Tag: government

  • ಬೆಂಗ್ಳೂರಿಂದ ಹೋದ್ರೆ ಹುಷಾರ್- ಊರಿನತ್ತ ಮುಖ ಮಾಡೋರಿಗೆ ಟಫ್ ರೂಲ್ಸ್!

    ಬೆಂಗ್ಳೂರಿಂದ ಹೋದ್ರೆ ಹುಷಾರ್- ಊರಿನತ್ತ ಮುಖ ಮಾಡೋರಿಗೆ ಟಫ್ ರೂಲ್ಸ್!

    ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಸ್ಟೋರಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ ಖಾಲಿ ಮಾಡುತ್ತಿದ್ದಾರೆ.

    ಬೆಂಗಳೂರಿಂದ ಹೋಗ್ತಿರುವವರ ಸಂಖ್ಯೆ ಹೆಚ್ಚಾಗ್ತಿರುವ ಬೆನ್ನಲ್ಲೇ ಸರ್ಕಾರಕ್ಕೆ ಫುಲ್ ಟೆನ್ಶನ್ ಶುರುವಾಗಿದೆ. ಬೆಂಗಳೂರಿಂದ ಹೋದವರಿಂದ ಹಳ್ಳಿಗಳಿಗೂ ಕೊರೊನಾ ಹಬ್ಬುವ ಆತಂಕ ಎದುರಾಗಿದೆ. ಹಾಗಾಗಿ ಬೆಂಗಳೂರಿಂದ ಹೋಗುವವರಿಗೆ ರೂಲ್ಸ್ ಜಾರಿಗೆ ತರಲು ಚರ್ಚೆ ನಡೆಯುತ್ತಿದೆ.

    ನಾಳೆ ನಡೆಯುವ ಕ್ಯಾಬಿನೆಟ್ ನಲ್ಲೂ ಬೆಂಗಳೂರು ಬಿಟ್ಟು ಹೋಗುವವರ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರಿಂದ ಹೋಗುವವರಿಗೆ ಅಷ್ಟದಿಗ್ಬಂಧನ ಹಾಕುವ ಸಾಧ್ಯತೆ ಹೆಚ್ಚಾಗಿದ್ದು, ಈಗಾಗಲೇ ಸಿಎಂ ಯಡಿಯೂರಪ್ಪ ಅವರು ಏನೆಲ್ಲ ರೂಲ್ಸ್ ಗಳ ತರಬಹುದು ಎಂಬುದರ ಬಗ್ಗೆ ಗೃಹ ಸಚಿವ, ಗ್ರಾಮೀಣಾಭಿವೃದ್ಧಿ ಸಚಿವ, ನಗರಾಭಿವೃದ್ಧಿ ಸಚಿವರ ಬಳಿ ಪ್ಲಾನ್ ಕೇಳಿದ್ದಾರೆ.

    ಅಷ್ಟದಿಗ್ಬಂಧನದ ಪ್ಲಾನ್ ಏನು..?
    ತಮ್ಮ ತಮ್ಮ ಹಳ್ಳಿಗಳಿಗೆ ಹೋಗುವ ಮುನ್ನ ಎರಡು ದಿನ ಮೊದಲು ಕೋವಿಡ್ ಟೆಸ್ಟ್ ಮಾಡಿಸಿರಬೇಕು. ಒಂದು ವೇಳೆ ವರದಿ ನೆಗಟಿವ್ ಬಂದಿದ್ದರೆ ಮಾತ್ರ ಊರಿನ ಮನೆಯಲ್ಲಿ ಮೂರು ದಿನ ಕ್ವಾರಂಟೈನ್ ಆಗಬೇಕು. ಕುಟುಂಬದ ಒಬ್ಬ ವ್ಯಕ್ತಿಯ ವರದಿ ಪಾಸಿಟಿವ್ ಬಂದ್ರೂ ಆ ಕುಟುಂಬದ ಯಾರೊಬ್ಬರೂ ಬೇರೆ ಕಡೆ ಹೋಗುವಂತಿಲ್ಲ.

    ಸ್ಥಳೀಯ ಗ್ರಾಮ ಪಂಚಾಯ್ತಿ ಪಿಡಿಓಗಳಿಗೆ, ಪಟ್ಟಣ ಪಂಚಾಯತ್ ಪುರಸಭೆ, ನಗರಸಭೆ, ಪಾಲಿಕೆ ವಾರ್ಡ್ ಅಧಿಕಾರಿಗಳಿಗೆ ಪರೀಕ್ಷೆಯ ಪ್ರಮಾಣ ಪತ್ರ ತೋರಿಸಬೇಕು. ಒಂದು ವೇಳೆ ಕೋವಿಡ್ ಟೆಸ್ಟ್ ಮಾಡಿಸದಿದ್ದರೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಬೇಕು.

    ಬೆಂಗಳೂರಿಂದ ಹೋಗುವ ಪ್ರತಿಯೊಬ್ಬರು ಆಯಾ ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯನ್ನ ಕಡ್ಡಾಯವಾಗಿ ಕೊಡಬೇಕು. ಬೆಂಗಳೂರಿನ ಗಡಿಗಳಲ್ಲಿ ಚೆಕ್ ಪೋಸ್ಟ್ ಕೂಡ ನಿರ್ಮಿಸಿ ಅಲ್ಲಿಯೂ ತಪಾಸಣೆ ನಡೆಸಬೇಕು. ಕೋವಿಡ್ ಟೆಸ್ಟ್ ಇಲ್ಲದವರ ಕೈಗೆ ಸ್ಟಾಂಪ್ ಹಾಕಿ ಗುರುತು ಮಾಡುವ ಬಗ್ಗೆಯೂ ರೂಲ್ಸ್ ತೆರು ಸಾಧ್ಯತೆಗಳು ದಟ್ಟವಾಗಿದೆ.

  • ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್‌ಎಸ್‌ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ ಇತರೇ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

    ಭಾರತೀಯ ಕಿಸಾನ್ ಸಂಘ, ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರಗಳಿಂದ ಕಾಯ್ದೆಯ ತಿದ್ದುಪಡಿಗೆ ಆಕ್ಷೇಪ ವ್ಯಕ್ತವಾಗಿದೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಸಂಘಟನೆಗಳ ಮುಖ್ಯಸ್ಥರ ನಿಯೋಗ, ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದೆ.

    ಭಾರತೀಯ ಕಿಸಾನ್ ಸಂಘ ದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್ ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್, ಅಖಿಲ ಭಾರತ ಸಂಯೋಜಕ್ ಪ್ರೊ.ಕುಮಾರಸ್ವಾಮಿ, ಕೃಷಿ ಪ್ರಯೋಗ ಪರಿವಾರದ ಅರುಣ ಮತ್ತು ವೃಷಾಂಕ್ ಭಟ್ ಇದ್ದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿತ್ತು.

    ಸಂಘಟನೆಗಳ ಒತ್ತಾಯ ಮತ್ತು ಆಕ್ಷೇಪಣೆಗಳೇನು?
    1. 79 ಎ, ಬಿ ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ಕೊಡುವುದು, ಸ್ವಾಗತಾರ್ಹ. ಕೃಷಿಗೆ ಹೆಸರು, ವಿದ್ಯಾವಂತರು ಬರುವುದು ಒಳ್ಳೆಯದೇ ಆದರೆ ಹಾಗೆ ಕೃಷಿ ಭೂಮಿ ಪಡೆದವರು ಅಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಯನ್ನು ಮಾಡಬೇಕು ಕೈಗಾರಿಕಾ ಉದ್ದೇಶಕ್ಕೆ ಈ ಭೂಮಿಯನ್ನು ಬಳಸಬಾರದು ಮತ್ತು ಮುಂದೆ ಸದರಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಮಾರುವ ಅವಕಾಶವೂ ಇರಬಾರದು ಎಂಬುದು ಆಗ್ರಹ.
    2. ಆದರೆ ಸರ್ಕಾರದ ಈ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಗಾರಿಕೆಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿದೆ ಎಂಬ ವಾದ ಕೇಳಿಬರುತ್ತಿದೆ. ಸರ್ಕಾರ ರೈತರ ಪರವಾಗಿ ಸ್ಪಷ್ಟ ನಿಲುವು ಪ್ರಕಟಿಸದಿರುವುದು ಆತಂಕಕ್ಕೆ ಕಾರಣವಾಗಿದೆ.
    3. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ನೀವು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕು. ವಿಷಯ ಪರಿಣಿತರ ಸಮಿತಿ ರಚಿಸಿ ಸಲಹೆ ಪಡೆಯಬೇಕು.


    4 ಹೊಸದಾಗಿ ಕೃಷಿ ಭೂಮಿ ಖರೀದಿಸುವರಿಗೆ ಗರಿಷ್ಠ ಮಿತಿಯನ್ನು ಹಿಂದಿನಂತೆಯೇ 54 ಎಕರೆಗೆ ಮುಂದುವರಿಸುವುದು ಮತ್ತು ಹೊಸದಾಗಿ ಕೃಷಿ ಭೂಮಿ ಖರೀದಿಸಿದರು ಕನಿಷ್ಠ 8 ವರ್ಷ ಮಾರುವಂತಿಲ್ಲ ಎಂಬ ಷರತ್ತಿರಲಿ.
    5, ಕೃಷಿ ಭೂಮಿಯಲ್ಲಿ ಇಂತಹ ಕೃಷಿ ಪೂರಕ ಘಟಕಗಳನ್ನು ನಿರ್ಮಿಸಲು ಕಂದಾಯ ಇಲಾಖೆಯ ಅನುಮತಿಯ ಅಗತ್ಯ ಇರಕೂಡದು. ರೈತರಿಗೆ ಮನೆ, ಕೊಟ್ಟಿಗೆ, ಕೃಷಿ ಸಂಸ್ಕರಣಾ ಘಟಕ, ಗೋದಾಮು, ಹೋಮ್ ಸ್ಟೇ, ಒಂದು ಎಕರೆಗಿಂತ ಹೆಚ್ಚಿನ ಜಾಗದಲ್ಲಿ ಘಟಕಗಳು ಬಂದಲ್ಲಿ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯ ಎಂದು ನಮೂದಿಸಬೇಕು.
    6 ಟ್ರಸ್ಟ್, ಕಂಪನಿ, ರಾಜ್ಯದ ಕೇಂದ್ರದ ಬಹುರಾಜ್ಯ ಸಹಕಾರಿ ಕಾಯ್ದೆಗಳಲ್ಲಿ ನೋಂದಣಿ ಮಾಡುವ ಸಂಸ್ಥೆಗಳು ರೈತರಿಂದ ಭೂಮಿ ಖರೀದಿಸುವಾಗ ಖರೀದಿಸುವವರ ಪೂರ್ತಿ ವಿವರ ಮತ್ತು ಖರೀದಿಸುವ ಉದ್ದೇಶ ಮಾರುವ ರೈತರಿಗೆ ತಿಳಿಯುವಂತಾಗಬೇಕು.


    6 ಪ್ಲಾನೇಷನ್ ಕಾಯ್ದೆ ಅಡಿಯಲ್ಲಿ ಸಾವಿರಾರು ಎಕರೆ ಭೂಮಿ ಹೊಂದಲು ಅವಕಾಶವಿದೆ. ಈ ಕಾಯ್ದೆಯನ್ನು ಮರುಪರಿಶೀಲಿಸಬೇಕು.
    8 ನೀರಾವರಿ ಕಲ್ಪಿಸಲಾಗಿದೆ ಸರ್ಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ. ಈಗ ಅದೆ ನೀರಾವರಿ ಭೂಮಿಯನ್ನು ಕೈಗಾರಿಕೆಗೆ ನೀಡುವ ಬಗ್ಗೆ ಬಿಗಿ ನೀತಿ ಬೇಕು.
    9. ಭೂ ಸುಧಾರಣಾ ಕಾಯಿಯಲ್ಲಿ ತರುವ ಮಾರ್ಪಾಡುಗಳನ್ನು ಪುರ್ವಾನ್ವಯದಿಂದ ಜಾರಿಗೊಳಿಸುವುದು ಬೇಡ. ಹೀಗೆ ಮಾಡುವುದರಿಂದ ಸರ್ಕಾರ ಹೊಸಬರನ್ನು ಕೃಷಿ ಕ್ಷೇತ್ರಕ್ಕೆ ಹಿತ ರಕ್ಷಣೆಗೆ ಬದ್ಧವಾಗಿದೆ ಎಂಬ ಸಂದೇಶ ಸಮಾಜಕ್ಕೆ ಹೋಗುತ್ತದೆ.

  • ಬೆಂಗ್ಳೂರಿನಲ್ಲಿ ಕೊರೊನಾ ಮಹಾ ಸ್ಫೋಟ – ದಿಢೀರ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣ ಏನು?

    ಬೆಂಗ್ಳೂರಿನಲ್ಲಿ ಕೊರೊನಾ ಮಹಾ ಸ್ಫೋಟ – ದಿಢೀರ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣ ಏನು?

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟವಾಗಿದೆ. ಇಷ್ಟು ದಿನ 100 ರಿಂದ 150 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಶನಿವಾರ ಬರೋಬ್ಬರಿ 596 ಪ್ರಕರಣ ದಾಖಲಾಗಿವೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2,592ಕ್ಕೆ ಏರಿಕೆ ಆಗಿದೆ.

    ಜೂನ್ 6 ರವರೆಗೂ ನಿಯಂತ್ರಣದಲ್ಲಿದ್ದ ಕೊರೊನಾ ಜೂನ್ 6 ನಂತರ ಬೆಂಗಳೂರಿನಲ್ಲಿ ಸ್ಫೋಟವಾಗುತ್ತಿದೆ. ವಯಸ್ಸಾದವರಲ್ಲಿ, ಉಸಿರಾಟದ ಸಮಸ್ಯೆ ಇದ್ದವರಲ್ಲಿ, ನಾನಾ ಕಾಯಿಲೆಗಳಿಂದ ಬಳಲುತ್ತಾ ಇದ್ದವರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಅಲ್ಲದೇ ಬೆಂಗಳೂರಿನಲ್ಲಿ 84 ಜನ ಮರಣ ಹೊಂದಿದ್ದಾರೆ. ಈ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಲು ಕಾರಣ ಏನು? ಸರ್ಕಾರ ಎಲ್ಲಿ ಎಡವಿತು ಎಂಬ ಆತಂಕ ಶುರುವಾಗಿದೆ. ಸರ್ಕಾರದ ನಿರ್ಲಕ್ಷ್ಯ ಮತ್ತು ಎಡವಟ್ಟು ನಿರ್ಧಾರಗಳೇ ಕೊರೊನಾ ಸ್ಫೋಟವಾಗಲು ಕಾರಣ ಎನ್ನಬಹುದಾಗಿದೆ.

    1. ಕ್ವಾರಂಟೈನ್ ದಿನಕ್ಕೊಂದು ನಿಯಮ: ಆರಂಭದಲ್ಲಿ ಅನ್ಯರಾಜ್ಯದಿಂದ ಬಂದವರಿಗೆ ಹದಿನಾಲ್ಕು ದಿನದ ಸಾಂಸ್ಥಿಕ ಕ್ವಾರಂಟೈನ್ ಇತ್ತು. ಅದಾದ ಬಳಿಕ ಮಹಾರಾಷ್ಟ್ರಕ್ಕೆ ಮಾತ್ರ ಏಳು ದಿನದ ಸಾಂಸ್ಥಿಕ ಕ್ವಾರಂಟೈನ್ ಉಳಿದ ರಾಜ್ಯಕ್ಕೆ ಹದಿನಾಲ್ಕು ದಿನ ಹೋಂ ಕ್ವಾರಂಟೇನ್ ರೂಲ್ಸ್ ಜಾರಿ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೋಂ ಕ್ವಾರಂಟೈನ್‍ಗೆ ಹೋದವರು ಸರಿಯಾಗಿ ನಿಯಮ ಪಾಲನೆ ಮಾಡದೇ ಸೋಂಕು ಹೆಚ್ಚಾಗಿದೆ.

    2. ರೋಗ ಲಕ್ಷಣ ಇರೋರಿಗಷ್ಟೇ ಟೆಸ್ಟಿಂಗ್: ಅನ್ಯರಾಜ್ಯದಿಂದ ಬರುವವರಿಗೆ ಆರಂಭದಲ್ಲಿ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಆದರೆ ಪರಿಸ್ಥಿತಿ ಕೈಮೀರುವ ವೇಳೆ ರೋಗಲಕ್ಷಣ ಇರೋರಿಗಷ್ಟೇ ಟೆಸ್ಟ್ ಅಂತ ಘೋಷಣೆ ಮಾಡಲಾಗಿತ್ತು. ಇದರಿಂದ ಸದ್ದಿಲ್ಲದೇ ರೋಗ ಹರಡಿದೆ.

    3. ವಾರ್ ರೂಂ ವಿಶ್ಲೇಷಣೆ ಕಡೆಗಣನೆ: ಕೋವಿಡ್ ವಾರ್ ರೂಂ, ಬೆಂಗಳೂರಿನಲ್ಲಿ ಹೈ ರಿಸ್ಕ್ ಕೇಸ್‍ಗಳು ಮತ್ತು ರೋಗಲಕ್ಷಣ ಇಲ್ಲದೇ ಇರೋರ ಬಗ್ಗೆ ಟೆಸ್ಟ್ ರಿಪೋರ್ಟ್ ಮಾಡಿ ಎಚ್ಚರಿಕೆ ನೀಡುತ್ತಿತ್ತು. ಆದರೆ ವಾರ್ ರೂಂ ವಿಶ್ಲೇಷಣೆಯನ್ನು ಕಡೆಗಣಿಸಿ ಕೇವಲ ರೋಗ ಲಕ್ಷಣ ಹೊಂದಿದವರಿಗೆ ಮಾತ್ರವೇ ಪರೀಕ್ಷೆ ನಡೆಸಲು ಆದೇಶಿಸಿದೆ. ಜೊತೆಗೆ ಪರೀಕ್ಷೆಯಲ್ಲೂ ನಿಯಮ ಸಡಿಲಿಸಿದೆ.

    3. ದ್ವಿತೀಯ ಸಂಪರ್ಕ ವ್ಯಕ್ತಿಗಳಿಗೆ ಕ್ವಾರಂಟೈನ್, ಪರೀಕ್ಷೆ ಕೈ ಬಿಟ್ಟಿದ್ದು: ದ್ವಿತೀಯ ಸಂಪರ್ಕದ ವ್ಯಕ್ತಿಗಳನ್ನ ಹೋಟೆಲ್ ಕ್ವಾರಂಟೈನ್ ಮಾಡದೇ ಹೋಂ ಕ್ವಾರಂಟೈನ್ ಸೂಚಿಸಿದ್ದು ಮತ್ತು ದ್ವಿತೀಯ ಸಂಪರ್ಕ ವ್ಯಕ್ತಿಗಳಿಗೆ ಟೆಸ್ಟಿಂಗ್ ಕೈ ಬಿಟ್ಟಿದ್ದು. ಇವರು ನಗರದಲ್ಲೆಲ್ಲಾ ಓಡಾಡಿ ಸೋಂಕು ಹರಡಿದ್ದಾರೆ. ಕ್ವಾರಂಟೈನ್ ಅವಧಿ ಕಡಿಮೆ ಮಾಡುವುದರ ಜೊತೆಗೆ ಫಲಿತಾಂಶ ಬರುವುದಕ್ಕೆ ಮೊದಲೇ ಕ್ವಾರಂಟೈನ್ ನಲ್ಲಿ ಇರುವವರನ್ನು ಮನೆಗೆ ಕಳುಹಿಸಿದ್ದು.

    5. ರ್‍ಯಾಂಡಮ್ ಟೆಸ್ಟ್ ನಿಲ್ಲಿಸಿದ್ದು: 12 ದಿನಕ್ಕೆ ಇದ್ದ ನಿಗಾ ಅವಧಿಯನ್ನು 10 ದಿನಗಳಿಗೆ ಇಳಿಸಿದೆ. ಅಲ್ಲದೇ ರೋಗ ಲಕ್ಷಣ ಇಲ್ಲದ ಸೋಂಂಕಿತರನ್ನು ಏಳೇ ದಿನಕ್ಕೆ ಮನೆಗೆ ಕಳುಹಿಸಲಾಗುತ್ತಿದೆ. ಆದರೆ ನೆಗೆಟಿವ್ ಇದ್ದವರು ಕೂಡ ರೋಗ ಹಬ್ಬುವ ಸಾಧ್ಯತೆ ಇದ್ದರೂ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಸೋಂಕು ಹೆಚ್ಚಿರುವ ಕಂಟೈನ್ಮೆಟ್ ವಲಯಗಳಲ್ಲಿ ರ್‍ಯಾಂಡಮ್ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ರೋಗ ಲಕ್ಷಣವೇ ಇಲ್ಲದ ಬಹಳಷ್ಟು ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಆದರೆ ಇದೀಗ ರ್‍ಯಾಂಡಮ್ ಪರೀಕ್ಷೆಯನ್ನು ತ್ಕಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    6. ಏರಿಯಾ ಸೀಲ್‍ಡೌನ್ ನಿಯಮಗಳು ಸರಿಯಾಗಿ ಪಾಲನೆ ಆಗದೇ ಇರುವುದರ ಜೊತೆಗೆ ತಜ್ಞರ ಸಲಹೆಗಳಿಗೆ ಹೆಚ್ಚು ಒತ್ತು ಕೊಡದೇ ಇರದ ಕಾರಣ ಸೋಂಕು ಹೆಚ್ಚಾಗಿದೆ.

    7. ವಿಷಮಶೀತ ಜ್ವರ ಮತ್ತು ಉಸಿರಾಟದ ಪ್ರಕರಣಗಳು ಜಾಸ್ತಿ ಆಗುತ್ತಿದ್ದರೂ ಬೆಂಗಳೂರಿನಲ್ಲಿ ದ್ವಿತೀಯ ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡದೇ ಇರುವುದು

    8 ಸರ್ಕಾರದ ಎಡವಟ್ಟು ತೀರ್ಮಾನಗಳು:
    * ಹೊರ ರಾಜ್ಯದಿಂದ ಬಂದತ್ತವರಿಗೆ ಕ್ವಾರಂಟೈನ್ ಮಾಡದೇ ಹೊಂ ಕ್ವಾರಂಟೈನ್ ಸೂಚಿಸಿದ್ದು
    * ಸ್ಥಳೀಯ ಮಟ್ಟದಲ್ಲಿ ಟೆಸ್ಟಿಂಗ್ ನಿಲ್ಲಿಸಿದ್ದು
    * ಆರಂಭದಲ್ಲಿ ಮಹಾನಗರಿ ಬಗ್ಗೆ ನಿರ್ಲಕ್ಷ್ಯ ಮಾಡಿದ್ದು
    * ಕೊರೊನಾ ವಾರಿಯರ್ಸ್‍ಗೆ ಸರಿಯಾಗಿ ಟೆಸ್ಟ್ ಮಾಡದೇ ಇರೋದು
    * ಐಎಲ್ ಐ, ಸ್ಯಾರಿ ಕೇಸ್ ಹೆಚ್ಚಳ
    * ಟೆಸ್ಟಿಂಗ್ ನಲ್ಲಿ ನಿಧಾನ ಮಾಡಿದ್ದು, ಬೆಂಗಳೂರು ಟೆಸ್ಟಿಂಗ್ ಸ್ಟಾಪ್ ಮಾಡಿ ಹೊರ ರಾಜ್ಯದ ಟೆಸ್ಟಿಂಗ್ ಮಾಡಲು ಮುಂದಾಗಿದ್ದು
    * ಸೆಕೆಂಡರಿ ಕಾಂಟ್ಯಾಕ್ಟ್ ಗಳನ್ನ ನಿರ್ಲಕ್ಷ್ಯ ಮಾಡಿದ್ದು
    * ಆಸ್ಪತ್ರೆಯಲ್ಲಿ ನಿಗಾ ಅವಧಿ ಕಡಿಮೆ ಮಾಡಿದ್ದು

    ಹೀಗೆ ಸರ್ಕಾರದ ಎಡವಟ್ಟು ಕಾರಣಗಳಿಂದ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನಲಾಗಿದೆ. ಸದ್ಯಕ್ಕೆ ಸರ್ಕಾರ ಪ್ರತಿ ಭಾನುವಾರ ಕರ್ಫ್ಯೂವನ್ನು ಜಾರಿ ಮಾಡಿದೆ.

  • ಸರ್ಕಾರದ ನಿರ್ಧಾರದಿಂದ 2,000 ಕುಟುಂಬಗಳು ಬೀದಿಗೆ ಬರುವ ದುಸ್ಥಿತಿ

    ಸರ್ಕಾರದ ನಿರ್ಧಾರದಿಂದ 2,000 ಕುಟುಂಬಗಳು ಬೀದಿಗೆ ಬರುವ ದುಸ್ಥಿತಿ

    – ಸರ್ಕಾರದ ನಿರ್ಧಾರ ಖಂಡಿಸಿ ಕಂಕನವಾಡಿ ಪಟ್ಟಣ ಬಂದ್

    ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ.

    ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು ನಿರ್ಧಾರದಿಂದ ಬೀದಿಗೆ ಬಂದು ನಿಲ್ಲುವ ಸ್ಥಿತಿ ಬಂದೊದಗಿದೆ. ಕಳೆದ 40 ವರ್ಷಗಳಿಂದ ಕಂಕನವಾಡಿ ಗ್ರಾಮದ ಗೈರಾಣು ಜಮೀನಿನಲ್ಲಿ ವಾಸವಿದ್ದ 2,000 ಕುಟುಂಬಗಳಿಗೆ ಸರ್ಕಾರನೇ ಮೂಲಭೂತ ಸೌಕರ್ಯಗಳನ್ನ ನೀಡಿ ಆಶ್ರಯ ಯೋಜನೆಯಲ್ಲೂ ಮನೆ ನಿರ್ಮಿಸಿ ಕೊಟ್ಟಿದೆ.

    ಆದರೆ ಈಗ ಏಕಾಏಕಿ ಗೈರಾಣು ಜಮೀನನ್ನ ಖಾಲಿ ಮಾಡುವಂತೆ ಆದೇಶ ಹೊರಡಿಸಿದೆ. ಇದರಿಂದ ಮನೆಗಳನ್ನು ಈಗ ಖಾಲಿ ಮಾಡಿಸುವಂತೆ ರಾಯಬಾಗ ತಾಲೂಕಾಡಳಿತ ಸೂಚನೆ ನೀಡಿರುವ ಕಾರಣ ಈಗ ಕಂಕನವಾಡಿ ಪಟ್ಟಣದ ಶೇ.75 ರಷ್ಟು ಕುಟುಂಬಗಳು ಬೀದಿಗೆ ಬರುವ ಸ್ಥಿತಿಯಲ್ಲಿವೆ. ರಾಯಬಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರು ಈಗ ಸರ್ಕಾರಕ್ಕೆ ಈ ಬಗ್ಗೆ ಯಾವುದೇ ಪ್ರಶ್ನೆ ಕೇಳದ ಕಾರಣ ಸರ್ಕಾರ ಜಮೀನನ್ನು ಖಾಲಿ ಮಾಡಿಸಲು ಮುಂದಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಅಲ್ಲದೇ ಸರ್ಕಾರದ ನೀತಿಯನ್ನು ಖಂಡಿಸಿ ಈಡಿ ಪಟ್ಟಣವನ್ನೇ ಬಂದ ಮಾಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತಕ್ಷಣವೇ ಅಕ್ರಮ ಸಕ್ರಮದಡಿ ಗೈರಾಣ ಜಮೀನನಲ್ಲೇ ನಮಗೆ ವಾಸವಿರಲು ಅವಕಾಶ ಮಾಡಿಕೊಡುವಂತೆ ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ ಅವರಿಗೆ ಮನವಿ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ 40 ವರ್ಷಗಳ ಕಾಲ ಈ ಗ್ರಾಮಸ್ಥರಿಗೆ ಸರ್ಕಾರ ಎಲ್ಲ ಸೌಲಭ್ಯಗಳನ್ನ ಕೊಟ್ಟು ಈಗ ಏಕಾಏಕಿ ಮನೆಗಳನ್ನು ಖಾಲಿ ಮಾಡಿಸಲು ಮುಂದಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

  • ಜಿಂದಾಲ್ ಕಾರ್ಖಾನೆಯನ್ನ ಲಾಕ್ ಮಾಡದಿದ್ರೆ ದಂಗೆ- ಸರ್ಕಾರಕ್ಕೆ ಬಳ್ಳಾರಿ ಜನರ ವಾರ್ನಿಂಗ್

    ಜಿಂದಾಲ್ ಕಾರ್ಖಾನೆಯನ್ನ ಲಾಕ್ ಮಾಡದಿದ್ರೆ ದಂಗೆ- ಸರ್ಕಾರಕ್ಕೆ ಬಳ್ಳಾರಿ ಜನರ ವಾರ್ನಿಂಗ್

    ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಲು ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ.

    ಕಳೆದ ಮೈತ್ರಿ ಸರ್ಕಾರದಲ್ಲಿ ಜಿಂದಾಲ್‍ಗೆ 3,600 ಎಕರೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸಹ ನೀಡಿದ್ದರು. ಆದರೆ ಈ ವರ್ಷ ಜಿಂದಾಲ್‍ನಲ್ಲಿ ಕೊರೊನಾ ಹೆಚ್ಚಾಗುತ್ತಿದ್ದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಕೊರೊನಾ ತಡೆ ನಿಯಮಗಳನ್ನ ಗಾಳಿಗೆ ತೂರಿರುವ ಜಿಂದಾಲ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಂದಾಲ್ ಮುಂದೆ ಧರಣಿ ಕೂರುವುದಾಗಿ ಹೋರಾಟಗಾರರು ಎಚ್ಚರಿಸಿದ್ದಾರೆ.

    ಬಳ್ಳಾರಿ ಕೂಡ ಬಹುದೊಡ್ಡ ಕೊರೊನಾ ಹಾಟ್‍ಸ್ಪಾಟ್ ಆಗುತ್ತಿದೆ. ಯಾಕಂದರೆ ಬಳ್ಳಾರಿ ಜಿಲ್ಲೆಯಲ್ಲಿ 610ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. ಅದರಲ್ಲಿ ಜಿಂದಾಲ್‍ನಲ್ಲಿಯೇ 350ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಜಿಂದಾಲ್‍ನಲ್ಲಿ ಕೇವಲ 21 ದಿನಗಳಲ್ಲೇ 356ಕ್ಕೂ ಹೆಚ್ಚು ಪ್ರಕರಣ ಬಂದಿವೆ. ಅಷ್ಟೇ ಅಲ್ಲದೇ ಜಿಂದಾಲ್‍ನಲ್ಲಿ ಸೋಂಕು ಹರಡುವ ಪ್ರಮಾಣ ಶೇ. 15.70 ರಷ್ಟಿದೆ. ಹೀಗಿದ್ದರೂ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನ ಜಿಂದಾಲ್ ಪಾಲಿಸುತ್ತಿಲ್ಲ ಎಂದು ಸ್ಥಳೀಯ ಹೋರಾಟಗಾರ ಹೇಳಿದರು.

    ಜೊತೆಗೆ ಜಿಂದಾಲ್ ಬಗ್ಗೆ ಮೃದು ಧೋರಣೆ ತಾಳಿರುವ ಉಸ್ತುವಾರಿ ಸಚಿವ ಅನಂದ್ ಸಿಂಗ್ ರಾಜಿನಾಮೆಗೆ ಸಹ ಒತ್ತಾಯಿಸಿದ್ದರು. ಅಲ್ಲದೇ ಕ್ಷಣಕ್ಷಣಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಜಿಂದಾಲ್ ಕಾರ್ಖಾನೆಯಿಂದಾಗಿ ಇಡೀ ಬಳ್ಳಾರಿ ಜನ ಆತಂಕಗೊಂಡಿದ್ದಾರೆ. ಜಿಂದಾಲ್‍ಗೆ ಲಾಕ್‍ಡೌನ್ ಮಾದರಿಯ ನಿಯಮ ಹೇರಿ ಕಾರ್ಖಾನೆ ಒಳಗಿನಿಂದ ಯಾರು ಬರದಂತೆ ನೋಡಿಕೊಳ್ಳಲಾಗುವುದು ಅಂತ ಜಿಲ್ಲಾಡಳಿತ ಹೇಳಿತ್ತು. ಆದರೆ ಅದಕ್ಕೂ ಕ್ಯಾರೇ ಎನ್ನದ ಜಿಂದಾಲ್, ಒಳ, ಹೊರ ಹೋಗುವ ಪ್ರಕ್ರಿಯೆ ರಾಜಾರೋಶವಾಗಿಯೇ ನಡೆಯುತ್ತಿದೆ. ಈಗಲಾದರೂ ಸರ್ಕಾರ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೇ ನಾವೇ ಜಿಂದಾಲ್ ಮುಂದೇ ಧರಣಿ ನಡೆಸೋದಾಗಿ ಸ್ಥಳೀಯ ಹೋರಾಟಗಾರರು ಎಚ್ಚರಿಸಿದ್ದಾರೆ.

    ಜಿಂದಾಲ್ ಕಾರ್ಖಾನೆಯಲ್ಲಿ ಕೇವಲ 21 ದಿನಗಳಲ್ಲಿ 356ಕ್ಕೂ ಹೆಚ್ಚು ಕೊರೊನಾ ಪ್ರಕರಣ ಬಂದಿದ್ದರೂ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಸ್ಥಳೀಯ ಹೋರಾಟಗಾರು ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

  • ಕೊರೊನಾ ಹೆಸರಿನಲ್ಲಿ ಸರ್ಕಾರದಿಂದ ಲೂಟಿ: ಎಚ್.ಡಿ.ರೇವಣ್ಣ

    ಕೊರೊನಾ ಹೆಸರಿನಲ್ಲಿ ಸರ್ಕಾರದಿಂದ ಲೂಟಿ: ಎಚ್.ಡಿ.ರೇವಣ್ಣ

    – ಹಾಸನ ಜನರು ದಂಗೆ ಎದ್ರೆ ಸರ್ಕಾರ ಉಳಿಯಲ್ಲ

    ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಳಿಯ ಎಂಜಿನಿಯರ್ ಅವರನ್ನು ಹುಬ್ಬಳಿಯಲ್ಲೇ ಮುಂದುವರಿಸಿದ್ದೆ, ಜೊತೆಗೆ ಬಡ್ತಿಯನ್ನೂ ಕೊಡಿಸಿದ್ದೆ. ಆದರೆ ಈಗ ಸಿಎಂ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ ಎಲ್ಲಾ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ. ಬಿ.ಎಸ್.ಯಡಿಯೂರಪ್ಪ ಅವರು ಏನ್ ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ. ಬಿಜೆಪಿ ಲೂಟಿಕೋರರ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

    ಮೊಸಳೆ ಹೊಸಳ್ಳಿ ಎಂಜಿನಿಯರಿಂಗ್ ಕಾಲೇಜು ಹಾಸನಕ್ಕೆ ಸ್ಥಳಾಂತರಿಸಲು ಸರ್ಕಾರ ಆದೇಶ ನೀಡಿದೆ. ಕಾಲೇಜು ಮುಚ್ಚಲ್ಲಾ ಎಂದು ವಿಧಾನಸಭೆಯಲ್ಲಿ ಸಿಎಂ ಉತ್ತರ ಕೊಟ್ಟಿದ್ದಾರೆ. ಅದರಂತೆ ನಡೆಯಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಕೂರುತ್ತೇವೆ. ಸಿಎಂ ವಿರುದ್ದ ಪ್ರಿವಿಲೇಜ್ ಕಮಿಟಿಗೆ ದೂರು ಸಲ್ಲಿಸುತ್ತೇನೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಒಬ್ಬರ ವರ್ಗಾವಣೆಗೆ 50 ಲಕ್ಷ ಪಡೆದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳಿಗೆ ಬಿಎಸ್‍ವೈ ಸರ್ಕಾರದಲ್ಲಿ ಸ್ಥಾನ ಇಲ್ಲ. ಅಷ್ಟೇ ಅಲ್ಲದೆ ಬಿಜೆಪಿಯವರು ಅಕೌಂಟ್ ಇಲ್ಲದಿರುವ ಹಣವನ್ನ ಹೂಡಿಕೆ ಮಾಡಲು ಕೈಗಾರಿಕೆಗೆ ಮುಕ್ತ ಅವಕಾಶ ನೀಡಿದ್ದಾರೆ ಎಂದು ಗುಡುಗಿದರು.

  • SSLC ಪರೀಕ್ಷೆ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್‍ಡಿಕೆ ಆಗ್ರಹ

    SSLC ಪರೀಕ್ಷೆ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್‍ಡಿಕೆ ಆಗ್ರಹ

    – ಅವಘಡ ಸಂಭವಿಸಿದ್ರೆ ಶಿಕ್ಷಣ ಸಚಿವರು, ರಾಜ್ಯ ಸರ್ಕಾರವೇ ಹೊಣೆ
    – 24 ಲಕ್ಷ ಮಂದಿಯ ಜೀವ, ಭವಿಷ್ಯದೊಂದಿಗೆ ಚೆಲ್ಲಾಟ

    ಬೆಂಗಳೂರು: ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಕೊರೊನಾದಿಂದ ಮೂರು ತಿಂಗಳಿನಿಂದ ಮುಂದೂಡಿಕೆಯಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿದೆ. ಇದಕ್ಕೆ ಸರ್ಕಾರ ಸಕಲ ವ್ಯವಸ್ಥೆ ಕೂಡ ಮಾಡಿಕೊಂಡಿದೆ. ಆದರೆ ಈ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬೇಕಾ? ಬೇಡ್ವಾ ಎಂಬ ವ್ಯಾಪಕ ಚರ್ಚೆ ಕೂಡ ನಡೆದಿದೆ. ಇದೀಗ ಕುಮಾರಸ್ವಾಮಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಬೇಕು ಎಂಬ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ” ಎಂದು ಸೂಚನೆ ಕೊಟ್ಟಿದ್ದಾರೆ.

    “ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿದೆ. ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ” ಎಂದಿದ್ದಾರೆ.

    ಕೊರೊನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

    “ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು” ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಎಚ್ಚರಿಕೆ ಕೊಟ್ಟಿದ್ದಾರೆ.

  • ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲ್ಲ – ಸರ್ಕಾರ ಹೇಳೋದೊಂದು, ಮಾಡೋದು ಇನ್ನೊಂದು

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲ್ಲ – ಸರ್ಕಾರ ಹೇಳೋದೊಂದು, ಮಾಡೋದು ಇನ್ನೊಂದು

    – ಇದು ಪಬ್ಲಿಕ್ ಟಿವಿಯ ಬಿಗ್ ಎಕ್ಸ್ ಪೋಸ್

    ಬೆಂಗಳೂರು: ಕೊರೊನಾ ಬಂದರೆ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲ್ಲ. ಕೊರೊನಾ ವೈರಸ್ ವಿಚಾರದಲ್ಲಿ ಸರ್ಕಾರ ಸಿಲಿಕಾನ್ ಸಿಟಿ ಮಂದಿಯ ಕಣ್ಣಿಗೆ ಮಣ್ಣೆರಚಿದ ಅಸಲಿ ಕಥೆಯನ್ನು ಇಂದು ಪಬ್ಲಿಕ್ ಟಿವಿ ಬಯಲಿಗೆಳೆದಿದೆ.

    ಹೌದು. ಕೊರೊನಾಗೆ ಸರ್ಕಾರ ಬಿಡುಗಡೆ ಮಾಡಿದ ಖಾಸಗಿ ಆಸ್ಪತ್ರೆಯಲ್ಲಿ ಟ್ರೀಟ್ ಮೆಂಟ್ ಸಿಗಲ್ಲ. ಸರ್ಕಾರಿ ಆಸ್ಪತ್ರೆ ಬೆಡ್ ಫುಲ್ ಆಗಿದ್ದು, ಇನ್ನು ಸರ್ಕಾರ ಬಿಡುಗಡೆ ಮಾಡಿದ ಖಾಸಗಿ ಆಸ್ಪತ್ರೆಗಳಲ್ಲಿ ಟ್ರೀಟ್ ಮೆಂಟ್ ಸಿಗುತ್ತಾ ಅನ್ನೋ ಪ್ರಶ್ನೆ ಎದ್ದಿದೆ.

    ಬೆಂಗಳೂರಿನ ಜನ ಸರ್ಕಾರದ ಮಾತನ್ನು ನಂಬಿ ಖಾಸಗಿ ಆಸ್ಪತ್ರೆಗೆ ಹೋದರೆ ಅಷ್ಟೆ. 51 ಖಾಸಗಿ ಆಸ್ಪತ್ರೆಗಳ ಹೆಸರು ಹಾಗೂ ನಂಬರನ್ನು ಸರ್ಕಾರ ಬಿಡುಗಡೆ ಮಾಡಿದೆ. ಆದರೆ 51 ಖಾಸಗಿ ಆಸ್ಪತ್ರೆಯ ದೂರವಾಣಿ ಸಂಖ್ಯೆಯಲ್ಲಿ ಸುಮಾರು 40 ಆಸ್ಪತ್ರೆಗಳ ನಂಬರ್‍ಗೆ ಕಾಲ್ ಕನೆಕ್ಟ್ ಆಗಲ್ಲ, ರಾಂಗ್ ನಂಬರ್ ಅಥವಾ ನಂಬರ್ ನಾಟ್ ಎಕ್ಸಿಸ್ಟ್ ಅನ್ನುವ ಉತ್ತರ ಬರುತ್ತೆ.

    ಪಬ್ಲಿಕ್ ಟಿವಿ ಸತತ ಒಂದು ಗಂಟೆಗಳ ಕಾಲ ಅಷ್ಟು ನಂಬರ್‍ಗೆ ಟ್ರೈ ಮಾಡಿದರೂ ಕಾಲ್ ಕನೆಕ್ಟ್ ಆಗಲೇ ಇಲ್ಲ. ಬದಲಾಗಿ ಸಂಪರ್ಕಕ್ಕೆ ಸಿಕ್ಕಿದ್ದು ಬೆರಳೆಣಿಕೆಯಷ್ಟೇ ಖಾಸಗಿ ಆಸ್ಪತ್ರೆಗಳು ಮಾತ್ರ.

    ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಾ?, ಏನಂದ್ರು ಆಸ್ಪತ್ರೆ ಸಿಬ್ಬಂದಿ…?
    1. ಬಿಎಂಎಸ್ ಆಸ್ಪತ್ರೆ
    ನಮ್ಮಲ್ಲಿ ಐಸೋಲೇಷನ್ ವಾರ್ಡ್ ಎಲ್ಲ ರೆಡಿಯಾಗಿಲ್ಲ, ಸರ್ಕಾರ ಕೊಟ್ಟಿದ್ದಾರೆ. ಅವರನ್ನೇ ಕೇಳಬೇಕು ನಾವು ಕೋವಿಡ್ ಪೇಷೆಂಟ್ ಗೆ ಟ್ರೀಟ್ ಮೆಂಟ್ ಕೊಡಲ್ಲ.

    2. ಸಾಗರ್ ಆಸ್ಪತ್ರೆ
    ಸರ್ಕಾರ ಹೆಸರು ಕೊಟ್ಟಿದ್ದಾರೆ. ಆದರೆ ನಾವು ಕೋವಿಡ್ ರೋಗಿಗಳಿಗೆ ಟ್ರೀಟ್ ಮೆಂಟ್ ಕೊಡಲ್ಲ. ಸದ್ಯಕ್ಕೆ ಯಾವ ಪೇಷೆಂಟ್ ಇಲ್ಲ. ನೋಡೋಣ. ರೆಡಿಯಾದ ಮೇಲೆ ಬೇಕಾದರೆ ಹೇಳ್ತೀವಿ. ಆದರೆ ಈಗ ಯಾರಿಗೂ ಕೊಡಲ್ಲ.

    3. ವೇಗ್ ಹಾಸ್ಪಿಟಲ್
    ನಮ್ಮಲ್ಲಿ ಇವತ್ತು ಇನ್ನೂ ಡಿಸೈಡ್ ಆಗಬೇಕು. ಹೆಚ್ಚು ಬೆಡ್ ಎಲ್ಲಾ ಇಲ್ಲ. ಐಸಿಯು ಅಂತೂ ಒಂದೂ ಇಲ್ಲ. ಜನರಲ್ ವಾರ್ಡ್ ಗೆ ಹತ್ತು ಸಾವಿರ ಪ್ರತಿದಿನ, ಸಂಜೆ ಕಾಲ್ ಮಾಡಿ ನೋಡೋಣ. ನಾವಿನ್ನು ಡಿಸೈಡ್ ಮಾಡಿಲ್ಲ.

    4. ಆಕ್ಸ್ ಫರ್ಡ್ ಮೆಡಿಕಲ್ ಕಾಲೇಜ್
    ಮೇಡಂ ನಾನು ಕೆಲಸ ಬಿಟ್ಟು ತುಂಬಾ ಟೈಂ ಆಗಿದೆ. ಬೇರೆ ಆಸ್ಪತ್ರೆಯಲ್ಲಿ ಇದ್ದೇನೆ. ನನ್ನ ನಂಬರ್ ಲಿಸ್ಟ್ ನಲ್ಲಿ ಯಾಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ನಂಗೂ ತುಂಬಾ ಫೋನ್ ಬರ್ತಿದೆ. ನಾನೀಗ ಆ ಆಸ್ಪತ್ರೆಯಲ್ಲಿಲ್ಲ ಎಂದು ಪಬ್ಲಿಕ್ ಟಿವಿ ಪ್ರತಿನಿಧಿ ಬಳಿ ಹೇಳಿದ್ದಾರೆ.

    5. ಐ ಪೌಂಡೇಷನ್
    ನೋಡಿ ನಾವು ಕೊರೊನಾಗೆ ಟ್ರೀಟ್ಮೆಂಟ್ ಕೊಡಲ್ಲ. ನಮ್ ಹೆಸರು ಇಲ್ಲಿ ಯಾಕೆ ಕೊಟ್ಟಿದ್ದಾರೋ ನೀವು ಹೋಗಿ ಸರ್ಕಾರನಾ ಕೇಳಿ. ನಮ್ಮಲ್ಲಿ ಕೊರೊನಾಗೆ ಟ್ರೀಟ್ ಮೆಂಟ್ ಕೊಡಲ್ಲ.

    ಒಟ್ಟಿನಲ್ಲಿ ಸರ್ಕಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಮಹಾಮಾರಿ ಕೊರೊನಾಗೆ ಚಿಕಿತ್ಸೆ ಸಿಗುತ್ತಿಲ್ಲ. ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಮೂಲಕ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡ್ತಿದೆಯಾ ಅನ್ನೋ ಅನುಮಾನ ಮೂಡುತ್ತಿದೆ.

  • ಬೆಂಗ್ಳೂರು ನಿವಾಸಿಗಳು ಬದುಕುಳಿಯಬೇಕಾದ್ರೆ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ: ಎಚ್‍ಡಿಕೆ

    ಬೆಂಗ್ಳೂರು ನಿವಾಸಿಗಳು ಬದುಕುಳಿಯಬೇಕಾದ್ರೆ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ: ಎಚ್‍ಡಿಕೆ

    – ಪ್ಯಾಕೇಜ್ ಘೋಷಿಸಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸ್ಬಾರ್ದು

    ಬೆಂಗಳೂರು: ಕೆಲವೇ ಪ್ರದೇಶಗಳಲ್ಲಿ ಸೀಲ್‍ಡೌನ್, ಲಾಕ್‍ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ ಎಂದು ಕೆಲ ಏರಿಯಾಗಳ ಸೀಲ್‍ಡೌನ್‍ಗೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್‍ಡೌನ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮೊದಲಿಗೆ “ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್‍ಡೌನ್, ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ” ಎಂದು ಸರ್ಕಾರದ ನಿರ್ಧಾರ ವಿರುದ್ಧ ಆಕ್ರೋಶಕೊಂಡು ಟ್ವೀಟ್ ಮಾಡಿದ್ದಾರೆ.

    “ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ” ಎಂದಿದ್ದಾರೆ.

    “ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು” ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

  • ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಸಿನಿಮಾ, ಟಿವಿ ಚಿತ್ರೀಕರಣಕ್ಕೆ ಅವಕಾಶ

    ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಸಿನಿಮಾ, ಟಿವಿ ಚಿತ್ರೀಕರಣಕ್ಕೆ ಅವಕಾಶ

    – ಫೋಸ್ಟ್ ಪ್ರೊಡಕ್ಷನ್‍ಗೂ ಅವಕಾಶ ನೀಡಿದ ಸರ್ಕಾರ

    ಬೆಂಗಳೂರು: ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಸಿನಿಮಾ ಶೂಟಿಂಗ್ ಮತ್ತು ಟಿವಿ ಕಾರ್ಯಕ್ರಮ ಹಾಗೂ ಧಾರವಾಹಿ ಶೂಟಿಂಗ್ ಮಾಡಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

    ಈ ಹಿಂದೆ ದೇಶದಲ್ಲಿ ಕೊರೊನಾ ವೈರಸ್ ಭೀತಿ ಜಾಸ್ತಿಯಾದ ಕಾರಣ ದೇಶವನ್ನೇ ಲಾಕ್‍ಡೌನ್ ಮಾಡಲಾಗಿತ್ತು. ಹೀಗಾಗಿ ಶೂಟಿಂಗ್ ಕೆಸಲವೆಲ್ಲ ನಿಂತು ಹೋಗಿ ನಟ-ನಟಿಯರು ಮನೆಯಲ್ಲೇ ಇದ್ದರು. ನಂತರ ಲಾಕ್‍ಡೌನ್ ಸಡಿಲಿಕೆ ಮಾಡಿದರೂ ಚಿತ್ರೀಕರಣ ಮಾಡಲು ಅನುಮತಿ ನೀಡಿರಲಿಲ್ಲ. ಸ್ವಲ್ಪ ದಿನ ಬಿಟ್ಟು ಒಳಾಂಗಣ ಶೂಟಿಂಗ್‍ಗೆ ಅನುಮತಿ ನೀಡಲಾಗಿತ್ತು.

    ಈಗ ಸಂಪೂರ್ಣವಾಗಿ ಶೂಟಿಂಗ್ ಮಾಡಲು ಅನುಮತಿ ನೀಡಿರುವ ಸರ್ಕಾರ, ಫೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೂ ಅವಕಾಶ ನೀಡಿ ಆದೇಶ ಹೊರಡಿಸಿದೆ. ಲಾಕ್‍ಡೌನ್ ಕಾರಣದಿಂದ ಈಗಾಗಲೇ ಅರ್ಧದಲ್ಲಿಯೇ ಸ್ಥಗಿತಗೊಂಡ ಎಲ್ಲ ಚಲನಚಿತ್ರ ಹಾಗೂ ಟಿವಿ ಕೆಲಸಗಳು ಮುಂದುವರಿಸಲು ಅನುಮತಿ ನೀಡಿದೆ. ಜೊತೆಗೆ ಚಿತ್ರೀಕರಣ ಪೂರ್ಣಗೊಳಿಸಿದ ನಂತರ ಫೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿಕೊಳ್ಳಲು ತಿಳಿಸಿದೆ.

    ಸಿಸಿಮಾ ಚಿತ್ರೀರಕಣವಾಗಲಿ ಹಾಗೂ ಟಿವಿ ಕಾರ್ಯಕ್ರಮದ ಶೂಟಿಂಗ್ ಆಗಲಿ, ಅಲ್ಲಿ ಕೋವಿಡ್-19 ಸಂಬಂಧ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಡಿಸಿರುವ ಪ್ರಮಾಣಿಕ ಕಾರ್ಯವಿಧಾನವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ. ಈ ಷರತ್ತುಗಳನ್ನು ಗಮನದಲ್ಲಿ ಇಟ್ಟುಕೊಂಡು ಶೂಟಿಂಗ್ ಆರಂಭ ಮಾಡಲು ಸರ್ಕಾರ ತಿಳಿಸಿದೆ.

    ಶೂಟಿಂಗ್ ಕಾರ್ಯಕ್ರಮಗಳು ನಿಂತು ಹೋದ ಬಳಿಕ ಅಲ್ಲಿ ಕೆಲಸ ಮಾಡುವ ನೌಕರರ ವರ್ಗ ಸಖತ್ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕೆಲ ನಟ-ನಟಿಯರು ಅವರಿಗೆ ಸಹಾಯ ಮಾಡಿದ್ದರು. ಜೊತೆಗೆ ಹಲವು ಬಾರಿ ಶೂಟಿಂಗ್ ಆರಂಭಿಸುವಂತೆ ಕಾರ್ಮಿಕರು ಸರ್ಕಾರಕ್ಕೆ ಮನವಿ ಕೂಡ ಸಲ್ಲಿಸಿದ್ದರು. ಈಗ ಮತ್ತೆ ಶೂಟಿಂಗ್ ಆರಂಭವಾಗಿರುವುದಕ್ಕೆ ಕಾರ್ಮಿಕ ವರ್ಗ ಸಂತಸ ವ್ಯಕ್ತಪಡಿಸಿದೆ.