ದಾವಣಗೆರೆ: ಗೃಹಲಕ್ಷ್ಮಿ (Gruha Lakshmi) ಯೋಜನೆಯ ಹಣವನ್ನು (Money) ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನೇ (Wife) ಕೊಲೆ ಮಾಡಿದ ಘಟನೆ ಜಗಳೂರು ತಾಲೂಕಿನ ಉಜ್ಜಪ್ಪರವಡೇರಹಳ್ಳಿಯಲ್ಲಿ ನಡೆದಿದೆ.
ಹತ್ಯೆಗೀಡಾದ ಮಹಿಳೆಯನ್ನು ಸತ್ಯಮ್ಮ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಣ್ಣಪ್ಪ ಎಂದು ಗುರುತಿಸಲಾಗಿದೆ. ನೆಲಕ್ಕೆ ತಾಗುವಂತಿದ್ದ ವಿದ್ಯುತ್ ತಂತಿಯತ್ತ ಸತ್ಯಮ್ಮಳನ್ನು ನೂಕಿ ಆರೋಪಿ ಕೊಲೆ ಮಾಡಿದ್ದಾನೆ ಎಂದು ಮೃತಳ ಸಹೋದರ ಸತೀಶ್ ಎಂಬವರು ಆರೋಪಿಸಿದ್ದಾರೆ.
ಕೆಲಸ ಇಲ್ಲದೇ ಹಣಕ್ಕೆ ಪರದಾಡುತ್ತಿದ್ದ ಅಣ್ಣಪ್ಪ ಗೃಹಲಕ್ಷ್ಮಿ ಹಣ ಕೊಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಣ ತರಲು ಮಗನೊಂದಿಗೆ ಬ್ಯಾಂಕ್‌ಗೆ ಹೋದ ಸತ್ಯಮ್ಮನನ್ನು ಹಿಂಬಾಲಿಸಿದ್ದ ಅಣ್ಣಪ್ಪ, ಹಣಕ್ಕಾಗಿ ಪತ್ನಿ ಜತೆ ಜಗಳವಾಡಿ, ಹಲ್ಲೆ ಮಾಡಿದ್ದ. ಬಳಿಕ ಪತ್ನಿಯನ್ನು ಊರಿಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಉಜ್ಜಪ್ಪರವಡೇರಹಳ್ಳಿ ಸಮೀಪದ ನಿರ್ಜನ ಪ್ರದೇಶದಲ್ಲಿ ಬೈಕ್‌ನಿಂದ ಇಳಿಸಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಅಲ್ಲದೆ ಕರೆಂಟ್ ಶಾಕ್ ಹೊಡೆದಿದೆ ಎಂದು ಕಥೆ ಕಟ್ಟಿದ್ದ.
ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯಾದಗಿರಿ: ಸರ್ಕಾರದ ಯೋಜನೆಗಳಿಂದ ಜನರ ಖಾತೆಗೆ ಬೀಳುತ್ತಿರುವ ಹಣವನ್ನು ಬ್ಯಾಂಕ್‍ನಿಂದ ಸಾಲಕ್ಕೆ ಜಮೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಖಾನಾಪುರದ ಎಸ್‍ಬಿಐ ಬ್ಯಾಂಕ್ (SBI Bank) ವಿರುದ್ಧ ಕೇಳಿ ಬಂದಿದೆ.
ಗೃಹಲಕ್ಷ್ಮಿ (Gruha Lakshmi), ಅನ್ನಭಾಗ್ಯ, ಪಿಂಚಣಿ, ಪಿಎಂ ಕಿಸಾನ್ ಹಣ ಸೇರಿದಂತೆ ಬೆಳೆ ಪರಿಹಾರದ ಹಣವನ್ನು ಸರ್ಕಾರ ಪಾವತಿ ಮಾಡಿದರೂ ಬ್ಯಾಂಕ್‍ನಲ್ಲಿ ತಡೆಹಿಡಿಯಲಾಗುತ್ತಿದೆ. ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸರ್ಕಾರದ ಆದೇಶ ಇದ್ದರೂ ಸಹ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಇದನ್ನೂ ಓದಿ: ನಾಗಮಂಗಲ ಗಲಭೆಗೆ ತಲೆದಂಡ – ಟೌನ್ ಇನ್ಸ್‌ಪೆಕ್ಟರ್ ಅಮಾನತು
ಹಣ ಕೇಳಲು ಹೋದರೆ ಸಾಲ ತೀರಿಸಿ ಹಣವನ್ನು ತೆಗೆದುಕೊಳ್ಳಿ ಎಂದು ಬ್ಯಾಂಕ್ ಸಿಬ್ಬಂದಿ ಹಾಗೂ ಮ್ಯಾನೇಜರ್ ಧಮ್ಕಿ ಹಾಕುತ್ತಿದ್ದಾರೆ. ಮಗಳ ಚಿಕಿತ್ಸೆಗೆ ಹಣ ಬೇಕು ಎಂದರೂ ಕೊಡುತ್ತಿಲ್ಲ. ನೂರಾರು ಮಹಿಳೆಯರಿಗೆ ಈ ರೀತಿ ಸಮಸ್ಯೆಯಾಗಿದೆ ಎಂದು ಜನ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಹಾಸನ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಚಾಮುಂಡಿ ತಾಯಿಗೂ ಗೃಹಲಕ್ಷ್ಮೀ (Gruha Lakshmi) ಯೋಜನೆಯ 2 ಸಾವಿರ ರೂ. ದುಡ್ಡು ಕೊಟ್ಟು ನಮಗೆ ಶಕ್ತಿ ಕೊಡು ಎಂದು ಕೇಳಿದ್ದಾರೆ. ಆ ಗ್ಯಾರಂಟಿ ಹೇಗೆ ನಡೆಯುತ್ತದೆ ನೋಡೋಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ವ್ಯಂಗ್ಯವಾಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಬಿಜೆಪಿಯವರು ಮಾಡಿರುವ ಎಲ್ಲಾ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ದಿನಾ ತಮಟೆ ಹೊಡೆಯುತ್ತಿದ್ದಾರೆ. ಅವರನ್ನು ತನಿಖೆ ಮಾಡಬೇಡಿ ಎಂದು ಹಿಡಿದುಕೊಂಡಿರುವವರು ಯಾರು? ಬಿಟ್ ಕಾಯಿನ್ ಬಗ್ಗೆಯೂ ತನಿಖೆ ನಡೆಸಲಿ ಎಂದು ಗುಡುಗಿದರು.
ಕಾವೇರಿ ನೀರಿನ ವಿಚಾರವಾಗಿ, ನೀರಾವರಿ ಮಂತ್ರಿಗಳು ಯಾರಿಗೂ ಯಾವುದೇ ಮಾಹಿತಿಯನ್ನು ನೀಡದಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳಿಗೆ ಕರೆ ಮಾಡಿ ಡ್ಯಾಂನಲ್ಲಿರುವ ನೀರಿನ ಸಂಗ್ರಹ, ಹೊರಹರಿವು ಮತ್ತು ಒಳಹರಿವಿನ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ಮಾಹಿತಿ ಕೇಳಿದರೆ ನಮಗೆ ಸಚಿವರಿಂದ ಸೂಚನೆ ಇದೆ ಎನ್ನುತ್ತಿದ್ದಾರೆ. ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: 5 ಬಾರಿ ಮರುಜನ್ಮ ಪಡೆದಿದ್ದೇನೆ, ನನ್ನ ಜೀವನದ ಬಗ್ಗೆ ಕನಿಕರದಿಂದ ನೋಡಿ: ಹೆಚ್‌ಡಿಕೆ ರಿಯಾಕ್ಷನ್
ಬೆಂಗಳೂರು: ಗೃಹಲಕ್ಷ್ಮಿ (Gruha Lakshmi) ಯೋಜನೆಯ ಚಾಲನೆಗೆ ಮೈಸೂರು ನಗರವನ್ನು (Mysuru) ಆಯ್ಕೆ ಮಾಡಿದರ ಹಿಂದೆ ಕಾಂಗ್ರೆಸ್ (Congress) ಮಾಸ್ಟರ್ ಪ್ಲ್ಯಾನ್ ಮಾಡಿದೆ. ಒಂದು ಅದ್ದೂರಿ ಕಾರ್ಯಕ್ರಮದ ಮೂಲಕ ನಾಲ್ಕು ಲೋಕಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣು ಹಾಕಿದೆ.
ಹಳೆ ಮೈಸೂರು (Old Mysuru) ಭಾಗದ ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಲೋಕಸಭಾ ಕ್ಷೇತ್ರವನ್ನು (Lok Sabha Constituency) ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ಕ್ಷೇತ್ರದ ಮತದಾರರ ಒಟ್ಟಿಗೆ ಸೇರಿಸಿ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಮುಂದಾಗಿದೆ. ಇದನ್ನೂ ಓದಿ: ಜೋ ಬೈಡೆನ್ ಸಿಬ್ಬಂದಿಗಾಗಿ ದೆಹಲಿಯ ಹೋಟೆಲ್‌ನಲ್ಲಿ 400 ರೂಮ್ ಬುಕ್
ಕಳೆದ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಹಾಸನದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದರೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸುಮಲತಾಗೆ ಗೆಲುವು ಪಡೆದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.
ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಚಿಂತನೆ ಮಾಡಿದ್ದೇವೆ ಎಂದು ತಿಳಿಸಿದ್ದರು.
ಮೈಸೂರು: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ ಸಚಿವ ಸಂಪುಟ ಉಪಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದೆ. ಸಭೆಯ ಬಳಿಕ ರಾಜ್ಯದಲ್ಲಿ ಬರ ಘೋಷಣೆ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.
ಮೈಸೂರಿನ (Mysuru) ಸರ್ಕಾರಿ ಭವನದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುತ್ತದೆ. ಕೇಂದ್ರ ಸರ್ಕಾರ ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಹಿರಿಯ ನಟ ದಿ.ಎನ್.ಟಿ.ರಾಮರಾವ್ ಸ್ಮರಣಾರ್ಥ 100 ರೂಪಾಯಿ ನಾಣ್ಯ ರಿಲೀಸ್
ಕೆ.ಆರ್.ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡುವ ಬರ್ನ್ ವಾರ್ಡ್ ಉದ್ಘಾಟನೆ ನಡೆಯಲಿದೆ. ಆ.30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 3 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ನಾಲ್ಕನೇ ಗ್ಯಾರಂಟಿಯನ್ನು ಜಾರಿ ಮಾಡಲಿದ್ದೇವೆ. ಈ ಕಾರ್ಯಕ್ರಮಕ್ಕೆ ಒಂದು ಲಕ್ಷ ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿಯವರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ (Gruha Lakshmi) ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮವಾಗಿದೆ. ವರ್ಷದಲ್ಲಿ ಸುಮಾರು 32 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ.ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ. ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮಥ್ರ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ಹಣ ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ. ಉದ್ಯೋಗ ಕೂಡ ಸೃಷ್ಟಿ ಆಗುತ್ತದೆ ಎಂದಿದ್ದಾರೆ.
ಬೆಳಗಾವಿಯಿಂದ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಜಾರಿಯಾಗಲಿದೆ. ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು, ಇಂದು ಕೆಡಿಪಿ ಸಭೆ ನಡೆಸಿದ್ದೇನೆ. ನಾಳೆ ಸುತ್ತೂರು ಮಠ ಹಾಗೂ ಸಿದ್ದಲಿಂಗಪುರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಅಲ್ಲದೇ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ನಾಲ್ಕು ಜಿಲ್ಲೆಗಳು ಸೇರಿ ಕಾರ್ಯಕ್ರಮಗಳನ್ನು ಆಯೋಜಿಸಿದೆ ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಅಶೋಕ ಚಕ್ರವಿಲ್ಲದ ತ್ರಿವರ್ಣ ಧ್ವಜ ಬಳಕೆಗೆ ಚಿಂತನೆ
ಬೆಂಗಳೂರು: ಗಂಡ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಮಾತ್ರ ಗೃಹಲಕ್ಷ್ಮಿ (Gruha lakshmi) ಯೋಜನೆಯ ಹಣ ಸಿಗುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಚಿತ್ರ ವೈರಲ್ ಆಗುತ್ತಿರುವುದು, ಡ್ರಾಫ್ಟ್ ಮಾತ್ರ. ಆದರೆ ಅದರಲ್ಲಿ ಕೆಲವು ಬದಲಾವಣೆ ಮಾಡಲಿದ್ದೇವೆ. ಅದರಲ್ಲಿ ಬ್ಯಾಂಕ್ ಪಾಸ್‍ಬುಕ್ ಸೇರಿಸಲಾಗುವುದು. ಜಾತಿ ಬದಲಿಗೆ ವರ್ಗ ಎಂದು ಬದಲಾಯಿಸಲಾಗುವುದು. 90% ಬಿಪಿಎಲ್ ಕಾರ್ಡ್ ಮಹಿಳೆಯರೇ ಯೋಜನೆಯ ಪ್ರಮುಖ ಫಲಾನುಭವಿಗಳಾಗಲಿದ್ದಾರೆ. ಈ ಬಗ್ಗೆ ಆ. 17 ಅಥವಾ 18ರಂದು ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ: ಐಎಎಸ್ ಅಧಿಕಾರಿ ನಿಯಾಜ್ ಖಾನ್
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಮಗ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ತಾಯಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ ಎಂದು ಹೇಳಿದ್ದರು. ಇದು ರಾಜ್ಯದ ಜನರಲ್ಲಿ ಗೊಂದಲ ಮೂಡಿಸಿತ್ತು. ಈಗ ಸಚಿವೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ಅಸ್ಸಾಂ, ಲಡಾಖ್‍ನಲ್ಲಿ ಕಂಪಿಸಿದ ಭೂಮಿ – ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲು
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಕಾಂಗ್ರೆಸ್‌ನ (Congress) ಬಹು ನಿರೀಕ್ಷಿತ 5 ಗ್ಯಾರಂಟಿಗಳನ್ನು (Guarantee) ಶುಕ್ರವಾರ ಘೋಷಣೆ ಮಾಡಿದ್ದಾರೆ. ಮನೆ ಒಡತಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಬರುವಂತಹ ಗೃಹಲಕ್ಷ್ಮಿ ಯೋಜನೆಯೂ (Gruha Lakshmi Scheme) ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದ್ದು, ಇದು ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, ಮನೆ ಯಜಮಾನಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2,000 ರೂ. ನೀಡುತ್ತೇವೆ. ಇದಕ್ಕಾಗಿ ಮನೆ ಯಜಮಾನಿ ಯಾರು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಹಾಗೂ ಅವರ ಬಳಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಡ್ಡಾಯವಾಗಿ ಇರಬೇಕು ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ:
* ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೊದಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ ಸಲ್ಲಿಸಬೇಕು.
* ಮನೆಯ ಯಜಮಾನಿ ಯಾರು ಎಂಬುದನ್ನು ಆಯಾ ಮನೆಯವರೇ ಉಲ್ಲೇಖಿಸಬೇಕು.
* ಈ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಬೇಕು.
* ಜೂನ್ 15 ರಿಂದ ಜುಲೈ 15 ರ ಅವಧಿಯಲ್ಲಿ ಅರ್ಜಿ ಹಾಕಬೇಕು.
* ಈ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ.
ಗೃಹಲಕ್ಷ್ಮಿ ಯೋಜನೆ ಈ ತಿಂಗಳು ಜಾರಿಗೆ ಬರುವುದಿಲ್ಲ. ಆಗಸ್ಟ್ 15 ರಂದು ಯೋಜನೆ ಜಾರಿಗೆ ಬರಲಿದೆ. ಮನೆಯ ಯಜಮಾನಿ ಅತ್ತೆಯೋ ಅಥವಾ ಸೊಸೆಯೋ ಎಂಬುದನ್ನು ಆಯಾ ಮನೆಯವರೇ ಅರ್ಜಿಯಲ್ಲಿ ಉಲ್ಲೇಖಿಸಿ, ಸಂಬಂಧಿಸಿದ ದಾಖಲಾತಿ ಸಲ್ಲಿಸಬೇಕು. ಆದರೆ ಆಕೆಗೆ 18 ವರ್ಷ ತುಂಬಿರಬೇಕು. ಆಗಸ್ಟ್ 15 ಕ್ಕೆ ಕುಟುಂಬ ಯಜಮಾನಿಯ ಖಾತೆಗೆ ಹಣ ಬರುತ್ತದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರು ಎಲ್ಲರೂ ಇದಕ್ಕಾಗಿ ಅರ್ಜಿ ಹಾಕಬಹುದು. ಇದನ್ನೂ ಓದಿ: ಜುಲೈ 1 ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದವರಿಗೆ 10 ಕೆಜಿ ಅಕ್ಕಿಉಚಿತ
ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುವವರಿಗೂ ಗೃಹಲಕ್ಷ್ಮಿ ಸಿಗಲಿದೆ. ಅಂಗವಿಕಲ, ವಿಧವಾವೇತನ ಸೇರಿ ಸಾಮಾಜಿಕ ಭದ್ರತೆ ಪಿಂಚಣಿ ಪಡೆಯುವವರಿಗೂ ಇದು ಅನ್ವಯ ಆಗುತ್ತದೆ. ಕುಟುಂಬದ ಯಜಮಾನಿಗೆ ಮಾತ್ರ ಹಣ ಬರುತ್ತದೆ. ಅರ್ಜಿ ಹಾಕಿದ ಮೇಲೆ ಅಕೌಂಟ್, ಆಧಾರ್, ಮಾಹಿತಿ ಪಡೆದು ಯೋಜನೆ ಜಾರಿಗೊಳಿಸುತ್ತೇವೆ. ಯಾವ ಷರತ್ತು ನಿಗದಿ ಮಾಡಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈ ಆರ್ಥಿಕ ವರ್ಷದಲ್ಲಿ 5 ಗ್ಯಾರಂಟಿ ಜಾರಿ: ಸಿದ್ದರಾಮಯ್ಯ