Tag: gtdevegowda

  • ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ನವದೆಹಲಿ: ರಾಜ್ಯಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಲಾಬಿ ಶುರುವಾಗಿದ್ದು ಮಾಜಿ ಸಚಿವ ವಿ.ಸೋಮಣ್ಣ (v.Somanna)  ವರಿಷ್ಠರ ಭೇಟಿಗೆ ಪ್ರಯತ್ನ ಆರಂಭಿಸಿದ್ದಾರೆ. ಭಾನುವಾರವ ರಾತ್ರಿಯೇ ದೆಹಲಿಗೆ ಆಗಮಿಸಿರುವ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ.

    ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನ ಕಾಂಗ್ರೆಸ್‌ಗೆ (Congress) ಲಭ್ಯವಾಗಲಿದೆ. ಉಳಿದ ಬಾಕಿ ಒಂದು ಸ್ಥಾನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ (BJP) ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಅವರು ಲೋಕಸಭೆ ಬದಲಿಗೆ ರಾಜ್ಯಸಭೆಗೆ ತಮ್ಮ ಹೆಸರು ಘೋಷಿಸುವಂತೆ ವರಿಷ್ಠರಿಗೆ ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ:  ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ವರಿಷ್ಠರಿಗೆ ನನ್ನ ಭಾವನೆ ವ್ಯಕ್ತಪಡಿಸಿದ್ದೇನೆ. ಯಾರಿಗೆ ಅವಕಾಶ ಕೊಡುತ್ತಾರೆ ಗೊತ್ತಿಲ್ಲ. ಒಂದು ವೇಳೆ ಕೊಟ್ಟರೆ ಒಳ್ಳೆ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಕೊಡಲಿಲ್ಲ ಅಂದರೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ತುಮಕೂರು ಕ್ಷೇತ್ರಕ್ಕೆ ನಾನು ಸ್ಪರ್ಧಿಸಬೇಕು ಎನ್ನುವುದು ಹಾಲಿ ಸಂಸದ ಬಸವರಾಜು ಅವರ ಅಭಿಲಾಷೆ. ಸ್ಥಳೀಯ ನಾಯಕರೂ ಸಹ ಬೆಂಬಲ ನೀಡುತ್ತಿದ್ದಾರೆ. ಅಂತಿಮವಾಗಿ ಎಲ್ಲವೂ ಹೈಕಮಾಂಡ್ ನಿರ್ಧರ ಮಾಡಲಿದೆ. ಕೊಟ್ಟರೆ ಜವಾಬ್ದಾರಿ ನಿಭಾಯಿಸುತ್ತೇನೆ. ಇಲ್ಲ ಅಂದರೆ ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡಲ್ಲ – ಶಶಿ ತರೂರ್‌

    ಮಾಜಿ ಸಿಎಂ ಹೆಚ್‌ಡಿ.ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಪಕ್ಷ ಬೇರೆ ಇರಬಹುದು. ಆದರೆ ನಾವು ಮೊದಲಿನಿಂದ ಪರಿಚಯ. ಮೊನ್ನೆ ಅವರ ತೋಟದ ಮನೆಯಲ್ಲಿ ಭೇಟಿ ಆಗಿದ್ದೇನೆ. ಅವರು 2 ಬಾರಿ ಮುಖ್ಯಮಂತ್ರಿಯಾದವರು. ಹೀಗಾಗಿ ಸಹಜವಾಗಿ ಮಾತಾಡಿದ್ದೇವೆ ಅಷ್ಟೇ. ನಾವು ಹಿಂದು ಹಿಂಗೇ ಮಾತಾಡೋಕೆ ದೇವೇಗೌಡರು ಕಾರಣ. ಅವರ ಒಡನಾಟ ಮತ್ತು ಅವರು ಕೊಟ್ಟಿರುವ ಅನುಭವ ಮಹತ್ವ ಎಂದು ಮಾಜಿ ಪ್ರಧಾನಿ ದೇವೇಗೌಡರನ್ನು ಸೋಮಣ್ಣ ಹೋಗಳಿದ್ದಾರೆ. ಇದನ್ನೂ ಓದಿ: ಹಸಿವು ಎಂದು ಬೆಕ್ಕಿನ ಹಸಿಮಾಂಸ ತಿಂದ ಭೂಪ!

    ಸುಧಾರಕರ್‌ಗೆ ಚಿಕ್ಕಬಳ್ಳಾಪುರದಿಂದ ಭರವಸೆ ನೀಡಿದ್ದಾರಾ ಇಲ್ವಾ ಗೊತ್ತಿಲ್ಲ. ಅದರ ಮಾಹಿತಿ ಇಲ್ಲ ಮತ್ತು ಆ ಬಗ್ಗೆ ಮಾತನಾಡುವುದಿಲ್ಲ. ಸುಮಲತಾ ಸ್ಪರ್ಧಿಸುವುದರ ಬಗ್ಗೆ ಹೈಕಮಾಂಡ್ ನಿರ್ಧರ ಮಾಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

  • ದೇವೇಗೌಡರಿಗೆ ನಾನೇ ಕೇಸರಿ ಶಾಲು ಹಾಕಿ ಸ್ವಾಗತಿಸುತ್ತೇನೆ: ಯಶ್‌ಪಾಲ್ ಸುವರ್ಣ

    ದೇವೇಗೌಡರಿಗೆ ನಾನೇ ಕೇಸರಿ ಶಾಲು ಹಾಕಿ ಸ್ವಾಗತಿಸುತ್ತೇನೆ: ಯಶ್‌ಪಾಲ್ ಸುವರ್ಣ

    ಉಡುಪಿ: ಮಾಜಿ ಪ್ರಧಾನಿ ದೇವೇಗೌಡರಿಗೆ (Devegowda) ನಾನೇ ಕೇಸರಿ ಶಾಲು ಹಾಕಿ ಸ್ವಾಗತಿಸುತ್ತೇನೆ ಎಂದು ಶಾಸಕ ಯಶ್‌ಪಾಲ್ ಸುವರ್ಣ (Yashpal Anand Suvarna) ಹೇಳಿದ್ದಾರೆ.

    ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಎನ್‌ಡಿಎ ಒಪ್ಪಿಕೊಂಡು ಮೈತ್ರಿಕೂಟದ ಜೊತೆಗಿದ್ದಾರೆ. ಕೇಸರಿ ಶಾಲು ಧರಿಸಲ್ಲ ಎಂಬುದು ಅವರ ವೈಯಕ್ತಿಕ ಹೇಳಿಕೆಯೋ ಅಥವಾ ಪಕ್ಷದ ನಿಲುವೋ ಗೊತ್ತಿಲ್ಲ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಪ್ಪಿಕೊಂಡಿದ್ದಾರೆ. ಮೋದಿ ಕಾರ್ಯಕ್ರಮದ ಗುಣಗಾನವನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 28ಕ್ಕೆ 28 ಗೆಲ್ಲುವ ಪ್ರಯತ್ನವನ್ನು ಎನ್‌ಡಿಎ ಮಾಡುತ್ತಿದೆ. ದೇವೇಗೌಡರ ಈ ಹೇಳಿಕೆ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ದೇವೇಗೌಡರು ಉಡುಪಿಗೆ ಬಂದಾಗ ನಾನು ಶಾಸಕನಾಗಿ ಕೇಸರಿ ಶಾಲು ಹಾಕಿ ಸ್ವಾಗತ ಮಾಡುತ್ತೇನೆ ಎಂದು ಯಶ್‌ಪಾಲ್ ಹೇಳಿದ್ದಾರೆ. ಇದನ್ನೂ ಓದಿ: ಹಿಂದೆಯೇ ಅಡ್ವಾಣಿಗೆ ಭಾರತ ರತ್ನ ಕೊಡಬೇಕಿತ್ತು: ಸತೀಶ್‌ ಜಾರಕಿಹೊಳಿ

    ಅಡ್ವಾಣಿಗೆ ಭಾರತ ರತ್ನ ಗೌರವ ಸಿಕ್ಕಿರುವ ಕುರಿತು ಮಾತನಾಡಿ, ಮಾಜಿ ಉಪ ಪ್ರಧಾನಿ, ರಾಷ್ಟ್ರದ ಹಿರಿಯ ನೇತಾರ ಎಲ್.ಕೆ.ಅಡ್ವಾಣಿಗೆ (Lal Krishna Advani) ಭಾರತ ರತ್ನ ಗೌರವ ಸಿಕ್ಕಿದೆ. ದೇಶಕ್ಕೆ ಅಡ್ವಾಣಿ ಅವರ ಕೊಡುಗೆ ಬಹಳಷ್ಟು ಇದೆ. ಸಂಸದರಾಗಿ, ಗೃಹ ಸಚಿವರಾಗಿ, ಉಪ ಪ್ರಧಾನಿಗಳಾಗಿ ಕೆಲಸ ಮಾಡಿದ್ದಾರೆ. ರಥಯಾತ್ರೆಯ ಮೂಲಕ ದೇಶಾದ್ಯಂತ ಜನರ ಮನ ಗೆದ್ದವರು. ರಾಮಮಂದಿರದ ಕನಸು ನನಸಾಗುವ ಸಂದರ್ಭದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಲ್ಲಿಕೆ ಆಗಿರುವುದು ನಮಗೆ ಬಹಳ ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಅಂತಾ ಪತ್ರ ಬರೆದಿದ್ದೆವು: ಸಿದ್ದರಾಮಯ್ಯ

    ರಾಮಮಂದಿರದ ಹೋರಾಟದಲ್ಲಿ ಅಡ್ವಾಣಿ ಅವರ ಯೋಚನೆ ಮತ್ತು ಯೋಜನೆ ಬಹಳಷ್ಟು ಇತ್ತು. ರಾಮನ ಪ್ರಾಣ ಪ್ರತಿಷ್ಠೆ ಸಂದರ್ಭ ಈ ಘೋಷಣೆ ಆಗಿರುವುದು ಅಡ್ವಾಣಿ ಅವರ ಗೌರವ ಮತ್ತಷ್ಟು ಹೆಚ್ಚಿಸಿದೆ. ಪ್ರತಿಷ್ಠಾಪನೆ ಸಂದರ್ಭ ಅನಾರೋಗ್ಯದ ಪರಿಣಾಮ ಅವರು ಭಾಗವಹಿಸಿರಲಿಲ್ಲ. ಉಡುಪಿ ಜನತೆಯ ಪರವಾಗಿ ಅಡ್ವಾಣಿ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಥಯಾತ್ರೆಯ ಸಂದರ್ಭ ಡಾ.ವಿ.ಎಸ್.ಆಚಾರ್ಯ ಜೊತೆ ಬಹಳ ಒಡನಾಟ ಇದ್ದವರು. ದೇಶದ ಮತ್ತು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಅಡ್ವಾಣಿ ಕಾಳಜಿ ತೋರಿದರು ಮತ್ತು ಸಲಹೆ ಸೂಚನೆಗಳನ್ನು ಕೊಟ್ಟವರು ಎಂದು ಅವರನ್ನು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ವೋಟ್ ಹಾಕಿಲ್ಲ ಅಂತ ಯಾರನ್ನಾದ್ರು ಓಡಿಸ್ಕೊಂಡು ಹೋಗ್ತಾ ಇದೀವಾ: ಹೆಚ್.ಸಿ.ಬಾಲಕೃಷ್ಣ

    ಸಿಎಂ ಸಿದ್ದರಾಮಯ್ಯ ಕುಂಕುಮ ನಿರಾಕರಿಸಿದ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ಭ್ರಷ್ಟಾಚಾರ ದೇಶ ವಿರೋಧಿ ಮತ್ತು ಹಿಂದೂ ವಿರೋಧಿ ನೀತಿ ಮುಂದುವರೆಸಿದ್ದಾರೆ. ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟçದ ಕೂಗು ಎಬ್ಬಿಸಿದ್ದಾರೆ. ಕುಂಕುಮ ಕೊಡಲು ಬಂದಾಗ ಸಿದ್ದರಾಮಯ್ಯ ಅದನ್ನು ತಡೆದಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದಲ್ಲಿದ್ದಾರಾ? ಪಾಕಿಸ್ತಾನದಲ್ಲಿ ಇದ್ದಾರಾ? ಎಂಬ ಸಂಶಯವಿದೆ. ಅಲ್ಪಸಂಖ್ಯಾತ ಮುಸ್ಲಿಮರ ಓಲೈಕೆಗಾಗಿ ಹೀಗೆ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಅವರು ನಿವೃತ್ತಿ ಜೀವನವನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಕಳೆಯುವ ಯೋಚನೆ ಮಾಡಿರಬಹುದು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

  • ಕುತೂಹಲದ ಕ್ಷೇತ್ರವಾಗಿದೆ ಹುಣಸೂರು- ಜಿಟಿಡಿ ಮೌನ ಯಾರಿಗೆ ಲಾಭ, ಯಾರಿಗೆ ನಷ್ಟ?

    ಕುತೂಹಲದ ಕ್ಷೇತ್ರವಾಗಿದೆ ಹುಣಸೂರು- ಜಿಟಿಡಿ ಮೌನ ಯಾರಿಗೆ ಲಾಭ, ಯಾರಿಗೆ ನಷ್ಟ?

    ಮೈಸೂರು: ಹುಣಸೂರು ಉಪ ಚುನಾವಣೆಯ ಗೆಲುವಿಗೆ ಮೂರು ಪಕ್ಷಗಳು ನಾನಾ ಲೆಕ್ಕಾಚಾರ ಹಾಕುತ್ತಿವೆ. ಆದರೆ, ಈ ಲೆಕ್ಕಾಚಾರದ ನಡುವೆ ಎಲ್ಲರ ಚಿತ್ತ ಮಾಜಿ ಸಚಿವ ಜಿ.ಟಿ. ದೇವೇಗೌಡರ ಮೇಲೆ ನೆಟ್ಟಿದೆ. ಜಿಟಿಡಿ ಸದ್ಯಕ್ಕೆ ನಾನು ಮೌನ ಅಂತಿದ್ದಾರೆ. ಈ ಮೌನ ಯಾರಿಗೆ ಲಾಭ ಕೊಡುತ್ತೆ, ಯಾರಿಗೆ ನಷ್ಟ ಉಂಟು ಮಾಡುತ್ತೆ ಎಂಬ ಚರ್ಚೆ ಬಿರುಸು ಪಡೆದಿದೆ.

    ಹುಣಸೂರು ಉಪ ಚುನಾವಣೆಯಲ್ಲಿ ಕಣಕ್ಕೆ ಬಿಜೆಪಿಯಿಂದ ತಮ್ಮ ಪುತ್ರ ಹರೀಶ್ ಗೌಡನನ್ನು ಕಣಕ್ಕೆ ಇಳಿಸಲು ಜಿಟಿಡಿ ನಡೆಸಿದ ಯತ್ನ ಈಗ ಗುಟ್ಟಾಗಿ ಉಳಿದಿಲ್ಲ. ಯಾವಾಗ ಎಚ್. ವಿಶ್ವನಾಥ್ ತಾವೇ ಕಣಕ್ಕೆ ಇಳಿಯುವ ನಿರ್ಧಾರ ಪ್ರಕಟಿಸಿ ಅವರ ಇಚ್ಛೆಯಂತೆ ಬಿಜೆಪಿ ಕೂಡ ಅವರಿಗೆ ಟಿಕೆಟ್ ನೀಡಿತೋ ಆ ಕ್ಷಣವೇ ಜಿಟಿಡಿ ಪ್ಲಾನ್ ಉಲ್ಟಾ ಆಯಿತು. ಆಗಲೇ ಅವರು ನನಗೂ ಈ ಚುನಾವಣೆಗೂ ಸಂಬಂಧ ಇಲ್ಲ ಅಂತ ಘೋಷಿಸಿದರು. ಇದರಿಂದ ಪ್ರಮುಖವಾಗಿ ಬಿಜೆಪಿಗೆ ಟೆನ್ಷನ್ ಶುರುವಾಗಿದೆ.

    ಜಿಟಿಡಿ ಮನಸ್ಸು ಮಾಡಿದರೆ ಹುಣಸೂರು ಚುನಾವಣೆಯ ಫಲಿತಾಂಶದ ದಿಕ್ಕನ್ನೇ ಬದಲಾಯಿಸಬಲ್ಲರು. ಅವರ ಪುತ್ರ ಹರೀಶ್ ಗೌಡ ಈ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತ ಸಾಧಿಸಿದ್ದಾರೆ. ಒಕ್ಕಲಿಗ ಸಮುದಾಯದ ಮತಗಳನ್ನು ಪಕ್ಷ ಮೀರಿದಂತೆ ತಮ್ಮತ್ತ ಸೆಳೆಯುವ ಶಕ್ತಿ ಇದೆ. ಹೀಗಾಗಿ, ಜಿಟಿಡಿ ಮೌನದ ಹಿಂದೆ ಯಾವ ಸಂದೇಶ ಇದೆ ಅನ್ನೋದೇ ಅಭ್ಯರ್ಥಿಗಳ ನಿದ್ದೆಗೆಡ್ಡಿಸಿರೋದು.

    ಜೆಡಿಎಸ್ ನಲ್ಲಿದ್ದರು ಬಿಜೆಪಿ ವಿಚಾರದಲ್ಲಿ ಸಾಫ್ಟ್ ಕಾರ್ನರ್ ಹೊಂದಿರುವ ಜಿಟಿಡಿ, ಒಂದು ವೇಳೆ ಮೌನವಾಗಿಯೇ ಬಿಜೆಪಿ ಪರ ಬ್ಯಾಟಿಂಗ್ ಮಾಡಿದರೆ ಅದು ಬಿಜೆಪಿ ಅಭ್ಯರ್ಥಿಗೆ ಆಗುವ ದೊಡ್ಡ ಲಾಭ. ಒಂದು ವೇಳೆ ಅವರು ಬಿಜೆಪಿ ಪರ ಬ್ಯಾಟ್ ಮಾಡದೆ ನಿಜಕ್ಕೂ ಮೌನವಾಗಿ ಇದ್ದು ಬಿಟ್ಟರೆ ಅದು ಕಾಂಗ್ರೆಸ್ಸಿಗೆ ಆಗುವ ದೊಡ್ಡ ಲಾಭ. ಜಿಟಿಡಿ ಶಕ್ತಿಯನ್ನು ಎಚ್. ವಿಶ್ವನಾಥ್ ಸ್ಪಷ್ಟವಾಗಿ ಅರಿತಿದ್ದಾರೆ. ಹೀಗಾಗಿ, ಜಿಟಿಡಿ ಮನವೊಲಿಸೋ ಯತ್ನ ನಡೆಸಿದ್ದಾರೆ.