Tag: Gujarat Giants

  • WPL 2024: ಆರ್‌ಸಿಬಿ ಸ್ಟಾರ್‌ ಶ್ರೇಯಾಂಕ ಪಾಟೀಲ್‌ಗೆ ಮದುವೆ ಪ್ರಪೋಸಲ್‌ ಕೊಟ್ಟ ಅಭಿಮಾನಿ

    WPL 2024: ಆರ್‌ಸಿಬಿ ಸ್ಟಾರ್‌ ಶ್ರೇಯಾಂಕ ಪಾಟೀಲ್‌ಗೆ ಮದುವೆ ಪ್ರಪೋಸಲ್‌ ಕೊಟ್ಟ ಅಭಿಮಾನಿ

    ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಹಾಗೂ ಗುಜರಾತ್‌ ಜೈಂಟ್ಸ್‌ ನಡುವಿನ ಪಂದ್ಯದ ವೇಳೆ ಆರ್‌ಸಿಬಿ ತಂಡದ ಅಭಿಮಾನಿಯೊಬ್ಬರು ಕರ್ನಾಟಕದವರೇ ಆದ ಶ್ರೇಯಾಂಕ ಪಾಟೀಲ್‌ (Shreyanka Patil) ಅವರಿಗೆ ಮದುವೆ ಪ್ರಪೋಸಲ್‌ ಕೊಟ್ಟಿದ್ದಾರೆ.

    ಐಪಿಎಲ್‌ ಆಗಲಿ ಮಹಿಳಾ ಪ್ರೀಮಿಯರ್‌ ಲೀಗ್‌ ಆಗಲಿ ಪ್ರತಿ ಮ್ಯಾಚ್‌ ನಡೆದಾಗಲೂ ಆರ್‌ಸಿಬಿ ಅಭಿಮಾನಿಗಳು (RCB Fans) ಸುದ್ದಿಯಲ್ಲಿರುತ್ತಾರೆ. WPL ಮೊದಲ ಆವೃತ್ತಿಯಲ್ಲಿ ಸತತ 5 ಪಂದ್ಯಗಳಲ್ಲಿ ಹೀನಾಯವಾಗಿ ಸೋತು ಲೀಗ್‌ ಸುತ್ತಿನಲ್ಲೇ ಹೊರಬಿದ್ದಿದ್ದ ಆರ್‌ಸಿಬಿ, 2ನೇ ಆವೃತ್ತಿಯ ಆರಂಭಿಕ ಎರಡು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಬುಧವಾರ ಪಂದ್ಯದ ವೇಳೆ ಆರ್‌ಸಿಬಿ ಸ್ಟಾರ್‌ ಶ್ರೇಯಾಂಕ ಪಾಟೀಲ್‌ ಅವರಿಗೆ ಅಭಿಮಾನಿಯೊಬ್ಬರು ಸ್ಟೇಡಿಯಂನಲ್ಲೇ ನಿಂತು ಮದುವೆ ಪ್ರಪೋಸಲ್‌ ನೀಡಿದ್ದಾರೆ. ಅಭಿಮಾನಿ ಪೋಸ್ಟರ್‌ ಹಿಡಿದಿದ್ದ ಫೋಟೋ ಇದೀಗ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಪಂದ್ಯದ ವೇಳೆ ಆರ್‌ಸಿಬಿ ಅಭಿಮಾನಿ ʻನೀವು ನನ್ನನ್ನು ಮದುವೆಯಾಗುತ್ತೀರಾ ಶ್ರೇಯಾಂಕ ಪಾಟೀಲ್?, ನಾನು ಉತ್ತರ ಕರ್ನಾಟಕʼ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಲವ್‌ ಸಿಂಬಲ್‌ ಅನ್ನು ಪೋಸ್ಟರ್‌ನಲ್ಲಿ ಬಿಡಿಸಿದ್ದಾರೆ. ಅಭಿಮಾನಿಯ ಈ ಫೋಟೋ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಪೋಸ್ಟ್‌ ಬಗ್ಗೆ ಶ್ರೇಯಾಂಕ ಪಾಟೀಲ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಲೋಕಸಭಾ ಚುನಾವಣೆಗೂ ಮುನ್ನ I.N.D.I.A ಒಕ್ಕೂಟದಲ್ಲಿ ಒಡಕು – ಚೂರನ್ನು ಮತ್ತೆ ಜೋಡಿಸುತ್ತಾ ಕಾಂಗ್ರೆಸ್‌?

    ಅಂಕಪಟ್ಟಿಯಲ್ಲಿ ಆರ್‌ಸಿಬಿ ಟಾಪರ್‌: ಕಳೆದ ವರ್ಷ WPLನಲ್ಲಿ ಲೀಗ್‌ ಸುತ್ತಿನಲ್ಲೇ ಹೊರಬಿದಿದ್ದ ಆರ್‌ಸಿಬಿ ಈ ಬಾರಿ ಸತತ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಮುನ್ನುಗ್ಗುತ್ತಿದೆ. ಮೊದಲ ಎರಡು ಪಂದ್ಯಗಳಲ್ಲಿ ಗೆದ್ದು 4 ಅಂಕ ಮತ್ತು +1.665 ರನ್‌ರೇಟ್‌ನೊಂದಿಗೆ ಅಗ್ರಸ್ಥಾನಕ್ಕೇರಿದೆ. 2 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಮುಂಬೈ ಇಂಡಿಯನ್ಸ್‌ ತಂಡ 4 ಅಂಕ ಪಡೆದಿದ್ದರೂ +0.488 ರನ್‌ರೇಟ್‌ನೊಂದಿಗೆ 2ನೇ ಸ್ಥಾನದಲ್ಲಿದೆ.

    RCBಗೆ ಭರ್ಜರಿ ಜಯ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಜೈಂಟ್ಸ್‌ ಮಹಿಳಾ ತಂಡಗಳ ನಡುವೆ ಬುಧವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 20 ಓವರ್‌ಗಳಲ್ಲಿ ಕೇವಲ 107 ರನ್‌ ಗಳಿಸಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಆರ್‌ಸಿಬಿ 12.3 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 110 ರನ್‌ ಸಿಡಿಸಿ ಗೆಲುವು ದಾಖಲಿಸಿತು. ಇದನ್ನೂ ಓದಿ: ಮೋದಿ ಸರ್ಕಾರದಲ್ಲಿ ವಿದೇಶದಲ್ಲಿ ನೆಲೆಸಿರೋ ಭಾರತೀಯರಿಗೂ ರಕ್ಷಣೆ ಸಿಕ್ತಿದೆ: ಜೈಶಂಕರ್ ಶ್ಲಾಘನೆ

  • PKL 10: ಪ್ರೊ ಕಬಡ್ಡಿ ಲೀಗ್: ಗುಜರಾತ್ ಜೈಂಟ್ಸ್‌ಗೆ ಭರ್ಜರಿ ಜಯ

    PKL 10: ಪ್ರೊ ಕಬಡ್ಡಿ ಲೀಗ್: ಗುಜರಾತ್ ಜೈಂಟ್ಸ್‌ಗೆ ಭರ್ಜರಿ ಜಯ

    ಅಹಮದಾಬಾದ್: ಇಲ್ಲಿನ ಟ್ರಾನ್ಸ್‌ಸ್ಟೇಡಿಯಾ ಅರೆನಾ ಸ್ಟೇಡಿಯಂನಲ್ಲಿ ನಡೆದ ಪ್ರೊ ಕಬಡ್ಡಿ (Kabaddi) ಲೀಗ್‍ನ 10ನೇ ಸೀಸನ್‍ನ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ (Telugu Titans) ವಿರುದ್ಧ ಗುಜರಾತ್ ಜೈಂಟ್ಸ್ (Gujarat Giants) ಭರ್ಜರಿ ಗೆಲುವು ಸಾಧಿಸಿತು.

    ಗುಜರಾತ್ ತಂಡದ ರೈಡರ್ ಸೋನು ಜಗ್ಲಾನ್ ಉತ್ತಮ ಪ್ರದರ್ಶನ ನೀಡಿದ್ದು, ಒಟ್ಟು 11 ಬಾರಿ ದಾಳಿ ಮಾಡಿ 11 ಪಾಯಿಂಟ್ಸ್ ತಂದುಕೊಟ್ಟು ಯಶಸ್ವಿಯಾದರು. ರಾಕೇಶ್ ಸುಂಗ್ರೋಯಾ 5 ರೈಡ್‍ಗಳಲ್ಲಿ 5 ಅಂಕಗಳಿಸಿದರು. ಈ ಮೂಲಕ ಆತಿಥೇಯ ಗುಜರಾತ್ ಜೈಂಟ್ಸ್ ತಂಡವು ತೆಲುಗು ಟೈಟಾನ್ಸ್ ವಿರುದ್ಧ 38-32 ಅಂಕಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿತು. ಇದನ್ನೂ ಓದಿ: WPL 2024 ಹರಾಜಿಗೆ 165 ಪ್ಲೇಯರ್ಸ್‌ ನೋಂದಣಿ – ಯಾರಾಗ್ತಾರೆ ಈ ಬಾರಿಯ ಟಾಪ್‌ ಪ್ಲೇಯರ್‌?

    ತೆಲುಗು ಟೈಟಾನ್ಸ್ ತಂಡದ ಸ್ಟಾರ್ ರೈಡರ್ ಪವನ್ ಸೆಹ್ರಾವತ್ ಈ ಪಂದ್ಯದಲ್ಲಿ ಸೂಪರ್ 10 ಪಡೆದರು. ಪಂದ್ಯದ ನಿರ್ಣಾಯಕ ಘಟ್ಟಗಳಲ್ಲಿ ತೆಲುಗು ಟೈಟಾನ್ಸ್ ಎಡವಿದ ಕಾರಣ ಗೆಲುವಿಗೆ ಆ ಅಂಕಗಳು ಸಾಕಾಗಲಿಲ್ಲ. ಇದನ್ನೂ ಓದಿ: T20I ಕ್ರಿಕೆಟ್‌ನಲ್ಲಿ ಪಾಕ್‌ ದಾಖಲೆ ನುಚ್ಚುನೂರು – ಟೀಂ ಇಂಡಿಯಾ ಯುವಪಡೆಗೆ ಮೆಚ್ಚುಗೆ

  • WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    WPL 2023: ರೋಚಕ ಜಯದೊಂದಿಗೆ ಯುಪಿ ವಾರಿಯರ್ಸ್‌ ಪ್ಲೆ ಆಫ್‌ಗೆ – RCB ಮನೆಗೆ

    ಮುಂಬೈ: ಗ್ರೇಸ್‌ ಹ್ಯಾರಿಸ್‌ (Grace Harris) ಸಿಕ್ಸರ್‌ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಯುಪಿ ವಾರಿಯರ್ಸ್‌ (UP Warriorz) ತಂಡವು ಗುಜರಾತ್‌ ಜೈಂಟ್ಸ್‌ (Gujarat Giants) ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಆವೃತ್ತಿಯಲ್ಲಿ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡ 3ನೇ ತಂಡವಾಗಿದೆ.

    ಇತ್ತ ಸತತ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ, ಪ್ಲೇ ಆಫ್‌ ಪ್ರವೇಶಿಸುವ ಕನಸು ಕಂಡಿದ್ದ ಆರ್‌ಸಿಬಿಗೆ ನಿರಾಸೆಯಾಗಿದ್ದು, ಮನೆಕಡೆಗೆ ಮುಖ ಮಾಡಿದೆ. ಇದನ್ನೂ ಓದಿ: ಸೋಫಿ ಬೆಂಕಿ ಬ್ಯಾಟಿಂಗ್‌ – RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    ಸೋಮವಾರ ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಿತ್ತು. 179 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಯುಪಿ ವಾರಿಯರ್ಸ್‌ ಇನ್ನೂ ಒಂದು ಎಸೆತ ಬಾಕಿಯಿರುವಂತೆಯೇ 181 ರನ್‌ ಚಚ್ಚಿ ಗೆಲುವು ಸಾಧಿಸಿತು.

    ಕೊನೆಯ 2 ಓವರ್‌ನಲ್ಲಿ 21 ರನ್‌ಗಳ ಅವಶ್ಯಕವಿದ್ದಾಗ‌ 19ನೇ ಓವರ್‌ನಲ್ಲಿ ಸಿಕ್ಸರ್‌, ಬೌಂಡರಿ ನೆರವಿನೊಂದಿಗೆ 12 ರನ್‌ ಸೇರ್ಪಡೆಯಾಯಿತು. ಕೊನೆಯ ಓವರ್‌ನಲ್ಲಿ ಮೊದಲ ಎಸೆತದಲ್ಲಿ 2 ರನ್‌, 2-3ನೇ ಎಸೆತಗಳಲ್ಲಿ ತಲಾ ಒಂದೊಂದು ರನ್‌ ಸೇರ್ಪಡೆಯಾಯಿತು. ನಂತರ ಕ್ರೀಸ್‌ ಉಳಿಸಿಕೊಂಡ ಸೋಫಿ ಎಕ್ಲಿಸ್ಟೋನ್‌ 5ನೇ ಎಸೆತವನ್ನು ಬೌಂಡರಿಗಟ್ಟಿ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ದರು.

    ಚೇಸಿಂಗ್‌ ಆರಂಭಿಸಿದ ಯುಪಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಒಂದಾದ ತಾಲಿಯಾ ಮೆಕ್‌ಗ್ರಾತ್‌ ಹಾಗೂ ಗ್ರೇಸ್‌ ಹ್ಯಾರಿಸ್‌ (Grace Harris) ಜೋಡಿ ಬೃಹತ್‌ ಮೊತ್ತ ಕಲೆಹಾಕಿ ತಂಡದ ಗೆಲುವಿಗೆ ಕಾರಣವಾಯಿತು. ಈ ಜೋಡಿ 53 ಎಸೆತಗಳಲ್ಲಿ 78 ರನ್‌ ಚಚ್ಚಿ ತಂಡವನ್ನು ಉತ್ತಮ ಸ್ಥಿತಿಗೆ ತಂದಿತು. ನಡುವೆ ಜೊತೆಗೂಡಿದ ಸೋಫಿ ಎಕ್ಲಿಸ್ಟೋನ್‌ ಅಜೇಯ 19 ರನ್‌ ಗಳಿಸಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಹ್ಯಾರಿಸ್‌ 41 ಎಸೆತಗಳಲ್ಲಿ ಭರ್ಜರಿ 72 ರನ್‌ (7 ಬೌಂಡರಿ, 4 ಸಿಕ್ಸರ್‌) ಚಚ್ಚಿದರೆ, ತಾಲಿಯಾ 38 ಎಸೆತಗಳಲ್ಲಿ 11 ಬೌಂಡರಿ ಸಹಿತ 57 ರನ್‌ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು.

    ಗುಜರಾತ್‌ ಪರ ಕಿಮ್‌ ಗಾರ್ಥ್‌ 2 ವಿಕೆಟ್‌ ಪಡೆದರೆ, ಮೋನಿಕಾ ಪಾಟಿಲ್‌, ಆಶ್ಲೀ ಗಾರ್ಡ್ನರ್, ತನುಜಾ ಕನ್ವರ್‌, ಸ್ನೇಹ ರಾಣಾ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಆರ್‌ಸಿಬಿ ಬಹುತೇಕ ಟೂರ್ನಿಯಿಂದ ಔಟ್‌

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡವು ಆಶ್ಲೀ ಗಾರ್ಡ್ನರ್ (Ashleigh Gardner) ಹಾಗೂ ದಯಾಳನ್‌ ಹೇಮಲತಾ ಭರ್ಜರಿ ಅರ್ಧ ಶತಕಗಳ ನೆರವಿನಿಂದ 178 ರನ್‌ ಕಲೆಹಾಕಿತ್ತು. ಆರಂಭಿಕರಾಗಿ ಸೋಫಿ ಡಂಕ್ಲಿ 23 ರನ್‌ ಗಳಿಸಿದ್ದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹೇಮಲತಾ 57 ರನ್‌ (6 ಬೌಂಡರಿ, 3 ಸಿಕ್ಸರ್‌ ಹಾಗೂ ಗಾರ್ಡ್ನರ್ 39 ಎಸೆತಗಳಲ್ಲಿ 60 ರನ್‌ (6 ಬೌಂಡರಿ, 3 ಸಿಕ್ಸರ್‌) ಚಚ್ಚಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು.

    ವಾರಿಯರ್ಸ್‌ ಪರ ರಾಜೇಶ್ವರಿ ಗಾಯಕ್ವಾಡ್‌, ಪಾರ್ಶವಿ ಚೋಪ್ರಾ ತಲಾ 2 ವಿಕೆಟ್‌ ಕಿತ್ತರೆ, ಅಂಜಲಿ ಸರ್ವಾನಿ, ಸೋಫಿ ಎಕ್ಲಿಸ್ಟೋನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಆರ್‌ಸಿಬಿ ಮನೆಗೆ: ಟೂರ್ನಿಯ ಆರಂಭಿಕ 5 ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್‌ಸಿಬಿ), ಕೊನೆಯ 2 ಪಂದ್ಯಗಳಲ್ಲಿ ಬಲಿಷ್ಠ ಕಮ್‌ಬ್ಯಾಕ್‌ ಮಾಡಿತ್ತು. ವಿರಾಟ್‌ ಕೊಹ್ಲಿ ಆರ್‌ಸಿಬಿ ತಂಡದ ಜೊತೆ ಸಂಭಾಷಣೆ ನಡೆಸಿದ ಬಳಿಕ ಬೆಂಗಳೂರು ತಂಡ ಕೊನೆಯ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ ಕಮ್‌ಬ್ಯಾಕ್‌ ಮಾಡಿತ್ತು. ತನ್ನ 6ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ಪಡೆದಿದ್ದ ಆರ್‌ಸಿಬಿ, ನಂತರ ಗುಜರಾತ್‌ ಜೈಂಟ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಪಡೆದಿತ್ತು.

    ಮುಂಬೈ, ಡೆಲ್ಲಿ ಈಗಾಗಲೇ ಪ್ಲೇ ಆಫ್‌ ಗೆ ಅರ್ಹತೆ ಪಡೆದುಕೊಂಡಿದ್ದು, 3ನೇ ಸ್ಥಾನಕ್ಕೆ ಸೆಣಸಾಟ ನಡೆದಿತ್ತು. 6 ಪಂದ್ಯಗಳನ್ನಾಡಿದ್ದ ಯುಪಿ ವಾರಿಯರ್ಸ್‌ ಇನ್ನೆರಡು ಪಂದ್ಯಗಳಲ್ಲಿ ಸೋತು, ಆರ್‌ಸಿಬಿ ಒಂದು ಪಂದ್ಯ ಗೆದ್ದಿದ್ದರೂ ಪ್ಲೇ ಆಫ್‌ ಪ್ರವೇಶಿಸುವ ಅವಕಾಶವಿತ್ತು. ಆದರೆ, ಗುಜರಾತ್‌ ಜೈಂಟ್ಸ್‌ ವಿರುದ್ಧ ಯುಪಿ ರೋಚಕ ಜಯ ಸಾಧಿಸಿದ್ದು, ಪ್ಲೇ ಆಫ್‌ ಪ್ರವೇಶಿಸಿದೆ. ಆರ್‌ಸಿಬಿಗೆ ಇನ್ನೊಂದು ಪಂದ್ಯ ಬಾಕಿಯಿದ್ದು, ಗೆದ್ದರೂ ಸೋತರೂ ಆರ್‌ಸಿಬಿ ಮನೆಗೆ ತೆರಳುವುದು ಖಚಿತವಾಗಿದೆ.

  • ಸೋಫಿ ಬೆಂಕಿ ಬ್ಯಾಟಿಂಗ್‌ – RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    ಸೋಫಿ ಬೆಂಕಿ ಬ್ಯಾಟಿಂಗ್‌ – RCBಗೆ 8 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಆಲ್‌ರೌಂಡರ್‌ ಸೋಫಿ ಡಿವೈನ್‌ (Sophie Devine) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ (RCB) ತಂಡವು, ಗುಜರಾತ್‌ ಜೈಂಟ್ಸ್‌ (Gujarat Giants) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 188 ರನ್‌ ಬಾರಿಸಿತ್ತು. 189 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಆರ್‌ಸಿಬಿ ತಂಡ 15.3 ಓವರ್‌ಗಳಲ್ಲೇ 189 ರನ್‌ ಚಚ್ಚಿ ನಿರಾಯಾಸವಾಗಿ ಗೆಲುವು ಸಾಧಿಸಿತು. ಆ ಮೂಲಕ ಸತತ ಎರಡನೇ ಗೆಲುವು ಪಡೆದುಕೊಂಡಿತು. ಜೊತೆಗೆ ಆರ್‌ಸಿಬಿ ಪಾಯಿಂಟ್ಸ್‌ ಟೇಬಲ್‌ನಲ್ಲಿ 4 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೇರಿತು.

    ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಸ್ಮೃತಿ ಮಂದಾನ (Smriti Mandhana), ಸೋಫಿ ಡಿವೈನ್‌ ಜೋಡಿ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್‌ ಪತನಕ್ಕೆ ಈ ಜೋಡಿ 57 ಎಸೆತಗಳಲ್ಲಿ ಸ್ಫೋಟಕ 125 ರನ್‌ ಚಚ್ಚಿ ಗುಜರಾತ್‌ ಬೌಲರ್‌ಗಳ ಬೆವರಿಳಿಸಿತ್ತು. ಇದನ್ನೂ ಓದಿ: ಬಲಿಷ್ಠ ಮುಂಬೈಗೆ ಮೊದಲ ಸೋಲು – ಯುಪಿ ವಾರಿಯರ್ಸ್‌ಗೆ 5 ವಿಕೆಟ್‌ಗಳ ರೋಚಕ ಜಯ

    2ನೇ ಓವರ್‌ನಿಂದಲೇ ಸಿಕ್ಸರ್‌, ಬೌಂಡರಿಗಳೊಂದಿಗೆ ಅಬ್ಬರಿಸಲು ಶುರು ಮಾಡಿದ ಸೋಫಿ ಕೇವಲ 36 ಎಸೆತಗಳಲ್ಲಿ 99 ರನ್‌ (9 ಬೌಂಡರಿ, 8 ಸಿಕ್ಸರ್‌) ಚಚ್ಚಿದರು. ಶತಕ ಬಾರಿಸಿ ಚೊಚ್ಚಲ ಡಬ್ಲ್ಯೂಪಿಎಲ್‌ ಆವೃತ್ತಿಯಲ್ಲೇ ದಾಖಲೆ ಬರೆಯುವ ಸನಿಹದಲ್ಲಿದ್ದಾಗ ಮೆಕ್‌ಗ್ರಾತ್‌ ಬೌಲಿಂಗ್‌ ದಾಳಿಗೆ ಔಟಾಗಿ ನಿರಾಸೆ ಅನುಭವಿಸಿದರು. ಇದನ್ನೂ ಓದಿ: IPL 2023: RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಸ್ಟಾರ್‌ ಆಲ್‌ರೌಂಡರ್‌ ಸೇರ್ಪಡೆ

    ನಂತರ ಏಲ್ಲಿಸ್‌ ಪೆರ್ರಿ 19 ರನ್‌ ಹಾಗೂ ಹೀದರ್‌ ನೈಟ್‌ 22 ರನ್‌ ಅಜೇಯ ಆಟವಾಡಿ ತಂಡವನ್ನು ಗೆಲುವಿನ ಹಾದಿಗೆ ತಲುಪಿಸಿದರು. ನಾಯಕಿ ಸ್ಮೃತಿ ಮಂದಾನ ಮತ್ತೊಮೆ ಬೃಹತ್‌ ಮೊತ್ತ ಕಲೆಹಾಕುವಲ್ಲಿ ವಿಫಲರಾದರು. 31 ಎಸೆತಗಳಲ್ಲಿ 37 ರನ್‌ (5 ಬೌಂಡರಿ, 1 ಸಿಕ್ಸರ್‌) ಗಳಿಸಿ ಪೆವಿಲಿಯನ್‌ ಸೇರಿದರು. ಗುಜರಾತ್‌ ಪರ ಕಿಮ್‌ ಗಾರ್ತ್‌ ಹಾಗೂ ಸ್ನೇಹ ರಾಣ ತಲಾ ಒಂದೊಂದು ವಿಕೆಟ್‌ ಪಡೆದರು.

    ರನ್‌ ಹೊಳೆ ಹರಿಸಿದ ಆಟಗಾರರು ಇವರೇ: ಪುರುಷರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಇತಿಹಾಸದಲ್ಲಿ ಕ್ರಿಸ್‌ಗೇಲ್‌ 175 ರನ್‌ ಸಿಡಿಸಿರುವುದು ಈವರೆಗೆ ಯಾರೂ ಮುರಿಯದ ದಾಖಲೆಯಾಗಿದೆ. ಇದರೊಂದಿಗೆ ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ 36 ಎಸೆತಗಳಲ್ಲಿ 99 ರನ್‌ ಗಳಿಸಿರುವ ಸೋಫಿ ಡಿವೈನ್‌ ಅತಿಹೆಚ್ಚು ರನ್‌ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಇಬ್ಬರೂ ಆರ್‌ಸಿಬಿ ತಂಡದ ಆಟಗಾರರೇ ಎಂಬುದು ವಿಶೇಷ.

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಜೈಂಟ್ಸ್ ಅತ್ಯುತ್ತಮ ಆರಂಭ ಪಡೆಯಿತು. 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿ ಆರ್‌ಸಿಬಿಗೆ ಬೃಹತ್‌ ಮೊತ್ತದ ಗುರಿ ನೀಡಿತ್ತು. ಸೋಫಿಯಾ ಡಂಕ್ಲಿ 16 ರನ್ ಗಳಿಸಿ ಔಟಾದ ನಂತರ ಲಾರಾ ವೊಲ್ವಾರ್ಡ್ ಮಾತ್ರ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. 42 ಎಸೆತಗಳಲ್ಲಿ 68 ರನ್ (9 ಬೌಂಡರಿ 2 ಸಿಕ್ಸರ್) ಚಚ್ಚಿ ತಂಡದ ರನ್‌ ಮೊತ್ತ ಹೆಚ್ಚಿಸುವಲ್ಲಿ ಕಾರಣರಾದರು. ಇದರೊಂದಿಗೆ ಸಬ್ಬಿನೇನಿ ಮೇಘನಾ 32 ಎಸೆತಗಳಲ್ಲಿ 31 ರನ್, ಆಲ್‌ರೌಂಡರ್ ಆಶ್ಲೀ ಗಾರ್ಡ್ನರ್ 26 ಎಸೆತಗಳಲ್ಲಿ ಸ್ಫೋಟಕ 41 ರನ್ (6 ಬೌಂಡರಿ, 1 ಸಿಕ್ಸರ್) ಹಾಗೂ ದಯಾಳ್ ಹೇಮಲತಾ 6 ಎಸೆತಗಳಲ್ಲಿ 16 ರನ್ ಗಳಿಸಿ ಮಿಂಚಿದರು. ಕೊನೆಯಲ್ಲಿ ಹರ್ಲೀನ್ ಡಿಯೋಲ್ ಸಹ 5 ಎಸೆತಗಳಲ್ಲಿ 12 ರನ್ ಗಳಿಸುವ ಮೂಲಕ ತಂಡದ ಬೃಹತ್‌ ಮೊತ್ತಕ್ಕೆ ಸಹಾಯ ಮಾಡಿದ್ದರು. ಆದರೆ ಕಳಪೆ ಬೌಲಿಂಗ್‌ನಿಂದ ತಂಡ ಸೋಲನುಭವಿಸಿತು.

    ಆರ್‌ಸಿಬಿ ಪರ ಶ್ರೇಯಾಂಕ ಪಾಟೀಲ್‌ 2 ವಿಕೆಟ್‌ ಕಿತ್ತರೆ, ಸೋಫಿ ಡಿವೈನ್‌, ಪ್ರೀತಿ ಬೋಸ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಆಶ್ಲೀ ಗಾರ್ಡ್ನರ್ ಆಲ್‌ರೌಂಡರ್‌ ಆಟ – ಗುಜರಾತ್‌ಗೆ 11 ರನ್‌ಗಳ ಜಯ

    ಆಶ್ಲೀ ಗಾರ್ಡ್ನರ್ ಆಲ್‌ರೌಂಡರ್‌ ಆಟ – ಗುಜರಾತ್‌ಗೆ 11 ರನ್‌ಗಳ ಜಯ

    ಮುಂಬೈ: ಆಶ್ಲೀ ಗಾರ್ಡ್ನರ್ (Ashleigh Gardner) ಆಲ್‌ರೌಂಡರ್‌ ಆಟ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್ ಜೈಂಟ್ಸ್ (Gujarat Giants) ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ವಿರುದ್ಧ 11 ರನ್‌ಗಳ ರೋಚಕ ಜಯ ಸಾಧಿಸಿದೆ.

    ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2023) ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ ಜೈಂಟ್ಸ್‌ ನಿಗದಿತ ಓವರ್‌ಗಳಲ್ಲಿ 147 ರನ್‌ ಗಳಿಸಿತು. 148 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 18.4 ಓವರ್‌ಗಳಲ್ಲಿ ಸರ್ವಪತನ ಕಂಡು 11 ರನ್‌ಗಳ ಸೋಲು ಅನುಭವಿಸಿತು. ಇದನ್ನೂ ಓದಿ: ವಿರಾಟ್ ಅಣ್ಣನ ಸಲಹೆ ಸಹಾಯವಾಯ್ತು – RCB ಗೆಲುವಿನ ನಂತ್ರ ಮಂದಾನ ಮುಖದಲ್ಲಿ ಮಂದಹಾಸ

    ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್ ಆರಂಭಿಸಿದ ನಾಯಕಿ ಮೆಗ್ ಲ್ಯಾನ್ನಿಂಗ್ (Meg Lanning) ಮತ್ತು ಶಫಾಲಿ ವರ್ಮಾ (Shafali Verma) ಸೇರಿ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ ತಂಡದ ಸೋಲಿಗೆ ಕಾರಣವಾಯಿತು. ಶಫಾಲಿ ವರ್ಮಾ 8 ರನ್ ಗಳಿಸಿ ಔಟಾದರೆ, ಮೆಗ್ ಲ್ಯಾನ್ನಿಂಗ್ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಆಲಿಸ್ ಕ್ಯಾಪ್ಸೆ 11 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 22 ರನ್ ಬಾರಿಸಿದರು. ಜೆಮಿಮಾ ರೋಡ್ರಿಗಸ್ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಆಲ್‌ರೌಂಡರ್ ಮಾರಿಜಾನ್ನೆ ಕಪ್ 29 ಎಸೆತಗಳಲ್ಲಿ 36 ರನ್ ಬಾರಿಸಿದರು. ಜೆಸ್ ಜೊನಾಸ್ಸೆನ್ 4 ರನ್, ತಾನಿಯಾ ಭಾಟಿಯಾ 1 ರನ್ ಗಳಿಸಿದರೆ, ಕೊನೆಯಲ್ಲಿ ಅರುಂಧತಿ ರೆಡ್ಡಿ 17 ಎಸೆತಗಳಲ್ಲಿ 25 ರನ್ ಬಾರಿಸಿ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಅವರ ವಿಕೆಟ್ ಬೀಳುತ್ತಿದ್ದಂತೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲು ಖಚಿತವಾಯಿತು.

    ಗುಜರಾತ್ ಜೈಂಟ್ಸ್ ಪರ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಕಿಮ್ ಗಾರ್ಥ್, ಆಶ್ಲೀಗ್ ಗಾರ್ಡ್ನರ್ ಹಾಗೂ ತನುಜಾ ಕನ್ವರ್ 2 ವಿಕೆಟ್ ಕಿತ್ತರು. ಉಳಿದಂತೆ ಸ್ನೇಹ ರಾಣಾ ಮತ್ತು ಹರ್ಲೀನ್ ಡಿಯೋಲ್ ತಲಾ ಒಂದೊಂದು ವಿಕೆಟ್ ಪಡೆದರು.

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ನೇಹ ರಾಣಾ ನಾಯಕತ್ವದ ಗುಜರಾತ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ಇದನ್ನೂ ಓದಿ: RCB ಪಂದ್ಯಗಳ ಟಿಕೆಟ್‌ ದರ ನೋಡಿ ಬೆಚ್ಚಿಬಿದ್ದ ಅಭಿಮಾನಿಗಳು – ಟಿಕೆಟ್‌ ಬುಕ್‌ ಮಾಡೋದು ಹೇಗೆ..?

    ಗುಜರಾತ್ ಜೈಂಟ್ಸ್ ತಂಡದ ಪರ ಸೋಫಿಯಾ ಡಂಕ್ಲೆ ಮತ್ತು ಲಾರಾ ವೊಲ್ವಾರ್ಡ್ಟ್ ಇನ್ನಿಂಗ್ಸ್ ಆರಂಭಿಸಿದರು. ಒಂದು ಓವರ್‌ನಲ್ಲಿ 4 ರನ್‌ಗಳಾಗುವಷ್ಟರಲ್ಲಿ ಸೋಫಿಯಾ ಡಂಕ್ಲೆ ವಿಕೆಟ್ ಕಳೆದುಕೊಂಡಿತು. ನಂತರ ಹರ್ಲೀನ್ ಡಿಯೋಲ್ ಉತ್ತಮ ಬ್ಯಾಟಿಂಗ್ ಮಾಡಿ ತಂಡದ ಮೊತ್ತ ಹೆಚ್ಚಿಸಲು ನೆರವಾದರು. 33 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 31 ರನ್ ಗಳಿಸಿದ್ದ ಹರ್ಲೀನ್ ಡಿಯೋಲ್ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಲಾರಾ ವೊಲ್ವಾರ್ಡ್ಟ್ ಹಾಗೂ ಆಶ್ಲೀ ಗಾರ್ಡ್ನರ್ ಬೆಂಕಿ ಬ್ಯಾಟಿಂಗ್‌ ಮಾಡಿದರು. ಲಾರಾ 45 ಎಸೆತಗಳಲ್ಲಿ 57 ರನ್ (6 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಗಾರ್ಡ್ನರ್ 33 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಸ್ಫೋಟಕ 51 ರನ್ ಬಾರಿಸಿ ಅಜೇಯರಾಗುಳಿದರು.

    ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಜೆಸ್ ಜೊನಾಸ್ಸೆನ್ 4 ಓವರ್‌ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಮರಿಜಾನ್ನೆ ಕಪ್ ಮತ್ತು ಅರುಂಧತಿ ರೆಡ್ಡಿ ತಲಾ ಒಂದೊಂದು ವಿಕೆಟ್ ಪಡೆದರು.

  • ಮುಂಬೈಗೆ 55 ರನ್ ಭರ್ಜರಿ ಜಯ, ಪ್ಲೇ ಆಫ್‌ ಪ್ರವೇಶ

    ಮುಂಬೈಗೆ 55 ರನ್ ಭರ್ಜರಿ ಜಯ, ಪ್ಲೇ ಆಫ್‌ ಪ್ರವೇಶ

    ಮುಂಬೈ: ನಾಯಕಿ ಹರ್ಮನ್ ಪ್ರೀತ್‍ಕೌರ್ (Harmanpreet Kaur) ಅರ್ಧಶತಕ ಹಾಗೂ ನಾಟ್ ಸ್ಕಿವರ್ ಬ್ರಂಟ್ ಆಲ್‍ರೌಂಡರ್ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ (Mumbai Indian) ತಂಡವು ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧ 55 ರನ್‍ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಗ್ರಸ್ಥಾನದೊಂದಿಗೆ ಪ್ಲೇ ಆಫ್‌ ಪ್ರವೇಶಿಸಿದೆ.

    ಮಂಗಳವಾರ ಇಲ್ಲಿನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿತ್ತು. 163 ರನ್ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಸೋಲೊಪ್ಪಿಕೊಂಡಿತು.

    ತನ್ನ ಸರದಿ ಆರಂಭಿಸಿದ ಗುಜರಾತ್ ಜೈಂಟ್ಸ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಸೋಫಿಯಾ ಡಂಕ್ಲೆ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡು ತಂಡಕ್ಕೆ ಆಘಾತ ನೀಡಿದರು. ನಂತರ ಕಣಕ್ಕಿಳಿದವರಲ್ಲಿ ಸಬ್ಬಿನೇನಿ ಮೇಘನಾ 16 ರನ್, ಹರ್ಲೀನ್ ಡಿಯೋಲ್ 22 ರನ್, ಸ್ನೇಹ ರಾಣಾ 20 ರನ್ ಹಾಗೂ ಸುಷ್ಮಾ ವರ್ಮಾ 18 ರನ್ ಗಳಿಸಿದರು. ಅಗ್ರಕ್ರಮಾಂಕದ ಬ್ಯಾಟರ್‍ಗಳ ಕಳಪೆ ಪ್ರದರ್ಶನದಿಂದಾಗಿ ತಂಡ ಸೋಲೊಪ್ಪಿಕೊಂಡಿತು.

    ಅಂತಿಮವಾಗಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 107 ರನ್‍ಗಳಷ್ಟೇ ಗಳಿಸಿತು.

    ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕಿ ಹರ್ಮನ್‍ಪ್ರೀತ್ ಕೌರ್ ಮತ್ತೊಮ್ಮೆ ಭರ್ಜರಿ ಅರ್ಧಶತಕ ಬಾರಿಸಿದರು. 30 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‍ಗಳೊಂದಿಗೆ 51 ರನ್ ಬಾರಿಸಿದರು. ಆರಂಭಿಕ ಬ್ಯಾಟರ್ ಯಸ್ತಿಕಾ ಭಾಟಿಯಾ 37 ಎಸೆತಗಳಲ್ಲಿ 44 ರನ್ ಹಾಗೂ ಅಮೇಲಿಯಾ ಕೆರ್ 19 ರನ್ ಗಳಿಸಿ ತಂಡದ ಮೊತ್ತ 160 ರನ್‍ಗಳ ಗಡಿ ದಾಟಲು ನೆರವಾದರು.

    ಬ್ರಂಟ್ ಆಲ್‍ರೌಂಡರ್ ಆಟ:
    ಬ್ಯಾಟಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ ನಾಟ್ ಸ್ಕಿವರ್ ಬ್ರಂಟ್ (Nat Sciver Brunt) ಬೌಲಿಂಗ್‍ನಲ್ಲೂ ಕೈಚಳಕ ತೋರಿದರು. 31 ಎಸೆತಗಳಲ್ಲಿ 36 ರನ್ (5 ಬೌಂಡರಿ, 1 ಸಿಕ್ಸರ್) ಚಚ್ಚಿದ್ದ ಬ್ರಂಟ್, ಬೌಲಿಂಗ್‍ನಲ್ಲಿ 4 ಓವರ್‍ಗಳಿಗೆ 21 ರನ್ ನೀಡಿ 3 ವಿಕೆಟ್ ಕಿತ್ತರು. ಹೇಲಿ ಮ್ಯಾಥಿವ್ಸ್ ಸಹ 3 ವಿಕೆಟ್ ಪಡೆದು ಮಿಂಚಿದರೆ, ಅಮೆಲಿಯಾ ಕೆರ್ 2 ವಿಕೆಟ್ ಹಾಗೂ ಇಸ್ಸಿ ವಾಂಗ್ ಒಂದು ವಿಕೆಟ್‍ಗೆ ತೃಪ್ತಿಪಟ್ಟುಕೊಂಡರು.

    ಬೌಲಿಂಗ್‍ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಪರ ಆಶ್ಲೀಗ್ ಗಾಡ್ರ್ನರ್ (Ashleigh Gardner) 4 ಓವರ್‌ಗಳಲ್ಲಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಉರುಳಿಸಿದರು. ಉಳಿದಂತೆ ಕಿಮ್ ಗಾರ್ಥ್, ಸ್ನೇಹ್ ರಾಣಾ ಮತ್ತು ತನುಜಾ ಕನ್ವರ್ ತಲಾ ಒಂದೊಂದು ವಿಕೆಟ್ ಪಡೆದರು.

  • 10 ಬೌಂಡರಿ, 5 ಸಿಕ್ಸರ್‌ – ಶಫಾಲಿ ವರ್ಮ ಸ್ಫೋಟಕ ಫಿಫ್ಟಿ; ಡೆಲ್ಲಿ ಕ್ಯಾಪಿಟಲ್ಸ್‌ಗೆ 10 ವಿಕೆಟ್‌ಗಳ ಭರ್ಜರಿ ಜಯ

    10 ಬೌಂಡರಿ, 5 ಸಿಕ್ಸರ್‌ – ಶಫಾಲಿ ವರ್ಮ ಸ್ಫೋಟಕ ಫಿಫ್ಟಿ; ಡೆಲ್ಲಿ ಕ್ಯಾಪಿಟಲ್ಸ್‌ಗೆ 10 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಶಫಾಲಿ ವರ್ಮಾ (Shafali Verma) ಸ್ಫೋಟಕ ಅರ್ಧ ಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಟಾಸ್‌ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 105 ರನ್‌ ಗಳಿಸಿತ್ತು. 106 ರನ್‌ಗಳ ಅಲ್ಪಮೊತ್ತದ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಕೇವಲ 7.1 ಓವರ್‌ಗಳಲ್ಲೇ 107 ರನ್‌ ಚಚ್ಚಿ ಗೆಲುವು ಸಾಧಿಸಿತು.

    ಶಫಾಲಿ ವರ್ಮಾ ಆರಂಭದಿಂದಲೇ ಗುಜರಾತ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿ, ಕೇವಲ 18 ಎಸೆತಗಳಲ್ಲೇ ಸ್ಫೋಟಕ ಅರ್ಧಶತಕ ಸಿಡಿಸಿದ್ದರು. 271.42 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಶಫಾಲಿ 28 ಎಸೆತಗಳಲ್ಲಿ 76 ರನ್‌ (10 ಬೌಂಡರಿ, 5 ಸಿಕ್ಸರ್‌) ಚಚ್ಚಿದರು. ಇದಕ್ಕೆ ಜೊತೆಯಾದ ನಾಯಕಿ ಮೆಗ್‌ ಲ್ಯಾನಿಂಗ್‌ (Meg Lanning) 15 ಎಸೆತಗಳಲ್ಲಿ 21 ರನ್‌ ಗಳಿಸುವ ಮೂಲಕ ಸಾಥ್‌ ನೀಡಿದರು. ಅಂತಿಮವಾಗಿ ಕೇವಲ 7.1 ಓವರ್ ಗಳಲ್ಲಿ 107 ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್‌ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಆಲ್‌ರೌಂಡರ್ ಮಾರಿಜಾನ್ನೆ ಕಪ್ (Marizanne Kapp) ತೀವ್ರ ಆಘಾತ ನೀಡಿದರು. ಇದನ್ನೂ ಓದಿ: ಸೋಲಿನ ಹೊಣೆ ನಾನೇ ಹೊರುತ್ತೇನೆ – ತನ್ನನ್ನು ತಾನೇ ಟೀಕಿಸಿಕೊಂಡ ಸ್ಮೃತಿ ಮಂದಾನ

    ಆರಂಭದಲ್ಲೆ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಗುಜರಾತ್‌ 33 ರನ್ ಗಳಾಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಜಾರ್ಜಿಯಾ ವಾರೆಹಾಮ್ 22 ರನ್, ಕಿಮ್ ಗಾರ್ತ್ 32 ರನ್ ಗಳಿಸುವ ಮೂಲಕ ತಂಡ 100 ರನ್‌ಗಳ ಗಡಿ ದಾಟಲು ನೆರವಾದರು. ಇದನ್ನೂ ಓದಿ: ಗಿಲ್‌ ಶತಕದ ಮಿಂಚು, ಬ್ಯಾಟಿಂಗ್‌ ಲಯಕ್ಕೆ ಮರಳಿದ ಕೊಹ್ಲಿ ಅರ್ಧ ಶತಕ – ಉತ್ತಮ ಸ್ಥಿತಿಯಲ್ಲಿ ಭಾರತ

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಮಾರಿಜಾನ್ನೆ ಕಪ್ 4 ಓವರ್ ಗಳಲ್ಲಿ ಕೇವಲ 15 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರೆ, ಶಿಖಾ ಪಾಂಡೆ 3 ವಿಕೆಟ್, ರಾಧಾ ಯಾದವ್ 1 ವಿಕೆಟ್ ಪಡೆದರು.

  • WPL 2023: ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು – ಗುಜರಾತ್ ಜೈಂಟ್ಸ್‌ಗೆ 11 ರನ್ ರೋಚಕ ಜಯ

    WPL 2023: ಆರ್‌ಸಿಬಿಗೆ ಹ್ಯಾಟ್ರಿಕ್ ಸೋಲು – ಗುಜರಾತ್ ಜೈಂಟ್ಸ್‌ಗೆ 11 ರನ್ ರೋಚಕ ಜಯ

    ಮುಂಬೈ: ಹರ್ಲೀನ್ ಡಿಯೋಲ್ (Harleen Deol) ಸ್ಫೋಟಕ ಬ್ಯಾಟಿಂಗ್ ಹಾಗೂ ಆಶ್ಲೀ ಗಾರ್ಡ್ನರ್ (Ashleigh Gardner) ಬೌಲಿಂಗ್ ದಾಳಿ ನೆರವಿನಿಂದ ಗುಜರಾತ್ ಜೈಂಟ್ಸ್ ತಂಡವು ಆರ್‌ಸಿಬಿ (RCB) ವಿರುದ್ಧ 11 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ WPL ಚೊಚ್ಚಲ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.

    ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ (Gujarat Giants) ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಸಿಡಿಸಿತ್ತು. 202 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ತಂಡ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ, ವಿರೋಚಿತ ಸೋಲನುಭವಿಸಿತು. ಈ ಮೂಲಕ ಹ್ಯಾಟ್ರಿಕ್ ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

    ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡಕ್ಕೆ ಆರಂಭದಲ್ಲೇ ನಿರಾಸೆ ಉಂಟಾಯಿತು. 3ನೇ ಪಂದ್ಯದಲ್ಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ನಾಯಕಿ ಸ್ಮೃತಿ ಮಂದಾನ (Smriti Mandhana) 14 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. ಬಳಿಕ ಮತ್ತೊರ್ವ ಆರಂಭಿಕರಾಗಿದ್ದ ಸೋಫಿ ಡಿವೈನ್ (Sophie Devine) ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 45 ಎಸೆತಗಳಲ್ಲಿ 2 ಸಿಕ್ಸರ್, 8 ಬೌಂಡರಿಯೊಂದಿಗೆ 66 ರನ್ ಚಚ್ಚಿದರು. ಈ ವೇಳೆ ಎಲ್ಲಿಸ್ ಪರ‍್ರಿ ಸಹ 32 ರನ್ (25 ಎಸೆತ, 5 ಬೌಂಡರಿ) ಗಳಿಸಿ ತಂಡಕ್ಕೆ ನೆರವಾಗಿದ್ದರು. ತಂಡದಲ್ಲಿ ಗೆಲುವಿನ ಕನಸು ಚಿಗುರುತ್ತಿದ್ದಂತೆ ಗುಜರಾತ್ ಬೌಲರ್‌ಗಳು ಇವರಿಬ್ಬರ ಆಟಕ್ಕೆ ಬ್ರೇಕ್ ಹಾಕಿ ಪೆವಿಲಿಯನ್ ದಾರಿ ತೋರಿಸಿದರು.

    ರಿಚಾ ಘೋಷ್ 10 ರನ್, ಕನಿಕಾ ಅಹುಜಾ 10 ರನ್ ಗಳಿಸಿದರು. ಕೊನೆಯವರೆಗೂ ಹೋರಾಡಿದ ಹೀದರ್ ನೈಟ್ 11 ಎಸೆತಗಳಲ್ಲಿ ಸ್ಫೋಟಕ 30 ರನ್ (5 ಬೌಂಡರಿ, 1 ಸಿಕ್ಸರ್) ಚಚ್ಚಿದರೆ, ಶ್ರೇಯಾಂಕಾ ಪಾಟೀಲ್ 11 ರನ್ ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: ಕೊಹ್ಲಿ ಪರಂಪರೆ ಮುಂದುವರಿಸಿದ ಮಂದಾನ – ಹೀನಾಯ ಸೋಲಿನ ಬೆನ್ನಲ್ಲೇ ಅಭಿಮಾನಿಗಳಿಂದ ಕಿಡಿ

    ಗುಜರಾತ್ ಜೈಂಟ್ಸ್ ಪರ ಗಾರ್ಡ್ನರ್ 3 ವಿಕೆಟ್, ಅನ್ನಾಬೆಲ್ 2 ವಿಕೆಟ್ ಹಾಗೂ ಮಾನ್ಸಿ ಜೋಶಿ 1 ವಿಕೆಟ್ ಕಬಳಿಸಿದರು. ಇದನ್ನೂ ಓದಿ: ಜೊನಾಸೆನ್‌ ಆಲ್‌ರೌಂಡರ್‌ ಆಟ, ತಾಲಿಯಾ ಏಕಾಂಗಿ ಹೋರಾಟ – ಡೆಲ್ಲಿ ಕ್ಯಾಪಿಟಲ್ಸ್‌ಗೆ 42 ರನ್‌ಗಳ ಭರ್ಜರಿ ಜಯ

    ಟಾಸ್‌ಗೆದ್ದು ಮೊದಲು ಕ್ರೀಸ್‌ಗಿಳಿದ ಗುಜರಾತ್ ಜೈಂಟ್ಸ್ ತಂಡ ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿತು. 22 ರನ್‌ಗಳಿಗೆ ಮೊದಲ ವಿಕೆಟ್ ಪತನಗೊಂಡ ನಂತರ ಸ್ಫೋಟಕ ಇನ್ನಿಂಗ್ಸ್ ಶುರುವಾಯಿತು. ಆರಂಭಿಕರಾಗಿದ್ದ ಸೋಫಿಯಾ ಡಂಕ್ಲಿ ಹಾಗೂ 2ನೇ ಕ್ರಮಾಂಕದಲ್ಲಿ ಜೊತೆಯಾದ ಹರ್ಲೀನ್ ಡಿಯೋಲ್ ಸಿಕ್ಸರ್, ಬೌಂಡರಿ ಸಿಡಿಸುತ್ತಾ ಆರ್‌ಸಿಬಿ ಬೌಲರ್‌ಗಳನ್ನು ಬೆಂಡೆತ್ತಿದರು. 2ನೇ ವಿಕೆಟ್ ಜೊತೆಯಾಟಕ್ಕೆ ಈ ಜೋಡಿ 8 ಓವರ್‌ಗಳಲ್ಲಿ ಬರೋಬ್ಬರಿ 82 ರನ್ ಚಚ್ಚಿತ್ತು.

    ಸೋಫಿಯಾ 28 ಎಸೆತಗಳಲ್ಲಿ ಸ್ಫೋಟಕ 65 ರನ್ (11 ಬೌಂಡರಿ, 3 ಸಿಕ್ಸರ್) ಚಚ್ಚಿದರೆ, ಹರ್ಲೀಲ್ 45 ಎಸೆತಗಳಲ್ಲಿ 67 ರನ್ (1 ಸಿಕ್ಸರ್, 7 ಬೌಂಡರಿ) ಬಾರಿಸಿದರು. ನಂತರದಲ್ಲಿ ಆಶ್ಲೇ ಗಾರ್ಡ್ನರ್ 19 ರನ್, ದಯಾಳನ್ ಹೇಮಲತಾ 16 ರನ್ ಹಾಗೂ ಅನ್ನಾಬೆಲ್ ಸದರ್ಲ್ಯಾಂಡ್ 14 ರನ್ ಗಳಿಸಿ ತಂಡಕ್ಕೆ ನೆರವಾದರು.

    ಆರ್‌ಸಿಬಿ ಪರ ಶ್ರೇಯಾಂಕ ಪಾಟೀಲ್, ಹೀದರ್ ನೈಟ್ ತಲಾ 2 ವಿಕೆಟ್ ಪಡೆದರೆ, ರೇಣುಕಾ ಸಿಂಗ್ ಹಾಗೂ ಮೇಗನ್ ಶುಟ್ ತಲಾ ಒಂದೊಂದು ವಿಕೆಟ್ ಪಡೆದರು.

  • WPL 2023: ಕೌರ್‌ ಭರ್ಜರಿ ಫಿಫ್ಟಿ – ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್‌ಗೆ 143 ರನ್‌ಗಳ ಭರ್ಜರಿ ಜಯ

    WPL 2023: ಕೌರ್‌ ಭರ್ಜರಿ ಫಿಫ್ಟಿ – ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್‌ಗೆ 143 ರನ್‌ಗಳ ಭರ್ಜರಿ ಜಯ

    ಮುಂಬೈ: ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಮುಂಬೈ ಇಂಡಿಯನ್ಸ್‌ (Mumbai Indians) ಮಹಿಳಾ ತಂಡವು ಉದ್ಘಾಟನಾ ಪಂದ್ಯದಲ್ಲೇ ಗುಜರಾತ್‌ ಜೈಂಟ್ಸ್‌ (Gujarat Giants) ವಿರುದ್ಧ 143 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ ಉದ್ಘಾಟನಾ ಪಂದ್ಯ ಉತ್ತಮ ಆರಂಭ ಪಡೆದುಕೊಂಡಿದ್ದು, ಮೊದಲ ದಿನವೇ ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ನೀಡಿತು. ಸಿಕ್ಸರ್‌ ಬೌಂಡರಿಗಳ ಆಟದಲ್ಲಿ ಮುಂಬೈ ಇಂಡಿಯನ್ಸ್‌ ಪರ 31 ಬೌಂಡರಿ, 6 ಸಿಕ್ಸರ್‌ ದಾಖಲಾಯಿತು. ಇದನ್ನೂ ಓದಿ: CCL 2023 ಬೆಂಗಳೂರಿನಲ್ಲಿ : ಕಿಚ್ಚನ ಟೀಮ್ ಜೊತೆ ತೆಲುಗು ವಾರಿಯರ್ಸ್ ರೋಚಕ ಪಂದ್ಯ

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 207 ರನ್‌ ಬಾರಿಸಿತು. 208 ರನ್‌ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಗುಜರಾತ್‌ ಜೈಂಟ್ಸ್‌ 64 ರನ್‌ಗಳಿಗೆ ಸರ್ವಪತನ ಕಂಡಿತು.

    ಮುಂಬೈ ತಂಡದ ಆರಂಭಿಕರಾದ ಯಸ್ತಿಕಾ ಭಾಟಿಯಾ ವಿಕೆಟ್‌ ಪತನದ ನಂತರ ಹೇಲಿ ಮ್ಯಾಥ್ಯೂಸ್ ಹಾಗೂ ನ್ಯಾಟ್ ಸ್ಕಿವರ್-ಬ್ರಂಟ್ ಜೋಡಿ 2ನೇ ವಿಕೆಟ್‌ ಜೊತೆಯಾಟಕ್ಕೆ 69 ರನ್‌ ಕಲೆಹಾಕಿತು. ಮ್ಯಾಥ್ಯೂಸ್ 31 ಎಸೆತಗಳಲ್ಲಿ 47 ರನ್‌ (3 ಬೌಂಡರಿ, 4 ಸಿಕ್ಸರ್)‌ ಚಚ್ಚಿದರೆ, ಬ್ರಂಟ್‌ 23 ರನ್‌ (18 ಎಸೆತ, 5 ಬೌಂಡರಿ) ಗಳಿಸಿ ಪೆವಿಲಿಯನ್‌ ಸೇರಿದ್ರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ 216.67 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟಿಂಗ್‌ ನಡೆಸಿ ಗುಜರಾತ್‌ ಬೌಲರ್‌ಗಳನ್ನು ಬೆಂಡೆತ್ತಿದರು. ಭರ್ಜರಿ 65 ರನ್‌ (30 ಎಸೆತ, 14 ಬೌಂಡರಿ) ಸಿಡಿಸಿ ಉದ್ಘಾಟನಾ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ದಾಖಲೆ ಬರೆದರು. ಈ ಮೂಲಕ ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು.

    ನಂತರ ಅಮೆಲಿ ಕೆರ್ ಕೂಡ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶಿಸಿ 24 ಎಸೆತಗಳಲ್ಲಿ 45 ರನ್‌ ಚಚ್ಚಿದರು. ಅಂತಿಮವಾಗಿ ಮುಂಬೈ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 207 ರನ್‌ ಪೇರಿಸಿತ್ತು. ಇದನ್ನೂ ಓದಿ: ಇಂದಿನಿಂದ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ ಧಮಾಕ – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

    ಇನ್ನು ಗುಜರಾತ್ ಜೈಂಟ್ಸ್ ತಂಡದ ಪರವಾಗಿ ಸ್ನೇಹ ರಾಣಾ ಎರಡು ವಿಕೆಟ್ ಪಡೆದರಾದರೂ 4 ಓವರ್‌ಗಳಲ್ಲಿ 43 ರನ್ ನೀಡುವ ಮೂಲಕ ದುಬಾರಿಯಾದರು. ಆಸ್ಟ್ರೇಲಿಯಾ ಆಲ್‌ರೌಂಡರ್‌ ಆಶ್ಲೆ ಗಾರ್ಡ್ನರ್, ತನುಜಾ ಕನ್ವರ್, ಝಾರ್ಜಿಯಾ ವರೆಹಮ್ ತಲಾ ಒಂದೊಂದು ವಿಕೆಟ್ ಪಡೆದರು.

    ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಗುಜರಾತ್‌ ಮಹಿಳಾ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ತಂಡದ ನಾಯಕಿ ಬೆತ್‌ ಮೂನಿ ಮೂರನೇ ಎಸೆತದಲ್ಲೇ ಗಾಯದ ಸಮಸ್ಯೆಯಿಂದ ಹೊರನಡೆದರು. ನಂತರ ಮುಂಬೈ ಬೌಲರ್‌ಗಳ ದಾಳಿಗೆ ಸುಲಭ ತುತ್ತಾದ ಗುಜರಾತ್‌ ಮಹಿಳಾ ಸೈನ್ಯ ಒಂದೊಂದೆ ವಿಕೆಟ್‌ ಕಳೆದುಕೊಂಡಿತು. ದಯಾಳನ್ ಹೇಮಲತಾ 29 ರನ್‌ ಗಳಿಸಿದ್ದು ಬಿಟ್ಟರೆ, ಯಾರೊಬ್ಬರೂ ಸ್ಥಿರವಾಗಿ ನಿಲ್ಲದೇ ಗುಜರಾತ್‌ ಮೊದಲ ಪಂದ್ಯದಲ್ಲೇ ಸೋಲಿನ ರುಚಿ ಕಂಡಿತು.

    ಮುಂಬೈ ಪರ ಸ್ಪಿನ್‌ ದಾಳಿ ನಡೆಸಿದ ಸೈಕಾ ಇಶಾಕ್ 3.1 ಓವರ್‌ಗಳಲ್ಲಿ 11 ರನ್‌ ನೀಡಿ 4 ವಿಕೆಟ್‌ ಕಿತ್ತರೆ, ನ್ಯಾಟ್ ಸ್ಕಿವರ್ ಬ್ರಂಟ್ ಮತ್ತು ಅಮೆಲಿ ಕೆರ್ ತಲಾ 2 ವಿಕೆಟ್‌ ಪಡೆದರು, ಇಸ್ಸಿ ವಾಂಗ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಬುಲ್ಸ್ ವಿರುದ್ಧ ಗೆಲುವಿನ ನಗೆ ಬೀರಿದ ಜೈಂಟ್ಸ್

    ಬುಲ್ಸ್ ವಿರುದ್ಧ ಗೆಲುವಿನ ನಗೆ ಬೀರಿದ ಜೈಂಟ್ಸ್

    ಬೆಂಗಳೂರು: ತವರಿನ ತಂಡ ಬೆಂಗಳೂರು ಬುಲ್ಸ್ ವಿರುದ್ಧ ಗುಜರಾತ್ ಸೂಪರ್ ಜೈಂಟ್ಸ್ 40-36 ಅಂತರದಿಂದ ಗೆದ್ದಿದೆ.

    ಕೊನೆಯ ನಿಮಿಷಗಳಲ್ಲಿ ರೈಡಿಂಗ್‍ನಲ್ಲಿ ಮೇಲುಗೈ ಸಾಧಿಸಿದ ಗುಜರಾತ್ ಸೂಪರ್ ಜೈಂಟ್ಸ್ ಬುಲ್ಸ್ ವಿರುದ್ಧ 4 ಅಂಕಗಳ ಅಂತರದಿಂದ ಜಯ ಸಾಧಿಸಿದೆ. ಇದನ್ನೂ ಓದಿ: 1000ನೇ ಏಕದಿನ ಪಂದ್ಯ ಗೆದ್ದು ಸ್ಮರಣೀಯವಾಗಿಸಿಕೊಂಡ ಭಾರತ – ವಿಂಡೀಸ್‍ಗೆ ಹೀನಾಯ ಸೋಲು

    ಎರಡು ತಂಡಗಳು ಕೂಡ ರೈಡಿಂಗ್‍ನಲ್ಲಿ ಮಿಂಚಿದವು. ಗುಜರಾತ್ ಪರ ಪ್ರದೀಪ್ ಕುಮಾರ್ 12 ರೈಡ್, 2 ಬೋನಸ್ ಸಹಿತ ಒಟ್ಟು 14 ಅಂಕ ಸಂಪಾದಿಸಿದರೆ, ಬುಲ್ಸ್ ಪರ ಪವನ್ ಶೆರವತ್ 10 ರೈಡ್, 2 ಬೋನಸ್ ಸಹಿತ 12 ಅಂಕ ಮತ್ತು ಭರತ್ 10 ರೈಡ್, 1 ಬೋನಸ್ ಸಹಿತ 11 ಅಂಕ ಕಲೆಹಾಕಿ ಮಿಂಚಿದರು. ಇದನ್ನೂ ಓದಿ: U19 World Cup ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ ಬಾವ ಯಾರು ಗೊತ್ತಾ?

    https://twitter.com/ProKabaddi/status/1490356834208989184

    ಬೆಂಗಳೂರು 24 ರೈಡ್, 1 ಸೂಪರ್ ರೈಡ್, 8 ಟೇಕಲ್, 2 ಆಲೌಟ್, 2 ಇತರೆ ಅಂಕ ಸಹಿತ ಒಟ್ಟು 36 ಪಾಯಿಂಟ್ ಪಡೆದರೆ, ಗುಜರಾತ್ 23 ರೈಡ್, 1 ಸೂಪರ್ ರೈಡ್, 11 ಟೇಕಲ್, 2 ಆಲೌಟ್, 4 ಇತರೆ ಸಹಿತ ಒಟ್ಟು 40 ಪಾಯಿಂಟ್ ಸಂಪಾದಿಸಿ 4 ಅಂಕಗಳ ಅಂತರದ ಜಯ ಸಾಧಿಸಿದೆ.