Tag: gowri festival

  • ತುಮಕೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 33 ಷರತ್ತುಗಳು

    ತುಮಕೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 33 ಷರತ್ತುಗಳು

    ತುಮಕೂರು: ಗೌರಿ-ಗಣೇಶ ಮೂರ್ತಿ (Ganesha Idol) ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸಮಯದಲ್ಲಿ ಆಯೋಜಕರು ಜಿಲ್ಲಾಧಿಕಾರಿಗಳ (Tumkur DC) ಆದೇಶದಂತೆ ಪ್ರಸಾದ ವಿತರಿಸಲು ಕಡ್ಡಾಯವಾಗಿ ಸಮಿತಿಯಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ತಿಪಟೂರು ತಾಲೂಕು ದಂಡಾಧಿಕಾರಿ ಪವನ್‌ಕುಮಾ‌ರ್ ತಿಳಿಸಿದ್ದಾರೆ.

    ತಾಲ್ಲೂಕು ಆಡಳಿತ ಸೌಧದಲ್ಲಿ ಗೌರಿ-ಗಣೇಶ ಮೂರ್ತಿ (Gowri Ganesha Idol) ಪ್ರತಿಷ್ಠಾಪನೆಗೆ ಸಂಬಧಿಸಿದಂತೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನೆಡಸಿ ವಿವಿಧ ಇಲಾಖೆಗಳ ವತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ನಗರ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ-ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಏಕ ಗವಾಕ್ಷಿ ತಂತ್ರಾಶಗಳ ಮೂಲಕ ಅನುಮತಿ ಪಡೆಯಬೇಕು ಎಂದು ದಂಡಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪುಂಡರಿಂದ ವ್ಹೀಲಿಂಗ್‌ ಹುಚ್ಚಾಟ; ಬೈಕ್‌ಗಳನ್ನು ಕಿತ್ತುಕೊಂಡು ಫ್ಲೈಓವರ್‌ನಿಂದ ಎಸೆದ ಸಾರ್ವಜನಿಕರು

    ಏನು ಆ 33 ಷರತ್ತುಗಳು?
    ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಗಣೇಶ ಮೂರ್ತಿ ಪ್ರತಿಷ್ಟಾಪನೆ ಸಂದರ್ಭದಲ್ಲಿ ವಾಹನ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗದಂತೆ ಗಣೇಶ ಮಂಟಪದಲ್ಲಿ ನಿರ್ಮಿಸಬೇಕು. ಮಂಟಪದ ಹತ್ತಿರ ನೀರು, ಮರಳು ಸಂಗ್ರಹಿಸಬೇಕು. ಗಣೇಶ ಮಂಟಪದ ಹತ್ತಿರ ಬೆಳಕಿನ ವ್ಯವಸ್ಥೆ ಆಯೋಜನೆ, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ವಿದ್ಯುತ್ ಕಂಬ, ದೂರವಾಣಿ ಕಂಬಗಳಿಗೆ ಆಳವಡಿಸದಂತೆ ಎಚ್ಚರಿಕೆ ವಹಿಸಬೇಕು. ಜನಸಂದಣಿ ನಿಯಂತ್ರಿಸಲು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಸಾಲುಗಳಿರಬೇಕು. ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಉಪಯೋಗಿಸಬೇಕು.

    ಡಿಜೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇರುವುದಿಲ್ಲ, ಮಂಟಪಗಳ ಹತ್ತಿರ ಆಕ್ರಮ ಮಧ್ಯ ಸೇವನೆ ಮಾಡುವುದನ್ನು ಕಡ್ಡಾಯವಾಗಿ ನಿಯಂತ್ರಿಸಲಾಗಿದೆ. ಗಣಪತಿ ಮಂಟಪದ ಹತ್ತಿರ ಪ್ರಥಮ ಚಿಕಿತ್ಸಾ ಪಟ್ಟಿಗೆ ಇಡುವುದು, ಪಿಒಪಿ ಮತ್ತು ಬಣ್ಣಲೇಪಿತ ಗಣೇಶಗಳನ್ನು ಹೊರತುಪಡಿಸಿ ಮಣ್ಣಿನಿಂದ ಮಾಡಿರುವ ಗಣಪತಿಯನ್ನು ಸ್ಥಾಪನೆಗೆ ಅವಕಾಶ ಮಾಡಿಕೊಡುವುದು. ಇದನ್ನೂ ಓದಿ: ಕಂಠಪೂರ್ತಿ ಕುಡಿದು ಕಿರಿಕ್ – ಊಟ ನೀಡದ್ದಕ್ಕೆ ಡಾಬಾ ಮಾಲೀಕನಿಗೆ ಚಾಕು ಇರಿತ

    ನಗರ ಸಭೆಯಿಂದ ಸೂಚಿಸಿರುವ ಕೆರೆಯ ಆವರಣದ ಕಲ್ಯಾಣಿಯಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಹಾಗೂ ಪಂಚಾಯಿತಿಯ ಪಿಡಿಒ ತಿಳಿಸಿರುವಂತೆ ಗಣಪತಿಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ಮಾಡಬೇಕು. ಪ್ರಸಾದ ವಿನಿಯೋಗ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಇಲಾಖೆ ವತಿಯಿಂದ ಅನುಮತಿ ಪಡೆದುಕೊಳ್ಳಬೇಕು. ಕಳೆದ ಸಾಲಿನಲ್ಲಿ 133 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ.

    ಸಭೆಯಲ್ಲಿ ನಗರಸಭೆ ಪೌರಯುಕ್ತ ವಿಶ್ವೇಶ್ವರಯ್ಯ ಬದರಗಡೆ, ತಾಪಂ ಇಒ ಸುದರ್ಶನ್, ನಗರ ಆರಕ್ಷಕ ಅಧಿಕಾರಿ ವೆಂಕಟೇಶ್, ಬೆಸ್ಕಾಂ ಎಇಇ ಮನೋಹರ್, ತೋಟಗಾರಿಕೆ ಅಧಿಕಾರಿ ಚಂದ್ರಶೇಖರ್, ಆರ್‌ಟಿಒ ಅಧಿಕಾರಿ ಭಗವಂತ್ ದಾಸ್, ತಾಲೂಕು ಆರೋಗ್ಯ ಅಧಿಕಾರಿ ಕೃಷ್ಣಮೂರ್ತಿ, ಅಗ್ನಿಶಾಮಕ ದಳದ ಭರತ್ ಹಾಜರಿದ್ದರು. ಇದನ್ನೂ ಓದಿ: ಜಲ ಜೀವನ್ ಮಿಷನ್‌ ಯೋಜನೆಯಲ್ಲೂ ಅಕ್ರಮ ಆರೋಪ – 116 ಟೆಂಡ‌ರ್ ಹಣ ಮುಟ್ಟುಗೋಲು

  • ಗೌರಿ ಹಬ್ಬದ ಪ್ರಯುಕ್ತ ಜಯನಗರದಲ್ಲಿ 1,000 ಮಹಿಳೆಯರಿಗೆ ಬಾಗಿನ ವಿತರಣೆ

    ಗೌರಿ ಹಬ್ಬದ ಪ್ರಯುಕ್ತ ಜಯನಗರದಲ್ಲಿ 1,000 ಮಹಿಳೆಯರಿಗೆ ಬಾಗಿನ ವಿತರಣೆ

    ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಸಿ.ಕೆ.ರಾಮಮೂರ್ತಿರವರ ನೇತೃತ್ವದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ನಾಗರತ್ನ ರಾಮಮೂರ್ತಿರವರು 1,000 ಮಹಿಳೆಯರಿಗೆ ಗೌರಿ ಬಾಗಿನ ವಿತರಿಸಿದರು.

    ಸಮಾರಂಭದಲ್ಲಿ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ತಾರಾ ಅನುರಾಧ, ಚಲನಚಿತ್ರ ನಟಿ ಮಾಳವಿಕಾ, ಗರುಡಾ ಫೌಂಡೇಷನ್ ಸಂಸ್ಥಾಪಕಿ ಮೇದಿನಿ ಗುರುಡಾಚಾರ್ ರವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ದಶಪಥ ರಸ್ತೆಗೆ ಪ್ಲ್ಯಾನಿಂಗ್‌ ಕೊಟ್ಟವರಿಗೆ ಪದ್ಮಭೂಷಣ ಕೊಡಿ- ಸಿಎಂಗೆ ಡಿಕೆಶಿ ಟಾಂಗ್

    ಇದೇ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ನಾಗರತ್ನ ರಾಮಮೂರ್ತಿರವರು ಮಾತನಾಡಿ ಕಳೆದ 10 ವರ್ಷಗಳಿಂದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಗೌರಿ ಬಾಗಿನ ವಿತರಣೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮನೆಯೊಂದರಲ್ಲಿ ಸಾಮೂಹಿಕ ನಮಾಜ್‌ ಮಾಡಿದ್ದಕ್ಕೆ ಕೇಸ್‌ – ಪ್ರಕರಣ ರದ್ದುಗೊಳಿಸಿದ ಪೊಲೀಸರು

    ಮಹಿಳೆಯರಿಗೆ ತವರು ಮನೆಯಿಂದ ಕೊಡುವ ಉಡುಗೂರೆ ಬಹು ದೊಡ್ಡ ಕೊಡುಗೆಯಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಮಹಿಳೆಯರು ಒಂದು ಕುಟುಂಬದಂತೆ ಇಂದು ಗೌರಿ ಹಬ್ಬದ ದಿನ ಎಲ್ಲರು ಒಟ್ಟಾಗಿ ಸೇರಿ ಸಂಭ್ರಮಾಚರಣೆ ಮಾಡುವ ದಿನ. ಸಕಲ ಸಂಕಷ್ಟಗಳು ನಿವಾರಣೆಯಾಗಲಿ, ಎಲ್ಲರ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗಲಿ ಎಂದು ಗೌರಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗೌರಿ ಬಾಗಿನದಲ್ಲಿ ಅರಿಶಿನ, ಕುಂಕುಮ ಮತ್ತು ಬಳೆ, ಆಹಾರ ಧಾನ್ಯಗಳ ಶುಭ ಕಾರ್ಯಕ್ಕೆ ಬಳಸುವ ವಸ್ತುಗಳನ್ನು ನೀಡಿ, ಶುಭ ಹಾರೈಸಲಾಗುತ್ತದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಸಿಎಂ ಬಿಎಸ್‍ವೈ ಬಾಗಿನ

    ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಸಿಎಂ ಬಿಎಸ್‍ವೈ ಬಾಗಿನ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಡ್ಯಾಂ ತುಂಬಿದ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ಗೌರಿ ಹಬ್ಬದಂದು ಬಾಗಿನ ಅರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ಗೆ ಐದನೇ ಬಾರಿಗೆ ಬಾಗಿನ ಅರ್ಪಣೆ ಮಾಡಲಿರುವ ಸಿಎಂ ಬಿಎಸ್‍ವೈ

    ಸಂಪ್ರದಾಯದಂತೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ಸಿಎಂ ಯಡಿಯೂರಪ್ಪ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ ಅಭಿಜಿತ್ ಮುಹೂರ್ತದಲ್ಲಿ ಸಿಎಂ ಯಡಿಯೂರಪ್ಪ ಬಾಗಿನ ಸರ್ಮಪಿಸಲಿದ್ದಾರೆ. ಇದೇ ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಬಾಗಿನ ಸಮರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಹೀಗಾಗಿ ಬಾಗಿನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

    ತಳಿರು ತೋರಣ ಕಟ್ಟಿ ಮದುವಣಗಿತ್ತಿಯಂತೆ ಸಿಂಗಾರ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಮತ್ತೊಂದು ವಿಶೇಷತೆ ಎಂದರೆ 5ನೇ ಬಾರಿಗೆ ಕೆಆರ್‌ಎಸ್‌ ಡ್ಯಾಂಗೆ ಸಿಎಂ ಯಡಿಯೂರಪ್ಪ ಬಾಗಿನ ಬಿಡುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆ‌ಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ.

    ಖ್ಯಾತ ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಲಿದೆ. ಸಚಿವರಾದ ರಮೇಶ್ ಜಾರಕಿಹೊಳಿ, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರು ಮತ್ತು ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಕೊರೊನಾದಿಂದ ಗುಣಮುಖರಾದ ನಂತರ ಸಿಎಂ ಯಡಿಯೂರಪ್ಪ ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿದ್ದಾರೆ. ಸಿಎಂ ಕೊರೊನಾ ಪ್ರಾರಂಭವಾದಗಿನಿಂದಲೂ ಜಿಲ್ಲಾ ಪ್ರವಾಸ ಮಾಡಿರಲಿಲ್ಲ. ಇಂದು ಬಾಗಿನ ಸಮರ್ಪಣೆ ಮಾಡುವ ಮೂಲಕ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ. ಇದೇ ವೇಳೆ ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೂ ಸಿದ್ಧತೆ ಮಾಡಲಾಗಿದೆ. ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನಕ್ಕೆ ತೀರ್ಮಾನ ಮಾಡಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆ‌ಗೆ ಸಿದ್ಧತೆ ನಡೆಸಿವೆ.