Tag: government

  • ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ

    ತಂದೆ ತಾಯಿ ಕಳೆದುಕೊಂಡ ಮಕ್ಕಳ ಜೊತೆ ನಾವಿದ್ದೇವೆ: ಶಶಿಕಲಾ ಜೊಲ್ಲೆ

    – ಅನಾಥ ಮಕ್ಕಳೊಂದಿಗೆ ಸಂವಾದ ನಡೆಸಿ ಸಾಂತ್ವನ ಹೇಳಿದ ಸಚಿವರು

    ಬೆಂಗಳೂರು: ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ. ಇದನ್ನು ಓದಿ:ಗುಡುಗು ಸಹಿತ ಭಾರೀ ಮಳೆಗೆ ರಾಯಚೂರಿನಲ್ಲಿ ಇಬ್ಬರು ದುರ್ಮರಣ

    ಕೋವಿಡ್-19ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವೀಡಿಯೊ ಸಂವಾದ ನಡೆಸಿ, ಅವರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದರು.

    ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ಪ್ರತಿಯೊಬ್ಬ ಮಗುವಿನ ಜೊತೆಗೂ ವೈಯಕ್ತಿಕವಾಗಿ ಚರ್ಚೆ ನಡೆಸಿ, ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳ ಪೋಷಕರ ಕಷ್ಟಗಳ ಬಗ್ಗೆ ಮಾಹಿತಿ ಪಡೆದರು. ಇದನ್ನು ಓದಿ:ಆತ್ಮವಿಶ್ವಾಸ, ಧೈರ್ಯವಿದ್ದರೆ ಕೊರೊನಾ ಗೆಲ್ಲಬಹುದು: ಮಾದಯ್ಯ ಸ್ವಾಮಿ

    ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿ ಮಾತು ಹೇಳಿದರು. ಈ ಕುರಿತು ಮಾತನಾಡಿರುವ ಸಚಿವರು ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿದರು.

    ಜಾಗೃತಿ ಕಾರ್ಯಕ್ರಮ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ.

    ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಘೋಷಣೆ ಮಾಡಿರುವ ಮಾಸಿಕ 3,500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್‍ಗೆ ತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನು ಓದಿ:ಕೋಣಗಳು ಕಾದಾಡಿದ್ದಕ್ಕೆ ಬಡಿದಾಡಿಕೊಂಡ ಮಾಲೀಕರು – ಆಸ್ಪತ್ರೆಗೆ ದಾಖಲು

    ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.

  • ಮಹಾರಾಷ್ಟ್ರದಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ

    ಮಹಾರಾಷ್ಟ್ರದಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆ- ಗೆದ್ದ ಗ್ರಾಮಗಳಿಗೆ 50 ಲಕ್ಷ ಬಹುಮಾನ

    – ದ್ವಿತೀಯ ಸ್ಥಾನಕ್ಕೆ 25 ಲಕ್ಷ, ತೃತೀಯ ಸ್ಥಾನಕ್ಕೆ 15 ಲಕ್ಷ ಪ್ರೈಜ್

    ಮುಂಬೈ: ದೇಶಾದ್ಯಂತ ಕೊರೊನಾ ತಾಂಡವಾಡುತ್ತಿದ್ದು, ಮಹಾರಾಷ್ಟ್ರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಇನ್ನೂ ಭಯಾನಕ ವಿಚಾರ ಎಂಬಂತೆ ಹಳ್ಳಿಗಳಿಗೂ ಸಹ ಮಹಾಮಾರಿ ಆವರಿಸುತ್ತಿದೆ. ಹೀಗಾಗಿ ಹಳ್ಳಿಗಳಿಗೆ ಕೊರೊನಾ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದ್ದು, ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

    ಸ್ಥಳೀಯ ಆಡಳಿತವನ್ನು ಪ್ರೋತ್ಸಾಹಿಸುವುದು ಹಾಗೂ ಹಳ್ಳಿಗಳಿಗೆ ಕೊರೊನಾ ವ್ಯಾಪಿಸದಂತೆ ತಡೆಯುವುದು, ಈ ಮೂಲಕ ಕೊರೊನಾ ಮುಕ್ತ ರಾಜ್ಯವನ್ನಾಗಿಸುವುದು ಈ ಪರಿಕಲ್ಪನೆಯ ಉದ್ದೇಶವಾಗಿದೆ. ಹೀಗಾಗಿ ಹಳ್ಳಿ ಹಳ್ಳಿಗಳ ನಡುವೆ ‘ಕೊರೊನಾ ಮುಕ್ತ ಗ್ರಾಮ’ ಸ್ಪರ್ಧೆಯನ್ನು ಪರಿಚಯಿಸಿದೆ. ಸ್ಪರ್ಧೆಯಲ್ಲಿ ಗೆದ್ದ ಹಳ್ಳಿಗೆ 50 ಲಕ್ಷ ರೂ.ಗಳ ಪ್ರಥಮ ಬಹುಮಾನ ನೀಡುವುದಾಗಿ ಘೊಷಿಸಿದೆ. ರಾಜ್ಯದ ಒಟ್ಟು 6 ಕಂದಾಯ ವಿಭಾಗಗಳಲ್ಲಿ ಜಯಗಳಿಸಿದ ಹಳ್ಳಿಗಳಿಗೆ 50 ಲಕ್ಷ ರೂ.ಗಳ ಬಹುಮಾನ ದೊರೆಯುತ್ತದೆ. ಇದನ್ನೂ ಓದಿ: ವ್ಯಾಕ್ಸಿನ್ ಖರೀದಿಗೆ ಮೀಸಲಿಟ್ಟ 35,000 ಕೋಟಿ ಏನಾಯ್ತು? ಲೆಕ್ಕ ಪರಿಶೋಧನೆಗೆ ಸುಪ್ರೀಂಕೋರ್ಟ್ ಆದೇಶ

    ಮಹಾರಾಷ್ಟ್ರ ಗ್ರಾಮೀಣಾಭಿವೃದ್ಧಿ ಸಚಿವ ಹಸನ್ ಮುಶ್ರಫ್ ಈ ಕುರಿತು ಮಾಹಿತಿ ನೀಡಿದ್ದು, ‘ನನ್ನ ಗ್ರಾಮ ಕೊರೊನಾ ಮುಕ್ತ’ ಅಭಿಯಾನವನ್ನು ಇತ್ತೀಚೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದು, ಗ್ರಾಮ, ತಾಲೂಕು, ಜಿಲ್ಲೆ ಹೀಗೆ ಇಡೀ ಆದಷ್ಟು ಬೇಗ ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವುದು ಇದರ ಉದ್ದೇಶವಾಗಿದೆ ಎಂದರು.

    ಭಾಗವಹಿಸುವ ಗ್ರಾಮಗಳನ್ನು 22 ಮಾನದಂಡಗಳ ಆಧಾರದ ಮೇಲೆ ಅಳೆಯಲಾಗುತ್ತದೆ. ಈ ಕುರಿತು ರಚಿಸಲಾದ ಸಮಿತಿ ನಿರ್ಣಯ ಕೈಗೊಳ್ಳುತ್ತದೆ. ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿರ್ವಹಿಸಿದ ಒಟ್ಟು 6 ಕಂದಾಯ ವಿಭಾಗಗಳಲ್ಲಿ ತಲಾ ಮೂರು ಗ್ರಾಮ ಪಂಚಾಯಿತಿಗಳಿಗೆ ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನ 50 ಲಕ್ಷ ರೂ. ದ್ವಿತೀಯ 25 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ 15 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದು ಸಚಿವರು ವಿವರಿಸಿದರು.

    ಒಟ್ಟು 18 ಬಹುಮಾನಗಳನ್ನು ನಿಡಲಾಗುತ್ತದೆ, ಒಟ್ಟು 5.4 ಕೋಟಿ ರೂ. ಬಹುಮಾನದ ಮೊತ್ತವಾಗಿದೆ. ವಿಜೇತ ಗ್ರಾಮಗಳಿಗೆ ಬಹುಮಾನದ ಮೊತ್ತಕ್ಕೆ ಸಮಾನವಾದ ಹೆಚ್ಚುವರಿ ಮೊತ್ತವನ್ನು ಪ್ರೋತ್ಸಾಹವಾಗಿ ನೀಡಲಾಗುವುದು. ಇದನ್ನು ಆ ಗ್ರಾಮಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಾಗಿದೆ ಎಂದು ಮುಶ್ರಫ್ ಮಾಹಿತಿ ನೀಡಿದರು.

    ಭಾನುವಾರ ನಡೆದ ವೀಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು 21 ವರ್ಷದ ರುತುರಾಜ್ ದೇಶ್ಮುಖ್ ರಾಜ್ಯದ ಕಿರಿಯ ಸರ್ಪಂಚ್ ಹಾಗೂ ಸೋಲಾಪುರ ಜಿಲ್ಲೆಯ ಘಾಟ್ನೆ ಗ್ರಾಮವನ್ನು ಕೊರೊನಾ ಮುಕ್ತವಾಗಿಸಿದ್ದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪ್ರೋತ್ಸಾಹ ನೀಡುತ್ತಿದ್ದಾರೆ.

  • ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ಸಹಕಾರ ಸಿಗುತ್ತದೆ: ಅಶ್ವತ್ ನಾರಾಯಣ್

    ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲಾ ಸಹಕಾರ ಸಿಗುತ್ತದೆ: ಅಶ್ವತ್ ನಾರಾಯಣ್

    ಕೋಲಾರ: ಕೊರೊನಾ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಷ್ಟೇ ಪ್ರಮಾಣದ ಔಷಧವನ್ನ ಕೋಲಾರ ಜಿಲ್ಲೆಗೆ ನೀಡಲು ಸರ್ಕಾರ ಬದ್ದ ಎಂದು ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಹೇಳಿದ್ದಾರೆ.

    ಕೋಲಾರ ಜಿಲ್ಲೆಯ ಮುಳಬಾಗಲು ನಗರದ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಷ್ಟೇ ಪ್ರಮಾಣದ ಔಷಧವನ್ನ ಕೋಲಾರ ಜಿಲ್ಲೆಗೆ ನೀಡಲು ಸರ್ಕಾರ ಬದ್ದವಾಗಿದೆ. ಮುಳಬಾಗಿಲು ನಗರದಲ್ಲಿರುವ ಹಳೇ ಕೋರ್ಟ್ ಕಟ್ಟಡವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬದಲಾವಣೆ ಮಾಡಲಾಗಿತ್ತು. ಅದರಂತೆ ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಕೋವಿಡ್ ಆಸ್ಪತ್ರೆಯನ್ನ ಸುಧಾರಣೆ ಮಾಡಲಾಗಿದೆ. ಇದನ್ನೂ ಓದಿ: ಸಿಎಂ ಬಿಎಸ್‍ವೈಗೆ ಹೈಕಮಾಂಡ್ ಬಿಗ್ ರಿಲೀಫ್ – ಸಕ್ರಿಯರಲ್ಲದ ಸಚಿವರಿಗೆ ಕೊಕ್ ಸಾಧ್ಯತೆ

    80 ಲಕ್ಷ ಸೇರಿದಂತೆ ದಾನಿಗಳ ನೆರವು ಪಡೆದು ಸುಸ್ಸಜ್ಜಿತ ಆಸ್ಪತ್ರೆಯನ್ನಾಗಿ ಮಾಡಲಾಗಿದೆ, ಇದು ಮುಳಬಾಗಲು ನಗರಕ್ಕೆ ಅವಶ್ಯಕವಾಗಿತ್ತು. ಹಾಗಾಗಿ ಮೂರನೆ ಅಲೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ಆಸ್ಪತ್ರೆಗೆ ಬೇಕಾದ ಸಿಬ್ಬಂದಿ ಹಾಗೂ ಸಲಕರಣಿಗಳನ್ನ ನೀಡಲಾಗಿದ್ದು, ಮತ್ತಷ್ಟು ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದರು. ಮುಂದಿನ ಸಿಎಂ ಅಭ್ಯರ್ಥಿ ನೀವು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಸದ್ಯಕ್ಕೆ ಡಿಸಿಎಂ ಆಗಿದ್ದೇನೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಹೆಸರಿಟ್ಟು ಮುದ್ದು ಮಗನನ್ನು ಪರಿಚಯಿಸಿದ ಗಾಯಕಿ ಶ್ರೇಯಾ ಘೋಷಾಲ್

    ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳೆಲ್ಲಾ ಮಾಯವಾಗಿದ್ದವು. ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ವೇಳೆ ಕೋವಿಡ್ ನಿಯಮ ಪಾಲನೆ ಮರೆತು ಸಚಿವರು, ಡಿಸಿಎಂ ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ಜನರು ಸಾಮಾಜಿಕ ಅಂತರ ಮರೆತು ಜಮಾಯಿಸಿದ್ದರು. ಬಿಜೆಪಿ ಕಾರ್ಯಕರ್ತರಿಂದ ತುಂಬಿ ತುಳುಕುತ್ತಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಆಗಮಿಸುತ್ತಿದ್ದಂತೆ ಜನರನ್ನ ಹೊರ ಕಳಹಿಸಿದ ಸನ್ನಿವೇಶ ನಡೆಯಿತು. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಜನರನ್ನ ವಾಪಸ್ ಕಳಹಿಸಿದ ಸನ್ನಿವೇಶ ನಡೆಯಿತು.

  • ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಲಾಕ್‍ಡೌನ್ ಮುಂದುವರಿಸಿ- ರಾಜುಗೌಡ

    ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಲಾಕ್‍ಡೌನ್ ಮುಂದುವರಿಸಿ- ರಾಜುಗೌಡ

    ಯಾದಗಿರಿ: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹೊತ್ತಲ್ಲಿ ಅನ್‍ಲಾಕ್ ಮಾಡಬಾರದು. ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡಬೇಕೆಂದು ಸುರಪುರ ಶಾಸಕ ರಾಜುಗೌಡ ಸಿಎಂ ಬಿಎಸ್‍ವೈಗೆ ಒತ್ತಾಯ ಮಾಡಿದ್ದಾರೆ.

    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜುಗೌಡ, ಲಾಕ್‍ಡೌನ್‍ನಿಂದ ಬಡ ಜನರು ಕಷ್ಟದಲ್ಲಿದ್ದಾರೆ. ಬಡವರಿಗೆ ಆರ್ಥಿಕ ಸಹಾಯದ ಪ್ಯಾಕೇಜ್ ಘೋಷಣೆ ಮಾಡಿ ಸಿಎಂ ಅವರು ಲಾಕ್‍ಡೌನ್ ವಿಸ್ತರಣೆ ಮಾಡಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದರು. ಇದನ್ನೂ ಓದಿ:ಬೇರೆ ರಾಜ್ಯದಿಂದ ಬಂದ ಕಾರ್ಮಿಕರಿಗಾಗಿ ಸ್ವಂತ ಮನೆ ಬಿಟ್ಟುಕೊಡಲೂ ಸಿದ್ಧ: ಶಾಸಕ ರಾಜುಗೌಡ

    ತಜ್ಞರ ವರದಿ ಆಧರಿಸಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುವುದು ಒಳಿತು. ಲಾಕ್‍ಡೌನ್ ವಿಸ್ತರಣೆ ಮಾಡಿದರೆ ದಿನಸಿ ಸಾಮಾಗ್ರಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು, ಲಾಕ್‍ಡೌನ್ ವಿಸ್ತರಿಸದೆ ಇದ್ದರೆ ಬಹಳ ಕಷ್ಟವಾಗುತ್ತದೆ. ಯಡಿಯೂರಪ್ಪ ಅವರು ಸಮರ್ಥವಾಗಿ ಕೋವಿಡ್ ನಿರ್ವಹಣೆ ಮಾಡುತ್ತಿದ್ದು, ಬಿಎಸ್‍ವೈ ಬಿಟ್ಟು ಬೇರೆ ಯಾರೇ ಸಿಎಂ ಇಗಿದ್ದರು ಕೂಡ ಸರ್ಕಾರ ನಡೆಸಲು ಬಹಳ ಕಷ್ಟವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

  • ಕೋವಿಡ್‍ಗೆ ಬಲಿಯಾದ ವಕೀಲರಿಗೆ ಸರ್ಕಾರ ಪರಿಹಾರ ನೀಡಬೇಕು: ಬಾಲಕೃಷ್ಣ ಸ್ವಾಮಿ

    ಕೋವಿಡ್‍ಗೆ ಬಲಿಯಾದ ವಕೀಲರಿಗೆ ಸರ್ಕಾರ ಪರಿಹಾರ ನೀಡಬೇಕು: ಬಾಲಕೃಷ್ಣ ಸ್ವಾಮಿ

    ಚಿತ್ರದುರ್ಗ: ಎಲ್ಲೆಡೆ ತಾಂಡವವಾಡುತ್ತಿರುವ ಮಹಾಮಾರಿ ಕೊರೊನಾಗೆ ಬಲಿಯಾಗಿರುವ ವಕೀಲರಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ವಕ್ತಾರ ಬಾಲಕೃಷ್ಣ ಸ್ವಾಮಿ ಆಗ್ರಹಿಸಿದ್ದಾರೆ.

    ರಾಜ್ಯದಲ್ಲಿ ಸುಮಾರು 118 ಜನರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ 6 ವಕೀಲರು ಕೋವಿಡ್ ಸೊಂಕಿನಿಂದಾಗಿ ಮೃತಪಟ್ಟಿದ್ದಾರೆ. ಅಲ್ಲದೆ ವಕೀಲ ವೃತ್ತಿ ನಡೆಸುವವರು ಸಾರ್ವಜನಿಕವಾಗಿ ಇರಲೇಬೇಕಾಗುತ್ತದೆ. ಇವರ ಬಳಿ ಅನೇಕ ಅನೇಕ ಜನರು ನ್ಯಾಯಕ್ಕಾಗಿ ಬರುತ್ತಾರೆ. ಆದ್ದರಿಂದ ಇವರನ್ನು ನ್ಯಾಯಾಂಗದ ಅಧಿಕಾರಿ ಎಂದೇ ಪರಿಗಣಿಸಲಾಗಿದೆ. ಅವರನ್ನು ಕೊರೊನಾ ವಾರಿಯರ್ ಎಂದು ಕೂಡ ಈಗಾಗಲೇ ಗುರುತಿಸಲಾಗಿದೆ. ಇವರ ಬಳಿ ಬಂದ ಕಕ್ಷಿದಾರರಿಂದ ಇವರಿಗೆ ಕೊರೊನಾ ಸೋಂಕು ತಗುಲಿ ಇವರ ಕುಟುಂಬಕ್ಕೂ ಕೂಡ ಕೊರೊನಾ ಸೋಂಕು ತಗುಲಿ ಇಡೀ ಕುಟುಂಬದ ಸದಸ್ಯರ ಪ್ರಾಣಗಳನ್ನು ಕೂಡ ಕಳೆದುಕೊಂಡಿರುವ ನಿದರ್ಶನಗಳಿವೆ ಎಂದು ತಿಳಿಸಿದ್ದಾರೆ.

    ಅನೇಕ ಯುವ ವಕೀಲರು ಹಾಗೂ ಕೆಲವೊಂದು ಆರ್ಥಿಕ ಸಂಕಷ್ಟದಲ್ಲಿರುವ ವಕೀಲರು ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಈ ಕೂಡಲೇ ರಾಜ್ಯ ಸರ್ಕಾರ ವಕೀಲರ ಸಂಘಗಳ ಮೂಲಕ ಸಂಕಷ್ಟದಲ್ಲಿರುವ ವಕೀಲರನ್ನು ಗುರುತಿಸಿ ಅವಶ್ಯವಿರುವ ವಕೀಲ ಮಿತ್ರರಿಗೆ ಆರ್ಥಿಕ ಪ್ಯಾಕೇಜನ್ನು ನೀಡಬೇಕಾಗಿ ಒತ್ತಾಯಿಸಿದ್ದಾರೆ.

    ಹಾಗೆಯೇ ಕೊರೊನಾ ಸೊಂಕಿನಿಂದ ಪ್ರಾಣ ಕಳೆದುಕೊಂಡ ವಕೀಲರಿಗೆ ಹಾಗೂ ಅವರ ಕುಟುಂಬದವರಿಗೆ ತಲಾ 30 ಲಕ್ಷ ರೂನಂತೆ ಪರಿಹಾರವನ್ನು ನೀಡುವಂತೆ ಆಗ್ರಹಿಸಿದ್ದು, ಈ ಕೂಡಲೇ ಎಲ್ಲಾ ವಕೀಲರ ಕುಟುಂಬಗಳ ಸಂರಕ್ಷಣೆ ಹಿತದೃಷ್ಟಿಯಿಂದ ಸರ್ಕಾರ ಕೋವಿಡ್ ವ್ಯಾಕ್ಸಿನ್ ಸಹ ನೀಡಬೇಕೆಂದು ಮನವಿ ಮಾಡಿದ್ದಾರೆ.

  • ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ

    ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ

    – 80 ಆಕ್ಸಿಜನ್ ಬೆಡ್ ಗಳ ಆಸ್ಪತ್ರೆ
    – ಶಾಸಕರ ನಿಧಿಯಿಂದ 80 ಲಕ್ಷ ರೂ. ವೆಚ್ಚ

    ಮುಳಬಾಗಿಲು: ಸ್ಥಳೀಯ ಶಾಸಕರ ನಿಧಿ ಹಾಗೂ ಸರ್ಕರದ ನೆರವಿನಿಂದ ಪಟ್ಟಣದ ಹಳೆಯ ನ್ಯಾಯಾಲಯ ಕಟ್ಟಡದಲ್ಲಿ ಹೊಸದಾಗಿ ಅಭಿವೃದ್ಧಿ ಮಾಡಲಾಗಿರುವ ಸುಸಜ್ಜಿತ 80 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಇಂದು ಲೋಕಾರ್ಪಣೆ ಮಾಡಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ ಅವರು, ಇದೀಗ ರಾಜ್ಯದ ಪೂರ್ವ ಗಡಿ ಭಾಗದ ಪಟ್ಟಣ ಮುಳಬಾಗಿಲು ಮತ್ತು ತಾಲೂಕಿನ ಗ್ರಾಮಗಳಲ್ಲಿ ಸೋಂಕಿಗೆ ತುತ್ತಾದವರು ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ಪಡೆಯಬಹುದು. ಸೋಂಕು ಕಾಣಿಸಿಕೊಂಡ ಮೇಲೆ ಆತಂಕಗೊಂಡು ಕೋಲಾರ ಅಥವಾ ಬೆಂಗಳೂರಿಗೆ ಓಡುವುದು ಬೇಡ. ಇಲ್ಲಿಯೇ ಅತ್ಯುತ್ತಮ ಚಿಕಿತ್ಸೆ ಲಭ್ಯವಾಗುತ್ತದೆ ಎಂದರು. ಇದನ್ನೂ ಓದಿ: ಕೈಗಾರಿಕಾಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ: ಡಿಸಿಎಂ

    ಹಳೆಯ ನ್ಯಾಯಾಲಯದ ಕಟ್ಟಡದಲ್ಲಿ ಅತ್ಯಂತ ಸುಸಜ್ಜಿತವಾಗಿ ಈ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸಲಾಗಿದೆ. ನ್ಯಾಯಾಲಯವು ಹೊಸ ಕಟ್ಟಡಕ್ಕೆ ಸ್ಥಳಾಂತರವಾದ ನಂತರ ಈ ಕಟ್ಟಡ ಖಾಲಿ ಬಿದ್ದಿತ್ತು. ಇದನ್ನು ವ್ಯರ್ಥವಾಗಿ ಬಿಡದೇ ಈಗ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಈ ಆಸ್ಪತ್ರೆಗೆ ಸ್ಥಳೀಯ ಶಾಸಕರ ನಿಧಿಯಿಂದ 80 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಈ ಕಟ್ಟಡವನ್ನು ಆಸ್ಪತ್ರೆ ಮಾಡಬೇಕು ಎಂದು ಶಾಸಕ ನಾಗೇಶ್ ಸಂಕಲ್ಪ ಮಾಡಿದ್ದರು. ಅದಕ್ಕೆ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಮತ್ತು ಸಂಸದ ಮುನಿಸ್ವಾಮಿ ಅವರು ಸಹಕಾರ ನೀಡಿದ್ದಾರೆ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.

    ಈ ಆಸ್ಪತ್ರೆಯ ಎಲ್ಲ 80 ಬೆಡ್ ಗಳಿಗೂ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಂಬೋ ಸಿಲಿಂಡರ್ ಗಳ ಸಂಪರ್ಕ ಕಲ್ಪಿಸಲಾಗಿದೆ. ಇಲ್ಲಿ ಆಮ್ಲಜನಕ ಕೊರತೆ ಆಗುವುದಿಲ್ಲ. ಅಲ್ಲದೆ, ಗೀವ್ ಇಂಡಿಯಾ ಹಾಗೂ ಶ್ರೀಮದ್ ರಾಜ್ ಚಂದ್ರ ಪ್ರತಿಷ್ಠಾನ ತಲಾ 10 ಆಮ್ಲಜನಕ ಸಾಂದ್ರಕಗಳನ್ನು ಆಸ್ಪತ್ರೆಗೆ ನೀಡಲಾಗಿದೆ. ಸರ್ಕಾರದ ಕಡೆಯಿಂದ ವೈದ್ಯರು, ಅರೆ ವೈದ್ಯ ಸಿಬ್ಬಂದಿ, ವೈದ್ಯಕೀಯ ಸಾಮಗ್ರಿ, ಔಷಧಿ, ಮಾತ್ರೆಗಳನ್ನು ಒದಗಿಸಲಾಗಿದೆ. ಮುಂದೆ ಏನೇ ಬೇಡಿಕೆ ಇದ್ದರೂ ವಿಳಂಬ ಮಾಡದೇ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

    ಮೂರನೇ ಅಲೆಗೂ ಸನ್ನದ್ಧ
    ಗ್ರಾಮೀಣ ಪ್ರದೇಶದಲ್ಲಿ ಅತ್ಯುತ್ತಮ ಆರೋಗ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಸಂಭವನೀಯ ಮೂರನೇ ಅಲೆ ಎದುರಿಸುವುದಕ್ಕೂ ಸರ್ಕಾರ ಸಂಪೂರ್ಣವಾಗಿ ಸನ್ನದ್ಧವಾಗಿದೆ. ರಾಜ್ಯದ ಎಲ್ಲ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲ ಆಸ್ಪತ್ರೆಗಳಿಗೆ ಇನ್ನಷ್ಟು ಶಕ್ತಿ ತುಂಬಲಾಗುತ್ತಿದೆ. ಮೂಲಸೌಕರ್ಯಗಳನ್ನು ಉತ್ತಮಪಡಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್ 

    ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ನಾಗೇಶ್, ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬೇಲೂರು, ಸರ್ಕಾರದ ಸಿಎಸ್‍ಆರ್ ಸಲಹೆಗಾರ ಮಹೇಶ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ: ಶೆಟ್ಟರ್

    ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ: ಶೆಟ್ಟರ್

    – ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕೆಲವೇ ದಿನಗಳಲ್ಲಿ ಘೋಷಣೆ  

    ಬೆಂಗಳೂರು: ರಾಜ್ಯದಲ್ಲಿ ನೂತನ ಆಮ್ಲಜನಕ ಘಟಕ ನಿರ್ಮಾಣಕ್ಕೆ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ದೊರಯಲಿದೆ. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕೆಲವೇ ದಿನಗಳಲ್ಲಿ ಘೋಷಣೆಯಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ರಾಜ್ಯ ಆಮ್ಲಜನಕ ಸರಬರಾಜು ಮತ್ತು ಉತ್ಪಾದನೆ ಉಸ್ತುವಾರಿ ಶ್ರೀ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವೊಂದಕ್ಕೆ ವಿನಾಯಿತಿ ನೀಡಿ ಲಾಕ್‍ಡೌನ್ ವಿಸ್ತರಣೆ – ಸಿಎಂ ಬಿಎಸ್‍ವೈ

    ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
    ಆಮ್ಲಜನಕ ಘಟಕ ನಿರ್ಮಾಣ ಪ್ರಾರಂಭಿಸಲು ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ವಿಶೇಷ ರಿಯಾಯಿತಿ ಪ್ರಸ್ತಾವನೆಯನ್ನು ರಚಿಸಲಾಗಿದ್ದು ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಲಾಗಿದೆ. ಆರ್ಥಿಕ ಇಲಾಖೆಯ ಅನುಮತಿಯ ನಂತರ ಇನ್ನು ಕೆಲವೇ ದಿನಗಳಲ್ಲಿ ಆಗಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿಂದು ರಾಜ್ಯ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಸಂಬಂಧವಾಗಿ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ನಂತರ ಮಾತನಾಡಿದರು. ರಾಜ್ಯದಲ್ಲಿ ಆಮ್ಲಜನಕದ ಪರಿಸ್ಥಿತಿ ಸುಧಾರಿಸುತ್ತಿದೆ. ಕೇಂದ್ರ ಸರಕಾರದ ಸಹಕಾರದಿಂದ ಹಾಗೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಆಗುತ್ತಿರುವ ನಿಟ್ಟಿನಲ್ಲಿ ಆಮ್ಲಜನಕದ ಬೇಡಿಕೆ ನಿಧಾನವಾಗಿ ತಗ್ಗುತ್ತಿದೆ. ತಜ್ಞರ ಅಂದಾಜಿನಂತೆ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ರಾಜ್ಯ ವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿ ಮಾಡುವುದು ನಮ್ಮ ಗುರಿಯಾಗಿದೆ ಎಂದರು.

    ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಶೇಷ ರಿಯಾಯಿತಿಯ ಪ್ರಸ್ತಾವನೆಯನ್ನು ಕೈಗಾರಿಕಾ ಇಲಾಖೆಯ ವತಿಯಿಂದ ರಚಿಸಲಾಗಿದ್ದು ಆರ್ಥಿಕ ಇಲಾಖೆಯ ಪರಾಮರ್ಶೆಗೆ ಕಳುಹಿಸಿಕೊಡಲಾಗಿದೆ. ಅಲ್ಲದೆ, ಈ ಬಗ್ಗೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚೆಯನ್ನು ನಡೆಸಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ವಿಶೇಷ ವಿಶೇಷ ಸೌಲಭ್ಯದ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ:1200 ರೂಪಾಯಿಗೆ ಡಿಎಪಿ ಗೊಬ್ಬರ – ಜೋಶಿ ಮನವಿಗೆ ಸ್ಪಂದಿಸಿದ ಸರ್ಕಾ

    ಜಿಂದಾಲ್‍ಗೆ ನೋಟೀಸ್:
    ರಾಜ್ಯಕ್ಕೆ ನೀಡಬೇಕಾಗಿದ್ದ ದ್ರವೀಕೃತ ಆಮ್ಲಜನಕವನ್ನು ಜಿಂದಾಲ್ ನಿನ್ನೆ ನೀಡಿರಲಿಲ್ಲ. ಇದರಿಂದ ರಾಜ್ಯದಿಂದ ಲಭ್ಯವಾಗಬೇಕಾಗಿದ್ದ 830 ಎಂ.ಟಿ ಗಳಲ್ಲಿ ನಮಗೆ ದೊರಕಿದ್ದು ಕೇವಲ 386 ಎಂ.ಟಿಗಳಷ್ಟು ಮಾತ್ರ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಮುಂದಿಟ್ಟು ಈ ಸಂಕಷ್ಟದ ಸಮಯದಲ್ಲಿ ಆಮ್ಲಜನಕ ನೀಡದೇ ಇರುವುದರ ಬಗ್ಗೆ ನಿನ್ನೆ ಜಿಂದಾಲ್ ಗೆ ನೋಟೀಸ್ ನೀಡಲಾಗಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ. ಇನ್ನು ಮುಂದೆ ಇಂತಹ ಘಟನೆಗಳು ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ರಾಜ್ಯದಲ್ಲಿನ ಆಮ್ಲಜನಕ ಘಟಕಗಳ ಸ್ಥಾಪನೆ:
    ಕೇಂದ್ರ, ರಾಜ್ಯ ಮತ್ತು ಹಲವಾರು ಸಾರ್ವಜನಿಕ ಸಂಸ್ಥೆಗಳು ಘಟಕ ಸ್ಥಾಪನೆಗೆ ಮುಂದಾಗಿವೆ. ಆದರೆ, ಅದರ ಸ್ಥಾಪನೆ ಕಾರ್ಯಗಳನ್ನು ಚುರುಕುಗೊಳಿಸುವುದರತ್ತ ಹೆಚ್ಚಿನ ಗಮನ ಬೇಕಾಗಿದೆ. ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

    ಸರಕಾರಿ ಆಸ್ಪತ್ರೆಗಳನ್ನು ಸ್ವಾವಲಂಬಿನೆ:
    ಸರಕಾರಿ ಆಸ್ಪತ್ರೆಗಳನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಬೇಕಾಗಿದೆ. ಹೊರಗಿನಿಂದ ಬರುವ ಆಮ್ಲಜನಕವನ್ನು ನಂಬಿಕೊಳ್ಳುವುದರ ಜೊತೆಯಲ್ಲಿಯೇ ಅವುಗಳು ಸ್ವತಃ ಆಮ್ಲಜನಕ ಉತ್ಪಾದನೆ ಮಾಡಿದಲ್ಲಿ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.

    ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಆರೋಗ್ಯ ಇಲಾಖೆ ಜಾವೇದ್ ಆಖ್ತರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್ ಅಧಿಕಾರಿ ಮೌನಿಶ್ ಮೌದ್ಗಿಲ್, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

  • 1200 ರೂಪಾಯಿಗೆ ಡಿಎಪಿ ಗೊಬ್ಬರ – ಜೋಶಿ ಮನವಿಗೆ ಸ್ಪಂದಿಸಿದ ಸರ್ಕಾರ

    1200 ರೂಪಾಯಿಗೆ ಡಿಎಪಿ ಗೊಬ್ಬರ – ಜೋಶಿ ಮನವಿಗೆ ಸ್ಪಂದಿಸಿದ ಸರ್ಕಾರ

    ಹುಬ್ಬಳ್ಳಿ: ಡಿಎಪಿ ಗೊಬ್ಬರವನ್ನು 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ರೈತರಿಗೆ ಒದಗಿಸಿ, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿ ಬರಿಸುತ್ತದೆ.

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮೇರೆಗೆ ಸಿಎಂ ಬಿಎಸ್ ಯಡಿಯೂರಪ್ಪ, ಡಿಎಪಿ ಗೊಬ್ಬರವನ್ನು 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ರೈತರಿಗೆ ಒದಗಿಸಿ, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿಗೆ ಭರಿಸಲು ಆದೇಶಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದಿನ ದರದಲ್ಲಿ ಖರೀದಿಸಿದ ಡಿಎಪಿ ರಸಗೊಬ್ಬರ ಒಟ್ಟು, 46474.15 ಮೆಟ್ರಿಕ್ ಟನ್ ಸಂಗ್ರಹವಿದೆ. ಕ್ಟಿಂಟಲ್ ಗೊಬ್ಬರಕ್ಕೆ 1413.25 ರೂಪಾಯಿ ರೈತರಿಗೆ ಹೊರೆಯಾಗಲಿದೆ. ಆದರೆ ಕೇಂದ್ರ ಸರ್ಕಾರ ಪ್ರಕಟಿಸಿದ ಸಬ್ಸಿಡಿಯಿಂದ ಡಿಪಿಎ ದರ ಪ್ರಸಕ್ತ ಮಾರುಕಟ್ಟೆಯಲ್ಲಿ 1200 ರೂಪಾಯಿಗೆ ದೊರೆಯುತ್ತಿದೆ.

    ಹೀಗಾಗಿ ಹಲವು ಜಿಲ್ಲೆಗಳಲ್ಲಿ ಗೊಬ್ಬರ ದಾಸ್ತಾನು ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ಎಲ್ಲ ರೈತರಿಗೂ ರಸಗೊಬ್ಬರ ಒಂದೇ ದರದಲ್ಲಿ ಸಿಗುತ್ತಿರಲಿಲ್ಲ. ಎಲ್ಲ ಜಿಲ್ಲೆಗಳ ಉಗ್ರಾಣಗಳಲ್ಲಿರುವ ಡಿಎಪಿ ದರವನ್ನ ತಕ್ಷಣ ಕಡಿಮೆ ದರಕ್ಕೆ ದೊರೆಯುವಂತೆ ಮಾಡಲು ರಾಜ್ಯ ಸರ್ಕಾರ ಮಾರಾಟ ಮಂಡಳಿಗೆ 213.25 ರೂಪಾಯಿ ಮೊತ್ತವನ್ನ ಪಾವತಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಿಎಸ್‍ವೈಗೆ ಫೋನ್ ಮೂಲಕ ಮನವಿ ಮಾಡಿದ್ದರು. ಇದನ್ನೂ ಓದಿ: ಡಿಎಪಿ ಗೊಬ್ಬರ ಸಬ್ಸಿಡಿ ಪ್ರಮಾಣ ಶೇ.140 ಏರಿಕೆ – ಕೇಂದ್ರದಿಂದ ಐತಿಹಾಸಿಕ ನಿರ್ಧಾರ

    ಪ್ರಹ್ಲಾದ್ ಜೋಶಿ ಮನವಿ ಮೇರೆಗೆ ಸಿಎಂ ಬಿಎಸ್‍ವೈ ತಕ್ಷಣವೇ ಡಿಎಪಿ ಗೊಬ್ಬರದ ಬೆಲೆಯನ್ನ 1413.25 ರೂಪಾಯಿ ಬದಲಿಗೆ 1200 ರೂಪಾಯಿಗೆ ಸಿಗುವಂತೆ ಆದೇಶ ಮಾಡಿದ್ದು, ಹೆಚ್ಚುವರಿ ಹಣವನ್ನು ಸರ್ಕಾರದಿಂದ ಮಾರಾಟ ಮಂಡಳಿಗೆ ಭರಿಸುವಂತೆ ಆದೇಶ ಮಾಡಿದ್ದಾರೆ. ತಮ್ಮ ಮನವಿಗೆ ಸ್ಪಂದಿಸಿ ಡಿಎಪಿ ರಸಗೊಬ್ಬರದ ಬೆಲೆಯನ್ನ ಕಡಿತಗೊಳಿಸಿದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಸಿಎಂ ಬಿಎಸ್ ವೈ ಹಾಗೂ ಕೃಷಿ ಸಚಿವ ಬಿಸಿ ಪಾಟೀಲಗೆ ಅಭಿನಂದನೆ ಸಲ್ಲಿಸಿದ್ದಾರೆ.

  • ವಿವಾಹಕ್ಕೂ ಮುನ್ನ ಕೌನ್ಸಲಿಂಗ್ ಕಡ್ಡಾಯ- ವಿಚ್ಛೇದನ ತಪ್ಪಿಸಲು ಗೋವಾ ಸರ್ಕಾರ ಹೊಸ ಕಾನೂನು

    ವಿವಾಹಕ್ಕೂ ಮುನ್ನ ಕೌನ್ಸಲಿಂಗ್ ಕಡ್ಡಾಯ- ವಿಚ್ಛೇದನ ತಪ್ಪಿಸಲು ಗೋವಾ ಸರ್ಕಾರ ಹೊಸ ಕಾನೂನು

    ಪಣಜಿ: ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗೋವಾ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದ್ದು, ವಿವಾಹಕ್ಕೂ ಮುನ್ನ ಕೌನ್ಸಲಿಂಗ್ ಕಡ್ಡಾಯಗೊಳಿಸಲು ಚಿಂತಿಸಿದೆ.

    ಈ ಕುರಿತು ಗೋವಾ ಕಾನೂನು ಸಚಿವ ನಿಲೇಶ್ ಕ್ಯಾಬ್ರಾಲ್ ಸೋಮವಾರ ಮಾಹಿತಿ ನೀಡಿದ್ದು, ಗೋವಾ ಇನ್‍ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಶನ್ ಆ್ಯಂಡ್ ರೂರಲ್ ಡೆವಲಪ್‍ಮೆಂಟ್(ಜಿಐಪಿಎಆರ್ ಡಿ) ಕೌನ್ಸಲಿಂಗ್ ಕೋರ್ಸ್ ಹಾಗೂ ಇದರ ಸ್ವರೂಪವನ್ನು ಅಂತಿಮಗೊಳಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗದಗ- ಏಪ್ರಿಲ್, ಮೇನಲ್ಲಿ 21 ಬಾಲ್ಯ ವಿವಾಹ ತಡೆದ ಅಧಿಕಾರಿಗಳು

    ರಾಜ್ಯದಲ್ಲಿ ವಿವಾಹಪೂರ್ವ ಕೌನ್ಸಲಿಂಗ್ ಕಡ್ಡಾಯಗೊಳಿಸಲು ಹೊಸ ನೀತಿಯನ್ನು ತರುತ್ತಿದ್ದು, ಧಾರ್ಮಿಕ ಸಂಸ್ಥೆಗಳೂ ಸಹ ಇದರಲ್ಲಿ ಭಾಗವಹಿಸಲಿವೆ. ಗೋವಾದಲ್ಲಿ ಹೆಚ್ಚುತ್ತಿರುವ ವಿಚ್ಛೇದನ ಪ್ರಕರಣಗಳನ್ನು ತಡೆಯಲು ಈ ಕಾನೂನು ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

    ವಿವಾಹವಾಗಿ 6 ತಿಂಗಳಿಂದ 1 ವರ್ಷದ ಅವಧಿಯಲ್ಲಿ ಹೆಚ್ಚು ಜನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ. ಹೀಗಾಗಿ ವಿವಾಹಕ್ಕೂ ಮೊದಲು ಕೌನ್ಸಲಿಂಗ್ ನಡೆಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಈ ಮೂಲಕ ದಾಂಪತ್ಯದ ಕುರಿತು ಅರಿವು ಮೂಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    ಪ್ರತಿ ತಿಂಗಳು ಎಷ್ಟು ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ ಎಂಬ ನಿರ್ದಿಷ್ಟ ಅಂಕಿ ಅಂಶಗಳು ಸದ್ಯ ನಮ್ಮ ಬಳಿ ಇಲ್ಲ. ಆದರೆ ಇತ್ತೀಚೆಗೆ ಈ ಸಂಖ್ಯೆಗಳಲ್ಲಿ ಏರಿಕೆಯಾಗಿದೆ. ಹೀಗಾಗಿ ಕೌನ್ಸಲಿಂಗ್ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

  • ‘ವೈದ್ಯರ ನಡೆ, ಹಳ್ಳಿ ಕಡೆ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಸುಧಾಕರ್ ಹಸಿರು ನಿಶಾನೆ

    ‘ವೈದ್ಯರ ನಡೆ, ಹಳ್ಳಿ ಕಡೆ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಸುಧಾಕರ್ ಹಸಿರು ನಿಶಾನೆ

    ಚಿಕ್ಕಬಳ್ಳಾಪುರ: ಹಳ್ಳಿಯಲ್ಲಿರುವ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ‘ವೈದ್ಯರ ನಡೆ, ಹಳ್ಳಿಯ ಕಡೆ’ ಎಂಬ ಮೊಬೈಲ್ ಕ್ಲಿನಿಕ್ ವಾಹನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

    ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಕೆ ಸುಧಾಕರ್, ಈ ವಿಶೇಷ ವಾಹನದಲ್ಲಿ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ತಂಡ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ಕೊಟ್ಟು ಅಲ್ಲಿನ ಸಾರ್ವಜನಿಕರಿಗೆ ರ್ಯಾಪಿಡ್ ಆಂಟಿಜನ್ ಕೊರೊನಾ ಪರೀಕ್ಷೆ ಮಾಡಲಿದ್ದಾರೆ. ಸೋಂಕು ದೃಢಪಟ್ಟವರಿಗೆ ಸೂಕ್ತ ಚಿಕಿತ್ಸೆ ನೀಡಿ ಅಗತ್ಯವಿರುವರಿಗೆ ಆರೋಗ್ಯ ಕಿಟ್ ಗಳನ್ನು ಸ್ಥಳದಲ್ಲಿಯೇ ವಿತರಿಸುವ ವ್ಯವಸ್ಥೆಯೂ ಸಹ ಇರಲಿದೆ ಎಂದರು. ಇದನ್ನೂ ಓದಿ:ಉಚಿತ ಊಟ ವಿತರಿಸುತ್ತಿರೋ ವೈದ್ಯ ದಂಪತಿ

    ವ್ಯಾಪಕವಾಗಿ ಸೋಂಕು ಹರಡುತ್ತಿರುವುದರಿಂದಾಗಿ ಹಳ್ಳಿಗಳಲ್ಲಿ ಪರೀಕ್ಷೆ ಮಾಡಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸುದು ಅನಿವಾರ್ಯವಾಗಿದೆ. ಇದರಿಂದ ಮತ್ತಷ್ಟು ಸೋಂಕು ಹರಡುವುದನ್ನು ಕೂಡಲೇ ತಪ್ಪಿಸಬಹುದು. ಕೋವಿಡ್ ಸೋಂಕಿನ ಸರಪಳಿಯನ್ನು ತುಂಡರಿಸಲು ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಕೂಲವಾಗಲಿದೆ. ರೋಗ ಲಕ್ಷಣಗಳಿದ್ದು ರ್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಪಕ್ಷದಲ್ಲಿ ಗಂಟಲು ಮತ್ತು ಮೂಗಿನ ದ್ರವ ಸಂಗ್ರಹಿಸಿ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲು ಸಹಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸೌಲಭ್ಯವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ:ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

    ಇದೇ ವೇಳೆ ರಾಜ್ಯದಲ್ಲಿ ಸದ್ಯ ಆಕ್ಸಿಜನ್ ಸಮಸ್ಯೆ ಏನೂ ಇಲ್ಲ. ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವಂತೆ ಐಸಿಯು, ವೆಂಟಿಲೇಟರ್ ಹಾಗೂ ಆಕ್ಸಿಜನ್ ಮೇಲೆ ಬೇಡಿಕೆ ಕಡಿಮೆಯಾಗಿದೆ. ಎಲ್ಲೂ ಕೂಡ ಆಕ್ಸಿಜನ್ ಸಮಸ್ಯೆ ಕಂಡುಬರುತ್ತಿಲ್ಲ ಎಂದರು.

    ನಂತರ ತಾಲೂಕಿನ ಕುಲುಮೇನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಆರ್.ಲತಾ, ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ, ಉಪವಿಭಾಗಾಧಿಕಾರಿಗಳಾದ ಎ.ಎನ್.ರಘುನಂದನ್, ತಹಶೀಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಇಒ ಹರ್ಷವರ್ದನ್, ಪೌರಾಯುಕ್ತ ಲೋಹಿತ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ಜಿಲ್ಲೆಯಾದ್ಯಂತ 650 ಅಲೆಮಾರಿ-ಅರೆ ಅಲೆಮಾರಿ ಜನಾಂಗದವರಿಗೆ ಆಹಾರ ಕಿಟ್

    ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿವಾಸಿಗಳಿಗೆ ಜಿಲ್ಲಾಡಳಿತ ಮತ್ತು ಇಶಾ ಪ್ರತಿಷ್ಠಾನ ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್‍ಗಳನ್ನು ಡಾ.ಕೆ.ಸುಧಾಕರ್ ವಿತರಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ಆಧ್ಯಾತ್ಮ ಚಿಂತಕರಾದ ಇಶಾ ಪ್ರತಿಷ್ಠಾನದ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಅನುಯಾಯಿಗಳಾದ ರಾಘವೇಂದ್ರ ಶಾಸ್ತ್ರಿ ಹಾಗೂ ಪ್ರಭಾಕರ್ ಅವರ ಮೂಲಕ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅಲ್ಲದೇ ಆಸ್ಪತ್ರೆಗಳಿಗೆ ಸಾಂದ್ರಕಗಳು, ಆಕ್ಸಿಜನ್ ಸಿಲಿಂಡರ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವೈದ್ಯರು, ದಾದಿಯರು, ರೋಗಿಗಳಿಗೆ ಉಚಿತವಾಗಿ ಆಹಾರ ಪದಾರ್ಥಗಳು, ಮಾಸ್ಕ್ ಗಳನ್ನು, ಕೋವಿಡ್ ಸುರಕ್ಷತಾ ಸಾಮಗ್ರಿಗಳನ್ನು ಈಗಾಗಲೇ ನೀಡಿದ್ದಾರೆ ಎಂದು ಅವರ ಕಾರ್ಯವನ್ನು ಪ್ರಶಂಸಿದರು. ಇದನ್ನೂ ಓದಿ:ಕೊರೊನಾ ವಾರಿಯರ್ಸ್‍ಗೆ ಚಿಕನ್ ಬಿರಿಯಾನಿ ವಿತರಿಸಿದ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ

    ಜಿಲ್ಲೆಗೆ ಈಗಾಗಲೇ 100 ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿದ್ದು, ಇನ್ನೂ 100 ಸಿಲಿಂಡರ್ ಗಳನ್ನು ನೀಡಲು ಒಪ್ಪಿಗೆ ನೀಡಿದ್ದಾರೆ. ಇದೀಗ ಜಿಲ್ಲೆಯಾದ್ಯಂತ 650 ಅಲೆಮಾರಿ-ಅರೆ ಅಲೆಮಾರಿ ಜನಾಂಗದವರು, ಅಶಕ್ತರು, ಬಲಹೀನ ವರ್ಗದವರಿಗೆ ಆಹಾರ ಸಾಮಾಗ್ರಿಗಳು, ರೋಗಿಗಳಿಗೆ ಹಾಲು, ಬಿಸ್ಕೇಟ್, ಔಷಧಿಗಳನ್ನು ನೀಡುತ್ತಿದ್ದಾರೆ. ಇವತ್ತಿನ ಕಷ್ಟಕಾಲದಲ್ಲಿ ಇದು ಅತ್ಯಂತ ಪುಣ್ಯದ ಕೆಲಸವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.