Tag: Gujarat Rain

  • ಜೀವನ ಮಾಡಲು ಏನೂ ಉಳಿದಿಲ್ಲ: 50 ಲಕ್ಷದ ಆಡಿ ಕಾರು ಮಳೆ ನೀರಿನಲ್ಲಿ ಮುಳುಗಿದ ಬಳಿಕ ಮಾಲೀಕನ ಪ್ರತಿಕ್ರಿಯೆ

    ಜೀವನ ಮಾಡಲು ಏನೂ ಉಳಿದಿಲ್ಲ: 50 ಲಕ್ಷದ ಆಡಿ ಕಾರು ಮಳೆ ನೀರಿನಲ್ಲಿ ಮುಳುಗಿದ ಬಳಿಕ ಮಾಲೀಕನ ಪ್ರತಿಕ್ರಿಯೆ

    ಗುಜರಾತ್: ಭಾರೀ ಮಳೆಯು ಗುಜರಾತ್‌ನಲ್ಲಿ (Gujarat Rain) ಅನಾಹುತವನ್ನು ಸೃಷ್ಟಿಸಿದ್ದು, ರಾಜ್ಯದಾದ್ಯಂತ ತೀವ್ರ ಜಲಾವೃತ ಮತ್ತು ಪ್ರವಾಹದಂತಹ ಪರಿಸ್ಥಿತಿಗಳನ್ನು ಸೃಷ್ಟಿಸಿದೆ. ವಡೋದರಾದಲ್ಲಿ (Vadodara), ಪರಿಸ್ಥಿತಿಯು ನಿವಾಸಿಗಳಿಗೆ ಭೀಕರವಾಗಿದೆ.

    ಸ್ಥಳೀಯರೊಬ್ಬರು ತಮ್ಮ ಸಂಕಟದ ಅನುಭವವನ್ನು ಹಂಚಿಕೊಂಡಿದ್ದಾರೆ. ಎಡೆಬಿಡದೇ ಸುರಿಯುತ್ತಿರುವ ಮಳೆಯು ತನ್ನ ಬಂಗಲೆಯ ಡ್ರೈವಾಲ್‌ನಲ್ಲಿ ನಿಲ್ಲಿಸಿದ್ದ ತನ್ನ ಮೂರು ಕಾರುಗಳನ್ನು ಮುಳುಗಿಸಿ ತೀವ್ರವಾಗಿ ಹಾನಿಗೊಳಿಸಿದೆ ಎಂದು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ಉಚಿತವಾಗಿ 100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

    ವಡೋದರಾ ನಿವಾಸಿಯು ತನ್ನ ವಾಹನಗಳ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಆಡಿ A6 (Audi Car), ಫೋರ್ಡ್ ಇಕೋಸ್ಪೋರ್ಟ್ ಮತ್ತು ಮಾರುತಿ ಸುಜುಕಿ ಸಿಯಾಜ್ ಕಾರುಗಳು ಭಾಗಶಃ ನೀರಿನಲ್ಲಿ ಹಲವಾರು ಇಂಚುಗಳಷ್ಟು ಮುಳುಗಿದೆ. ಈ ಬಗ್ಗೆ ಹತಾಶೆಯನ್ನು ವ್ಯಕ್ತಪಡಿಸುತ್ತಾ, ಮೂರು ಕಾರುಗಳನ್ನು ಕಳೆದುಕೊಂಡ ನಂತರ ಜೀವನ ಮಾಡಲು ಏನೂ ಉಳಿದಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

    ರಸ್ತೆಯಲ್ಲಿ ಕಾರುಗಳನ್ನು ನಿಲ್ಲಿಸಿದ್ದರಿಂದ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ವಾಹನಗಳನ್ನು ಬಂಗಲೆಯೊಳಗೆ ಸುಸಜ್ಜಿತವಾದ ಸ್ಥಳದಲ್ಲಿ ಸುರಕ್ಷಿತವಾಗಿ ನಿಲ್ಲಿಸಲಾಗಿತ್ತು. ಏಳು ಇಂಚುಗಳಷ್ಟು ನೀರು ನನ್ನ ಮನೆಗೆ ನುಗ್ಗಿದೆ. ಹೊರಗೆ ಸುಮಾರು ನಾಲ್ಕು ಅಡಿಗಳಷ್ಟು ಏರಿಕೆಯಾಗಿದ್ದು, ಇಡೀ ನೆರೆಹೊರೆಯ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಗನ್‌ ರೆಡ್ಡಿಗೆ ಭಾರಿ ಹಿನ್ನಡೆ – ಪಕ್ಷದ ಇಬ್ಬರು ರಾಜ್ಯಸಭಾ ಸಂಸದರು ರಾಜೀನಾಮೆ; ಟಿಡಿಪಿ ಸೇರ್ಪಡೆಗೆ ಸಜ್ಜು

    ಮೂರನೇ ಬಾರಿಗೆ ಈ ಸಮಸ್ಯೆಯನ್ನು ಎದುರಿಸುತ್ತಿದ್ದೇನೆ. ಹಿಂದೆ ನಾನಿದ್ದ ಸ್ಥಳದಲ್ಲಿ ಎರಡು ಬಾರಿ ಸಮಸ್ಯೆಯಾಗಿತ್ತು. ಈ ಸ್ಥಳದಲ್ಲಿ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ.

  • ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್‌ ಶಾ ಸಂತಾಪ

    ಗುಜರಾತ್‌ನಲ್ಲಿ ಸಿಡಿಲು ಬಡಿದು 20 ಮಂದಿ ದುರ್ಮರಣ – ಅಮಿತ್‌ ಶಾ ಸಂತಾಪ

    ಗಾಂಧಿನಗರ: ಗುಜರಾತ್‌ನಲ್ಲಿ (Gujarat) ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು (Lightning Strikes) ಬಡಿದು 20 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್‌ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಅತೀವ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.

    ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳೀಯ ಆಡಳಿತ ಮಂಡಳಿ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಕಾರ್ಯದಲ್ಲಿ ತೊಡಗಿದೆ. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

    ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಸೋಮವಾರ (ನ.27) ರಂದು ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಗುಜರಾತ್‌ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (ಎಸ್‌ಇಒಸಿ) ದತ್ತಾಂಶ ತಿಳಿಸುತ್ತದೆ.

    ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿಯಂತಹ ಜಿಲ್ಲೆಗಲ್ಲಿ ಭಾರೀ ಮಳೆಯಾಗಿದೆ. ಕೇವಲ 16 ಗಂಟೆಗಳಲ್ಲಿ 50 ರಿಂದ 117 ಮಿ.ಮೀ. ನಷ್ಟು ಮಳೆಯಾಗಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌