Tag: government

  • 30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ: ಎಸ್.ಟಿ.ಸೋಮಶೇಖರ್

    30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ: ಎಸ್.ಟಿ.ಸೋಮಶೇಖರ್

    – ರೈತರಿಗೆ ನೂರಕ್ಕೆ ನೂರು ಸಾಲ ಸಿಗಲು ಕ್ರಮ
    – ಡಿಸಿಸಿ ಬ್ಯಾಂಕ್‍ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಸಹಕಾರ

    ಬೆಂಗಳೂರು: ಕಳೆದ ಸಾಲಿನಲ್ಲಿ ಶೇ. 114.70 ರೈತರಿಗೆ ಬೆಳೆಸಾಲ ನೀಡಿಕೆ ಮೂಲಕ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಪ್ರಸಕ್ತ ಸಾಲಿನ ಅಂದರೆ, 2021-22ರಲ್ಲಿ 30 ಲಕ್ಷ ರೈತರಿಗೆ 20810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು. 

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಯಾವುದೇ ಕಾರಣಕ್ಕೂ ನಮ್ಮ ರೈತಾಪಿ ವರ್ಗದವರಿಗೆ ತೊಂದರೆಯಾಗಬಾರದು. ಹೀಗಾಗಿ 30 ಲಕ್ಷ ರೈತರಿಗೆ ಹೆಚ್ಚಿನ ಸಾಲ ತಲುಪುವಂತಾಗಬೇಕು ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯನ್ವಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಕಳೆದ ಆರ್ಥಿಕ ವರ್ಷವಾದ 2020-21ರಲ್ಲಿ 24.50 ಲಕ್ಷ ರೈತರಿಗೆ 15400 ಕೋಟಿ ರೂಪಾಯಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಿಕೆಯ ಗುರಿಯನ್ನು ಹೊಂದಲಾಗಿತ್ತು. ನಮ್ಮ ಅಪೆಕ್ಸ್ ಬ್ಯಾಂಕ್ ಹಾಗೂ 21 ಡಿಸಿಸಿ ಬ್ಯಾಂಕ್ ಗಳು 25,93,982 ರೈತರಿಗೆ 17490 ಕೋಟಿ ರೂಪಾಯಿ ಸಾಲವನ್ನು ನೀಡಿವೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಶೇಕಡಾ 100 ಗುರಿ ಮೀರಿ ಶೇ. 114.70 ಸಾಧನೆಯನ್ನು ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಈ ಸಾಲಿನಲ್ಲಿಯೂ ಇದೇ ರೀತಿಯ ಸಾಧನೆಯನ್ನು ಮಾಡುವ ಬಗ್ಗೆ ಎಂದು ಸಚಿವರಾದ ಸೋಮಶೇಖರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.  ಇದನ್ನೂ ಓದಿ: ಕೋವಿಡ್ ಹೆರಿಗೆ ಆಸ್ಪತ್ರೆಯನ್ನು ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್

    ಲಾಕ್‍ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‍ಗಳಿಗೆ ಭೇಟಿ: 21 ಡಿಸಿಸಿ ಬ್ಯಾಂಕ್‍ಗಳಿಗೆ ಈಗಾಗಲೇ ಸೂಚನೆಯನ್ನು ನೀಡಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 30 ಲಕ್ಷ ರೈತರನ್ನೂ ತಲುಪಬೇಕು, 20810 ಕೋಟಿ ರೂ. ಬೆಳೆ ಸಾಲವನ್ನು ನೀಡಬೇಕು ಎಂದು ಸೂಚಿಸಿದ್ದೇನೆ. ಲಾಕ್‍ಡೌನ್ ಮುಗಿದ ಬಳಿಕ ಡಿಸಿಸಿ ಬ್ಯಾಂಕ್‍ಗಳಿಗೆ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ, ಸಲಹೆ-ಸೂಚನೆಗಳನ್ನು ನೀಡಲಿದ್ದೇನೆ. ಕಳೆದ ಬಾರಿ 5-6 ಡಿಸಿಸಿ ಬ್ಯಾಂಕ್ ಗಳು ಶೇ. 100 ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈ ವೇಳೆ ಅವರಿಗೂ ಸಹ ಗುರಿ ಮುಟ್ಟಲೇಬೇಕು ಎಂದು ಸೂಚನೆಯನ್ನು ನೀಡಿದ್ದಾಗಿ ಸಚಿವರಾದ ಸೋಮಶೇಖರ್ ತಿಳಿಸಿದರು.

    ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು: ಡಿಸಿಸಿ ಬ್ಯಾಂಕ್ ಗಳು ತಮಗೆ ನೀಡಿರುವ ಗುರಿಯನ್ನು ತಲುಪಲೇಬೇಕು. ಯಾವುದೇ ಕಾರಣಕ್ಕೂ ಇದರಿಂದ ತಪ್ಪಿಸಿಕೊಳ್ಳಬಾರದು. ರೈತರಿಗೆ ನೂರಕ್ಕೆ ನೂರು ಸಾಲ ಸಿಗಬೇಕು. 21 ಡಿಸಿಸಿ ಬ್ಯಾಂಕ್ ಗಳ ಪ್ರಗತಿ ಪರಿಶೀಲನೆಯನ್ನೂ ಮಾಡಲಿದ್ದು, 30 ಲಕ್ಷ ರೈತರಿಗೆ 20810 ಕೋಟಿ ರೂಪಾಯಿ ಬೆಳೆ ಸಾಲ ದೊರೆಯುವಂತೆ ನೋಡಿಕೊಳ್ಳಲಾಗುವುದು. ಇದನ್ನೂ ಓದಿ:  ಜೂನ್ 7ರ ನಂತರ ಲಾಕ್ ಡೌನ್ ಬೇಡ: ಎಸ್.ಟಿ.ಸೋಮಶೇರ್

    ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಸಹಕಾರ: ಕಳೆದ ಬಾರಿ ಏನು ಗುರಿ ಇತ್ತು ಎಷ್ಟು ಸಾಧನೆ ಮಾಡಲಾಗಿದೆ ಈ ಬಾರಿ ಎಷ್ಟು ಗುರಿಯನ್ನು ನೀಡಬಹುದು ಎಂಬುದನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಹಾಗೂ ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ ಅವರು ಖುದ್ದು ಎಲ್ಲ ಡಿಸಿಸಿ ಬ್ಯಾಂಕ್‍ಗಳ ಜೊತೆಗೆ ಚರ್ಚಿಸಿ ಗುರಿಯನ್ನು ನಿಗದಿಪಡಿಸಿದ್ದಾರೆ. ಅಲ್ಲದೆ, ಶೇ. 100 ಗುರಿ ಸಾಧನೆ ಮಾಡಿದ ಡಿಸಿಸಿ ಬ್ಯಾಂಕ್ ಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇವೆ. ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ನಿಂದ ಆಗಬೇಕಾದ ಎಲ್ಲ ಸೌಲಭ್ಯಗಳನ್ನು ಮಾಡಿಕೊಡಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್ ಅವರ ಸಮ್ಮುಖದಲ್ಲಿ ತಿಳಿಸಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು. ಇದನ್ನೂ ಓದಿ: ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ : ಶೆಟ್ಟರ್

    ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ಶಾಸಕರಾದ ಬೆಳ್ಳಿ ಪ್ರಕಾಶ್, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಸಹಕಾರ ಸಂಘಗಳ ನಿಬಂಧಕರಾದ ಜಿಯಾವುಲ್ಲ, ಎಲ್ಲ ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ದೆಹಲಿ, ಕೇರಳದಲ್ಲಿ ಲಾಕ್‍ಡೌನ್ ವಿಸ್ತರಣೆ

    ದೆಹಲಿ, ಕೇರಳದಲ್ಲಿ ಲಾಕ್‍ಡೌನ್ ವಿಸ್ತರಣೆ

    ನವದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊರೊನಾ ವೈರಸ್ ಕಫ್ರ್ಯೂವನ್ನು ವಿಸ್ತರಿಸಿದ್ದು, ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಅನಾವಶ್ಯಕ ಓಡಾಟವನ್ನು ಜೂನ್ 7ರ ಬೆಳಗ್ಗೆ 5 ಗಂಟೆಯವರೆಗೂ ನಿಷೇಧಿಸಲಾಗಿದೆ.

    ಕೈಗಾರಿಕಾ ಪ್ರದೇಶಗಳ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ನಡೆಸಲು ಮತ್ತು ನಿರ್ಮಾಣ ಕೆಲಸ ಮಾಡಲು ಕಫ್ರ್ಯೂ ವೇಳೆ ಅನುಮತಿ ನೀಡಲಾಗಿದೆ ಎಂದು ಡಿಡಿಎಂಎ ಆದೇಶದಲ್ಲಿ ತಿಳಿಸಲಾಗಿದೆ.

    ಕೊರೊನಾ ವೈರಸ್ ಸಾಂಕ್ರಮಿಕ ರೋಗವನ್ನು ನಿಯಂತ್ರಿಸಲು ಕೇರಳ ಸರ್ಕಾರ ಕೂಡ ಜೂನ್ 9ರವರೆಗೆ ರಾಜ್ಯವ್ಯಾಪಿ ಲಾಕ್‍ಡೌನ್‍ನನ್ನು ಒಂದು ವಾರ ವಿಸ್ತರಿಸಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಸೇವೆಗಳು ಸ್ಥಗಿತವಾಗಲಿದೆ.

    ಈ ಕುರಿತಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ರವರು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಕ್ಷೀಣಿಸುತ್ತಿದ್ದರೂ, ನಿರ್ಬಧಗಳನ್ನು ತೆಗೆದುಹಾಕುವ ಹಂತಕ್ಕೆ ನಾವಿನ್ನು ತಲುಪಿಲ್ಲ. ಮೇ 31ರಿಂದ ಜೂನ್ 9ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ:ಅಮೇಥಿಗೆ 10,000 ಮೆಡಿಕಲ್ ಕಿಟ್ ಕಳುಹಿಸಿಕೊಟ್ಟ ರಾಹುಲ್ ಗಾಂಧಿ

  • ಆಕ್ಸಿಜನ್ ಪ್ಲಾಂಟ್‍ಗಳನ್ನು ಪ್ರಾರಂಭ ಮಾಡಲು ಟೆಂಡರ್ ಕರೆಯಲು ಸೂಚನೆ ಕೊಟ್ಟಿದ್ದೇನೆ: ಸಚಿವ ಗೋಪಾಲಯ್ಯ

    ಆಕ್ಸಿಜನ್ ಪ್ಲಾಂಟ್‍ಗಳನ್ನು ಪ್ರಾರಂಭ ಮಾಡಲು ಟೆಂಡರ್ ಕರೆಯಲು ಸೂಚನೆ ಕೊಟ್ಟಿದ್ದೇನೆ: ಸಚಿವ ಗೋಪಾಲಯ್ಯ

    ಹಾಸನ: ಇಂದು ನಡೆದ ಸಭೆಯಲ್ಲಿ ಶಾಸಕರು ಸಿಎಂ ಜೊತೆ ಮಾತನಾಡಿದ್ದಾರೆ. ಇದುವರೆಗೂ ಶಾಸಕ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ ಉಳಿದ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

    ಸಿಎಂ ಜೊತೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರತೆಯಿರುವ ವೈದ್ಯರನ್ನು ನೇಮಿಸಿದೆ. ಖಾಲಿಯಿದ್ದ ಒಟ್ಟು 63 ವೈದ್ಯರನ್ನು ಸರ್ಕಾರ ಭರ್ತಿ ಮಾಡಿದೆ. ಎಲ್ಲಾ ತಾಲ್ಲೂಕುಗಳಲ್ಲೂ ಆಕ್ಸಿಜನ್ ಪ್ಲಾಂಟ್‍ಗಳನ್ನು ಪ್ರಾರಂಭ ಮಾಡಲು ಟೆಂಡರ್ ಕರೆಯಲು ಸೂಚನೆ ಕೊಟ್ಟಿದ್ದೇನೆ ಎಂದರು.

    ಲಾಕ್‍ಡೌನ್ ವಿಸ್ತರಣೆ ಬಗ್ಗೆ ಇನ್ನೊಂದು ದಿನ ಸಭೆ ಸೇರಿ ನಿರ್ಧಾರ ಮಾಡುತ್ತೇವೆ. ಸರ್ಕಾರ ಜಿಲ್ಲಾಧಿಕಾರಿಗೆ ಸಂಪೂರ್ಣ ಅಧಿಕಾರ ನೀಡಿದೆ. ಜೂ.30 ರವರೆಗೆ ಲಾಕ್‍ಡೌನ್ ಮಾಡುವ ಬಗ್ಗೆ ಕೇಂದ್ರ ಸೂಚನೆ ಕೊಟ್ಟರೆ ನಾವು ಅದನ್ನು ಪಾಲೀಸಬೇಕು. ಜಿಲ್ಲೆಯ ಎಲ್ಲಾ ಶಾಸಕರು ಕುಳಿತು ಚರ್ಚಿಸಿ ಲಾಕ್‍ಡೌನ್ ಮಾಡಬೇಕೋ ಬೇಡವೋ ಎಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ.

    ಇನ್ನೊಂದು ವಾರದಲ್ಲಿ ಕೊರೊನಾ ಅಲೆ ಕಡಿಮೆಯಾಗಲಿದೆ. ಈ ಸಭೆಯಿಂದ ಏನೂ ಪ್ರಯೋಜನವಿಲ್ಲ ಎಂಬ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿಗಳೇ ರೇವಣ್ಣ ಅವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಆಗಿದೆ ಎಂದರು. ಇದನ್ನೂ ಓದಿ: ಜೂನ್ 7ರ ನಂತರ ಲಾಕ್ ಡೌನ್ ಬೇಡ: ಎಸ್ ಟಿ ಸೋಮಶೇಖರ್

    ಈಗಾಗಲೇ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ಜೂನ್ 7ರ ನಂತರ ಲಾಕ್‍ಡೌನ್ ಬೇಡ. ಎರಡು ತಿಂಗಳಿಂದ ಲಾಕ್ ಡೌನ್ ಆಗಿರುದುದರಿಂದ ದಿನ ಕೂಲಿ ಮಾಡಿ ಜೀವನ ಮಾಡುವವರ ಜೀವನ ಈಗಲೇ ಕಷ್ಟವಾಗಿದೆ. ಮತ್ತೆ ಲಾಕ್ ಡೌನ್ ಮುಂದುವರೆಸಿದರೆ ಕಷ್ಟವಾಗುತ್ತೆ. ಸಿಎಂ ಅಭಿಪ್ರಾಯ ಕೇಳಿದರೆ ಇದೆ ಅಭಿಪ್ರಾಯವನ್ನು ತಿಳಿಸುತ್ತೇನೆ. ಈಗಾಗಲೇ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆ. ಇದರಿಂದ ಲಾಕ್‍ಡೌನ್ ಮುಂದುವರೆಸುವುದು ಬೇಡ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

  • ಕೊರೊನಾ ಲಾಕ್ ಡೌನ್ ಸಂಕಷ್ಟ- ಕೋಟ್ಯಂತರ ರೂ. ನಷ್ಟದಲ್ಲಿರುವ ಭತ್ತ ಬೆಳೆದ ರೈತರು

    ಕೊರೊನಾ ಲಾಕ್ ಡೌನ್ ಸಂಕಷ್ಟ- ಕೋಟ್ಯಂತರ ರೂ. ನಷ್ಟದಲ್ಲಿರುವ ಭತ್ತ ಬೆಳೆದ ರೈತರು

    ರಾಯಚೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದು ಜಿಲ್ಲೆಯ ರೈತರನ್ನು ಕಂಗೆಡಿಸಿದೆ. ಅದರಲ್ಲೂ ಭತ್ತ ಬೆಳೆದ ರೈತರು ಕೋಟ್ಯಂತರ ರೂಪಾಯಿ ನಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಕೈಹಿಡಿಯಬೇಕಾದ ಸರ್ಕಾರ ನಾನಾ ನಿಯಮಗಳ ಹೆಸರಲ್ಲಿ ಕೈಚೆಲ್ಲಿದೆ.

    ಕೃಷ್ಣಾ, ತುಂಗಭದ್ರೆಯನ್ನು ನಂಬಿ ಭತ್ತ ಬೆಳೆಯುವ ಜಿಲ್ಲೆಯ ಸಾವಿರಾರು ರೈತರ ಹಣೆಬರಹ ಈ ವರ್ಷವೂ ಚೆನ್ನಾಗಿಲ್ಲ. ಕಳೆದ ವರ್ಷ ಅತಿಯಾದ ಮಳೆ, ಚಂಡಮಾರುತ, ಪ್ರವಾಹದಿಂದ ಬೆಳೆ ಕೈಕೊಟ್ಟಿತ್ತು. ಈ ವರ್ಷ ಉತ್ತಮ ಬೆಳೆ ಕೈಗೆ ಬಂದಿದ್ದರು ಖರೀದಿಯಾಗದೆ ಜಮೀನಿನಲ್ಲೆ ಸಂಗ್ರಹಿಸಿಟ್ಟ ಭತ್ತ ಒಂದು ಅಡಿಯಷ್ಟು ಮೊಳಕೆಯೊಡೆದು ರೈತರನ್ನು ಸಂಕಷ್ಟಕ್ಕೆ ದೂಡಿದೆ. ಒಂದೆಡೆ ಕೊರೊನಾ ಹಿನ್ನೆಲೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರ ಸ್ಥಗಿತವಾಗಿದೆ. ಇನ್ನೊಂದೆಡೆ ಚಂಡಮಾರುತದ ಪ್ರಭಾವದಿಂದ ಆಗಾಗ ಮಳೆ ಸುರಿಯುತ್ತಿದ್ದು ಭತ್ತ ಹಾಳಾಗುತ್ತಿದೆ. ರೈಸ್ ಮಿಲ್‍ಗಳು ಸಹ ಖರೀದಿಯನ್ನು ಮುಂದುವೆರಿಸಿಲ್ಲ. ಕನಿಷ್ಠ ಬೆಂಬಲ ಬೆಲೆಯು ಭತ್ತ ಖರೀದಿ ಕೇಂದ್ರದಿಂದ ಸಿಗುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.ಇದನ್ನೂ ಓದಿ. ರಾಯಚೂರಿನ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ- ಆರೈಕೆ ಕೇಂದ್ರಕ್ಕೆ ಬರಲೊಪ್ಪದ ಜನ

    ಮೇ 1 ರಿಂದ 5 ರ ವರೆಗೆ ಮಾತ್ರ ಭತ್ತ ಖರೀದಿ ಕೇಂದ್ರದಲ್ಲಿ ನೋಂದಣಿ ಅವಕಾಶ ನೀಡಲಾಗಿತ್ತು, ನೋಂದಣಿಯಾಗಿರುವ ಸುಮಾರು 250 ರೈತರ ಭತ್ತವನ್ನು ಸಮರ್ಪಕವಾಗಿ ಖರೀದಿ ಮಾಡುತ್ತಿಲ್ಲ. ಭತ್ತವನ್ನು ತಿಕ್ಕಿ ನೋಡುತ್ತಾರೆ ನುಚ್ಚಾದರೆ ಖರೀದಿಸುತ್ತಿಲ್ಲ. ಹೊರಗಡೆ ಮೊದಲು ಕ್ವಿಂಟಾಲ್‍ಗೆ 1200 ರೂಪಾಯಿ ಇತ್ತು. ಈಗ 1000 ರೂಪಾಯಿಗೂ ಕೇಳುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

    ಆದರೆ ಅಧಿಕಾರಿಗಳು ಮಾತ್ರ ಭತ್ತ ಖರೀದಿ ಕೇಂದ್ರಕ್ಕೆ ಹೆಸರು ನೋಂದಾಯಿಸಲು ರೈತರೇ ಮುಂದೆ ಬರುತ್ತಿಲ್ಲ, ನೋಂದಣಿಯಾದ 750 ಜನರ ಭತ್ತ ಪರಿಶೀಲಿಸಿ ಖರೀದಿಸುತ್ತೇವೆ ಎನ್ನುತ್ತಿದ್ದಾರೆ. ಕ್ವಿಂಟಾಲ್ ಗೆ 1868 ರೂ ಹಾಗೂ 1888 ರೂ. ಬೆಂಬಲ ಬೆಲೆ ಘೋಷಿಸಿರುವ ಸರ್ಕಾರ ಶೇ.15 ತೇವಾಂಶವಿರುವ ಭತ್ತ ಖರೀದಿಸದಂತೆ ಸೂಚಿಸಿದೆ. ಆದರೆ ಬಹುತೇಕ ರೈತರ ಭತ್ತ ಮಳೆಗೆ ಒದ್ದೆಯಾಗಿ ಮೊಳಕೆ ಬಂದಿದೆ. ಇನ್ನೂ ಮೇ 30 ಕ್ಕೆ ಭತ್ತ ಖರೀದಿಯೂ ಮುಗಿದು ಹೋಗುತ್ತದೆ. ಹೀಗಾಗಿ ಭತ್ತ ಬೆಳೆದ ರೈತರು ಸಂಪೂರ್ಣ ನಷ್ಟದ ಹಾದಿಯಲ್ಲಿದ್ದಾರೆ. ಅಧಿಕಾರಿಗಳು ಮಾತ್ರ ಸರ್ಕಾರದ ನಿರ್ದೇಶನ ಪಾಲಿಸುತ್ತೇವೆ ಎನ್ನುತ್ತಿದ್ದಾರೆ.

    ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ಜಿಲ್ಲೆಯ ರೈತರು ಸಂಪೂರ್ಣ ನಷ್ಟದಲ್ಲಿದ್ದಾರೆ. ಎಕರೆಗೆ ಖರ್ಚು ಮಾಡಿದ ಹಣದಲ್ಲಿ ಅರ್ಧದಷ್ಟಾದರೂ ಮರಳಿ ಬಂದರೆ ಸಾಕು ಎನ್ನುವಂತ ಸುಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತು ಭತ್ತ ಬೆಳೆದ ರೈತರ ಸಂಕಷ್ಟದ ಪರಿಸ್ಥಿತಿಗೆ ಸ್ಪಂದಿಸಬೇಕಾಗಿದೆ.

  • ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಬಿಎಸ್‍ವೈ ಬಿಟ್ಟರೆ ಬಿಜೆಪಿಯಲ್ಲಿ ಸ್ಟಾರ್ ಲೀಡರ್ ಯಾರಿದ್ದಾರೆ : ಎಂ.ಪಿ. ಕುಮಾರಸ್ವಾಮಿ

    ಚಿಕ್ಕಮಗಳೂರು: ಬಿಜೆಪಿ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪನವರನ್ನ ಬಿಟ್ಟು ಬೇರೆ ಯಾರು ಸ್ಟಾರ್ ಲೀಡರ್ ಇದ್ದಾರೆ ತೋರಿಸಲಿ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಎಸ್‍ವೈ ಪರ ಬ್ಯಾಟ್ ಬೀಸಿದ್ದಾರೆ.

    ನಾಯಕತ್ವ ಬದಲಾವಣೆ ಕುರಿತಂತೆ ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಅವರಿಂದ ಅಧಿಕಾರ ಹಾಗೂ ಬೋರ್ಡ್ ಪಡೆದವರು ಮಾತನಾಡಬೇಕು. ಯಾಕೆ ಮಾತನಾಡುತ್ತಿಲ್ಲ ಗೊತ್ತಿಲ್ಲ ಎಂದರು. ನಾಯಕತ್ವ ಬದಲಾವಣೆ ಚರ್ಚೆ ಈಗ ಅಪ್ರಸ್ತುತ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ ಎಂದಿದ್ದಾರೆ.

    ನಾನು ಕೇಂದ್ರಕ್ಕೆ ನಿಯೋಗ ಹೋಗಲು ರೆಡಿ ಇದ್ದೇನೆ. ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ. ಪಕ್ಷದ ವರಿಷ್ಠರಿಗೆ ಯಡಿಯೂರಪ್ಪನವರನ್ನೇ ಮುಂದುವರೆಸಲು ಮನವಿ ಮಾಡುತ್ತೇವೆ. ನಾಯಕತ್ವ ಬದಲಾವಣೆ ದೊಡ್ಡ ವಿಚಾರವಲ್ಲ. ಆದರೆ ತೋರಿಸಲು ಬೇರೆ ಸ್ಟಾರ್ ಲೀಡರ್ ಯಾರಿದ್ದಾರೆ ಹೇಳಿದರು.

    ರಾಜ್ಯದಲ್ಲಿ ಕೊರೊನಾ ಹತೋಟಿಗೆ ಬರಲು ಯಡಿಯೂರಪ್ಪನವರೇ ಕಾರಣ. ಹಗಲಿರುಳು ಕಷ್ಟಪಡುತ್ತಿದ್ದಾರೆ ಈಗ ನಾಯಕತ್ವ ಬದಲಾವಣೆ ಬೇಕಾ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದಲ್ಲಿ ಎರಡನೇ ಬಾರಿ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಕಾರಣ. ಅವರ ನಾಯಕತ್ವ ಬದಲಾವಣೆಗೆ ನಮ್ಮ ವಿರೋಧವಿದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಹಾವೇರಿಯ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ: ಬೊಮ್ಮಾಯಿ

    ಹಾವೇರಿಯ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ: ಬೊಮ್ಮಾಯಿ

    -15 ಕೋಟಿ ರೂಪಾಯಿ ಅನುದಾನ, ಪಿಪಿಪಿ ಮಾದರಿಯಲ್ಲಿ ಅನುಷ್ಠಾನ

    ಬೆಂಗಳೂರು : ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀಟರ್ ಸಾಮಥ್ರ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕವನ್ನು 90 ಕೋಟಿ ರೂಪಾಯಿ ವೆಚ್ಚದಲ್ಲಿ (ಪಿಪಿಪಿ) ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರ ಬಹುದಿನಗಳ ಈ ಬೇಡಿಕೆಗೆ ಅನುಮೋದನೆ ದೊರೆಯಿತು ಎಂದು ತಿಳಿಸಿದರು.

    ಧಾರವಾಡ ಹಾಲು ಒಕ್ಕೂಟ ಮಹಾಮಂಡಳಿ ವ್ಯಾಪ್ತಿಯಲ್ಲಿ ನಾಲ್ಕು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳಲ್ಲಿ ಒಟ್ಟು 45,000 ಹಾಲು ಉತ್ಪಾದಕ ಸದಸ್ಯರಿದ್ದಾರೆ. ಆದರೆ ಹಾವೇರಿ ಜಿಲ್ಲೆಯಲ್ಲಿ 22,000 ಹಾಲು ಉತ್ಪಾದಕರಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ದಿನ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.

    ಮುಂದಿನ ಐದು ವರ್ಷಗಳಲ್ಲಿ ಹಾಲು ಉತ್ಪಾದನೆ ಪ್ರಮಾಣ ಶೇ.20ರಷ್ಟು ವೃದ್ಧಿಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮಥ್ರ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕದ ಯೋಜನೆ ಸಿದ್ಧಪಡಿಸಲಾಗಿತ್ತು. ಈ ಮಹತ್ವಾಕಾಂಕ್ಷಿ ಯೋಜನೆಗೆ ಸಚಿವರಿಂದ ಇಂದು ಅನುಮತಿ ದೊರೆತಿದೆ ಎಂದು ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.

    ಹಾಲು ಸಂಸ್ಕರಣೆ ಹಾಗೂ ಪ್ಯಾಕಿಂಗ್ ಘಟಕ ಸ್ಥಾಪನೆ ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಆಗಿತ್ತು. ಜಿಲ್ಲೆಯಲ್ಲಿ ಕ್ಷೀರ ಕ್ರಾಂತಿಗೆ ಈ ಯೋಜನೆ ಸಹಕಾರಿಯಾಗಲಿದೆ. ಪಿಪಿಪಿ ಮಾದರಿಯ ಈ ಯೋಜನೆಗೆ ಸರ್ಕಾರದ ವತಿಯಿಂದ 15 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಹೇಳಿದರು.

  •  PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು

     PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು

    ನವದೆಹಲಿ: ಪಿಎಂ ಕೇರ್ಸ್‍ಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ ವ್ಯಕ್ತಿಯ ತಾಯಿಗೆ ಇಂದು ಬೆಡ್ ಸಿಗದೆ ಸಾವನ್ನಪ್ಪಿರುವ ಕರುಣಾಜನಕ ಘಟನೆ ಅಹಮದಾಬಾದ್‍ನಲ್ಲಿ ನಡೆದಿದೆ.

    ಅಹ್ಮದಾಬಾದ್‍ನ ವಿಜಯ್ ಪರಿಕ್ ಪಿಎಂ ಕೇರ್ಸ್‍ಗೆ 2.51 ಲಕ್ಷ ದೇಣಿಗೆ ನೀಡಿದ್ದೇನೆ. ಆದರೂ, ಸಾಯುತ್ತಿರುವ ನನ್ನ ತಾಯಿಗೆ ಆಕ್ಸಿಜನ್ ಬೆಡ್ ದೊರಕಲಿಲ್ಲ. ಮುಂದೆ ಬರುತ್ತಿರುವ 3ನೇ ಕೊರೊನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಇನ್ನೆಷ್ಟು ಹಣವನ್ನು ದೇಣಿಗೆಯಾಗಿ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ ಎಂದು ವ್ಯಕ್ತಿ ನೊಂದು ಹೇಳಿಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಪಿಎಂ ಕೇರ್ಸ್‍ಗೆ 2.51 ಲಕ್ಷ ದೇಣಿಗೆ ನೀಡಿದ್ದೇನೆ. ಆದರೂ, ಸಾಯುತ್ತಿರುವ ನನ್ನ ತಾಯಿಗೆ ಆಕ್ಸಿಜನ್ ಬೆಡ್ ದೊರಕಲಿಲ್ಲ. ಇನ್ನು ಮುಂದೆ ಬರುತ್ತಿರುವ 3ನೇ ಕೊರೋನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಎಷ್ಟು ಹೆಚ್ಚುವರಿ ಹಣವನ್ನು ದೇಣಿಗೆಯಾಗಿ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ, ಈ ಸೋಂಕಿನಿಂದ ನಾನು ಮತ್ತಷ್ಟು ಕುಟುಂಬ ಸದಸ್ಯರನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ತನ್ನ ನೋವನ್ನು ದಾಖಲಿಸಿದ್ದಾರೆ. ಈಗಾಗಲೇ ಆತನ ತಾಯಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಟ್ವೀಟ್ ಸಹ ಇದೀಗ ಭಾರೀ ವೈರಲ್ ಆಗುತ್ತಿದೆ.

    ಟ್ವೀಟ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್‍ನಾಥ್ ಸಿಂಗ್, ಸ್ಮೃತಿ ಇರಾನಿ, ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

  • ಕುಟುಂಬ ಸಮೇತ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

    ಕುಟುಂಬ ಸಮೇತ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

    ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ಇಂದು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

    ಶ್ರೀಕ್ಷೇತ್ರ ಧರ್ಮಸ್ಥಳದ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್ ಮೂಲಕ ಡಿಕೆಶಿ, ಪತ್ನಿ, ಮಗಳು, ಅಳಿಯ ಸೇರಿದಂತೆ ಕುಟುಂಬ ಸಮೇತರಾಗಿ ಬಂದಿಳಿದರು. ಇದೊಂದು ಖಾಸಗಿ ಕಾರ್ಯಕ್ರಮ, ಧರ್ಮಸ್ಥಳದ ವೈದ್ಯರನ್ನು ಭೇಟಿಯಾಗಲು ಬಂದಿರುವುದಾಗಿ ತಿಳಿಸಿದರು.

    ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್‌ರವರು, ಬ್ಲ್ಯಾಕ್ ಫಂಗಸ್ ಬಗ್ಗೆ ಮಂತ್ರಿಗಳಲ್ಲೇ ಗೊಂದಲ ಇದೆ. ಒಬ್ಬರು ಇದೆ ಅಂತಾರೆ, ಮತ್ತೊಬ್ಬರು ಇಲ್ಲ ಅಂತಾ ಹೇಳುತ್ತಾರೆ. ಫಂಗಸ್‍ಗೆ ಔಷಧಗಳು ಇಲ್ಲ ಅಂತಾ ಮಾಧ್ಯಮಗಳು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಗುಜರಾತಿಗೆ ಔಷಧ ಕಳಿಸಿಕೊಟ್ಟಿದೆ. ಹಾಗಾಗಿ ನಮ್ಮ ರಾಜ್ಯ ಸರ್ಕಾರ ಗುಜರಾತಿನಿಂದಾದರೂ ಔಷಧ ತರಬೇಕಾಗಿದೆ. ಈಗಾಗಲೇ ಭಯಗೊಂಡಿರುವ ಜನರನ್ನು ರಾಜ್ಯ ಸರ್ಕಾರ ಗೊಂದಲಕ್ಕೀಡು ಮಾಡುವ ಕೆಲಸ ಮಾಡುತ್ತಿದೆ ಎಂದರು.

    ಈ ಸಂದರ್ಭ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಜೊತೆಗಿದ್ದರು.

  • ಭೂಮಿ ಮೇಲೆ ಕೊರೊನಾ ಇದೆ – ವಿಶೇಷ ವಿಮಾನದಲ್ಲಿ ಮದುವೆ

    ಭೂಮಿ ಮೇಲೆ ಕೊರೊನಾ ಇದೆ – ವಿಶೇಷ ವಿಮಾನದಲ್ಲಿ ಮದುವೆ

    ಚೆನ್ನೈ: ಭೂಮಿ ಮೇಲೆ ಕೊರೊನಾ ಇದೆ. ಭೂಮಿ ಸಹವಾಸವೇ ಬೇಡ ಎಂದು ಆಕಾಶದಲ್ಲಿ ಮದುವೆಯಾಗುವ ಮೂಲಕವಾಗಿ ನವದಂಪತಿ ಸುದ್ದಿಯಾಗಿದ್ದಾರೆ.

    ಮಧುರೈ ನಿವಾಸಿಗಳಾದ ರಾಕೇಶ್, ಧೀಕ್ಷಣಾ ಜೋಡಿ ತಮ್ಮ ಮದುವೆಗಾಗಿ ವಿಶೇಷ ವಿಮಾನವೊಂದನ್ನು ಬುಕ್ ಮಾಡಿದ್ದರು. 2 ಗಂಟೆಗಳ ಕಾಲ ಬಾಡಿಗೆ ತೆಗೆದುಕೊಂಡು ಆಕಾಶದಲ್ಲಿ ಮದುವೆಯಾಗಿದ್ದು, ಹೆಚ್ಚು ಜನರನ್ನು ಸೇರಿಸುವ ಮೂಲಕವಾಗಿ ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ.

    130 ಮಂದಿ ಸಂಬಂಧಿಕರನ್ನು ಸೇರಿಸಿ ಮದುವೆಯಾಗಿದ್ದಾರೆ. ಮದುವೆಗೆ ಆಪ್ತ ಸ್ನೇಹಿತರು ಮತ್ತು ಸಂಬಂಧಿಕರು ಹಾಜಾರಾಗಿದ್ದರು ಎಂದು ಹೇಳಲಾಗುತ್ತಿದೆ. ವಿಮಾನ ಮಧುರೈ ನಿಂದ ತೂತುಕುಡಿಗೆ ಸಂಚರಿಸುವ ಸಂದರ್ಭದಲ್ಲಿ ನಡೆದಿದೆ. ವಿವಾಹದ ಫೋಟೋ, ವೀಡಿಯೋಗಳು ಭಾರೀ ವೈರಲ್ ಆಗುತ್ತಿವೆ.

    ಭೂಮಿ ಮೇಲೆ ಕೊರೊನಾ ಇದೆ, ಕೊರೊನಾ ನಿಮಗಳು ಇವೆ. ಅದಕ್ಕೇ ಭೂಮಿಯ ಸಹವಾಸವೇ ಬೇಡ ಎಂದು ಆಕಾಶದಲ್ಲಿ ಮದುವೆಯಾಗಿದ್ದಾರೆ. ಮದುವೆಗೆ 130 ಮಂದಿ ಆಗಮಿಸಿದ್ದು, ಕೊರೊನಾ ನಿಯಮದ ಪ್ರಕಾರ 130 ಮಂದಿ ಸೇರುವ ಹಾಗಿಲ್ಲ. ಮದುವೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಸಂಬಂಧಿಕರಿಗೂ RTPCR ಟೆಸ್ಟ್ ಮಾಡಿಸಲಾಗಿತ್ತು ಎಂದು ತಿಳಿದುಬಂದಿದೆ.

    ಕೊರೊನ ಇರುವುದನ್ನು ಲೆಕ್ಕಿಸದೇ 130 ಜನರನ್ನು ಸೇರಿಸಿ ವಿಮಾನದಲ್ಲಿ ಮದುವೆ ಆಗಿರುವುದು ಟೀಕೆಗೆ ಗುರಿಯಾಗಿದೆ. ತಮಿಳುನಾಡು ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹೊಸ ಗೈಡ್‍ಲೈನ್ಸ್ ಪ್ರಕಾರ ಎಲ್ಲಾ ಖಾಸಗಿ ಸಂಸ್ಥೆ ನೌಕರರಿಗೆ ಮನೆಯಲ್ಲಿಯೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಖಾಸಗಿ ಸಂಸ್ಥೆ ವಿಮಾನವೊಂದು ಮದುವೆಗೆ ವೇದಿಕೆ ಕಲ್ಪಸಿರೋದು ಕೊರೊನಾ ನಿಯಮದ ಪ್ರಕಾರ ತಪ್ಪಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.

  • ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಡಾ.ಕೆ.ಸುಧಾಕರ್

    ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಡಾ.ಕೆ.ಸುಧಾಕರ್

    – ಬ್ಲ್ಯಾಕ್ ಫಂಗಸ್ ಗೆ ಔಷಧಿ ಪೂರೈಕೆಗೆ ಕ್ರಮ

    ಬೆಂಗಳೂರು: ರಾಜ್ಯದಲ್ಲಿ 300 ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡುಬಂದಿದ್ದು, ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, 300 ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿ ಬಂದಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

    ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡುಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. 1 ಸಾವಿರಕ್ಕೂ ಅಧಿಕ ವೈಲ್ ಗಳನ್ನು ಕಳುಹಿಸಿಕೊಡುವ ನಿರೀಕ್ಷೆಯೂ ಇದೆ. ಬ್ಲ್ಯಾಕ್ ಫಂಗಸ್‍ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಲ್ ಗೆ ಬೇಡಿಕೆ ಇಡಲಾಗಿದೆ. ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ. ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್ ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು, ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು.

    ಕೋವಿಡ್ ನಿಂದ ಗುಣಮುಖರಾದಾಗ ಇ.ಎನ್.ಟಿ ವೈದ್ಯರು ಮತ್ತೆ ತಪಾಸಣೆ ಮಾಡಬೇಕು. 3, 7 ಮತ್ತು 21 ನೇ ದಿನ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.