Tag: grenade

  • Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

    Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

    ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್‌ ಕಮಾಂಡೋ ಫೋರ್ಸ್‌ನ (ಖಲಿಸ್ತಾನ್‌ ಜಿಂದಾಬಾದ್‌ ಫೋರ್ಸ್‌) ಮೂವರು ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್‌ (Encounter) ಮಾಡಿದ್ದಾರೆ. ಸೋಮವಾರ ಮುಂಜಾನೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

    ಎನ್‌ಕೌಂಟರ್‌‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು (Khalistani Terrorist) ಗುರ್ವಿಂದರ್ ಸಿಂಗ್ (25), ವೀರೇಂದ್ರ ಸಿಂಗ್ ಅಲಿಯಾಸ್ ರವಿ (23), ಮತ್ತು ಜಸ್ಪ್ರೀತ್ ಸಿಂಗ್ ಅಲಿಯಾಸ್ ಪ್ರತಾಪ್ ಸಿಂಗ್ (18) ಎಂದು ಗುರುತಿಸಿದೆ. ಹತರು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

    ಎನ್‌ಕೌಂಟರ್ ನಂತರ ಪೊಲೀಸರು ಎರಡು ಎಕೆ -47 ರೈಫಲ್‌ಗಳು, ಎರಡು ಗ್ಲಾಕ್ ಪಿಸ್ತೂಲ್‌ಗಳು ಮತ್ತು ಹಲವು ಮ್ಯಾಕ್ಸಿನ್ ಜೀವಂತ ಗುಂಡುಗಳನ್ನು ಮೃತರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪಿಲಿಭಿತ್ ಜಿಲ್ಲೆಯ ಪುರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮೂವರು ಆರೋಪಿಗಳ ಉಪಸ್ಥಿತಿಯ ಬಗ್ಗೆ ಪಂಜಾಬ್ ಪೊಲೀಸರ ತಂಡವು ಪಿಲಿಭಿತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೂವರು ವ್ಯಕ್ತಿಗಳು ಪುರನ್‌ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಂಗೆ ಸಂಚರಿಸುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು.

    ಮಾಹಿತಿಯ ಆಧಾರದ ಮೇಲೆ, ಪೊಲೀಸರು ಕಾರ್ಯಚರಣೆಗೆ ತೆರಳಿದಾಗ ಮೂವರು ಶಂಕಿತರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಬಳಿಕ ಪೊಲೀಸರ ಪ್ರತಿ ದಾಳಿಯಲ್ಲಿ ಅವರು ಕೊಲ್ಲಲ್ಪಟ್ಟರು. ಪಂಜಾಬ್ ಪೊಲೀಸ್ ಮತ್ತು ಉತ್ತರ ಪ್ರದೇಶ ಪೊಲೀಸರ ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಪಂಜಾಬ್ ಪೊಲೀಸ್ ತಂಡವು ಅವರ ವಿದೇಶಿ ಸಂಪರ್ಕಗಳ ಬಗ್ಗೆಯೂ ತಿಳಿಸಿದೆ.

    ತನಿಖೆ ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲಾಗಿದೆ ಎಂದು ಪಿಲಿಬಿಹಿತ್ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ಶನಿವಾರ ಡಿಸೆಂಬರ್ 21 ರಂದು ಗುರುದಾಸ್‌ಪುರ ಜಿಲ್ಲೆಯ ಕಲಾನೌರ್ ಉಪವಿಭಾಗದಲ್ಲಿರುವ ಕೈಬಿಡಲಾದ ಪೊಲೀಸ್ ಪೋಸ್ಟ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಡೆದ ದಾಳಿಯಲ್ಲಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿರಲಿಲ್ಲ.

  • ಗ್ರೆನೇಡ್ ಮೇಲಿನ ಮೇಡ್ ಇನ್ ವಿವರವನ್ನೇ ಅಳಿಸಿ ಹಾಕಿರುವ ಶಂಕಿತ ಉಗ್ರರು

    ಗ್ರೆನೇಡ್ ಮೇಲಿನ ಮೇಡ್ ಇನ್ ವಿವರವನ್ನೇ ಅಳಿಸಿ ಹಾಕಿರುವ ಶಂಕಿತ ಉಗ್ರರು

    ಬೆಂಗಳೂರು: ನಗರದಲ್ಲಿ (Bengaluru) ಬಂಧಿಸಿರುವ ಶಂಕಿತ ಭಯೋತ್ಪಾದಕರಿಂದ (Suspected Terrorist) ವಶಪಡಿಸಿಕೊಳ್ಳಲಾದ ಗ್ರೆನೇಡ್‍ಗಳ ಪರಿಶೀಲನೆಗಾಗಿ ದೇಶದ ಬೇರೆಡೆ ಪತ್ತೆಯಾದ ಗ್ರೆನೇಡ್‍ಗಳ ಮಾಹಿತಿಯನ್ನು ಸಿಸಿಬಿ (CCB) ಕಲೆ ಹಾಕಿದೆ. ಗ್ರೆನೇಡ್ (Grenade) ಮೇಲಿದ್ದ ಮೇಡ್ ಇನ್ ವಿವರವನ್ನೇ ಆರೋಪಿಗಳು ಅಳಿಸಿ ಹಾಕಿದ್ದಾರೆ. ಇದರಿಂದಾಗಿ ಬೇರೆಡೆ ಪತ್ತೆಯಾದ ಸ್ಫೋಟಕಗಳ ಮಾದರಿ ಆಧರಿಸಿ ಗ್ರೆನೇಡ್‍ಗಳ ಬಗ್ಗೆ ಸಿಸಿಬಿ ಮಾಹಿತಿ ಕಲೆ ಹಾಕುತ್ತಿದೆ.

    ಗ್ರೆನೇಡ್ ತಯಾರಾದ ಸ್ಥಳ ಹಾಗೂ ಇನ್ನಿತರ ಮಾಹಿತಿಯನ್ನು ಅಳಿಸಿ ಹಾಕಲಾಗಿದೆ. ಇದರಿಂದಾಗಿ ಗ್ರೆನೇಡ್ ಮಾದರಿ ಹಾಗೂ ಅದಕ್ಕೆ ಬಳಕೆಯಾದ ವಸ್ತುಗಳ ಬಗ್ಗೆ ಸಿಸಿಬಿ ಮಾಹಿತಿ ಕಲೆ ಹಾಕುತ್ತಿದೆ. ಈ ಸಲುವಾಗಿ ನಗರದಲ್ಲಿ 2007ರಲ್ಲಿ ಪತ್ತೆಯಾದ ಗ್ರೆನೇಡ್ ಫೋಟೊಗಳು ಹಾಗೂ ಅದರ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಕಳೆದ ವರ್ಷ ಹೈದರಾಬಾದ್‍ನಲ್ಲಿ ಪತ್ತೆಯಾಗಿದ್ದ 4 ಗ್ರೆನೇಡ್‍ಗಳ ಮಾದರಿ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    ಗ್ರೆನೇಡ್ ತಯಾರಿಕೆಯ ವಿವರ, ತಯಾರಾದ ಸ್ಥಳ ಹಾಗೂ ಯಾವಾಗ ಅಲ್ಲಿಂದ ತರಲಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಹಿಂದೆ ಪತ್ತೆಯಾಗಿದ್ದ ಗ್ರೆನೇಡ್ ಕೇಸ್ ಫೈಲ್‍ಗಳನ್ನು ತರಿಸಿಕೊಂಡು ಸಾಮ್ಯತೆ ಪರಿಶೀಲನೆ ನಡೆಸಲಾಗುತ್ತಿದೆ. ಈ ವೇಳೆ ಗ್ರೆನೇಡ್‍ಗಳನ್ನು ಹೈ ಕ್ವಾಲಿಟಿ ಕಂಪನಿ ತಯಾರಿಸಿರುವ ಶಂಕೆ ವ್ಯಕ್ತವಾಗಿದೆ. ಎಫ್‍ಎಸ್‍ಎಲ್‍ನಿಂದ ಜೀವಂತ ಗ್ರೆನೇಡ್‍ಗಳು ವಾಪಸ್ ಆಗಿದ್ದು, ಸಿಸಿಬಿ ವಿಶೇಷ ತಂಡ ತನಿಖೆಯನ್ನು ಚುರುಕುಗೊಳಿಸಿದೆ.ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಯಾನಕ ಸ್ಫೋಟ ನಡೆಸಲು ಸ್ಕೆಚ್ ಹಾಕಿದ್ದ ಐವರು ಶಂಕಿತ ಉಗ್ರರ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, 4 ಸಜೀವ ಗ್ರೆನೇಡ್‌ಗಳನ್ನ ಸಿಸಿಬಿ ಅಧಿಕಾರಿಗಳು (CCB Officers) ಪತ್ತೆಹಚ್ಚಿದ್ದಾರೆ.

    ಬೆಂಗಳೂರಿನ (Bengaluru) ಕೋಡಿಗೆಹಳ್ಳಿಯ ಜುನೈದ್ ಮನೆಯೊಂದರಲ್ಲಿ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳನ್ನ ಸಿಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಪೌಡರ್ ರೂಪದ ಕೆಮಿಕಲ್‌ನಿಂದ ಸ್ಫೋಟವಾಗದಂತೆ ಅಡಗಿಸಿಟ್ಟಿದ್ದ ನಾಲ್ಕೈದು ಗ್ರೆನೇಡ್‌ಗಳನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಮಾಡಿ, ಸೀಜ್ ಮಾಡಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರರ ಬಳಿಯಿದ್ದ ವಾಕಿಟಾಕಿ ಸುತ್ತ ಅನುಮಾನ – ವಿದೇಶದಲ್ಲಿದ್ದುಕೊಂಡೇ ಲಕ್ಷ ಲಕ್ಷ ಫಂಡಿಂಗ್ ಮಾಡ್ತಿದ್ದ ಮಾಸ್ಟರ್ ಮೈಂಡ್

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ, ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ವಿದ್ವಂಸಕ ಕೃತ್ಯಗಳನ್ನ ಎಸಗಲು ಒಳಸಂಚು ನಡೆಸಿರುವುದು ಕಂಡುಬಂದಿತ್ತು. ಆರೋಪಿಗಳು ತಮ್ಮ ಕಾರ್ಯಸಾಧನೆಗಾಗಿ ಕೆಲ ವಾರಗಳಿಂದ ಅಕ್ರಮವಾಗಿ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ದುಷ್ಕೃತ್ಯಕ್ಕೆ ಬೇಕಾಗುವ ಸಲಕರಣೆಗಳನ್ನ ಸಂಗ್ರಹಿಸಿಕೊಂಡಿದ್ದರು. ಜು.19ರಂದು ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಒಂದು ವಾರ ಪೊಲೀಸ್ ಕಸ್ಟಡಿಗೆ ಪಡೆಯಲಾಯಿತು. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲು ತನಿಖಾಧಿಕಾರಿ ಸೇರಿ ಇಬ್ಬರು ಎಸಿಪಿ, 6 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವಿಶೇಷ ತಂಡ ರಚಿಸಲಾಗಿದ್ದು, ತೀವ್ರಗತಿಯಲ್ಲಿ ಮುಂದುವರಿದಿದೆ ಎಂದು ಹೇಳಿದರು.

    ವಿದ್ವಂಸಕ ಕೃತ್ಯ ಎಸಗಲು ಗ್ರೆನೇಡ್ ಸಂಗ್ರಹ:
    ಬೆಂಗಳೂರಿನಲ್ಲಿ ದುಷ್ಕೃತ್ಯ ಎಸಗಲು ತಲೆ ಮರೆಸಿಕೊಂಡಿರುವ ಎ-2 ಆರೋಪಿ ಜುನೈದ್, ಎ-5 ಬೇರೋಬ್ಬ ವ್ಯಕ್ತಿಯ ಮೂಲಕ ಎ-5 ಆರೋಪಿ ತಬ್ರೇಜ್‌ಗೆ 4 ಹ್ಯಾಂಡ್ ಗ್ರೆನೇಡ್‌ಗಳನ್ನ ತಲುಪಿಸಿದ್ದಾನೆ. ಅವುಗಳನ್ನ ಕೋಡಿಗೆಹಳ್ಳಿಯ ಮನೆಯೊಂದರಲ್ಲಿ ಅಡಗಿಸಿಟ್ಟಿದ್ದರು. ಪೌಡರ್ ರೂಪದ ಕೆಮಿಕಲ್ ಬಳಸಿ ಪೆಟ್ಟಿಗೆಯೊಂದರಲ್ಲಿ ಅಡಗಿಸಿಟ್ಟಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಂತರ ತನಿಖಾಧಿಕಾರಿಗಳು ಬಾಂಬ್ ನಿಷ್ಕಿçಯ ದಳ (BDDS) ಮತ್ತು FSL ಅಧಿಕಾರಿಗಳ ಜೊತೆಯಲ್ಲಿ ಕಾರ್ಯಾಚರಣೆ ನಡೆಸಿ ಸಜೀವ ಗ್ರೇನೆಡ್‌ಗಳನ್ನ ಪತ್ತೆಮಾಡಿ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮುಂದುವರಿದಿದೆ.

    ಲೈವ್ ಗ್ರೇನೆಡ್ ಪತ್ತೆ ವಿಚಾರ ತಿಳಿದು ಇದೀಗ ಸ್ಥಳೀಯರು ಆತಂಕಗೊಂಡಿದ್ದಾರೆ. ಮನೆಯ ಸುತ್ತಮಲ್ಲಿರೋ ಜನರಲ್ಲಿ ಆತಂಕ ಶುರುವಾಗಿದ್ದು, ಅಪಾರ್ಟ್ಮೆಂಟ್‌ಗಳ ಮೇಲೆ ನಿಂತು ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರರಿಗೆ ಆಶ್ರಯ ಕೊಟ್ಟಿದ್ದವರಿಗೆ ಶುರುವಾಯ್ತು ಸಂಕಷ್ಟ – ಮಾಲೀಕರ ಮೇಲೆ ಕೇಸ್?

    ಮುಂಬೈ ಮಾದರಿ ಅಟ್ಯಾಕ್‌ಗೆ ಪ್ಲ್ಯಾನ್‌?
    ಗ್ರೆನೇಟ್ ಪತ್ತೆಯಾದ ಬೆನ್ನಲ್ಲೇ ಶಂಕಿತ ಉಗ್ರರಿಂದ ಮುಂಬೈ ದಾಳಿ ಮಾದರಿಯಲ್ಲೇ ಅಟ್ಯಾಕ್‌ಗೆ ಪ್ಲ್ಯಾನ್‌ ನಡೆದಿತ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿದೆ. ಕೂಮು ಸಂಘರ್ಷಕ್ಕೆ ದಾರಿ ಮಾಡಿ ಆ ಸ್ಥಳದಲ್ಲಿ ವಿದ್ವಂಸಕ ಕೃತ್ಯಗಳ ಎಸಗಲು ಪ್ಲ್ಯಾನ್‌ ಮಾಡಿದ್ರಾ? ಅನ್ನೋ ಪ್ರಶ್ನೆಗಳು ಮೂಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಮ್ಮು, ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ- ಇಬ್ಬರು ಸ್ಥಳೀಯೇತರ ಕಾರ್ಮಿಕರು ಬಲಿ

    ಜಮ್ಮು, ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ- ಇಬ್ಬರು ಸ್ಥಳೀಯೇತರ ಕಾರ್ಮಿಕರು ಬಲಿ

    ಶ್ರೀನಗರ: ಉಗ್ರರು ಸ್ಥಳೀಯರಲ್ಲದವರ ಮೇಲೆ ಗ್ರೆನೇಡ್ (Grenade) ಎಸೆದು ನಂತರ ಇಬ್ಬರು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಶೋಪಿಯಾನ್ ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ನಡೆದಿದೆ.

    ಮೃತರನ್ನು ಮನೀಶ್ ಕುಮಾರ್ ಹಾಗೂ ರಾಮ್ ಸಾಗರ್ ಎಂದು ಗುರುತಿಸಲಾಗಿದೆ. ಇಬ್ಬರೂ ಉತ್ತರ ಪ್ರದೇಶದ (Uttar Pradesh) ಕನೂಜ್ ಜಿಲ್ಲೆಯ ನಿವಾಸಿಗಳಾಗಿದ್ದು, ಜಮ್ಮು ಕಾಶ್ಮೀರಕ್ಕೆ ಕೆಲಸಕ್ಕೆಂದು ಬಂದಿದ್ದರು.

    ಸುಮಾರು ಐವರು ಕಾರ್ಮಿಕರು ಟಿನ್ ಶೆಡ್‍ನಲ್ಲಿ ಮಲಗಿದ್ದರು. ಈ ಸಂದರ್ಭದಲ್ಲಿ ಉಗ್ರರು ಹ್ಯಾಂಡ್ ಗ್ರೆನೆಡ್‍ನ್ನು ಎಸೆದಿದ್ದಾರೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತಿಬ್ಬರಾದ ಮನೀಶ್ ಹಾಗೂ ರಾಮ್ ಸಾಗರ್ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಘಟನೆಗೆ ಸಂಬಂಧಿಸಿ ನಿಷೇಧಿತ ಉಗ್ರ ಸಂಘಟನೆಯ ಹೈಬ್ರಿಡ್ ಉಗ್ರ ಇಮ್ರಾನ್ ಬಶೀರ್ ಗನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಶ್ಮೀರದ ಎಡಿಜಿಪಿ ತಿಳಿಸಿದ್ದಾರೆ. ಇದನ್ನೂ ಓದಿ: ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

    ಶೋಪಿಯಾನ್ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಹಿಂದೂಗಳ ಮೇಲೆ ಉಗ್ರರು ನಡೆಸಿದ ಎರಡನೇ ದಾಳಿ ಇದಾಗಿದೆ. ಶನಿವಾರ ಶೋಪಿಯಾನ್‍ನಲ್ಲಿ ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಬೆಂಗಳೂರು ಗುಂಡಿಗೆ ಮಹಿಳೆ ಬಲಿ – KSRTC ಡ್ರೈವರ್‌ ಅರೆಸ್ಟ್‌

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ

    ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಬಾರಿ ಗ್ರೆನೇಡ್ ದಾಳಿ

    ಶ್ರೀನಗರ: ಸ್ವಾತಂತ್ರ್ಯ ದಿನದಂದೇ ಶ್ರೀನಗರದಲ್ಲಿ 2 ಕಡೆ ಗ್ರೆನೇಡ್ ದಾಳಿಗಳು ನಡೆದಿವೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ನಾಗರಿಕ ಗಾಯಗೊಂಡಿರುವುದಾಗಿ ವರದಿಯಾಗಿದೆ.

    ನಿನ್ನೆ(ಸೋಮವಾರ) ಬುದ್ಗಾಮ್‌ನ ಗೋಪಾಲ್‌ಪೋರಾ ಚದೂರ ಪ್ರದೇಶದಲ್ಲಿ ಭಯೋತ್ಪಾದಕರು ಎಸೆದ ಗ್ರೆನೇಡ್ ಸ್ಥಳೀಯ ಕರಣ್ ಕುಮಾರ್ ಸಿಂಗ್ ಗಾಯಗೊಂಡಿದ್ದರು. ಬಳಿಕ ಶ್ರೀನಗರದ ಕಾಶ್ಮೀರ ಪೊಲೀಸ್ ನಿಯಂತ್ರಣ ಕೊಠಡಿ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಬೇರೆ ಬೇರೆ ಸಂದರ್ಭಗಳಲ್ಲಿ ನಡೆದಿರುವ ದಾಳಿಯಲ್ಲಿ ಗಾಯಗೊಂಡಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    ಭಾನುವಾರವೂ ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಪೊಲೀಸ್ ಕಾನ್‌ಸ್ಟೇಬಲ್ ಸರ್ಫರಾಜ್ ಅಹ್ಮದ್ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ

    Live Tv
    [brid partner=56869869 player=32851 video=960834 autoplay=true]

  • ಉಗ್ರರಿಂದ ಗ್ರೆನೇಡ್ ದಾಳಿ- ಪೊಲೀಸ್ ಸಿಬ್ಬಂದಿ ಹುತಾತ್ಮ

    ಉಗ್ರರಿಂದ ಗ್ರೆನೇಡ್ ದಾಳಿ- ಪೊಲೀಸ್ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಉಗ್ರರು ಎಸೆದ ಗ್ರೆನೇಡ್‍ನಿಂದ ಪೊಲೀಸ್ ಕಾನ್ಸ್‌ಟೆಬಲ್‍ರೊಬ್ಬರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖೈಮೋಹ್ ಪ್ರದೇಶದಲ್ಲಿ ನಡೆದಿದೆ.

    ಪೂಂಚ್ ನಿವಾಸಿ ತಾಹಿರ್ ಖಾನ್ ಮೃತಪ ಪೊಲೀಸ್ ಸಿಬ್ಬಂದಿ. ಖೈಮೊಹ್ ಕುಲ್ಗಾಂನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ತಾಹಿರ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ.

    ಇನ್ನೂ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಗಾಯಗೊಂಡಿದ್ದರು.

    ಅಷ್ಟೇ ಅಲ್ಲದೇ ಇಂಟೆಲಿಜೆನ್ಸ್ ಬ್ಯೂರೋ(ಐಬಿ) ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವಾರು ನಗರಗಳಲ್ಲಿ ದಾಳಿ ನಡೆಯಬಹುದಾಗಿ ಎಚ್ಚರಿಕೆಯನ್ನೂ ನೀಡಿದೆ. ಐಬಿ ನೀಡಿರುವ ಕೆಲವು ಪ್ರಮುಖ ಎಚ್ಚರಿಕೆಗಳು ಇಂತಿವೆ. ಇದನ್ನೂ ಓದಿ: ಬಂಧಿತ ಉಗ್ರರ ವಿಚಾರಣೆಯ ವೇಳೆ ಮಾಹಿತಿ ಬಹಿರಂಗ- ಗುಪ್ತಚರ ಇಲಾಖೆಯಿಂದ ಎಚ್ಚರಿಕೆ

    ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಧ್ವಜಾರೋಹಣ ಸಮಾರಂಭದಲ್ಲಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನಗಳನ್ನು ಬಳಸಬಹುದೆಂದು ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದಲ್ಲದೇ ಪಾಕಿಸ್ತಾನದಿಂದ ಪಂಜಾಬ್‍ನ ಗಡಿ ಮೂಲಕ ದೆಹಲಿಗೆ ಡ್ರೋನ್‍ಗಳು ಪ್ರವೇಶಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಬಂಧನಕ್ಕೊಳಗಾದ ಉಗ್ರರ ವಿಚಾರಣೆ ವೇಳೆ ಈ ವಿಷಯ ತಿಳಿದುಬಂದಿರುವುದಾಗಿ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆಜಿಗಟ್ಟಲೆ ಚಿನ್ನ ಹೊತ್ತೊಯ್ದರು

    Live Tv
    [brid partner=56869869 player=32851 video=960834 autoplay=true]

  • ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ- ಬೆಳಗಾವಿ ಜಿಲ್ಲೆಯಲ್ಲಿ ಆತಂಕ

    ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ- ಬೆಳಗಾವಿ ಜಿಲ್ಲೆಯಲ್ಲಿ ಆತಂಕ

    ಚಿಕ್ಕೋಡಿ: ಕರ್ನಾಟಕ, ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

    ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಭಾನುವಾರ ಪರಿಶೀಲನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

    ಮಕ್ಕಳು ಬಾಂಬ್ ಎಂದು ತಿಳಿಯದೇ ಗ್ರೆನೇಡ್‍ನೊಂದಿಗೆ ಆಟ ಆಡುತ್ತಿದ್ದದ್ದನ್ನು ಕಂಡು ಶಿಕ್ಷಕರು ಹಾಗೂ ಗ್ರಾಮಸ್ಥರು ಗಾಬರಿಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಸಾಂಗ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಗ್ರಾಮಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಭಾರಿ ಅನಾಹುತ ತಪ್ಪಿದೆ. ಶಾಲೆಯಲ್ಲಿ ಪತ್ತೆಯಾಗಿರುವ ಹ್ಯಾಂಡ್ ಗ್ರೆನೇಡ್ ಮೇಲೆ ಉರ್ದು ಭಾಷೆಯ ಲಿಪಿ ಕಂಡುಬಂದಿದೆ. ಗ್ರೆನೇಡ್ ಜೀವಂತವಾಗಿತ್ತೇ ಅಥವಾ ನಿಷ್ಕ್ರಿಯವಾಗಿತ್ತೇ ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪತ್ರಾ ಚಾವ್ಲ್ ಭೂ ಹಗರಣ: ಇಡಿಯಿಂದ ಸಂಜಯ್ ರಾವತ್‌ ಬಂಧನ

    ಶಾಲೆಯಲ್ಲಿ ಗ್ರೆನೇಡ್ ಕಂಡುಬಂದಿರುವುದು ನೋಡಿದರೆ ಉಗ್ರರು ಶಾಲೆಯನ್ನು ಸ್ಫೋಟಗೊಳಿಸುವ ಯತ್ನದಲ್ಲಿದ್ದರೇ ಅಥವಾ ಇಲ್ಲಿ ವಾಸ್ತವ್ಯ ಹೂಡಿದ್ದರೇ ಎಂಬ ಅನುಮಾನಗಳು ಮೂಡಿವೆ. ಗಡಿಯಲ್ಲಿ ಇಂತಹ ಬೆಳವಣಿಗೆಯಿಂದ ಬೆಳಗಾವಿ ಜಿಲ್ಲೆಯಲ್ಲೂ ಆತಂಕ ಆವರಿಸಿದೆ. ಇದನ್ನೂ ಓದಿ: ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    Live Tv
    [brid partner=56869869 player=32851 video=960834 autoplay=true]

  • ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್‌ ಸ್ಫೋಟ- ಇಬ್ಬರು ಯೋಧರು ಹುತಾತ್ಮ

    ಜಮ್ಮು ಕಾಶ್ಮೀರದಲ್ಲಿ ಗ್ರೆನೇಡ್‌ ಸ್ಫೋಟ- ಇಬ್ಬರು ಯೋಧರು ಹುತಾತ್ಮ

    ಶ್ರೀನಗರ: ಆಕಸ್ಮಿಕವಾಗಿ ನಡೆದ ಗ್ರೆನೇಡ್‌  ಸ್ಫೋಟದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‍ನ ಎಲ್‍ಒಸಿ ಬಳಿ ನಡೆದಿದೆ.

    ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಸೈನಿಕರು ಎಲ್‍ಒಸಿ ಗಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಗ್ರೆನೇಡ್‌ ಸ್ಫೋಟ ಸಂಭವಿಸಿದೆ.

    ಗಾಯಗೊಂಡ ಸೈನಿಕರನ್ನು ತಕ್ಷಣವೇ ಹೆಲಿಕಾಪ್ಟರ್ ಮೂಲಕ ಉಧಂಪುರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಸೇನಾ ಕ್ಯಾಪ್ಟನ್ ಮತ್ತು ನೈಬ್ ಸುಬೇದಾರ್(ಜೆಸಿಒ) ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರ ಗುಂಡಿಗೆ CRPF ಯೋಧ ಹುತಾತ್ಮ

    ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ನಡೆದಿತ್ತು. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಸಿಆರ್‌ಪಿಎಫ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ಪುಲ್ವಾಮಾದಲ್ಲಿ ತಪ್ಪಿತು ದುರಂತ – ರಸ್ತೆಗೆ ಬಿತ್ತು ಗ್ರೆನೇಡ್‌, ಸೈನಿಕರು ಪಾರು

    ಪುಲ್ವಾಮಾದಲ್ಲಿ ತಪ್ಪಿತು ದುರಂತ – ರಸ್ತೆಗೆ ಬಿತ್ತು ಗ್ರೆನೇಡ್‌, ಸೈನಿಕರು ಪಾರು

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದಾರೆ. ಸೈನಿಕರ ವಾಹನವನ್ನು ಗುರಿಯಾಗಿಸಿ ಗ್ರೆನೇಡ್ ದಾಳಿ ನಡೆಸಿದ್ದು 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ.

    ಪುಲ್ವಾಮಾದ ಕಾಕಾಪೋರದಲ್ಲಿ ಸಿಆರ್‌ಪಿಎಫ್‌ ಮತ್ತು ಪೊಲೀಸರ ಮೇಲೆ ಉಗ್ರರು  ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ ಗ್ರೆನೇಡ್‌ ಗುರಿ ತಪ್ಪಿ ರಸ್ತೆಯ ಮೇಲೆ ಬಿದ್ದ ಪರಿಣಾಮ 10 ಮಂದಿ ನಾಗರಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಆರೋಗ್ಯ ಸ್ಥಿರವಾಗಿದೆ. ಸದ್ಯ ಈಗ ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು ಉಗ್ರರಿಗಾಗಿ ಹುಡುಕಾಟ ಆರಂಭವಾಗಿದೆ.

    ಕಳೆದ ವರ್ಷದ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ವಿಮಾನಗಳ ಮೂಲಕ ಬಾಂಬ್ ದಾಳಿ ನಡೆಸಿತ್ತು.

  • ರಾಮನಗರದ ರಾಜಕಾಲುವೆಯಲ್ಲಿ ಎರಡು ಸಜೀವ ಗ್ರೆನೇಡ್ ಪತ್ತೆ

    ರಾಮನಗರದ ರಾಜಕಾಲುವೆಯಲ್ಲಿ ಎರಡು ಸಜೀವ ಗ್ರೆನೇಡ್ ಪತ್ತೆ

    ರಾಮನಗರ: ನಿನ್ನೆ ಬಂಧಿಸಿದ ಹಬೀಬುರ್ ರೆಹಮಾನ್ ಅವರನ್ನು ವಿಚಾರಣೆ ನಡೆಸಿದ ವೇಳೆ ಆತನ ಹೇಳಿಕೆಯ ಆಧಾರದ ಮೇಲೆ ಎನ್‍ಐಎ ಎರಡು ಐಇಡಿಗಳನ್ನು ಇಂದು ವಶಪಡಿಸಿಕೊಂಡಿದೆ.

    ಬಾಂಬ್ ನಿಷ್ಕ್ರೀಯ ದಳದ ಸಹಾಯದಿಂದ ರಾಮನಗರದ ಬಳಿಯ ರೇಲ್ವೆ ಹಳಿಯ ರಾಜಕಾಲುವೆಯಲ್ಲಿದ್ದ ಎರಡು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಂಗಳೂರು ಪೊಲೀಸರು ಐಇಡಿಗಳನ್ನು ಪತ್ತೆ ಹಚ್ಚಿದ್ದಾರೆ.

    ಬೆಂಗಳೂರಿನಲ್ಲಿ ಹಲವು ದುಷ್ಕøತ್ಯಗಳಲ್ಲಿ ಭಾಗಿಯಗಿರುವ ಕುರಿತು ಆರೋಪಿ ಬಹಿರಂಗಪಡಿಸಿದ್ದು, ಜೆಎಂಬಿ ಕಾರ್ಯ ಚಟುವಟಿಕೆಗಳಿಗಾಗಿ ಹಣ ಸಂಗ್ರಹಿಸಲು 2018ರಲ್ಲಿ ಬೆಂಗಳೂರಿಗೆ ಆಗಮಿಸಿದ್ದಾನೆ.

    ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಮಂಗಳವಾರ ಬಂಧಿಸಿತ್ತು.

    ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು ಮಂಗಳವಾರ ಮಧ್ಯಾಹ್ನ ಬೆಂಗಳೂರು ಹಾಗೂ ಕೋಲ್ಕತಾ ಎನ್‍ಐಎ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ಮಸೀದಿ ಬಳಿ ಬಂಧಿಸಿದ್ದರು.

    ಬಂಧಿತ ಉಗ್ರ ಹಬೀಬುಲ್ಲಾ 2013ರ ಭೋದಗಯಾ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತು ಪಶ್ಚಿಮ ಬಂಗಾಳದ ಬುದ್ರ್ವಾನ್ ಸ್ಫೋಟದ ಆರೋಪಿಯಾಗಿದ್ದಾನೆ. ಈ ಪ್ರಕರಣದಲ್ಲಿ 8 ಜನ ಭಾಗಿಯಾಗಿದ್ದು, ಮೂವರ ಬಂಧನವಾಗಿತ್ತು. ಉಳಿದ 5 ಜನಕ್ಕೆ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿದ್ದರು. ಕಳೆದ ಐದು ದಿನಗಳಿಂದ ಬೆಂಗಳೂರು ಹೊರ ವಲಯದ ದೊಡ್ಡಬಳ್ಳಾಪುರದ ಮಸೀದಿಯಲ್ಲಿ ಉಗ್ರ ತಂಗಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

    ಬೆಂಗಳೂರಿನಲ್ಲಿ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದ ಅನ್ವರ್ ಎಂಬಾತನೊಂದಿಗೆ ಈತ ನಂಟು ಹೊಂದಿದ್ದು, ಮಸೀದಿಗೆ ಬಂದು ಹೋಗುತ್ತಿದ್ದ. ಕೆಲ ಸಮಯದ ಬಳಿಕ ಅನ್ವರ್ ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಮಸೀದಿಯಲ್ಲಿ ಮೌಲ್ವಿಯಾಗಿ ನೇಮಕಗೊಂಡಿದ್ದ. ಹೀಗಾಗಿ ಆಗಾಗ ಮೌಲ್ವಿ ಅನ್ವರ್ ಭೇಟಿ ಮಾಡಲು ದೊಡ್ಡಬಳ್ಳಾಪುರದ ಮಸೀದಿಗೆ ಬರುತ್ತಿದ್ದ. ಇದೇ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರದಲ್ಲಿ ಬಾಡಿಗೆ ಮನೆ ಮಾಡಲು ಉಗ್ರ ಪ್ಲಾನ್ ಮಾಡಿದ್ದನು ಮತ್ತು ಮನೆಯನ್ನು ಸಹ ನೋಡಿಕೊಂಡು ಬಂದಿದ್ದ.

    ಬಂಧಿತ ಉಗ್ರ ಹಬೀಬುಲ್ಲಾ ರೆಹಮಾನ್‍ನನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ಯಲಾಗಿದೆ. ಮತ್ತೊಂದೆಡೆ ಮಸೀದಿಯ ಮೌಲ್ವಿ ಅನ್ವರ್‍ನನ್ನು ದೊಡ್ಡಬಳ್ಳಾಪುರ ಪೊಲೀಸರ ವಶಕ್ಕೆ ನೀಡಲಾಗಿದೆ. ಉಗ್ರನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಈ ಹಿಂದೆ ತಿಳಿಸಿತ್ತು.