Tag: gujrat Public TV

  • ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

    ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

    – ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್

    ಗಾಂಧಿನಗರ: ಈ ಹಿಂದೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡುತ್ತಿರುವ ವಿಡಿಯೋವೊಂದು ಸಖತ್ ವೈರಲ್ ಆಗಿತ್ತು. ಈಗ ಗುಜರಾತಿನಲ್ಲಿ 8ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿ ತರಗತಿಯಲ್ಲೇ ಕಿಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗೋದ್ರಾ ಸಮೀಪವಿರುವ ಮೊರ್ವಾ ಹಡಾಫ್‍ನ ಕ್ರುಶಿಕರ್ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡಿದ್ದಾರೆ. 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿ ಕ್ಲಾಸ್ ರೂಮಿನಲ್ಲಿಯೇ ಒಬ್ಬರಿಗೊಬ್ಬರು ಕಿಸ್ ಕೊಡುತ್ತಿರುವ ವಿಡಿಯೋ ಸದ್ಯ ಸಖತ್ ವೈರಲ್ ಆಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋವನ್ನು ಯಾರೋ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್

    ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಈ ಕಿಸ್ಸಿಂಗ್ ಪ್ರಕರಣದ ಬಗ್ಗೆ ಪಂಚಮಹಲ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂಚಮಹಲ್ ಜಿಲ್ಲಾ ಶಿಕ್ಷಣ ಅಧಿಕಾರಿ ಬಿಎಸ್ ಪಂಚಾಲ್, ಕ್ರುಶಿಕರ್ ಪ್ರೌಢ ಶಾಲೆಯ ಆಡಳಿತ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಕ್ರುಶಿಕರ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಅಶ್ವಿನ್ ಪಟೇಲ್ ಮಾತನಾಡಿ, ಈ ಘಟನೆ ಸಂಬಂಧ ವಿದ್ಯಾರ್ಥಿಗಳ ಪೋಷಕರಿಗೆ ಸುದ್ದಿ ತಿಳಿಸಲಾಗಿದೆ. ವಿದ್ಯಾರ್ಥಿಗಳು ಕಿಸ್ ಮಾಡುತ್ತಿರುವ ದೃಶ್ಯವನ್ನು ತರಗತಿಯಲ್ಲೇ ವಿಡಿಯೋ ಮಾಡಲಾಗಿದೆ. ಈ ಬಗ್ಗೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.