Tag: Gruhalakshmi

  • ʻಗೃಹಲಕ್ಷ್ಮಿʼಯರಿಗೆ ಸಿಗದ ದೀಪಾವಳಿ ಗಿಫ್ಟ್‌ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ

    ʻಗೃಹಲಕ್ಷ್ಮಿʼಯರಿಗೆ ಸಿಗದ ದೀಪಾವಳಿ ಗಿಫ್ಟ್‌ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ

    – ಕಳೆದ 3-4 ತಿಂಗಳಿನಿಂದ ಹಣವೇ ಬಂದಿಲ್ಲ ಅಂತ ಆಕ್ಷೇಪ

    ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ (Gruhalakshmi Scheme). ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ (Deepavali) ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು ಗೃಹಲಕ್ಷ್ಮೀಯರ ಆಕ್ರೋಶಕ್ಕೆ ಕಾರಣವಾಗ್ತಿದೆ.

    ಕಾಂಗ್ರೆಸ್ ಸರ್ಕಾರ 2023ರ ವಿಧಾನಸಭಾ ಚುನಾವಣೆಯ ವೇಳೆ ಪಂಚ ಗ್ಯಾರಂಟಿ (Congress Guarantee) ಯೋಜನೆಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ. ಈ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ ಮಹತ್ವದ್ದಾಗಿದೆ. ಇದ್ರಿಂದಾಗಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾಯಾಗುತ್ತಿತ್ತು. ಆದ್ರೆ, ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ಸರ್ಕಾರ ಹಣ ಹಾಕಲು ವಿಳಂಬ ಮಾಡುತ್ತಿದೆ. ಇದು ಗೃಹಲಕ್ಷ್ಮಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗ್ತಿದೆ. ಇದನ್ನೂ ಓದಿ: ಭಟ್ಕಳ| ಮದುವೆ ಮಂಟಪದಲ್ಲಿ ಪಾರ್ಕಿಂಗ್ ವಿಷಯಕ್ಕೆ ನಡುರಸ್ತೆಯಲ್ಲೇ ಮಾರಾಮಾರಿ

    ಇನ್ನೂ ಸರ್ಕಾರ ಮಹಿಳೆಯರ ಮತಗಳ ಮೇಲೆ ಕಣ್ಣಿಟ್ಟು ಈ ಯೋಜನೆ ಜಾರಿಗೊಳಿಸಿತ್ತು. ಅದರಂತೆ ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಒದಗಿಸುವ ಗುರಿಯೊಂದಿಗೆ ಈ ಯೋಜನೆಯನ್ನ ಜಾರಿಗೆ ತಂದಿತ್ತು. ಆದ್ರೆ ಮಹಿಳೆಯರಿಗೆ ಮನೆ ನಡೆಸಲು, ಮಕ್ಕಳ ಶಿಕ್ಷಣಕ್ಕೆ ಮೊದಲಾದವುಗಳಿಗೆ ಈ ಹಣ ಸಹಾಯಕವಾಗ್ತಿಲ್ಲ ಅಂತಾ ಸರ್ಕಾರದ ವಿರುದ್ದ ಹರಿಹಾಯುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್

    ಕಳೆದ 3-4 ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಸರಿಯಾಗಿ ಹಣ ಜಮಾ ಆಗದೇ ಇರೋದಕ್ಕೆ ಗೃಹಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಮನ ಹರಿಸಿ, ಆದಷ್ಟು ಬೇಗ ಬಾಕಿ ಕಂತಿನ ಹಣ ಬಿಡುಗಡೆ ಮಾಡಿದ್ರೇ, ಮಹಿಳೆಯರು ದೀಪಾವಳಿ ಹಬ್ಬವನ್ನು ಖುಷಿಯಿಂದ ಮಾಡಬಹುದು ಅನ್ನೋದು ಜನರ ಕೋರಿಕೆ.ಇದನ್ನೂ ಓದಿ: ಪತಿಯಿಂದ ವೈದ್ಯೆ ಹತ್ಯೆ; ಮಗಳಿಗಾಗಿ ಕಟ್ಟಿಸಿದ್ದ 4 ಕೋಟಿ ರೂ. ಮನೆ ಇಸ್ಕಾನ್‌ಗೆ ದಾನ ಮಾಡಿದ ತಂದೆ

  • ಗೃಹಲಕ್ಷ್ಮಿ ಹಣದಲ್ಲಿ ಪೆಟ್ರೋಲ್ ಮಾರಾಟ ಮಾಡಿ ಜೀವನ – ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆ

    ಗೃಹಲಕ್ಷ್ಮಿ ಹಣದಲ್ಲಿ ಪೆಟ್ರೋಲ್ ಮಾರಾಟ ಮಾಡಿ ಜೀವನ – ಸರ್ಕಾರಕ್ಕೆ ಧನ್ಯವಾದ ಹೇಳಿದ ಮಹಿಳೆ

    ಮೈಸೂರು: ಗೃಹಲಕ್ಷ್ಮಿ ಯೋಜನೆ ಹಣದಿಂದ (Gruhalakshmi Scheme Money) ಪೆಟ್ರೋಲ್ ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡ್ತಿದ್ದಿನಿ ಎಂದು ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಆದ್ರೆ ಇಸ್ಪೀಟ್‌ ಮಾರಾಟ ಮಾಡ್ತೀದ್ದೀನಿ ಎಂಬ ಮಹಿಳೆ ಹೇಳಿಕೆ ಕೇಳಿ ಮೈಸೂರು ಜಿಲ್ಲೆಯ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅರೆ ಕ್ಷಣ ಗಾಬರಿಯಾಗಿದ್ದಾರೆ.

    ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲ್ಲೂಕು ಸಮಿತಿ ಶಾಸಕ ದರ್ಶನ್ ಧ್ರುವನಾರಾಯಣ್ (Darshan Dhruvanarayan) ಅಧ್ಯಕ್ಷತೆಯಲ್ಲಿ ನಡೆಯಿತು. ಇದನ್ನೂ ಓದಿ: ರಾಣಾ ಇರೋ ಸೆಲ್‌ಗೆ 12 ಅಧಿಕಾರಿಗಳಿಗೆ ಮಾತ್ರ ಪ್ರವೇಶ – ಕೋಟೆಯಾಗಿ ಬದಲಾದ NIA ಕಚೇರಿ

    ಈ ವೇಳೆ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಮಾತನಾಡಿದ ಇಂದಿರಾನಗರ ಗ್ರಾಮದ ಮಹಿಳೆ. ಗೃಹಲಕ್ಷ್ಮಿ ಯೋಜನೆ ಹಣದಿಂದ ಸಾಕಷ್ಟು ಸಹಾಯವಾಗಿದೆ. ಗೃಹಲಕ್ಷ್ಮಿ ಹಣದಿಂದ ಪೆಟ್ಟಿ ಅಂಗಡಿ ಇಟ್ಟುಕೊಂಡು ಮನೆಯ ವ್ಯವಹಾರ ಮಾಡಿಕೊಂಡಿದ್ದೇನೆ. ಇದರಿಂದ ಬಂದ ಲಾಭದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಸಹಾಯವಾಗಿದೆ. ಪೆಟ್ರೋಲ್ (Petrol) ಮತ್ತು ಇಸ್ಪೀಟ್ ಕಾರ್ಡ್ ಮಾರಾಟ ಮಾಡುತ್ತಿದ್ದೇನೆ ಎಂದ ಮಹಿಳೆ ಹೇಳಿದ್ದಾರೆ.  ಇದನ್ನೂ ಓದಿ: ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದವರ ಮೇಲೆ ಎಫ್‌ಐಆರ್‌

  • ಗೃಹಲಕ್ಷ್ಮಿ ಹಣ ಬಿಡುಗಡೆಗೆ ಬಜೆಟ್‍ನಲ್ಲಿ ದಿನಾಂಕ ಘೋಷಿಸಿ – ಸಿಎಂಗೆ ಮಹಿಳೆಯರ ಒತ್ತಾಯ

    ಗೃಹಲಕ್ಷ್ಮಿ ಹಣ ಬಿಡುಗಡೆಗೆ ಬಜೆಟ್‍ನಲ್ಲಿ ದಿನಾಂಕ ಘೋಷಿಸಿ – ಸಿಎಂಗೆ ಮಹಿಳೆಯರ ಒತ್ತಾಯ

    ಚಿಕ್ಕಬಳ್ಳಾಪುರ: ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣ ಕೆಲವು ತಿಂಗಳಿಂದ ಬಾಕಿ ಇದ್ದು, ಸರ್ಕಾರ ಹಣ ಕೊಡುವುದಾದರೆ ತಿಂಗಳಿಗೊಮ್ಮೆ ಸರಿಯಾಗಿ ಕೊಡಲಿ ಎಂದು ಚಿಕ್ಕಬಳ್ಳಾಪುರದಲ್ಲಿ (Chikkaballapura) ಮಹಿಳೆಯರು ಆಗ್ರಹಿಸಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಮಹಿಳೆಯರು, ಸರ್ಕಾರ ಐದಾರು ತಿಂಗಳು ಗೃಹಲಕ್ಷ್ಮಿ ಹಣವನ್ನು ಬಾಕಿ ಉಳಿಸಿಕೊಳ್ಳುವುದು ಬೇಡ. ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬೇಕು. ಬಜೆಟ್‍ನಲ್ಲಿ ಸಿದ್ದರಾಮಯ್ಯನವರು ಗೃಹಲಕ್ಷ್ಮಿ ಹಣ ಬಿಡುಗಡೆಗೆ ತಿಂಗಳಲ್ಲಿ ಒಂದು ದಿನ ನಿಗದಿ ಮಾಡಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂರಿಗೆ ಮೀಸಲಾತಿ ವಿಚಾರ – ಪಾಕ್ ಅಪ್ಪಂದಿರಿಗೆ ಹುಟ್ಟಿರೋರು ಮಾತ್ರ ಇದನ್ನು ಯೋಚಿಸುತ್ತಾರೆ: ಸಿ.ಟಿ.ರವಿ

    ಇತ್ತೀಚೆಗೆ ವಿಧಾನಸೌಧದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ವಿಚಾರವಾಗಿ ಮಾತಾಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar), ನಾವು ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಸ್ವಲ್ಪ ದಿನದಲ್ಲೇ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದಿದ್ದರು.

    ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿ ನಾಯಕರು ಸಹ ಟೀಕಿಸಿದ್ದರು. ಚುನಾವಣೆಗಾಗಿ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಲಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದರು. ಇನ್ನೂ ಪತ್ರಕರ್ತರು ಸಹ ಹಣ ವಿಳಂಬದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರಶ್ನಿಸಿದಾಗ, ನಿಮಗೆ ಪ್ರತಿ ತಿಂಗಳು ಸರಿಯಾಗಿ ಸಂಬಳ ಆಗುತ್ತಾ ಎಂದು ವಾದಿಸಿದ್ದರು. ಇದೆಲ್ಲದರ ನಡುವೆ ಹಣ ಸಿಗದೆ ಬೇಸತ್ತ ಫಲಾನುಭವಿಗಳು ಬಜೆಟ್ ದಿನ, ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವ ದಿನಾಂಕವನ್ನು ಸಿಎಂ ಘೋಷಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ನಾನು ಪಾಕಿಸ್ತಾನದ ಮುಸ್ಲಿಂ, ಭಾರತದಲ್ಲಿ ಹಿಂಸೆಯಾಗುವ ಸಾಧ್ಯತೆ ಹೆಚ್ಚು: ಮುಂಬೈ ದಾಳಿ ಆರೋಪಿ ತಹವ್ವೂರ್‌

  • ಗೃಹಲಕ್ಷ್ಮಿ ಯೋಜನೆ; ನಾವು ಫಿಲ್ಟರ್ ಮಾಡ್ತಿಲ್ಲ, ಎಲ್ಲರಿಗೂ ಹಣ ಸಿಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್

    ಗೃಹಲಕ್ಷ್ಮಿ ಯೋಜನೆ; ನಾವು ಫಿಲ್ಟರ್ ಮಾಡ್ತಿಲ್ಲ, ಎಲ್ಲರಿಗೂ ಹಣ ಸಿಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ (Gruhalakshmi Scheme) ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟಪಡಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮೊಯ್ಲಿ ಹೇಳಿಕೆಗೆ ಕಾಂಗ್ರೆಸ್ ಸಚಿವರ ರಕ್ಷಣಾತ್ಮಕ ಹೇಳಿಕೆ – ಹೈಕಮಾಂಡ್ ಕ್ರಮ ಕೈಗೊಳ್ಳುತ್ತೆ: ಎಂಬಿಪಿ, ಲಾಡ್

    ಸಿ.ಟಿ.ರವಿ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ನಾನು ಇಂದು ಸದನಕ್ಕೆ ಬಂದಿದ್ದೇನೆ. ನಿಮಗೆ ಎಷ್ಟು ಮಾಹಿತಿ ಇದೆಯೋ ನನಗೂ ಅಷ್ಟೇ ಮಾಹಿತಿ ಇದೆ. ಎಥಿಕ್ಸ್ ಕಮಿಟಿಗೆ ಕೊಟ್ಟಿರೋ ವಿಚಾರದ ಬಗ್ಗೆ ಗೊತ್ತಿಲ್ಲ. ನಾನು ಆಸ್ಪತ್ರೆಯಲ್ಲಿ ಇದ್ದಾಗ ಹೊರಟ್ಟಿ ಅವರು ಆಸ್ಪತ್ರೆಗೆ ಬಂದಿದ್ದರು. ಇದರ ಬಗ್ಗೆ ಏನೂ ಮಾತನಾಡಿಲ್ಲ. ಯಾರಿಗೂ ಈ ರೀತಿ ಆಗಬಾರದು. ಇದರ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚಿತ್ರರಂಗ ಗೋಕಾಕ್ ಚಳವಳಿ ಮಾಡಿ ಸರ್ಕಾರವನ್ನೇ ಬೀಳಿಸಿತ್ತು: ಸಾರಾ ಗೋವಿಂದು ಎಚ್ಚರಿಕೆ

  • ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; 3 ತಿಂಗಳ ಹಣ ಬಾಕಿ – ಶುಕ್ರವಾರ ಖಾತೆಗೆ ಹಣ

    ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; 3 ತಿಂಗಳ ಹಣ ಬಾಕಿ – ಶುಕ್ರವಾರ ಖಾತೆಗೆ ಹಣ

    ಬೆಂಗಳೂರು: ಸಾಲು ಸಾಲು ಟೀಕೆ, ಆಕ್ರೋಶದ ನಂತರ ರಾಜ್ಯ ಸರ್ಕಾರ ಎಚ್ಚೆತ್ತಿದೆ. ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಜಮೆ ಪ್ರಕ್ರಿಯೆಗೆ ನಾಳೆ ಮರು ಚಾಲನೆ ಸಿಗಲಿದೆ.

    ನಾಳೆ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕುವ ಕೆಲಸ ಆಗಲಿದೆ.

    ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ‘ಪಬ್ಲಿಕ್ ಟಿವಿ’ ಸತತವಾಗಿ ವರದಿ ಬಿತ್ತರಿಸಿತ್ತು. ಅಂದ ಹಾಗೇ, ಹಣ ಜಮೆ ಮಾಡುವ ಪ್ರಕ್ರಿಯೆಯನ್ನು ಬದಲಾವಣೆ ಮಾಡಿದ ಕಾರಣ ಸ್ವಲ್ಪ ವಿಳಂಬ ಆಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಹೇಳಿಕೊಂಡಿದೆ.

    ಇನ್ಮುಂದೆ ಗೃಹಲಕ್ಷ್ಮಿ ಹಣ ತಾಲೂಕು ಪಂಚಾಯತ್ ಇಓಗಳ ಮೂಲಕ ಬಿಡುಗಡೆ ಆಗಲಿದೆ.

  • ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

    ಅನ್ನಭಾಗ್ಯ ದುಡ್ಡು ಇಲ್ಲ, ಗೃಹಲಕ್ಷ್ಮಿಯೂ ಇಲ್ಲ – ಗ್ಯಾರಂಟಿಗೆ ʼಗ್ಯಾರಂಟಿʼ ಇಲ್ಲ!

    – 5 ತಿಂಗಳಿನಿಂದ ಅನ್ನ ಭಾಗ್ಯದ ದುಡ್ಡು ಬಂದಿಲ್ಲ
    – 3 ತಿಂಗಳಿನಿಂದ ಮಹಿಳೆಯರ ಖಾತೆಗೆ 2 ಸಾವಿರ ಜಮೆಯಾಗಿಲ್ಲ

    ಬೆಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಘೋಷಿಸಿದ ಎರಡು ಮಹತ್ವಾಕಾಂಕ್ಷಿ ಗ್ಯಾರಂಟಿ ಸ್ಕೀಂ (Congress Guarantee) ಯೋಜನೆಗಳಾದ ಅನ್ನಭಾಗ್ಯ (Anna Bhagya) ಮತ್ತು ಗೃಹಲಕ್ಷ್ಮಿ ಯೋಜನೆಯ (Gruhalakshmi) ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಸ್ಥಗಿತಗೊಂಡಿದೆ.

    ಅನ್ಯಭಾಗ್ಯದಡಿ ಬಿಪಿಎಲ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡಲಾಗುತ್ತಿದ್ದ ಹಣ 5 ತಿಂಗಳಿನಿಂದ ಸ್ಥಗಿತಗೊಂಡಿದ್ದರೆ ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.

    ಯೋಜನೆ ಆರಂಭದಲ್ಲಿ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಕೇಂದ್ರ ಸರ್ಕಾರದಿಂದ ಸರಿಯಾಗಿ ಸ್ಪಂದನೆ ಸಿಗದೇ ಇದ್ದಾಗ ರಾಜ್ಯ ಸರ್ಕಾರ ಅನ್ನಭಾಗ್ಯದ ಹಣ ನೀಡಲಾಗುವುದು ಎಂದು ತಿಳಿಸಿತ್ತು.

    ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಬೇಕಿತ್ತು. ಈ ವಿಚಾರದ ಬಗ್ಗೆ ಫಲಾನುಭವಿಗಳು ಅಧಿಕಾರಿಗಳನ್ನು ಪ್ರಶ್ನಿಸಿದರೆ ಹಣದ ಬದಲಿಗೆ ಅಕ್ಕಿಯನ್ನೇ ನೀಡಲಾಗುವುದು ಅಂತ ಹೇಳುತ್ತಿದ್ದಾರೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದೇನೆ, ನಾನು ಸಾಯ್ತಿನಿ – ಅಮೆರಿಕದಲ್ಲಿರುವ ಅಣ್ಣನಿಗೆ ಫೋನ್‌ ಮಾಡಿ ಹೇಳಿದ್ದ ಚೇತನ್‌

     

    ಕುಟುಂಬದ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿಂದ ಪಾವತಿಯಾಗಿಲ್ಲ. ಆರಂಭದಲ್ಲಿ ತಾಂತ್ರಿಕ ಸಮಸ್ಯೆ ಎಂಬ ಕಾರಣ ನೀಡಿ ಸರಿಯಾದ ಸಮಯಕ್ಕೆ ಪಾವತಿ ಆಗುತ್ತಿರಲಿಲ್ಲ. ಈಗ ಯಾವ ಕಾರಣಕ್ಕೆ ಪಾವತಿಯನ್ನು ನಿಲ್ಲಿಸಲಾಗಿದೆ ಎನ್ನುವುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

    ಈ ವಿಚಾರದ ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಹಿಳೆಯರು, ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ದುಡ್ಡು ಕೊಡುತ್ತೇವೆ ಅಂತ ಹೇಳಿದ್ರು. 10 ಕೆಜಿ ಅಕ್ಕಿ ಸಿಗುತ್ತೆ ಎಂದಿದ್ದರು. ಚುನಾವಣಾ ಸಮಯದಲ್ಲಿ ಮನೆಗೆ ಮನೆಗೆ ಬಂದು ಕಾರ್ಡ್‌ ಹಂಚಿ ಹೋಗಿದ್ದರು. ಈಗ ಅಕ್ಕಿಯೂ ಇಲ್ಲ, ದುಡ್ಡು ಇಲ್ಲ. ಈ ರೀತಿ ಅನ್ಯಾಯ ಮಾಡುವುದು ಸರಿಯೇ? ಕೂಡಲೇ ಸರ್ಕಾರ ಘೋಷಣೆ ಮಾಡಿದಂತೆ ಹಣ್‌ ಮತ್ತು ಅಕ್ಕಿ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಬಿಡುಗಡೆಯಾಗಲಿದೆ ಗೃಹಲಕ್ಷ್ಮಿ ಹಣ!

  • ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

    ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

    ಬೆಂಗಳೂರು: ಮಹಿಳೆಯರನ್ನು (Womens) ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ (Karnataka) ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ (Five Guarantee Scheme) ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ (Philemon Yang) ಮೆಚ್ಚುಗೆ ಸೂಚಿಸಿದ್ದಾರೆ.

    ಇಂದು (ಫೆ. 07) ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ (Shalini Rajneesh) ಅವರು ಸ್ವಸಹಾಯ ಗುಂಪಿನ ಮಹಿಳೆಯರು ರೇಷ್ಮೆ ಗೂಡುಗಳಿಂದ ತಯಾರಿಸಿದ ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದರು. ಒಂದು ಜಗತ್ತು ಹಲವು ಸಾಧ್ಯತೆಗಳನ್ನು ಬಿಂಬಿಸುವ ಕರ್ನಾಟಕ ಕುರಿತಾದ ಪುಸ್ತಕವನ್ನು ನೀಡಿದರು.

    ಸುಸ್ಥಿರ ಅಭಿವೃದ್ಧಿ ಗುರಿಗಳ (SDG) ಸಾಧನೆಯಲ್ಲಿ ಕರ್ನಾಟಕವು ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಿರುವ ಬಗ್ಗೆ ವಿಶ್ವಸಂಸ್ಥೆಯ ಅಧ್ಯಕ್ಷರು ಆಸಕ್ತಿಯಿಂದ ಹೆಚ್ಚು ಮಾಹಿತಿ ಹಾಗೂ ವಿವರಗಳನ್ನು ಬಯಸಿದರು.

    ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಕೈಗೆ ನಗದು ಹಣ ನೀಡುವ ಗೃಹಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡುವ ಶಕ್ತಿ, ಕಾರ್ಮಿಕ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ದರವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳು , ಹಸಿವು ಮತ್ತು ಅಪೌಷ್ಟಿಕತೆಯನ್ನು ತಡೆಗಟ್ಟಲು ತಲಾವಾರು ಪೋಷಕಾಂಶ ನೀಡಿಕೆ , ಕೌಶಲ್ಯದ ಮೂಲಕ ಉದ್ಯೋಗ ಗಳಿಕೆ, ಅಡುಗೆ ಅನಿಲ ಪೂರೈಕೆ, ಉಚಿತ ವಿದ್ಯುತ್ ಪೂರೈಕೆ ಕುರಿತ ಕಾರ್ಯಕ್ರಮಗಳ ವಿವರಗಳನ್ನು ಮುಖ್ಯ ಕಾರ್ಯದರ್ಶಿಗಳು ನೀಡಿದರು. ಇದನ್ನೂ ಓದಿ: ಗಡಿಯಲ್ಲಿ ನೆಲಬಾಂಬ್‌ ಸ್ಫೋಟ – ಐಇಡಿ ಹೊತ್ತುಕೊಂಡು ಭಾರತಕ್ಕೆ ನುಗ್ಗುತ್ತಿದ್ದ ಐವರು ಉಗ್ರರ ಸಾವು

    ಮಹಿಳೆಯರು ಸ್ವಸಹಾಯ ಗುಂಪುಗಳನ್ನು (SHG) ಸಂಘಟಿಸಲು, ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆಗೆ ಪ್ರೋತ್ಸಾಹ, ವಿಷಕಾರಿ ಮುಕ್ತ ವಾತಾವರಣಕ್ಕಾಗಿ ಸಮಗ್ರ ಮತ್ತು ಸಾವಯವ ಕೃಷಿಗೆ ಪ್ರೋತ್ಸಾಹ ಕ್ರಮಗಳು ಸಮಗ್ರ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸಹಾಯ ಮಾಡುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

    ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಸಮಾನತೆಯನ್ನು ಉತ್ತೇಜಿಸಲು ಮಹಿಳಾ ಪರ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿಯನ್ನು ವಿಶ್ವಸಂಸ್ಥೆಯ ಅಧ್ಯಕ್ಷರು ಶ್ಲಾಘಿಸಿದರು. ಮುಂಬರುವ ವಿಶ್ವಸಂಸ್ಥೆಯ ಕಾರ್ಯಾಗಾರಗಳಲ್ಲಿ ಕರ್ನಾಟಕದ ಯಶೋಗಾಥೆಗಳನ್ನು ಹಂಚಿಕೊಳ್ಳಬೇಕೆಂದು ಅವರು ಸಲಹೆ ನೀಡಿದರು, ಇದರಿಂದ ಇತರ ದೇಶಗಳು ಸಹ ಈ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

     

  • ಯುಗಾದಿಗೆ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಬಸವಂತಪ್ಪ

    ಯುಗಾದಿಗೆ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಬಸವಂತಪ್ಪ

    ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ (Congress Guarantee) ಹಣ (Money) ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ (MLA Basavanthappa) ಹೇಳಿದ್ದಾರೆ.

    ದಾವಣಗೆರೆಯ (Davanagere) ಮಾಯಕೊಂಡದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದು ಎಂದಿದ್ದಾರೆ.

    ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಎಂದಿದ್ದಾರೆ.

    ಚನ್ನಗಿರಿಯ ಅಮ್ಜದ್ ಅತ್ಯಾಚಾರ ಪ್ರಕರಣದ ವಿಚಾರವಾಗಿ, ಕಾನೂನಿನಡಿಯಲ್ಲಿ ಎಲ್ಲರಿಗೂ ಶಿಕ್ಷೆ ಆಗುತ್ತದೆ. ಯಾರೂ ಸಹ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈಗಾಗಲೇ ಆತನ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

  • ಗೃಹಲಕ್ಷ್ಮಿಯ ಬಗ್ಗೆ ಸುಳ್ಳು ಹೇಳಿದ ಮೋದಿ ಕ್ಷಮೆಯಾಚಿಸಲಿ: ಸಿದ್ದರಾಮಯ್ಯ ಆಗ್ರಹ

    ಗೃಹಲಕ್ಷ್ಮಿಯ ಬಗ್ಗೆ ಸುಳ್ಳು ಹೇಳಿದ ಮೋದಿ ಕ್ಷಮೆಯಾಚಿಸಲಿ: ಸಿದ್ದರಾಮಯ್ಯ ಆಗ್ರಹ

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆ (Grihalakshmi scheme )ಬಗ್ಗೆ ಸುಳ್ಳು ಹೇಳಿದ ಪ್ರಧಾನಿ ನರೇಂದ್ರ ಮೋದಿ (Narendra Modi)  ಕ್ಷಮೆಯಾಚಿಸಬೇಕೆಂದು ಸಿಎಂ ಸಿದ್ದರಾಮಯ್ಯ (CM Siddaramaiah) ಆಗ್ರಹಿಸಿದ್ದಾರೆ.

    ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ rU. ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿತಿಂಗಳು 2,000 ರೂ. ಸಂದಾಯವಾಗುತ್ತಿದೆ. ಈ ರೀತಿ ಒಟ್ಟು 30,285 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ಸುಳ್ಳೇ ಬಿಜೆಪಿಯ ಮನೆ ದೇವರು ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘’ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ ಪ್ರಕಟಿಸಿ ಸಿಕ್ಕಿ ಹಾಕಿಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರದೆ ಮೋಸ ಮಾಡಿದೆ ಎನ್ನುವುದು ಬಿಜೆಪಿ ಆರೋಪ. ಇದನ್ನೂ ಓದಿ: ಬೆಂಗಳೂರು ನಗರ ನಿಮ್ಮ ಜಹಗೀರು ಅಂದುಕೊಂಡಿದ್ದೀರಾ? – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಇದೇನು ನಮಗೆ ಆಶ್ಚರ್ಯ ಉಂಟುಮಾಡಿಲ್ಲ. ಮನೆ ಒಡೆಯನ ಬುದ್ದಿ ಮನೆಯವರಿಗೆಲ್ಲ ಬಂದಿದೆ. ಹೋದಲ್ಲಿ ಬಂದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳುಗಳನ್ನು ಉದುರಿಸುವ ನಿಮ್ಮಿಂದಲೇ ಪ್ರೇರಣೆ ಪಡೆದು ಮಹಾರಾಷ್ಟ್ರ ಬಿಜೆಪಿ ಇಷ್ಟೊಂದು ನಿರ್ಲಜ್ಜತನದಿಂದ ಈ ಹಸಿಸುಳ್ಳನ್ನು ಪ್ರಕಟಿಸಿದೆ ಎನ್ನುವುದು ನಿಸ್ಸಂಶಯ.

     

    ಗೃಹಲಕ್ಷ್ಮಿ ಯೋಜನೆಯಡಿ 2023ರ ಆಗಸ್ಟ್ ತಿಂಗಳಿನಿಂದ ಈ ವರೆಗೆ 1.22 ಕೋಟಿ ಮನೆಯೊಡತಿಯರ ಬ್ಯಾಂಕ್ ಖಾತೆಗೆ ಪ್ರತಿತಿಂಗಳು 2,000 ರೂಪಾಯಿ ಸಂದಾಯವಾಗುತ್ತಿದೆ. ಈ ರೀತಿ ಒಟ್ಟು 30,285 ಕೋಟಿರೂ. ವರ್ಗಾವಣೆ ಮಾಡಲಾಗಿದೆ. ಅನುಮಾನ ಇದ್ದವರು ಈ 1.22 ಕೋಟಿ ಮನೆ ಒಡತಿಯರನ್ನೇ ಕೇಳಿ ಪರಾಂಬರಿಸಿಕೊಳ್ಳಿ. ಇದನ್ನೂ ಓದಿ: ಮುಸ್ಲಿಮರನ್ನು ರಾಕ್ಷಸರಂತೆ ಬಿಂಬಿಸಲು ವಕ್ಫ್‌ ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಗುಂಡೂರಾವ್‌ ಕಿಡಿ

    ಪ್ರಧಾನಿ ನರೇಂದ್ರ ಮೋದಿಯವರೇ, ಇದು ನಿಮ್ಮ ಸುಳ್ಳಿನಿಂದಲೇ ಪ್ರೇರಣೆ ಪಡೆದು ಹೇಳಿರುವ ಸುಳ್ಳಾಗಿರುವ ಕಾರಣ ದಯವಿಟ್ಟು ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಹೇಳಿರುವ ಸುಳ್ಳಿಗಾಗಿ ದೇಶದ ಜನತೆಯ ಕ್ಷಮೆ ಯಾಚಿಸಿ, ಸತ್ಯಸಂಗತಿಯನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ಎಂದು ಆಗ್ರಹಿಸುತ್ತೇನೆ.

    ಮಹಾರಾಷ್ಟ್ರ ಬಿಜೆಪಿ ತಾನು ಪ್ರಕಟಿಸಿರುವ ಸುಳ್ಳಿನ ಜಾಹೀರಾತಿನಷ್ಟೇ ಗಾತ್ರದ ಜಾಹೀರಾತಿನಲ್ಲಿ ಸತ್ಯ ಸಂಗತಿಯನ್ನು ತಿಳಿಸಿ ಅಲ್ಲಿನ ಎಲ್ಲ ಮಾಧ್ಯಮಗಳಲ್ಲಿ ಪ್ರಕಟಿಸುವಂತೆ ನೋಡಿಕೊಳ್ಳಬೇಕು. ಇದಕ್ಕೆ ತಪ್ಪಿದ್ದಲ್ಲಿ ನಮ್ಮ ಸರ್ಕಾರ ಮುಂದಿನ ಕ್ರಮದ ಬಗ್ಗೆ ಯೋಚನೆ ಮಾಡಲಿದೆ.

     

  • ವರಮಹಾಲಕ್ಷ್ಮಿ ಹಬ್ಬಕ್ಕೆ ʻಗೃಹಲಕ್ಷ್ಮಿʼಯರಿಗೆ ಕೊಂಚ ನಿರಾಸೆ – ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ದುಡ್ಡು!

    ವರಮಹಾಲಕ್ಷ್ಮಿ ಹಬ್ಬಕ್ಕೆ ʻಗೃಹಲಕ್ಷ್ಮಿʼಯರಿಗೆ ಕೊಂಚ ನಿರಾಸೆ – ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ದುಡ್ಡು!

    ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯದ ಮಹಿಳೆಯರಿಗೆ, ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಅರ್ಹ ಫಲಾನುಭವಿಗಳ ಸರ್ಕಾರ (Karnataka Govt.) ಖಾತೆಗೆ ಜಮೆ ಮಾಡಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಕಳೆದ ಜೂನ್, ಜುಲೈ ತಿಂಗಳ ಗಣ ಬಂದಿರಲಿಲ್ಲ. ಇದೀಗಾ ಜೂನ್ ತಿಂಗಳ ಹಣ ಎರಡ್ಮೂರು ದಿನದಲ್ಲಿ DBT ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಇನ್ನೂ ಜುಲೈ, ಆಗಸ್ಟ್ ತಿಂಗಳ ಹಣ ಮುಂದಿನ ತಿಂಗಳು ಬಿಡುಗಡೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ವರಮಹಾಲಕ್ಷ್ಮಿ ಹಬ್ಬಕ್ಕೂ (Varamahalakshmi Festival) ಮುನ್ನವೇ 2 ತಿಂಗಳ ಹಣ ಒಟ್ಟಿಗೇ ಬರುತ್ತೆ ಅಂದುಕೊಂಡಿದ್ದವ್ರಿಗೆ ಕೊಂಚ ನಿರಾಸೆಯಾಗಿದೆ. ಇದನ್ನೂ ಓದಿ: 100 ಕೋಟಿ ವೆಚ್ಚದ ನೂತನ ಬಸ್ ನಿಲ್ದಾಣಕ್ಕೆ ಕತ್ತಲೆ ಭಾಗ್ಯ; ಟಾರ್ಚ್‌ ಬೆಳಕಲ್ಲೇ ವರ್ತಕರ ವಹಿವಾಟು

    ಜೂನ್ ತಿಂಗಳ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, 1.25 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಪ್ರತಿ ತಿಂಗಳಿಗೆ ಅಂದಾಜು 2,500 ಕೋಟಿ ರೂ. ಯೋಜನೆ ಮೂಲಕ ಫಲಾನುಭವಿಗಳಿಗೆ ತಲುಪುತಿತ್ತು. ಇದುವರೆಗೆ 10 ಕಂತುಗಳ ಹಣ ಬಿಡುಗಡೆಯಾಗಿದ್ದು, ಜೂನ್‌, ಜುಲೈ ತಿಂಗಳ ಹಣ ಬಾಕಿಯಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಎರಡು ತಿಂಗಳು ಸ್ಥಗಿತಗೊಂಡಿದ್ದ ಹಣವನ್ನ ಫಲಾನುಭವಿಗಳಿಗೆ ನೀಡಲು ಸರ್ಕಾರ ಮುಂದಾಗಿದೆ.

    ಕೆಲವರಿಗೆ 10 ತಿಂಗಳಿನಿಂದ ಹಣ ಬಂದಿಲ್ಲ. ಹಣ ಬಾರದೇ ಇರೋದಕ್ಕೆ ಏನ್ ಕಾರಣ ಅನ್ನೋದನ್ನ ಅಧಿಕಾರಿಗಳು ಇನ್ಮುಂದೆ ಪರಿಶೀಲಿಸಿ, ಅರ್ಹ ಯಜಮಾನಿಯರಿಗೆ ಹಣ ತಲುಪಿಸಲಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿದ್ದ ಪದಕ ವಿಜೇತ ಅಮನ್‌