Tag: Gujarat government

  • Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

    ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣದ (Bilkis Bano Case) ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಕ್ಕೆ ಗುಜರಾತ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಲ್ಲಿದ್ದ ಕಟು ಟೀಕೆಯನ್ನು ತೆಗೆದುಹಾಕಲು ನ್ಯಾಯಾಲಯ ನಿರಾಕರಿಸಿದೆ.

    2002ರ ಗುಜರಾತ್ ಗಲಭೆಯ ವೇಳೆ (Gujarat riots) ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬಸ್ಥರನ್ನು ಹತ್ಯೆಗೈದಿದ್ದ 11 ಮಂದಿ ಅಪರಾಧಿಗಳ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿತ್ತು. ಬಳಿಕ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಗುಜರಾತ್ ಸರ್ಕಾರ (Gujarat government) ಮನವಿ ಮಾಡಿತ್ತು. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್

    ಸುಪ್ರೀಂ ಕೋರ್ಟ್ (Supreme Court) ಅಪರಾಧಿಗಳ ಶಿಕ್ಷೆ ರದ್ದುಗೊಳಿಸುವ ವೇಳೆ ರಾಜ್ಯ ಸರ್ಕಾರ `ಅಪರಾಧಿಗಳೊಂದಿಗೆ ಸಹಕರಿಸಿ ಒಪ್ಪಂದದಿಂದ ವರ್ತಿಸಿದೆ’ ಎಂದು ಟೀಕಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರವು ಈ ಟೀಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ. ಅರ್ಜಿದಾರರ ವಿರುದ್ಧ ಪಕ್ಷಪಾತವಾಗಿದೆ ಎಂದು ವಾದಿಸಿತ್ತು.

    ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ಧ ದ್ವಿಸದಸ್ಯ ಪೀಠ ಗುಜರಾತ್ ಸರ್ಕಾರದ ವಾದವನ್ನು ಒಪ್ಪಲಿಲ್ಲ.

    ಈ ಪ್ರಕರಣದಲ್ಲಿ ಸನ್ನಡತೆ ಆಧಾರದ ಮೇಲೆ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.

    ಅಪರಾಧಿಗಳನ್ನು ವಿಚಾರಣೆ ನಡೆಸಿದ ರಾಜ್ಯದಿಂದ ಮಾತ್ರ ಬಿಡುಗಡೆ ಮಾಡಬಹುದು. ಈ ಸಂದರ್ಭದಲ್ಲಿ, ಮಹಾರಾಷ್ಟ್ರ ಈ ಪ್ರಕರಣದ ತನಿಖೆ ನಡೆಸಿದೆ. ಗುಜರಾತ್ ರಾಜ್ಯವು ಅಧಿಕಾರವನ್ನು ಚಲಾಯಿಸುವುದು, ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ ಎಂದು ನ್ಯಾಯಾಲಯ ಹೇಳಿತ್ತು.

    ಜುಲೈನಲ್ಲಿ ಸುಪ್ರೀಂ ಕೋರ್ಟ್, ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿತ್ತು.

    ಬಿಲ್ಕಿಸ್ ಬಾನೋ ಗುಜರಾತ್ ಕೋಮು ಗಲಭೆಯ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಗಲಭೆಯಲ್ಲಿ ಹತ್ಯೆಯಾದ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು. ಇದನ್ನೂ ಓದಿ: 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

  • ಹೊಸ ವರ್ಷಕ್ಕೂ ಮುನ್ನವೇ ಗುಡ್‌ನ್ಯೂಸ್‌ – ಗುಜರಾತ್‌ನ GIFT ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ

    ಹೊಸ ವರ್ಷಕ್ಕೂ ಮುನ್ನವೇ ಗುಡ್‌ನ್ಯೂಸ್‌ – ಗುಜರಾತ್‌ನ GIFT ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ

    ಗಾಂಧಿನಗರ: ಗುಜರಾತ್‌ನಲ್ಲಿ ಮದ್ಯ ಸೇವನೆ ಮತ್ತು ಮಾರಾಟಕ್ಕೆ ಅಲ್ಲಿನ ಸರ್ಕಾರ ಅವಕಾಶ ಕಲ್ಪಿಸಿದೆ. ಗುಜರಾತ್ ಸರ್ಕಾರವು ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (GIFT City) ನಲ್ಲಿ ವೈನ್ ಮತ್ತು ಡೈನ್ (Wine and Dine) ನೀಡುವ ಹೋಟೆಲ್‌, ರೆಸ್ಟೋರೆಂಟ್ಸ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಸೇವನೆಗೆ ಅನುಮತಿ ನೀಡಿದೆ.

    ರಾಜಧಾನಿ ಗಾಂಧಿನಗರದ ಸಂಪೂರ್ಣ ಗಿಫ್ಟ್ ಸಿಟಿಯಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ಹಾಗೂ ಮಾಲೀಕರಿಗೆ ಮದ್ಯ ಸೇವನೆ ಪರವಾನಗಿಯನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬಹುಮಹಡಿ ಕಟ್ಟಡದ 8ನೇ ಮಹಡಿಯಿಂದ ಬಿದ್ದ ಲಿಫ್ಟ್- ಐವರು ಟೆಕ್ಕಿಗಳು ಐಸಿಯುಗೆ ದಾಖಲು

    ಸಾಂದರ್ಭಿಕ ಚಿತ್ರ

    ಇದಲ್ಲದೇ, ಪ್ರತಿ ಕಂಪನಿಯ ಅಧಿಕೃತ ಸಂದರ್ಶಕರು ಆ ಕಂಪನಿಯ ಕಾಯಂ ಉದ್ಯೋಗಿಗಳ ಉಪಸ್ಥಿತಿಯಲ್ಲಿ ತಾತ್ಕಾಲಿಕ ಪರವಾನಗಿ ಹೊಂದಿರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗಿದೆ.

    ಗಿಫ್ಟ್ ಸಿಟಿಯಲ್ಲಿರುವ ಅಥವಾ ಬರುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಅಥವಾ ಕ್ಲಬ್‌ಗಳು ಅಲ್ಲಿ ವೈನ್ ಮತ್ತು ಡೈನ್ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಗಿಫ್ಟ್ ಸಿಟಿಯಲ್ಲಿ ಅಧಿಕೃತವಾಗಿ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳು ಮತ್ತು ಅಧಿಕೃತವಾಗಿ ಭೇಟಿ ನೀಡುವ ಸಂದರ್ಶಕರು ಹೋಟೆಲ್‌ಗಳು, ಕ್ಲಬ್‌, ರೆಸ್ಟೋರೆಂಟ್‌ಗಳಲ್ಲಿ ಮದ್ಯ ಸೇವಿಸಬಹುದು. ಆದ್ರೆ, ಇಲ್ಲಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.

    ಗಿಫ್ಟ್ ಸಿಟಿಯು ತೆರಿಗೆಗೆ ತಟಸ್ಥ ಹಣಕಾಸು ಕೇಂದ್ರವಾಗಿದ್ದು, ಸಿಂಗಾಪುರದಂತಹ ಕೇಂದ್ರಗಳೊಂದಿಗೆ ಸ್ಪರ್ಧಿಸುವ ಗುರಿ ಹೊಂದಿದೆ. ಏಕೆಂದರೆ ಇದು ಹಣಕಾಸಿನ ಪ್ರೋತ್ಸಾಹ ಮತ್ತು ಸಡಿಲವಾದ ಕಾನೂನು ನಿಯಂತ್ರಣಗಳನ್ನು ಹೊಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ 

  • ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ

    ನವದೆಹಲಿ: ಬಿಲ್ಕಿಸ್ ಬಾನು (Bilkish Bano) ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರ (Gujarat Government) ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ ವಿಚಾರಕ್ಕೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಧಾನಿ ಮೋದಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

    ಅಪರಾಧಿಗಳ ಕ್ಷಮಾಪಣೆಗೆ ತನಿಖಾ ಸಂಸ್ಥೆಯು ಕೇಂದ್ರದಿಂದ ಸೂಕ್ತ ಆದೇಶಗಳನ್ನು ಪಡೆದುಕೊಂಡಿದೆ. 11 ಅಪರಾಧಿಗಳ ಬಿಡುಗಡೆಗೆ ಕೇಂದ್ರವು ಅನುಮೋದನೆ ನೀಡಿದೆ ಎಂದು ಗುಜರಾತ್ ಸರ್ಕಾರ ಅಫಿಡವಿಟ್‌ನಲ್ಲಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಧಾನಿ (PrimeMinister) ವಿರುದ್ಧ ವ್ಯಾಗ್ದಾಳಿ ನಡೆಸಿದ್ದಾರೆ.

    ಪ್ರಧಾನಿಯವರು ಮಿತವ್ಯಯದ ಭರವಸೆಗಳನ್ನ ನೀಡುತ್ತಿದ್ದಾರೆ. ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಅವರ ಮಾತುಗಳು ಮತ್ತು ಉದ್ದೇಶಗಳ ನಡುವೆ ವ್ಯತ್ಯಾಸ ತುಂಬಾ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಪ್ಯಾಕೇಜ್ ಸ್ಟಾರ್ ಅನ್ನೋರಿಗೆ ಚಪ್ಪಲೀಲಿ ಹೊಡೀತೀನಿ: ಪವನ್ ಕಲ್ಯಾಣ್ ಆನ್ ಫೈಯರ್

    ಕೆಂಪುಕೋಟೆಯಲ್ಲಿ ಮಹಿಳೆಯರ ಬಗ್ಗೆ ಗೌರವದ ಮಾತುಗಳನ್ನಾಡುತ್ತಾರೆ. ಆದರೆ ವಾಸ್ತವದಲ್ಲಿ ಅತ್ಯಾಚಾರಿಗಳಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಪ್ರಧಾನಿಯವರ ಈ ಭರವಸೆ ಹಾಗೂ ಉದ್ದೇಶಗಳ ನಡುವೆ ವ್ಯತ್ಯಾಸ ಇರುವುದು ಸ್ಪಷ್ಟವಾಗಿದೆ. ಪ್ರಧಾನಿ ಮೋದಿ (Narendra Modi) ಅವರು ಮಹಿಳೆಯರಿಗೆ (Women) ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ- ಸಂತ್ರಸ್ತ ಬಾಲಕಿ, ತಾಯಿ ಹೇಳಿಕೆಯಲ್ಲಿ ಗೊಂದಲ

    ಬಿಲ್ಕಿಸ್ ಬಾನು ಪ್ರಕರಣದಲ್ಲಿ ಈಗಾಗಲೇ 14 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ 11 ಅಪರಾಧಿಗಳಿಗೆ ಶಿಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಆದಾಗ್ಯೂ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ನವೆಂಬರ್ 29 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ಗ್ಯಾಂಗ್ ರೇಪ್ ಸಂತ್ರಸ್ತೆಗೆ ಮನೆ, 50 ಲಕ್ಷ ಕೊಡಿ – ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತಾಕೀತು

    ನವದೆಹಲಿ: 2002ರಲ್ಲಿ ನಡೆದ ಹಿಂಸಾಚಾರದ ವೇಳೆ ಗ್ಯಾಂಗ್ ರೇಪ್‍ಗೆ ಒಳಗಾಗಿದ್ದ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಉದ್ಯೋಗ, ಮನೆ ಹಾಗೂ 50 ಲಕ್ಷ ರೂ. ಹಣವನ್ನು ಪರಿಹಾರದ ರೂಪದಲ್ಲಿ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.

    ರಾಧಿಕ್ ಪುರ ಗ್ರಾಮದಲ್ಲಿ 2002ರ ಮಾರ್ಚ್ ನಲ್ಲಿ ಗೋಧ್ರಾ ಗಲಭೆಯ ಬಳಿಕ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೊ ಮೇಲೆ 11 ಮಂದಿ ದುಷ್ಕರ್ಮಿಗಳು ಗ್ಯಾಂಗ್ ರೇಪ್ ಮಾಡಿದ್ದರು. ಅಲ್ಲದೆ ಆಕೆಯ ಕುಟುಂಬದ 7 ಮಂದಿ ಸದಸ್ಯರನ್ನು ಹತ್ಯೆಗೈದಿದ್ದರು.

    ಇಂದು ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸಂತ್ರಸ್ತೆಯಾಗಿರುವ ಬಿಲ್ಕಿಸ್ ಬಾನೋಗೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಮತ್ತು ಮನೆಯನ್ನು ನೀಡುವಂತೆ ಆದೇಶಿಸಿದೆ.

    ಈ ಪ್ರಕರಣದ ವಿಚಾಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ವಿಶೇಷ ನ್ಯಾಯಪೀಠ ಕಳೆದ ತಿಂಗಳು ಗುಜರಾತ್ ಸರ್ಕಾರಕ್ಕೆ, ಬಾಂಬೆ ಹೈಕೋರ್ಟ್ ತಪ್ಪಿತಸ್ಥರು ಎಂದು ಘೋಷಿಸಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿತ್ತು. ಆದಾದ ಬಳಿಕ ಗುಜರಾತ್ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡಲು ಮುಂದಾಗಿದ್ದಾದ ಬಿಲ್ಕಿಸ್ ಬಾನೊ ನಿರಾಕರಿಸಿದ್ದರು.

    2008ರಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾ ನ್ಯಾಯಾಲಯವೂ ಕೃತ್ಯದಲ್ಲಿ ಶಾಮೀಲಾಗಿದ್ದ 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಕೃತ್ಯದಲ್ಲಿ ಕೈಜೋಡಿಸಿದ ಆರೋಪ ಹೊಂದಿದ್ದ ಐವರು ಪೊಲೀಸ್ ಅಧಿಕಾರಿಗಳು ಹಾಗೂ ಇಬ್ಬರು ಸರ್ಕಾರಿ ವೈದ್ಯರನ್ನು ಬಿಡುಗಡೆಗೊಳಿಸಿತ್ತು. ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ಕೃತ್ಯದಲ್ಲಿ ಭಾಗಿಯಾಗಿದ್ದ ಐಪಿಎಸ್ ಅಧಿಕಾರಿಗಳನ್ನು ಹಿಂಬಡ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.