Tag: govt office

  • ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

    ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

    ಹಾಸನ: ಸರ್ಕಾರಿ ಕಚೇರಿಯಲ್ಲಿ (Government Office) ಖಾಸಗಿ ವ್ಯಕ್ತಿಯೊಬ್ಬರ ಹುಟ್ಟುಹಬ್ಬವನ್ನು (Birthday) ಸಂಭ್ರಮದಿಂದ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಲೇಶಪುರ (Sakleshpura) ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ (ಎಆರ್‌ಟಿಓ) ಎಸ್.ಎನ್.ಮಧುರಾ ಸೇರಿ ಮೂವರು ನೌಕರರನ್ನು ಸೇವೆಯಿಂದ ಅಮಾನತು (Suspend) ಮಾಡಲಾಗಿದೆ.

    ಎಆರ್‌ಟಿಓ ಜೊತೆಗೆ ಕಚೇರಿ ಅಧೀಕ್ಷಕ ಎಂ.ಕೆ.ಗಿರೀಶ್, ಮೋಟಾರು ವಾಹನ ನಿರೀಕ್ಷಕಿ ಎನ್.ಆರ್.ಆಶಾ ಅಮಾನತುಗೊಂಡವರು. ಜು.11ರಂದು ಶುಕ್ರವಾರ ಡ್ರೈವಿಂಗ್ ಶಾಲೆಯೊಂದರ ಮುಖ್ಯಸ್ಥ ಮೋಹನ್ ಶೆಟ್ಟಿ ಎಂಬವರ ಹುಟ್ಟುಹಬ್ಬವನ್ನು ಕಚೇರಿಯಲ್ಲಿ ಆಚರಿಸಲಾಗಿತ್ತು. ಇದರ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಮತ್ತು ಶಿಸ್ತು ಪ್ರಾಧಿಕಾರ ಆಯುಕ್ತ ಎ.ಎಂ.ಯೋಗೀಶ್ ಅವರು ಮೂವರನ್ನು ಅಮಾನತು ಮಾಡಿ ಸೋಮವಾರ ಆದೇಶಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

    ಪ್ರಕರಣ ಕುರಿತು ಸ್ಪಷ್ಟನೆ ಕೋರಿದ್ದ ಮೇಲಧಿಕಾರಿಗಳಿಗೆ ಎಆರ್‌ಟಿಓ ಎಸ್.ಎನ್.ಮಧುರಾ ಅವರು ನೀಡಿದ ಸಮಜಾಯಿಷಿಯಲ್ಲಿ ಖಾಸಗಿ ವ್ಯಕ್ತಿ ಮೋಹನ್ ಶೆಟ್ಟಿ ಅವರನ್ನು ಪರ ಲಿಖಿತ ಹೇಳಿಕೆ ಕೊಟ್ಟಿದ್ದರು. ಆ ವ್ಯಕ್ತಿ ಡ್ರೈವಿಂಗ್ ಶಾಲೆಯ ಮುಖ್ಯಸ್ಥರಾಗಿದ್ದು, ಕಚೇರಿ ಆವರಣದ ಗೇಟ್ ಹಾಗೂ ಬೀಗದ ವ್ಯವಸ್ಥೆ ಉಚಿತವಾಗಿ ನೀಡಿದ ದಾನಿಗಳಾಗಿದ್ದಾರೆ. ಶುಕ್ರವಾರ ಎಂದಿನಂತೆ ಪೂಜೆ ಮಾಡುತ್ತಿದ್ದೆವು. ಮೋಹನ್ ಶೆಟ್ಟಿ ಅವರ ಹುಟ್ಟುಹಬ್ಬ ಹಾಗೂ ಕಚೇರಿಯಲ್ಲಿ ಆಚರಿಸುವ ಕುರಿತು ಮಾಹಿತಿ ಇರಲಿಲ್ಲ. ಏಕಾಏಕಿ ಕೇಕ್, ಶಾಲು, ಹಾರ ತಂದಿದ್ದರು. ನಾನು ಅವರಿಗೆ ಜನ್ಮ ದಿನದ ಶುಭಾಶಯ ಕೋರಿದ್ದೇನೆ ಹೊರತು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿಸಿದ್ದರು. ಇವರಲ್ಲದೆ ಎಂ.ಕೆ.ಗಿರೀಶ್ ಹಾಗೂ ಎನ್.ಆರ್.ಆಶಾ ಸಹ ಇದೇ ರೀತಿ ಸಮಜಾಯಿಷಿ ನೀಡಿದ್ದಾರೆ. ಇದನ್ನೂ ಓದಿ: 1.25 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ

    ಎಎಆರ್‌ಟಿಓ ಹಾಗೂ ಇತರ ಇಬ್ಬರು ನೌಕರರ ಸಮಜಾಯಿಷಿಯನ್ನು ಪರಿಶೀಲಿಸಿದ ಮೇಲಧಿಕಾರಿಗಳು, ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದನ್ನು ಪರಿಗಣಿಸಿ ಅಮಾನತು ಮಾಡಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮ ಆಯೋಜಿಸಲು ಮಾತ್ರ ಅವಕಾಶವಿದೆ. ಪ್ರಸ್ತುತ ಪ್ರಕರಣದಲ್ಲಿ ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಹುಟ್ಟುಹಬ್ಬ ಆಚರಿಸುವುದು ಸಾಕ್ಷಿ ಸಮೇತ ಕಂಡುಬಂದಿದ್ದು, ಕಚೇರಿ ಶಿಸ್ತು ಉಲ್ಲಂಘನೆ ಮಾಡಿದ್ದಾರೆಂದು ಅಮಾನತು ಮಾಡಲಾಗಿದೆ. ಇದನ್ನೂ ಓದಿ: D-CET ಶುಲ್ಕ ಪಾವತಿಗೆ ದಿನಾಂಕ ವಿಸ್ತರಣೆ: KEA

  • ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಸರ್ಕಾರಿ ಕಚೇರಿ ನವೀಕರಣಕ್ಕೂ ಅನುದಾನ ಕೊರತೆ – ಸಿಬ್ಬಂದಿಯೇ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ

    ಕಲಬುರಗಿ: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಬಳಿಕ ಅಭಿವೃದ್ಧಿ ಕೆಲಸಗಳಿಗೆ ಹೊಡೆತ ಬಿದ್ದಿರುವುದು ಜಗಜ್ಜಾಹಿರವಾಗಿದ್ದು, ಇದೀಗ ಸರ್ಕಾರಿ ಕಚೇರಿಗಳ (Government Office) ದುರಸ್ತಿಗೂ ಸಹ ಆರ್ಥಿಕ ಸಂಕಷ್ಟ ಎದುರಾದಂತಿದೆ. ಹೀಗಾಗಿ ಸರ್ಕಾರಿ ನೌಕರರು ಕಚೇರಿ ಸಿಬ್ಬಂದಿಯಿಂದ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸಿದ್ದಾರೆ.

    ಹೌದು, ಮಳೆ ಬಂದರೆ ಸಾಕು ಕಲಬುರಗಿ (Kalaburagi) ಎಡಿಎಲ್‌ಆರ್ (ADLR) ಕಚೇರಿಯಲ್ಲಿ ನೀರು ಸೋರುತ್ತದೆ. ಯಾಕಂದ್ರೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದ ಒಂದನೇ ಮಹಡಿಯಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ಸಾಕು ಇಡೀ ಕಚೇರಿಯ ಛಾವಣಿಯಿಂದ ಮಳೆ ನೀರು ಸೋರುತ್ತದೆ. ಹೀಗಾಗಿ ಸಾರ್ವಜನಿಕರ ಜಮೀನಿನ ಕಡತಗಳು ಏನಾದರೂ ನೆನೆದು ಹಾಳಾದರೆ ಮತ್ತೆ ಆ ದಾಖಲೆಗಳು ಸಿಗೋದಿಲ್ಲ. ಹೀಗಾಗಿ ಶಿಥಿಲಾವಸ್ಥೆಯ ಕಚೇರಿ ಬೇರೆಡೆ ಸ್ಥಳಾಂತರ ಮಾಡಿ, ಇಲ್ಲ ದುರಸ್ತಿ ಮಾಡಿಕೊಡಿ ಅಂತ ಅಧಿಕಾರಿಗಳಿಗೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಖುದ್ದು ಕಚೇರಿಯ ಸಿಬ್ಬಂದಿಗಳೇ ಸಹೋದ್ಯೋಗಿಗಳ ಬಳಿ ದೇಣಿಗೆ ಸಂಗ್ರಹಿಸಿ ಕಚೇರಿ ದುರಸ್ತಿ ಮಾಡಿಸುತ್ತಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಭಾರೀ ಮಳೆ – 5 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

    ಸದ್ಯ ಕಲಬುರಗಿ ಎಡಿಎಲ್‌ಆರ್ ಕಚೇರಿ ದುರಸ್ತಿಗೆ ಒಟ್ಟು 18 ಲಕ್ಷ ರೂ. ಪ್ರಪೋಸಲ್ ಕಳುಹಿಸಿದ್ದರೂ ಪ್ರಯೋಜನವಾಗಿಲ್ಲ. ಸಿಬ್ಬಂದಿ ತಮ್ಮ ಸ್ಚಂತ ಹಣ ಹಾಕಿ ಕಚೇರಿ ದುರಸ್ಥಿ ಮಾಡುತ್ತಿದ್ದಾರೆ. ಹಳೆಯ ಸಿಮೆಂಟ್ ಛಾವಣಿ ಮೇಲೆ ಕಬ್ಬಿಣದ ಶೆಡ್ ಹೊಡೆಸಿ ಮಳೆ ನೀರು ಕಚೇರಿಯ ಒಳಗೆ ಬರದಂತೆ ಮಾಡಿದ್ದಾರೆ. ಅಲ್ಲದೇ ಇಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲ. ಹೀಗಾಗಿ ಮಹಿಳೆಯರಿಗಾಗಿ ಒಂದು ಶೌಚಾಲಯವನ್ನು ಸಹ ಸಿಬ್ಬಂದಿ ತಮ್ಮ ಸ್ವಂತ ಹಣದಲ್ಲಿಯೇ ಕಟ್ಟಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್‌ ಪಾಲಿಗೆ ಇಂದು ಬಿಗ್‌ ಡೇ

  • ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    ರಣ ಬಿಸಿಲು – ಕಿತ್ತೂರು, ಕಲ್ಯಾಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

    – ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಕೆಲಸ

    ಬೆಂಗಳೂರು: ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು (Kittur) ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ (Kalyana Karnataka) 6 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ (Govt Office) ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.

    ಕಲಬುರಗಿ ವಿಭಾಗದ 6 ಜಿಲ್ಲೆಗಳು, ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ. ಇದನ್ನೂ ಓದಿ: ನಾಳೆ ಹೈಕಮಾಂಡ್ ಮುಂದೆ ವರದಿ ಕೊಡಲಿರುವ ಸಿಎಂ ಸಿದ್ದರಾಮಯ್ಯ: ರಾಜಣ್ಣ ಹನಿಟ್ರ್ಯಾಪ್ ಕೇಸ್‌ಗೆ ಎಳ್ಳುನೀರು?

    ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ

    8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ. ಇದನ್ನೂ ಓದಿ: ಗದಗ| ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ

  • ರಾಯಚೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೊರೊನಾ ಭೀತಿಯಿಲ್ವಾ?

    ರಾಯಚೂರು ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕೊರೊನಾ ಭೀತಿಯಿಲ್ವಾ?

    – ನಿತ್ಯವೂ ಗುಂಪು ಗುಂಪಾಗೇ ವ್ಯವಹರಿಸುವ ಜನ

    ರಾಯಚೂರು: ನಗರದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದರೂ ಜನ ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ನಗರದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಪ್ರತೀದಿನ ಜನಜಂಗುಳಿ ಸೇರುತ್ತಿದೆ. ಸಾಮಾಜಿಕ ಅಂತರ ಕಾಪಾಡಿ, ಜನರನ್ನ ನಿಯಂತ್ರಿಸಲು ಇಲ್ಲಿನ ಅಧಿಕಾರಿಗಳು ಸಹ ವಿಫಲರಾಗಿದ್ದಾರೆ.

    ಇಂದು ಸೋಮವಾರವಾಗಿದ್ದರಿಂದ ನೂರಾರು ಜನರು ಉಪನೋಂದಣಿ ಕಚೇರಿಯಲ್ಲಿ ಜಮಾವಣೆಯಾಗಿದ್ದರು. ಕಚೇರಿಯೊಳಗೆ ಸಾಮಾಜಿಕ ಅಂತರವಿಲ್ಲದೆ ಸೇರಿದ ಜನ ಕೊರೊನಾ ಭೀತಿಯನ್ನೇ ಮರೆತಿದ್ದಾರೆ. ಸಿಬ್ಬಂದಿಗಳ ಮುಂದೆಯೂ ವಿವಿಧ ಕೆಲಸಗಳಿಗಾಗಿ ಜನ ಮುಗಿಬೀಳುತ್ತಿದ್ದಾರೆ.

    ಕಚೇರಿ ಒಳಗೆ ಬರುವವರಿಗೆ ಸ್ಯಾನಿಟೈಸರ್ ವ್ಯವಸ್ಥೆಯೂ ಇಲ್ಲಾ. ಹೀಗಿದ್ದರೂ ಜನ ಮಾತ್ರ ಯಾವ ಪರಿವೇ ಇಲ್ಲದೆ ಕಚೇರಿಯಲ್ಲಿ ಓಡಾಡುತ್ತಿದ್ದಾರೆ. ಮಾಸ್ಕ್ ಇಲ್ಲದೆ ಕಚೇರಿಯಲ್ಲಿ ವ್ಯವಹರಿಸುತ್ತಿರುವ ಜನರನ್ನ ನಿಯಂತ್ರಿಸಲು ಆಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಉಪನೋಂದಣಿ ಕಚೇರಿಯ ಸಿಬ್ಬಂದಿ ಜನ ಹೆಚ್ಚಾದಾಗಲೆಲ್ಲಾ ಕೊನೆಗೆ ಜನರನ್ನೆಲ್ಲಾ ಹೊರಗೆ ಕಳುಹಿಸುತ್ತಿದ್ದಾರೆ.

    ರಾಯಚೂರು ನಗರವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 800 ಗಡಿ ದಾಟಿದೆ. ಹೀಗಿದ್ದರೂ ಯಾವ ಮುನ್ನೆಚ್ಚರಿಕೆಗಳಿಲ್ಲದೆ ಜನ ಸರ್ಕಾರಿ ಕಚೇರಿಗಳಲ್ಲಿ ಗುಂಪು ಗುಂಪಾಗಿ ವ್ಯವಹರಿಸುತ್ತಿದ್ದಾರೆ.