Tag: groom

  • Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

    Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

    ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ (Heart Attack) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ (Jamakhandi) ನಗರದಲ್ಲಿ ನಡೆದಿದೆ.

    ಪ್ರವೀಣ್ ಕುರಣಿ ಮೃತ ವರ. ಇಂದು ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಪೂಜಾ ಎಂಬವರ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಆರತಕ್ಷತೆ ಮುಗಿಯುವಷ್ಟರಲ್ಲಿ ಮಧುಮಗ ಪ್ರವೀಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

    ಪ್ರವೀಣ್ ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ಗ್ರಾಮದ ನಿವಾಸಿಯಾದ ಪ್ರವೀಣ್ ಮನೆಯಲ್ಲಿ ಬೆಳಗ್ಗೆ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೇ ಯಾರೂ ಊಹಿಸದ ರೀತಿ ದುರ್ಘಟನೆ ನಡೆದಿದೆ. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

    ಹಸೆಮಣೆ ಏರಿ ವಿಭಿನ್ನ ಕನಸುಗಳನ್ನು ಕಂಡಿದ್ದ ಪ್ರವೀಣ್ ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆಯಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಶುಭ ಸಂದರ್ಭದಲ್ಲಿ ಹೃದಯಾಘಾತಕ್ಕೆ ವರ ಬಲಿಯಾಗಿದ್ದನ್ನು ಕಂಡು ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ

  • New Delhi| ಕಾರಿಗೆ ಬೆಂಕಿ – ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು

    New Delhi| ಕಾರಿಗೆ ಬೆಂಕಿ – ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು

    ನವದೆಹಲಿ: ಮದುವೆಗೆ ಆಮಂತ್ರಣ (Wedding Invitation) ಹಂಚಲು ತೆರಳಿದ್ದ ವರನ (Groom) ಕಾರಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸುಟ್ಟು ಕರಕಲಾಗಿ, ವರ ಸಾವನ್ನಪ್ಪಿದ ಘಟನೆ ಘಾಜಿಪುರದ (Ghazipur) ಬಾಬಾ ಬ್ಯಾಂಕ್ವೆಟ್ ಹಾಲ್ ಬಳಿ ನಡೆದಿದೆ.

    ಗ್ರೇಟರ್ ನೋಯ್ಡಾದ ನಿವಾಸಿ ಅನಿಲ್ ಮೃತ ವರ. ಅನಿಲ್ ಶನಿವಾರ ಮಧ್ಯಾಹ್ನ ಆಮಂತ್ರಣ ಪತ್ರಿಕೆ ಹಂಚಲು ಹೊರಗೆ ಹೋಗಿದ್ದ ಸಂದರ್ಭ ಘಟನೆ ಸಂಭವಿಸಿದೆ. ಸಂಜೆಯಾದರೂ ವಾಪಸ್ ಬಾರದ್ದನ್ನು ಕಂಡು ಕರೆ ಮಾಡಿದೆವು. ಆದರೆ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು. ರಾತ್ರಿ 11:30ರ ಸುಮಾರಿಗೆ ಅನಿಲ್‌ಗೆ ಅಪಘಾತವಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ ಎಂದು ಪೊಲೀಸರು ಕರೆ ಮಾಡಿದ್ದರು ಎಂದು ಅನಿಲ್ ಅಣ್ಣ ಸುಮಿತ್ ತಿಳಿಸಿದ್ದಾರೆ. ಇದನ್ನೂ ಓದಿ: 2 ಗ್ಯಾಸ್‌ ಸಿಲಿಂಡರ್‌ ಸ್ಫೋಟ – ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ, ಧಗಧಗಿಸಿದ ಜ್ವಾಲೆ

    ಈ ಕುರಿತು ಅನಿಲ್ ಸೋದರ ಮಾವ ಯೋಗೇಶ್ ಮಾತನಾಡಿ, ನಾನು ಮತ್ತು ಅನಿಲ್ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಅನಿಲ್ ಫೆಬ್ರವರಿ 14 ರಂದು ನನ್ನ ಸಹೋದರಿಯನ್ನು ಮದುವೆಯಾಗಬೇಕಿತ್ತು. ಶನಿವಾರ ರಾತ್ರಿ ಅವರ ಸಾವಿನ ಬಗ್ಗೆ ನಮಗೆ ತಿಳಿಯಿತು. ಕಾರಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದು ನಮಗೆ ಇನ್ನೂ ತಿಳಿದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ

    ಬೆಂಕಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಅನಿಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಫೆ.10, 11, 12ರಂದು ಟಿ.ನರಸೀಪುರದಲ್ಲಿ ಕುಂಭಮೇಳ: ಹೆಚ್‌ಸಿ ಮಹದೇವಪ್ಪ

  • ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ಮದುವೆಯಾದ ವರ

    ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ಮದುವೆಯಾದ ವರ

    -ವರನ ವಿರುದ್ಧ ಮದುವೆಯಾಗಬೇಕಿದ್ದ ಯುವತಿ ದೂರು

    ಲಕ್ನೋ: ಮದುವೆಯಲ್ಲಿ ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ವರ ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ (Uttar Pradesh) ಚಂದೌಲಿ ಜಿಲ್ಲೆಯ (Chandauli District) ಹಮೀದ್‌ಪುರ (Hamidpur) ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.

    ಊಟ ಬಡಿಸಲು ತಡವಾದ ಕಾರಣಕ್ಕೆ ವರನು ತನ್ನ ಮದುವೆಯಿಂದ ಹೊರನಡೆದು ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಾನೆ. ಇದನ್ನು ತಿಳಿದ ವಧು ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.ಇದನ್ನೂ ಓದಿ: Mandya | ಠಾಣೆಯಲ್ಲೇ ಪೊಲೀಸ್ ಪೇದೆ ಮೇಲೆ ವ್ಯಕ್ತಿಯಿಂದ ಹಲ್ಲೆ

    ಏಳು ತಿಂಗಳ ಹಿಂದೆ ಮೆಹ್ತಾಬ್ ಎಂಬ ಯುವಕನೊಂದಿಗೆ ವಧುವಿನ ವಿವಾಹ ನಿಶ್ಚಯವಾಗಿತ್ತು. ಡಿ.22 ರಂದು ಕಾರ್ಯಕ್ರಮಗಳು ಪ್ರಾರಂಭವಾಗಿದ್ದವು. ಈ ವೇಳೆ ವರನ ಕಡೆಯವರಿಗೆ ಊಟವನ್ನು ತಡವಾಗಿ ಬಡಿಸಿದ್ದಕ್ಕೆ ಗಲಾಟೆ ಮಾಡಿದ್ದಾರೆ. ವಧುವಿನ ಕಡೆಯವರು ವರನ ಕುಟುಂಬಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಪಟ್ಟರು. 1.5 ಲಕ್ಷ ರೂ. ವರದಕ್ಷಿಣೆ ಸೇರಿದಂತೆ 7 ಲಕ್ಷ ರೂ. ಆರ್ಥಿಕ ನಷ್ಟವನ್ನು ಹೇಳಿಕೊಂಡರು. ಆದರೆ ವರನ ಕಡೆಯವರು ವಧುವಿನ ಮನೆಯವರನ್ನು ದೂಷಿಸುತ್ತಾ ಅಲ್ಲಿಂದ ಹೊರನಡೆದಿದ್ದಾರೆ.

    ಬಳಿಕ ವರ ಬೇರೆ ಯುವತಿಯನ್ನು ಮದುವೆಯಾಗಿರುವುದನ್ನು ತಿಳಿದು ವಧು ಇಂಡಸ್ಟ್ರಿಯಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಆದರೆ ವರನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಾಗ ಡಿ.24 ರಂದು ಪೊಲೀಸ್ ವರಿಷ್ಠಾಧಿಕಾರಿಗೆ ವಧು ಮನವಿ ಮಾಡಿಕೊಂಡಿದ್ದಾರೆ. ಆರ್ಥಿಕ ನಷ್ಟ ಹಾಗೂ ವರನ ಕಡೆಯ ಐದು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

    ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಭರವಸೆ ನೀಡಿದ್ದು, ಪೊಲೀಸರಿಗೆ ವರನ ಕುಟುಂಬಸ್ಥರನ್ನು ಸಂಪರ್ಕಿಸುವAತೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಮನಮೋಹನ್ ಸಿಂಗ್‌ಗೆ ಕೇಂದ್ರ ಸರ್ಕಾರದಿಂದ ಅವಮಾನ – ರಾಹುಲ್ ಗಾಂಧಿ ಆರೋಪ

  • ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    ಇನ್ಸ್ಟಾದಲ್ಲೇ 3 ವರ್ಷ ಲವ್; ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್ ಮಾಡಿ ವಧು ಎಸ್ಕೇಪ್!

    – ದುಬೈನಿಂದ ಬಂದ ವರನಿಗೆ ಶಾಕ್

    ಚಂಡೀಗಢ: 3 ವರ್ಷದ ಹಿಂದೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ವಿವಾಹವಾಗಲು ಸಕಲ ಸಿದ್ಧತೆಗಳೊಂದಿಗೆ ಮದುಮಗಳು ತಿಳಿಸಿದ್ದ ಜಾಗಕ್ಕೆ ಬಂದಿದ್ದ ವರನಿಗೆ (Groom) ದೊಡ್ಡ ಆಘಾತವೇ ಉಂಟಾಗಿತ್ತು. ಇತ್ತ ವಧುವೂ ಇಲ್ಲ ಅತ್ತ ಆಕೆ ಹೇಳಿದ್ದ ಕಲ್ಯಾಣ ಮಂಟಪವೂ ಇಲ್ಲವಾದ್ದರಿಂದ ಇದೀಗ ವರ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿರುವ ಘಟನೆ ಪಂಜಾಬ್‌ನ (Punjab) ಮೋಗಾದಲ್ಲಿ ನಡೆದಿದೆ.

    ಮನ್‌ಪ್ರೀತ್ ಕೌರ್ ಎಂಬ ಯುವತಿ ಹಾಗೂ ಜಲಂಧರ್ ಮೂಲದ ಯುವಕ ದೀಪಕ್ ಕುಮಾರ್ (24) ಇನ್ಸ್ಟಾದಲ್ಲಿ ಪರಿಚಯವಾಗಿ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಒಮ್ಮೆಯೂ ಮುಖಾಮುಖಿಯಾಗಿ ಭೇಟಿಯಾಗಿಲ್ಲ. ಆನ್‌ಲೈನ್‌ನಲ್ಲೇ ವಧು-ವರರ ಕುಟುಂಬಸ್ಥರು ವಿವಾಹ ನಿಶ್ಚಯವೂ ಮಾಡಿಕೊಂಡು ಮದುವೆಗೆ ದಿನಾಂಕ ಕೂಡ ಗೊತ್ತುಪಡಿಸಿ, ಕಲ್ಯಾಣ ಮಂಟಪ ಯಾವುದು ಎಂಬುದನ್ನೂ ಕೂಡ ನಿರ್ಧರಿಸಿದ್ದರು. ಅದರಂತೆಯೇ ವರ ದೀಪಕ್ ಕಳೆದ ತಿಂಗಳು ದುಬೈನಿಂದ (Dubai) ಆಗಮಿಸಿ ಕುಟುಂಬಸ್ಥರೊಂದಿಗೆ ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ. ಇದನ್ನೂ ಓದಿ: ಗಂಡಸರಿಗೂ ಫ್ರೀ ಬಸ್‌ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿದ್ದರಾಮಯ್ಯ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಮದುವೆಯ ದಿನ ಜಲಂಧರ್‌ನಿಂದ ಮಂಡಿಯಾಲಿ ಗ್ರಾಮದಿಂದ ಮೋಗಾದಲ್ಲಿನ ಮದುಮಗಳು ಹೇಳಿದ ಸ್ಥಳಕ್ಕೆ ವರ ಹಾಗೂ ಆತನ ಕುಟುಂಬಸ್ಥರು ತೆರಳಿದ್ದರು. ಮೋಗಾ ತಲುಪಿದ ಬಳಿಕ ತಮ್ಮ ಕಡೆಯ ಕೆಲವರು ಅಲ್ಲಿಗೆ ಬಂದು ನಿಮ್ಮನ್ನು ಮದುವೆ ಹಾಲ್‌ಗೆ ಕರೆದುಕೊಂಡು ಬರುತ್ತಾರೆ ಎಂದು ವಧು ತಿಳಿಸಿದ್ದಳು. ಆದರೆ ಬೆಳಗ್ಗೆಯಿಂದ ಸಂಜೆಯವರೆಗೆ ಕಾದರೂ ಹುಡುಗಿಯ ಕಡೆಯವರ ಪತ್ತೆಯಿರಲಿಲ್ಲ. ಬಳಿಕ ತಾವೇ ಕಲ್ಯಾಣ ಮಂಟಪ ಹುಡಕುವ ಸಲುವಾಗಿ ಸ್ಥಳಿಯರಲ್ಲಿ ‘ರೋಸ್ ಗಾರ್ಡನ್ ಪ್ಯಾಲೇಸ್’ ಎಲ್ಲಿದೆ ಎಂದು ಕೇಳಿದಾಗ ಅಂತಹದೊಂದು ಜಾಗವೇ ಇಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ. ತಾನು ಮೋಸ ಹೋಗಿರುವುದನ್ನು ಅರಿತ ಮದುಮಗ ಪೊಲೀಸ್ ಠಾಣೆಗೆ ತೆರಳಿ ವಧು ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಿದ್ದಾನೆ. ಇದನ್ನೂ ಓದಿ: ವಿಜಯೇಂದ್ರರನ್ನ ಪಕ್ಷದ ಅಧ್ಯಕ್ಷರಾಗಿ ಮಾಡಿರೋದು ಹೈಕಮಾಂಡ್‌ಗೆ ಔಚಿತ್ಯ: ರಾಧಾ ಮೋಹನದಾಸ್

    ಮದುವೆ ಸಿಧ್ಧತೆಗಾಗಿ 50,000 ಹಣ ಪಡೆದಿದ್ದ ವಧು:
    ತಾನು ದುಬೈನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಇನ್‌ಸ್ಟಾಗ್ರಾಂನಲ್ಲಿ ಕಳೆದ ಮೂರು ವರ್ಷದಿಂದ ಕೌರ್ ಜತೆಗೆ ಸಂಪರ್ಕದಲ್ಲಿದ್ದೆ ಎಂದು ದೀಪಕ್ ತಿಳಿಸಿದ್ದಾನೆ. ಆಕೆ ಆತನೊಂದಿಗೆ ತನ್ನ ಫೋಟೋಗಳನ್ನು ಹಂಚಿಕೊಂಡಿದ್ದಳು. ಆದರೆ ಎಂದಿಗೂ ಪರಸ್ಪರ ಭೇಟಿ ಮಾಡಿರಲಿಲ್ಲ. ಇಬ್ಬರೂ ಮದುವೆಯಾಗುವುದಾಗಿ ತೀರ್ಮಾನಿಸಿದ ನಂತರ ಫೋನ್ ಮೂಲಕವೇ ಎರಡೂ ಕುಟುಂಬದ ಹಿರಿಯರು ಮಾತುಕತೆಗಳನ್ನು ನಡೆಸಿದ್ದರು. ಮದುವೆ ಸಿದ್ಧತೆಗಾಗಿ ಆಕೆಗೆ ದಿನೇಶ್ 50 ಸಾವಿರ ರೂ ಹಣ ಸಹ ಕಳುಹಿಸಿದ್ದ. ಇದನ್ನೂ ಓದಿ: ಇಷ್ಟು ಕಾಲ ಸಹಿಸಿದ್ದೇವೆ, ಇನ್ಮುಂದೆ ಸಹಿಸಲು ಆಗಲ್ಲ: ಯತ್ನಾಳ್ ವಿರುದ್ಧ ವಿಜಯೇಂದ್ರ ಆಕ್ರೋಶ

    ಮದುವೆ ಸ್ಥಳಕ್ಕೆ 150 ಬರಾತಿಗಳ ಜತೆ ತೆರಳಿದ್ದಲ್ಲದೆ, ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದೆವು. ಕ್ಯಾಟರಿಂಗ್ ಮತ್ತು ವಿಡಿಯೋಗ್ರಾಫರ್‌ಗೆ ಮುಂಗಡ ಹಣ ಕೂಡ ಪಾವತಿಸಿದ್ದೆವು ಎಂದು ದೀಪಕ್‌ನ ತಂದೆ ಪ್ರೇಮ್ ಚಂದ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ಶಿಸ್ತು ಸಮಿತಿಗೆ ಮಾತ್ರ ಶಾಸಕರ ವಿರುದ್ಧ ಕ್ರಮದ ಅಧಿಕಾರ: ಸಿ.ಟಿ ರವಿ

    ತಾನು ಮೋಗಾದವಳಾಗಿದ್ದು, ಫಿರೋಜ್‌ಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ಮನ್‌ಪ್ರೀತ್ ಕೌರ್ ಹೇಳಿಕೊಂಡಿದ್ದಳು. ಮದುಮಗಳ ಫೋನ್ ಸ್ವಿಚ್ ಆಫ್ ಆಗಿದ್ದು, ಆಕೆಯನ್ನು ಸಂಪರ್ಕಿಸುವುದು ವರನ ಕಡೆಯವರಿಗೆ ಸಾಧ್ಯವಾಗುತ್ತಿಲ್ಲ ಎಂದು ದೀಪಕ್ ಕುಮಾರ್ ಕಡೆಯಿಂದ ದೂರು ದಾಖಲಿಸಲಾಗಿದೆ ಎಂಬುದಾಗಿ ಮೋಗಾದ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹರ್ಜಿಂದರ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು – ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

  • ರೈಲು ವಿಳಂಬ – ಸರಿಯಾದ ಸಮಯಕ್ಕೆ ವರನನ್ನು ಮದುವೆಗೆ ಕರೆದೊಯ್ದ ರೈಲ್ವೇ ಇಲಾಖೆ

    ರೈಲು ವಿಳಂಬ – ಸರಿಯಾದ ಸಮಯಕ್ಕೆ ವರನನ್ನು ಮದುವೆಗೆ ಕರೆದೊಯ್ದ ರೈಲ್ವೇ ಇಲಾಖೆ

    ಮುಂಬೈ: ರೈಲು ಬರಲು ತಡವಾದ ಹಿನ್ನೆಲೆ ನಿಗದಿ ಪಡಿಸಿದ ಮೂಹೂರ್ತದಲ್ಲಿ ಮಂಟಪಕ್ಕೆ ತಲುಪಬೇಕಿದ್ದ ವರನನ್ನು ರೈಲ್ವೆ ಇಲಾಖೆ (Railway Department) ಸರಿಯಾದ ಸಮಯಕ್ಕೆ ತಲುಪಿಸಿರುವ ಘಟನೆ ನಡೆದಿದೆ.

    ಮುಂಬೈ (Mumbai) ಮೂಲದ ವರ ಚಂದ್ರಶೇಖರ್ ವಾಘ್ ಹಾಗೂ ಅವರ ಕುಟುಂಬಸ್ಥರು ಗುವಾಹಟಿಯಲ್ಲಿ (Guwahati) ನಿಗದಿಯಾಗಿದ್ದ ಮದುವೆಗಾಗಿ ಮುಂಬೈನ ಕಲ್ಯಾಣ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮುಂಬೈನಿಂದ ಗುವಾಹಟಿಗೆ ಹೊರಟಿದ್ದ ಗೀತಾಂಜಲಿ ಎಕ್ಸಪ್ರೆಸ್‌ (Geetanjali Express) ಪಶ್ಚಿಮ ಬಂಗಾಳದ (West Bengal) ಹೌರಾ ಬಳಿ ಇರುವ ಸಾಂತರಗಾಭಿ ನಿಲ್ದಾಣಕ್ಕೆ 4 ಗಂಟೆ ತಡವಾಗಿ ತಲುಪಿದೆ.ಇದನ್ನೂ ಓದಿ: ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ – ಆಯ್ದ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ

    ಇದರಿಂದ ಆತಂಕಗೊಂಡ ವರ ಕೂಡಲೇ ತನ್ನ ಎಕ್ಸ್ (X) ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರೈಲ್ವೇ ಇಲಾಖೆಗೆ ಮನವಿ ಮಾಡಿಕೊಂಡಿದ್ದು, ಕೂಡಲೇ ಇಲಾಖೆ ಆತನ ಮನವಿಗೆ ಸ್ಪಂದಿಸಿ, ಮುಹೂರ್ತದ ಸಮಯಕ್ಕೆ ಸರಿಯಾಗಿ ಮಂಟಪಕ್ಕೆ ತಲುಪುವಂತೆ ಸಹಾಯ ಮಾಡಿದೆ.

    ಘಟನೆ ಏನು?
    ನ.14ರಂದು ಚಂದ್ರಶೇಖರ್ ವಾಘ 35 ಜನ ಕುಟುಂಬಸ್ಥರೊಂದಿಗೆ ಮುಂಬೈನ ಕಲ್ಯಾಣ ನಿಲ್ದಾಣದಿಂದ (Kalyan Railway Station) ಗುವಾಹಟಿಗೆ ಹೋಗಬೇಕಿತ್ತು. ಕಲ್ಯಾಣ ರೈಲು ನಿಲ್ದಾಣದಿಂದ ಬೆಳಿಗ್ಗೆ 6:55ಕ್ಕೆ ಗೀತಾಂಜಲಿ ಎಕ್ಸಪ್ರೆಸ್‌ ರೈಲು ಹತ್ತಿ, ನ.15ರ ಮಧ್ಯಾಹ್ನ 1:05ಕ್ಕೆ ಪಶ್ಚಿಮ ಬಂಗಾಳದ ಹೌರಾ ಜಂಕ್ಷನ್ (Howrah Juntion) ತಲುಪಬೇಕಿತ್ತು. ಅಲ್ಲಿಂದ ಸಂಜೆ 4.05ಕ್ಕೆ ಇರುವ ಸರೈಘಾಟ್ ಎಕ್ಸಪ್ರೆಸ್‌ ರೈಲು ಹತ್ತಿ ಗುವಾಹಟಿ ತಲುಪುವ ಯೋಜನೆ ಅವರದಾಗಿತ್ತು. ಆದರೆ ಗೀತಾಂಜಲಿ ಎಕ್ಸಪ್ರೆಸ್‌ ರೈಲು ಹೌರಾ ನಿಲ್ದಾಣದಿಂದ 15 ಕಿ.ಮೀ ದೂರದಲ್ಲಿರುವ ಸಾಂತರಗಾಛಿ ರೈಲು ನಿಲ್ದಾಣಕ್ಕೆ ತಲುಪಬೇಕಾಗಿದ್ದ ಸಮಯಕ್ಕಿಂತ 4 ಗಂಟೆ ತಡವಾಗಿ ಬಂದಿತ್ತು. ಇದರಿಂದ ವಿಚಲಿತರಾದ ವರ ಕೂಡಲೇ `ಎಕ್ಸ್’ನಲ್ಲಿ ತಮ್ಮ ಪರಿಸ್ಥಿತಿಯನ್ನು ವಿವರಿಸಿ, ನೆರವು ನೀಡುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಅಧಿಕಾರಿಗಳನ್ನು ಟ್ಯಾಗ್ ಮಾಡಿ ಮನವಿ ಮಾಡಿದ್ದರು.

    ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಗೀತಾಂಜಲಿ ಎಕ್ಸ್ಪ್ರೆಸ್ ರೈಲು ಬರುವವರೆಗೂ ಸರೈಘಾಟ್ ಎಕ್ಸಪ್ರೆಸ್‌ ರೈಲನ್ನು ಹೌರಾ ಜಂಕ್ಷನ್‌ನಲ್ಲಿಯೇ ನಿಲ್ಲಿಸಿದರು. ಲೋಕೊ ಪೈಲಟ್ ಗೀತಾಂಜಲಿ ಎಕ್ಸಪ್ರೆಸ್‌ ರೈಲಿನ ವೇಗವನ್ನು ಹೆಚ್ಚಿಸಿದರು.

    ರೈಲು ತಲುಪಿದ ತಕ್ಷಣ ರೈಲ್ವೆ ಸಿಬ್ಬಂದಿಗಳು ತಕ್ಷಣವೇ ವರನ ಕುಟುಂಬ ಮತ್ತು ಅವರ ಬ್ಯಾಗುಗಳನ್ನು ಇನ್ನೊಂದು ಪ್ಲಾಟ್‌ಫಾರ್ಮ್ಗೆ ಸಾಗಿಸಲು ನೆರವಾದರು. ವಯೋವೃದ್ಧರಿಗಾಗಿ ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ರೈಲು ಸಂಜೆ 4:08 ನಿಮಿಷಕ್ಕೆ ಹೌರಾ ನಿಲ್ದಾಣ ತಲುಪಿತು. ಸರೈಘಾಟ್ ಎಕ್ಸಪ್ರೆಸ್‌ ಸಂಜೆ 4.19ಕ್ಕೆ ಹೊರಟು ಶನಿವಾರ ಬೆಳಿಗ್ಗೆ 10.05ಕ್ಕೆ ಸರಿಯಾಗಿ ಗುವಾಹಟಿ ತಲುಪಿತು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

    ಸರಿಯಾಗಿ ಸಮಯಕ್ಕೆ ತಲುಪಲು ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟು ಸಹಾಯ ಮಾಡಿದ ರೈಲ್ವೆ ಇಲಾಖೆ ಹಾಗೂ ಅಧಿಕಾರಿಗಳಿಗೆ ಚಂದ್ರಶೇಖರ್ ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ: ಪಿಡಿಓ ಪ್ರಶ್ನೆ ಪತ್ರಿಕೆ ಸೋರಿಕೆ? – ರಾಯಚೂರಿನಲ್ಲಿ ರಸ್ತೆ ಬಂದ್ ಮಾಡಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

  • ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

    ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಹೊಡೆದಾಟ – ನಿನ್ನೆ ವಧು, ಇಂದು ವರ ಸಾವು!

    – ಕೋಲಾರ: ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವಜೋಡಿ

    ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು (Bride) ಸಾವನ್ನಪ್ಪಿದ್ದಳು. ಗುರುವಾರ (ಇಂದು) ಚಿಕಿತ್ಸೆ ಫಲಕಾರಿಯಾಗದೇ ವರನೂ (Groom) ಸಾವನ್ನಪ್ಪಿರುವ ಘಟನೆ ನಡೆದಿದೆ.

    ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ (20) ಬುಧವಾರ ಕೋಲಾರದಲ್ಲಿ (Kolara) ಮೃತಪಟ್ಟಿದ್ದಳು. ಚಂಬರಸನಹಳ್ಳಿಯ ನವೀನ್ (28) ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ (Bengaluru) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ದಾಖಲಾಗಿದ್ದ ನವೀನ್‌ ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ರಾತ್ರಿ ರವಾನಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಅಷ್ಟಕ್ಕೂ ಮಾರಾಮಾರಿಯಾಗಿದ್ದು ಏಕೆ?
    ನವೀನ್ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿ ಮದುವೆಯಾಗಿದ್ದರು. ಬುಧವಾರ ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಮಿಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಳು. ನವೀನ್ ಸ್ಥಿತಿ ಚಿಂತಾಜನಕವಾಗಿದ್ದರಿಂದ ಆತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ವರನೂ ಸಾವನ್ನಪ್ಪಿದ್ದಾನೆ.

    ಘಟನಾ ಸ್ಥಳಕ್ಕೆ ಬುಧವಾರ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದರು.

    ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ:
    ಇಬ್ಬರ ಸಾವಿನ ಕುರಿತು ಪ್ರತಿಕ್ರಿಯೆ ನೀಡಿರುವ ಮೃತ ಲಿಖಿತಶ್ರೀ ಕುಟುಂಬಸ್ಥರು, ನವಜೋಡಿಗಳು ಇಬ್ಬರೂ ಅನ್ಯೂನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡರದಾಡಿಕೊಂಡಿರುವುದೇ ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ. ನಾವೂ ಮದುವೆಗೆ ಹೋಗಿದ್ದೆವು, ಇಬ್ಬರೂ ತುಂಬಾ ಖುಷಿಯಿಂದಲೇ ಇದ್ದರು. ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ಇದೆ ಅಂತಾ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

  • ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

    ಬೆಳಗ್ಗೆ ಮದುವೆ, ಮಧ್ಯಾಹ್ನ ಮಚ್ಚಿನಿಂದ ಮಾರಾಮಾರಿ.. ವಧು ಸಾವು, ವರ ಗಂಭೀರ!

    – ಕೋಲಾರದಲ್ಲಿ ಘಟನೆ; ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ನವಜೋಡಿ

    ಕೋಲಾರ: ಪರಸ್ಪರ ಪ್ರೀತಿಸಿ ಒಪ್ಪಿ ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಾಳೆ. ಮದುಮಗನ ಸ್ಥಿತಿ ಚಿಂತಾಜನಕವಾಗಿದೆ.

    ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ ಮೃತಪಟ್ಟಿದ್ದಾಳೆ. ಚಂಬರಸನಹಳ್ಳಿಯ ನವೀನ್‌ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಪಬ್‍ನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನ – ನಾಲ್ವರು ಕಾಮುಕರು ಅರೆಸ್ಟ್

    ನಡೆದಿದ್ದೇನು?
    ನವೀನ್‌ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದರು. ಇಂದು ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಂಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ.

    ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಾಳೆ. ನವೀನ್‌ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್!

    ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಇಂದು ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ.

  • ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ಮತದಾನ ಮಾಡಿದ ವರ

    ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ಮತದಾನ ಮಾಡಿದ ವರ

    ಚಾಮರಾಜನಗರ: ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ವರ (Groom) ಮತದಾನ (Voting) ಮಾಡಿದ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.

    ವಿವಾಹಕ್ಕೂ (Marriage) ಮೊದಲು ವರ ಚೇತನ್ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಇಂದು ದೀಪಿಕಾ ಎಂಬ ವಧು ಜೊತೆ ವರ ಚೇತನ್ ಅವರ ವಿವಾಹ ನಿಗದಿಯಾಗಿತ್ತು. 9 ಗಂಟೆಗೆ ಧಾರಾ ಮುಹೂರ್ತ ಇದ್ದ ಹಿನ್ನೆಲೆ ಅದಕ್ಕೂ ಮೊದಲು ವರ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 9.21% ಮತದಾನ – ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಚೇತನ್, ನನ್ನ ಹಕ್ಕನ್ನು ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಯಾರೂ ಕೂಡ ಮತದಾನದಿಂದ ವಂಚಿತರಾಗಬಾರದು. ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ ಎಂದರು. ಇದನ್ನೂ ಓದಿ: ಹಸೆಮಣೆ ಏರುವ ಮುನ್ನ ಮದುಮಗಳಿಂದ ಮೊದಲ ಮತದಾನ

  • ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಎಳೆದೊಯ್ಯಲು ಯತ್ನಿಸಿದ ಆಕೆಯ ಕುಟುಂಬ!

    ಅಮರಾವತಿ: ಆಂಧ್ರಪ್ರದೇಶದ (Andhrapradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಧುವಿನ ಕುಟುಂಬದವರೇ ಆಕೆಯನ್ನು ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲು ಪ್ರಯತ್ನಿಸಿದ ಘಟನೆ ನಡೆದಿದೆ.

    ಈ ಘಟನೆ ಕಡಿಯಂ ಪ್ರದೇಶದಲ್ಲಿ ನಡೆದಿದ್ದು, ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹ ಮಂಟಪಕ್ಕೆ ಏಕಾಏಕಿ ನುಗ್ಗಿದ ವಧುವಿನ ಕುಟುಂಬ ಆಕೆಯನ್ನು ಅಪಹರಣ ಮಾಡಲು ಯತ್ನಿಸಿದೆ. ಅಲ್ಲದೇ ಅಪಹರಣ ತಡೆಯಲು ಬಂದವರ ಮೇಲೆ ಮೆಣಸಿನ ಪುಡಿಯನ್ನು ಎರಚಿದ್ದಾರೆ.

    ವಧು ಸ್ನೇಹಾಳ ತಾಯಿ, ಸಹೋದರ ಮತ್ತು ಸೋದರಸಂಬಂಧಿಗಳು ಆಕೆಯನ್ನು ಸ್ಥಳದಿಂದ ಬಲವಂತವಾಗಿ ಎಳೆದೊಯ್ಯಲು ಯತ್ನಿದ್ದಾರೆ. ಆದರೆ ಸ್ನೇಹಾ ಹರಸಾಹಪಟ್ಟು ಅವರ ಕೈಯಿಂದ ತಪ್ಪಿಸಿಕೊಂಡಿದ್ದಾಳೆ. ಇದರ ವೀಡಿಯೋ ಮಂಟಪದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಅಪಹರಣ ಯತ್ನವನ್ನು ವರ, ಆತನ ಕುಟುಂಬದವರು ಹಾಗೂ ಸ್ನೇಹಿತರು ವಿಫಲಗೊಳಿಸಿದ್ದಾರೆ. ಗಲಾಟೆಯಲ್ಲಿ ವರನ ಸ್ನೇಹಿತರೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಸ್ನೇಹಾ ಅವರ ಕುಟುಂಬವು ಈಗ ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದೆ. ಈ ಮದುವೆಗೆ ಅವರ ವಿರೋಧದ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಇಂದು ಮಧ್ಯರಾತ್ರಿ ವಿಶ್ವವಿಖ್ಯಾತ ಐತಿಹಾಸಿಕ ಕರಗೋತ್ಸವಕ್ಕೆ ವಿದ್ಯುಕ್ತ ಚಾಲನೆ

    ಘಟನೆ ಕುರಿತು ಮಾತನಾಡಿದ ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್, ವೀರಬಾಬು ಕುಟುಂಬದವರು ಸ್ನೇಹಾ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

  • ತಾಳಿ ಕಟ್ಟಿದ ಬಳಿಕ ಅನಾರೋಗ್ಯ ಕಾರಣ ಕೊಟ್ಟು ವರ ಎಸ್ಕೇಪ್

    ತಾಳಿ ಕಟ್ಟಿದ ಬಳಿಕ ಅನಾರೋಗ್ಯ ಕಾರಣ ಕೊಟ್ಟು ವರ ಎಸ್ಕೇಪ್

    ಮಂಗಳೂರು: ತಾಳಿ ಕಟ್ಟಿದ ಬಳಿಕ ವರನೊಬ್ಬ ಅನಾರೋಗ್ಯ ಕಾರಣ ಕೊಟ್ಟು ಎಸ್ಕೇಪ್ ಆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ.

    ಕೇರಳದ (Kerala) ಕೊಝಿಕ್ಕೋಡ್ ಮೂಲದ ಅಕ್ಷಯ್ ಮದುವೆ ಮಂಗಳೂರು (Mangaluru) ಮೂಲದ ಯುವತಿ ಜೊತೆ ನಡೆಯಬೇಕಿತ್ತು. ಅಂತೆಯೇ ಯುವತಿ ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ ಗೆ ಬಂದಿದ್ದಾರೆ. ಆದರೆ ವರ ತಾಳಿ ಕಟ್ಟಿದ ಬಳಿಕ ಭಾರೀ ಹೈಡ್ರಾಮಾ ನಡೆಸಿದ್ದಾನೆ.

    ನಡೆದಿದ್ದೇನು..?: ಕಲ್ಯಾಣ ಮಂಟಪದಲ್ಲಿ ಅಕ್ಷಯ್ ಮಂಗಳೂರು ಮೂಲದ ಯುವತಿ ಜೊತೆ ಮದುವೆಯಾಗುತ್ತಿರುವ ವಿಚಾರ ಮಾಜಿ ಪ್ರೇಯಸಿ ಗಮನಕ್ಕೆ ಬಂದಿದೆ. ಹೀಗಾಗಿ ಮಾಜಿ ಪ್ರೇಯಸಿ ಕಲ್ಯಾಣಮಂಟಪಕ್ಕೆ ಬಂದು ಕ್ಯಾತೆ ತೆಗೆದಿದ್ದಾಳೆ. ಈ ಹಿನ್ನೆಲೆಯಲ್ಲಿ ವರ, ಅನಾರೋಗ್ಯ ಕಾರಣ ಮುಂದಿಟ್ಟಿದ್ದಾನೆ. ಮದುವೆಗೆ ಬಂದಿದ್ದ ಸಂಬಂಧಿಕರಿಗೆ ಕಿಡ್ನಿಯಲ್ಲಿ ಕಲ್ಲುಂಟಾಗಿ ಆಸ್ಪತ್ರೆಗೆ ದಾಖಲು ಆಗುತ್ತೇವೆ ಅಂತ ಹೇಳಿದ್ದಾನೆ. ಅಲ್ಲದೇ ಸಂಬಂಧಿಕರೇ ವರನನ್ನು ಕಲ್ಯಾಣ ಮಂಟಪದಿಂದ (Kalyana Mantapa) ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಸಚಿವರ ಡಿನ್ನರ್‌ ಪಾಲಿಟಿಕ್ಸ್‌ – ಒಂದೂವರೆಗೆ ಗಂಟೆ ಏನು ಚರ್ಚೆ ನಡೆದಿದೆ?

    ಅಕ್ಷಯ್ ಮದುವೆಗೆ ಮಾಜಿ ಪ್ರಿಯತಮೆ ವಿರೋಧ: ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಅಕ್ಷಯ್ ಪರಿಚಯವಾಗಿದೆ. ಈ ಪರಿಚಯವು ಪ್ರೀತಿಗೆ ತಿರುಗಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪ ಕೇಳಿಬಂದಿದೆ. ಇದನ್ನೂ ಓದಿ; ಬಿಜೆಪಿ ನಾಯಕರ ‘ನನ್ನನ್ನೂ ಬಂಧಿಸಿ’ ಪೋಸ್ಟರ್‌ ಅಭಿಯಾನಕ್ಕೆ ಕಾಂಗ್ರೆಸ್‌ ಠಕ್ಕರ್‌

    ಈ ಸಂಬಂಧ ಯುವತಿಯು ಕೇರಳದ ಪೊಲೀಸ್ ಠಾಣೆಯಲ್ಲಿ ಡಿ.26ಕ್ಕೆ ಅತ್ಯಾಚಾರ ದೂರು ದಾಖಲಿಸಿದ್ದರು. ಆರೋಪಿ ಅಕ್ಷಯ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್ ಗೆ ವಿವಾಹ ನಿಶ್ಚಯವಾಗಿದೆ. ವಿಷಯ ತಿಳಿದು ಆಗಮಿಸಿದ ಮಾಜಿ ಪ್ರಿಯತಮೆ ಹಾಲ್ ಮುಂಭಾಗ ಹೈಡ್ರಾಮ ಮಾಡಿದ್ದಾಳೆ.