ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಸುಪ್ರೀಂ ಕೋರ್ಟ್ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ. ಮನೆಯಿಂದ ಹೊರ ಬಂದರೆ, ಕಣ್ಣು ಉರಿ, ಕಣ್ಣೀರು ಬರುತ್ತದೆ. ಅಷ್ಟರ ಮಟ್ಟಿಗೆ ದೆಹಲಿಯಲ್ಲಿ ಪಟಾಕಿಗಳಿಂದ ವಾಯು ಮಾಲಿನ್ಯವಾಗುತ್ತದೆ. ಹೀಗಾಗಿ ಕೆಲವೊಮ್ಮೆ ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗುತ್ತದೆ. ಆದರೆ ಸುಪ್ರೀಂಕೋರ್ಟ್ ಈಗ ಹಸಿರು ಪಟಾಕಿಗೆ ಮಾತ್ರ ದೆಹಲಿಯಲ್ಲಿ ಅವಕಾಶ ನೀಡಿದೆ. ಇದನ್ನೂ ಓದಿ: ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್
QR ಕೋಡ್‌ಗಳನ್ನು ಹೊಂದಿರುವ ಅನುಮೋದಿತ ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಗಸ್ತು ತಂಡಗಳನ್ನು ರಚಿಸುವಂತೆ ನ್ಯಾಯಾಲಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ದೆಹಲಿ-ಎನ್‌ಸಿಆರ್ ಪ್ರದೇಶದ ಹೊರಗಿನಿಂದ ಬರುವ ಯಾವುದೇ ಪಟಾಕಿಗಳನ್ನು ಆ ಪ್ರದೇಶದಲ್ಲಿ ಅನುಮತಿಸಲಾಗುವುದಿಲ್ಲ. ನಕಲಿ ಅಥವಾ ಅನಧಿಕೃತ ಪಟಾಕಿಗಳ ಮಾರಾಟಗಾರರು ಕಂಡುಬಂದರೆ ಅವರ ಪರವಾನಗಿಗಳನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತು. ದೀಪಾವಳಿ ಸಮಯದಲ್ಲಿ ಬೆಳಗ್ಗೆ 6ರಿಂದ 7ಗಂಟೆಯವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಅನುಮತಿ ಕೊಟ್ಟಿದೆ. ಇದನ್ನೂ ಓದಿ: ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ
ನವದೆಹಲಿ: ದೀಪಾವಳಿ (Deepavali) ಸಮಯದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಎನ್‌ಸಿಆರ್ (New Delhi) ಪ್ರದೇಶದಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಮನವಿ ಮಾಡಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ಪೀಠಕ್ಕೆ ಮನವಿ ಮಾಡಿದರು.
ಪರವಾನಗಿ ಪಡೆದ ವ್ಯಾಪಾರಿಗಳ ಮೂಲಕವೇ ಮಾರಾಟ ನಡೆಯಬೇಕು. ಅವರು ಅನುಮತಿಸಲಾದ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಫ್ಲಿಪ್‌ಕಾರ್ಟ್, ಅಮೆಜಾನ್ ಸೇರಿದಂತೆ ಯಾವುದೇ ಇ-ಕಾಮರ್ಸ್ ವೆಬ್‌ಸೈಟ್ ಯಾವುದೇ ಆನ್‌ಲೈನ್ ಆರ್ಡರ್‌ಗಳನ್ನು ಸ್ವೀಕರಿಸುವುದಿಲ್ಲ ಎಂದು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮೆಹ್ತಾ ಹೇಳಿದರು.
ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ.
ಈ ಸಂಬಂಧ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢ| ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟ – ಇಬ್ಬರು ಯೋಧರು ಹುತಾತ್ಮ
ಹಸಿರು ಪಟಾಕಿ ಮಾತ್ರವೇ ಬಳಸಿ. ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ ಹೆಸರಲ್ಲಿ ವಂಚನೆ – ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್
125 ಡೆಸಿಬಲ್‌ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ: ಬಸವರಾಜ ಬೊಮ್ಮಾಯಿ
ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರು
ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ. ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ?: ಯತ್ನಾಳ್ ಕಿಡಿ
ಭಾರತೀಯ ಸಂಸ್ಕೃತಿ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ (Diwali) ಸಮೀಪಿಸುತ್ತಿದೆ. ಮನೆಗಳಲ್ಲಿ ದೀಪಗಳನ್ನು ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲು ಎಲ್ಲರೂ ಕಾಯುತ್ತಿದ್ದಾರೆ. ಪಟಾಕಿ ಹಬ್ಬ ಬಂತೆಂದರೆ ಸಾಕು, ಪರಿಸರ ಕಾಳಜಿ ಕೂಗೂ ಕೇಳಿಬರುತ್ತೆ. ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ ಪಟಾಕಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಪಟಾಕಿಗಳನ್ನು ಸಿಡಿಸುವಂತೆ ಸರ್ಕಾರಗಳು ಪ್ರತಿ ವರ್ಷ ಜಾಗೃತಿ ಮೂಡಿಸುತ್ತಲೇ ಇವೆ. ಈ ಅಭಿಯಾನಕ್ಕೆ ಅನೇಕ ಸಂಘಟನೆಗಳು ಸಹ ಕೈಜೋಡಿಸಿವೆ.
ವಾಯುಮಾಲಿನ್ಯದ ಕೇಂದ್ರ ಸ್ಥಾನವಾದ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಜೈಲು ಗ್ಯಾರಂಟಿ. ಅಂತೆಯೇ ಅನೇಕ ರಾಜ್ಯಗಳಲ್ಲಿ ಸಂಪೂರ್ಣ ನಿರ್ಬಂಧ ವಿಧಿಸದಿದ್ದರೂ, ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು (Green Crackers) ಸಿಡಿಸುವಂತೆ ಸಲಹೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ ಚುನಾವಣೆ – `ಕೈ’ ನಾಯಕರ ಪಟ್ಟಿ ರಿಲೀಸ್
ಹಾಗಾದರೆ ಏನಿದು ಹಸಿರು ಪಟಾಕಿ? ಮಾರುಕಟ್ಟೆಗಳಲ್ಲಿ ಅತ್ಯಾಕರ್ಷಕ ಪ್ಯಾಕೆಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪರಿಸರಕ್ಕೆ ಹಾನಿಕಾರವಾದ ಪಟಾಕಿಗಳ ನಡುವೆ ಹಸಿರು ಪಟಾಕಿಗಳನ್ನು ಗುರುತಿಸಿ ಖರೀದಿಸುವುದಾದರೂ ಹೇಗೆ?
ಸಾಮಾನ್ಯ ಪಟಾಕಿ ಹಾಗೂ ಹಸಿರು ಪಟಾಕಿಗೆ ಇರುವ ವ್ಯತ್ಯಾಸವೇನು?
ಒಂದರ್ಥದಲ್ಲಿ ಹೇಳುವುದಾದರೆ, ಹಸಿರು ಪಟಾಕಿ ಹಾಗೂ ಸಾಮಾನ್ಯ ಪಟಾಕಿ ಎರಡು ಕೂಡ ಮಾಲಿನ್ಯ ಉಂಟು ಮಾಡುತ್ತವೆ. ಆದರೆ ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇಕಡಾ 30 ರಷ್ಟು ಕಡಿಮೆ ವಾಯು ಮಾಲಿನ್ಯಕಾರಕವನ್ನು ಹೊರಸೂಸುತ್ತದೆ. ಹಸಿರು ಪಟಾಕಿಗಳು ಮಾಲಿನ್ಯಕಾರಕ ಹೊಗೆ ಹೊರಸೂಸುವುದನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ, ಧೂಳನ್ನು ಹೀರಿಕೊಳ್ಳುತ್ತದೆ. ಅಲ್ಲದೇ ಬೇರಿಯಮ್ ನೈಟ್ರೇಟ್‌ನಂತಹ ಅಪಾಯಕಾರಿ ಅಂಶಗಳನ್ನು ಹೊಂದಿರುವುದಿಲ್ಲ. ಸಾಮಾನ್ಯ ಪಟಾಕಿಗಳಲ್ಲಿನ ವಿಷಕಾರಿ ಲೋಹಗಳನ್ನು ಕಡಿಮೆ ಅಪಾಯಕಾರಿ ಸಂಯುಕ್ತಗಳೊಂದಿಗೆ ಬದಲಾಯಿಸಲಾಗುತ್ತದೆ. ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ದ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಕಾರ, ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಳಪೆಯಾಗಿರುವ ನಗರಗಳು ಮತ್ತು ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ. ಇದನ್ನೂ ಓದಿ: ಸೂರ್ಯಗ್ರಹಣ ಬರಿಗಣ್ಣಲ್ಲಿ ನೋಡಲೇಬೇಡಿ – ಗ್ರಹಣದ ಬಗ್ಗೆ ಮಾಹಿತಿ ನೀಡಿದ್ದಾರೆ ಭೌತಶಾಸ್ತ್ರಜ್ಞ ಎ.ಪಿ ಭಟ್
ಹಸಿರು ಪಟಾಕಿ ಎಲ್ಲಿ ಸಿಗುತ್ತೆ? ಗುರುತಿಸುವುದು ಹೇಗೆ?
ಹಸಿರು ಪಟಾಕಿಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸರ್ಕಾರ ದೇಶದ 230 ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹಸಿರು ಪಟಾಕಿಗಳ ಲಭ್ಯತೆ ಹಾಗೂ ಅವುಗಳನ್ನು ಗುರುತಿಸುವ ಬಗ್ಗೆ ಜನರಲ್ಲಿ ಗೊಂದಲ ಇದೆ. ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಗಷ್ಟೇ ಮಾರಾಟಕ್ಕೆ ಅನುಮತಿ ನೀಡಿರುತ್ತದೆ.
ಗ್ರಾಹಕರು ತಾವು ಖರೀದಿಸುವ ಪಟಾಕಿಗಳು ಹಸಿರು ಪಟಾಕಿ ಹೌದೆ? ಅಥವಾ ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಲು, ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ವಿಶಿಷ್ಟ ಹಸಿರು ಲೋಗೋ ಮೂಲಕ ಸಹ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ. SWAS, SAFAL ಮತ್ತು STAR ಎಂಬ ಮೂರು ವರ್ಗದಲ್ಲಿ ಹಸಿರು ಪಟಾಕಿಗಳು ಸಿಗುತ್ತವೆ. ಇವನ್ನು CSIR ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ರಾಜ್ಯಾದ್ಯಂತ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಅನುಮತಿ ನೀಡಿದ ಸರ್ಕಾರ
CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್
ಹಸಿರು ಪಟಾಕಿಗಳು ಹೂ ಕುಂಡ, ಸುರುಸುರು ಬತ್ತಿ ರೀತಿ ಇರುತ್ತವೆ. ನಕಲಿ ಉತ್ಪನ್ನಗಳ ಮಾರಾಟ ತಪ್ಪಿಸಲು ಹಸಿರು ಪಟಾಕಿಗಳ ಮೇಲೆ ಕ್ಯೂಆರ್ ಕೋಡ್ ವ್ಯವಸ್ಥೆ ಇರುತ್ತದೆ. ಹಸಿರು ಪಟಾಕಿಗಳು ಶೆಲ್ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳಿಂದ ಹಸಿರು ಪಟಾಕಿಗಳನ್ನು ಖರೀದಿಸಬಾರದು. ಪರವಾನಗಿ ಹೊಂದಿರುವ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು. ಗೂಗಲ್ ಪ್ಲೇಸ್ಟೋರ್‌ನಿಂದ CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್ ಬಳಸಿ ಸ್ಕ್ಯಾನರ್ ಅನ್ನು ಡೌನ್‌ಲೋಡ್ ಮಾಡಿ ಅದರ ಮೂಲಕ ಗ್ರಾಹಕರು ಹಸಿರು ಪಟಾಕಿಗಳನ್ನು ಗುರುತಿಸಬಹುದು.
ಹಸಿರು ಪಟಾಕಿ ಸಿಡಿಸುವವರು ಈ ಅಂಶಗಳನ್ನು ಗಮನದಲ್ಲಿಡಿ
ಹಸಿರು ಪಟಾಕಿಗಳನ್ನು ಸುಡುವಾಗ ಪಟಾಕಿ ಹಾಗೂ ನಿಮ್ಮ ನಡುವಿನ ಅಂತರ ಹೆಚ್ಚಿರಬೇಕು. ಕೈಯನ್ನು ನೇರವಾಗಿ ಇರಿಸಿ ಪಟಾಕಿಗೆ ಕಿಡಿ ತಾಗಿಸಬೇಕು. ಪಟಾಕಿಗಳನ್ನು ಸಿಡಿಸುವಾಗ ಬೂಟುಗಳನ್ನು ಧರಿಸುವುದು ಉತ್ತಮ. ಆಟದ ಮೈದಾನಗಳಂತಹ ತೆರೆದ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸುವುದು ಒಳಿತು. ಹಸಿರು ಪಟಾಕಿಗಳನ್ನು ಬೆಳಗಿಸುವ ಸಂದರ್ಭದಲ್ಲಿ ಒಂದೆರಡು ಬಕೆಟ್‌ಗಳಷ್ಟು ನೀರನ್ನು ಹತ್ತಿರದಲ್ಲಿ ಇಟ್ಟುಕೊಳ್ಳಬೇಕು. ಪಟಾಕಿ ಸಿಡಿಸುವವರು ಉದ್ದವಾದ, ಸಡಿಲವಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ದೀಪಾವಳಿಗೆ ಹಸಿರು ಪಟಾಕಿ ಬಳಕೆಗೆ ಮಾತ್ರ ಸರ್ಕಾರ ಅನುಮತಿ ನೀಡಿದ್ದು ದರ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.20-30 ರಷ್ಟು ದರ ಏರಿಕೆಯಾಗಿದೆ. ಈ ಮೂಲಕ ಪಟಾಕಿ ಪ್ರಿಯರಿಗೆ ಬಿಸಿ ತಟ್ಟಿದೆ.
ಎಷ್ಟು ಏರಿಕೆಯಾಗಿದೆ?
ಫ್ಲವರ್ ಪಾಟ್ಸ್ 150 ರೂ. ನಿಂದ 180 ರೂ.ಗೆ ಏರಿಕೆಯಾಗಿದ್ದರೆ ಭೂಚಕ್ರ 130 ರೂ. ನಿಂದ 155 ರೂ.ವರೆಗೆ ಏರಿಕೆಯಾಗಿದೆ. 300 ರೂ.ಗೆ ಸಿಗುತ್ತಿದ್ದ ಸ್ಕೈ ಶಾಟ್ಸ್ 450 ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷ ಗ್ರೀನ್ ಬಾಂಬ್ ಬಾಕ್ಸ್‌ಗೆ 160 ರೂ. ಇದ್ದರೆ ಈಗ 185 ರೂ.ಗೆ ಏರಿಕೆಯಾಗಿದೆ. 500 ರೂ.ಗೆ ಸಿಗುತ್ತಿದ್ದ ಪಟಾಕಿ ಗಿಫ್ಟ್ ಬಾಕ್ಸ್ 700 ರೂ.ಗೆ ಏರಿಕೆಯಾಗಿದೆ.
ಸುಪ್ರೀಂ ಆದೇಶ ಏನು?
ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪರವನಾಗಿದಾರರು ಸಂಬಂಧ ಪಟ್ಟ ಇಲಾಖೆ/ಪ್ರಾಧಿಕಾರ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಅಂಗಡಿಗಳನ್ನು ಇಡಬೇಕು. ಒಂದು ಪಟಾಕಿ ಮಳಿಗೆಯಿಂದ ಮತ್ತೊಂದು ಪಟಾಕಿ ಮಳಿಗೆ 6 ಮೀಟರ್ ಅಂತರ ಇರಬೇಕು . ಪಟಾಕಿ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಸಾರ್ವಜನಿಕ ವಸತಿ ಸ್ಥಳಗಳಲ್ಲಿ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧ ಪಟ್ಟ ಇಲಾಖೆ ಮತ್ತು ಪ್ರಾಧಿಕಾರದ ಅನುಮತಿ ಪಡೆಯಬೇಕು. ಇದನ್ನೂ ಓದಿ: ತಾರೆಯರು ಒಗ್ಗಟ್ಟಾಗಿರೋಣ: ಎಲ್ಲ ನಟರಿರುವ ಫೋಟೊ ಹಂಚಿಕೊಂಡು ಜಗ್ಗೇಶ್ ಕರೆ
ಪ್ರತಿಯೊಂದು ಮಳಿಗೆಗಳಲ್ಲಿ ಪರವಾನಗಿಯನ್ನು ಪ್ರದರ್ಶಿಸುವಂತೆ ಅಂಟಿಸಬೇಕು. ಹಸಿರು ಪಟಾಕಿ ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ಸ್ಯಾನಿಟೈಸ್ ಮಾಡಬೇಕು. ಮಳಿಗೆಳ ಬಳಿ ಮತ್ತು ಜನ 6 ಅಡಿ ಅಂತರ ಕಾಪಾಡಿಕೊಳ್ಳಬೇಕು. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಧಿಕಾರ, ಪಾಲಿಕೆ ಸರ್ಕಾರ ಹೊರಡಿಸಿರುವ ನಿಯಮಗಳನ್ನ ಪಾಲಿಸಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನೂ ಓದಿ: ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್
ನವದೆಹಲಿ: ದೀಪಗಳ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪರಿಸರಕ್ಕೆ ಹಾನಿಕಾರಕ ಪಟಾಕಿಗಳನ್ನು ಸಿಡಿಸಿ ಮಾಲಿನ್ಯ ಮಾಡುವುದನ್ನು ತಡೆಯಲು ಪರಿಸರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಆದ್ದರಿಂದ ಶನಿವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಹಸಿರು ಪಟಾಕಿಗಳನ್ನು ಬಿಡುಗಡೆ ಮಾಡಿದ್ದಾರೆ.
ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಈ ಹಸಿರು ಪಟಾಕಿಯಿಂದ ಶೇ.30ರಷ್ಟು ಮಾಲಿನ್ಯ ಕಡಿಮೆಯಾಗಲಿದೆ. ಆದ್ದರಿಂದ ಭಾವನೆ ಹಾಗೂ ಪರಿಸರಕ್ಕೆ ಅಡ್ಡಿಯಾಗದಂತೆ ಪರಿಸರ ಸ್ನೇಹಿ ಪಟಾಕಿಗಳನ್ನು ಪರಿಚಯಿಸಲಾಗುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದರು.
ಹಸಿರು ಪಟಾಕಿಗಳನ್ನು ವೈಜ್ಞಾನಿಕ ಹಾಗೂ ಕೈಗಾರಿಕ ಸಂಶೋಧನ ಕೌನ್ಸಿಲ್(ಸಿಎಸ್‍ಐಆರ್) ತಯಾರಿಸಿದೆ. ಸಾಮಾನ್ಯ ಪಟಾಕಿಗಳಿಗಿಂತ ಹಸಿರು ಪಟಾಕಿಗಳಲ್ಲಿ ಕಡಿಮೆ ಕೆಮಿಕಲ್ ಬಳಸಲಾಗುತ್ತದೆ. ಹೀಗಾಗಿ ಇದರಿಂದ ಪರಿಸರಕ್ಕೆ ಹೆಚ್ಚು ಹಾನಿ ಆಗುವುದಿಲ್ಲ. ಜೊತೆಗೆ ಸಾಮಾನ್ಯ ಪಟಾಕಿಗಳಿಂತ ಈ ಹಸಿರು ಪಟಾಕಿಗಳ ಬೆಲೆಯೂ ಕಡಿಮೆ ಇದೆ ಎನ್ನಲಾಗಿದೆ. ಆದರೆ ಈ ಪಟಾಕಿಗಳ ನಿಖರ ಬೆಲೆ ಬಗ್ಗೆ ಸಿಎಸ್‍ಐಆರ್ ಯಾವುದೇ ಮಾಹಿತಿ ನೀಡಿಲ್ಲ.
ಈ ಹಿಂದೆ 2018ರಲ್ಲಿ ದೀಪಾವಳಿ ಹಬ್ಬಕ್ಕೂ ಮುಂಚೆಯೇ ಸುಪ್ರೀಂ ಕೋರ್ಟ್ ಪರಿಸರ ಮಾಲಿನ್ಯ ಉಂಟುಮಾಡುವ ಪಟಾಕಿಗಳ ತಯಾರಿಕೆ ಹಾಗೂ ಮಾರಾಟಕ್ಕೆ ನಿಷೇಧ ಹೇರಿತ್ತು. ಹಾಗೆಯೇ ಕಡಿಮೆ ಕೆಮಿಕಲ್ ಬಳಸಿ ತಯಾರಿಕೆ ಮಾಡುವ ಹಸಿರು ಪಟಾಕಿಗಳ ತಯಾರಿಕೆ ಹಾಗೂ ಮಾರಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಆದೇಶಿಸಿತ್ತು. ಆದರೆ ಆಗ ಈ ಬಗ್ಗೆ ಹಲವು ಪಟಾಕಿ ತಯಾರಕರು ಹಾಗೂ ಮಾರಾಟಗಾರರಿಗೆ ಸರಿಯಾಗಿ ಮಾಹಿತಿ ಇಲ್ಲದ ಕಾರಣಕ್ಕೆ ಆಗ ಹಸಿರು ಪಟಾಕಿ ಮಾರುಕಟ್ಟೆಗೆ ಬಂದಿರಲಿಲ್ಲ. ಆದ್ದರಿಂದ ಈ ಬಾರಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ತಯಾರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ.
Delhi: Union Minister for Health & Family Welfare, Dr Harsh Vardhan yesterday launched eco-friendly green crackers, ahead of #Diwali. These crackers, which have been manufactured in India,and as per the direction of the Supreme Court, will now be available in the market for sale. pic.twitter.com/BMXh0upMzb
ಈ ಮೂಲಕ ಪರಿಸರ ಕಾಳಜಿ ಮೆರೆದ ಕೇಂದ್ರ ಸರ್ಕಾರದ ನಿಲುವು ಸಾರ್ವಜನಿಕರ ಗಮನ ಸೆಳೆದಿದ್ದು, ಸಿಎಸ್‍ಐಆರ್ ಹಾಗೂ ಕೇಂದ್ರ ಸರ್ಕಾರದ ಹೊಸ ಪ್ರಯತ್ನಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.