Tag: Governor Shaktikanta Das

  • ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು

    ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು

    ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್‌ನ (Reserve Bank of India) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ನ.26) ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ

    ಕಾರ್ಯನಿಮಿತ್ತವಾಗಿ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೋಮವಾರ (ನ.25) ಚೆನ್ನೈಗೆ ಭೇಟಿ ನೀಡಿದ್ದರು. ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಇಂದು (ನ.26) ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ನಿನ್ನೆ ಎದೆಯುರಿಯಿಂದ ಬಳಲಿದ ಪರಿಣಾಮ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದ್ದು. ಅವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.ಇದನ್ನೂ ಓದಿ: ಕಾರಿನ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ತುಂಡು – ನಮ್ಮ ಮೆಟ್ರೋ ವಿರುದ್ಧ ಮಾಲೀಕನ ಆಕ್ರೋಶ

  • ರೆಪೋ ದರ ಇಳಿಕೆ – ಗೃಹ, ವಾಹನ ಸಾಲ ಮತ್ತಷ್ಟು ಅಗ್ಗ

    ರೆಪೋ ದರ ಇಳಿಕೆ – ಗೃಹ, ವಾಹನ ಸಾಲ ಮತ್ತಷ್ಟು ಅಗ್ಗ

    ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆ ರೆಪೋ ದರ ಮತ್ತೆ ಇಳಿಕೆ ಮಾಡಿದೆ.

    ರೆಪೋದ ದರದಲ್ಲಿ 35 ಬೇಸಿಸ್ ಪಾಯಿಂಟ್ ಇಳಿಸಿದ್ದು ಶೇ.5.40 ಇಳಿಕೆ ಮಾಡಿದೆ. ಇದರಿಂದಾಗಿ ಗೃಹ ಸಾಲ ಹಾಗೂ ವಾಹನ ಸಾಲದ ಮೇಲಿನ ಬಡ್ಡಿ ಕಡಿಮೆಯಾಗಲಿದೆ. ತಿಂಗಳ ಇಎಂಐ ಕಡಿಮೆಯಾಗಲಿದ್ದು, ಗ್ರಾಹಕರು ನಿಟ್ಟುಸಿರು ಬಿಡಲಿದ್ದಾರೆ.

    ಮೊದಲು ರೆಪೋ ದರ ಶೇಕಡಾ 5.75 ನಷ್ಟಿತ್ತು. ಆರ್‌ಬಿಐ ರೆಪೋ ದರ ಇಳಿಕೆ ಮಾಡುತ್ತಿದ್ದಂತೆ ಬ್ಯಾಂಕ್‍ಗಳಿಗೆ ಬಿಸಿ ತಟ್ಟಲಿದೆ. ಬ್ಯಾಂಕ್‍ಗಳು ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಬೇಕಾಗುತ್ತದೆ. ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಗೆ ಚೈತನ್ಯ ನೀಡಲು ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಇಳಿಕೆ ಮಾಡಿದೆ.

    ಆರ್‌ಬಿಐನ ನಾಲ್ಕು ಮಂದಿ ಸದಸ್ಯರಾದ ರವೀಂದ್ರ ದೋಲಾಕಿಯ, ಮೈಕೆಲ್ ಪಾತ್ರ, ಬಿ.ಪಿ.ಕನುಂಗೂ ಹಾಗೂ ಗವರ್ನರ್ ಶಕ್ತಿಕಾಂತ್ ದಾಸ್ ಅವರು ರೆಪೋದ ದರದಲ್ಲಿ 35 ಬೇಸಿಸ್ ಪಾಯಿಂಟ್ ಇಳಿಕೆಗೆ ಬೆಂಬಲಿಸಿದ್ದರು. ಆದರೆ ಪಾಮಿ ದುವಾ, ಚೇತನ್ ಘಾಟ್ಗೆ ಅವರು ರೆಪೋದ ದರದಲ್ಲಿ 25 ಬೇಸಿಸ್ ಪಾಯಿಂಟ್ ಇಳಿಕೆಗೆ ಬೆಂಬಲಿಸಿದ್ದರು. ಹೀಗಾಗಿ ಪ್ರಸ್ತಾವನೆಗೆ 4:2 ಮತಗಳು ಬಿದ್ದ ಹಿನ್ನೆಲೆಯಲ್ಲಿ ರೆಪೋ ದರ ಇಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

    ರೆಪೋ ದರ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಿಂದ ಪಡೆಯುವ ಅಲ್ಪಾವಧಿ ಸಾಲನ ಮೇಲಿನ ಬಡ್ಡಿದರಕ್ಕೆ ರೆಪೋ ದರ ಎಂದು ಕರೆಯಲಾಗುತ್ತದೆ. ರೆಪೋ ದರ ಕಡೆಮೆಯಾದರೆ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು.

    ರಿವರ್ಸ್ ರೆಪೋ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೋ ರೇಟ್. ಆರ್‍ಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವಸ್ರ್ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‍ಬಿಐಗೆ ವರ್ಗಾಯಿಸುತ್ತದೆ.