Tag: gujarath election

  • ಕಲಬುರಗಿಯಲ್ಲಿ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಣೆ

    ಕಲಬುರಗಿಯಲ್ಲಿ ಹಿಂದೂ ಸಮಾವೇಶಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಣೆ

    ಕಲಬುರಗಿ: ಗುಜರಾತ್ ಚುನಾವಣೆ ನಂತರ ಕಾಂಗ್ರೆಸ್ ನಾಯಕರು ಮೃದು ಹಿಂದುತ್ವ ಅನುಸರಿಸ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಹಿಂದುತ್ವ ವಿಷಯದಲ್ಲಿ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದೆ.

    ಪ್ರತಿವರ್ಷದಂತೆ ಈ ವರ್ಷ ಸಹ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಾರ್ಚ್ 27ರಂದು ವಿಶ್ವ ಹಿಂದು ಪರಿಷತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಆದ್ರೆ ಜಿಲ್ಲಾಡಳಿತ ಮಾತ್ರ ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದೆ ಎಂಬುದಾಗಿ ತಿಳಿದುಬಂದಿದೆ.

    ಕಾರ್ಯಕ್ರಮಕ್ಕೆ ಹಿಂದೂ ಫೈರ್ ಬ್ರಾಂಡ್ ಎಂದೇ ಪ್ರಸಿದ್ಧರಾಗಿರುವ ಸಾಧ್ವಿ ಸರಸ್ವತಿ ಆಗಮಿಸುತ್ತಿದ್ದು, ಅವರ ಭಾಷಣದಿಂದ ಕಾಂಗ್ರೆಸ್‍ಗೆ ಹೊಡೆತ ಬೀಳುತ್ತೆ ಅನ್ನೋ ಭೀತಿಯಿಂದ ಕಾರ್ಯಕ್ರಮಕ್ಕೆ ಅನುಮತಿ ನೀಡ್ತಿಲ್ಲ ಅನ್ನೋ ಮಾತುಗಳು ಕೇಳಿ ಬರ್ತಿವೆ.

    ಇತ್ತ ಸರ್ಕಾರ ಅನುಮತಿ ಕೊಡಲಿ ಕೊಡದೇ ಇರಲಿ. ನಾವು ನಿಗದಿತ ದಿನಾಂಕದಂದು ಸಮಾವೇಶ ನಡೆಸಿಯೇ ತೀರುತ್ತೇವೆ ಅಂತ ವಿಹೆಚ್‍ಪಿ ಮತ್ತು ಭಜರಂಗದಳ ಮುಖಂಡರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

  • ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಆಪರೇಷನ್!

    ಗುಜರಾತ್ ಚುನಾವಣೆ ಗೆಲುವಿನ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಆಪರೇಷನ್!

    ಬೆಂಗಳೂರು: ಗುಜರಾತ್ ಚುನಾವಣೆ ಗೆದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ಮಿಷನ್ 150 ಸಾಧಿಸಲು ಹೊಸ ಕಾರ್ಯತಂತ್ರ ರೂಪಿಸಿದೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಪಡೆಯಲು ಹೊಸ ಕಾರ್ಯತಂತ್ರ ರಚನೆ ಮಾಡಿದ್ದಾರೆ ಎನ್ನಲಾಗಿದ್ದು, ಹೊಸ ಕಾರ್ಯತಂತ್ರದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ವಹಿಸಿರುವ ಮುರಳೀಧರ್ ರಾವ್ ಬದಲಾವಣೆ ಮಾಡುವ ಸಾಧ್ಯತೆ ಇದೆ.

    ಮುರಳೀಧರ್ ರಾವ್ ಅವರನ್ನು ಬದಲಾವಣೆ ಮಾಡಿ ಗುಜರಾತ್ ರಾಜ್ಯದ ಬಿಜೆಪಿ ಉಸ್ತುವಾರಿ ಕಾರ್ಯ ನಿರ್ವಹಿಸುತ್ತಿದ್ದ ಭೂಪೇಂದ್ರ ಯಾದವ್ ಅವರನ್ನು ನೇಮಿಸಲು ಅಮಿತ್‍ಶಾ ಮುಂದಾಗಿದ್ದಾರೆ ಎನ್ನಲಾಗಿದೆ.

    ಈ ಹಿಂದೆ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಇವರು ಚುನಾವಣೆ ಚಾಣಕ್ಯ ಎಂದೇ ಬಿಜೆಪಿ ವಲಯದಲ್ಲಿ ಹೆಸರು ಪಡೆದಿದ್ದಾರೆ. ಪ್ರಸ್ತುತ ರಾಜ್ಯ ಸಭಾ ಸದಸ್ಯರಾಗಿರುವ ಭೂಪೇಂದ್ರ ಯಾದವ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.