Tag: Green Zone

  • ವಿಧಾನಸೌಧದಲ್ಲಿ ನಡೆದ ಸಭೆಯಿಂದ ಹಸಿರು ವಲಯದಲ್ಲಿ ಆರ್ಥಿಕ ಚಟುವಟಿಕೆಗೆ ಗ್ರೀನ್ ಸಿಗ್ನಲ್

    ವಿಧಾನಸೌಧದಲ್ಲಿ ನಡೆದ ಸಭೆಯಿಂದ ಹಸಿರು ವಲಯದಲ್ಲಿ ಆರ್ಥಿಕ ಚಟುವಟಿಕೆಗೆ ಗ್ರೀನ್ ಸಿಗ್ನಲ್

    ಬೆಂಗಳೂರು: ಲಾಕ್‍ಡೌನ್ ನಿಯಮ ಸಡಿಲಿಸಿ ಹಸಿರು ವಲಯದಲ್ಲಿರುವ ಜಿಲ್ಲೆಗಳಿಗೆ ಕರ್ನಾಟಕ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರದ ಈ ಮಹತ್ವದ ಗ್ರೀನ್ ಸಿಗ್ನಲ್ ಹಿಂದೆ ಹಣಕಾಸು ಇಲಾಖೆ ಕೆಲಸ ಮಾಡಿದೆ.

    ಹೌದು, ಯಾವುದೇ ಯೋಜನೆ ಅಥವಾ ಪ್ರಸ್ತಾಪ ಚರ್ಚೆಗೆ ಬಂದಾಗ ಹಣಕಾಸು ಇಲಾಖೆ ಹಲವು ಪ್ರಸ್ತಾಪಕ್ಕೆ ಆರಂಭದಲ್ಲೇ ಕೊಕ್ಕೆ ಹಾಕಿ ಬಿಡುತ್ತದೆ. ಆದರೆ ಲಾಕ್‍ಡೌನ್ ವಿಚಾರದಲ್ಲಿ ಹಣಕಾಸು ಇಲಾಖೆ ಗಂಭೀರವಾದ ಸಲಹೆ ನೀಡಿದ ಪರಿಣಾಮ ಸರ್ಕಾರ ಹಸಿರು ವಲಯದಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅನುಮತಿ ನೀಡಿದೆ.

    ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಇಂದು ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಹಣಕಾಸು ಇಲಾಖೆ ಶಾಕಿಂಗ್ ವಿಚಾರಗಳನ್ನು ಪ್ರಸ್ತಾಪ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ವಿನಾಯಿತಿ ನೀಡುವ ನಿರ್ಧಾರ ಪ್ರಕಟವಾಗಿದೆ.

    ಏಪ್ರಿಲ್ ತಿಂಗಳಿನಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ವ್ಯಾಪಾರ ವಹಿವಾಟು ನಡೆಯದ ಕಾರಣ ರಾಜ್ಯದ ಪಾಲಿನ ಜಿಎಸ್‍ಟಿ ಹಣ ಬರುವುದಿಲ್ಲ. ಇನ್ನೂ ನಿರ್ಬಂಧ ಮುಂದುವರಿದರೆ ಜುಲೈವರೆಗೂ ಸಂಕಷ್ಟ ಮುಂದುವರಿಯಲಿದೆ. ಹೀಗಾಗಿ ಗ್ರೀನ್ ಝೋನ್ ನಲ್ಲಿ ಚಟುವಟಿಕೆ ಶುರು ಮಾಡುವುದು ಉತ್ತಮ ಎಂದು ಸಲಹೆ ಬಂದಿದೆ.

    ಲಾಕ್‍ಡೌನ್ ಸಡಿಲಿಕೆ ಮಾಡದಿದ್ದರೆ ಮುಂದಿನ ತಿಂಗಳಿನಿಂದ ಸರ್ಕಾರ ನಡೆಸುವುದೇ ಕಷ್ಟ. ಲಾಕ್‍ಡೌನ್ ಸಮಯದಲ್ಲಿ ಆದಾಯವಿಲ್ಲದಿದ್ದರೂ ಸರ್ಕಾರದಿಂದ ಉದ್ಯೋಗಿಗಳಿಗೆ ಸಂಬಳ ಸೇರಿದಂತೆ ಇತ್ಯಾದಿಗಳಿಗೆ ಹಣ ಖರ್ಚಾಗುತ್ತಿದ್ದು ಅಂದಾಜು 14 ಸಾವಿರ ಕೋಟಿ ರೂ. ನಷ್ಟವಾಗಿದೆ. ಅಬಕಾರಿ ಇಲಾಖೆ ಒಂದರಿಂದಲೇ 2 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ತಿಂಗಳು ನಿಭಾಯಿಸಿದ್ದೇ ದೊಡ್ಡ ಸಾಧನೆ. ಮಾರ್ಚ್ ಅಂತ್ಯದಲ್ಲಿ ವರ್ಷಾಂತ್ಯದ ಪಾವತಿ ಆಗಬೇಕಿದ್ದ ಬಿಲ್ಲುಗಳನ್ನ ಪೆಂಡಿಂಗ್ ಇಟ್ಟು ಹಣಕಾಸಿನ ಸಮಸ್ಯೆ ಸರಿದೂಗಿಸಲಾಗಿದೆ. ಆದ್ದರಿಂದ ವ್ಯಾಪಾರ ವಹಿವಾಟು ಆರಂಭಿಸಿದರಷ್ಟೇ ಅನುಕೂಲ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಹಸಿರು ವಲಯದಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

  • ಮಾಸ್ಕ್ ಇಲ್ಲದೆ ಓಡಾಡಿದ್ರೆ 50 ಬಸ್ಕಿ ಹೊಡೆಯುವ ಶಿಕ್ಷೆ

    ಮಾಸ್ಕ್ ಇಲ್ಲದೆ ಓಡಾಡಿದ್ರೆ 50 ಬಸ್ಕಿ ಹೊಡೆಯುವ ಶಿಕ್ಷೆ

    – ನಗರಕ್ಕೆ ಆಗಮಿಸುವ ವಾಹನಗಳಿಗೂ ಬ್ರೇಕ್
    – ಹಾಸನ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

    ಹಾಸನ: ಹಾಸನದಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರೀನ್ ಝೋನ್‍ಗೆ ಒಳಪಟ್ಟಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಕೊಂಚ ಸಡಿಲಿಕೆ ಮಾಡಿದ್ದು, ಜನ ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.

    ಗ್ರೀನ್‍ಝೋನ್‍ನಲ್ಲಿ ನಿಯಮ ಸಡಿಲಿಕೆ ಮಾಡಿದ ಬೆನ್ನಲ್ಲೇ ಜನ ಬೇಕಾಬಿಟ್ಟಿಯಾಗಿ ಬೀದಿಗಿಳಿಯುತ್ತಿದ್ದು, ಕೆಲವರು ಏನೂ ಕೆಲಸವಿಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಅಲ್ಲದೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದಾರೆ. ಇದನ್ನು ಮನಗಂಡ ಪೊಲೀಸರು ಶಿಕ್ಷೆ ನೀಡಲು ಮುಂದಾಗಿದ್ದು, ಅನಗತ್ಯವಾಗಿ ಓಡಾಡುವವರಿಗೆ ಹಾಗೂ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವವರಿಗೆ 50 ಬಸ್ಕಿ ಹೊಡೆಸುತ್ತಿದ್ದಾರೆ. ಈ ಮೂಲಕ ಮಾಸ್ಕ್ ಇಲ್ಲದೆ ಬೀದಿಗಿಳಿದ ಜನಕ್ಕೆ ಹಾಸನ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.

    ಕಾರ್, ಆಟೋಗಳಲ್ಲಿ ಅನವಶ್ಯಕವಾಗಿ ಹೆಚ್ಚು ಜನರನ್ನು ತುಂಬಿಕೊಂಡು ಸಂಚರಿಸುತ್ತಿದ್ದು, ಅಂತಹವರನ್ನು ಹಿಡಿದು ಬಸ್ಕಿ ಹೊಡೆಸುತ್ತಿದ್ದಾರೆ. ಅಲ್ಲದೆ ವಾಹನದಲ್ಲಿ ಓಡಾಡುವುದು ಮತ್ತೆ ಮರುಕಳಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಹಾಸನ ಗ್ರೀನ್ ಝೋನ್‍ನಲ್ಲಿರುವ ಕಾರಣ ಅನವಶ್ಯಕವಾಗಿ ನಗರಕ್ಕೆ ಬರುತ್ತಿರುವವರನ್ನು ನಗರದ ಹೊರಭಾಗದಲ್ಲೇ ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ಹಾಸನ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಕಾವಲು ಕಾಯುತ್ತಿದ್ದು, ಎಲ್ಲ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸೂಕ್ತ ಕಾರಣ ನೀಡದವರನ್ನು ನಗರದ ಒಳಗೆ ಬಿಡದೆ ವಾಪಸ್ ಕಳುಹಿಸುತ್ತಿದ್ದಾರೆ. ಈ ಮೂಲಕ ಅನಾವಶ್ಯಕವಾಗಿ ಸುತ್ತಾಡಲು ಬರುತ್ತಿದ್ದವರು ಇದೀಗ ವಾಪಸ್ ಹೋಗುವಂತಾಗಿದೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೊಲೀಸರಿಂದ ರಸ್ತೆ ಬ್ಲಾಕ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಪೊಲೀಸರಿಂದ ರಸ್ತೆ ಬ್ಲಾಕ್

    ಯಾದಗಿರಿ: ಕೊರೊನಾ ಗ್ರೀನ್ ಝೋನ್ ಇರುವ ಕಾರಣ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಂಪೂರ್ಣವಾಗಿ ಮರೆತು ಜನರನ್ನು ರಸ್ತೆಗಿಳಿಸಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.

    ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಪೊಲೀಸ್ ಇಲಾಖೆ, ನಗರದ ಪ್ರಮುಖ ರಸ್ತೆಗಳನ್ನೆಲ್ಲ ಬಂಬು ಮತ್ತು ಬ್ಯಾರಿಕೇಡ್ ನಿಂದ ರಸ್ತೆ ಬ್ಲಾಕ್ ಮಾಡಿದೆ. ಇನ್ನೂ ಕೆಲವು ಕಡೆ ರಸ್ತೆಗಳಿಗೆ ಮುಳ್ಳು ಬೇಲಿ ಹಾಕಲಾಗಿದೆ.

    ನಗರದಲ್ಲಿ ಎಲ್ಲಾ ರಸ್ತೆಗಳು ಒನ್ ವೇ ಮಾಡಿ, ಅನಾವಶ್ಯಕವಾಗಿ ರಸ್ತೆಗಿಳಿಯುವ ವಾಹನಗಳನ್ನು ತಪಾಸಣೆ ಮಾಡಿ ಅವುಗಳ ಮೇಲೆ ಪ್ರಕರಣ ದಾಖಲಿಸಿ, ಸೀಜ್ ಮಾಡಲಾಗುತ್ತಿದೆ. ರಸ್ತೆ ಸಂಚಾರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

  • ಯಾವ ಜಿಲ್ಲೆಯಲ್ಲಿ ಎಷ್ಟು ಜನ ಸೋಂಕಿತರು? ಇಲ್ಲಿದೆ ಮಾಹಿತಿ

    ಯಾವ ಜಿಲ್ಲೆಯಲ್ಲಿ ಎಷ್ಟು ಜನ ಸೋಂಕಿತರು? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ ಕೊರೊನಾ ಸೋಂಕಿತ 6 ಜನ ರೋಗಿಗಳು ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಕರ್ನಾಟಕ್ಕೆ ಇಂದು ಕರಾಳ ದಿನವಾಗಿ ಪರಿಣಮಿಸಿದೆ. ಏಕೆಂದರೆ ಬುಧವಾರ ಒಂದೇ ದಿನದಲ್ಲಿ ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದು ದೃಢಪಟ್ಟಿದೆ. ಜೊತೆಗೆ 19 ಜನರಿಗೆ ಸೋಂಕು ತಗುಲಿದೆ.

    ಹೆಮ್ಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 80 ವರ್ಷದ ವೃದ್ಧೆ ಹಾಗೂ ಚಿಕ್ಕಬಳ್ಳಾಪುರ ನಿವಾಸಿ 65 ವರ್ಷದ ರೋಗಿ-250 ಏಪ್ರಿಲ್ 13ರಂದು ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ಅವರು ಕೊರೊನಾ ವೈರಸ್‍ನಿಂದಲೇ ಮೃತಪಟ್ಟಿದ್ದಾರೆ ಎನ್ನುವುದು ಇಂದು ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಹಾಟ್‍ಸ್ಪಾಟ್ ಜಿಲ್ಲೆಗಳ ಪಟ್ಟಿ:
    * ಬೆಂಗಳೂರು ನಗರ – 71 ಜನರಿಗೆ ಸೋಂಕು (ಗುಣಮುಖ- 35, ಸಕ್ರಿಯ- 34, ಸಾವು- 02)
    * ಮೈಸೂರು – 58 ಜನರಿಗೆ ಸೋಂಕು (ಗುಣಮುಖ- 12, ಸಕ್ರಿಯ- 46)
    * ಬೆಳಗಾವಿ – 19 ಜನರಿಗೆ ಸೋಂಕು (ಸಕ್ರಿಯ- 18, ಸಾವು- 01)

    ಹಾಟ್‍ಸ್ಪಾಟ್ ಜಿಲ್ಲೆ ವಿತ್ ಕ್ಲಸ್ಟರ್:
    * ದಕ್ಷಿಣ ಕನ್ನಡ – 11 ಮಂದಿಗೆ ಕೊರೊನಾ (ಗುಣಮುಖ- 08, ಸಕ್ರಿಯ- 03)
    * ಬೀದರ್ – 13 ಮಂದಿಗೆ ಕೊರೊನಾ (ಸಕ್ರಿಯ- 13)
    * ಕಲಬುರಗಿ – 17 ಮಂದಿಗೆ ಕೊರೊನಾ (ಗುಣಮುಖ- 02, ಸಕ್ರಿಯ- 12 ಸಾವು- 03)
    * ಬಾಗಲಕೋಟೆ – 14 ಮಂದಿಗೆ ಕೊರೊನಾ (ಸಕ್ರಿಯ- 13, ಸಾವು- 01)
    * ಧಾರವಾಡ – 6 ಮಂದಿಗೆ ಕೊರೊನಾ (ಗುಣಮುಖ-01, ಸಕ್ರಿಯ- 05)

    ನಾನ್ ಹಾಟ್‍ಸ್ಪಾಟ್‍ಗಳು:
    * ಬಳ್ಳಾರಿ – 6 ಜನರಿಗೆ ಸೋಂಕು (ಸಕ್ರಿಯ- 06)
    * ಮಂಡ್ಯ – 8 ಜನರಿಗೆ ಸೋಂಕು (ಸಕ್ರಿಯ- 08)
    * ಬೆಂಗಳೂರು ಗ್ರಾಮಾಂತರ – 12 ಜನರಿಗೆ ಸೋಂಕು (ಸಕ್ರಿಯ- 12)
    * ದಾವಣಗೆರೆ- 2 ಜನರಿಗೆ ಸೋಂಕು (ಗುಣಮುಖ- 02)
    * ಉಡುಪಿ- 3 ಜನರಿಗೆ ಸೋಂಕು (ಗುಣಮುಖ- 02, ಸಕ್ರಿಯ- 01)
    * ಗದಗ- 01 ಜನರಿಗೆ ಸೋಂಕು (ಸಾವು- 01)

    * ತುಮಕೂರು- 2 ಜನರಿಗೆ ಸೋಂಕು (ಸಾವು- 01, ಸಕ್ರಿಯ- 01)
    * ವಿಜಯಪುರ – 10 ಜನರಿಗೆ ಸೋಂಕು (ಸಕ್ರಿಯ- 09, ಸಾವು- 01)
    * ಕೊಡಗು- 01 ಜನರಿಗೆ ಸೋಂಕು (ಗುಣಮುಖ, ಮತ್ತೆ ದಾಖಲು)
    * ಚಿಕ್ಕಬಳ್ಳಾಪುರ – 13 ಜನರಿಗೆ ಸೋಂಕು (ಗುಣಮುಖ- 8, ಸಕ್ರಿಯ- 03, ಸಾವು- 02)
    * ಉತ್ತರ ಕನ್ನಡ – 11 ಜನರಿಗೆ ಸೋಂಕು (ಗುಣಮುಖ- 08, ಸಕ್ರಿಯ- 03)

    ಸೋಂಕು ಇಲ್ಲದ ಹಸಿರು ವಲಯದ ಜಿಲ್ಲೆಗಳ ವ್ಯಾಪ್ತಿಗೆ ಶಿವಮೊಗ್ಗ, ಯಾದಗಿರಿ, ರಾಮನಗರ, ಕೋಲಾರ, ಚಿತ್ರದುರ್ಗ, ಕೊಪ್ಪಳ, ಹಾವೇರಿ, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು ಬರುತ್ತವೆ.