Tag: Gujarat assembly elections

  • ಗುಜರಾತ್‌ ಚುನಾವಣೆ – ಇಂದು ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ

    ಗುಜರಾತ್‌ ಚುನಾವಣೆ – ಇಂದು ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ

    ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಇಂದು ಪ್ರಕಟಿಸಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯದ ಜನರು ಪಕ್ಷಕ್ಕೆ ಸಲ್ಲಿಸುವ ಅಭಿಪ್ರಾಯದ ಆಧಾರದ ಮೇಲೆ ಅಭ್ಯರ್ಥಿ ಹೆಸರು ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಎಎಪಿಯಿಂದ ಉನ್ನತ ಹುದ್ದೆಗೆ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ರೇಸ್‌ನಲ್ಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ತವರಿಗೆ ಚುನಾವಣೆ ಫಿಕ್ಸ್‌ – ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ

    ಕೇಜ್ರಿವಾಲ್ ಅವರು ಶುಕ್ರವಾರ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೆಸರನ್ನು ಘೋಷಿಸಲಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಅವರು, ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು SMS, WhatsApp, ಧ್ವನಿ ಮೇಲ್ ಮತ್ತು ಇ-ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸಲು ಜನತೆಗೆ ಮನವಿ ಮಾಡಿದ್ದರು.

    ನವೆಂಬರ್ 3ರ ಸಂಜೆಯವರೆಗೆ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅವರ ಅಭಿಪ್ರಾಯಗಳ ಆಧಾರದ ಮೇಲೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ನ.4ರಂದು ಪ್ರಕಟಿಸಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದರು. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ

    ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್‌ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್‌ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಅಲ್ಲದೇ ಡಿಸೆಂಬರ್‌ 8ಕ್ಕೆ ಮತ ಎಣಿಕೆ ನಡೆಯಲಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ತವರಿಗೆ ಚುನಾವಣೆ ಫಿಕ್ಸ್‌ – ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ

    ಮೋದಿ ತವರಿಗೆ ಚುನಾವಣೆ ಫಿಕ್ಸ್‌ – ಗುಜರಾತ್‌ನಲ್ಲಿ ಡಿ.1, 5ಕ್ಕೆ ಎರಡು ಹಂತದಲ್ಲಿ ಮತದಾನ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ದಿನಾಂಕ ಪ್ರಕಟವಾಗಿದ್ದು, ಡಿಸೆಂಬರ್‌ 1 ರಂದು ಮೊದಲ ಹಂತ ಹಾಗೂ ಡಿಸೆಂಬರ್‌ 5ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಅಲ್ಲದೇ ಡಿಸೆಂಬರ್‌ 8ಕ್ಕೆ ಮತ ಎಣಿಕೆ ನಡೆಯಲಿದೆ.

    ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ (Election Commission) ಮುಖ್ಯ ಆಯುಕ್ತ ರಾಜೀವ್ ಕುಮಾರ್ (Rajeev Kumar), ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮುಹೂರ್ತ

    ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಗುಜರಾತ್ ವಿಧಾನಸಭೆಯಲ್ಲಿ 182 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಜೊತೆಗೆ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

    ಮೊದಲ ಹಂತ
    ಚುನಾವಣೆ ಅಧಿಸೂಚನೆ – ನವೆಂಬರ್ 5 ಹಾಗೂ ನಾಮಪತ್ರ ಸಲ್ಲಿಕೆಗೆ ನವೆಂಬರ್ 14 ಕೊನೆಯ ದಿನವಾಗಿದೆ. ನವೆಂಬರ್ 15ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ನವೆಂಬರ್ 17 ಕೊನೆಯ ದಿನ. ಇದನ್ನೂ ಓದಿ: 2025ರಲ್ಲಿ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆ – ಸಮಾವೇಶದಲ್ಲಿ ಹೂಡಿಕೆದಾರರ ಗಮನ ಸೆಳೆದ ಜೋಶಿ

    ಎರಡನೇ ಹಂತ
    ಚುನಾವಣೆ ಅಧಿಸೂಚನೆ – ನವೆಂಬರ್ 10 ಹಾಗೂ ನಾಮಪತ್ರ ಸಲ್ಲಿಕೆಗೆ ನವೆಂಬರ್ 17 ಕೊನೆಯ ದಿನ. ನವೆಂಬರ್ 18ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ನವೆಂಬರ್ 21 ಕೊನೆ ದಿನ.

    2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಒಟ್ಟು 182 ಸ್ಥಾನಗಳ ಪೈಕಿ 99 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ (Congress) 77 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಇತರರು 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಚುನಾವಣೆಯಲ್ಲಿ ಸೋತರೂ 30 ವರ್ಷಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು‌.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‍ನಲ್ಲಿ ಪ್ರಾದೇಶಿಕ ಪಕ್ಷ ಇದ್ದಿದ್ರೆ ಜಯ ಗಳಿಸುತ್ತಿತ್ತು: ಎಚ್‍ಡಿಕೆ

    ಬೆಂಗಳೂರು: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳಿಗೂ ನಿರಾಶೆ ಮೂಡಿಸಿದೆ. ಆದರೆ ಗುಜರಾತ್ ನಲ್ಲಿ ಪ್ರಾದೇಶಿಕ ಪಕ್ಷ ಇದಿದ್ದರೆ ಜಯ ಗಳಿಸುತ್ತಿತ್ತು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನರನ್ನು ಒಲಿಸಿಕೊಳ್ಳಲು 75 ದಿನ ನಿರಂತರ ಹರಸಾಹಸ ಪಟ್ಟಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಆ ಮೂವರ ಹುಡುಗರು ಇಲ್ಲದೇ ಹೋಗಿದ್ದಾರೆ ಅಧೋಗತಿಗೆ ಹೋಗುತ್ತಿತ್ತು. ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಆ ರಾಜ್ಯಗಳ ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿಲ್ಲ. ವೈಯಕ್ತಿಕ ಮಾತುಗಳು, ಕೆಟ್ಟ ಭಾಷೆ ಬಳಕೆ ಬಗ್ಗೆ ಮಾತನಾಡಿವೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ಗುಜರಾತ್ ನಲ್ಲಿ ಗ್ರಾಮೀಣ ಭಾಗದ ಜನ, ನರ್ಮದಾ ನದಿಯ ಭಾಗ ರೈತರು ಬಿಜೆಪಿಯನ್ನು ತಿರಸ್ಕಾರ ಮಾಡಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಆರು ಲಕ್ಷ ನೋಟಾ ಮತದಾನ ಆಗಿದೆ ಎಂಬುವುದೇ ಸಾಕ್ಷಿ. ಈ ಎಲ್ಲಾ ಮತಗಳು ಬಿಜೆಪಿ ಪಕ್ಷಕ್ಕೆ ಸೇರಿದ್ದವು. ಆದರೆ ಗುಜರಾತ್ ನಲ್ಲಿ ಪ್ರಾದೇಶಿಕ ಪಕ್ಷ ಇದಿದ್ದರೆ ಖಂಡಿತ ಜಯಗಳಿಸುತ್ತಿತ್ತು. ಮುಂದೆ ಕರ್ನಾಟಕದ ಜನ ಸಹ ಎರಡು ಪಕ್ಷಗಳನ್ನು ತಿರಸ್ಕಾರ ಮಾಡುತ್ತಾರೆ. ಕರ್ನಾಟಕದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅಮಿತ್ ಶಾ ಮತ್ತು ಮೋದಿ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದ ಎಚ್‍ಡಿಕೆ, ರಾಜನಾಥ್ ಸಿಂಗ್ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರು ಕರ್ನಾಟಕದಲ್ಲಿ ಆಡಳಿತದಲ್ಲಿದ್ದಾಗ ಏನು ಮಾಡಿದರು ಎನ್ನುವುದು ಜನರಿಗೆ ಗೊತ್ತಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಮೂರುವರೇ ಆಡಳಿತ ಅವಧಿಯಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದರು. ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಅದ್ದರಿಂದ ಶಾ ಮತ್ತು ಮೋದಿ ಕರ್ನಾಟಕಕ್ಕೆ ಬಂದು ಏನು ಹೇಳುತ್ತಾರೆ. ಅಲ್ಲದೆ ರಾಜ್ಯದ ಎರಡು ರಾಷ್ಟ್ರೀಯ ಪಕ್ಷದ ನಾಯಕರು ಹತಾಶೆಯಿಂದ ಏಕವಚನ ಪ್ರಯೋಗ ಮಾಡುತ್ತಿದ್ದಾರೆ. ಇದು ಅವರ ನಡೆಯನ್ನು ತೋರಿಸುತ್ತದೆ ಎಂದರು. ಇದನ್ನೂ ಓದಿ: ವಿಜಯೋತ್ಸವದ ಖುಷಿಯಲ್ಲಿರುವ ಕಾರ್ಯಕರ್ತರಿಗೆ ಹೊಸ ಮಂತ್ರ ಪಠಿಸಿದ ಮೋದಿ

    ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಅವರು ಸರ್ಕಾರ ಜಾಹೀರಾತುಗಳ ಹಿಂದೆ ಬಿದ್ದಿದ್ದಾರೆ. ಹಳೇ ಕಾಮಗಾರಿಗಳಿಗೆ ದುಡ್ಡು ಕೊಟ್ಟಿದ್ದಾರೆ ಹೊರತು ರೈತರಿಗೆ ಹೊಸ ಯೋಜನೆ ಕೊಟ್ಟಿಲ್ಲ. ಹೆಚ್ಚು ಕಡಿಮೆ ಏಳು ಸಾವಿರ ಕೋಟಿಯಲ್ಲಿ ಆರು ಸಾವಿರ ಕೋಟಿ ದುಡ್ಡು ರಿವರ್ಕ್ ಮಾಡಲು ಖರ್ಚು ಮಾಡಿದ್ದಾರೆ. ರಾಜ್ಯದ ಜನರ ದುಡ್ಡಿನಲ್ಲಿ ಕಾಂಗ್ರೆಸ್ ನಾಯಕರು ಪ್ರಚಾರ ಮಾಡುತ್ತಾ ಸುತ್ತುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಬೆಂಗ್ಳೂರು ರೆಸಾರ್ಟಿಗೆ ಬಂದಿದ್ದ ಶಾಸಕರಲ್ಲಿ ಎಷ್ಟು ಮಂದಿ ಜಯಗಳಿಸಿದ್ದಾರೆ: ಡಿಕೆಶಿ ಹೇಳಿದ್ರು

    ಜೆಡಿಎಸ್‍ನ ಶಾಸಕರು ಪಕ್ಷ ಬಿಡುವುದರ ಬಗ್ಗೆ ಪ್ರತಿಕ್ರಿಯೇ ನೀಡಿದ ಅವರು, ನಮ್ಮ ಪಕ್ಷದ ಯಾವ ಶಾಸಕರು ಪಕ್ಷ ಬಿಡುವುದಿಲ್ಲ. ಎಲ್ಲರೂ ಸಹ ನನ್ನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದರು. ಇದನ್ನೂ ಓದಿ: 2014ರ ನಂತರ ಮೋದಿ ಸಾಮ್ರಾಜ್ಯ ಎಲ್ಲೆಲ್ಲಿ ವಿಸ್ತರಣೆಯಾಗಿದೆ? ಮ್ಯಾಪ್ ನೋಡಿ