Tag: guest lecture

  • ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

    ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

    ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ (Guest Lecturer) ಮಾಸಿಕ ಗೌರವಧನವನ್ನು (Remuneration) ತಲಾ 2,000 ರೂ.ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: Wayanad | ರೆಸಾರ್ಟ್‌ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವು

    ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂ.ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ಆಗಲಿದೆ. ಇದನ್ನೂ ಓದಿ: ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಆಸ್ತಿಗಾಗಿ ಹಿರಿಯ ಮಗಳ ಸಂಚು: ಚೈತ್ರಾ ತಾಯಿ

    ಅಂತೆಯೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ರೂ.ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂ. ನಿಗದಿಯಾಗಿತ್ತು. ಇಂದಿನ ಆದೇಶದಿಂದ ಅತಿಥಿ ಉಪನ್ಯಾಸಕರಿಗೆ ಪರಿಷ್ಕೃತ ಗೌರವ ಸಂಭಾವನೆಯು 14,000 ರೂ. ಆಗಲಿದೆ. ಇದನ್ನೂ ಓದಿ: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿ ರಕ್ಷಣೆ

  • ಪಿಯುಸಿ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗಿಫ್ಟ್‌ – ಗೌರವಧನ ಹೆಚ್ಚಳ

    ಪಿಯುಸಿ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗಿಫ್ಟ್‌ – ಗೌರವಧನ ಹೆಚ್ಚಳ

    ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

    ಇತ್ತೀಚೆಗೆಷ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 9,000 ರೂ.ನಿಂದ 15,000 ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮನವಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದರು.

    ಈಗ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಜೊತೆಗೆ ಗೌರವಧನ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಎರಡು ಮಹತ್ವದ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ

    Live Tv
    [brid partner=56869869 player=32851 video=960834 autoplay=true]

  • ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

    ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

    ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

    2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆ ಅಬ್ಬರ – ಕೊಡಗು, ಉಡುಪಿ, ಚಿಕ್ಕಮಗಳೂರು ಸೇರಿ 5 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

    VIDHAN SHOUDHA

    3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.

    ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ. ಇದನ್ನೂ ಓದಿ: ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    Live Tv
    [brid partner=56869869 player=32851 video=960834 autoplay=true]

  • ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲಾಗದೆ ಅತಿಥಿ ಉಪನ್ಯಾಸಕ ಗೋಳಾಟ

    ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲಾಗದೆ ಅತಿಥಿ ಉಪನ್ಯಾಸಕ ಗೋಳಾಟ

    ಕೊಪ್ಪಳ: ಪತ್ನಿಯ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕಂಗಾಲಾದ ಅತಿಥಿ ಉಪನ್ಯಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ತನ್ನ ನೋವನ್ನ ಹೇಳಿಕೊಂಡಿದ್ದಾರೆ.

    ಡಾ.ಮಂಜಣ್ಣ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ್ ರಾವ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿದ್ದಾರೆ. ಇದೀಗ ತನ್ನ ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲು ಸಹಾಯ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಬಳಿ ಸಾಮಾಜಿಕ ಜಾಲತಾಣದ ಮೂಲಕ ಬೇಡಿಕೊಂಡಿದ್ದಾರೆ.

    ಮಂಜಣ್ಣ ಅವರ ಪತ್ನಿ ಕಿಡ್ನಿ ಹಾಗೂ ಶ್ವಾಸಕೋಶ ವೈಫಲ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಬೇಕಾಗಿದೆ. ಆದರೆ ಆಕೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಕೈಚೆಲ್ಲಿ ಕುಳಿತಿದ್ದಾರೆ. ಅದಕ್ಕಾಗಿ ಸಾಮಾಜಿಕ ಜಾಲತಾಣದ ಮೂಲಕ ಸಚಿವರಲ್ಲಿ ಬೇಡಿಕೊಂಡಿದ್ದು, ಯಾರಾದರೂ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ.

  • ಉಪನ್ಯಾಸಕನ ಮನೆಯಲ್ಲಿ ಖೋಟಾನೋಟು ಮೆಷಿನ್- ನಮ್ಮ ತಪ್ಪೇನಿಲ್ಲ ಅಂತಿದೆ ಕೊಪ್ಪಳದ ಕುಟುಂಬ

    ಉಪನ್ಯಾಸಕನ ಮನೆಯಲ್ಲಿ ಖೋಟಾನೋಟು ಮೆಷಿನ್- ನಮ್ಮ ತಪ್ಪೇನಿಲ್ಲ ಅಂತಿದೆ ಕೊಪ್ಪಳದ ಕುಟುಂಬ

    ಕೊಪ್ಪಳ: ಅತಿಥಿ ಉಪನ್ಯಾಸಕರೊಬ್ಬರ ಮನೆಯಲ್ಲಿ 2000 ರೂಪಾಯಿ ಖೋಟಾ ನೋಟುಗಳು ಮತ್ತು ಅದನ್ನು ತಯಾರಿಸುವ ಮೆಷಿನ್ ಪತ್ತೆಯಾಗಿದೆ.

    ಕೊಪ್ಪಳ ನಗರದ ಕುಂಬಾರ ಓಣಿಯಲ್ಲಿನ ಅತಿಥಿ ಉಪನ್ಯಾಸಕ ಶಿವಕುಮಾರ್ ಕುಕನೂರು ಮನೆಗೆ ಶುಕ್ರವಾರ ಪಿಎಸ್‍ಐ ಫಕೀರಮ್ಮ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ರು. ಈ ವೇಳೆ ಸುಮಾರು 1 ಲಕ್ಷ ರೂ. ಮೌಲ್ಯದ 2 ಸಾವಿರ ಮುಖ ಬೆಲೆಯ ಖೋಟಾ ನೋಟು ಬಾಕ್ಸ್ ಪತ್ತೆಯಾಗಿದೆ.

    ಶಿವಕುಮಾರ್‍ನನ್ನ ಬಂಧಿಸಿ ಕರೆದೊಯ್ದ ಕೂಡಲೇ ಸಂಬಂಧಿಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ರು. ಇದ್ರಲ್ಲಿ ಶಿವಕುಮಾರ್ ತಪ್ಪಿಲ್ಲ, ಯಾರೋ ದುಷ್ಕರ್ಮಿಗಳು ನಮ್ಮ ಮನೆಯಲ್ಲಿ ಖೋಟಾ ನೋಟು, ಮೆಷಿನ್ ತಂದಿಟ್ಟಿದ್ದಾರೆಂದು ಆರೋಪಿಸಿದ್ದಾರೆ. ಜೊತೆಗೆ ಖೋಟಾ ನೋಟು ಶಿವಕುಮಾರ್ ಮನೆಯಲ್ಲಿವೆ ಎಂದು ದೂರು ನೀಡಿದ ವ್ಯಕ್ತಿಯ ಹೆಸರು ಬಹಿರಂಗ ಪಡಿಸಲು ಪಟ್ಟು ಹಿಡಿದಿದ್ದಾರೆ.