Tag: Green Line

  • ದಸರೆಗೆ ಊರಿಗೆ ಹೋದವರು ವಾಪಸ್ – ಬೆಳಗ್ಗೆ ಅರ್ಧಗಂಟೆ ಬಂದ್ ಆಗಿತ್ತು ಯಶವಂತಪುರ ಮೆಟ್ರೋ ನಿಲ್ದಾಣ

    ದಸರೆಗೆ ಊರಿಗೆ ಹೋದವರು ವಾಪಸ್ – ಬೆಳಗ್ಗೆ ಅರ್ಧಗಂಟೆ ಬಂದ್ ಆಗಿತ್ತು ಯಶವಂತಪುರ ಮೆಟ್ರೋ ನಿಲ್ದಾಣ

    ಬೆಂಗಳೂರು: ಸೋಮವಾರ (ಅ.6) ಬೆಳಗ್ಗೆ ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ (Yeshwanthpur Metro Station) ಉಂಟಾದ ಭಾರೀ ಜನದಟ್ಟಣೆಯಿಂದಾಗಿ ಅರ್ಧಗಂಟೆಗಳ ಕಾಲ ನಿಲ್ದಾಣವನ್ನು ಬಂದ್ ಮಾಡಲಾಗಿತ್ತು.

    ಆಯುಧ ಪೂಜೆ, ದಸರಾ ಸೇರಿ ಸಾಲು ಸಾಲು ರಜೆ ಬಳಿಕ ಜನರು ಬೆಂಗಳೂರಿನತ್ತ ಮರಳುತ್ತಿದ್ದು, ಈ ಹಿನ್ನೆಲೆ ಇಂದು ಬೆಳಗ್ಗೆ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಭಾರೀ ಜನದಟ್ಟಣೆ ಉಂಟಾಗಿತ್ತು. ಹೀಗಾಗಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ದೃಷ್ಟಿಯಿಂದ ಬೆಳಗ್ಗೆ 8:50 ರಿಂದ 9:15ರವರೆಗೆ ನಿಲ್ದಾಣದ ಬಾಗಿಲನ್ನು ಮುಚ್ಚಲಾಗಿತ್ತು.ಇದನ್ನೂ ಓದಿ: ಜೈಪುರ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ – 6 ರೋಗಿಗಳು ಸಜೀವ ದಹನ

    ಈ ಕುರಿತು ಬಿಎಂಆರ್‌ಸಿಎಲ್ (BMRCL) ಮಾಹಿತಿ ನೀಡಿದ್ದು, 9:15ರ ಬಳಿಕ ಯಶವಂತಪುರ ಮೆಟ್ರೋ ನಿಲ್ದಾಣದ ಬಾಗಿಲು ತೆರೆಯಲಾಗಿದೆ. ಸದ್ಯ ಎಂದಿನಂತೆ ಮೆಟ್ರೋ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ.

  • ಮೆಟ್ರೋ ರೈಲು ಬಂದಾಗ ಏಕಾಏಕಿ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನ- ICUವಿನಲ್ಲಿ ಚಿಕಿತ್ಸೆ

    ಮೆಟ್ರೋ ರೈಲು ಬಂದಾಗ ಏಕಾಏಕಿ ಹಳಿಗೆ ಧುಮುಕಿ ಆತ್ಮಹತ್ಯೆಗೆ ಯತ್ನ- ICUವಿನಲ್ಲಿ ಚಿಕಿತ್ಸೆ

    ಬೆಂಗಳೂರು: ಮೆಟ್ರೋ ರೈಲು ಮುಂದೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲು ಹಳಿಗೆ ಧುಮುಕಿದ ಯುವಕನ ಗುರುತು ಪತ್ತೆಯಾಗಿದೆ. ಕೇರಳ ಮೂಲದ 23 ವರ್ಷದ ಶಾರೋನ್‌ ರಾತ್ರಿ 7.12ರ ವೇಳೆಗೆ ರೈಲು ಬಂದಾಗ ಉದ್ದೇಶಪೂರ್ವಕವಾಗಿಯೇ ರೈಲು ಹಳಿಗೆ ಹಾರಿದ್ದಾನೆ ಎನ್ನಲಾಗಿದೆ.

    ಏನಾಯ್ತು..?: ಕೇರಳ (Kerala) ಮೂಲದ ಯುವಕ ಶಾರೋನ್‌ ಸ್ನೇಹಿತನ ಜೊತೆ ಜಾಲಹಳ್ಳಿ ಮೆಟ್ರೋ ನಿಲ್ದಾಣಕ್ಕೆ (Jalahalli Metro Station) ಬಂದಿದ್ದ. ಮೆಜೆಸ್ಟಿಕ್ ಗೆ ಹೋಗಲು ಟಿಕೆಟ್ ಸಹ ಪಡೆದುಕೊಂಡಿದ್ದ. ಆದರೆ ಮೆಟ್ರೋ ಟ್ರೈನ್ ಬಂದಾಗ ಏಕಾಏಕಿ ಹಳಿಗೆ ಧುಮುಕಿದ್ದಾನೆ, ಈ ವೇಳೆ ಮೆಟ್ರೊ ಟ್ರೈನ್ ಶಾರೋನ್‌ಗೆ ಡಿಕ್ಕಿ ಹೊಡೆದಿದೆ. ಸ್ನೇಹಿತನ ಜೊತೆ ಬಂದು ಉದ್ದೇಶಪೂರ್ವಕವಾಗಿ ಹಳಿಗೆ ಧುಮುಕಿದ ಯುವಕನ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ತಕ್ಷಣ ಯುವಕನನ್ನು ಮೆಟ್ರೋ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಸಪ್ತಗಿರಿ ಆಸ್ಪತ್ರೆಯ ಐಸಿಯುವಿನಲ್ಲಿ ಯುವಕ ಶಾರೋನ್‍ಗೆ ಚಿಕಿತ್ಸೆ ನೀಡುತ್ತಿದ್ದಾರೆ. ರೈಲು ಡಿಕ್ಕಿಯಾದ ಹಿನ್ನೆಲೆಯಲ್ಲಿ ಯುವಕನ ಕಾಲು ಫ್ರ್ಯಾಕ್ಚರ್ ಆಗಿದ್ದು, ತಲೆಗೆ ಕರೆಂಟ್ ಶಾಕ್ ತಗುಲಿದೆ. ಇದನ್ನೂ ಓದಿ: ನಮ್ಮ ಮೆಟ್ರೋ ಹಳಿಗೆ ಹಾರಿದ ಪ್ರಯಾಣಿಕ – 45 ನಿಮಿಷ ಸಂಚಾರ ವ್ಯತ್ಯಯ!

    ಅಬ್ಬಿಗೆರೆ ಬಳಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡ್ತಿದ್ದ ಯುವಕನಿಗೆ ಕಂಪನಿಯವರೇ ವಾಸ್ತವ್ಯಕ್ಕೆ ರೂಂ ಸಹ ಮಾಡಿಕೊಟ್ಟಿದ್ರು. ಪೀಣ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  • ನಮ್ಮ ಮೆಟ್ರೋ ಹಳಿಗೆ ಹಾರಿದ ಪ್ರಯಾಣಿಕ – 45 ನಿಮಿಷ ಸಂಚಾರ ವ್ಯತ್ಯಯ!

    ನಮ್ಮ ಮೆಟ್ರೋ ಹಳಿಗೆ ಹಾರಿದ ಪ್ರಯಾಣಿಕ – 45 ನಿಮಿಷ ಸಂಚಾರ ವ್ಯತ್ಯಯ!

    ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ (Namma Metro Green Line) ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ (Jalahalli Metro Station) ಪ್ರಯಾಣಿಕರೊಬ್ಬರು ರೈಲ್ವೇ ಹಳಿಗೆ ಜಿಗಿದಿದ್ದಾರೆ. ಇಂದು ಸಂಜೆ 7.12ಕ್ಕೆ ಈ ಘಟನೆ ನಡೆದಿದ್ದು, ಹಳಿಗೆ ಹಾರಿದ ಪ್ರಯಾಣಿಕನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.

    ಪ್ಲಾಟ್‌ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದಿದ್ದಾರೆ. ತಕ್ಷಣ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಸಿಬ್ಬಂದಿ ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಾಲಹಳ್ಳಿ ನಿಲ್ದಾಣದಲ್ಲಿ ಘಟನೆ ನಡೆದ ಕಾರಣ ಈ ಸಮಯದಲ್ಲಿ ಇತರ ನಿಲ್ದಾಣದ ಪ್ಲಾಟ್‌ ಫಾರ್ಮ್‌ ಗಳಲ್ಲಿ ಸ್ಥಗಿತಗೊಂಡ 4 ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರತರಲಾಯಿತು.

    ಘಟನೆಯಿಂದಾಗಿ ಸುಮಾರು 45 ನಿಮಿಷಗಳ ಕಾಲ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು. ರಾತ್ರಿ 8.00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್‌ ಚೌಹಾಣ್‌ ಹೇಳಿದ್ದಾರೆ. ಮೆಟ್ರೋ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದು, ಯಾವ ಕಾರಣಕ್ಕೆ ಆತ ಹಳಿಗೆ ಜಿಗಿದಿದ್ದಾನೆ. ಆತನ ಹಿನ್ನೆಲೆ ಏನು ಪೊಲೀಸ್‌ ತನಿಖೆ ನಂತರವಷ್ಟೇ ಗೊತ್ತಾಗಬೇಕಿದೆ.

    ಜನವರಿ 1ರಂದು ನೇರಳೆ ಮಾರ್ಗದಲ್ಲಿ..!: ಜನವರಿ 1ರಂದು ಸೋಮವಾರ ನೇರಳೆ ಬಣ್ಣದ ಮೆಟ್ರೋ ಮಾರ್ಗದ ಇಂದಿರಾನಗರ ಮೆಟ್ರೋ ಸ್ಟೇಷನ್‌ ನಲ್ಲಿ ಮೆಟ್ರೋ ರೈಲ್ವೇ ಹಳಿ ಮೇಲೆ ಬಿದ್ದ ಮೊಬೈಲ್‌ ತೆಗೆಯಲು ಮಹಿಳೆಯೊಬ್ಬರು ಟ್ರ್ಯಾಕ್‌ ಗೆ ಇಳಿದಿದ್ದರು. ಇದರಿಂದಾಗಿ 15 ನಿಮಿಷಗಳ ಕಾಲ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ಕೆಳಗೆ ಬಿದ್ದ ಮೊಬೈಲ್‌ ಎತ್ತಿಕೊಳ್ಳಲು ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಮಹಿಳೆ

     

  • Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಸಿರು ಮಾರ್ಗದಲ್ಲಿ (Green Line) ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

    ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ ನಿಲ್ದಾಣದ ತಿರುವಿನಲ್ಲಿ ಹಳಿ ತಪ್ಪಿದ ಪರಿಣಾಮ ಈ ಸಮಸ್ಯೆ ಎದುರಾಗಿದೆ.  ಇದನ್ನೂ ಓದಿ: ತಮಿಳುನಾಡು ಸಿಎಂ ಪುತ್ರಿ ಸತ್ತೈನಾಥರ್ ದೇವಸ್ಥಾನಕ್ಕೆ ಭೇಟಿ

    ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಹಳಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದ್ದು, ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ರೈಲುಗಳು ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಸದ್ಯ ಈಗ ಹಸಿರು ಮಾರ್ಗದಲ್ಲಿ ಅರ್ಧಗಂಟೆಗೊಂದು ರೈಲು ಸಂಚರಿಸುತ್ತಿದೆ.

    ರೀ ರೈಲ್ ವಾಹನವನ್ನು‌ ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದೆ ಎಂದು  ಬಿಎಂಆರ್‌ಸಿಎಲ್‌ (BMRCL) ಉನ್ನತ ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]