Tag: Governor Thawar Chand Gehlot

  • ಬಿಬಿಎಂಪಿ ವಿಭಜಿಸುವ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ – ಕಾಯ್ದೆಯಲ್ಲಿ ಏನಿದೆ?

    ಬಿಬಿಎಂಪಿ ವಿಭಜಿಸುವ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ – ಕಾಯ್ದೆಯಲ್ಲಿ ಏನಿದೆ?

    ಬೆಂಗಳೂರು: ಬಿಬಿಎಂಪಿ (BBMP) 7 ನಗರ ಪಾಲಿಕೆಗಳಾಗಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು (Greater Bengaluru) ವಿಧೇಯಕಕ್ಕೆ ರಾಜ್ಯಪಾಲರ (Governer) ಅನುಮೋದನೆ ಸಿಕ್ಕಿದೆ. ಈ ಕುರಿತು ರಾಜ್ಯ ಗೆಜೆಟ್ ಪ್ರಕಟಗೊಂಡಿದೆ.ಇದನ್ನೂ ಓದಿ: ಅಚಾನಕ್ ಗಡಿದಾಟಿದ BSF ಯೋಧನನ್ನು ಬಂಧಿಸಿದ ಪಾಕ್‌

    ಬಜೆಟ್ ಅಧಿವೇಶನದ (Budget Session) ಉಭಯ ಸದನಗಳಲ್ಲಿ ಸುದೀರ್ಘ ಚರ್ಚೆ ಬಳಿಕ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಅಂಗೀಕಾರ ಆಗಿತ್ತು. ಮಾ.17ರಂದು ರಾಜ್ಯಪಾಲರ ಅಂಕಿತಕ್ಕಾಗಿ ರಾಜಭವನಕ್ಕೆ ಕಳುಹಿಸಲಾಗಿತ್ತು. ಆದರೆ ಹೆಚ್ಚಿನ ವಿವರಣೆ ಕೋರಿ ವಿಧೇಯಕವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳಿಹಿಸಿದ್ದರು. ಬಳಿಕ ಸರ್ಕಾರ ಸ್ಪಷ್ಟನೆಯೊಂದಿಗೆ ಮತ್ತೆ ವಿಧೇಯಕವನ್ನು ರಾಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ಮತ್ತೆ ಕಳುಹಿಸಿದ್ದ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಪಾಲರ ಅಂಕಿತ ಬೆನ್ನಲ್ಲೇ ರಾಜ್ಯ ಗೆಜೆಟ್ ಪ್ರಕಟಗೊಂಡಿದೆ.

    ಗ್ರೇಟರ್ ಬೆಂಗಳೂರು ಕಾಯ್ದೆಯಲ್ಲಿ ಏನಿದೆ?
    * ಇನ್ಮುಂದೆ ಬಿಬಿಎಂಪಿ ಹೆಸರು ಇರಲ್ಲ. ಅದರ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬರಲಿದೆ.
    * ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಅಧ್ಯಕ್ಷರು. ಜನ ಪ್ರತಿನಿಧಿಗಳನ್ನು, ವಿವಿಧ ಏಜೆನ್ಸಿಯವರನ್ನು ಈ ಪ್ರಾಧಿಕಾರ ಒಳಗೊಳ್ಳಲಾಗಿದೆ.
    * ಪೊಲೀಸರು, ನೀರು ಸರಬರಾಜು, ಸಾರಿಗೆ, ಅಗ್ನಿಶಾಮಕ, ನಗರ ಯೋಜನೆ ಸೇರಿ ಎಲ್ಲರು ಸಮಿತಿ ಸದಸ್ಯರಾಗಿರುತ್ತಾರೆ.
    * ಇದರಡಿ ಬಿಬಿಎಂಪಿಯನ್ನು 7 ನಗರ ಪಾಲಿಕೆಗಳಾಗಿ ವಿಭಜಿಸಲಾಗುತ್ತದೆ. ಎಷ್ಟು ವಾರ್ಡ್ ಅಂತ ಅಂತಿಮವಾಗಿ ಇನ್ನಷ್ಟೇ ತೀರ್ಮಾನ ಆಗಬೇಕಿದೆ.
    * ಪ್ರತೀ ಪಾಲಿಕೆಗೆ 100 ಮೀರದಂತೆ 200ರ ಒಳಗೆ ವಾರ್ಡ್ಗಳ ಹಂಚಿಕೆ.
    * ಮೇಯರ್/ಉಪಮೇಯರ್ ಅವಧಿ ಈಗಿರುವ 1 ವರ್ಷದ ಬದಲು 2.5 ವರ್ಷಕ್ಕೆ ನಿಗದಿ.
    * ಸದಸ್ಯರ ಅಧಿಕಾರವಧಿ 5 ವರ್ಷಕ್ಕೆ ನಿಗದಿ.
    * ಜನಸಂಖ್ಯೆ 10 ಲಕ್ಷಕ್ಕಿಂತ ಕಡಿಮೆ ಇರಬಾರದು, 300 ಕೋಟಿ ಕನಿಷ್ಠ ಆದಾಯ ಇರಬೇಕು.
    * ಪ್ರತಿ ನಗರಪಾಲಿಕೆಗೆ ಬೆಂಗಳೂರಿನ ಹೆಸರಿನಿಂದಲೇ ಶೀರ್ಷಿಕೆ ಇರಬೇಕು. ಉದಾ-ಬೆಂ.ಉತ್ತರ, ಬೆಂ.ದಕ್ಷಿಣ.
    * ಆರು ತಿಂಗಳ ಮೊದಲು ಮೇಯರ್ ವಿರುದ್ಧ ಅವಿಶ್ವಾಸ ತರಲು ಅವಕಾಶ ಇಲ್ಲ.
    * ಶಾಸಕರು ಮತ ಹಾಕಲು ಅದೇ ಪ್ರದೇಶದಲ್ಲಿಯೇ ವಾಸ ಇರಬೇಕು
    * ಚುನಾವಣೆ ವೇಳೆ ಪಾಲಿಕೆಯ ವಾರ್ಡ್‌ಗಳಲ್ಲಿ ಎಲ್ಲಾ ಜಾತಿಗಳಿಗೆ ಮೀಸಲಾತಿ
    * ಸ್ಥಳೀಯ ಸಮಿತಿಗಳು ಶಾಸಕರ ಅಧ್ಯಕ್ಷತೆಯಲ್ಲಿ ರಚನೆಯಾಗಲಿದೆ.ಇದನ್ನೂ ಓದಿ: ಚಾಮರಾಜನಗರ | ಸಂಪುಟ ಸಭೆಯಲ್ಲಿ 3,647 ಕೋಟಿ ವೆಚ್ಚದ ಯೋಜನೆಗಳಿಗೆ ಅಸ್ತು

  • ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಪತ್ರ

    ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಯತ್ನಾಳ್ ಪತ್ರ

    ವಿಜಯಪುರ: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪತ್ರ ಬರೆದಿದ್ದಾರೆ. ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಪತ್ರದ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

    ರಾಜ್ಯಪಾಲರಾದ ಥಾವರ್‌ಚಂದ ಗೆಹ್ಲೋಟ್ (Thawar Chand Gehlot) ಅವರಿಗೆ ಪತ್ರ ಬರೆದು ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಜೂಜಾಟ ಪ್ರಕರಣ – ಐವರು ಅಧಿಕಾರಿಗಳು ಅಮಾನತು

    ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಶಾಸಕ ಯತ್ನಾಳ್ ವಿನಂತಿಸಿದ್ದಾರೆ. ಇದನ್ನೂ ಓದಿ: ವಿದ್ಯಾಕಾಶಿ ಧಾರವಾಡಕ್ಕೆ ವರುಣನ ಸ್ಪರ್ಶ – ಮೊದಲ ಮಳೆಗೆ ಕಾಮಣ್ಣನ ಕಣ್ಣೀರು ಎಂದ ಜನ

  • 10 ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರ ಬಿಟ್ಟುಹೋದ ವಿಮಾನ – ಗೆಹ್ಲೋಟ್‌ ಗರಂ

    10 ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರ ಬಿಟ್ಟುಹೋದ ವಿಮಾನ – ಗೆಹ್ಲೋಟ್‌ ಗರಂ

    ಬೆಂಗಳೂರು: ಹೈದರಾಬಾದ್‌ಗೆ (Hyderabad) ತೆರಳಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ (Thawarchand Gehlot) ಅವರು 10 ನಿಮಿಷ ತಡವಾಗಿ ಏರ್‌ಪೋರ್ಟ್‌ಗೆ (Bengaluru Airport) ಆಗಮಿಸಿದ್ದಕ್ಕೆ, ಅವರನ್ನೇ ವಿಮಾನ ಬಿಟ್ಟು ಹೋಗಿರುವ ಘಟನೆ ನಡೆದಿದೆ.

    ಗುರುವಾರ ಮಧ್ಯಾಹ್ನ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಘಟನೆ ನಡೆದಿದ್ದು, ರಾಜ್ಯಪಾಲರು (Karnataka Governor) ಗರಂ ಆಗಿದ್ದಾರೆ. ನಾನು ರಾಜ್ಯದ ಪ್ರಥಮ ಪ್ರಜೆ. ನನಗೆ ಅಗೌರವ ಉಂಟಾಗಿದೆ. ನನ್ನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. 10 ನಿಮಿಷ ತಡವಾದರೆ, ಕಾಯಬೇಕಿತ್ತು. ಹಾಗಂಥ ನನ್ನ ಬಿಟ್ಟು ಹೋಗ್ತಾರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ಪಂದಿಸುವುದು ನಿಮ್ಮ ಕರ್ತವ್ಯ, ಎಷ್ಟು ಸಾಧ್ಯವೋ ಅಷ್ಟು ಶಾಸಕರ ಕೆಲಸ ಮಾಡಿಕೊಡಿ: ಸಿದ್ದರಾಮಯ್ಯ

    ಗೆಹ್ಲೋಟ್ ಅವರು ಕಾರ್ಯಕ್ರಮದ ನಿಮಿತ್ತ ಬೆಂಗಳೂರಿನಿಂದ ಹೈದರಾಬಾದ್‌ಗೆ ಹೊರಟ್ಟಿದ್ದರು. ಮಧ್ಯಾಹ್ನ 2 ಗಂಟೆಗೆ ಏರ್‌ಏಶಿಯಾ ವಿಮಾನದ ಮೂಲಕ ಹೋಗಬೇಕಿತ್ತು. ಆದರೆ 15 ನಿಮಿಷ ತಡವಾಗಿ ಏರ್‌ಪೋರ್ಟ್ ತಲುಪಿದ್ದಾರೆ.

    ಅಷ್ಟರಲ್ಲಿ ವಿಮಾನ ರಾಜ್ಯಪಾಲರ ಬಿಟ್ಟು ಹಾರಾಟ ನಡೆಸಿತ್ತು. ಇದರಿಂದ ಕೋಪಗೊಂಡ ರಾಜ್ಯಪಾಲರು ಅಧಿಕಾರಗಳ ಕರೆಸಿ ಮಾತನಾಡಿದ್ದಾರೆ. ಅಲ್ಲದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ ವಿಮಾನ ಕಂಪನಿಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿ ಸಿಸಿಬಿ ವಶಕ್ಕೆ

    ಇಷ್ಟೆಲ್ಲಾ ಆದ ಬಳಿಕ 3:30 ರ ವಿಮಾನದಲ್ಲಿ ಹೈದರಾಬಾದ್‌ ತಲುಪಿದ್ದಾರೆ. ಈ ಬೆಳವಣಿಗೆಯಿಂದ ರಾಜ್ಯಪಾಲರು ಕಾರ್ಯಕ್ರಮದಲ್ಲಿ ತಡವಾಗಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ‌.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಂಸ್ಕೃತಿಕ ನಗರಿ ಬೆಳಗಾವಿಗೆ ಭೇಟಿ ನೀಡಿದ ರಾಜ್ಯಪಾಲರು

    ಸಾಂಸ್ಕೃತಿಕ ನಗರಿ ಬೆಳಗಾವಿಗೆ ಭೇಟಿ ನೀಡಿದ ರಾಜ್ಯಪಾಲರು

    ಬೆಳಗಾವಿ: ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳ ಕಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರವಾಸ ಕೈಗೊಂಡಿದ್ದಾರೆ.

    ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಆಗಮಿಸಿದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ನಾಳೆ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಹಾಗೂ ನಾಡಿದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

    ಇದೇ ವೇಳೆ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಂ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ