Tag: Gramayana

  • ‘ಗ್ರಾಮಾಯಣ’ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಶಿವರಾಜ್ ಕುಮಾರ್

    ‘ಗ್ರಾಮಾಯಣ’ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಶಿವರಾಜ್ ಕುಮಾರ್

    ವಿನಯ ರಾಜ್ ಕುಮಾರ್ ನಟನೆಯ ಗ್ರಾಮಾಯಣ (Gramayana) ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಈ ಸಮಯದಲ್ಲಿ ಶೂಟಿಂಗ್ ಸೆಟ್ ಗೆ ವಿಜಿಟ್ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ಗೀತಾ ಶಿವರಾಜ್ ಕುಮಾರ್. ಇವರಿಗೆ ನಿರ್ಮಾಪಕ ಶ್ರೀಕಾಂತ್ ಕೂಡ ಸಾಥ್ ನೀಡಿದ್ದಾರೆ.  ಈ ನಡುವೆ ಸಿನಿಮಾ ತಂಡಕ್ಕೆ ಲೂಸ್ ಮಾದ ಖ್ಯಾತಿಯ ಯೋಗಿ (Loose Mada Yogi) ಕೂಡ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆದಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುತ್ತಾರೆ  ನಿರ್ದೇಶಕ ದೇವನೂರು ಚಂದ್ರು.

  • ಗ್ರಾಮಾಯಣಕ್ಕೆ ಎಂಟ್ರಿ ಕೊಟ್ಟ ಲೂಸ್ ಮಾದ ಯೋಗಿ

    ಗ್ರಾಮಾಯಣಕ್ಕೆ ಎಂಟ್ರಿ ಕೊಟ್ಟ ಲೂಸ್ ಮಾದ ಯೋಗಿ

    ದೊಡ್ಮನೆ ಕುಡಿ ವಿನಯ್ ರಾಜಕುಮಾರ್ (Vinay Rajkumar) ಅಭಿನಯದ ಗ್ರಾಮಾಯಣ (Gramayana) ಸಿನಿಮಾ ತಂಡಕ್ಕೆ ಲೂಸ್ ಮಾದ ಖ್ಯಾತಿಯ ಯೋಗಿ (Loose Mada Yogi) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ. ಅದೊಂದು ಪ್ರಮುಖ ಪಾತ್ರವಾಗಿದ್ದರೂ, ಪಾತ್ರದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ ಚಿತ್ರತಂಡ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆದಿದೆ. ಇದನ್ನೂ ಓದಿ:ರಜನಿ 170ನೇ ಸಿನಿಮಾಗೆ ಇಬ್ಬರು ನಾಯಕಿಯರು

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುತ್ತಾರೆ  ನಿರ್ದೇಶಕ ದೇವನೂರು ಚಂದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಚಾಲನೆ

    ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಚಾಲನೆ

    ಜಿ.ಮನೋಹರನ್ (Lahari Films) ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ (Vinay Rajkumar) ನಾಯಕರಾಗಿ ನಟಿಸುತ್ತಿರುವ ‘ಗ್ರಾಮಾಯಣ’ (Gramayana) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ದೇವನೂರು ಚಂದ್ರು.

    ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ “ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು. ಚಂದ್ರು ಅವರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಿರ್ಮಾಪಕರಿಗೆ ನನ್ನ ಧನ್ಯವಾದಗಳು ಎಂದರು ವಿನಯ್ ರಾಜಕುಮಾರ್.  ಇದನ್ನೂ ಓದಿ:ಮುಂಬೈನಿಂದ ಸ್ಯಾಂಡಲ್ ವುಡ್ ಗೆ ಬಂದ ಪ್ರಾಚಿ ಶರ್ಮಾ

    ಯುಐ ಚಿತ್ರದ ಸೆಟ್ ನಲ್ಲಿ ಗ್ರಾಮಾಯಣ ಚಿತ್ರದ ಟೀಸರ್ ನೋಡಿದೆ. ಟೀಸರ್ ಗೆ ತುಂಬಾ ಪಾಸಿಟಿವ್ ಕಾಮೆಂಟ್ಸ್ ಗಳು ಬಂದಿದ್ದವು. ಇಂತಹ ಒಳ್ಳೆಯ ಚಿತ್ರ ನಿಲ್ಲಬಾರದು ಎಂದು ಲಹರಿ ಫಿಲಂಸ್ ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದೇನೆ ಎನ್ನುತ್ತಾರೆ ಕೆ.ಪಿ.ಶ್ರೀಕಾಂತ್.

    ನಾನು ಗ್ರಾಮಾಯಣದ ಹಾಡೊಂದು ಕೇಳಿ ತುಂಬಾ ಖುಷಿಪಟ್ಟಿದೆ. ಈಗ ನಮ್ಮ ಅಣ್ಣ ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರ ಚೆನ್ನಾಗಿ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾವಿರಲಿ ಎಂದರು ಲಹರಿ ವೇಲು. ಸಹ ನಿರ್ಮಾಪಕ ನವೀನ್ ಮನೋಹರನ್, ಕಲಾವಿದರಾದ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ ಗ್ರಾಮಾಯಣದ ಕುರಿತು ಮಾತನಾಡಿದರು.  ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದ ಅಷ್ಟು ಗಣ್ಯರು ಗ್ರಾಮಾಯಣ, ರಾಮಾಯಣ ದಷ್ಟೇ ಕೀರ್ತಿ ಪಡೆಯಲಿ ಎಂದು ಹಾರೈಸಿದರು.

  • ಡಾ.ರಾಜ್ ಮೊಮ್ಮಗನ ಸಿನಿಮಾ ಮುಹೂರ್ತ: ವಿಶೇಷ ಫೋಟೋ ಹಂಚಿಕೊಂಡ ಟೀಮ್

    ಡಾ.ರಾಜ್ ಮೊಮ್ಮಗನ ಸಿನಿಮಾ ಮುಹೂರ್ತ: ವಿಶೇಷ ಫೋಟೋ ಹಂಚಿಕೊಂಡ ಟೀಮ್

    ಡಾ.ರಾಜ್ ಕುಮಾರ್ (Rajkumar) ಅವರ ಮೊಮ್ಮಗ ವಿನಯ್ ರಾಜ್ ಕುಮಾರ್ ನಟನೆಯ ಗ್ರಾಮಾಯಣ ಸಿನಿಮಾದ ಮುಹೂರ್ತ ಜೂ 8ರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುತ್ತಿದೆ. ಈ ಮಹೂರ್ತಕ್ಕೆ ಆಮಂತ್ರಿಸಲೆಂದೇ ಸಿನಿಮಾ ಟೀಮ್ ಡಾ.ರಾಜ್ ಜೊತೆಗಿರುವ ಪುಟಾಣಿ ವಿನಯ್ ಕುಮಾರ್ ಫೋಟೋವನ್ನು ಬಳಸಿಕೊಂಡು ಆಹ್ವಾನ ಪತ್ರಿಕೆಯನ್ನು ರೆಡಿ ಮಾಡಿಸಿದೆ. ಆ ಫೋಟೋ ವೈರಲ್ ಕೂಡ ಆಗಿದೆ.

    ಅಂದಹಾಗೆ ಈ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅತಿಥಿಯಾಗಿ ಆಗಮಿಸಲಿದ್ದಾರೆ. ಇವರ ಜೊತೆಗೆ ನಟರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಟರಾದ ದುನಿಯಾ ವಿಜಯ್, ಧ್ರುವ ಸರ್ಜಾ, ಉಪೇಂದ್ರ, ಡಾಲಿ ಧನಂಜಯ್, ಶ್ರೀಮುರಳಿ, ರಾಘವೇಂದ್ರ ರಾಜ್ ಕುಮಾರ್  ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

    ದೊಡ್ಮನೆ ಕುಡಿ ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಗ್ರಾಮಾಯಣ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಸಿನಿಮಾಗೆ ಹಲವು ಕಾರಣಗಳಿಂದ ನಿಂತು ಹೋಗಿತ್ತು. ಇದೀಗ ಮತ್ತೆ ‘ಗ್ರಾಮಾಯಣ’ (Gramayana) ಸಿನಿಮಾ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಅದಕ್ಕೆ ಅದ್ದೂರಿ ಮುಹೂರ್ತ ಫಿಕ್ಸ್ ಆಗಿದೆ. ಇದನ್ನೂ ಓದಿ:ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡ್ತಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಚಿತ್ರತಂಡದಿಂದ ಅಪ್‌ಡೇಟ್ ಸಿಕ್ಕಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

  • ‘ಗ್ರಾಮಾಯಣ’ ಸಿನಿಮಾ ಮುಹೂರ್ತಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆಸ್ಟ್

    ‘ಗ್ರಾಮಾಯಣ’ ಸಿನಿಮಾ ಮುಹೂರ್ತಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆಸ್ಟ್

    ವಿನಯ್ ರಾಜ್ ಕುಮಾರ್ ನಟನೆಯ ಗ್ರಾಮಾಯಣ ಸಿನಿಮಾದ ಮುಹೂರ್ತ ( Muhurta) ಜೂ 8ರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುತ್ತಿದ್ದು, ಈ ಸಮಾರಂಭಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅತಿಥಿಯಾಗಿ ಆಗಮಿಸಲಿದ್ದಾರೆ. ಇವರ ಜೊತೆಗೆ ನಟರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಟರಾದ ದುನಿಯಾ ವಿಜಯ್, ಧ್ರುವ ಸರ್ಜಾ, ಉಪೇಂದ್ರ, ಡಾಲಿ ಧನಂಜಯ್, ಶ್ರೀಮುರಳಿ, ರಾಘವೇಂದ್ರ ರಾಜ್ ಕುಮಾರ್  ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

    ದೊಡ್ಮನೆ ಕುಡಿ ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಗ್ರಾಮಾಯಣ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಸಿನಿಮಾಗೆ ಹಲವು ಕಾರಣಗಳಿಂದ ನಿಂತು ಹೋಗಿತ್ತು. ಇದೀಗ ಮತ್ತೆ ‘ಗ್ರಾಮಾಯಣ’ (Gramayana) ಸಿನಿಮಾ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಅದಕ್ಕೆ ಅದ್ದೂರಿ ಮುಹೂರ್ತ ಫಿಕ್ಸ್ ಆಗಿದೆ. ಇದನ್ನೂ ಓದಿ:ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡ್ತಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಚಿತ್ರತಂಡದಿಂದ ಅಪ್‌ಡೇಟ್ ಸಿಕ್ಕಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

  • ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ದೊಡ್ಮನೆ ಕುಡಿ ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಗ್ರಾಮಾಯಣ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಸಿನಿಮಾಗೆ ಹಲವು ಕಾರಣಗಳಿಂದ ನಿಂತು ಹೋಗಿತ್ತು. ಇದೀಗ ಮತ್ತೆ ‘ಗ್ರಾಮಾಯಣ’ (Gramayana) ಸಿನಿಮಾ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಅದಕ್ಕೆ ಅದ್ದೂರಿ ಮುಹೂರ್ತ ಕೂಡ ಫಿಕ್ಸ್ ಆಗಿದೆ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದನ್ನೂ ಓದಿ:ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ದೇವನೂರು ಚಂದ್ರು ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡ್ತಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಚಿತ್ರತಂಡದಿಂದ ಅಪ್‌ಡೇಟ್ ಸಿಕ್ಕಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ. ‘ಗ್ರಾಮಾಯಣ’ ಸಿನಿಮಾಗೆ ಬೆಂಗಳೂರಿನಲ್ಲಿ ಜೂನ್ 8ರಂದು ಅದ್ಧೂರಿ ಮುಹೂರ್ತ ನಡೆಯಲಿದ್ದು, ಈ ಸಮಾರಂಭದಲ್ಲಿ ಡಾ. ರಾಜ್‌ಕುಮಾರ್ ಕುಟುಂಬದ ಎಲ್ಲಾ ಸದಸ್ಯರು, ರಾಜ್ಯದ ಹಿರಿಯ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

  • 3 ಸಿನಿಮಾ ನಂತ್ರ ಬಿಗ್ ಹಿಟ್‍ಗಾಗಿ ಚಿಕ್ಕಮಗಳೂರಿನಲ್ಲಿ ವಿನಯ್ ರಾಜ್‍ಕುಮಾರ್ ಸೆಟ್ಲ್!

    3 ಸಿನಿಮಾ ನಂತ್ರ ಬಿಗ್ ಹಿಟ್‍ಗಾಗಿ ಚಿಕ್ಕಮಗಳೂರಿನಲ್ಲಿ ವಿನಯ್ ರಾಜ್‍ಕುಮಾರ್ ಸೆಟ್ಲ್!

    ಚಿಕ್ಕಮಗಳೂರು: ಮೂರು ಸಿನಿಮಾಗಳಲ್ಲಿ ನಟಿಸಿ ಒಂದು ಬಿಗ್ ಹಿಟ್‍ಗಾಗಿ ಕಾಯುತ್ತಿರುವ ಡಾ. ರಾಜ್‍ಕುಮಾರ್ ಅವರ ಕುಟುಂಬದ ಕುಡಿ, ರಾಘವೇಂದ್ರ ರಾಜ್ ಕುಮಾರ್ ಮಗ ವಿನಯ್ ರಾಜ್‍ಕುಮಾರ್ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸೆಟ್ಲ್ ಆಗಿದ್ದಾರೆ.

    ದೇವನೂರು ಚಂದ್ರು ನಿರ್ದೇಶನದ ಗ್ರಾಮಾಯಣ ಚಿತ್ರಕ್ಕಾಗಿ ಚಿಕ್ಕಮಗಳೂರಿನಲ್ಲಿ ಲೋಕೇಶನ್ ಹುಡುಕಿದ್ದು, ಇನ್ನೊಂದು ವಾರದಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಚಿಕ್ಕಮಗಳೂರು, ಕಡೂರು ಸುತ್ತಮುತ್ತ ಹತ್ತಾರು ಲೋಕೇಶನ್ ಫೈನಲ್ ಮಾಡಿಡುವ ಚಿತ್ರತಂಡ ಇದೇ 23ರಿಂದ ಕಡೂರು ತಾಲೂಕಿನ ದೇವನೂರಿನಿಂದ ಚಿತ್ರೀಕರಣವನ್ನ ಸ್ಟಾರ್ಟ್ ಮಾಡಲಿದೆ.

    ಈ ಚಿತ್ರ ಸಂಪೂರ್ಣ ಹಳ್ಳಿ ಸೊಗಡಿನ ಚಿತ್ರವಾಗಿದ್ದು, ಆಧುನಿಕ ಜಗತ್ತಿನ ಯುವಜನತೆಗೆ ಹಳ್ಳಿಗಳೆಂದರೆ ಇರುವ ಭಾವನೆಯೇ ಚಿತ್ರದ ಒಲ್ ಲೈನ್ ಸ್ಟೋರಿ. ತಮಿಳಿನಲ್ಲಿ ಎರಡು ಚಿತ್ರಗಳಲ್ಲಿ ನಟಿಸಿರುವ ಅಮೃತ ನಟ ವಿನಯ್‍ಗೆ ನಾಯಕಿಯಾಗಿದ್ದಾರೆ.

    ಹುಡುಗರು ಎಲ್ಲಾ ಕೆಲಸವನ್ನು ಮಾಡ್ತಾರೆ, ನಾನ್ಯಾಕೆ ಮಾಡೋದಕ್ಕೆ ಆಗೋದಿಲ್ಲ, ನಾನು ಮಾಡಬಲ್ಲೇ ಎನ್ನುವುದು ನಾಯಕಿ ಅಮೃತಾ ಅವರ ಪಾತ್ರವಾಗಿದೆ. ಈ ಚಿತ್ರದಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಗಳಾಗಿ ಸ್ಥಳಿಯರನ್ನೇ ಬಳಸಿಕೊಳ್ಳಲು ಚಿತ್ರತಂಡ ಮುಂದಾಗಿದೆ. ಏಕೆಂದರೆ ಸ್ಥಳಿಯರಿಗೆ ಹಳ್ಳಿ ಸೊಗಡಿನ ಜೀವನ ಶೈಲಿ, ಕಷ್ಟ-ಕಾರ್ಪಣ್ಯಗಳ ಅರಿವಿರುತ್ತೆಂದು ಸ್ಥಳಿಯರನ್ನೇ ಬಳಸಿಕೊಳ್ಳಲು ಚಿತ್ರತಂಡ ಯೋಚಿಸಿದೆ. ಅಷ್ಟೇ ಅಲ್ಲದೇ ಗ್ರಾಮಸ್ಥರು ಕೂಡ ಚಿತ್ರತಂಡಕ್ಕೆ ಬೇಕಾದ ಸೌಲಭ್ಯ, ಹಬ್ಬದ ವಾತಾವರಣ ನಿರ್ಮಾಣ ಸೇರಿದಂತೆ ಚಿತ್ರಕ್ಕೆ ಬೇಕಾದ ಪೂರಕ ವ್ಯವಸ್ಥೆ ಕಲ್ಪಿಸಿಕೊಡೋ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv