Tag: Govind Karajola

  • ಮತಗಳ್ಳತನ ಆಗಿದ್ರೆ ರಾಜೀನಾಮೆ ನೀಡಲಿ, ಬ್ಯಾಲೆಟ್ ಪೇಪರ್‌ನಿಂದ ಚುನಾವಣೆ ನಡೆಸಿ ಅಧಿಕಾರಕ್ಕೆ ಬರಲಿ: ಕಾರಜೋಳ

    ಮತಗಳ್ಳತನ ಆಗಿದ್ರೆ ರಾಜೀನಾಮೆ ನೀಡಲಿ, ಬ್ಯಾಲೆಟ್ ಪೇಪರ್‌ನಿಂದ ಚುನಾವಣೆ ನಡೆಸಿ ಅಧಿಕಾರಕ್ಕೆ ಬರಲಿ: ಕಾರಜೋಳ

    ನವದೆಹಲಿ: ಕಾಂಗ್ರೆಸ್‌ನವರಿಗೆ (Congress) ದೇಶದ ಚುನಾವಣೆ ಆಯೋಗದ ಮೇಲೆ ನಂಬಿಕೆ ಹೊರಟು ಹೋಗಿದೆ. ಮತಗಳ್ಳತನ (Vote Theft) ಆಗಿದ್ರೆ ಕರ್ನಾಟಕದಲ್ಲಿ 136 ಸೀಟ್ ಹೇಗೆ ಬಂತು? ಅವರು ಮೊದಲು ರಾಜೀನಾಮೆ ನೀಡಲಿ. ಬ್ಯಾಲೆಟ್ ಪೇಪರ್‌ನಿಂದ (Ballot Paper) ಚುನಾವಣೆ ನಡೆಸಿ ಅಧಿಕಾರಕ್ಕೆ ಬರಲಿ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರು ಗೆದ್ದಲ್ಲಿ ಚುನಾವಣಾ ಆಯೋಗ ಇವಿಎಂ (EVM) ಸರಿಯಿದೆ ಅಂತಾರೆ ಇಲ್ಲಾಂದ್ರೆ ಇಲ್ಲಾ. ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಸರು ಹಾಳು ಮಾಡುತ್ತಿದ್ದಾರೆ. ಇವಿಎಂ ಬೇಡ ಬ್ಯಾಲೆಟ್ ಬೇಕು ಅಂತಾರೆ. ಅಧಿಕಾರ ಸಿಗದಿದ್ದಕ್ಕೆ ಹತಾಶರಾಗಿ ಹೀಗೆ ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: 38 ಗಂಟೆಗಳ ಕಾಲ ನಡೆಯಿತು ಗಣೇಶ ವಿಸರ್ಜನೆ ಮೆರವಣಿಗೆ- ಬೆಳಗಾವಿಯಲ್ಲಿ ದಾಖಲೆ ನಿರ್ಮಾಣ

    ನಾಳೆ ಚುನಾವಣೆ ಇದೆ. ಭಾನುವಾರ ಹಲವು ಹೊಸ ಸದಸ್ಯರಿಗೆ ವಿವಿಧ ರಾಜ್ಯಗಳ ಆಡಳಿತ ವ್ಯವಸ್ಥೆ ಕೆಲಸ ಕಾಮಗಾರಿ ಬಗ್ಗೆ ಅನುಭವ ಹಂಚಿಕೆ ಬಗ್ಗೆ ಕಾರ್ಯಾಗಾರ ಮಾಡಲಾಗಿದೆ. ಸಭೆ ಸಮಾರಂಭಗಳಲ್ಲಿ ಭಾಗಿಯಾಗುವ ಬಗ್ಗೆ, ಸ್ಥಳೀಯ ಸಂಸ್ಥೆಗಳ ಸಮಸ್ಯೆ ಬಗ್ಗೆ ಅರಿವು ಮೂಡಿಸಿದೆ. ನಡ್ಡಾ ಮೋದಿ ಯವರು ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮತಗಳ್ಳತನ ಮೂಲಕ ನನ್ನ ಸೋಲಿಸಲು ಸಂಚು ಮಾಡಲಾಗಿತ್ತು: ಬಿ.ಆರ್.ಪಾಟೀಲ್

    ಮದ್ದೂರಿನಲ್ಲಿ ಲಾಠಿ ಚಾರ್ಜ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಅಂದರೆ ಜಾತಿ ಧರ್ಮದ ಹೆಸರಿನಲ್ಲಿ ಬಡಿದಾಡುವ ರಾಜ್ಯ ಅಲ್ಲ. ಪ್ರಾಚೀನ ಕಾಲದಿಂದಲೂ ಒಟ್ಟಾಗಿ ಬದುಕಿದ ರಾಜ್ಯ. ಶಾಂತಿ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು. ಕರ್ನಾಟಕಕ್ಕೆ ಉತ್ತಮ ಹೆಸರು ಇದೆ. ಮುಸ್ಲಿಂ ಬಾಂಧವರು ಹಿಂದೂಗಳ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಹಿಂದೂಗಳು ಮುಸ್ಲಿಮರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಕರ್ನಾಟಕ ಸೌಹಾರ್ದತೆಯ ರಾಜ್ಯ. ಧರ್ಮದ ಹೆಸರಿನಲ್ಲಿ ಹೀಗೆ ಮಾಡೋದು ತಪ್ಪು ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ – ಬಿವೈವಿ ಕಿಡಿ

    ಆಲಮಟ್ಟಿ ಭಾಗದ ರೈತರಿಗೆ ಪರಿಹಾರ ವಿಚಾರವಾಗಿ ಮಾತನಾಡಿ, ಆಲಮಟ್ಟಿ ವಿಚಾರದಲ್ಲಿ ನಾವು ಪರಿಹಾರ ನೀಡಿದ್ದೆವು. ಭೂಮಿಯ ಮಾರುಕಟ್ಟೆ ಬೆಲೆ ಹೆಚ್ಚಿದೆ. ರೈತರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು. ರೈತರಿಗೆ ಅನುಕೂಲ ಮಾಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ

  • ಕಾರಜೋಳರ ಮೇಲೆ ಹಲ್ಲೆ ಯತ್ನದ ಹಿಂದೆ ಡಾ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ- ಪಿ.ರಾಜೀವ್ ಆರೋಪ

    ಕಾರಜೋಳರ ಮೇಲೆ ಹಲ್ಲೆ ಯತ್ನದ ಹಿಂದೆ ಡಾ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ- ಪಿ.ರಾಜೀವ್ ಆರೋಪ

    ಬೆಂಗಳೂರು: ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವುದಾಗಿ ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ (P Rajeev) ಅವರು ತಿಳಿಸಿದರು.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು ಮಾಡಿರುವುದರಲ್ಲಿ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಕೈವಾಡ ಇದೆ ಎಂದು ಆರೋಪಿಸಿದರು.

    ದಲಿತರಿಗೆ ಮೀಸಲಿಟ್ಟ ಹಣವನ್ನು ಈ ಸರ್ಕಾರ ದುರ್ಬಳಕೆ ಮಾಡಿದೆ. ಇದು ದಲಿತ ಸಮುದಾಯಗಳಿಗೆ ಅರ್ಥ ಆದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ಆಗುವ ಭಯ ಸರ್ಕಾರ, ಕಾಂಗ್ರೆಸ್ಸನ್ನು ಕಾಡುತ್ತಿದೆ ಎಂದರು. ದಲಿತರಿಗೆ ಈ ವಿಚಾರ ಗೊತ್ತಾಗಬಾರದು, ಯಾರೂ ಇದನ್ನು ತಿಳಿಸಬಾರದೆಂಬ ದುರುದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷವು ಕಾರಜೋಳರ ಮೇಲೆ ಹಲ್ಲೆಗೆ ಪ್ರೇರಣೆ ಕೊಟ್ಟಿದೆ. ತೆರೆಮರೆಯ ಕೆಲಸ ಮಾಡಿದೆ ಎಂದೂ ಅವರು ಆಕ್ಷೇಪಿಸಿದರು.

    ಗೃಹಜ್ಯೋತಿ ಯೋಜನೆಯಡಿ (Gruhajyothi Scheme) ಎಸ್‍ಇಪಿಟಿಎಸ್‍ಪಿಯಡಿ 2,400 ಕೋಟಿ ಇಟ್ಟಿದ್ದಾರೆ. ಅದೇ ರೀತಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಡಿ 2,800 ಕೋಟಿ ಇಟ್ಟಿದ್ದಾರೆ. ಈ 2,800 ಕೋಟಿ ಹಣದಲ್ಲಿ 90% ದಲಿತರಿಗೆ ಪ್ರಯೋಜನ ಸಿಗುತ್ತದೆ. ಹಾಗಿದ್ದರೆ 2400 ಕೋಟಿಯನ್ನು ಮತ್ತೆ ಇಟ್ಟದ್ಯಾಕೆ ಎಂದು ಪ್ರಶ್ನಿಸಿದರು. ಇದೆಲ್ಲವೂ ದಲಿತ ಸಮುದಾಯ, ದಲಿತ ಮುಖಂಡರಿಗೆ ತಿಳಿದರೆ ಈ ಸರ್ಕಾರವು ಸುಮಾರು 10 ಸಾವಿರ ಕೋಟಿ ಹಣವನ್ನು ದಲಿತ ಸಮುದಾಯಕ್ಕಾಗಿ ಮತ್ತೆ ಕೊಡಬೇಕಾಗುತ್ತದೆ. ಅದೇ ಭಯವು ಸಿದ್ದರಾಮಯ್ಯರನ್ನೂ ಕಾಡುತ್ತಿದೆ. ದಲಿತರು ಜಾಗೃತ ಆಗಬಾರದು. ಈ ಸಂಬಂಧ ತಿಳುವಳಿಕೆ ಕೊಡುವ ಕೆಲಸವನ್ನು ಮಾಡಬಾರದೆಂಬ ಉದ್ದೇಶದಿಂದ ಭಯ ಹುಟ್ಟಿಸಲು ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ಸಮುದಾಯದ ದೊಡ್ಡ ನಾಯಕ ಗೋವಿಂದ ಕಾರಜೋಳ (Govind Karajola) ಅವರ ಮೇಲೆ ಹಲ್ಲೆ ಮಾಡಿ, ಆ ಮೂಲಕ ದಲಿತ ಜಾಗೃತ ಮನಸ್ಸುಗಳಿಗೆ ಸಂದೇಶ ಕೊಡಲು ಹೊರಟಿದ್ದರು ಎಂದು ವಿಶ್ಲೇಷಿಸಿದರು.

    ಹಲ್ಲೆ, ಕಾಂಗ್ರೆಸ್ ಕೈವಾಡದಿಂದ ನಡೆದಿದೆ ಎಂದು ಪಿ.ರಾಜೀವ್ ಅವರು ಆರೋಪಿಸಿದರು. ಸದನದಲ್ಲಿ ಮಹದೇವಪ್ಪ ಅವರು ದಲಿತರ ದಾರಿತಪ್ಪಿಸುವ ಉತ್ತರ ಕೊಟ್ಟಿದ್ದಾರೆ. 11 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಬಳಸುವಂತಾಗಲು ತೀವ್ರತರದ ಹೋರಾಟ ಮಾಡುತ್ತೇವೆ. ದಲಿತ ಮುಖಂಡರು, ದಲಿತ ಸಂಘಟನೆಗಳು, ದಲಿತ ಶಾಸಕರಿಗೆ ಮಾಹಿತಿ, ಅಂಕಿ ಸಂಖ್ಯೆ ಕೊಟ್ಟು ಸರ್ಕಾರ ಮಾಡಿದ ಅನ್ಯಾಯದ ವಿವರ ನೀಡಿ ಆಂದೋಲನ ರೂಪಿಸಲಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

  • ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಹೊಟ್ಟೆ ಉರಿ – ಎಂಬಿಪಿಗೆ ಕಾರಜೋಳ ತಿರುಗೇಟು

    ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಹೊಟ್ಟೆ ಉರಿ – ಎಂಬಿಪಿಗೆ ಕಾರಜೋಳ ತಿರುಗೇಟು

    ಬಾಗಲಕೋಟೆ: ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಎಂಬಿ ಪಾಟೀಲ್ ಅವರಿಗೆ ಹೊಟ್ಟೆ ಉರಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.

    ಗೋವಿಂದ ಕಾರಜೋಳ ನಾಲಾಯಕ್ ಎಂದ ಮಾಜಿ ಸಚಿವ ಎಂಬಿ ಪಾಟಿಲ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ. ನಾನು ನಿಮ್ಮ ಬಬಲೇಶ್ವರ ಕ್ಷೇತ್ರದ ಮೂಲ ನಿವಾಸಿಯಾಗಿದ್ದು, ನನ್ನ ಬಗ್ಗೆ ಮಾತಾಡುವಾಗ ಬಹಳ ಎಚ್ಚರದಿಂದಿರಿ. ಬಹುಷಃ ಅವರಿಗೆ ನನ್ನ ಮೇಲೆ ಏನೋ ಹೊಟ್ಟೆ ಉರಿ ಇದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಅವರು ಒಬ್ಬರೇ ಜಲಸಂಪನ್ಮೂಲ ಸಚಿವರು ಆಗಿದ್ದರು ಅನಿಸುತ್ತದೆ ಎಂದು ಹೇಳಿ ವ್ಯಂಗ್ಯವಾಡಿದರು. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

    ನಾನು ಸಂಸ್ಕೃತಿ ಮೀರಿ, ಬಾಯಿಗೆ ಬಂದ ಹಾಗೇ ಮಾತಾಡುವ ಮನುಷ್ಯ ಅಲ್ಲ. ಅಖಂಡ ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿ ಬೆಳೆದವನು. ಶರಣರ ಸಂಸ್ಕೃತಿಯೇ ನನಗೆ ಮೂಲವಾಗಿದ್ದು, ಅದಕ್ಕೆ ನಾನು ಯಾರ ಬಗ್ಗೆ ಕೆಟ್ಟದಾಗಿ ಮಾತನಾಡುವದಿಲ್ಲ ಕೆಟ್ಟ ಶಬ್ದ ಬಳಸುವದಿಲ್ಲ. ನನ್ನ ಬಗ್ಗೆ ಪಾಟಿಲ್ ಸಾಹೇಬರು ಮಾತಾಡಿದ್ದು ನೋಡಿದ್ದೀರಿ. ಕಾರಜೋಳ ಜಲಸಂಪನ್ಮೂಲ ಸಚಿವರು ಆಗಲು ಅಯೋಗ್ಯ, ನಾಲಾಯಕ್, ಮೂರ್ಖ ಕೂಡಲೇ ಕಾರಜೋಳ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದರು. ನಾನೊಬ್ಬ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ ಬೆಳೆದು ವಿಧಾನಸೌಧ ಮೆಟ್ಟಿಲು ಏರಿದವನು ಎಂದು ಹೇಳಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

    ನಾನು ಸಾಮಾನ್ಯರಲ್ಲಿ ಸಾಮಾನ್ಯನಾಗಿದ್ದೇನೆ. ಪಾಟಿಲ್‍ರೆ ನಿಮಗೆ ನಾನು ಹೋಲಿಕೆ ಮಾಡಿಕೊಳ್ಳುತ್ತಿಲ್ಲ. ನೀವು ಅಪಾರವಾದಂತಹ ಜ್ಞಾನ ಪಾಂಡಿತ್ಯ ಇರುವಂತವರು. ನೀವು ವಿಶ್ವಮಾನವರು ವಿಶ್ವರೂಪಿಗಳಾಗಿದ್ದು, ಬ್ರಹ್ಮಾಂಡ ಜ್ಞಾನ ಸಂಪಾದನೆ ಮಾಡಿದಂತವರು. ನಿಮಗೆ ನಾನು ಹೋಲಿಕೆ ಮಾಡಿಕೊಳ್ಳೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಕಾಂಗ್ರೆಸ್ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದೆ: ಗೋವಿಂದ ಕಾರಜೋಳ

    ಕಾಂಗ್ರೆಸ್ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದೆ: ಗೋವಿಂದ ಕಾರಜೋಳ

    ಬೆಳಗಾವಿ: ಕಾಂಗ್ರೆಸ್ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

    ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿಯಯಲ್ಲಿ ಹತ್ತು ದಿನಗಳ ಅಧಿವೇಶನ ನಡೆದಿತ್ತು. ಕಾಂಗ್ರೆಸ್ ನವರು ಬೇಜವಾಬ್ದಾರಿಯಿಂದ ಸದನದ ಬಾವಿಗಿಳಿದು ಹಾಳು ಮಾಡಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿಲ್ಲ. ಕೈ ಪಕ್ಷಕ್ಕೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಸಿಡಿದರು. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

    ಕಳೆದ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದೆ. ಅದನ್ನ ನಾವು ಬಿಚ್ಚಿಡುತ್ತೇವೆ ಎನ್ನುವ ಭಯದಿಂದ ಗದ್ದಲ ಮಾಡಿದರು. ಮಹಾದಾಯಿ ಯೋಜನೆ ಜಾರಿ ಮಾಡೋಕೆ ಎಲ್ಲ ರೀತಿ ತಯಾರಿ ಮಾಡಿದ್ದೇವೆ. ಈಗಾಗಲೇ ಸಮಗ್ರ ಯೋಜನಾ ವರದಿ(ಡಿಪಿಎಆರ್) ಮಾಡಿದ್ದೇವೆ. ಅದನ್ನ ಎದುರಿಸಿದೇ ಪಲಾಯನ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

    ಹತ್ತು ದಿನಗಳಿಂದ ಸಿದ್ದರಾಮಯ್ಯನವರಿಗೆ ಅವಕಾಶ ನೀಡಿದ್ದು, ಅವರು ಪಲಾಯನ ಮಾಡಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ದಿನಾಲು ಅವಕಾಶ ನೀಡಿದ್ದಾರೆ. ಆದರೆ ಮಾತನಾಡಬೇಕಾದವರೇ ಮಾತನಾಡಿಲ್ಲ. ಕಾಂಗ್ರೆಸ್ ನವರು ಅಸಹಕಾರ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

    ಹೊಸ ಕೃಷಿ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲರಾಗಿದ್ದೇವೆ: ಗೋವಿಂದ ಕಾರಜೋಳ

    ಬಾಗಲಕೋಟೆ: ರೈತರ ಆದಾಯ ದ್ವಿಗುಣಗೊಳಿಸಬೇಕು. ರೈತರಿಗೆ ಅನುಕೂಲ ಆಗಬೇಕೆಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ತಂದಿದ್ರು. ಆದ್ರೆ ಎಲ್ಲೊ ಒಂದು ಕಡೆ ಹೊಸ ಕಾಯ್ದೆ ಬಗ್ಗೆ ರೈತರಿಗೆ ತಿಳಿ ಹೇಳುವಲ್ಲಿ ವಿಫಲ ಆಗಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಷಾದ ವ್ಯಕ್ತಪಡಿಸಿದರು.


    ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಹೊಸ ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ತಿಳಿಸಿ ಹೇಳುವಲ್ಲಿ ನಾವು ವಿಫಲರಾಗಿದ್ದೇವೆ. ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಒಬ್ಬ ಪೂರ್ಣಾವಧಿ ಅಧ್ಯಕ್ಷ ಸಿಗದ ಹೀನಾಯ ಸ್ಥಿತಿಗೆ ಬಂದು ತಲುಪಿದೆ. ಏಳು ವರ್ಷದ ಹಿಂದೆ ಮೋದಿ ಅವರು ಕೈ ಮುಕ್ತ ಭಾರತ ಆಗುತ್ತೆ ಎಂದು ಹೇಳಿದರು. ಆಗ ಅವರಿಗೆ ಕೆಲವರು ಗೇಲಿ ಮಾಡಿದರು. ಇವ್ರೇನು ಭವಿಷ್ಯ ಹೇಳ್ತಾರಾ? ಕಾಲಜ್ಞಾನಿಗಳಾ ಅಂದಿದ್ರು. ಈಗ ಅವರ ಮಾತು ನಿಜ ಆಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಮಂಡ್ಯದಲ್ಲಿ ಹೆರಾಯಿನ್, ಅಫೀಮು ದಂಧೆ – ಆರೋಪಿಗಳು ಅರೆಸ್ಟ್

    ಇನ್ನೊಂದು ವರ್ಷದಲ್ಲಿ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ. ಕಾಂಗ್ರೆಸ್ ಮುಕ್ತ ಭಾರತ ಆಗುತ್ತೆ. ಕಾಂಗ್ರೆಸ್ ನೀತಿಗೆಟ್ಟ ನಡವಳಿಕೆ ಬಗ್ಗೆ ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಲು ಇಷ್ಟಪಡುತ್ತೇನೆ. ಕಾಂಗ್ರೆಸ್ ಅವರು ನಮ್ಮ ಪ್ರಧಾನಿ ಮೋದಿ ಬಗ್ಗೆ, ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ, ಸಿಎಂ ಬಗ್ಗೆ ನಾಲಿಗೆ ಮೇಲೆ ಹತೋಟಿ ಇಲ್ಲದೇ, ಬಾಯಿಗೆ ಬಂದಂಗೆ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ಅವರ ಬಳಸುತ್ತಿರುವ ಭಾಷೆ ಸಂಸದೀಯ ಭಾಷೆ ಅಲ್ಲ. ಅಂತಹ ಒಂದು ಕೆಟ್ಟ ನಡವಳಿಕೆ ನಾವು ಕಾಣುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಾನು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡೋಕೆ ಇಷ್ಟ ಪಡುತ್ತೇನೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ರೈತರ ಆದಾಯ ಹೆಚ್ಚಾಗಬೇಕು. ಬೆಳೆಗೆ ಯೋಗ್ಯ ಬೆಲೆ ಸಿಗಬೇಕು, ರೈತರು ನೆಮ್ಮದಿಯಿಂದ ಇರಬೇಕು. ರೈತರಿಗೂ ಪಿಂಚಣಿ ಸಿಗಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ದೇಶದಲ್ಲಿ ಮೊದಲ ಬಾರಿಗೆ ಮೋದಿ ಅವರು ರೈತರಿಗೆ ಪರೋಕ್ಷವಾಗಿ ಪಿಂಚಣಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಇದನ್ನ ಕಾಂಗ್ರೆಸ್ ಅವರು ಮೆಚ್ಚಬೇಕಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷದಲ್ಲಿ 60 ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಏನೂ ಮಾಡಿಲ್ಲ. ರೈತರ ದೇಶದ ಬೆನ್ನೆಲುಬು ಅನ್ನುತ್ತಲೇ ಅದನ್ನ ಮುರಿದಿದ್ದಾರೆ ಎಂದು ಟೀಕಿಸಿದರು.

    ಕೊರೊನಾ, ಪ್ರವಾಹ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಎರಡು ವರ್ಷ ಮಾಡಿದ ಕಾರ್ಯ ಮೆಚ್ಚದೆ, ಕೈ ನಾಯಕರು ಆರೋಪ ಮಾಡುತ್ತಿದ್ದಾರೆ. ನಾವು ಮಾಡಿದ ಕೆಲಸಗಳು ಕೈ ನಾಯಕರಿಗೆ ಕಾಣುತ್ತಿಲ್ಲ. ಎಲ್ಲೋ ಒಂದು ಕಡೆ ಕೈ ನಾಯಕರು ಹತಾಶರಾಗಿ ನಾವು ಮಾಡುವ ಕಾರ್ಯವನ್ನು ಟೀಕೆ ಮಾಡುತ್ತಿದ್ದಾರೆ. 60 ವರ್ಷಗಳ ಆಡಳಿತದಲ್ಲಿ ಅವರ ಸಾಧನೆ ಶೂನ್ಯ. ಏನೂ ಮಾಡದೇ ತೊರಿಸೋದಿಕ್ಕೆ ಆಗದಿದ್ದಾಗ ದೇಶದ ಉದ್ದಗಲಕ್ಕೂ ದಲಿತರು, ಹಿಂದುಳಿದವರು ಕಾಂಗ್ರೆಸ್ ಬಿಟ್ಟು ಮೋದಿ ಅವರ ಕೈ ಬಲಪಡಿಸುವ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಸ್ತೆಯಲ್ಲಿದ್ದ ಸಸಿ ಕಿತ್ತುಕೊಂಡು ನೆಟ್ಟಿಗರ ಕಣ್ಣಿಗೆ ಗುರಿಯಾದ ಮಹಿಳೆಯರು – ವೀಡಿಯೋ ವೈರಲ್

    ಕಾಂಗ್ರೆಸ್ ಅವರಿಗೆ ದೀನದಲಿತರು, ಅಲ್ಪಸಂಖ್ಯಾತರ ಬಗ್ಗೆ ಅವಹೇಳನಕಾರಿ ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳ್ತಾರೆ. ಈ ಮಾತು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಪ್ರತಿಪಕ್ಷದ ನಾಯಕರಿದ್ದಾರೆ. ಒಬ್ಬ ಹಿರಿಯ ರಾಜಕಾರಣಿಗಳಾಗಿ ಈ ರೀತಿ ಮಾತನಾಡೋದು ಅವರಿಗೆ ಶೋಭೆ ತರುವಂತದಲ್ಲ ಎಂದು ಸಲಹೆ ನೀಡಿದರು.

    ನಮ್ಮ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ. ಈ ದೇಶದ ದೀನದಲಿತರು, ಅಲ್ಪಸಂಖ್ಯಾತರು ಕಾಂಗ್ರೆಸ್ ನ ಗುಲಾಮರಲ್ಲ. ಅಲ್ಪಸಂಖ್ಯಾತರು, ದೀನದಲಿತರಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾವಂತರು ಹೆಚ್ಚಾದ ಮೇಲೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ತಿಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಈಗ ಅವಸಾನದ ಅಂಚಿನಲ್ಲಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

  • ಈಗ ಒಂದು ರಾಜ್ಯ ಬಿಟ್ಟರೆ ಕಾಂಗ್ರೆಸ್ ಎಲ್ಲಿದೆ – ಕಾರಜೋಳ ಪ್ರಶ್ನೆ

    ಈಗ ಒಂದು ರಾಜ್ಯ ಬಿಟ್ಟರೆ ಕಾಂಗ್ರೆಸ್ ಎಲ್ಲಿದೆ – ಕಾರಜೋಳ ಪ್ರಶ್ನೆ

    ಹಾಸನ: ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇನೆ ಎಂದು ಮೋದಿ ಹೇಳಿದಾಗ ಎಲ್ಲರೂ ಹಾಸ್ಯ ಮಾಡಿದ್ದರು. ಆದರೆ ಇವತ್ತು ಕಾಂಗ್ರೆಸ್ ಮುಕ್ತ ದೇಶವಾಗಿದೆ. ಈಗ ಒಂದು ರಾಜ್ಯ ಬಿಟ್ಟರೆ ಕಾಂಗ್ರೆಸ್ ಎಲ್ಲಿದೆ ಎಂದು ಲೋಕೊಪಯೋಗಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ, ನಂತರ ಅಡ್ವಾಣಿ, ನಂತರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಪಕ್ಷ ಹೆಮ್ಮರವಾಗಿ ಬೆಳೆದಿದೆ ಕುಮಾರಸ್ವಾಮಿ ಹೇಳಿಕೆ ಯೋಗ್ಯವಾದಂತಹದ್ದಲ್ಲ ಎಂದು ಹೇಳಿದರು.

    ಇಡೀ ದೇಶದಲ್ಲಿ ಬಿಜೆಪಿ ಪಕ್ಷ ಪ್ರಬಲವಾಗಿ ಬೆಳೆದಿದೆ. ನರೇಂದ್ರ ಮೋದಿ ಕಾಲದಲ್ಲಿ 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ, ಇಂದು ಐದು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಲಿದ್ದು, ಹೆಚ್ಚಿನ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

    ನಾನು ನೋಡದ ಬಿಜೆಪಿ ಸರ್ಕಾರ, ನನ್ನಿಂದಲೇ ಬಿಜೆಪಿ ಅಧಿಕಾರಕ್ಕೆ ಬಂತು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು.

    ಇದೇ ವೇಳೆ ಸಚಿವ ಸುಧಾಕರ್ ವಿರುದ್ಧ ಶಾಸಕ ರೇಣುಕಾಚಾರ್ಯ ಅಸಮಾಧಾನ ವಿಷಯ ಕುರಿತು ಪ್ರತಿಕ್ರಿಯಿಸಿದ ಅವರು ಬಿಜೆಪಿಯಲ್ಲಾಗಲಿ, ಸರ್ಕಾರದಲ್ಲಾಗಲಿ ಯಾವುದೇ ಗೊಂದಲವಿಲ್ಲ. ಸಂಕಷ್ಟದ ನಡುವೆಯೂ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮವಾದ ಆಡಳಿತ ನೀಡಿದೆ. ಅಸಮಾಧಾನವಿದ್ದರೆ, ಕೆಲಸಗಳಲ್ಲಿ ತೊಂದರೆಯಿದ್ದರೆ ಸಿಎಂ ಜೊತೆ ಮಾತನಾಡಿ ಬಗೆಹರಿಸಿಕೊಳ್ಳಲಿ, ಅದನ್ನು ಬಿಟ್ಟು ಮಾಧ್ಯಮದವರ ಮುಂದೆ ಹೋಗಬಾರದೆಂದು ಪಕ್ಷದ ಶಾಸಕರಲ್ಲಿ ನಾನು ಮನವಿ ಮಾಡುತ್ತೇನೆ ಎಂದರು.

  • ಲಿಡ್ಕರ್ ಉತ್ಪನ್ನಗಳ ಶೇ.50ರಷ್ಟು ರಿಯಾಯಿತಿ: ಕರಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಕಾರಜೋಳ ಕರೆ

    ಲಿಡ್ಕರ್ ಉತ್ಪನ್ನಗಳ ಶೇ.50ರಷ್ಟು ರಿಯಾಯಿತಿ: ಕರಕುಶಲಕರ್ಮಿಗಳಿಗೆ ಪ್ರೋತ್ಸಾಹಿಸಲು ಕಾರಜೋಳ ಕರೆ

    ಬೆಂಗಳೂರು: ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ನಿಗಮ (ಲಿಡ್ಕರ್) ಕುಶಲಕರ್ಮಿಗಳು ತಯಾರಿಸಿದ ಕರಕುಶಲ ಉತ್ಪನ್ನಗಳು ಮತ್ತು ಅಪ್ಪಟ ಚರ್ಮದಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 30 ರವರೆಗೆ ವಸಂತ ನಗರದ ಲಿಡ್ಕರ್ ಭವನದಲ್ಲಿ ನಡೆಯಲಿದ್ದು, ಶೇ. 50 ರವರೆಗೆ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಭಾಗವಹಿಸಿ, ಉತ್ಪನ್ನಗಳನ್ನು ಖರೀದಿಸಿ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಮನವಿ ಮಾಡಿದರು.

    ಈ ಪ್ರದರ್ಶನ ಮೇಳಕ್ಕೆ ಇಂದು ಉಪಮುಖ್ಯಮಂತ್ರಿ ಭೇಟಿ ನೀಡಿ, ವಿವಿಧ ಮಾದರಿಯ ಉತ್ಪನ್ನಗಳನ್ನು ವೀಕ್ಷಿಸಿ, ಕರಕುಶಲ ಕರ್ಮಿಗಳೊಂದಿಗೆ ಸಂವಾದ ನಡೆಸಿದರು. ವಸ್ತು ಪ್ರದರ್ಶನದಲ್ಲಿ ಬೆಳಗಾವಿ, ಮೈಸೂರು, ಬೆಂಗಳೂರು, ಗದಗ ಮತ್ತು ರಾಜ್ಯದ ಇತರೆ ಜಿಲ್ಲೆಗಳಿಂದ ಕುಶಲಕರ್ಮಿಗಳು ತಯಾರು ಮಾಡಿರುವ ಫೂಟ್ ವೇರ್ ಶೇ.20 ರಿಂದ 50 ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

    ನಿಗಮವು ಪ್ರತಿನಿತ್ಯ ಒಂದು ಲಕ್ಷ ರೂ. ವಹಿವಾಟು ಮಾಡುತ್ತಿದೆ. ಕಳೆದ ಒಂದು ವಾರದಿಂದ ಈವರೆಗೆ 8.5 ಲಕ್ಷ ರೂ. ಮೌಲ್ಯದ ಉತ್ಪನ್ನಗಳನ್ನು ಗ್ರಾಹಕರು ಖರೀದಿಸಿ ಉತ್ತೇಜನ ನೀಡಿದ್ದಾರೆ. ಅದರಲ್ಲಿ ಕೊಲ್ಹಾಪುರಿ ಪಾದರಕ್ಷೆಗಳು ಹಾಗೂ ಚರ್ಮದ ಶೂಗಳು ತ್ವರಿತಗತಿಯಲ್ಲಿ ಮಾರಾಟವಾಗುತ್ತಿವೆ.

    ನಿಗವು ರಾಜ್ಯದಲ್ಲಿ ಚರ್ಮೋದ್ಯಮ ಬೆಳವಣಿಗೆಗೆ ಪರಿಶಿಷ್ಠ ಜಾತಿಯ ಚರ್ಮ ಕುಶಲಕರ್ಮಿಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಕಾರ್ಯನಿರ್ವಹಿಸುತ್ತಿದ್ದು, ಚರ್ಮ ಕುಶಲಕರ್ಮಿಗಳ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಅನುಷ್ಠಾ ನಗೊಳಿಸುತ್ತಿದೆ ಎಂದು ಅವರು ತಿಳಿಸಿದರು.

    ಪಾದರಕ್ಷೆಗಳು, ಲೆದರ್ ಗೂಡ್ಸ್, ಲೆದರ್ ಜಾಕೆಟ್ಸ್, ಮತ್ತಿತರ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮದ ಕುಶಲಕರ್ಮಿಯಾದ ಸಂಜಯ್ ಭರತ ಅದಾಟೆ ಅವರು ತಯಾರಿಸಿದ 5 ಅಡಿ ಎತ್ತರದ ಜಿಐ ಟ್ಯಾಗ್ ಹೊಂದಿರುವ ಕೊಲ್ಹಾಪುರಿ ಪಾದರಕ್ಷೆಗಳನ್ನು ವೀಕ್ಷಿಸಿ, ಮೆಚ್ಚುಗೆ ಶ್ಲಾಘಿಸಿದರು. ಗದಗ್ ಕಾಪ್ಸಿ ಚಪ್ಪಲಿಗಳನ್ನು ಉಪಮುಖ್ಯಮಂತ್ರಿಗಳು ಖರೀದಿಸುವ ಮೂಲಕ ಸಂದರ್ಭದಲ್ಲಿ ನಿಗಮವ ವ್ಯವಸ್ಥಾಪಕ ನಿರ್ದೇಶಕ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

  • ಗದಗದಲ್ಲಿ ವಿವಿಧ ಕಾಮಗಾರಿಗೆ ಡಿಸಿಎಂ ಕಾರಜೋಳ ಚಾಲನೆ

    ಗದಗದಲ್ಲಿ ವಿವಿಧ ಕಾಮಗಾರಿಗೆ ಡಿಸಿಎಂ ಕಾರಜೋಳ ಚಾಲನೆ

    ಬಾಗಲಕೋಟೆ/ಗದಗ: ಗದಗ ಜಿಲ್ಲೆಯಲ್ಲಿ 25 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಚಾಲನೆ ನೀಡಿದ್ದಾರೆ.

    ಗದಗ ಜಿಲ್ಲಾ ಕೇಂದ್ರದಲ್ಲಿ 3.39 ಕೋಟಿ ರೂ.ವೆಚ್ಚದ ಡಾ.ಬಾಬು ಜಗಜೀವನರಾಂ ಭವನ, 42 ಬಾಬು ಜಗಜೀವನರಾಂ ಭವನಗಳು, ಗದಗ ಬೆಟಗೇರಿ ನಗರದ ಹತ್ತಿರ 2.32 ಕೋಟಿ ರೂ. ಪರಿಶಿಷ್ಠ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ, ಗದಗ ಬೆಟಗೇರಿ ನಗರದ ಹುಯೀಲಗೋಳ ರಸ್ತೆಯಲ್ಲಿ 3 ಕೋಟಿ 38 ಲಕ್ಷ ರೂ.ಗಳ ಅನುದಾನದಲ್ಲಿ ಪರಿಶಿಷ್ಠ ಜಾತಿ ಮೆಟ್ರಿಕ್ ನಂತರ ವೃತ್ತಿಪರ ಬಾಲಕಿಯರ ವಸತಿ ನಿಲಯ, ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜನ್ನು 1046.00 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗಿದೆ. ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮ ಯೋಜನೆಗಳಡಿ ಗದಗ-ಬೆಟಗೇರಿ ಅವಳಿ ನಗರದಲ್ಲಿ 5 ಎಕರೆ 10 ಗುಂಟೆ ಜಾಗದಲ್ಲಿ ವಸತಿ ರಹಿತ ಹರಣಶಿಕಾರಿ ಸಮುದಾಯದವರಿಗೆ 109 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಅವುಗಳಲ್ಲಿ 220.00 ಲಕ್ಷ ರೂ.ಗಳ ಅನುದಾನದಲ್ಲಿ 40 ಮನೆಗಳು ಪೂರ್ಣಗೊಂಡಿರುತ್ತವೆ.

    ಗದಗ ತಾಲೂಕಿನ ವಸತಿ ನಿಲಯಗಳಲ್ಲಿರುವ ಕಂಪ್ಯೂಟರ್ ಲ್ಯಾಬ್ ಗಳು, ಅಭ್ಯಾಸ ಕೊಠಡಿಗಳು ಮತ್ತು ನಿಲಯಗಳ ನವೀಕರಣ, ದುರಸ್ತಿ ಮತ್ತು ನೂತನ ಕೊಠಡಿಗಳ ನಿರ್ಮಾಣ ಮುಂತಾದ ಕಾಮಗಾರಿಗಳನ್ನು 349.00 ಲಕ್ಷ ರೂ.ಗಳ ಅನುದಾನದಲ್ಲಿ ನಿರ್ಮಿಸಲಾಗಿದ್ದು, ಈ ಕಾಮಗಾರಿಗಳನ್ನು ಡಿಸಿಎಂ ಕಾರಜೋಳ ಉದ್ಘಾಟಿಸಿದರು.

    ಶಾಸಕರಾದ ಶ್ರೀ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಪೆದ್ದಪ್ಪಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಮಾದರ್, ಜಿಲ್ಲಾಧಿಕಾರಿ ಹಿಮೇಮಠ ಮತ್ತಿತರರು ಉಪಸ್ಥಿತರಿದ್ದರು.

  • ಮಳೆಯಲ್ಲೇ ಕೂತು ಬಯಲಲ್ಲಿ ಪಾಠ ಕೇಳ್ಬೇಕು- ಗೋವಿಂದ ಕಾರಜೋಳ ಸ್ವಕ್ಷೇತ್ರದ ಕಥೆ

    ಮಳೆಯಲ್ಲೇ ಕೂತು ಬಯಲಲ್ಲಿ ಪಾಠ ಕೇಳ್ಬೇಕು- ಗೋವಿಂದ ಕಾರಜೋಳ ಸ್ವಕ್ಷೇತ್ರದ ಕಥೆ

    ಬಾಗಲಕೋಟೆ: ನೂತನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಲಿಲ್ಲದೆ ಸಂತ್ರಸ್ತರು ಪರದಾಡುತ್ತಿದ್ದು, ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಇತ್ತ ಮುಧೋಳ ತಾಲೂಕಿನ ಒಂಟಗೋಡಿಯಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಘಟಪ್ರಭಾ ನದಿ ಪ್ರವಾಹದದಿಂದಾಗಿ ಸರ್ಕಾರಿ ಶಾಲೆ ಮುಳುಗಡೆಯಾಗಿದ್ದು, ಬಿದ್ದು ಹೋಗುವ ಸ್ಥಿತಿಯಲ್ಲಿದೆ. ಆದರೂ ಮಕ್ಕಳಿಗೆ ಪಾಠ ಮಾಡಲು ಬೇರೆ ಕಟ್ಟಡವಿಲ್ಲ. ಹೀಗಾಗಿ ಮಕ್ಕಳು ಬಯಲಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ.

    ಶಾಲೆಯ ಕಟ್ಟಡ ಬೀಳುವ ಭಯದಿಂದ ಸಿಬ್ಬಂದಿ ಈಗಾಗಲೇ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ. ಹೀಗಾಗಿ ಮಳೆ ಬಂದರೆ ಶಾಲೆಯ ಹೊರಗಡೆ ತಲೆ ಮೇಲೆ ಟಾರ್ಪಲ್ ಹಾಕಿಕೊಂಡು ಪಾಠ ಕೇಳುವ ಅನಿವಾರ್ಯ ಮಕ್ಕಳದ್ದಾಗಿದೆ.

    ಶಾಲಾ ಕಟ್ಟಡ ನೀರಲ್ಲಿ ಮುಳುಗಿ ಹಾಳಾಗಿ ಹೋಗಿದ್ದರಿಂದ ಯಾವಾಗ ಬೀಳುತ್ತೋ ಅನ್ನೋ ಆತಂಕದಲ್ಲಿರುವ ಸ್ಥಳೀಯರು ಇಷ್ಟೆಲ್ಲ ಆದರೂ ಯಾವೊಬ್ಬ ನಾಯಕರು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಸ್ಥಿತಿ ಆಲಿಸಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಕೂಡಲೇ ಮಕ್ಕಳಿಗೆ ಶಾಲಾ ಕಟ್ಟಡದ ವ್ಯವಸ್ಥೆ ಮಾಡಿಸುವಂತೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

  • ಸಿಎಂ ಒಂದು ಹಳ್ಳಿಯಲ್ಲಿ ಮಲ್ಕೊಂಡು ಬಂದ್ರೆ ಏನು ಪ್ರಯೋಜನ – ಶಾಸಕ ಕಾರಜೋಳ

    ಸಿಎಂ ಒಂದು ಹಳ್ಳಿಯಲ್ಲಿ ಮಲ್ಕೊಂಡು ಬಂದ್ರೆ ಏನು ಪ್ರಯೋಜನ – ಶಾಸಕ ಕಾರಜೋಳ

    – ಗ್ರಾಮ ವಾಸ್ತವ್ಯ ಜನರನನ್ನು ಡೈವರ್ಟ್ ಮಾಡೋ ಗಿಮಿಕ್

    ಬಾಗಲಕೋಟೆ: ರಾಜ್ಯದಲ್ಲಿ 166 ತಾಲೂಕುಗಳಲ್ಲಿ ಬರ ತಾಂಡವಾಡುತ್ತಿದೆ. ದನಕರುಗಳಿಗೆ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಜನರು ಗುಳೆ ಹೊರಟಿದ್ದಾರೆ. ಈ ರೀತಿಯ ಸಂದರ್ಭದಲ್ಲಿ ನಮ್ಮ ಸಿಎಂ ಯಾವುದೋ ಒಂದು ಹಳ್ಳಿಯಲ್ಲಿ ಮಲಗಿ ಎದ್ದು ಬಂದರೆ ಏನು ಪ್ರಯೋಜನ ಎಂದು ಮುಧೋಳ ಶಾಸಕ ಗೋವಿಂದ ಕಾರಜೋಳ ಸಿಎಂ ಗ್ರಾಮ ವಾಸ್ತವ್ಯಕ್ಕೆ ಲೇವಡಿ ಮಾಡಿದ್ದಾರೆ.

    ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಒಂದು ಗಿಮಿಕ್ ಅಷ್ಟೇ. ಒಂದೊಂದು ಜಿಲ್ಲೆಯ ಒಂದು ಹಳ್ಳಿಗೆ ಹೋಗಿ ಮಲಗಿಕೊಂಡ ಬಂದರೆ ಯಾರಿಗೂ ಪ್ರಯೋಜನವಿಲ್ಲ ಎಂದು ಸಿಎಂಗೆ ಟಾಂಗ್ ನೀಡಿದರು.

    ರಾಜ್ಯದಲ್ಲಿ 39,407 ಕಂದಾಯ ಗ್ರಾಮಗಳಿದ್ದಾವೆ. 58,648 ಜನ ವಸತಿ ಪ್ರದೇಶಗಳಿವೆ, ನಾವು ಎಲ್ಲಕಡೆ ಹೋಗಿ ಗ್ರಾಮ ವಾಸ್ತವ್ಯ ಮಾಡೋಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಲ್ಲದೇ, ನಾವು ಮಾಡುವ ಕೆಲಸ ಇಡೀ ರಾಜ್ಯಕ್ಕೆ ಸಾರ್ವತ್ರಿಕವಾಗಿ ಪ್ರಯೋಜನವಾಗಬೇಕು ಎಂದರು. ಸಿಎಂ ರಾಜ್ಯದ ಜನರ ಬಗ್ಗೆ ಕಾಳಜಿ ಇದ್ದಿದ್ರೆ ಬೆಳಗಾವಿ, ಕಲಬುರ್ಗಿ, ಮೈಸೂರು, ಬೆಂಗಳೂರು ಭಾಗದಲ್ಲಿ ಸಭೆ ಮಾಡಿ, ಅಧಿಕಾರಿಗಳಿಗೆ ಚಾಟಿ ಬೀಸಿ ಕೆಲಸ ಮಾಡೋಕೆ ಹೇಳಿದ್ದರೆ ಉಪಯೋಗ ಆಗುತಿತ್ತು ಎಂದು ಹೇಳಿದರು.

    ಇನ್ನೂ ರಾಜ್ಯದಲ್ಲಿ ಜೆಡಿಎಸ್ ಜನಪ್ರಿಯತೆ ಗಳಿಸಿಕೊಂಡಿದ್ದರೆ, 37 ಸೀಟ್ ಅಷ್ಟೇ ಯಾಕೆ ಗೆಲ್ಲುತ್ತಿತ್ತು, 124 ಸೀಟ್ ಗೆಲ್ಲುತ್ತಿತ್ತು. ಅಲ್ಲದೆ ಸಿಎಂ ಆಡಳಿತ ನಡೆಸಲು ಕಾಂಗ್ರೆಸ್‍ನವರು ಸಹಕಾರ ಕೊಡುತ್ತಿಲ್ಲ. ಅದಕ್ಕೆ ಸಿಎಂ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಗ್ರಾಮ ವಾಸ್ತವ್ಯದ ಗಿಮಿಕ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.