Tag: govt schools

  • ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ Facial Recognition ತಂತ್ರಜ್ಞಾನ- ಸರ್ಕಾರ ಆದೇಶ

    ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ Facial Recognition ತಂತ್ರಜ್ಞಾನ- ಸರ್ಕಾರ ಆದೇಶ

    ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಇನ್ನುಮುಂದೆ ಆನ್‌ಲೈನ್ ಸಿಸ್ಟಮ್ ಜಾರಿಯಾಗಲಿದೆ. ಪ್ರಸಕ್ತ ವರ್ಷದಿಂದಲೇ Facial Recognition ತಂತ್ರಜ್ಞಾನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ ಸರ್ಕಾರ ಮತ್ತು ಶಿಕ್ಷಣ ‌ಇಲಾಖೆ ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನಿಂದಲೇ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ.

    ಈ ವರ್ಷದ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದ ಬಗ್ಗೆ ಘೋಷಣೆ ‌ಮಾಡಿದರು. ಅದರಂತೆ ʼನಿರಂತರʼ ಹೆಸರಿನಲ್ಲಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿದೆ. ಮೊಬೈಲ್ ಆಧಾರಿತ AI-Driven Facial Recognition Attendance system ಇದಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವ್ಯವಸ್ಥೆ ಜಾರಿಯಾಗುತ್ತಿದ್ದು, 52,686 ಶಾಲೆಗಳಲ್ಲಿ ಆನ್‌ಲೈನ್ ಹಾಜರಾತಿ ವ್ಯವಸ್ಥೆ ಬರಲಿದೆ. ಇದರಲ್ಲಿ 46‌,460 ಸರ್ಕಾರಿ ಶಾಲೆಗಳು 6,226 ಅನುದಾನಿತ ಶಾಲೆಗಳಲ್ಲಿ AI ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿ ಒಳಗೆ ಬರಲಿದೆ. ಒಟ್ಟು 52,55,738 ವಿದ್ಯಾರ್ಥಿಗಳ ಹಾಜರಾತಿ ಆನ್‌ಲೈನ್ ಮೂಲಕ ಸೆರೆ ಹಿಡಿಯಬಹುದು. ಇದರಲ್ಲಿ 40,74,525 ಸರ್ಕಾರಿ ಶಾಲಾ ಮಕ್ಕಳು 11,81,213 ಅನುದಾನಿತ ಶಾಲಾ ಮಕ್ಕಳಿಗೆ ಹೊಸ ಹಾಜರಾತಿ ವ್ಯವಸ್ಥೆ ಅನ್ವಯ ಆಗಲಿದೆ.

    ಸ್ಮಾರ್ಟ್ ಹಾಜರಾತಿ ಪ್ರಯೋಜನಗಳೇನು?
    *ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಸಮಯದಲ್ಲಿ ಲಭ್ಯವಾಗುತ್ತದೆ. ವಿದ್ಯಾರ್ಥಿಗಳ ಹಾಜರಾತಿಯಲ್ಲಿ ನಿಖರತೆ ದೊರೆಯುತ್ತದೆ.
    *ಪ್ರಸ್ತುತ ಹಾಜರಾತಿ ದಾಖಲಾತಿಯಲ್ಲಿನ ವ್ಯವಸ್ಥೆಯಲ್ಲಿನ ನ್ಯೂನ್ಯತೆ ಸರಿಪಡಿಸಿ ನಿಖರ ಹಾಜರಾತಿಯನ್ನು ನಿತ್ಯವೂ ಪಡೆಯಬಹುದು.
    *ಯಾವುದೇ ಶಾಲೆಯಲ್ಲಿ ಹಾಜರಾತಿಯಲ್ಲಿ ಕೊರತೆ ಬಂದರೆ ನಿತ್ಯವೂ ಮೇಲ್ವಿಚಾರಣೆ ಮಾಡಬಹುದು.
    *ವಿವಿಧ ಪ್ರೋತ್ಸಾಹದಾಯಕ ಯೋಜನೆಗಳ ಅನುಷ್ಠಾನಕ್ಕೆ ನಿಖರ ಮಾಹಿತಿ ಲಭ್ಯವಾಗುತ್ತದೆ.
    *ವಿದ್ಯಾರ್ಥಿಗಳ ನಿಖರ ಮಾಹಿತಿ ಸಿಗುವುದರಿಂದ ಅನಗತ್ಯ, ಹೆಚ್ಚುವರಿ ಅನುದಾನ ಹಂಚಿಕೆ ತಡೆಗಟ್ಟಬಹುದು.
    *ನಿತ್ಯವೂ ಹಾಜರಾತಿ ಲಭ್ಯವಾಗುವುದರಿಂದ ಶಾಲೆಗಳಲ್ಲಿನ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಬಹುದು.

  • ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

    ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

    ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು.

    ನಗರದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರಿ ಶಾಲೆಗಳಿಗೆ ಉಚಿತ ಘೋಷಣೆಯ ಉಡುಗೊರೆ ನೀಡಿದರು. ಇದನ್ನೂ ಓದಿ: Operation Leopard: ರಣತಂತ್ರ ರೂಪಿಸಿ ಕೊನೆಗೂ ಬೊಮ್ಮನಹಳ್ಳಿ ಚಿರತೆ ಸೆರೆ

    ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟಿತ್ತು. ಇಂದಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್‌, ಕುಡಿಯುವ ನೀರನ್ನು ಉಚಿತವಾಗಿ ನೀಡಲಾಗುವುದು ಎಂದು ವೇದಿಕೆಯಲ್ಲೇ ಸಿಎಂ ಘೋಷಿಸಿದರು.

    ಇತ್ತೀಚೆಗೆ ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಪ್ರೀತಿ ಕಡಿಮೆ ಆಗುತ್ತಿದೆ. ಇಂಗ್ಲಿಷ್ ಮಾಧ್ಯಮಗಳ ಮೇಲಿನ ವ್ಯಾಮೋಹ ಜಾಸ್ತಿ ಆಗುತ್ತಿದೆ. ಕನ್ನಡ ಶಾಲೆಯಲ್ಲಿ ಓದಿದರೆ ಕೆಲಸ ಸಿಗುವುದಿಲ್ಲ ಎನ್ನುವ ಕಲ್ಪನೆ ಇದೆ. ಈ ಕಲ್ಪನೆ ಬಿಡಬೇಕು. ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ

    ನಮ್ಮ ‌ಪ್ರಯತ್ನಕ್ಕೆ ಕೋರ್ಟ್‌ಗಳು ಸಹಕಾರ ನೀಡುತ್ತಿಲ್ಲ. ತಮ್ಮ ಮಕ್ಕಳು ಯಾವ ಭಾಷೆಯಲ್ಲಿ ಕಲಿಯಬೇಕು ಅಂತ ಪೋಷಕರು ನಿರ್ಧಾರ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ನಮ್ಮ ‌ಪ್ರಯತ್ನಕ್ಕೆ ಹಿನ್ನಡೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಕನಿಷ್ಠ SSLC ವರೆಗೆ ಕನ್ನಡ ಮಾಧ್ಯಮದಲ್ಲಿ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: BMTC ಸಾರಥಿಗಳ ಹಾರ್ಟ್ ಇನ್ ಡೇಂಜರ್- ಜಯದೇವ ವೈದ್ಯರ ವರದಿಯಲ್ಲಿ ಬಹಿರಂಗ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ ಕೊಡುಗೆ ನೀಡಿದ ಇನ್ಫೋಸಿಸ್‌

    ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ ಕೊಡುಗೆ ನೀಡಿದ ಇನ್ಫೋಸಿಸ್‌

    ಪಂಜಾಬ್: ಇಲ್ಲಿನ ಮೊಗಾ ಜಿಲ್ಲೆಯಲ್ಲಿ ಶಾಲಾ ಶಿಕ್ಷಣವನ್ನು ಆಧುನೀಕರಿಸಲು ಇನ್ಫೋಸಿಸ್ (Infosys), ಸರ್ಕಾರಿ ಶಾಲೆಗಳಿಗೆ 150 ಕಂಪ್ಯೂಟರ್‌ಗಳನ್ನು ವಿತರಿಸಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಮತ್ತು ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವುದು ಈ ನೆರವಿನ ಮುಖ್ಯ ಉದ್ದೇಶವಾಗಿದೆ ಎಂದು ಆಡಳಿತ ತಿಳಿಸಿದೆ. ಮೊಗಾ ಜಿಲ್ಲೆ ಡಿಸಿ ಕುಲವಂತ್ ಸಿಂಗ್ ಮಾತನಾಡಿ, ಅಭಿವೃದ್ಧಿಗಾಗಿ ʻಆಕಾಂಕ್ಷೆಯ ಜಿಲ್ಲೆʼ ಎಂದು ಕೇಂದ್ರವು ಆಯ್ಕೆ ಮಾಡಿರುವ ಜಿಲ್ಲೆಗಳಲ್ಲಿ ಮೊಗಾವು ಸೇರಿದೆ. ಇದನ್ನೂ ಓದಿ: ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆಸ್ಪತ್ರೆಗೆ ದಾಖಲು

    ಇನ್ಫೋಸಿಸ್ ಮೊಗಾ ಜಿಲ್ಲೆಗೆ ಇದುವರೆಗೆ 350 ಕಂಪ್ಯೂಟರ್‌ಗಳನ್ನು ಒದಗಿಸಿದ್ದು, ಇದರಲ್ಲಿ ಕಳೆದ ವರ್ಷ 200 ಕಂಪ್ಯೂಟರ್‌ಗಳನ್ನು ಸರ್ಕಾರಿ ಶಾಲೆಗಳಿಗೆ ಹಂಚಿಕೆ ಮಾಡಲಾಗಿತ್ತು. ಈಗ ಪಡೆದ 150 ಕಂಪ್ಯೂಟರ್‌ಗಳನ್ನು ಶೀಘ್ರದಲ್ಲೇ ಶಾಲೆಗಳಿಗೆ ಹಂಚಿಕೆ ಮಾಡಲಾಗುವುದು. ಈ ಕ್ರಮದಿಂದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್‌ಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಡಿಸಿ ತಿಳಿಸಿದ್ದಾರೆ.

    ಇನ್ಫೋಸಿಸ್‌ನೊಂದಿಗೆ ನಿರಂತರ ಸಂಪರ್ಕದಲ್ಲಿರುವ ಜಿಲ್ಲಾಧಿಕಾರಿಗೆ ಉಪ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ರಾಕೇಶ್ ಕುಮಾರ್ ಮಕ್ಕರ್ ಧನ್ಯವಾದ ತಿಳಿಸಿದರು. ಎಲ್ಲಾ ಸರ್ಕಾರಿ ಶಾಲೆಗಳನ್ನು ಆಧುನಿಕ ಮತ್ತು ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಮಕ್ಕರ್ ಹೇಳಿದರು. ಇದನ್ನೂ ಓದಿ: ಫೇಕ್ ಮ್ಯಾರೇಜ್ ಸರ್ಟಿಫಿಕೇಟ್ ಸೃಷ್ಟಿ – ಸತ್ತವನ 19 ಕೋಟಿ ಆಸ್ತಿ ಹೊಡೆದ್ಲು ಖತರ್ನಾಕ್ ಸುಂದ್ರಿ

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ

    ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ : ಹೆಚ್‍ಡಿಕೆ

    ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಷ್ಟೇ ಹಿಜಬ್ ವಿವಾದ ನಡೆಯುತ್ತಿದ್ದು, ಇದು ಬಡ ಮಕ್ಕಳ ಭವಿಷ್ಯವನ್ನು ಬಲಿ ಪಡೆಯುವ ರಾಜಕೀಯ ದುರುದ್ದೇಶವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹಿಜಬ್ ವಿವಾದದ ಕುರಿತು ಜಿಲ್ಲೆಯ ಚಿಂತಾಮಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಬಡ ಮಕ್ಕಳ ಭವಿಷ್ಯವನ್ನು ಬಲಿ ಪಡೆಯುವ ರಾಜಕೀಯ ದುರುದ್ದೇಶವಾಗಿದೆ. ಶ್ರೀಮಂತರ ಮಕ್ಕಳು ಓದುತ್ತಿರುವ ಖಾಸಗಿ ಶಾಲೆಗಳಲ್ಲಿ ಈ ವಿವಾದ ನಡೆಯುತ್ತಿಲ್ಲ. ಹಾಲಿ ಮಾಜಿ ಮಂತ್ರಿಗಳು ಶಾಸಕರ ಮಕ್ಕಳು ಓದುತ್ತಿರುವ ಶಾಲೆಗಳಲ್ಲಿ ವಿವಾದ ಇಲ್ಲ. ಅಮಾಯಕ ಮಕ್ಕಳಲ್ಲಿ ದ್ವೇಷದ ಭಾವನೆ ಹುಟ್ಟುಹಾಕುವುದು ಕೆಲವು ರಾಜಕೀಯ ಪಕ್ಷಗಳು ಬಲವರ್ಧನೆಗೆ ಷಡ್ಯಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

    ಇವರು ಸಮಾಜದಲ್ಲಿ ಕೋಮುಗಲಭೆ ಉಂಟುಮಾಡಿ ಅಶಾಂತಿ ಉಂಟುಮಾಡಲು ಹೊರಟಿದ್ದಾರೆ. ಹಿಜಬ್ ವಿವಾದ ಉದ್ಬವವಾದ ದಿನವೇ ಸರ್ಕಾರ ಸರಿಯಾದ ಕ್ರಮ ತೆಗದುಕೊಂಡಿಲ್ಲ. ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಂಡಿದ್ದರೆ ರಾಷ್ಟ್ರೀಯ ಮಟ್ಟದ ಚರ್ಚೆಗೆ ಅವಕಾಶ ಇರುತ್ತಿರಲಿಲ್ಲ. ರಾಜಕೀಯ ತೆವಲಿಗೆ ರಾಷ್ಟ್ರೀಯ ಪಕ್ಷಗಳು ಬಡ ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಹಿಜಾಬ್, ಕೇಸರಿ ಉಡುಪು ಧರಿಸುವ ವಿಚಾರದಲ್ಲಿ ಬಡಮಕ್ಕಳನ್ನ ಬಲಿ ಕೊಡುವ ಕೆಲಸ ನಡೆಯುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ, ಹಿಜಬ್, ಕೇಸರಿ ತಿಕ್ಕಾಟ ನಡೆಯುತ್ತಿದೆ ಎಂದು ಸಿಡಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

    ಖಾಸಗಿ ಶಾಲಾ ಕಾಲೇಜುಗಳಲ್ಲಿ ಈ ವಿಚಾರವಾಗಿ ಯಾವುದೇ ಸಮಸ್ಯೆ ಇಲ್ಲ. ಶಾಸಕರು, ಮಂತ್ರಿಗಳು, ಮಾಜಿ ಶಾಸಕರು, ಮಂತ್ರಿಗಳ ಮಕ್ಕಳು ಖಾಸಗಿ ಶಾಲಾ ಕಾಲೇಜುಗಳಲ್ಲಿ ಓದುತ್ತಿದ್ದಾರೆ. ಬಡಪಾಯಿಗಳ ಮಕ್ಕಳು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸೇರುತ್ತಾರೆ. ಬಡಪಾಯಿಗಳ ಮಕ್ಕಳನ್ನು ಬೀದಿಗೆ ಬಿಟ್ಟು ರಾಜಕೀಯ ಪಕ್ಷಗಳು ಲೆಕ್ಕಾಚಾರ ಹಾಕುತ್ತಿವೆ ಎಂದರು.