Tag: Gowri Shankar

  • ಪೊಲೀಸ್ರು ಕತ್ತೆ ಕಾಯ್ತಾ ಇದ್ದಾರಾ? – ಖಾಕಿ ವಿರುದ್ಧ ಗೌರಿ ಶಂಕರ್ ಕಿಡಿ

    ಪೊಲೀಸ್ರು ಕತ್ತೆ ಕಾಯ್ತಾ ಇದ್ದಾರಾ? – ಖಾಕಿ ವಿರುದ್ಧ ಗೌರಿ ಶಂಕರ್ ಕಿಡಿ

    ತುಮಕೂರು: ಜಿಲ್ಲೆಯಾ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು, ಕೊಲೆ ಸುಲಿಗೆಗಳು ಮಿತಿ ಮೀರಿದ್ದು ಪೊಲೀಸರು ಕತ್ತೆ ಕಾಯ್ತಾ ಇದ್ದಾರಾ ಎಂದು ಗ್ರಾಮಾಂತರ ಶಾಸಕ ಗೌರಿ ಶಂಕರ್ ಖಾಕಿಗಳ ವಿರುದ್ಧ ಹರಿಹಾಯ್ದಿದ್ದಾರೆ.

    ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹೊರತುಪಡಿಸಿದರೆ ಇನ್ಯಾವ ಪೊಲೀಸ್ ಅಧಿಕಾರಿಗಳು ಕೂಡ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಇತ್ತೀಚೆಗೆ ಬೆಳಗುಂಬದ ಬಸ್ ನಿಲ್ದಾಣದಲ್ಲಿ ನಡೆದಿದ್ದ ರೌಡಿಶೀಟರ್ ಕೊಲೆ ಹಿಂದೆ ರಾಜಕೀಯ ವ್ಯಕ್ತಿಗಳು ಇದ್ದಾರೆ. ಅಂಥವರನ್ನು ಹಿಡಿಯುವ ಬದಲು ಟೆಂಪರ್ ರಾಜಾ ಎಂಬವರ ಮೇಲೆ ಪೊಲೀಸರು ನಕಲಿ ಫೈರಿಂಗ್ ನಡೆಸಿದ್ದಾರೆ ಎಂದು ಗೌರಿಶಂಕರ್ ಆರೋಪಿಸಿದ್ದಾರೆ.

    ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಟ್ಕಾ, ಇಸ್ಪೀಟ್ ದಂಧೆ ಮಿತಿಮೀರಿದ್ದು, ಇವುಗಳೆಲ್ಲ ಪೊಲೀಸ್ ನೆರಳಿನಲ್ಲೇ ನಡೆಯುತ್ತಿದೆ. ತಾನು ಶಾಸಕನಾದರೂ ಏನೂ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ. ಮಾಜಿ ಶಾಸಕರೊಬ್ಬರು ಪೊಲೀಸ್ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದು ಡಿವೈಎಸ್ಪಿಗಿಂತ ಕೆಳಹಂತದ ಪೊಲೀಸ್ ಅಧಿಕಾರಿಗಳು ಆ ಮಾಜಿ ಶಾಸಕನ ಕೈಗೊಂಬೆಯಾಗಿದ್ದಾರೆ ಎಂದು ಹೆಸರು ಹೇಳದೆ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡರ ವಿರುದ್ಧ ಗುಡುಗಿದ್ದಾರೆ.

  • ಮೋದಿಯನ್ನು ಹಾಡಿ ಹೊಗಳಿದ ಜೆಡಿಎಸ್ ಶಾಸಕ

    ಮೋದಿಯನ್ನು ಹಾಡಿ ಹೊಗಳಿದ ಜೆಡಿಎಸ್ ಶಾಸಕ

    ತುಮಕೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೋದಿ ಅವರ ಬಗ್ಗೆ ಈ ದೇಶದಲ್ಲಿ ಒಂದು ಒಳ್ಳೆಯ ಹೆಸರಿದೆ. ದೇಶ ಅಭಿವೃದ್ಧಿ ಮಾಡುವ ಒಳ್ಳೆಯ ಅಜೆಂಡಾ ಇಟ್ಟುಕೊಂಡು ಮುನ್ನಡೆಯುತ್ತಿದ್ದಾರೆ. ದೇಶದ ಬಗೆಗಿನ ಅವರ ದೃಷ್ಟಿಕೋನ ಒಳ್ಳೆಯದಿದೆ” ಎಂದು ಗುಣಗಾನ ಮಾಡಿದ್ದಾರೆ. ಅಲ್ಲದೆ ಬಿಜೆಪಿಯಲ್ಲಿನ ಕೆಲ ನಾಯಕರಿಂದ ಆ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂದು ಕಾಳಜಿ ವ್ಯಕ್ತಪಡಿಸಿದ್ದಾರೆ.

    ಮಾಜಿ ಶಾಸಕ ಸುರೇಶ್ ಗೌಡ ಅಂತಹವರಿಂದ ಬಿಜೆಪಿಗೆ ಕೆಟ್ಟ ಹೆಸರು ಬರುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ರಸ್ತೆ ಕಾಮಗಾರಿಗೆ ಬಿಡುಗಡೆಯಾದ ಹಣವನ್ನು ತಡೆ ಹಿಡಿಯುವಂತೆ ಸುರೇಶ್ ಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇವರ ಪತ್ರಕ್ಕೆ ಮನ್ನಣೆ ಕೊಟ್ಟು ಹಣವನ್ನು ತಡೆ ಹಿಡಿಯಲಾಗಿದೆ.

    ಸುರೇಶ್ ಗೌಡ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ. ಇಂತಹವರಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗುತ್ತಿದೆ. ಈ ಕುರಿತು ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ರಾಜ್ಯಪಾಲರಿಗೂ ನಾನು ಟ್ವೀಟ್ ಮಾಡಿ ವಿಚಾರ ತಿಳಿಸುತ್ತೆನೆ ಎಂದು ಸುರೇಶ್ ಗೌಡರ ವಿರುದ್ಧ ಗೌರಿಶಂಕರ ವಾಗ್ದಾಳಿ ನಡೆಸಿದ್ದಾರೆ.