ಶಿವಮೊಗ್ಗ: 33 ವರ್ಷದ ವ್ಯಕ್ತಿ 16 ವರ್ಷದ ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಲ್ಲದಕೋಣೆ ಗ್ರಾಮದಲ್ಲಿ ನಡೆದಿದ್ದು, ಬಾಲ್ಯ ವಿವಾಹ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಫೆ.27 ರಂದು ಯಲ್ಲದಕೋಣೆ ಗ್ರಾಮದ ರಮೇಶ್ (33) ಹಾಗೂ ಬಳ್ಳಾರಿ ಜಿಲ್ಲೆಯ ಕೆ.ಕರ್ನಾರ್ ಹಟ್ಟಿಯ 16 ವರ್ಷದ ಬಾಲಕಿ ಜೊತೆ ವಿವಾಹ ನಡೆದಿದೆ. ವಧು ಅಪ್ರಾಪ್ತೆ ಎಂದು ತಿಳಿದಿದ್ದರೂ, ಗ್ರಾಮದ ರಾಘವೇಂದ್ರ, ಪ್ರವೀಣ್, ಅನಿಲ್, ಶ್ರೀಧರ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯೆ ಶ್ವೇತಾ ಶಿವಾನಂದ್ ನೇತೃತ್ವದಲ್ಲಿ ಬಾಲ್ಯ ವಿವಾಹ ನೆರವೇರಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿ
ನೆಲಮಂಗಲ: ಗ್ರಾಮ ಪಂಚಾಯತಿ ಅಧಿಕಾರಿಗಳಿಂದ, ಕಂದಾಯ ವಸೂಲಾತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ಅಧಿಕಾರಿಗಳು ಗ್ರಾಮಸಭೆ ಅಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ, ಕಂದಾಯ ವಸೂಲಾತಿಯಲ್ಲಿ ಆಗುತ್ತಿರುವ ತಾರತಮ್ಯದ ಕುರಿತು ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತರಿಗೆ ಸರ್ಕಾರದಲ್ಲಿ ಮಣೆ – ರೇಣುಕಾಚಾರ್ಯ, ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕ
ಕಳೆದ 5 ವರ್ಷದಿಂದ ಕಾರ್ಖಾನೆಗಳ ಕಂದಾಯ ಬಾಕಿ ಇದೆ. ಬಡವರ ಕಂದಾಯ ಬಾಕಿಯಿದ್ದರೆ ಕಟ್ಟುವಂತೆ ಒತ್ತಾಯ ಮಾಡುತ್ತಿರಿ ಬಲಾಢ್ಯರಿಂದ ಕಂದಾಯ ವಸೂಲಿ ಮಾತ್ರ ಯಾಕೆ ಮಾಡಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅಲ್ಲದೆ ಈ ವೇಳೆ ಅಧಿಕಾರಿಯಿಂದ ಮೈಕ್ ಕಿತ್ತು ಆಕ್ರೋಶ ಹೊರಹಾಕಿದ್ದಾರೆ. 50 ಸಾವಿರ ಕಂದಾಯ ಕಟ್ಟುವ ಕಂಪನಿಯಿಂದ ಕಂದಾಯ ವಸೂಲಿ ಮಾಡಿಲ್ಲ. ಬಡವರ ಮನೆ ಮುಂದೆ ಬಂದು ಹಣ ಕಟ್ಟುವಂತೆ ಹಿಂಸೆ ಕೊಡುತ್ತಿರಿ ಎಂದು ಪಿಡಿಓ ಅಧಿಕಾರಿ ಪ್ರಶಾಂತ್‍ಗೆ ಗ್ರಾಮಸ್ಥರು ಚಳಿ ಬಿಡಿಸಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ
ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಪಂಚಾಯತಿಯಿಂದ ಸಮರ್ಪಕವಾಗಿ ಗ್ರಾಮಗಳ ಅಭಿವೃದ್ಧಿ ಮಾಡುತ್ತಿಲ್ಲ. ನಾನಾ ಸಮಸ್ಯೆಗಳನ್ನ ಜನರು ಎದುರಿಸುತಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಜನರು ಸಭೆಯಲ್ಲಿ ಆಗ್ರಹಿಸಿದ್ದಾರೆ.
ವಿಜಯನಗರ: ಕಲುಷಿತ ನೀರು ಕುಡಿದು 50 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಜೆ.ಜೆ.ಎಂ ಯೋಜನೆ ಅಡಿ ಪೈಪಲೈನ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಅಲ್ಲಲ್ಲಿ ಪೈಪ್‍ಗಳು ಒಡೆದಿವೆ. ಒಡೆದ ಪೈಪ್ ಮುಖಾಂತರ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸರಬರಾಜು ಆಗಿದೆ. ಪರಿಣಾಮ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಸಂಪೂರ್ಣ ಅಸ್ವಸ್ಥರಾಗಿದ್ದಾರೆ. ಇದನ್ನೂ ಓದಿ: ಮನೆಯ ಮೇಲ್ಛಾವಣಿ ಕುಸಿತ- ಅವಶೇಷಗಳಡಿಯಿಂದ ವೃದ್ಧೆಯ ರಕ್ಷಣೆ
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಜನರು ಆಕ್ರೋಶಗೊಂಡಿದ್ದಾರೆ. ಅದು ಅಲ್ಲದೇ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ: ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ ಪಂಚಾಯ್ತಿಗೆ ಅಧ್ಯಕ್ಷೆ ಮತ್ತು ಸದಸ್ಯರು ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರ್ಲಕೊಂಡ ಗ್ರಾಮಪಂಚಾಯತಿ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ್, ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅಧ್ಯಕ್ಷರು, ಸದಸ್ಯರ ಮಾತಿಗೆ ಕಿಮ್ಮತ್ತು ಕೊಡಲ್ಲ ಅಂತ ಆಕ್ರೋಶಗೊಂಡ ಆಧ್ಯಕ್ಷೆ ಆನಂದಮ್ಮ ಹಾಗೂ ಸದಸ್ಯರು ಇಂದು ಪಿಡಿಈ ರನ್ನ ಹೊರ ಹಾಕಿ ಕಚೇರಿಗೆ ಬೀಗ ಜಡಿದಿದ್ದಾರೆ.
ತುಮಕೂರು: ಜಿಲ್ಲೆಯಲ್ಲಿ ಮುಂದಿನ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಎಸ್.ಐ.ಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೈಸೂರಿನ ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಹೊಸದಾಗಿ ಆಯ್ಕೆಯಾಗಿರುವ ಗ್ರಾಮಪಂಚಾಯತಿ ಅಧ್ಯಕ್ಷರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುವುದರೊಂದಿಗೆ ತ್ಯಾಜ್ಯ ನಿರ್ವಹಣೆ ಮಾಡಲು ಸೂಕ್ತ ಕಟ್ಟಡವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ
ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಗ್ರಾಮಗಳ ಅಭಿವೃದ್ಧಿಗೆ ಸಿಕ್ಕಿರುವ 5 ವರ್ಷಗಳ ಅಧಿಕಾರಾವಕಾಶವನ್ನು ಬಳಸಿಕೊಳ್ಳಬೇಕು. ಉತ್ತಮ ಕೆಲಸವನ್ನು ಮಾಡುವುದರ ಮೂಲಕ ನಂಬಿಕೆ ಇಟ್ಟು ಗೆಲ್ಲಿಸಿರುವ ಜನರ ಋಣವನ್ನು ತೀರಿಸಬೇಕು. ಪ್ರತಿ ದಿನ ಗ್ರಾಮಪಂಚಾಯತಿ ಕಚೇರಿಗೆ ಭೇಟಿ ನೀಡಿ, ಪಂಚಾಯತಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಜನರ ವಿಶ್ವಾಸವನ್ನು ತೆಗೆದುಕೊಂಡು ಪರಿಹರಿಸಬೇಕು ಎಂದು ಗ್ರಾ.ಪಂ. ಅಧ್ಯಕ್ಷರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಬದಲಾಗಿದ್ದೇವೆ ಅಂತಲೇ ತಾಲಿಬಾನ್ ಹಿಂಸಾಚಾರ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಇಬ್ಬರು ಬಲಿ
ದೇಶದ ಯಾವುದೇ ಉದ್ಯೋಗ ರಹಿತ ಪ್ರಜೆ ಉಪವಾಸವಿರಬಾರದೆಂದು ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಬಡವರಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು. ನರೇಗಾ ಯೋಜನೆಯಡಿ ಅಂಗನವಾಡಿ ದುರಸ್ಥಿಯಲ್ಲದೆ ಶಾಲಾ ಕಟ್ಟಡ ದುರಸ್ಥಿಗೂ ಅವಕಾಶ ಮಾಡಿಕೊಡಲಾಗುವುದು. ನರೇಗಾ ಯೋಜನೆಯಡಿ ಕೇಂದ್ರದಿಂದ 13 ಕೋಟಿ ಮಾನವ ದಿನಗಳನ್ನು ಸೃಜಿಸಲು ಗುರಿ ನೀಡಲಾಗಿತ್ತು. ಗುರಿ ಮೀರಿದ ಸಾಧನೆಗಾಗಿ ಪ್ರಧಾನ ಮಂತ್ರಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ
ನರೇಗಾ ಯೋಜನೆಯಡಿ ಪ್ರತಿಯೊಬ್ಬರಿಗೂ ಕೆಲಸ ನಿರ್ವಹಿಸುವ ಅವಕಾಶವಿದ್ದು, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು. ಕಲ್ಯಾಣಿ, ಗೋಕಟ್ಟೆ, ಕೊಳವೆ ಬಾವಿಗೆ ಮರುಪೂರಣ ಗುಂಡಿ, ಕೃಷಿ ಹೊಂಡ, ಕೆರೆಗಳ ಹೂಳೆತ್ತುವುದು ಸೇರಿದಂತೆ ಅನೇಕ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆರೆ-ಕಟ್ಟೆ, ಕಲ್ಯಾಣಿಗಳು ಒತ್ತುವರಿಯಾಗದಂತೆ ಕ್ರಮವಹಿಸುವುದು ಪ್ರತೀ ಸದಸ್ಯನ ಹೊಣೆಗಾರಿಕೆಯಾಗಿದೆ ಎಂದರು. ಇದನ್ನೂ ಓದಿ: ತಾಲಿಬಾನಿಗಳಿಗೆ ಸಂಸದ ಬರ್ಖ್, ಓವೈಸಿ ಸಪೋರ್ಟ್ – ಸ್ವಾತಂತ್ರ್ಯ ಹೋರಾಟಗಾರರಿಗೆ ಉಗ್ರರ ಹೋಲಿಕೆ
ಪ್ರತಿ ಹಳ್ಳಿಗಳಲ್ಲು ಬಯಲು ಶೌಚಾಲಯ ಮುಕ್ತಗೊಳಿಸಲು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯ್ತಿಯ ಸದಸ್ಯರು, ಪಿಡಿಓಗಳು ಜನರಲ್ಲಿ ಅರಿವು ಮೂಡಿಸಬೇಕು. ವಿಶೇಷ ಘಟಕ ಯೋಜನೆಯಡಿ ಎಸ್.ಸಿ., ಎಸ್.ಟಿ ಸಮುದಾಯಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ನೀಡಲಾಗುತ್ತಿದ್ದ 15 ಸಾವಿರ ರೂ.ಗಳ ಸಹಾಯಧನವನ್ನು 20 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಪಕ್ಷಬೇಧ ಮರೆತು ತಮ್ಮ ಗ್ರಾಮದ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಗ್ರಾಮಪಂಚಾಯತಿಗಳಲ್ಲಿ ಪ್ರತಿವರ್ಷ ಹೊಸ ಯೋಜನೆಗಳನ್ನು ರೂಪಿಸಿ ಜನಪರ ಕೆಲಸಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಕ.ರಾ.ವಿ.ಯೋ.ಅ.ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಉಡುಪಿ ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸರಾವ್, ಪರಿಸರವಾದಿ ಶಿವಾನಂದ ಕಳವೆ, ಗ್ರಾಮಪಂಚಾಯತಿ ಆಯುಕ್ತಾಲಯದ ನಿರ್ದೇಶಕ ಯಾಲಕ್ಕಿಗೌಡ ಮಾತನಾಡಿದರು.ಕಾರ್ಯಾಗಾರಕ್ಕೆ ಗೈರು ಹಾಜರಾಗಿದ್ದ ಮಧುಗಿರಿ ತಾಲ್ಲೂಕು ಚಂದ್ರಗಿರಿ ಗ್ರಾ.ಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತ್ತು ಮಾಡಲು ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಅವರಿಗೆ ನಿರ್ದೇಶನ ನೀಡಿದರು.
ಚಾಮರಾಜನಗರ: ವ್ಯರ್ಥವಾಗಿ ಹರಿದು ಹೋಗುತ್ತಿದ್ದ ನೀರನ್ನು ಕೇವಲ 4 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಕೆರೆಗಳಿಗೆ ತುಂಬಿಸಿ ಕಾಡಂಚಿನ ಗ್ರಾಮ ಪಂಚಾಯತಿಯೊಂದು ಮಾದರಿಯಾಗಿದೆ.
ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯತಿ ಬಿಳಗಿರಿರಂಗನಬೆಟ್ಟದ ಪಕ್ಕದಲ್ಲೇ ಇದೆ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಕೆರೆಗಳು ಹಲವಾರು ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿವೆ. ಹೀಗಾಗಿ ಬಿಳಗಿರಿರಂಗನಬೆಟ್ಟದಿಂದ ಹರಿದು ಈ ಪಂಚಾಯತಿ ವ್ಯಾಪ್ತಿಯ ಮಸಕತ್ತಿ ಹಳ್ಳದ ಮೂಲಕ ವ್ಯರ್ಥವಾಗಿ ಹರಿದು ಹೋಗುವ ನೀರಿನಿಂದಲೇ ಕೆರೆಗಳನ್ನು ತುಂಬಿಸಲು ಗ್ರಾಮಪಂಚಾಯಿತಿ ಅಧ್ಯಕ್ಷ ಕೃಷ್ಣಮೂರ್ತಿ ಹಾಗೂ ಸದಸ್ಯರು ಪ್ಲ್ಯಾನ್ ಮಾಡಿದ್ದಾರೆ. ಬಳಿಕ ಸ್ಥಳೀಯವಾಗಿ ಒಂದು ಕ್ರಿಯಾ ಯೋಜನೆ ರೂಪಿಸಿ ಮಸಕತ್ತಿ ಹಳ್ಳದಲ್ಲಿ 12 ಹೆಚ್.ಪಿ. ಮೋಟರ್ ಅಳವಡಿಸಿ ಎರಡೂವರೆ ಕಿಲೋಮೀಟರ್ ಪೈಪ್ ಲೈನ್ ಹಾಕಿ ಸೂಲಿಕೆರೆಗೆ ನೀರು ಹರಿಸಿದ್ದಾರೆ. ಇನ್ನೊಂದೆಡೆ 7.5 ಹೆಚ್.ಪಿ ಮೋಟರ್ ಅಳವಡಿಸಿ 1 ಕಿಲೋ ಮೀಟರ್ ಪೈಪ್ ಲೈನ್ ಹಾಕಿ ಉಯಿಲಿನತ್ತ ಕೆರೆಗೆ ನೀರು ತುಂಬಿಸಿದ್ದಾರೆ.
ಕೇವಲ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡೂ ಕೆರೆ ತುಂಬಿಸಿದ್ದು, ಈ ಕೆರೆಗಳ ವ್ಯಾಪ್ತಿಯ ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ. ಕೆರೆಗಳು ತುಂಬಿದ ಖುಷಿಗೆ ಗ್ರಾಮಸ್ಥರು ಗಂಗೆ ಪೂಜೆ ನೆರವೇರಿಸಿದ್ದಾರೆ. ಈ ಕೆರೆಗಳು ತುಂಬಿರುವುದರಿಂದ ದನಕರುಗಳಿಗೆ ಕುಡಿಯುವ ನೀರು ಲಭಿಸುವಂತಾಗಿದೆ. ಅಲ್ಲದೆ ಸುತ್ತಮುತ್ತ ಅಂತರ್ಜಲ ವೃದ್ಧಿಯಾಗಿದೆ. ಹೀಗಾಗಿ ಇದೇ ಮಾದರಿಯಲ್ಲಿ ಉಳಿದ ಎಂಟು ಕೆರೆಗಳನ್ನು ತುಂಬಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನೀರು ತುಂಬಿದ ಕೆರೆಗಳನ್ನು ಮೀನುಗಾರಿಕೆಗೆ ಟೆಂಡರ್ ನೀಡಬಹುದಾಗಿದೆ. ಇದರಿಂದಲೇ ಕೆರೆ ತುಂಬಿಸುವ ಯೋಜನೆಯ ವೆಚ್ಚವನ್ನು ಒಂದೇ ವರ್ಷದಲ್ಲಿ ಭರಿಸಿಕೊಳ್ಳಬಹುದು ಎಂಬುದು ಗ್ರಾಮಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ನಿರೀಕ್ಷೆಯಾಗಿದೆ. ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಯಾವೆಲ್ಲಾ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದಕ್ಕೆ ಪಿ.ಜಿ.ಪಾಳ್ಯ ಗ್ರಾಮ ಪಂಚಾಯತಿ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದಾರೆ.
ಚಿಕ್ಕಬಳ್ಳಾಪುರ: ಕಲ್ಯಾಣಿ ನಿರ್ಮಾಣದ ವೇಳೆ ತಡೆಗೋಡೆಯ ಮಣ್ಣು ಕುಸಿದ ಪರಿಣಾಮ ಕಲ್ಯಾಣಿಯೊಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ದಿನ್ನೂರು ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸಪುರ ಮೂಲದ ಅಂಜಿನಪ್ಪ(40) ಮೃತ ಕಾರ್ಮಿಕ. ಗ್ರಾಮಪಂಚಾಯತಿ ವತಿಯಿಂದ ನರೇಗಾ ಮೂಲಕ ಗ್ರಾಮದಲ್ಲಿ ಸುಂದರ ಕಲ್ಯಾಣಿ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತಿತ್ತು. ಆದರೆ ತರಾತುರಿಯಲ್ಲಿ ಕಾಮಗಾರಿ ಮುಗಿಸಲು ಹಗಲು ರಾತ್ರಿ ಕಾರ್ಮಿಕರ ಕೈಯಲ್ಲಿ ಕೆಲಸ ಮಾಡಿಸಲಾಗುತ್ತಿದ್ದು ಎನ್ನಲಾಗಿದೆ.
ಮಳೆ ಬಂದಿದ್ದ ಸಂದರ್ಭದಲ್ಲಿಯೇ ಕಾಮಗಾರಿ ನಡೆಸುತ್ತಿದ್ದ ಕಾರಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಕಲ್ಯಾಣಿಯೊಳಗೆ ಬಿದ್ದಿದ್ದಾರೆ. ಕಲ್ಯಾಣಿ ತುಂಬಾ ಆಳವಾಗಿದ್ದು ಕಾರ್ಮಿಕನನ್ನು ಮೇಲೆತ್ತುವಷ್ಟರಲ್ಲೇ ಮೃತಪಟ್ಟಿದ್ದಾರೆ.
ತುಮಕೂರು: ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಂಗಳಮುಖಿಯರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ಮಂಗಳಮುಖಿಯರು ಹಣ ಕೇಳಿದಾಗ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಕೋಡ್ಲಾಪುರ ಗ್ರಾಮಪಂಚಾಯತ್ ಸದಸ್ಯ ರಂಗನಾಥ್ ಹಲ್ಲೆಗೊಳಗಾಗಿದ್ದು, ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಹರಿದಾಡ್ಕೊಂಡು ಮಂಗಳಮುಖಿಯರ ಮಾರಾಮಾರಿ
ರಂಗನಾಥ್ ಅವರ ಬೈಕನ್ನು ಅಡ್ಡಗಟ್ಟಿ ಇಬ್ಬರು ಮಂಗಳಮುಖಿಯರು ಹಣ ಕೇಳಿದ್ದಾರೆ. ರಂಗನಾಥ್ ಹಣ ನೀಡಲು ನಿರಾಕರಿಸಿದಾಗ ರಂಗನಾಥ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಮಂಗಳ ಮುಖಿಯರ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರ ಮೇಲೆ ಇಂತಹ ಹಲ್ಲೆಗಳು ಮೇಲಿಂದ ಮೇಲೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾವೇರಿ: ಜಿಲ್ಲೆಯ ಗ್ರಾಮದಲ್ಲಿ ಯಾರೇ ನಿಧನ ಹೊಂದಿದರೂ ಅವರನ್ನು ಗ್ರಾಮದ ಬಳಿ ಎರಡು ಎಕರೆ ಜಮೀನಿನಲ್ಲಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರಲಾಗುತ್ತಿತ್ತು. ಆದರೆ ಇಂದು ಮೃತ ಮಹಿಳೆಯೊಬ್ಬರನ್ನು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಗ್ರಾಮದ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಕಾರಣಕ್ಕೆ ಪಂಚಾಯತ್ ಮುಂದೆ ಶವ ಸುಡಲು ಮೃತಳ ಕುಂಟುಂಬದವರು ಮುಂದಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹನುಮವ್ವ ಅಣ್ಣಿಗೇರಿ(45) ಎಂಬವರು ಇಂದು ಮೃತಪಟ್ಟಿದ್ದರು. ಬಳಿಕ ಅಂತ್ಯಸಂಸ್ಕಾರಕ್ಕೆ ಮೃತಳ ಸಂಬಂಧಿಕರು ಸಿದ್ಧತೆ ಮಾಡಲು ಸ್ಮಶಾನಕ್ಕೆ ಕಟ್ಟಿಗೆ ತಗೆದುಕೊಂಡು ಹೋಗುತ್ತಿದ್ದರು. ಆಗ ವ್ಯಕ್ತಿಯೋರ್ವ ಮೃತಳ ಕುಟುಂಬದವರಿಗೆ ಅಡ್ಡಿಪಡಿಸಿದ್ದಾರೆ. ಅಲ್ಲದೆ ಸ್ಮಶಾನ ನಮ್ಮ ಹೆಸರಿನಲ್ಲಿದೆ, ನೀವು ಇಲ್ಲಿ ಅಂತ್ಯಸಂಸ್ಕಾರ ಮಾಡಬಾರದು ಎಂದು ತಡೆಯೊಡ್ಡಿದ್ದಾರೆ. ಇದರಿಂದ ಕಂಗಾಲಾದ ಮೃತಳ ಕುಟುಂಬಸ್ಥರು ಗ್ರಾಮ ಪಂಚಾಯತ್ ಮುಂದೆ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ – ಬಯಲಾಯ್ತು ಮರ್ಡರ್ ರಹಸ್ಯ
ಹನುಮವ್ವ ಅಣ್ಣಿಗೇರಿಯ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ಸಿದ್ಧತೆ ಮಾಡುತ್ತಿರುವ ವಿಷಯ ತಿಳಿದ ಗ್ರಾಮದ ವ್ಯಕ್ತಿಯೊಬ್ಬ ದಾರಿಗೆ ದೊಡ್ಡದಾದ ಗುಂಡಿ ತೋಡಿ, ಗುಂಡಿಗೆ ನೀರು ತುಂಬಿಸಿ ಅಡ್ಡಿ ಮಾಡಿದ್ದಾನೆ. ಹೀಗಾಗಿ ಮೃತಳ ಕುಟುಂಬದವರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಕಟ್ಟಿಗೆ ಇಟ್ಟು ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೋಲಿಸರು ಮೃತಳ ಕುಟುಂಬಸ್ಥರು ಹಾಗೂ ಅಡ್ಡಿಪಡಿಸಿದ ವ್ಯಕ್ತಿಗೆ ಪಂಚಾಯತ್ ಮುಂದೆ ಅಂತ್ಯಸಂಸ್ಕಾರ ಮಾಡದಂತೆ ಮತ್ತು ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವಂತೆ ಮನವೊಲಿಸಿದ್ದಾರೆ.
ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸಪ್ ಮೂಲಕ ಕಳುಹಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದು ಹೇಳಿ ವಿಶ್ವಾಸ ಗಿಟ್ಟಿಸಿಕೊಂಡಿದ್ದ.
ಸೋಮವಾರ ಅಹಮದ್ ಪಾಷಾ ನಿನಗೆ ಕೆಲಸ ಕೊಡಿಸುತ್ತೇನೆ. ಮಾತನಾಡಬೇಕಿದೆ ನನ್ನ ಮನೆಗೆ ಬಾ ಎಂದು ತನ್ನ ಚಾಲಕನ ಮೂಲಕ ಓಲಾಕ್ಯಾಬ್ ಬುಕ್ ಮಾಡಿಸಿ ಶಾನಭೋಗನಹಳ್ಳಿಯ ತನ್ನ ಮನೆಗೆ ಯುವತಿಯನ್ನು ಕರೆಸಿಕೊಂಡಿದ್ದ. ಮನೆಗೆ ಬಂದ ಯುವತಿ ಮೇಲೆ ಅಹಮದ್ ಪಾಷಾ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದಕ್ಕೆ ವಿರೋಧಿಸಿದ ಯುವತಿಗೆ ಗನ್ ತೋರಿಸಿ ಬೆದರಿಸಿದ್ದಾನೆ. ಅಲ್ಲದೆ, ಆಕೆಯ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಹೆದರಿಸಿದ್ದಾನೆ ಎಂದು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಅಹಮದ್ ಪಾಷ, ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ತಲೆಮರೆಸಿಕೊಂಡಿರುವ ಅಹಮದ್ ಪಾಷಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.