Tag: GT Mall

  • ಬೆಂಗಳೂರು | ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು

    ಬೆಂಗಳೂರು | ಜಿಟಿ ಮಾಲ್‌ನ 3ನೇ ಫ್ಲೋರ್‌ನಿಂದ ಬಿದ್ದು ವ್ಯಕ್ತಿ ಸಾವು

    – 2 ಗಂಟೆಯ ಬಳಿಕ ಮಾಲ್‌ ಓಪನ್‌

    ಬೆಂಗಳೂರು: ನಗರದ ಜಿಟಿ ಮಾಲ್‌ನಲ್ಲಿ (GT Mall) ವ್ಯಕ್ತಿಯೋರ್ವ ಮೂರನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೃತ ವ್ಯಕ್ತಿಯನ್ನು ಸಾಗರ್ (34) ಎಂದು ಗುರುತಿಸಲಾಗಿದ್ದು, ಅವಿವಾಹಿತನಾಗಿದ್ದು ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಈ ಕುರಿತು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ ; GRAP ಹಂತ IIರ ನಿಯಮಗಳು ಜಾರಿ

    ಸದ್ಯ ಮಾಲ್‌ಗೆ ಕೆಪಿ ಅಗ್ರಹಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಾಲ್‌ನ ಮೂರನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಆದರೆ ಕಾಲುಜಾರಿ ಬಿದ್ದಿದ್ದಾ? ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾ? ಜೊತೆಗೆ ಮೃತ ವ್ಯಕ್ತಿ, ಮಾಲ್‌ನ ಸಿಬ್ಬಂದಿನಾ? ಅಥವಾ ಹೊರಗಿನಿಂದ ಬಂದ ಗ್ರಾಹಕನಾ? ಎನ್ನುವ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

    ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ಹೊರಗಿನಿಂದ ಬಂದು ಬೇಕಂತಲೇ ಮೂರನೇ ಫ್ಲೋರ್‌ನಿಂದ ಬಿದ್ದಿದ್ದಾನೆ. ಮುಖಕ್ಕೆ ಗಾಯ ಆಗಿದೆ. ಆದರೆ ಬಿದ್ದ 10 ನಿಮಿಷ ಬದುಕಿದ್ದ ಅಷ್ಟೇ, ಆಮೇಲೆ ಪ್ರಾಣಬಿಟ್ಟ ಎಂದು ತಿಳಿಸಿದ್ದಾರೆ.

    ಸದ್ಯ ಮೃತದೇಹವನ್ನ ಆಂಬ್ಯುಲೆನ್ಸ್‌ಗೆ ಶಿಫ್ಟ್ ಮಾಡಲು ತಯಾರಿ ನಡೆಸುತ್ತಿದ್ದು, ಈವರೆಗೂ ಆತನ ಬಳಿ ಮೊಬೈಲ್, ಪರ್ಸ್, ಯಾವುದೇ ದಾಖಲೆಗಳು ಸಿಕ್ಕಿಲ್ಲ. ಘಟನೆ ಹಿನ್ನೆಲೆ ಮಾಲ್‌ನಲ್ಲಿ ಬೆಳಗಿನ ಮೂವಿ ಶೋ ಕೂಡ ರದ್ದು ಮಾಡಲಾಗಿದೆ. ಕೆಪಿ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ

  • ಪಂಚೆಯುಟ್ಟ ರೈತನಿಗೆ ಜಿ.ಟಿ ಮಾಲ್‌ ಅಪಮಾನ ಪ್ರಕರಣ; ಮಾಲ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ

    ಪಂಚೆಯುಟ್ಟ ರೈತನಿಗೆ ಜಿ.ಟಿ ಮಾಲ್‌ ಅಪಮಾನ ಪ್ರಕರಣ; ಮಾಲ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ

    – ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡದಂತೆ ನಿರ್ದೇಶನ
    – ರೈತನಿಗೆ ಅಪಮಾನದಂಥ ಪ್ರಕರಣ ಮರುಕಳಿಸಿದ್ರೆ ಕಾನೂನು ಕ್ರಮದ ಎಚ್ಚರಿಕೆ

    ಬೆಂಗಳೂರು: ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್‌ (GT Mall) ಅಪಮಾನ ಮಾಡಿದ್ದು ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಮಾಲ್‌ಗಳಿಗೆ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.

    ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಮಾಲ್‌ಗಳಿಗೂ ಮಾರ್ಗಸೂಚಿ: ಡಿಕೆಶಿ ಘೋಷಣೆ

  • ರಾಜ್ಯದ ಎಲ್ಲಾ ಮಾಲ್‌ಗಳಿಗೂ ಮಾರ್ಗಸೂಚಿ: ಡಿಕೆಶಿ ಘೋಷಣೆ

    ರಾಜ್ಯದ ಎಲ್ಲಾ ಮಾಲ್‌ಗಳಿಗೂ ಮಾರ್ಗಸೂಚಿ: ಡಿಕೆಶಿ ಘೋಷಣೆ

    ನವದೆಹಲಿ: ಪಂಚೆ ಹಾಕಿ ಬಂದ ರೈತನಿಗೆ ಜಿ.ಟಿ.ಮಾಲ್ (GT Mall) ಸಿಬ್ಬಂದಿ ಪ್ರವೇಶ ನಿರಾಕರಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ‌ ಮಾಲ್ ಗಳಿಗೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ.

    ವಿಧಾನಸಭೆಯಲ್ಲಿ ಸರ್ಕಾರದ ಪರವಾಗಿ ಹೇಳಿಕೆ ನೀಡಿದ ಅವರು, ಮಾಲ್‌ಗಳಿಗೆ ನಾವು ಮಾರ್ಗಸೂಚಿ ತರುತ್ತೇವೆ. ಪಂಚೆ (Panche) ನಮ್ಮ ಸಂಸ್ಕೃತಿ. ಇಂತಹ ಘಟನೆಗಳು‌ ಮತ್ತೆ ಆಗಬಾರದು ಎಂದು ಹೇಳಿದರು.

     

    ಜಿ.ಟಿ‌.ಮಾಲ್ ತೆರಿಗೆ ಬಾಕಿ ಇತ್ತು. ಸ್ವಲ್ಪ ಕಟ್ಟಿದ್ದಾರೆ ಇನ್ನೂ ಬಾಕಿ ಇದೆ. ಚೆಕ್ ಕೊಟ್ಟಿದ್ದಾರೆ, ಇನ್ನೂ ತೆರಿಗೆ (Tax) ಬಾಕಿ ಇದೆ‌. ಸದ್ಯ ಜಿ.ಟಿ.ಮಾಲ್ ಮುಚ್ಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ – ಓರ್ವ ಯೋಧನಿಗೆ ಗಾಯ

    ಈ ವೇಳೆ ಕೆಲ ಕ್ಲಬ್‌ಗಳಿಗೂ ಡ್ರೆಸ್ ಕೋಡ್ ಬಗ್ಗೆಯೂ ಕೂಡ ವಿಷಯ ಪ್ರಸ್ತಾಪಿಸಿದ ಕೆಲ ಶಾಸಕರು, ಕ್ಲಬ್ ಗಳಲ್ಲಿ ಕೂಡ ಪಂಚೆ ಚಪ್ಪಲಿ ಹಾಕಿಕೊಂಡು ಹೋದರೆ ಬಿಡಲ್ಲ ಎಂದು ಅಳಲು ವ್ಯಕ್ತಪಡಿಸಿದರು.

    ಮಾಲ್ ಗಳಿಗೂ ಕ್ಲಬ್‌ಗಳಿಗೂ ಹೋಲಿಕೆ ಬೇಡ ಎಂದು ಹೆಚ್.ಕೆ.ಪಾಟೀಲ್ (HK Patel) ಸಲಹೆ ನೀಡಿದರು. ಈ ವೇಳೆ ಆರ್ ಅಶೋಕ್ (R Ashok) ಮಧ್ಯಪ್ರವೇಶ ಮಾಡಿ, ಕೇವಲ ಮಾರ್ಗಸೂಚಿ ಮಾಡಿದ್ರೆ ಸಾಲದು. ಲೈಸೆನ್ಸ್ ಕೊಡುವಾಗ ಷರತ್ತು ಹಾಕಿ ಕೊಡಿ. ಗ್ರಾಮೀಣ ಪ್ರದೇಶದ ಜನರಿಗೆ ಮುಕ್ತ ಅವಕಾಶ ಎಂದು ಷರತ್ತು ವಿಧಿಸಿ. ಆಗ ಅವರಿಗೆ ನೆನಪಿನಲ್ಲಿ ಉಳಿಯುತ್ತೆ ಎಂದು ಸಲಹೆ ನೀಡಿದರು.

  • ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    – 1.70 ಕೋಟಿ ರೂ. ತೆರಿಗೆ ಬಾಕಿ – ಬಿಬಿಎಂಪಿ ನೋಟಿಸ್‌ ಬಗ್ಗೆ ಮಾಲೀಕರು ಹೇಳಿದ್ದೇನು?
    – ಇದರಲ್ಲಿ ರಾಜಕೀಯವಿಲ್ಲ: ಮಾಲೀಕ ಪ್ರಶಾಂತ್‌

    ಬೆಂಗಳೂರು: ರೈತರೊಬ್ಬರಿಗೆ (Farmer) ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಿತವಾಗಿ ಜಿ.ಟಿ ಮಾಲ್ (GT Mall) ಬಂದ್ ಮಾಡುವ ನಿರ್ಧಾರವನ್ನು ಮಾಲೀಕ ಪ್ರಶಾಂತ್ ಕೈಗೊಂಡಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ ಅವರಿಗೆ ಅಪಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ಪಂಚೆ ಧರಿಸಿ ಬಂದಿದ್ದಕ್ಕೆ ಸಿಬ್ಬಂದಿ ಮಾಲ್ ಒಳಗೇ ಬಿಡದೇ ಅಪಮಾನ ಮಾಡಿದ್ದರು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ವಿಧಾನಸಭೆಯ ಅಧಿವೇಶನದಲ್ಲೂ ಸಚಿವ ಬೈರತಿ ಸುರೇಶ್ ಅವರು ಮಾಲ್ ಮುಚ್ಚಿಸುತ್ತೇವೆ ಎಂದು ಪ್ರಸ್ತಾಪಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಅಂಗಡಿಗೆ ಪರವಾನಗಿ ನೀಡಲು ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದಾರೆ – ಕಾಂಗ್ರೆಸ್‌ ಸದಸ್ಯ ಬಾಂಬ್‌!

    ಈ ಕುರಿತು `ಪಬ್ಲಿಕ್ ಟಿವಿ’ (Public TV) ಜೊತೆಗೆ ಮಾತನಾಡಿದ ಜಿ.ಟಿ ಮಾಲ್ ಮಾಲೀಕ ಪ್ರಶಾಂತ್ (Prashanth), ನಮ್ಮ ಮಾಲ್‌ನಲ್ಲಿ ಆಗಬಾರದಂತಹ ಘಟನೆ ಆಗಿದೆ. ಅದು ಹೊಸ ಸಿಬ್ಬಂದಿಯಿಂದ ಆಗಿದೆ. ನಾನು ಮಾಲ್ ಮಾಲೀಕನಾಗಿ ಆ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ. ಇದನ್ನ 2 ದಿನಗಳ ಹಿಂದೆಯೇ ಕ್ಷಮೆ ಕೇಳಬೇಕಾಗಿತ್ತು. ನಮ್ಮ ತಂದೆ ಅನಾರೋಗ್ಯದ ವಿಚಾರವಾಗಿ ಸ್ಪಲ್ವ ಆಸ್ಪತ್ರೆಯಲ್ಲಿದ್ದೆವು. ರೈತ ಫಕೀರಪ್ಪ ಅವ್ರಿಗೆ ನಮ್ಮಿಂದ ಆಗಿರೋದ ತಪ್ಪು. ನನ್ನ ತಂದೆ ಕೂಡ ಫಕೀರಪ್ಪ ಜೊತೆಗೆ ಫೋನ್ ಕಾಲ್ ಮಾಡಿ ಕ್ಷಮೆ ಕೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    1.70 ಕೋಟಿ ತೆರಿಗೆ ಬಾಕಿ:
    ಮುಂದುವರಿದು ಮಾತನಾಡಿದ ಅವರು, ಬಿಬಿಎಂಪಿಯಿಂದ (BBMP) ನೋಟಿಸ್ ಬಂದಿದೆ. ಆದ್ರೆ ಮಾಲ್ ಬಂದ್ ಮಾಡುವಂತೆ ಹೇಳಿಲ್ಲ. ಘಟನೆ ಬಗ್ಗೆ ವರದಿ ನೀಡಿ ಎಂದು ನೀಡಿದ್ದಾರೆ ಎಂದರು. ಇದೇ ವೇಳೆ ಮಾಲ್ ತೆರಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, 1 ವರ್ಷದ ತೆರಿಗೆ ಬಾಕಿಯಿದೆ. 1.70 ಕೋಟಿ ರೂ. ಬಾಕಿ ಇದೆ. ಆದ್ರೆ ತೆರಿಗೆ ವಿಚಾರಕ್ಕೂ ಮಾಲ್ ಬಂದ್ ಮಾಡುತ್ತಿಲ್ಲ. ನಮ್ಮ ಕಡೆಯಿಂದ ತಪ್ಪಾಗಿದೆ, ಹಾಗಾಗಿ ನಾವು ಮಾಲ್ ಕ್ಲೋಸ್ ಮಾಡ್ತಿದ್ದೇವೆ. 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಹೇಳಿದ್ದಾರೆ. ನಾವು ಇನ್ನೂ ಎರಡ್ಮೂರು ದಿನ ಮಾಲ್ ಕ್ಲೋಸ್ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್‌ಗೆ ಆ.1ರ ವರೆಗೆ ಜೈಲೇ ಗತಿ – ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

    ಇದರಲ್ಲಿ ರಾಜಕೀಯ ಇಲ್ಲ:
    ಮಾಲ್ ಬಂದ್ ಮಾಡುವ ವಿಚಾರದಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ನಮ್ಮ ಕಡೆಯಿಂದ ತಪ್ಪಾಗಿದೆ. ಫಕೀರಪ್ಪ ಅವ್ರಿಗೆ ಆಗಿರೋದಕ್ಕೆ ನೈತಿಕ ಹೊಣೆ ನಮ್ಮದೇ. ಮಾಲ್ ಎಷ್ಟು ದಿನ ಬಂದ್ ಆಗುತ್ತೆ ಗೊತ್ತಿಲ್ಲ. ಸೆಷನ್‌ನಲ್ಲಿ 7 ದಿನ ಬಂದ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಗುರುವಾರ ಮಧ್ಯಾಹ್ನದ ಬಳಿಕವೇ ನಾವು ಈ ನಿರ್ಧಾರ ಕೈಗೊಂಡಿರೋದು, ಮಾಲ್ 7 ದಿನ ಬಂದ್ ಆಗಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

  • 7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    7 ದಿನಗಳ ಕಾಲ ಜಿ.ಟಿ ಮಾಲ್ ಮುಚ್ಚಿಸುತ್ತೇವೆ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ಘೋಷಣೆ

    ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ (GT Mall) ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಘೋಷಣೆ ಮಾಡಿದ್ದಾರೆ.

    ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ ಅವರು, ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತನಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ. ಸರ್ಕಾರದ ಕ್ರಮ ಕೈಗೊಳ್ಳಬಹುದು. ಹಾಗಾಗಿ 7 ದಿನ ಮಾಲ್ ಮುಚ್ಚಿಸುತ್ತೇವೆ, ಕ್ರಮ ಜರುಗಿಸುತ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅವಧಿಯಲ್ಲೇ ಇಂದಿರಾ ಕ್ಯಾಂಟೀನ್ ಬಂದ್ – ಬೆಂಗಳೂರಲ್ಲಿ 15ಕ್ಕೂ ಹೆಚ್ಚು ಕ್ಯಾಂಟೀನ್‌ಗಳಿಗೆ ಬೀಗ

    ಇದಕ್ಕೂ ಮುನ್ನ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ಗರಂ ಆಗಿದ್ದರು. ಅವನು ಎಷ್ಟೇ ದೊಡ್ಡವನು ಇರಲಿ. ಅವನಿಗೆ ಏನು ಅನ್ನೋದನ್ನ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಎಲ್ಲಾ ಮಾಲ್‌ಗಳಿಗೂ ಒಂದೇ ರೂಲ್ಸ್ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಇದೇ ವೇಳೆ ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ. ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಶಾಸಕ ಲಕ್ಷ್ಮಣ ಸವದಿ ಆಗ್ರಹಿಸಿದರೆ, ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಒತ್ತಾಯಿಸಿದರು. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಅಲ್ಲದೆ ರಾಜ್ಯದ ಎಲ್ಲಾ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದನ್ನು ಬಿಡಬೇಕು ಎಂದು ಅಶೋಕ್ ಪಟ್ಟಣ, ಬೈರತಿ ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ರು. ಒಟ್ಟಾರೆಯಾಗಿ ಇಡೀ ಸದನ ಮಾಲ್ ನಡವಳಿಕೆ ಖಂಡಿಸಿ ಆಕ್ರೋಶವನ್ನು ವ್ಯಕ್ತಪಡಿಸಿತು. ಆ ಬಳಿಕ ಸರ್ಕಾರದ ಪರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ 7 ದಿನಗಳ ಕಾಲ ಮಾಲ್ ಮುಚ್ಚುವ ಘೋಷಣೆ ಮಾಡಿದರು. ಇದನ್ನೂ ಓದಿ: ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ – ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

  • ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    – ಅವಮಾನಿಸಿದ್ದ ಮಾಲ್‌ ಆಡಳಿತ ಮಂಡಳಿಯಿಂದಲೇ ರೈತನಿಗೆ ಸನ್ಮಾನ

    ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ (Farmer) ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್‌ (GT Mall) ಆಡಳಿತ ಮಂಡಳಿ ಕ್ಷಮೆಯಾಚಿಸಿದೆ.

    ಘಟನೆ ಕುರಿತು ‘ಪಬ್ಲಿಕ್‌ ಟಿವಿ’ಗೆ ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್‌, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ನಿನ್ನೆ ಮಧ್ಯಾಹ್ನವೂ ವ್ಯಕ್ತಿಯೊಬ್ಬರು ಪಂಚೆ ಧರಿಸಿ ಮಾಲ್‌ಗೆ ಬಂದಿದ್ದರು. ಪಂಚೆಯನ್ನು ಮೊಣಕಾಲಿನ ತನಕ ಉಟ್ಕೊಂಡು ನಿಂತಿದ್ರು. ಆಗ ಕೆಳಗಿನ ಫ್ಲೋರ್‌ನಲ್ಲಿ ಬರ್ತ್‌ಡೇ ಪಾರ್ಟಿಯ ಇವೆಂಟ್ ನಡೆಯುತ್ತಿತ್ತು. ಈ ವಿಚಾರವನ್ನು ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೆವು ಎಂದಿದ್ದಾರೆ.

    ಸಂಜೆ ಮತ್ತೆ ರೈತನೊಬ್ಬ ಪಂಚೆ ಉಟ್ಟುಕೊಂಡು ಬಂದಿದ್ದರು. ಈ ಸಮಯದಲ್ಲಿ ನಾವು ತಡೆದು, ಮ್ಯಾನೇಜ್‌ಮೆಂಟ್‌ ಗಮನಕ್ಕೆ ತಂದಿದ್ದೇವೆ. ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ‌. ಮ್ಯಾನೇಜ್‌ಮೆಂಟ್‌ ಅವರಿಂದ ಉತ್ತರ ಬರುವ ತನಕ ಕಾಯಿಸಿದ್ದೆವು ಅಷ್ಟೆ ಎಂದು ಹೇಳಿದ್ದಾರೆ.

    ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಮಾಲ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಾಲ್‌ ಮುಂದೆ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಕನ್ನಡಿಗರಿಗೆ ಅರ್ಹತೆ ಹೇಗೆ? ಯಾವ ಹುದ್ದೆಯಲ್ಲಿ ಎಷ್ಟು?

    ನಿನ್ನೆ ರೈತ ಫಕೀರಪ್ಪಗೆ ಪ್ರವೇಶ ನಿರಾಕರಿಸಿ ಜಿಟಿ ಮಾಲ್‌ನಲ್ಲಿ ಅವಮಾನಿಸಲಾಗಿತ್ತು. ಇಂದು ಅದೇ ಮಾಲ್‌ ಆಡಳಿತ ಮಂಡಳಿಯ ಉಸ್ತುವಾರಿ ಸುರೇಶ್‌ ಅವರಿಂದ ರೈತ ಫಕೀರಪ್ಪರನ್ನು ಸನ್ಮಾನಿಸಲಾಯಿತು. ಶಾಲು, ಹೂವಿನ ಹಾರ ಹಾಕಿ ಸನ್ಮಾನಿಸಿದರು.

  • ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ರೈತನಿಗೆ ಅವಮಾನ – ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಬಿಡದ ಸಿಬ್ಬಂದಿ!

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಬಳಿಕ ಬೆಂಗಳೂರಿನ ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ರೈತರೊಬ್ಬರು (Farmer) ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಟ್ಟೆ ಕ್ಲೀನ್ ಇಲ್ಲವೆಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ ವಜಾ: MD

    ಏನಿದು ಘಟನೆ?
    ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ತಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್‌ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಧರಿಸಿದರಿಗೆ ಮಾಲ್‌ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿರುವುದಾಗಿ ನಾಗರಾಜ್‌ ಆರೋಪಿಸಿದ್ದಾರೆ.

    ನಾಗರಾಜ್‌ ಅವರ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ರೈತರು. ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮಾಲ್‌ ಒಳಗೂ ಬಿಡದೇ, ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಪುತ್ರ ನಾಗರಾಜ್‌ ದೂರಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ – ಎನ್‌ಸಿಸಿ ಕೆಡೆಟ್‌ಗಳಿಗೆ ರಾಜ್ಯಪಾಲರ ಅಭಿನಂದನೆ

    ರೈತನಿಗೆ ಮಾಲ್‌ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಯಿತು. ಅಲ್ಲೇ ಇದ್ದ ಕೆಲ ಯೂಟ್ಯೂಬರ್ಸ್‌ ಘಟನೆಯನ್ನ ವೀಡಿಯೋ ಮಾಡಲು ಶುರು ಮಾಡಿದರು. ಬಳಿಕ ಮಾಲ್‌ನ ಆಡಳಿತ ಮಂಡಳಿ ಜೊತೆ ಮಾತನಾಡಿ, ರೈತನಿಗೆ ಮಾಲ್ ಒಳಗೆ ಪ್ರವೇಶ ಕೊಡಿಸುವಂತೆ ಮಾಡಿದ್ದಾರೆ. ಅರ್ಧ ಗಂಟೆ ಬಳಿಕ ಸಿಬ್ಬಂದಿ ರೈತನಿಗೆ ಮಾಲ್‌ಒಳಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಪುತ್ರ ನಾಗರಾಜ್‌ ತಿಳಿಸಿದ್ದಾರೆ.

    ಕಳೆದ ಫೆಬ್ರವರಿ 26ರಂದು ಬೆಂಗಳೂರಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಅವಮಾನ ಮಾಡಿದ್ದ ಘಟನೆ ನಡೆದಿತ್ತು. ಇದಕ್ಕೆ ಮೆಟ್ರೋ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು. ಇದನ್ನೂ ಓದಿ: ಹೆಣ್ಮಗಳೊಬ್ಬಳಿಂದ ನಮ್ಮ ವಿರುದ್ಧ ದೂರು ಬರೆಸಿದ ರಾಜ್ಯದ ಡಿಜಿಪಿ ನಾಲಾಯಕ್: ಸದನದಲ್ಲಿ ಹೆಚ್‌.ಡಿ.ರೇವಣ್ಣ ಭಾವೋದ್ವೇಗದ ಮಾತು