಸರು

    ಲಕ್ಕುಂಡಿ, ಕದಾಂಪೂರ, ಪಾಪನಾಶಿ, ಸಂಭಾಪೂರ, ಜಂತ್ಲಿ, ಶಿರೂರ, ಸೇರಿದಂತೆ ಹಲವು ಗ್ರಾಮಗಳ ಹೂ ಬೆಳೆದ ರೈತರು ಲಾಕ್‍ಡೌಲ್‍ನಿಂದಾಗಿ ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಸಾವಿರಾರು ಎಕರೆಯಷ್ಟು ಸೇವಂತಿ, ಗುಲಾಬಿ, ಮಲ್ಲಿಗೆ, ಕನಕಾಂಬರಿ ಹೂ ಸೇರಿದಂತೆ ವಿವಿಧ ತಳಿಯ ಹೂಗಳು, ಗದಗ, ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು, ಕಲಬುರ್ಗಿ ಜಿಲ್ಲೆ ಮಾರುಕಟ್ಟೆಗೆ ತಲುಪುತ್ತಿದ್ದವು. ಪದೇ ಪದೇ ಪ್ರವಾಹ, ಚಂಡಮಾರುತ, ವಿಪರೀತ ಮಳೆ, ಬರಗಾಲ ಹೀಗೆ ಅನೇಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಲಾಕ್‍ಡೌನ್ ಮತ್ತೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಅಲ್ಲದೇ ಈ ಬಾರಿ ಸರ್ಕಾರ ಘೋಷಿಸಿರುವ ಪರಿಹಾರ ಹಣ ಕೂಡ ಯಾವ ರೈತರಿಗೂ ತಲುಪಿಲ್ಲ ಎಂದು ಹೂವು ಬೆಳೆದ ರೈತರು ಆರೋಪಿಸುತ್ತಿದ್ದಾರೆ.

    ಸರ್ಕಾರವೇನೋ ಮೊದಲ ಹಂತದ ಪ್ಯಾಕೇಜ್‍ನಲ್ಲಿ ಎರಡೂವರೆ ಎಕರೆಗೆ 10 ಸಾವಿರ ಪರಿಹಾರ ಘೋಷಿಸಿದೆ. ಆದರೆ ಎಕರೆಗೆ ಸುಮಾರು 40 ರಿಂದ 50 ಸಾವಿರ ಖರ್ಚು ಮಾಡುತ್ತವೆ. ನೀವು ಕೊಡುವ ಪರಿಹಾರ ಕಸ ತೆಗೆಯುವುದಕ್ಕೂ ಸಾಲದು ಅಂತಿದ್ದಾರೆ. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಮದುವೆ, ಜಾತ್ರೆ, ಶುಭ ಸಮಾರಂಭಗಳು ಜೋರಾಗಿರುತ್ತೆ. ಆದರೆ ಅದೇ ತಿಂಗಳಲ್ಲಿ ಲಾಕ್‍ಡೌನ್ ಹೊಡೆತ ಹೂ ಬೆಳೆಗಾರರನ್ನು ಮಕಾಡೆ ಮಲಗಿಸಿದೆ. ಯಾವ ಸಮಾರಂಭ, ಮದುವೆ, ಧಾರ್ಮಿಕ ಕಾರ್ಯಕ್ರಮ ಇಲ್ಲದ್ದಕ್ಕೆ ಬೆಳೆದ ಹೂಗಳು ಗಿಡದಲ್ಲೇ ಬಾಡಿ ಹೋಗಿವೆ. ಸರ್ಕಾರದ ಪರಿಹಾರದ ಹಣ ನಿಜವಾದ ಹೂ ಬೆಳೆಗಾರರಿಗೆ ತಲುಪುತ್ತಿಲ್ಲ. ತೋಟಗಾರಿಕೆ ಅಧಿಕಾರಿಗಳು ತಮಗೆ ಬೇಕಾದವರ ಅಕೌಂಟಗೆ ಹಣ ನೀಡುತ್ತಿದ್ದಾರೆ ಎಂದು ರೈತರು ಕಿಡಿಕಾರಿದ್ದಾರೆ. ಇದನ್ನು ಓದಿ:ಕೋವಿಡ್ ನಡುವೆ ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ

    ಮಾರುಕಟ್ಟೆ ಇಲ್ಲದ್ದಕ್ಕೆ ಬೆಳೆದ ಹೂಗಳನ್ನು ಕಟಾವು ಮಾಡಿಲ್ಲ. ಇದರಿಂದ ಗಿಡಗಳಿಗೂ ರೋಗ ಹತ್ತುವ ಮೂಲಕ ರೈತ ಸಾಲ ಸೂಲ ಮಾಡಿ ಹಾಕಿದ ಬಂಡವಾಳವೆಲ್ಲ ನೀರಲ್ಲಿ ಹೋಮ ಮಾಡಿದಂತಾಗಿದೆ. ಹೀಗಾಗಿ ರೈತ ಹೂವಿನ ಬೆಳೆ ತನ್ನ ಕೈಯಾರೇ ಹಾಳು ಮಾಡುತ್ತಿದ್ದಾನೆ. ಸರ್ಕಾರ ಪರಿಹಾರ ನೀಡುವುದಾದರೆ ಬೆಳೆದ ಬೆಳೆಗೆ ತಕ್ಕದಾದ ಪರಿಹಾರದ ಮೊತ್ತ ನೀಡಲಿ ಎಂದು ಹೂ ಬೆಳೆದ ರೈತರು ಆಗ್ರಹಿಸಿದ್ದಾರೆ.

  • ರವಿ ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ರವಿ ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರವಿ.ಡಿ.ಚನ್ನಣ್ಣನವರ್, ಮೈಸೂರು ಎಸ್‍ಪಿ ಸೇರಿ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿಯಾಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

    ಕೋಲಾರ ಎಸ್‍ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್‍ಲೆಸ್ ವಿಭಾಗಕ್ಕೆ, ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು ಎಸ್‍ಪಿಯಾಗಿ ವರ್ಗಾಯಿಸಲಾಗಿದೆ.

    ದಾವಣಗೆರೆ ಎಸ್‍ಪಿಯಾಗಿದ್ದ ಹನುಮಂತರಾಯ ಅವರನ್ನು ಹಾವೇರಿ ಎಸ್‍ಪಿಯಾಗಿ, ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪ್ರಕಾಶ್ ಗೌಡ ಅವರನ್ನು ಆಂತರಿಕ ಭದ್ರತಾ ಪಡೆ ಎಸ್‍ಪಿಯಾಗಿ ಹಾಗೂ ಹಾವೇರಿ ಎಸ್‍ಪಿಯಾಗಿದ್ದ ಕೆ.ಜಿ.ದೇವರಾಜು ಅವರನ್ನು ಸಿಐಡಿ ಎಸ್‍ಪಿಯಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

    ಮೈಸೂರು ಎಸ್‍ಪಿಯಾಗಿದ್ದ ಸಿ.ಬಿ.ರಿಷ್ಯಂತ್ ಅವರನ್ನು ದಾವಣಗೆರೆ ಎಸ್‍ಪಿಯಾಗಿ, ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ದೆಕ್ಕಾ ಕಿಶೋರ್ ಬಾಬು ಅವರನ್ನು ಕೋಲಾರ ಎಸ್‍ಪಿಯಾಗಿ, ತುಮಕೂರು ಎಸ್‍ಪಿಯಾಗಿದ್ದ ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‍ಪಿಯಾಗಿ, ಬೆಂಗಳೂರಿನ ಆಂತರಿಕ ಭದ್ರತಾ ಪಡೆಯ ಎಸ್‍ಪಿಯಾಗಿದ್ದ ಪ್ರದೀಪ್ ಗುಂಟಿ ಅವರನ್ನು ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ, ಬೆಂಗಳೂರಿನ ವೈರ್‍ಲೆಸ್ ವಿಭಾಗದ ಎಸ್‍ಪಿಯಾಗಿದ್ದ ಅದ್ದೂರು ಶ್ರೀನಿವಾಸುಲು ಅವರನ್ನು ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

  • ಬಿಜೆಪಿಯವರ ಒಳ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತೆ, ಆರು ತಿಂಗಳಲ್ಲಿ ಚುನಾವಣೆ ನಡೆಯುತ್ತೆ: ಶಾಸಕ ಸಂಗಮೇಶ್

    ಬಿಜೆಪಿಯವರ ಒಳ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತೆ, ಆರು ತಿಂಗಳಲ್ಲಿ ಚುನಾವಣೆ ನಡೆಯುತ್ತೆ: ಶಾಸಕ ಸಂಗಮೇಶ್

    ಶಿವಮೊಗ್ಗ: ಬಿಜೆಪಿಯವರ ಒಳ ಜಗಳದಿಂದಲೇ ಈ ಸರ್ಕಾರ ಬಿದ್ದು ಹೋಗಲಿದ್ದು, ಇನ್ನು 6 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಕೇವಲ 6 ತಿಂಗಳ ಸರ್ಕಾರ, ಇನ್ನು 6 ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಬಿಜೆಪಿಯವರಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಅವರು ಹಣ ಮಾಡುವುದಕ್ಕಾಗಿಯೇ ಅಧಿಕಾರದಲ್ಲಿದ್ದಾರೆ. ಬಿಜೆಪಿ ಶಾಸಕರಲ್ಲಿ ಈಗಾಗಲೇ ಒಳ ಜಗಳ ಆರಂಭವಾಗಿದ್ದು, 2022ರಲ್ಲಿ ಚುನಾವಣೆ ಎದುರಾಗಬಹುದು ಎಂದರು. ಇದನ್ನೂ ಓದಿ: ಸರ್ಕಾರ ರಚನೆಯಾಗೋದಕ್ಕೆ ನನ್ನದೂ ಅಳಿಲು ಸೇವೆ ಇದೆ : ಸಿ.ಪಿ.ಯೋಗೇಶ್ವರ್

    ಪೆಟ್ರೋಲ್ ದರ ನೂರು ರೂಪಾಯಿ ದಾಟಿದೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಜನರು ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಈ ಬಿಜೆಪಿಯವರಿಗೆ ಅಧಿಕಾರ ನಡೆಸಿ ಅನುಭವ ಇಲ್ಲ, ಅನುಭವದ ಕೊರತೆ ಇದೆ ಎಂದರು.

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಹಗರಣ ನಡೆದಿಲ್ಲ. ಬದಲಿಗೆ 70 ವರ್ಷ ಅಧಿಕಾರ ನಡೆಸಿದ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಧರ್ಮದ ರಾಜಕಾರಣ ಈಗಾಗಲೇ ಜನರಿಗೆ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪತನವಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ ತಿಳಿಸಿದರು.

  • ಮಂಗಳಮುಖಿಯರಿಗೆ ಲಸಿಕೆಯೊಂದಿಗೆ ದಿನಸಿ ಕಿಟ್ ವಿತರಣೆ

    ಮಂಗಳಮುಖಿಯರಿಗೆ ಲಸಿಕೆಯೊಂದಿಗೆ ದಿನಸಿ ಕಿಟ್ ವಿತರಣೆ

    ಬೆಂಗಳೂರು: ಮಂಗಳಮುಖಿಯರಿಗೆ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ನೇತೃತ್ವದಲ್ಲಿ ಉಚಿತ ದಿನಸಿ ಕಿಟ್ ವಿತರಣೆ ಮಾಡಲಾಯ್ತು. ಇದೇ ವೇಳೆ ಹಲವು ಮಂಗಳಮುಖಿಯರಿಗೆ ಕೋವಿಡ್-19 ಲಸಿಕೆ ಸಹ ಹಾಕಿಸಲಾಯಿತು.


    ಬೆಳಗ್ಗೆ 9ಗಂಟೆಗೆ ನಗರದ ಟೌನ್ ಹಾಲ್ ಮುಂದೆ ಸುಮಾರು 1 ಸಾವಿರ ಮಂಗಳಮುಖಿಯರಿಗೆ ರೇಷನ್ ಕಿಟ್ ವಿತರಿಸುದರೊಂದಿಗೆ, ಕೆಲವರಿಗೆ ಕೋವಿಡ್ ಲಸಿಕೆಯನ್ನು ಪೊಲೀಸ್ ಸಿಬ್ಬಂದಿ ವರ್ಗದವರಿಂದ ಉಚಿತವಾಗಿ ಹಾಕಿಸಲಾಯಿತು. ಇದನ್ನೂ ಓದಿ: ಮಂಗಳಮುಖಿಯರಿಗೆ ಕಿಚ್ಚನ ನೆರವು

    ಶಾಸಕ ಉದಯ್ ಗರುಡಾಚಾರ್, ಐಪಿಎಸ್, ಟ್ರಾಫಿಕ್ ಜಾಯಿಂಟ್ ಕಮಿಷನರ್ ಡಾ. ರವಿಕಾಂತೆಗೌಡ, ಎಸಿಪಿಗಳಾದ ನಜ್ಮಾ ಫಾರೂಕಿ, ರಮೇಶಬಾಬು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

  • ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

    ಕೈಗಾರಿಕೆಗಳು, ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್ ಅಧಿಕಾರಿ: ಶೆಟ್ಟರ್

    – ಮೂರನೇ ಅಲೆಗೆ ಸಿದ್ಧಗೊಳ್ಳಲು ಅಧಿಕಾರಿಗಳಿಗೆ ಸೂಚನೆ
    – ಆಸ್ಪತ್ರೆಗಳು ಆಮ್ಲಜನಕದ ಇಂಡೆಂಟ್ ನೀಡಲು ನೂತನ ತಂತ್ರಜ್ಞಾನ

    ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಆಫೀಸರ್ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

    ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ ಜಿಲ್ಲೆಗಳಲ್ಲಿ ಬಫರ್ ಸ್ಟಾಕ್ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.
    ಇದನ್ನೂ ಓದಿ: ರಾಜಾಹುಲಿ ಮನತುಂಬಿದ ನಗುವಿನ ಹಿಂದೆ ಅವರು..!

    ಎನ್‍ಐಸಿ ಮೂಲಕ ಒಂದು ತಂತ್ರಜ್ಞಾನವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇದು ಇನ್ನು 3 ದಿನಗಳಲ್ಲಿ ಸಿದ್ಧವಾಗಲಿದ್ದು ಅದನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು. ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್ ಅಧಿಕಾರಿಗಳು ಆಸ್ಪತ್ರೆಗೆ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದರು. ಇದನ್ನೂ ಓದಿ: ಗುರುವಾರದ ನಂತರ ಅನ್‍ಲಾಕ್ ಆಗುತ್ತಾ? ಮೊದಲ ಹಂತದಲ್ಲಿ ಯಾವುದಕ್ಕೆಲ್ಲ ವಿನಾಯ್ತಿ?

    3ನೇ ಕೋವಿಡ್ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ಧವಾಗಿರಬೇಕಾಗಿರುವುದು ಬಹಳ ಅತ್ಯವಶ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಸಂಧರ್ಭದಲ್ಲಿ ಅಭಿನಂದಿಸಿದರು. ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಮೌನಿಶ್ ಮೌದ್ಗಿಲ್, ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.