ಬೀದರ್: ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.
ರಾಯಚೂರು: ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ (Passenger) ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು (Raichur) ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್ (Sleeper Coach Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ಬಸ್‌ನಲ್ಲಿ ಕಾಲು ಸಿಲುಕಿ ನೋವಿನಿಂದ ಒದ್ದಾಡಿದ ಪ್ರಯಾಣಿಕ ವಿಶ್ವನಾಥ್‌ನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Bengaluru | ಮಹಿಳೆಗೆ ಥಳಿತ ಕೇಸ್ – ಬಟ್ಟೆ ಅಂಗಡಿ ಮಾಲೀಕ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎರಡು ಸಾರಿಗೆ ಬಸ್‌ಗಳ ಸಂಚಾರಕ್ಕಿಂದು ಯಕ್ಕುಂಡಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗರಿಸಲಾಗಿದ್ದ ಎರಡು ಬಸ್‌ಗಳ ಸಂಚಾರಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಲ್ಲು ದಳವಾಯಿ ಮತ್ತು ಬ್ಲಾಕ್ ಕಾಂಗ್ರೆಸ್ ಈರಗೊಂಡ ಬಿರಾದಾರ ಚಾಲನೆ ನೀಡಿದರು. ಈ ಬಸ್‌ಗಳು ವಿಜಯಪುರ ನಗರದಿಂದ ಚಿಕ್ಕಲಕಿ ಕ್ರಾಸ್‌ವರೆಗೆ ಸಂಚರಿಸಲಿವೆ.ಇದನ್ನೂ ಓದಿ: 4.8 ಕೋಟಿ ಪತ್ತೆ ಕೇಸ್ – ಸುಧಾಕರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, FIR ರದ್ದು
ಈ ಸಂದರ್ಭದಲ್ಲಿ ಮಲ್ಲು ದಳವಾಯಿ ಅವರು ಮಾತನಾಡಿ, ಸಚಿವ ಎಂ.ಬಿ. ಪಾಟೀಲ್ ಅವರ ಸೂಚನೆಯಂತೆ ಎರಡು ನೂತನ ಬಸ್‌ಗಳ ಸೇವೆ ಪ್ರಾರಂಭವಾಗಿದೆ. ಇದರಿಂದ ಈ ಮಾರ್ಗದಲ್ಲಿ ಬರುವ ಚಿಕ್ಕಲಕಿ ಕ್ರಾಸ್, ಅರ್ಜುಣಗಿ, ಯಕ್ಕುಂಡಿ, ಬಬಲೇಶ್ವರ, ಸಾರವಾಡ, ವಿಜಯಪುರ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸಚಿವರಿಗೆ ಹಾಗೂ ಸಾರಿಗೆ ಇಲಾಖೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಲಾಲಸಾಬ ಜಮಾದಾರ, ಗ್ರಾ.ಪಂ ಅಧ್ಯಕ್ಷ ರಫೀಕ ಸೋನಾರ, ಸದಸ್ಯರಾದ ಗುರು ಜೈನಾಪೂರ, ಸಿದರಾಯ ಬಿರಾದಾರ, ಬಸು ಕಾಲಿಬಾಗ, ಗೌಡಪ್ಪ ಬಿರಾದಾರ, ಮುಖಂಡರಾದ ಬಾಬುಗೌಡ ಪಾಟೀಲ, ಚನ್ನಪ್ಪ ಕೊಪ್ಪದ, ಶೇಖಪ್ಪ ಕೊಪ್ಪದ, ಪ್ರಭುಗೌಡ ಪಾಟೀಲ, ಅಶ್ಪಾಕ ಜಾಗೀರದಾರ, ಜುಬ್ರಾಯಿಲ್ ಮೊಕಾಲೆ, ರವಿ ಕಾಂಬಳೆ, ನಾಗರಾಜ ಕುಲಕರ್ಣಿ, ಮುದಕನಗೌಡ ಪಾಟೀಲ, ಗುರುಬಸಪ್ಪ ತೆವರಟ್ಟಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಕ ನಾರಾಯಣಪ್ಪ ಕುರುಬರ, ಡಿಟಿಓ ಎಂ.ಎಸ್.ಹಿರೇಮಠ, ಡಿಪೋ-1ರ ಮ್ಯಾನೇಜರ್ ಎಸ್.ಎ.ಬಿರಾದಾರ, ಎ.ಟಿ.ಎಂ ಜೆ.ಕೆ.ಹುಗ್ಗೇನವರ ಸೇರಿದಂತೆ ಯಕ್ಕುಂಡಿ, ಹೊಕ್ಕುಂಡಿ, ಕಾತ್ರಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ
ಬೆಂಗಳೂರು: ಗಣೇಶ ಚತುರ್ಥಿ (Ganesh Festival) ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ.
ಆ.22ರಂದು ಶುಕ್ರವಾರ, ಆ.23ರಂದು ಬೆನಕನ ಅಮವಾಸ್ಯೆ, ಆ.24ರಂದು ನಾಲ್ಕನೇ ಶನಿವಾರ, ಆ.25ರಂದು ಭಾನುವಾರ, ಆ.25ರಂದು ಸ್ವರ್ಣಗೌರಿ ವ್ರತ ಮತ್ತು ಆ.26ರಂದು ಗಣೇಶ ಹಬ್ಬ ಇರುವುದರಿಂದ ಸಾರ್ವಜನಿಕರು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ಬಸ್‌ಗಳು ಕಾರ್ಯನಿರ್ವಹಿಸಲಿವೆ.ಇದನ್ನೂ ಓದಿ: ಭಾರತದ ಪರ ಮಾತನಾಡಿದ್ದ ಅಮೆರಿಕ ಮಾಜಿ NSA ಬೋಲ್ಟನ್ ಮನೆಗೆ ಎಫ್‌ಬಿಐ ದಾಳಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆ ಬಸ್ಸುಗಳು ಕಾರ್ಯನಿರ್ವಹಿಸಲಿವೆ. ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯ ವಿವಿಧ ಸ್ಥಳಗಳಿಗೆ ತೆರಳಲು ಆ.22ರಿಂದ ಆ.26ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ನಂತರ ಆ.27 ಹಾಗೂ ನಂತರ ದಿನಗಳಂದು ಪ್ರಮುಖ ಸ್ಥಳಗಳಿಗೆ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗುವುದು.
ಸದರಿ ಹೆಚ್ಚುವರಿ ಸಾರಿಗೆಗಳ ಸದುಪಯೋಗಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಕಬ್ಬಿಗಾಗಿ ಲಾರಿ ಗ್ಲಾಸ್ ಪುಡಿಗಟ್ಟಿದ ಕಾಡಾನೆ: ವಿಡಿಯೋ ವೈರಲ್
ಕಲಬುರಗಿ: ಯಾವುದೇ ವಾಹನ ಚಲಾಯಿಸುವಾಗ ಚಾಲಕರು ಮೊಬೈಲ್ (Bus Driver Mobile) ಬಳಕೆ ಮಾಡಬಾರದು ಎಂಬ ನಿಯಮವಿದೆ. ಆದರೆ ಇಲ್ಲೊಬ್ಬ ಬಸ್ ಚಾಲಕ ಮೊಬೈಲ್‍ನಲ್ಲಿ ಮಾತನಾಡುತ್ತಾ ಒಂದೇ ಕೈಯಿಂದ ಬಸ್ ಓಡಿಸಿ ಪ್ರಯಾಣಿಕರನ್ನು ಆತಂಕಕ್ಕೀಡು ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಈ ಘಟನೆ ಪ್ರತನಿತ್ಯ ಅಫಜಲಪುರದಿಂದ ಕಲಬುರಗಿ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ಸಿನಲ್ಲಿ ನಡೆದಿದೆ. ಅಫಜಲಪುರ ಘಟಕದ ಕೆಎ-32 ಎಫ್ 2169 ಬಸ್ ಚಾಲಕ ನಾಗೇಂದ್ರಪ್ಪ ಇಂದು ಒಂದೇ ಕೈಯಲ್ಲಿ ಬಸ್ ಓಡಿಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದವರು.
ನಾಗೇಂದ್ರಪ್ಪ ಗಂಟೆಗಟ್ಟಲೇ ಫೋನಿನಲ್ಲಿ ಮಾತನಾಡುತ್ತಾ ಒಂದೇ ಕೈಯಲ್ಲಿ ಬಸ್ ಓಡಿಸುತ್ತಿದ್ದರು. ಇದನ್ನು ಕಂಡು ಗಾಬರಿಗೊಂಡ ಪ್ರಯಾಣಿಕನೋರ್ವ ತನ್ನ ಮೊಬೈಲ್‍ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾನೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಚಾಲಕನ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಪಾಕಿಸ್ತಾನದ ಅಣ್ವಸ್ತ್ರಗಳು ಎಲ್ಲಾ ಮುಸ್ಲಿಮರಿಗೆ ಸೇರಿದ್ದು: ಷರಿಫ್ ಅಳಿಯ
ಹೀಗೆ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗಿ ಚಾಲಕ ಸ್ವಲ್ಪ ಯಾಮಾರಿದರೆ ಪ್ರಯಾಣಿಕರ ಕಥೆ ಏನು ಎಂದು ಪ್ರಶ್ನಿಸಿದರುವ ಸಾರ್ವಜನಿಕರು, ಚಾಲಕ ನಾಗೇಂದ್ರಪ್ಪನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಉಡುಪಿ: ಸರ್ಕಾರಿ ಬಸ್‌ಗಳೊಂದಿಗೆ (Govt Bus) ಖಾಸಗಿ ಬಸ್‌ಗಳಲ್ಲಿಯೂ (Private Bus) ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು (Free Travel Facility) ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. (1/2)
— Sunil Kumar Karkala (@karkalasunil) May 30, 2023
ಟ್ವೀಟ್‌ನಲ್ಲೇನಿದೆ?
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ
ಎಲ್ಲಾ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಎನ್ನುವುದು ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಾಗಿತ್ತು. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ. ಜೂನ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಸರ್ಕಾರಿ ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಶಿಕ್ಷಕಿಯರು, ಚಾಲಕ ಸೇರಿ ಒಟ್ಟು ನಾಲ್ವರು ದುರ್ಮರಣಕ್ಕೀಡಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕು ಕ್ರಿಡಾಂಗಣದ ಬಳಿ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಚಿಗರತಿಹಳ್ಳಿ ಸರ್ಕಾರಿ ಶಾಲಾ ಶಿಕ್ಷಕಿ ಆಯೇಷಾ ಸಿದ್ದಿಕಿ, ಫರೀನ್ ಬೇಗಂ ಹಾಗೂ ಯಾಳವಾರ ಸರ್ಕಾರಿ ಶಾಲೆಯ ಸಹರಾ ಕಲತೂನ್ ಹಾಗೂ ಚಾಲಕನನ್ನು 45 ವರ್ಷದ ರುಕ್ಕಯ್ಯ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲಬುರಗಿಯಿಂದ ದಾವಣಗೆರೆ ಕಡೆ ಚಲಿಸುತ್ತಿದ್ದ ಬಸ್ ಚಾಲಕನಿಗೆ ಓವರ್ ಟೈಂ ಡ್ಯೂಟಿಗೆ ಹಾಕಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಅಂತ ಹೇಳಲಾಗುತ್ತಿದೆ.
ಕಲಬುರಗಿಯಿಂದ ದಾವಣಗೆರೆ ಹಾಗೂ ಯಾದಗಿರಿ ಜಿಲ್ಲೆಯ ಶಹಾಪೂರನಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಒಟ್ಟಿನಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಬಸ್ ಚಾಲಕರಿಗೆ ಓವರ್ ಟೈಂ ಡ್ಯೂಟಿಗೆ ಹಾಕುವುದರಿಂದಲೇ ಪದೇ ಪದೇ ಇಂತಹ ಅವಘಡಗಳ ಸಂಭವಿಸುತ್ತಿದೆ ಅಂತ ಅಲ್ಲಿನ ಸಿಬ್ಬಂದಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
ಚೆನ್ನೈ: ಇಲ್ಲಿನ ವಾಡಿಪಟ್ಟಿ ಬಳಿಯ ತನಿಚಿಯಂನಲ್ಲಿ ದಿಂಡಿಗುಲ್- ಮಧುರೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆಯೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಈ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ನಡೆದಿದೆ. ಮೃತನನ್ನು ಆರ್ ಅಮರ್ ಸೇನ್(22) ಎಂದು ಗರುತಿಸಲಾಗಿದೆ. 6 ವರ್ಷಗಳ ಹಿಂದೆ ನಡೆದ ಕೊಲೆಯೊಂದರ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ ಅಂತ ವಿರುದುವಾಘ್‍ನಗರ್ ಎಸ್‍ಪಿ ಎಂ ರಾಜರಾಜನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಕರಿಮೆದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದ ರಾಮ್ ಪ್ರಸಾದ್ ಕೊಲೆ ಪ್ರಕರಣದಲ್ಲಿ ಅಮರ್ ಮೂರನೇ ಆರೋಪಿಯಾಗಿದ್ದ. ಅಮರ್ ಕೊಲೆಯ ಹಿಂದೆ ರಾಮ್ ಪ್ರಸಾದ್ ಸಂಬಂಧಿಕರು ಹಾಗೂ ಗೆಳೆಯರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ದಿಂಡಿಗುಲ್ ಜಿಲ್ಲೆಯ ಬಟ್ಲಗುಂಡುವಿನಿಂದ ಅರಪಾಳಯಂ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ನಲ್ಲಿ ಅಮರ್ ಸಂಚರಿಸುತ್ತಿದ್ದ. ಈ ವೇಳೆ ಬಸ್ ತನಿಚಿಯಂ ಬಳಿ ಹೋಗುತ್ತಿದ್ದಾಗ, ಚತುಷ್ಪಥ ಹೆದ್ದಾರಿಯಲ್ಲಿ ಕಾರ್ ಮತ್ತು 2 ಬೈಕ್ ನಲ್ಲಿ ಬಂದ 10 ಜನರ ತಂಡ ಬಸ್ಸನ್ನು ಅಡ್ಡಹಾಕಿತ್ತು. ನೋಡನೋಡುತ್ತಿದ್ದಂತೆಯೇ 10 ಮಂದಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಸ್ಸಿನೊಳಗೆ ನುಗ್ಗಿ ಮುಂಬದಿ ಸೀಟಲ್ಲಿ ಕುಳಿತಿದ್ದ ಅಮರ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅಮರ್ ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಬಸ್ ನಿಂದ ಇಳಿದು ತಮ್ಮ ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.
ಸದ್ಯ ಘಟನೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ 3 ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ ಎಂದು ಎಸ್‍ಪಿ ಹೇಳಿದ್ದಾರೆ.
ಬೆಂಗಳೂರು: ದೇಶಾದ್ಯಂತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಸಿಲಿಕಾನ್ ಸಿಟಿಯಿಂದ ಜನರು ಊರಿನ ಕಡೆ ಹೊರಟ ಪರಿಣಾಮ ನಗರದ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿದ್ದರು.
ಪ್ರಯಾಣಿಕರು ಹಾಗೂ ಬಸ್ ಗಳಿಂದ ನಗರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹೀಗಾಗಿ ಜನರು ನಿಲ್ದಾಣ ತಲುಪಲು ಹರಸಾಹಸ ಪಡಬೇಕಾಯಿತು. ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಮಂಗಳವಾರ ರಾತ್ರಿ ಮಳೆ ಇಲ್ಲದಿದ್ದರಿಂದ ಪ್ರಯಾಣಿಕರು ನೆಮ್ಮದಿಯ ನಿಟ್ಟಿಸುರು ಬಿಟ್ಟಿದ್ದರು. ಆದ್ರೆ ಸಂಜೆಯಿಂದಲೇ ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ಮುಗಿಬೀಳೂತ್ತಿದ್ದು, ಇದರಿಂದ ಸಂಚಾರ ದಟ್ಟಣೆ ಅಧಿಕವಾಗಿತ್ತು.
ಮೈಸೂರು ರಸ್ತೆಯ ಬಾಪೂಜಿನಗರ, ಯಶವಂತಪುರ, ಪೀಣ್ಯ, ಹೊಸೂರು ರಸ್ತೆ ಹಾಗೂ ಶಾಂತಿನಗರ ಆನಂದರಾವ್ ಸರ್ಕಲ್ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹಬ್ಬದ ಹಿನ್ನೆಲೆಯಲ್ಲಿ ಸುಮಾರು 1500 ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕೆಎಸ್‍ಆರ್‍ಟಿಸಿ ಮಾಡಿದೆ. ಸರ್ಕಾರಿ ಬಸ್ ಮಾತ್ರವಲ್ಲದೇ ಖಾಸಗಿ ಬಸ್ ಗಳು ಕೂಡ ಅಧಿಕವಾಗಿದ್ದವು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಲು ಕಾರಣವಾಗಿತ್ತು. ಕೆ.ಜಿ ರಸ್ತೆ, ಯಶವಂತಪುರ, ಆನಂದ ರಾವ್ ಸರ್ಕಲ್, ಮೌರ್ಯ ವೃತ್ತ, ಶಾಂತಿ ನಗರ, ವಿಜಯನಗರ ಮೊದಲಾದ ಕಡೆಗಳಲ್ಲಿ ಖಾಸಗಿ ಬಸ್ ಏಜೆನ್ಸಿಗಳ ಕಚೇರಿ ಬಳಿ ಪ್ರಯಾಣಿಕರ ದಂಡೇ ನೆರೆದಿತ್ತು.
ಖಾಸಗಿ ಬಸ್‍ಗಳು ರಸ್ತೆಯಲ್ಲಿಯೇ ನಿಂತಿದ್ದರಿಂದ ಪಾದಾಚಾರಿಗಳ ಓಡಾಟಕ್ಕೂ ತೊಂದರೆಯಾಗಿತ್ತು. ಅಲ್ಲದೇ ಇದರಿಂದ ವಾಹನ ಸವಾರರು ಕೂಡ ಪರದಾಡಬೇಕಾಯಿತು. ಒಟ್ಟಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ಹರಸಾಹಸಪಡಬೇಕಾಯಿತು.
ಇನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ ರೈಲು ನಿಲ್ದಾಣ, ಬೆಂಗಳೂರು ದಂಡು ನಿಲ್ದಾಣ, ಕೆಆರ್ ಪುರ ರೈಲು ನಿಲ್ದಾಣ ಸೇರಿದಂತೆ ಸಿಲಿಕಾನ್ ಸಿಟಿಯಲ್ಲಿರೋ ಎಲ್ಲಾ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು.
ಕೊಪ್ಪಳ: ಸ್ಟೇರಿಂಗ್ ಕಟ್ ಆದ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ 15 ಪ್ರಯಾಣಿಕರು ಗಾಯಗೊಂಡು, ಮೂವರ ಸ್ಥಿತಿ ಗಂಭೀರವಾಗಿರೋ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಬಸ್ ಪಲ್ಟಿಯಾಗಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ ಹೊರಟಿದ್ದ ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸ್ತಿದ್ರು. ದೋಟಿಹಾಳ ಗ್ರಾಮದ ಬಳಿ ಬಸ್ ಬರುತ್ತಿದ್ದಂತೆ ಸ್ಟೇರಿಂಗ್ ಕಟ್ ಆಗಿ ಬುಡಮೇಲಾಗಿ ಬಿದ್ದಿದೆ. ಮೂವರ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯಿಂದ ಕೆಲ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಕುಷ್ಟಗಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.