Tag: Greater Bengaluru

  • GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

    GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

    ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ (High Court) ಸಲ್ಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ನಿರ್ದೇಶನ ನೀಡಿದೆ.

    ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜಾಯ್‌ಮಲ್ಯ ಬಾಗ್ಚಿ ಪೀಠವು, ಜಿಬಿಎ ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ. ಆದರೆ, ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬಂದಿದ್ದು ಏಕೆ ಎಂದು ಪ್ರಶ್ನಿಸಿತು.  ಇದನ್ನೂ ಓದಿ: ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    ಆಗ ಅರ್ಜಿದಾರರ ಪರ ವಕೀಲರು, ಜಿಬಿಎ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಬಂದಿದ್ದೇವೆ ಎಂದರು. ಜಿಬಿಎ ರಚನೆ ಸಂವಿಧಾನ ವಿರೋಧಿ. ಜಿಬಿಎ ರಚನೆಯಿಂದ ಅಧಿಕಾರ ವಿಕೇಂದ್ರೀಕರಣ ಆಗುವುದಿಲ್ಲ. ಅಧಿಕಾರದ ಮರು ಕೇಂದ್ರೀಕರಣ ಆಗುತ್ತದೆ ಎಂದು ದೂರಿದ್ದಾರೆ. ಇದನ್ನೂ ಓದಿ: ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಚಾರಣೆ ಬಳಿಕ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸ್ವಾತಂತ್ರ‍್ಯ ನೀಡಿದ ಹಿನ್ನೆಲೆ ಅರ್ಜಿದಾರರು ತನ್ನ ಅರ್ಜಿಯನ್ನು ವಾಪಸ್ ಪಡೆದುಕೊಂಡರು. ಇದನ್ನೂ ಓದಿ: ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು ದೃಢ – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

  • ಸಿಲಿಕಾನ್ ಸಿಟಿಯಲ್ಲಿ ನಿಲ್ಲದ `ಗುಂಡಿ’ ಕಾಟ – ಒಂದೇ ಮಳೆಗೆ ಮುಚ್ಚಿದ ಗುಂಡಿ ಮತ್ತೆ ಓಪನ್!

    ಸಿಲಿಕಾನ್ ಸಿಟಿಯಲ್ಲಿ ನಿಲ್ಲದ `ಗುಂಡಿ’ ಕಾಟ – ಒಂದೇ ಮಳೆಗೆ ಮುಚ್ಚಿದ ಗುಂಡಿ ಮತ್ತೆ ಓಪನ್!

    ಬೆಂಗಳೂರು: ಸಿಲಿಕಾನ್‌ ಸಿಟಿಗೆ ಅದೇನಾಗಿದ್ಯೋ ಗೊತ್ತಿಲ್ಲಾ.. ಅದೆಷ್ಟೇ ಪ್ರಯತ್ನ ಪಟ್ರು ರಸ್ತೆಗಳ ಸಮಸ್ಯೆಗೆ ಪರಿಹಾರ ಸಿಕ್ತಾನೆ ಇಲ್ಲಾ. ಬೆಂಗಳೂರು ರಸ್ತೆಗುಂಡಿಗಳ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ ಹಾರಾಜಾಗಿದ್ರೂ ಕೂಡ ಜಿಬಿಎ ಅಧಿಕಾರಿಗಳು ಮಾತ್ರ ಬುದ್ದಿ ಕಲಿಯುತ್ತಿಲ್ಲ. ಕಳೆಪೆ ಕಾಮಗಾರಿ, ಅರೆಬರೆ ಕಾಮಗಾರಿಗಳಿಂದಾಗಿ ತನ್ನ ಮಾನವನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ. ಮೊನ್ನೆ ಮೊನ್ನೆ ಮುಚ್ಚಿರೋ ಗುಂಡಿಗಳು ಒಂದೇ ಮಳೆಗೆ ಮತ್ತೆ ಬಾಯ್ತೆರೆದು ಬಲಿಗಾಗಿ ಕಾಯ್ತಿವೆ ಈ ಬಗ್ಗೆ ನಿಮ್ಮ ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್ ನಡೆಸಿದೆ.

    ಬೆಂಗಳೂರಿಗೆ ಬಿಗ್‌ ಗಿಫ್ಟ್ ಮಾನ್ಸೂನ್‌ ಪ್ರೂಫ್ ರಸ್ತೆಯನ್ನು ಕೊಡ್ತೀವಿ. ಗುಂಡಿಯನ್ನು ಅದ್ಭುತವಾಗಿ ಮುಚ್ಚುತ್ತೇವೆ, ರಸ್ತೆ ದುರಸ್ತಿಗೆ ಬರೋದಿಲ್ಲ ಹೈ ಕ್ವಾಲಿಟಿ ರಸ್ತೆ ಅಂತಾ ಡಿಸಿಎಂ ಎಕ್ಸ್‌ನಲ್ಲಿ ಹೇಳಿದ್ದೇ ಹೇಳಿದ್ದು. ಆದ್ರೆ ಬೆಂಗಳೂರು ರೋಡ್‌ಗಳು ಮಾತ್ರ ಒಂದೇ ಮಳೆಗೆ ಬಣ್ಣ ಕಳಕೊಂಡು, ಮುಚ್ಚಿರುವ ಗುಂಡಿ ಎಲ್ಲಾ ಮತ್ತೆ ಬಾಯ್ತೆರೆದು ಬಲಿಗಾಗಿ ಕಾಯುತ್ತಿದೆ.

    ಒಂದೆರಡು ವಾರದ ಹಿಂದೆ ಗುಂಡಿ ಮುಚ್ಚಿದ ರಸ್ತೆಗಳಲ್ಲಿ ಈಗ ಹೋಗಿ ನೋಡಿದ್ರೆ.. ಜಿಬಿಎ ಬಂಡವಾಳ ಬಟಾಬಯಲಾಗಿದೆ. ಒಂದೇ ಮಳೆಗೆ ರಸ್ತೆಗಳಲ್ಲಿ ಮತ್ತೆ ಗುಂಡಿಗಳು ಓಪನ್ ಆಗಿವೆ, ಅರೆಬರೆ ಕಾಮಗಾರಿ ನಡೆಯುತ್ತಿರುವ ನಗರದ ಅನೇಕ ಕಡೆ ಮಳೆಯ ಎಫೆಕ್ಟ್‌ನಿಂದ ಜನ ರಸ್ತೆಯಲ್ಲಿ ಫುಟ್ ಪಾತ್‌ನಲ್ಲಿ ಓಡಾಡದಂತೆ ಆಗಿದೆ. ಜೀವ ಕೈಯಲ್ಲಿ ಹಿಡಿದು ರಸ್ತೆಯಲ್ಲಿ ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ನಿಮ್ಮ ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್ ನಡೆಸಿದ್ದು ರಸ್ತೆಗಳ ಪರಿಸ್ಥಿಯನ್ನು ಬಿಚ್ಚಿಟ್ಟಿದೆ.

    ಶಿವಾನಂದ ಸರ್ಕಲ್‌ನಲ್ಲಿ ಗುಂಡಿ ಗಂಡಾಂತರ
    ಶಿವಾನಂದ ಸರ್ಕಲ್ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಈ ರಸ್ತೆಯಲ್ಲಿ ಇತ್ತೀಚೆಗಷ್ಟೇ ಗುಂಡಿ ಮುಚ್ಚುವ ಕಾರ್ಯ ಆಗಿತ್ತು. ಆದ್ರೆ ಮೊನ್ನೆ ಸುರಿದ ಒಂದೇ ಒಂದು ಮಳೆಗೆ ಹಾಕಿದ್ದ ಡಾಂಬರೆಲ್ಲಾ ಕಿತ್ತು ಬಂದಿದೆ. ಕಳೆಪೆ ಕಾಮಗಾರಿಯಿಂದಾಗಿ ಗುಂಡಿಗಳು ಮತ್ತೆ ಓಪನ್ ಆಗಿವೆ. ಇಲ್ಲಿ ಓಡಾಡೋ ವಾಹನ ಸವಾರರಿಗೆ ಮತ್ತೆ ಗುಂಡಿ ಕಾಟ ಎದುರಾಗಿದೆ. ಸ್ವಲ್ಪ ಯಾಮಾರಿದ್ರೂ ಕೈ ಕಾಲು ಮುರಿದು ಕೊಂಡು ಆಸ್ಪತ್ರೆಗೆ ಸೇರೋ ಪರಿಸ್ಥಿತಿ ಎದುರಾಗಿದೆ.

    ಚಾಮರಾಜಪೇಟೆಯಲ್ಲಿ ಅರೆಬರೆ ಕಾಮಗಾರಿ
    ಚಾಮರಾಜಪೇಟೆ ರಸ್ತೆಯಲ್ಲಂತೂ ಅರೆಬರೆ ಕಾಮಗಾರಿಯಿಂದ ಜನರು ಬೇಸತ್ತು ಹೋಗಿದ್ದಾರೆ. ಓಡಾಡೋಕು ಜಾಗವಿಲ್ಲದೆ ನಿತ್ಯ ಜನರು ಹಾಗೂ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸಾಕಷ್ಟು ಸಮಯದಿಂದ ಈ ರಸ್ತೆಯಲ್ಲಿ ಇದೆ ಪರಿಸ್ಥಿತಿಯಿದ್ದು ಯಾವಾಗ ಈ ರಸ್ತೆ ಸರಿ ಹೋಗುತ್ತೋ ಅಂತ ಜನ ಪ್ರಶ್ನೆ ಮಾಡ್ತಿದ್ದಾರೆ ಈ ಬಗ್ಗೆ ನಿಮ್ಮ ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್ ನಡೆಸಿದೆ ನೋಡೋಣ ಬನ್ನಿ.

    ಹಳ್ಳಿ ಹಳ್ಳಿಗಳಲ್ಲೂ ಗುಂಡಿ ಗಂಡಾಂತರ!
    ಹೌದು. ಬರೀ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಗುಂಡಿ ಗಂಡಾಂತರ ಇದೀಗ ಹಳ್ಳಿಹಳ್ಳಿಗೂ ಕಾಲಿಟ್ಟಿದೆ. ತುರುವೇಕೆರೆ ತಾಲ್ಲೂಕಿನ ತೊರೆ ಮಾವಿನಹಳ್ಳಿ ಗ್ರಾಮಸ್ಥರು ರಸ್ತೆ ಗುಂಡಿಗಳಿಂದ ಬೇಸತ್ತು ಹೋಗಿದ್ದಾರೆ. ನಿರಂತರ ಮಳೆಯಿಂದಾಗಿ ಗುಂಡಿ ಬಿದ್ದು ಕೆಸರು ಗದ್ದೆಯಾದ ತೊರೆ ಮಾವಿನಹಳ್ಳಿ ರಸ್ತೆಯಲ್ಲಿ ಗ್ರಾಮಸ್ಥರು ನಾಟಿ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದಾರೆ. ಬೀದರ್ ಶ್ರೀರಂಗಪಟ್ಟಣ ರಸ್ತೆಗೆ ಸಂಪರ್ಕ ಕಲ್ಪಿಸುವ ಉಪ ರಸ್ತೆ ಇದಾಗಿದ್ದು. ನಿತ್ಯಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ರಸ್ತೆಯಾಗಿದೆ. ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೇಳದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಗ್ರಾಮಸ್ಥರು ಪೈರು ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

  • ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಧ್ಯಕ್ಷ ತಿರುಗೇಟು – ಆಯುಕ್ತರಿಗೆ ಬರೆದ ಪತ್ರ ಬಿಡುಗಡೆ

    ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಧ್ಯಕ್ಷ ತಿರುಗೇಟು – ಆಯುಕ್ತರಿಗೆ ಬರೆದ ಪತ್ರ ಬಿಡುಗಡೆ

    ರಾಮನಗರ: ಬಿಡದಿ ಭೂ ಸ್ವಾಧೀನ (Bidadi Land Acquisition) ವಿಚಾರವಾಗಿ ಪರಿಹಾರಕ್ಕೆ ನಮ್ಮ ತಾಯಿ ಅರ್ಜಿ ಹಾಕಿದ್ರೆ ಅದನ್ನ ಬಡವರಿಗೆ ಕೊಟ್ಟು ಬಿಡುತ್ತೇವೆ ಎಂಬ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿಕೆ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಅಧ್ಯಕ್ಷ ನಟರಾಜ್ ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ್ದಾರೆ.

    ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಿಗೆ ಬರೆದಿರುವ ಪತ್ರ ಬಿಡುಗಡೆ ಮಾಡಿದ್ದಾರೆ. ನೋಟಿಫಿಕೇಷನ್ ಆಗಿ, ಪತ್ರಿಕೆಗಳಲ್ಲಿ ಪ್ರಕಟಗೊಂಡ ಮೂರೇ ದಿನಕ್ಕೆ ಅನಿತಾ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಕೂಡ ಅರ್ಜಿ ಹಾಕಿದ್ದಾರೆ. ನನ್ನ ಹೆಸರಲ್ಲಿ ಖಾತೆ ಇದೆ, ವಿನಯ್ ಗೌಡ ಎಂಬವರಿಗೆ ಕಾರಣಾಂತರಗಳಿಂದ ಎಸ್‌ಪಿಎ (ಸ್ಪೆಷಲ್ ಪವರ್ ಆಪ್ ಅಟಾರ್ನಿ) ಮಾಡಿದ್ದೆವು. ಸದ್ಯ ಅದನ್ನ ಹಿಂಪಡೆದಿದ್ದೇವೆ. ಹೊಸೂರು, ಬನ್ನಿಗಿರಿ ಗ್ರಾಮದಲ್ಲಿರುವ ಭೂಮಿ ಭೂಸ್ವಾಧೀನವಾದಲ್ಲಿ ಎಲ್ಲಾ ನೋಟಿಸ್ ಹಾಗೂ ದಾಖಲೆಗಳನ್ನ ನನ್ನ ವಿಳಾಸಕ್ಕೆ ಕಳುಹಿಸಿ ಎಂದು ಅರ್ಜಿಯಲ್ಲಿ ಬರೆದಿದ್ದಾರೆ. ಅದರ ಅರ್ಥ ಸ್ವಾಧೀನವಾದ್ರೆ ನಮಗೆ ಏನು ಇದೆ ಅದನ್ನ ಕೊಡಬೇಕು ಅಂತ ತಾನೆ? ನಿಖಿಲ್ ಕುಮಾರಸ್ವಾಮಿ ಡಿಕೆ ಶಿವಕುಮಾರ್ ಬಗ್ಗೆ ಮಾತಾಡಿದ್ದಾರೆ. ಮೊದಲು ವಿಚಾರ ತಿಳಿದುಕೊಂಡು ಮಾತನಾಡಲಿ ಎಂದರು. ಇದನ್ನೂ ಓದಿ: ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್

    ನಮ್ಮ ತಾಯಿ ಅರ್ಜಿ ಹಾಕಿದ್ರೆ, ಆಸ್ತಿ ಸರ್ಕಾರಕ್ಕೆ ಬಿಡುತ್ತೇನೆ, ಅಲ್ಲಿನ ಬಡರೈತರಿಗೆ ದಾನ ಕೊಡುತ್ತೇನೆ ಅಂತ ನಿಖಿಲ್ ಹೇಳಿದ್ದಾರೆ. ನಾನು ಸವಾಲು ಹಾಕ್ತೇನೆ ಯಾವಾಗ ರೈತರಿಗೆ ಬಿಟ್ಟುಕೊಡ್ತೀರಾ ಹೇಳಿ? ದಿನಾಂಕ ನಿಗದಿ ಮಾಡಿ ಜಿಬಿಡಿಎ ಮುಖಾಂತರವೇ ರೈತರ ಹೆಸರಿಗೆ ಮಾಡಿಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ – ಶ್ರೀ ಕ್ಷೇತ್ರದ ಪರ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

  • ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ

    ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿದಂತೆ ಹಲವು ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ.

    2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್‌ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ 171.91 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹೆಚ್ಚುವರಿ ಮೊತ್ತ 47.81 ಕೋಟಿಯನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ.

    ಕಿತ್ತೂರಿಗೆ 100 ಹಾಸಿಗೆ ಆಸ್ಪತ್ರೆ
    ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 100 ಹಾಸಿಗೆಗಳ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು 3378.65 ಲಕ್ಷಗಳ ಅನುದಾನದಲ್ಲಿ ನಿರ್ಮಿಸಲು ಹೊಸದಾಗಿ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿತು.

    ಮೊಳಕಾಲ್ಮೂರು ಆಸ್ಪತ್ರೆ ಮೇಲ್ದರ್ಜೆಗೆ
    ಮೊಳಕಾಲ್ಮೂರು ತಾಲ್ಲೂಕು ಗಣಿ ಬಾಧಿತ ಪ್ರದೇಶವಾಗಿರುವುದರಿಂದ ಈ ತಾಲ್ಲೂಕಿನಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಪ್ರಸ್ತುತವಿರುವ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಉನ್ನತೀಕರಿಸಿ ಪ್ರತ್ಯೇಕ ಜಿಲ್ಲಾಮಟ್ಟದ ಆಸ್ಪತ್ರೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದಿಸಿದೆ.

    ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ
    ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳಿಗೆ ತಿದ್ದುಪಡಿ ಮೂಲಕ ಮುಸ್ಲಿಮೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ.50 ರಷ್ಟು ಕಡ್ಡಾಯವಾಗಿ ಹೊಂದಿರಬೇಕೆಂಬ ನಿಯಮವನ್ನು ತೆಗೆದುಹಾಕಲು ಸಚಿವ ಸಂಪುಟ ನಿರ್ಣಯಿಸಿದೆ.

    ಕಾರ್ಮಿಕ ರಾಜ್ಯ ವಿಮಾ ಸೊಸೈಟಿ ಸ್ಥಾಪನೆ
    ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲಾಖೆಯನ್ನು ESI ಮಾರ್ಗಸೂಚಿಗಳನ್ವಯ ‘ಸೊಸೈಟಿ ನೋಂದಣಿ ಕಾಯ್ದೆ 1860’ ಅಡಿಯಲ್ಲಿ ನೋಂದಾಯಿಸಿ ‘ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ’ಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

    ವರದಾ ನದಿಗೆ ನೀರು ತುಂಬಿಸುವ ಯೋಜನೆ
    ಹಾವೇರಿ ಜಿಲ್ಲೆ, ಹಾನಗಲ್‌ ತಾಲ್ಲೂಕಿನ ವರದಾ ನದಿಯಿಂದ ನೆರೆಗಲ್ ಹಾಗೂ ಕುಸನೂರ ಏತ ನೀರಾವರಿ ಮುಖಾಂತರ 111 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 220 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಸೊಕನಾದಗಿ ನೀರಾವರಿ ಯೋಜನೆಗೆ ಅನುಮೋದನೆ
    ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಸೊಕನಾದಗಿ ಗ್ರಾಮ ಮತ್ತು ಸುತ್ತಮುತ್ತಲಿನ 588 ಹೆಕ್ಟೇರ್ ಕ್ಷೇತ್ರಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರಾವರಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ 17 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಯನ್ನು ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಹಾಸ್ಟೆಲ್
    ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ 265.57 ಲಕ್ಷ ರೂ.ನಂತೆ ಒಟ್ಟು 15 ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತ 3,983.55 ಲಕ್ಷ ರೂ. ಯೋಜನಾ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ 87.60 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

    ತಲಕಾಡು ಇನ್ನು ಪಟ್ಟಣ ಪಂಚಾಯಿತಿ
    ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮ ಪಂಚಾಯಿತಿಯೊಂದಿಗೆ ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಟಿ.ಬೆಟ್ಟಹಳ್ಳಿ ಮತ್ತು ಕೂರುಬಾಳನಹುಂಡಿ ಗ್ರಾಮಗಳನ್ನು ಸೇರ್ಪಡೆಗೊಳಿಸಿ ‘ತಲಕಾಡು ಪಟ್ಟಣ ಪಂಚಾಯಿತಿ’ಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದಿಸಿದೆ.

    ಶಿವ ಸಮತೋಲನ ಜಲಾಶಯ ಯೋಜನೆ ವಿಸ್ತರಣೆ
    ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಂದ ಶಿವ ಸಮತೋಲನ ಜಲಾಶಯದಿಂದ ಶಿವ ಸಮತೋಲನ ಜಲಾಶಯದ ಕೊಳವೆ ಮಾರ್ಗಗಳ ಇಂಟೇಕ್ ಬಳಿ ಇರುವ 5ನೇ ಹಂತದ ಕಚ್ಚಾ ನೀರು ಸರಬರಾಜು ಕೊಳವೆ ಮಾರ್ಗದವರೆಗೆ 3200 ಮಿ.ಮೀ ವ್ಯಾಸದ ವಿಸ್ತರಿತ ಹೆಚ್ಚುವರಿ ಕಚ್ಚಾ ನೀರಿನ ಕೊಳವೆ ಮಾರ್ಗವನ್ನು ಅಳವಡಿಸುವ 136.50 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೆ.ಟಿ.ಪಿ.ಪಿ ಕಾಯ್ದೆ 1999 ರನ್ವಯ ಅನುಷ್ಟಾನಗೊಳಿಸುವ ಷರತ್ತಿಗೊಳಪಟ್ಟು ಕಾಮಗಾರಿಯ ವಿಸ್ತೃತ ಯೋಜನಾ ವರದಿಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ ಇನ್ನು ಆಯುಕ್ತಾಲಯ
    ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ರಚನೆ, ಆಯುಕ್ರ ನೇಮಕಾತಿ ಹಾಗೂ ಅಧಿಕಾರ ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದಂತೆ ಶಾಸನಬದ್ಧ ಅವಕಾಶವನ್ನು ಕಲ್ಪಿಸಲು ಹಾಗೂ ಆಯುಕ್ತಾಲಯ ರಚನೆಯಿಂದ ನಗರಾಭಿವೃದ್ಧಿ ಪ್ರಾಧಿಕಾರಗಳ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣವನ್ನು ಆಯುಕ್ತಾಲಯದ ವ್ಯಾಪ್ತಿಗೆ ಒಳಪಡಿಸಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ಕ್ಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಗಳಲ್ಲಿ ತಿದ್ದುಪಡಿ ತರುವುದು ಅವಶ್ಯಕವಿರುವುದರಿಂದ ಈ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

    ಗದಗ-ಬೆಟಗೇರಿ ಅಧ್ಯಾದೇಶ ಬದಲಿಗೆ ವಿಧೇಯಕ
    ಅಧ್ಯಾದೇಶವನ್ನು ಬದಲಿ ವಿಧೇಯಕವನ್ನಾಗಿ ವಿದಾಯಿಸುವ ಪ್ರಕ್ರಿಯೆ ಜೊತೆಗೆ ಅಧ್ಯಾದೇಶದಲ್ಲಿ ಒಳಗೊಂಡಿರದ ಇಬ್ಬರು ಹೆಚ್ಚುವರಿ ಸದಸ್ಯರನ್ನು ಸಹ ಕಾಯ್ದೆಗೆ ಸೇರ್ಪಡೆಗೊಳಿಸಿ ಸಿದ್ದಪಡಿಸಿರುವ ಪರಿಷ್ಕೃತ ಗದಗ-ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ (ಅನುಬಂಧದಲ್ಲಿರುವಂತೆ); ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ.

    ಹುಣಸೂರು ನಾಲೆಗಳ ಆಧುನೀಕರಣ
    ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗಳ 49.85 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಮರೂರು ಶಾಖಾ ನಾಲೆ ಆಧುನೀಕರಣ
    ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿಯ (Modernization of Marur Branch Canal and its distributaries under HRBC) 90.00 ಕೋಟಿ ಮೊತ್ತದ ಅಂದಾಜುಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

    ಹೇಮಾವತಿ ಡಿಸ್ಟ್ರಿಬ್ಯೂಟರಿ-64ಕ್ಕೆ ಆಧುನೀಕರಣ
    ಹೇಮಾವತಿ ಎಡದಂಡೆ ಕಾಲುವೆ ಅಡಿಯಲ್ಲಿ ಡಿಸ್ಟ್ರಿಬ್ಯೂಟರಿ-64 ಮತ್ತು ಅದರ ಉಪ ಕಾಲುವೆಗಳ ಸಿಸಿ ಲೈನಿಂಗ್ ಮತ್ತು ಪುನರ್‌ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

    ನವಿಲುತೀರ್ಥದಿಂದ ರಾಮದುರ್ಗದ 8 ಕೆರೆ ಭರ್ತಿ
    ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಯ ನೀರು ಎತ್ತುವ ಮೂಲಕ ರಾಮದುರ್ಗ ತಾಲ್ಲೂಕಿನ ಚಂದರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

    ಮದ್ದೂರು ಕಾಲುವೆಗಳ ಆಧುನೀಕರಣ ಕಾಮಗಾರಿ
    ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿ, ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು 49.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳಿಗೆ ತಿದ್ದುಪಡಿ
    ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ತಿದ್ದುಪಡಿ) ನಿಯಮಗಳು, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
    ಆಯೋಗದ ಅಧ್ಯಕ್ಷರ ವಯೋಮಿತಿಯನ್ನು ಕನಿಷ್ಠ 40 ವರ್ಷ ಹಾಗೂ ಸದಸ್ಯರ ವಯೋಮಿತಿಯನ್ನು ಕನಿಷ್ಠ 35 ವರ್ಷ ಎಂದು ನಿಗದಿಪಡಿಸಲಾಗಿದೆ. ಮಕ್ಕಳ ಕ್ಷೇತ್ರದಲ್ಲಿ ಅವರಿಗೆ ಇರಬೇಕಾದ ಅನುಭವದ ಅವಧಿಯನ್ನು ಐದು ವರ್ಷಗಳಿಂದ 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ನೀಡುವ ಬಗ್ಗೆ ತಿಳಿಸಲಾಗಿದೆ. ಆಯೋಗವು ಕೇಂದ್ರ ಸ್ಥಾನದಲ್ಲಿ ಸಭೆ ನಡೆಸುವ ಕುರಿತು ಹಾಗೂ ಕೇಂದ್ರ ಸ್ಥಾನದ ಹೊರಗೆ ಇತರೆ ಜಿಲ್ಲೆ / ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಇರಬೇಕಾದ ಸದಸ್ಯರ ಉಪಸ್ಥಿತಿ (Quoram) ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಗಿದೆ. ಆಯೋಗದ ಕಾರ್ಯದರ್ಶಿಗಳು ಆಯೋಗದ ಆಡಳಿತದ ವ್ಯವಹಾರಗಳನ್ನು ಸುಲಲಿತವಾಗಿ ನಡೆಸಲು ವಿವರವಾದ ಮಾರ್ಗಸೂಚಿಯನ್ನು ನೀಡಲಾಗಿದೆ.

    ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆ
    ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.
    ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು, ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಹಾಗೂ ನ್ಯಾ.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.

    ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು, ಘನತೆವೆತ್ತ ರಾಜ್ಯಪಾಲರ ಒಪ್ಪಿಗೆಗೆ ಸಲ್ಲಿಸಿ, ರಾಜ್ಯಪಾಲರ ಅವಲೋಕನಗೊಳಗಾಗಿ ಹಿಂದಿರುಗಿಸಲ್ಪಟ್ಟ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2024ನ್ನು ಹಿಂಪಡೆಯಲು; ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ಸಹಕಾರ ಸಂಘಗಳು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು ಘನತೆವೆತ್ತ ರಾಜ್ಯಪಾಲರ ಒಪ್ಪಿಗೆಗೆ ಸಲ್ಲಿಸಿ, ರಾಜ್ಯಪಾಲರ ಅವಲೋಕನೆಗೊಳಗಾಗಿ ಹಿಂದಿರುಗಿಸಲ್ಪಟ್ಟ ‘ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2024’ನ್ನು ಹಿಂಪಡೆಯಲು ಹಾಗೂ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧ್ಯಕ್ಷರ ಹುದ್ದೆಗೆ ನಡೆಯುವ ಚುನಾವಣೆಗೆ ಮೀಸಲಾತಿ ಇರಲಿದೆ. ಸಹಕಾರಿ ಸಂಸ್ಥೆಗಳಲ್ಲಿ ಸಾಮಾಜಿಕ ನ್ಯಾಯವನ್ನು ತರಲು ಇದು ನೆರವಾಗಲಿದೆ.

    ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಐಟಂ 28ರ ಪರಂತುಕದನ್ವಯ ಕರ್ನಾಟಕ ಬಂದರುಗಳ (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) ಆಕ್ಟ್, 1961ರ ಸೆಕ್ಷನ್ 3 ಮತ್ತು ಸೆಕ್ಷನ್ 10ನ್ನು ಮಾರ್ಪಡಿಸಿ ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ಅಮೆಂಡ್‌ಮೆಂಟ್) ಆಕ್ಟ್, 2025ರನ್ನು ಹೊರಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

    ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025ಕ್ಕೆ ಹಾಗೂ ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು ಮತ್ತು ಸದರಿ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು ಮತ್ತು ಸದರಿ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ಅನುಸೂಚಿ 01ರ ಕ್ರಮ ಸಂಖ್ಯೆ: 1ರ ಅನ್ವಯ ಗ್ರೇಟರ್ ಬೆಂಗಳೂರು ಅಧಿನಿಯಮ, 2024ರ ಕಲಂ 8, 14 ಮತ್ತು 35ಕ್ಕೆ ತಿದ್ದುಪಡಿ ತರುವ ಉದ್ದೇಶದ ಅನುಬಂಧ-1 ರಲ್ಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಿದೆ.

    ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ಕ್ಕೆ ತಿದ್ದುಪಡಿ ಮಾಡಲು ಇದರೊಂದಿಗೆ ಲಗತ್ತಿಸಿರುವ, ಅನುಬಂಧದಲ್ಲಿರುವಂತೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ 2025ನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟದ ಅನುಮೋದನೆ ನೀಡಿದೆ.

    ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) ಅಧಿನಿಯಮ, 1982 ಹಾಗೂ ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) (ತಿದ್ದುಪಡಿ) ಅಧಿನಿಯಮ, 2009 ರದ್ದುಪಡಿಸಿ ಅನುಬಂಧ-1 ರಲ್ಲಿ ಇರಿಸಲಾದ ಸಮಗ್ರವಾದ ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಕಾಯ್ದೆ, 2025”ರ ಕರಡು ಪ್ರಸ್ತಾವನೆಗೆ ಅನುಮೋದನೆ ನೀಡುವುದು ಮತ್ತು ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟದ ಅನುಮೋದನೆ ನೀಡಿದೆ.

    ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಸರ್ಕಾರದ (ವ್ಯವಹಾರಗಳ ನಿರ್ವಹಣೆ) ನಿಯಮಗಳು, 1977 ಷೆಡ್ಯೂಲ್-1ರ ಪ್ಯಾರ-1ರನ್ವಯ ಅನುಬಂಧದಲ್ಲಿ ಲಗತ್ತಿಸಿರುವ The Karnataka Decriminalisation (Amendment of Provisions) Bill, 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

    ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ
    ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2024”ನ್ನು ಕೈಬಿಡಲು; ಮತ್ತು ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ಕ್ಕೆ ಹಾಗೂ ಮೇಲೆ ತಿಳಿಸಿರುವ, ನೋಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ 2025”ರ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರಣಾ) (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    Karnataka Tourism Trade (Facilitation and Regulation) Act, 2015, 2015 ಕ್ಕೆ ತಿದ್ದುಪಡಿ ತಂದು, ಸದರಿ ಅಧಿನಿಯಮದ ಸೆಕ್ಷನ್-3ರ ನಂತರ “3-A. District Level Monitoring Committee”” ಅನ್ನು ರಚಿಸಿ, ಉಪಬಂಧ ಕಲ್ಪಿಸುವ ಸಂಬAಧ ಅನುಬಂಧದಲ್ಲಿರುವ The Karnataka Tourism Trade (Facilitation and Regulation) (Amendment) Bill, 2025 ರ ಅನುಮೋದನೆಗಾಗಿ ಮತ್ತು ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಕರ್ನಾಟಕ ಪುರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ
    ಕರ್ನಾಟಕ ಪೌರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

    ಯಲಬುರ್ಗಾ, ಜೇವರ್ಗಿ ಹಾಗೂ ಯಾದಗಿರಿಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜು
    ಯಲಬುರ್ಗಾ, ಜೇವರ್ಗಿ ಹಾಗೂ ಯಾದಗಿರಿಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜುಗಳಿಗೆ ಒಟ್ಟು 41.91 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಪ್ರಾರಂಭ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

    ಆ.16ಕ್ಕೆ ವಿಶೇಷ ಸಚಿವ ಸಂಪುಟ ಸಭೆ
    ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ಆಯೋಗವನ್ನು ನೇಮಕ ಮಾಡಿದ್ದು, ವರದಿ ಸಲ್ಲಿಕೆಯಾಗಿದೆ. ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾದ ಅಧ್ಯಯನ ಮಾಡುವ ಮೂಲಕ ಶೇ 95 ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸಿದ್ದಾರೆ. ಸದರಿ ವರದಿಯನ್ನು ಎಲ್ಲಾ ಸಚಿವರಿಗೆ ನೀಡಲಾಗಿದೆ. ಸಚಿವ ಸಂಪುಟ ವರದಿಯನ್ನು ಸ್ವೀಕರಿಸಿದೆ. ಈ ಬಗ್ಗೆ ಅಧ್ಯಯನ ಮಾಡಿ ಆಗಸ್ಟ್ 16 ರಂದು, ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

  • ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು: ಗ್ರೇಟರ್‌ ಬೆಂಗಳೂರು (Greater Bengaluru) ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಕಚೇರಿಯನ್ನಾಗಿ ಮಾರ್ಪಾಡು ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

    5 ನಗರ ಪಾಲಿಕೆಗಳ ಹೆಸರು
    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
    2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
    3. ಬೆಂಗಳೂರು ಉತ್ತರ ನಗರ ಪಾಲಿಕೆ
    4. ಬೆಂಗಳೂರು ಪೂರ್ವ ನಗರ ಪಾಲಿಕೆ
    5. ಬೆಂಗಳೂರು ಕೇಂದ್ರ ನಗರ ಪಾಲಿಕೆ

    ಆಗಸ್ಟ್‌ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್‌ ಪಾಸ್‌ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಪಾಲಿಕೆಗಳ ಬಗ್ಗೆ ಆಕ್ಷೇಪಣೆ ಇದ್ದರೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿದೆ. ಇದನ್ನೂ ಓದಿ: 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

  • ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ.ಕೆ.ಶಿವಕುಮಾರ್

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ.ಕೆ.ಶಿವಕುಮಾರ್

    – 2028ರ ಚುನಾವಣಾ ಭವಿಷ್ಯ ಗ್ಯಾರಂಟಿ ಸಮಿತಿಗಳ ಕೈಯಲ್ಲಿದೆ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಜಿಬಿಎ ರಚನೆ ಮಾಡಲಾಗಿದೆ. ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್

    ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು. ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ಭೂಮಿಗೆ ವಾಪಸ್‌ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ

    ಇದೇ ವೇಳೆ, 2028ರ ಚುನಾವಣಾ ಭವಿಷ್ಯವು ಗ್ಯಾರಂಟಿ ಸಮಿತಿಗಳ ಕೈಯಲ್ಲಿದೆ ಎಂದು ಅವರು ಹೇಳಿದ್ದಾರೆ.

  • ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ – ಡಿಕೆಶಿ

    ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ – ಡಿಕೆಶಿ

    ಬೆಂಗಳೂರು: ಈಗ ಇರುವ ಬಿಬಿಎಂಪಿ (BBMP) ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಹಾಸನದಲ್ಲಿ ಮಾತ್ರ ಹಾರ್ಟ್ ಅಟ್ಯಾಕ್ ಕೇಸ್ ಜಾಸ್ತಿ ಆಗಿಲ್ಲ, ಇಡೀ ದೇಶದಲ್ಲಿ ಆಗ್ತಿದೆ: ಎ.ಮಂಜು

    ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಯಾವ ರೀತಿ ವಿಭಜನೆ ಆಗಬೇಕು ಎಂದು ಫೈನಲ್ ರಿಪೋರ್ಟ್ ಕೊಟ್ಟಿದ್ದಾರೆ. ವಿಪಕ್ಷ ನಾಯಕರ ಜೊತೆಯೂ ನಾನು ಮಾತನಾಡಬೇಕಿತ್ತು. ಆದರೆ ಆ ದಿನ ಅವರು ಇರಲಿಲ್ಲ. ರಿಪೋರ್ಟ್ ಕೊಟ್ಟಿರುವವರು ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇದೆಲ್ಲವೂ ಆದ ಮೇಲೆ ಇದನ್ನು ಕ್ಯಾಬಿನೆಟ್‌ಗೆ ತೆಗೆದುಕೊಂಡು ಹೋಗ್ತೀನಿ. ಈಗ ಇರುವ ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ. ಮುಂದೆ ಹೊಸ ವ್ಯಾಪ್ತಿಯನ್ನು ಸೇರಿಸುವ ನಿರ್ಧಾರ ಮಾಡ್ತೀವಿ ಎಂದರು.

    ಈಗ ಎಲ್ಲವನ್ನೂ ಸಮಾನವಾಗಿ ವಿಂಗಡಿಸಲಾಗಿದೆ. ಹೊಸ ವ್ಯಾಪ್ತಿ ಸೇರಿಸುವ ಬಗ್ಗೆ ಮುಂದೆ ನೋಡೋಣ. ಈ ರಿಪೋರ್ಟ್ ಮುಂದಿನ ಕ್ಯಾಬಿನೆಟ್‌ನಲ್ಲಿ ತಂದು ಎಲೆಕ್ಷನ್ ಮಾಡುವ ಬಗ್ಗೆ ತೀರ್ಮಾನ ಮಾಡ್ತೀವಿ. ಮುಂದೆ ಹೊಸ ವ್ಯಾಪ್ತಿಯನ್ನು ಸೇರಿಸಬೇಕಾಗುತ್ತದೆ. ಸದ್ಯಕ್ಕೆ ಹೊಸ ವ್ಯಾಪ್ತಿ ಸೇರಿಸುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಹಿಮಾಚಲಪ್ರದೇಶ: 17 ದಿನದಲ್ಲಿ 19 ಬಾರಿ ಮೇಘಸ್ಫೋಟ – 82 ಸಾವು, ಬದರೀನಾಥ ಮಾರ್ಗ ಬಂದ್

  • ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

    ತುಮಕೂರನ್ನೂ ಗ್ರೇಟರ್ ಬೆಂಗಳೂರಿಗೆ ಸೇರಿಸಿ – ಪರಮೇಶ್ವರ್

    – ತುಮಕೂರಿಗೆ ಮೆಟ್ರೋ ಅಗತ್ಯವಿದೆ ಎಂದ ಗೃಹಸಚಿವ

    ಬೆಂಗಳೂರು: ತುಮಕೂರನ್ನೂ (Tumkur) ಗ್ರೇಟರ್ ಬೆಂಗಳೂರಿಗೆ ಸೇರಿಸಬೇಕು ಅಂತ ಗೃಹ ಸಚಿವ ಪರಮೇಶ್ವರ್ (G. Parameshwar) ಸರ್ಕಾರವನ್ನ ಒತ್ತಾಯಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ತುಮಕೂರನ್ನ ಗ್ರೇಟರ್ ಬೆಂಗಳೂರಿಗೆ (Greater Bengaluru) ಸೇರಿಸಬೇಕು. ರಾಮನಗರವನ್ನ ಬೆಂಗಳೂರು ದಕ್ಷಿಣ ಅಂತ ಮಾಡಿ ಗ್ರೇಟರ್ ಬೆಂಗಳೂರಿಗೆ ಸೇರಿಸಿದ್ದಾರೆ. ತುಮಕೂರು ಬೆಂಗಳೂರಿಗೆ 70 ಕಿಮೀ ದೂರ ಇರೋದು. ನಮ್ಮನ್ನು ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ. ಹೀಗಾಗಿ ಗ್ರೇಟರ್ ಬೆಂಗಳೂರಿಗೆ ನಮ್ಮನ್ನ ಸೇರಿಸಬೇಕು ಅಂತ ನಾವು ಪ್ರಸ್ತಾವನೆ ಕೊಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಡಿಸಿ ನೋಟಿಸ್ – ತನಿಖೆಗೆ ಹಾಜರಾಗುವಂತೆ 45 ಮಂದಿಗೆ ಸೂಚನೆ

    ಇದೇ ವೇಳೆ ಕೇಂದ್ರ ಸಚಿವ ಸೋಮಣ್ಣರನ್ನ ಭೇಟಿಯಾಗಿದ್ದ ಬಗ್ಗೆ ಮಾಹಿತಿ ನೀಡಿದ್ರು. ತುಮಕೂರು ನ್ಯಾಷನಲ್ ಹೈವೆಯಲ್ಲಿ ತುಮಕೂರು ಪ್ರಾರಂಭದಲ್ಲಿ ಆರ್ಚ್ ಹಾಕಬೇಕು ಅಂತ ಸ್ಮಾರ್ಟ್ ಸಿಟಿಯಲ್ಲಿ ಹಣ ಹೊಂದಿಸಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಆಗಬೇಕು. ಇದಕ್ಕಾಗಿ ಸೋಮಣ್ಣ (V Sonanna) ಅವರನ್ನ ಭೇಟಿಯಾಗಿ ಗಡ್ಕರಿ ಅವರಿಗೆ ಮಾತಾಡಿ ಅನುಮತಿ ಕೊಡಿಸೋಕೆ ಕೇಳೋಕೆ ಹೋಗಿದ್ದೆ. ಕುಡಿಯೋ ನೀರಿನ ಅನೇಕ ಯೋಜನೆ ಕೇಂದ್ರ ಸರ್ಕಾರಕ್ಕೆ ಹೋಗಿದೆ. ಅದನ್ನು ಕೊಡಿಸಬೇಕು ಅಂತ ಮನವಿ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ತುಮಕೂರಿಗೆ ಮೆಟ್ರೋ ಅಗತ್ಯವಿದೆ
    ತುಮಕೂರಿಗೆ ಮೆಟ್ರೋ ಯೋಜನೆ ರಾಜ್ಯದ ತೀರ್ಮಾನ ಏನಾಗುತ್ತೆ ನೋಡಿಕೊಂಡು ಕೇಂದ್ರದವರ ಬಳಿ ಮಾತಾಡ್ತೀವಿ. ಮೆಟ್ರೋ ಅಗತ್ಯವಿದೆ ಅಂತ ಸೋಮಣ್ಣ ಹೇಳಿದ್ದಾರೆ. ಜೊತೆಗೆ ಸಬ್‌ ಅರ್ಬನ್‌ ಕೂಡ ಆಗಬೇಕು ಅಂತ ಇದೆ. ಎರಡೂ ಆಗಲಿ, ತುಮಕೂರು ಅತಿವೇಗವಾಗಿ ಬೆಳೆಯುತ್ತಿದೆ. ಇಂಡಸ್ಟ್ರಿ ಹಬ್ ಬೆಳೆಯುತ್ತಿದೆ. ಬೆಂಗಳೂರು ವಿಸ್ತರಣೆ ಮಾಡಿದಂತೆ ತುಮಕೂರು ವಿಸ್ತರಣೆ ಮಾಡಬೇಕು ಅಂತ ಅನೇಕರು ಹೇಳ್ತಿದ್ದಾರೆ. ಅದರ ಬಗ್ಗೆ ಚರ್ಚೆ ಆಗ್ತಿದೆ ಎಂದರು. ಇದನ್ನೂ ಓದಿ: ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

  • ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಬೆಂಗಳೂರು: ಮೆಟ್ರೋ(Metro) ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರು ಸೋಮವಾರ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

    ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ (Marthalli Flyover) ಬಳಿ ರಸ್ತೆ ವೀಕ್ಷಿಸಿದರು. ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು(Greater Bengaluru) ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವಿಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು. ಇದನ್ನೂ ಓದಿ: ಕೇಸ್‌ನಿಂದ ಬಾಯಿ ಮುಚ್ಚಿಸಲು ಸಾಧ್ಯವಾಗದು, ಮಾನನಷ್ಟ ಮೊಕದ್ದಮೆಯ ನಾಟಕ ಬಿಡಿ: ಛಲವಾದಿ

    ಈ ವಿಚಾರವಾಗಿ ಈಗಾಗಲೇ ಬೆಂಗಳೂರಿನ ಶಾಸಕರ ಜೊತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದೆ. ಸುಮಾರು 40ರಿಂದ 50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು

    ಮೆಟ್ರೋ ರೈಲು ಯೋಜನೆ ಹಿನ್ನೆಲೆಯಲ್ಲಿ ಮುಖ್ಯರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು, ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.