Tag: Group friction

  • ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ – ಲಾಠಿ ಚಾರ್ಜ್ ಮಾಡೋ ವೇಳೆ ಬಯಲಾಯ್ತು ಮತ್ತೊಂದು ದಂಧೆ

    ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ – ಲಾಠಿ ಚಾರ್ಜ್ ಮಾಡೋ ವೇಳೆ ಬಯಲಾಯ್ತು ಮತ್ತೊಂದು ದಂಧೆ

    ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದ ಘಟನೆ ವಿಜಯಪುರದ ನಗರದ ಹರಣಶಿಕಾರಿ ಕಾಲೊನಿಯಲ್ಲಿ ನಡೆದಿದೆ.

    ಘಟನೆ ವೇಳೆ ಎರಡು ಗುಂಪಿನವರು ಪರಸ್ಪರ ಮಿನಿ ಬಾಂಬ್ ಬಳಸಿಕೊಂಡು ಗಲಾಟೆ ಮಾಡಿದ್ದಾರೆ. ಅಲ್ಲದೆ ಪರಸ್ಪರ ಕಲ್ಲು ತೂರಾಟವನ್ನು ಮಾಡಿದ್ದಾರೆ. ಈ ವೇಳೆ ಮಾಹಿತಿ ಪಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಈ ಸಂಬಂಧ 20 ಜನರನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಎಸ್‍ಪಿ ಅಶೋಕ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿದ್ದು, ಗಲಾಟೆಯಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

    ಪತ್ತೆಯಾದ ಆಕ್ರಮ ಕಳ್ಳಭಟ್ಟಿ ದಂಧೆ: ಗುಂಪು ಘರ್ಷಣೆಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ವೇಳ ಆ ಪ್ರದೇಶದಲ್ಲಿ ಕಳ್ಳಭಟ್ಟಿ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕಾಲೋನಿಯ ನಾಲ್ಕೈದು ಕಡೆಗಳಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದು, ಈ ವೇಳೆ ಕಳ್ಳಭಟ್ಟಿ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದು ನಾಶ ಪಡೆದು ನಾಶ ಮಾಡಿದ್ದಾರೆ.

    https://www.youtube.com/watch?v=9WcJYY7DQ7g

  • ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

    ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗುಂಪು ಘರ್ಷಣೆ- ಪರಸ್ಪರ ಕಲ್ಲು ತೂರಾಟ

    ಚಿಕ್ಕೋಡಿ: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

    ಎರಡು ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ 4 ಕಾರುಗಳು ಜಖಂಗೊಂಡಿವೆ. ಅಲ್ಲದೇ 5 ಕ್ಕೂ ಹೆಚ್ಚು ಅಂಗಡಿಗಳು ಹಾಗೂ ಮನೆಗಳ ಗಾಜುಗಳನ್ನ ಧ್ವಂಸಗೊಳಿಸಲಾಗಿದೆ.

     

    ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆ ವೇಳೆ ಸವರ್ಣೀಯರ ಕೇರಿಯಲ್ಲಿ ಹೋದ ಸಂದರ್ಭದಲ್ಲಿ ಎರಡು ಗುಂಪುಗಳ ನಡೆದ ವಾಗ್ವಾದವೇ ಘಟನೆಗೆ ಕಾರಣ ಎನ್ನಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಅರೆ ಸೇನಾ ಪಡೆ ಸೇರಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

    ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗಲಾಟೆಯಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.