Tag: government

  • ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು (Tamil Nadu) ಸರಕಾರ ಶಾಕ್ ಮೂಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಕೇಳಿದೆ.

    ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ (Vignesh Sivan) ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ (Government) ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.

    ಬಾಡಿಗೆ ತಾಯಿಯಿಂದ (Surrogate Mother) ಮಗು ಪಡೆಯಲು ಇವೆಲ್ಲ ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ, ನಯನ ದಂಪತಿ ಇವುಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ (Investigation) ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಶಾಕ್ ಮೂಡಿಸಿದೆ. ಇದನ್ನೂ ಓದಿ:ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು.

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುವಕರ ಸಾಹಸ – ಭೂಗಳ್ಳರ ಕೈಯಿಂದ ಶಾಲೆಗೆ ಸೇರಿತು ಕೋಟ್ಯಂತರ ಮೌಲ್ಯದ ಜಮೀನು

    ಯುವಕರ ಸಾಹಸ – ಭೂಗಳ್ಳರ ಕೈಯಿಂದ ಶಾಲೆಗೆ ಸೇರಿತು ಕೋಟ್ಯಂತರ ಮೌಲ್ಯದ ಜಮೀನು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಮನೆ ಮಠ, ಸ್ಕೂಲ್ ಕಾಲೇಜು, ಕಂಪನಿಗಳನ್ನು ಮಾಡಿಕೊಂಡು ನಮ್ಮದೇ ಜಾಗ ಇದು ಅಂತಾ ಬೋರ್ಡ್ ಹಾಕಿಕೊಂಡಿರುವವರನ್ನು ನೋಡಿದ್ದೇವೆ. ಆದರೆ ಗ್ರಾಮದ ಯುವಕರು ನಡೆಸಿದ ಪ್ರಯತ್ನದಿಂದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸ್ವತ್ತು ಮತ್ತೆ ಗ್ರಾಮಕ್ಕೆ ಸೇರಿದೆ.

    ಬೆಂಗಳೂರು ಪೂರ್ವ ತಾಲೂಕು, ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡ ಅಗ್ರಹಾರ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಮುಂಭಾಗದ ಸುಮಾರು ಹದಿಮೂರುವರೆ ಗುಂಟೆ ಜಾಗವನ್ನು ಅನೇಕರು 20 ವರ್ಷಗಳ ಹಿಂದೆ ಖಾಸಗಿಯವರಿಗೆ ಪರಭಾರೆ ಮಾಡಲಾಗಿತ್ತು. ಗ್ರಾಮದ ಯುವಕರು ಇದು ಸರ್ಕಾರಿ ಜಾಗ ಹೇಗೆ ಖಾಸಗಿಯವರಿಗೆ ಸೇರಿದೆ ಅಂತಾ ಹೋರಾಟಕ್ಕೆ ನಿಂತರು. ಕಂದಾಯ ಇಲಾಖೆಗೆ ಪತ್ರಗಳನ್ನು ಬರೆಯುವ ಮೂಲಕ ಗ್ರಾಮದ ನಕ್ಷೆಯಲ್ಲಿರುವ ಗ್ರಾಮ ಠಾಣಾ ಸ್ವತ್ತನ್ನು ಗುರುತಿಸಿ ಗ್ರಾಮಕ್ಕೆ ಮರಳಿ ನೀಡುವಂತೆ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಎಎಸ್‍ಐಗಳಿಂದ ಕಿರಿಯ ಸಹೋದ್ಯೋಗಿಗಳ ಮೇಲೆ ನಡೆಯುತ್ತಿದ್ಯಾ ದಬ್ಬಾಳಿಕೆ?

    ಕಳೆದ ತಿಂಗಳು ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಇದು ಸರ್ಕಾರಿ ಸ್ವತ್ತು, ಗ್ರಾಮಠಾಣಾ ವ್ಯಾಪ್ತಿಗೆ ಬರಲಿದೆ ಅಂತಾ, ಗುರುತಿಸಿ ಅಲ್ಲಿ ಅತಿಕ್ರಮಣ ಮಾಡಿಕೊಂಡಿದ್ದವರನ್ನು ತೆರವು ಮಾಡಿಸಿ ಬೋರ್ಡ್ ಹಾಕಿದ್ದಾರೆ. ಸರಿ ಸುಮಾರು 4 ಕೋಟಿಗೂ ಅಧಿಕ ಬೆಲೆ ಬಾಳುವ ಜಾಗವನ್ನು ಗ್ರಾಮಕ್ಕೆ ಮತ್ತೆ ಉಳಿಸಿಕೊಂಡ ಸಂತಸ ಗ್ರಾಮದ ಯುವಕರಿಲ್ಲಿದ್ದು ಇಲ್ಲಿ ಶಾಲಾ ಮಕ್ಕಳಿಗೆ ಆಟದ ಮೈದಾನ, ಲೈಬ್ರರಿ, ಕುಡಿಯುವ ನೀರಿನ ಘಟಕ ಮತ್ತು ಸಮುದಾಯ ಭವನ ಮಾಡುವ ಉದ್ದೇಶವನ್ನು ಯುವಕರು ಹೊಂದಿದ್ದಾರೆ.

    ಗ್ರಾಮದ ಯುವಕರ ಪ್ರಯತ್ನದಿಂದ ಕಂಡವರ ಪಾಲಾಗುತ್ತಿದ್ದ ಗ್ರಾಮದ ಜಾಗ ಉಳಿದಿದೆ. ಇದೇ ರೀತಿ ಸರ್ಕಾರಿ ಜಾಗವನ್ನು ಉಳಿಸುವ ಕೆಲಸ ಪ್ರತಿಯೊಬ್ಬರು ಮಾಡಿದ್ದರೆ ಒತ್ತುವರಿ ಮಾಡುವವರಿಗೆ ಪಾಠ ಕಲಿಸಿದಂತೆ ಆಗಲಿದೆ. ಇದನ್ನೂ ಓದಿ : ಸ್ವಾರ್ಥಕ್ಕೆ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದೇವೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ – ಸತೀಶ್ ಜಾರಕಿಹೊಳಿ

    ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ – ಸತೀಶ್ ಜಾರಕಿಹೊಳಿ

    ಬೆಳಗಾವಿ: ರಾಜ್ಯದಲ್ಲಿ ರಮೇಶ್ ಜಾರಕಿಹೊಳಿಗೆ (Ramesh Jarkiholi) ಸರ್ಕಾರ ಉರುಳಿಸುವ ಶಕ್ತಿಯಿದೆ. ಅವರು ಇನ್ನೊಮ್ಮೆ ಸರ್ಕಾರ (Government) ಉರುಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲಾ ಪ್ರಾರ್ಥಿಸೋಣ ಎಂದು ಸಹೋದರ ಹಾಗೂ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರು ಕಾಲೆಳೆದಿದ್ದಾರೆ.

    ಗೋಕಾಕ್ ನಗರದಲ್ಲಿ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾರಕಿಹೊಳಿ ಸಹೋದರಿಗೆ ಸರ್ಕಾರ ಉರುಳಿಸುವ ಶಕ್ತಿಯಿದೆ ಎಂದು ಹೇಳ್ತಾರೆ. ರಾಜ್ಯ ರಾಜಕಾರಣದಲ್ಲಿ ನಾಲ್ವರು ಸಹೋದರರಿದ್ದೇವೆ. ನಾಲ್ವರು ಒಂದೇ ಎಂದು ಭಾವಿಸಬಾರದು. ನಾಲ್ವರು ಸಹೋದರರ ಕೆಲಸವೂ ಬೇರೆ-ಬೇರೆ ಇದೆ. ಯಾರನ್ನೂ ಗೊಂದಲ ಮಾಡಿಕೊಳ್ಳಬಾರದು ಎಂದರು. ಇದನ್ನೂ ಓದಿ:  ಕನ್ನಡದ ನಟ ಪ್ರತಾಪ್ ನಾರಾಯಣ ಇದೀಗ ಪ್ರಗ್ನೆಂಟ್: ಹೊಸ ದುನಿಯಾದ ವಿಚಿತ್ರ ಸುದ್ದಿ

    ನಮ್ಮಲ್ಲಿ ಸರ್ಕಾರ ಉರುಳಿಸುವ ಶಕ್ತಿ ರಮೇಶ್ ಜಾರಕಿಹೊಳಿ (Ramesh Jarakiholi) ಮಾತ್ರ ಇದೆ. ಉಳಿದ ನಾಲ್ವರು ಸಹೋದರರು ಸರ್ಕಾರ ಉರುಳಿಸುವುದರ ಭಾಗವಾಗುವುದಿಲ್ಲ. ರಮೇಶ್ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರಳಿಸುವ ಶಕ್ತಿ ಇದೆ. ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲೆಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

    ಖಾಸಗಿ ಸ್ಕೂಲ್ ಬಸ್‍ಗೆ ಸರ್ಕಾರಿ ಶಾಲಾ ವಿದ್ಯಾರ್ಥಿ ಬಲಿ- ಅಜ್ಜಿ, ಕುಟುಂಬಸ್ಥರು ಕಣ್ಣೀರು

    ಬೆಂಗಳೂರು: ಖಾಸಗಿ ಶಾಲೆಯ ಬಸ್ಸಿಗೆ ಸರ್ಕಾರಿ ವಿದ್ಯಾರ್ಥಿ ಬಲಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬುಧವಾರ ಸ್ಕೂಲ್‍ (School) ಗೆ ಬರಬೇಕಾದರೆ ಈ ಘಟನೆ ನಡೆದಿದೆ. ಅವನ ಮುಖವನ್ನು ಸತ್ತ ಮೇಲೆನೇ ನೋಡಿರೋದು. ದೊಡ್ಡ ಮಗ ಇವನೇ ಇವನು ಇನ್ನ ನಮ್ಮ ಮನೆಗೆ ವಾಪಸ್ ಬರ್ತಾನಾ ಅಂತಾ ಅಜ್ಜಿ ಪರಿಮಳಾ ಕಣ್ಣೀರು ಹಾಕಿದ್ದಾರೆ.

    ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ನಾ ಅಥವಾ ರಸ್ತೆಯಲ್ಲಿ ಬಿದ್ನಾ ಏನೂ ಹೇಳ್ತಿಲ್ಲ. ಯಾರು ಕೂಡ ಸರಿಯಾಗಿ ಹೇಳ್ತಿಲ್ಲ. ಚಿಕ್ಕ ವಯಸ್ಸು ಹೋಗೋ ವಯಸ್ಸಾ ಸರ್ ಅವನು. ಮೂರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಉಳಿಯಲಿಲ್ಲ ಅಂತಾ ಪರಿಮಳಾ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಈ ಸಂಬಂಧ ಸರ್ಕಾರಿ ಶಾಲೆಯ ಪ್ರಭಾರಿ ಪ್ರಿನ್ಸಿಪಾಲ್ (Principal) ಸುಜಾತ ಪ್ರತಿಕ್ರಿಯಿಸಿ, ಸ್ಕೂಲ್ ಒಳಗಡೆ ಬಂದು ಕುಸಿದು ಬಿದ್ದರು ಅಂತಾ ಅನ್ನೋದು ಸುಳ್ಳು. ಘಟನೆ ಆದ ಮೇಲೆ ಸ್ಕೂಲ್ ಒಳಗಡೆ ಯಾರೋ ಕರೆದುಕೊಂಡು ಬಂದರು. ಕೂಡಲೇ ನಮ್ಮ ಟೀಚರ್ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಮೂರು ಆಸ್ಪತ್ರೆ ಸುತ್ತಾಡಿದರೂ ಉಳಿಯಲಿಲ್ಲ. ರಾಯನ್ ಸ್ಕೂಲ್ ಬಸ್ ಅಂತಾ ಹೇಳ್ತಾ ಇದ್ದಾರೆ. ನಾವು ಅಲ್ಲಿಯ ಮ್ಯಾನೇಜ್ಮೆಂಟ್‍ಗೆ ಕಾಲ್ ಮಾಡಿ ಮಾತಾಡಿದ್ದೇವೆ. ಆದರೆ ಅವರು ನಮ್ಮದು ಅಲ್ಲ ಅಂತಾ ಹೇಳಿದ್ರು. ರಸ್ತೆಯಲ್ಲಿ ದಾಟಬೇಕಾದ್ರೆ ಘಟನೆ ಆಗಿದೆ ಎಂದು ತಿಳಿಸಿದ್ದಾರೆ.

    ಸದ್ಯ ಮುನೇನಕೊಳಲು ಮೃತ ವಿದ್ಯಾರ್ಥಿ ನಿವಾಸದ ಬಳಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹದ ಮುಂದೆ ತಾಯಿ ಕಣ್ಣೀರು ಹಾಕುತ್ತಿದ್ದಾರೆ. ತಾಯಿಗೆ ಇಬ್ಬರು ಗಂಡು ಮಕ್ಕಳು ಇದ್ದು, ಮೃತ ವಿದ್ಯಾರ್ಥಿ ದೊಡ್ಡವನು ಇನ್ನೊಬ್ಬ ಮಗ ಅವರ ಗಂಡನ ಹತ್ತಿರ ಇರುವುದಾಗಿ ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

    ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದ್ದು, ಇದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

    ಈ ಸಂಬಂಧ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಕತ್ತಿಯವರು ನಿಧನರಾಗಿದ್ದಾರೆ. ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಒಳ್ಳೆಯ ಸ್ನೇಹಿತ ಎಂದು ಹೇಳಿದರು. ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಅವರು ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು. ಮೂರು ದಿನ ಘೋಷಿಸಬಹುದಿತ್ತು. ಸರ್ಕಾರ (Government) ಯಾಕೆ ಘೋಷಿಸಿಲ್ಲವೋ ಗೊತ್ತಿಲ್ಲ. ನಾನು ಅದರ ಬಗ್ಗೆ ಮಾತಾಡಲ್ಲ ಎಂದು ವಾಗ್ದಾಳಿ ನಡೆಸಿದರು.

    ಕತ್ತಿ ನಿಧನಕ್ಕೆ ಸರ್ಕಾರ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕತ್ತಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ

    ಸಾಮಾನ್ಯವಾಗಿ ಗಣ್ಯರ ನಿಧನ ಸಂದರ್ಭದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸುವ ಪದ್ಧತಿ ಇದೆ. ಈ ಹಿಂದೆ ಎಚ್ ಎಸ್ ಮಹಾದೇವ ಪ್ರಸಾದ್, ಅಂಬರೀಷ್, ಗಿರೀಶ್ ಕಾರ್ನಾಡ್, ಸಿದ್ದಗಂಗಾಶ್ರೀ, ಪೇಜಾವರ ಶ್ರೀ ಮುಂತಾದವರ ನಿಧನರಾದಾಗ ಮೂರು ದಿನ ಶೋಕಾಚರಣೆಯನ್ನು ಸರ್ಕಾರ ಘೋಷಿಸಿತ್ತು. ಆದರೆ ಈಗ ನಾಳೆಯ ಜನೋತ್ಸವಕ್ಕಾಗಿ ಒಂದೇ ದಿನ ಶೋಕಾಚರಣೆ ಘೋಷಿಸಿತಾ ಸರ್ಕಾರ ಎಂಬ ಪ್ರಶ್ನೆ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ – ಸರ್ಕಾರದ ವಿವೇಚನೆಗೆ ಬಿಟ್ಟ ಹೈಕೋರ್ಟ್‌

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ – ಸರ್ಕಾರದ ವಿವೇಚನೆಗೆ ಬಿಟ್ಟ ಹೈಕೋರ್ಟ್‌

    ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯೋದು ಬಹುತೇಕ ಖಚಿತವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಮಾರ್ಪಾಡು ಮಾಡಿರುವ ವಿಭಾಗೀಯ ಪೀಠ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರಕ್ಕೆ ಬಿಟ್ಟಿದೆ.

    ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬಹುದು. ಗಣೇಶೋತ್ಸವ ಮಾಡಬಹುದು. ಆದರೆ ಈ ಬಗ್ಗೆ ಅನುಮತಿ ನೀಡೋದು ಬಿಡೋದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಗಣೇಶೋತ್ಸವಕ್ಕೆ ಒಂದು ದಿನ ಮಾತ್ರ ಅವಕಾಶ ನೀಡಬಹುದು ಎಂದು ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿದೆ. ಕೋರ್ಟ್ ಕೂಡ ಇದೇ ವಿಚಾರವನ್ನು ಪ್ರಸ್ತಾಪ ಮಾಡಿದೆ. ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಪಾರ್ಟಿದಾರರು ಸುಪ್ರೀಂಕೋರ್ಟ್ ಮೊರೆ ಹೋಗಬಹುದು ಎಂದು ಕೂಡ ಹೈಕೋರ್ಟ್ ತಿಳಿಸಿದೆ. ಆದರೆ ನಾಳೆಯಿಂದ ಗುರುವಾರದವರೆಗೆ ಕೋರ್ಟ್ ರಜೆ ಇರುವ ಕಾರಣ, ವಕ್ಫ್ ಬೋರ್ಡ್ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳು ಕಡಿಮೆ ಇವೆ. ಚಾಮರಾಜಪೇಟೆ ಮೈದಾನ ಮಾಲೀಕತ್ವ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೊರೆ ಹೋಗಿತ್ತು.ಇದನ್ನೂ ಓದಿ: ಹೆಚ್‌ಡಿಕೆ ರಾಜಕೀಯ ಸ್ಟಂಟ್ ಮಾಡಿದರೆ ಉಪಯೋಗವೇನು – ಸಚಿವ ಸುಧಾಕರ್ ಪ್ರಶ್ನೆ

    karnataka highcourt

    ಒಂದು ದಿನದ ಮಟ್ಟಿಗಾದ್ರೂ ಗಣೇಶೋತ್ಸವಕ್ಕೆ ಅನುಮತಿಸಿ. ಈ ಬಗ್ಗೆ ಅರ್ಜಿಗಳು ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಎಲ್ಲಾ ಸಮುದಾಯಗಳನ್ನು ಸಮಾನವಾಗಿ ಕಾಣಬೇಕಿದೆ. ಎರಡು ಸಮುದಾಯಗಳ ಹಿತಾಸಕ್ತಿ ಪರಿಗಣಿಸಿ ತೀರ್ಪು ನೀಡಬೇಕು ಎಂದು ಎಜಿ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ರು. ಇದಕ್ಕೆ ಹೈಕೋರ್ಟ್ ಕೂಡ ಸ್ಪಂದಿಸಿತು. ಹೈಕೋರ್ಟ್ ತೀರ್ಪಿಗೆ ಸಚಿವ ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ. ಕೋರ್ಟ್ ತೀರ್ಪು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

    ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಸರ್ಕಾರ ಒಂದು ದಿನದ ಮಟ್ಟಿಗೆ ಗಣೇಶೋತ್ಸವಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಿವೆ. ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮತ್ತು ಹಿಂದೂ ಸಂಘಟನೆಗಳು ಈ ಬೆಳವಣಿಗೆಯಿಂದ ಖುಷಿ ಆಗಿವೆ. ಕೋರ್ಟ್ ಆದೇಶ ಪೊಲೀಸ್ ಆಯುಕ್ತರು ಈದ್ಗಾ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಸಮಯವಿಲ್ಲ- ಸರ್ಕಾರದ ಹುದ್ದೆ ನಿರಾಕರಿಸಿದ ಸೂಲಿಬೆಲೆ

    ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಸಮಯವಿಲ್ಲ- ಸರ್ಕಾರದ ಹುದ್ದೆ ನಿರಾಕರಿಸಿದ ಸೂಲಿಬೆಲೆ

    ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ 21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲಾಗಿದೆ. ಶ್ರೀ ಗಳಗನಾಥ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನಕ್ಕೆ ಸೂಲಿಬೆಲೆ ಅವರಿಗೆ ಅಧ್ಯಕ್ಷ ಸ್ಥಾನ ನಿಡಲಾಗಿದ್ದು, ಆದರೆ ಚಕ್ರವರ್ತಿಯವರು ಈ ಹುದ್ದೆಯನ್ನು ನಿರಾಕರಿಸಿದ್ದಾರೆ.

    ಈ ಸಂಬಂಧ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಎಡವಟ್ಟು – ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ

    ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು. ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಹಾಲಿ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ಅಧ್ಯಕ್ಷರು, ಸದಸ್ಯರ ಅಧಿಕಾರದ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಇಂದು ಹೊಸ ನೇಮಕಾತಿ ಮಾಡಿ ಸರ್ಕಾರ ಆದೇಶ ಹೊರಡಿಸಿತು. ಒಟ್ಟು ಎಂಟು ಜನ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಇದರಲ್ಲಿ ಚಕ್ರವರ್ತಿ ಸೂಲಿಬೆಲೆಗೆ ಶ್ರೀ ಗಳಗನಾಥ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ ಈ ಹುದ್ದೆಯನ್ನು ಸೂಲಿಬೆಲೆ ನಿರಾಕರಿಸಿದ್ದಾರೆ.

    ಸೂಲಿಬೆಲೆ ಅವರು ಇತ್ತೀಚೆಗೆ ಸರಣಿ ಟ್ವೀಟ್ ಮೂಲಕ ಸಿಎಂ ಬೊಮ್ಮಾಯಿ, ಸಚಿವ ಸುಧಾಕರ್ ಮತ್ತಿತರರ ಮೇಲೆ ಟೀಕಿಸಿದ್ದರು. 23 ಹಿಂದೂ ಕಾರ್ಯಕರ್ತರ ಸಮಾಧಿ ಮೇಲೆ ಸರ್ಕಾರ ಬಂದಿದೆ ಎಂದು ತೀವ್ರ ಟೀಕೆ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ `ಸಿಎಂ ಬದಲಾವಣೆ’ ವರದಿ

    ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ `ಸಿಎಂ ಬದಲಾವಣೆ’ ವರದಿ

    ಬೆಂಗಳೂರು: ರಾಜ್ಯ ಬಿಜೆಪಿ ಸಚಿವರ ಮಾತು ಹೈಕಮಾಂಡ್ ಅಂಗಳ ತಲುಪಿದೆ. ಇದರಿಂದ ಸರ್ಕಾರಕ್ಕೆ ತೀವ್ರ ಮುಜುಗರ ಆಗಿದೆ.

    ಸರ್ಕಾರ ನಡೀತಿಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆ ಹಾಗೂ ಸಿದ್ದರಾಮಯ್ಯ ಸಿಎಂ ಆಗಬೇಕೆಂಬ ಸಚಿವ ಶ್ರೀರಾಮುಲು ಹೇಳಿಕೆಗಳಿಂದ ಡ್ಯಾಮೇಜ್ ಆಗಿದೆ. ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಪದಾಧಿಕಾರಿಗಳ ಸಭೆಯಲ್ಲೂ ಸಚಿವರ ಹೇಳಿಕೆಗಳ ಬಗ್ಗೆ ಪ್ರಸ್ತಾಪ ಆಗಿದ್ದು, ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಯಾರೂ ಬಹಿರಂಗವಾಗಿ ನಕಾರಾತ್ಮಕ ಹೇಳಿಕೆ ಕೊಡದಂತೆ ತಾಕೀತು ಮಾಡಿದ್ದಾರೆ. ಈ ಸಂಬಂಧ ಹೈಕಮಾಂಡ್‍ಗೆ ವರದಿ ಕೊಡಲಿದ್ದಾರೆ. ಸಿಎಂ ಬದಲಾವಣೆ ಕುರಿತ ಮಾಜಿ ಶಾಸಕ ಸುರೇಶ್ ಗೌಡರ ಹೇಳಿಕೆಯ ಪರಿಣಾಮದ ಜತೆಗೆ ಸಚಿವರಾದ ಮಾಧುಸ್ವಾಮಿ, ಶ್ರೀರಾಮುಲು ಹೇಳಿಕೆಗಳಿಂದಾದ ಮುಜುಗರ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗುತ್ತದೆ ಎನ್ನಲಾಗಿದೆ.

    ಬಿಎಸ್‍ವೈಗೆ ಸ್ಥಾನಮಾನ ಕೊಟ್ಟ ಬಳಿಕ ಪಕ್ಷದ ಒಳಗಿನ & ಹೊರಗಿನ ಚಿತ್ರಣದ ಬಗ್ಗೆಯೂ ವರದಿಯಲ್ಲಿ ಪ್ರಸ್ತಾಪ ಮಾಡಲಾಗುತ್ತದೆ ಎನ್ನಲಾಗ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ

    ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ನಿತ್ಯ ಹಾಡಿಸೋದು ಕಡ್ಡಾಯ

    ಬೆಂಗಳೂರು: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

    ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ. ಇದನ್ನೂ ಓದಿ: ರಾಷ್ಟ್ರದ ಅಭಿವೃದ್ಧಿಗೆ ತಾಂತ್ರಿಕ ಪ್ರಗತಿ ಬಹಳ ಮುಖ್ಯ: ರಾಜ್ಯಪಾಲ ಗೆಹ್ಲೋಟ್

    ಈ ಬಗ್ಗೆ ಎರಡು ದಿನಗಳ ಹಿಂದಿಯೇ ಪಬ್ಲಿಕ್ ಟಿವಿ ಸುದ್ದಿ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ. ಇದನ್ನೂ ಓದಿ: ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ- ಶೀಘ್ರವೇ ಸರ್ಕಾರದ ಆದೇಶ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ- ಶೀಘ್ರವೇ ಸರ್ಕಾರದ ಆದೇಶ ಸಾಧ್ಯತೆ

    ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ- ಶೀಘ್ರವೇ ಸರ್ಕಾರದ ಆದೇಶ ಸಾಧ್ಯತೆ

    ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸದ್ದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಎಂದು ಸುತ್ತೋಲೆ ಹೊರಡಿಸಲು ಮುಂದಾಗಿದೆ.

    ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಖಾಸಗಿ ಶಾಲೆಗಳ ಜೊತೆಗೆ ಮದರಸಾಗಳಲ್ಲೂ ನಿತ್ಯ ರಾಷ್ಟ್ರಗೀತೆ ಹಾಡಿಸುತ್ತಿಲ್ಲ ಎಂಬ ದೂರು ಶಿಕ್ಷಣ ಇಲಾಖೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಸಚಿವರು, ಮದರಸಾಗಳಲ್ಲೂ ಕಡ್ಡಾಯವಾಗಿ ನಿತ್ಯ ರಾಷ್ಟ್ರಗೀತೆ ಹಾಡಿಸಲು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

    ಇಂದು ಅಥವಾ ನಾಳೆ ಒಳಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ. ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ ನಿತ್ಯ ಹಾಡಿಸದೇ ಹೋದರೆ ಮದರಸಾಗಳ ಮೇಲೆ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಈ ಬಗ್ಗೆ ನಿಗಾ ಇರಿಸಲು ಡಿಡಿಪಿಐ ಮತ್ತು ಬಿಇಓ ನೇತೃತ್ವದಲ್ಲಿ ತಂಡ ರಚನೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗ್ತಿದ್ದಂತೆಯೇ ಸ್ಥಾನ ತೊರೆದ ಗುಲಾಂ ನಬಿ ಆಜಾದ್

    Live Tv
    [brid partner=56869869 player=32851 video=960834 autoplay=true]